Category: ಸುದ್ದಿ

  • ಮಣೂರು ಶಿಕ್ಷಣ ಸಂಸ್ಥೆಯಲ್ಲಿ ಚಟುವಟಿಕೆಯಾಧಾರಿತ ತರಬೇತಿ ಕಾರ್ಯಕ್ರಮ ಆಯೋಜನೆ

    ಮಣೂರು ಶಿಕ್ಷಣ ಸಂಸ್ಥೆಯಲ್ಲಿ ಚಟುವಟಿಕೆಯಾಧಾರಿತ ತರಬೇತಿ ಕಾರ್ಯಕ್ರಮ ಆಯೋಜನೆ

    ಕುಂದಾಪುರ ಮಿರರ್ ಸುದ್ದಿ…

    ಕೋಟ: ಇಲ್ಲಿನ ಸರಕಾರಿ ಸಂಯುಕ್ತ ಪ್ರೌಢಶಾಲೆ ಮತ್ತು ಕಾಲೇಜಿನ ಶಿಕ್ಷಕರು ಮತ್ತು ಶಿಕ್ಷಕೇತರ ಸಿಬ್ಬಂದಿಗಳಿಗೆ ಗೀತಾನಂದ ಪೌಂಢೇಶನ್ ಮಣೂರು ಆಯೋಜನೆಯಲ್ಲಿ ಮನಸ್ಮಿತಾ ಫೌಂಡೇಶನ್, ಸಮುದ್ಯತಾ ಈವೆಂಟ್ ಮ್ಯಾನೆಜ್ ಮೆಂಟ್ ಮತ್ತು ಶಾಲಾ ಕಾಲೇಜು ಅಭಿವೃದ್ದಿ ಸಮಿತಿಯ ಸಹಕಾರದೊಂದಿಗೆ ಒಂದು ದಿನದ ಚಟುವಟಿಕೆಯಾಧಾರಿತ ತರಬೇತಿ ಕಾರ್ಯಕ್ರಮ ಸೋಮವಾರ ಶಿಕ್ಷಣ ಸಂಸ್ಥೆಯಲ್ಲಿ ನಡೆಯಿತು.

    ಜೇಸಿ ತರಬೇತುದಾರೆ ಅಕ್ಷತಾ ಶೆಟ್ಟಿ ಕಾರ್ಯಕ್ರಮವನ್ನು ನೆರವೇರಿಸಿದರು.

    ಸಮರೋಪ ಸಮಾರಂಭದಲ್ಲಿ ಗೀತಾನಂದ ಫೌಂಡೇಶನ್ ಪ್ರವರ್ತಕ ಆನಂದ ಸಿ ಕುಂದರ್ ಅಧ್ಯಕ್ಷತೆ ವಹಿಸಿ ಮಾತನಾಡಿ ನಮ್ಮ ಮಣೂರಿನ ಎಲ್ಲಾ ಶಿಕ್ಷಣ ಸಂಸ್ಥೆಗಳ ಎಲ್ಲಾ ಸಿಬ್ಬಂದಿಗಳು “ವಸುದ್ಯೆವ ಕುಟುಂಬಕಂ” ಎನ್ನುವ ತತ್ವದಡಿಯಲ್ಲಿ ಕಾರ್ಯ ನಿರ್ವಹಿಸಲಿ ಎನ್ನುವುದು ನಮ್ಮೂರಿನ ಎಲ್ಲಾ ಸಂಘ ಸಂಸ್ಥೆಗಳ ಮಹತ್ವಾಕಾಂಕ್ಷೆಯಾಗಿದೆ. ಆ ನಿಟ್ಟಿನಲ್ಲಿ ಇಂತಹ ಕಾರ್ಯಕ್ರಮಗಳು ಮಹತ್ವಪೂರ್ಣವಾಗಿದೆ ಎಂದರು.

    ಈ ಸಂದರ್ಭದಲ್ಲಿ ಇಲ್ಲಿನ ವಿದ್ಯಾಸಂಸ್ಥೆಯಿಂದ ವರ್ಗಾವಣೆಗೊಂಡ ಮುಖ್ಯ ಶಿಕ್ಷಕಿ ಜಯಂತಿ,ಉಪನ್ಯಾಸಕ ಮನೋಹರ್ ಉಪ್ಪುಂದ, ಪುರುಷೋತ್ತಮ್,ನಾಗೇಶ್ ಮಧ್ಯಸ್ಥ ಇವರುಗಳನ್ನು ಗೌರವಿಸಲಾಯಿತು.

    ಕಾರ್ಯಕ್ರಮದಲ್ಲಿ ಲಕ್ಷ್ಮೀ ಸೋಮ ಬಂಗೇರ ಪದವಿ ಕಾಲೇಜು ಪ್ರಾಂಶುಪಾಲೆ ಡಾ.ಸುನೀತಾ ಸರಕಾರಿ, ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಡೆನ್ನಿಸ್ ಬಾಂಜಿ ,ಸಂಯುಕ್ತ ಫ್ರೌಢಶಾಲೆಯ ಮುಖ್ಯಶಿಕ್ಷಕ ನಿರಂಜನ್ ನಾಯಕ್, ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕಿ ಸೇಸು ಟೀಚರ್,ಗೀತಾನಂದ ಫೌಂಡೇಶನ್ ವಿಶ್ವಸ್ಥರಾದ ದಿವ್ಯಲಕ್ಷ್ಮೀ ಪ್ರಶಾಂತ ಕುಂದರ್, ವ್ಯೆಷ್ಣವಿ ರಕ್ಷಿತ್ ಕುಂದರ್ ಪ್ರಾಥಮಿಕ ಹಾಗೂ ಪ್ರೌಢಶಾಲಾ ಎಸ್.ಡಿ.ಎಮ.ಸಿ ಅಧ್ಯಕ್ಷರಾದ ಜಯರಾಮ ಶೆಟ್ಟಿ, ನಾಗರಾಜ್ , ಮನಸ್ಮಿತಾ ಫೌಂಡೇಶನ್ ವಿಶ್ವಸ್ಥರಾದ ಸವಿತಾ.ಪಿ ತೋಳಾರ್ ಮತ್ತು ವಾಹಿನಿ ಯುವಕ ಮಂಡಲದ ಅಧ್ಯಕ್ಷ ರಮೇಶ್ ಕುಂದರ್ ಉಪಸ್ಥಿತರಿದ್ದರು. ಅವಿನಾಶ ಕಾಮತ್ ಕಾರ್ಯಕ್ರಮವನ್ನು ನಿರೂಪಿಸಿ, ಗೀತಾನಂದ ಸಮಾಜಕಾರ್ಯವಿಭಾಗದ ರವಿಕಿರಣ್ ಕೋಟ ಸಹಕರಿಸಿದರು.

  • ಕೋಟ :ವಿದ್ಯಾರ್ಥಿಗಳ ಭವಿಷ್ಯದ ಭದ್ರ ಬುನಾದಿಗೆ ಶಿಕ್ಷಕರ ಪಾತ್ರ ಗಣನೀಯವಾದದ್ದು- ಸತೀಶ್ ಕುಂದರ್

    ಕೋಟ :ವಿದ್ಯಾರ್ಥಿಗಳ ಭವಿಷ್ಯದ ಭದ್ರ ಬುನಾದಿಗೆ ಶಿಕ್ಷಕರ ಪಾತ್ರ ಗಣನೀಯವಾದದ್ದು- ಸತೀಶ್ ಕುಂದರ್

    ಪಂಚವರ್ಣ ಸಂಸ್ಥೆಯ ವತಿಯಿಂದ ಶಿಕ್ಷಕರ ದಿನಾಚರಣೆ ಅಂಗವಾಗಿ ಗುರುವಂದನೆ

    ಕುಂದಾಪುರ ಮಿರರ್ ಸುದ್ದಿ…

    ಕೋಟ: ವಿದ್ಯಾರ್ಥಿಗಳ ಭದ್ರ ಬುನಾದಿಗೆ ಶಿಕ್ಷಕರ ಪಾತ್ರ ಗಣನೀಯವಾದದ್ದು ಈ ದಿಸೆಯಲ್ಲಿ ಗುರುಗಳನ್ನು ಕಾಲಕ್ಕೆ ತಕ್ಕಂತೆ ನೆನಪಿಸಿಕೊಂಡು ಅವರು ನೀಡಿದ ವಿದ್ಯಾರ್ಜನೆ ಸದಾ ಸ್ಮರಿಸುತ್ತಿರಬೇಕು ಎಂದು ಕೋಟತಟ್ಟು ಗ್ರಾಮಪಂಚಾಯತ್ ಅಧ್ಯಕ್ಷ ಸತೀಶ್ ಕುಂದರ್ ಅಭಿಪ್ರಾಯಪಟ್ಟರು.

    ಕೋಟದ ಪಂಚವರ್ಣ ಯುವಕ ಮಂಡಲ ಕೋಟ ಹಾಗೂ ಅಧೀನ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲದ ಆಶ್ರಯದಲ್ಲಿ ಶಿಕ್ಷಕರ ದಿನಾಚಣೆ ಪ್ರಯುಕ್ತ ಗುರುವಂದನೆ ಕಾರ್ಯಕ್ರಮದಲ್ಲಿ ಕೋಟದ ಗಿಳಿಯಾರು ಶಾಂಭವೀ ಶಾಲೆಯ ಹಿರಿಯ ಶಿಕ್ಷಕರಾಗಿ ಸೇವೆ ಸಲ್ಲಿಸಿ ನಿವೃತ್ತರಾದ ಮಾಲಿಂಗ್ ಮಾಸ್ಟ್ರ್ ಎಂದೆ ಜನಜನಿತರಾದ ಮಹಾಲಿಂಗ ದೇವಾಡಿಗ ಇವರಿಗೆ ಸ್ವಗೃಹಕ್ಕೆ ತೆರಳಿ ಗುರುವಂದನೆ ಸಲ್ಲಿಸಿ ಮಾತನಾಡಿದರು.

    ಈ ಸಂದರ್ಭದಲ್ಲಿ ಗುರುವಂದನೆ ಅರ್ಥಪೂರ್ಣವಾಗಿಸುವ ನಿಟ್ಟಿನಲ್ಲಿ ಗುರುಗಳ ಮೂಲಕ ಗಿಡನೆಟ್ಟು ಸಂಭ್ರಮಿಸಲಾಯಿತು.
    ಅಧ್ಯಕ್ಷತೆಯನ್ನು ಪಂಚವರ್ಣ ಯುವಕ ಮಂಡಲದ ಅಧ್ಯಕ್ಷ ಅಜಿತ್ ಆಚಾರ್ ವಹಿಸಿದ್ದರು.

    ಪಂಚವರ್ಣ ಮಹಿಳಾ ಮಂಡಲದ ಅಧ್ಯಕ್ಷೆ ಕಲಾವತಿ ಅಶೋಕ್, ಪಂಚವರ್ಣ ಸಂಸ್ಥೆಯ ಉಪಾಧ್ಯಕ್ಷ ರವೀಂದ್ರ ಜೋಗಿ,ಸಂತೋಷ್ ಪೂಜಾರಿ,ಪಂಚವರ್ಣ ಮಹಿಳಾ ಮಂಡಲದ ಕಾರ್ಯದರ್ಶಿ ಲಲಿತಾ ಪೂಜಾರಿ, ಪಂಚವರ್ಣದ ಪದಾಧಿಕಾರಿಗಳು, ಮಹಾಲಿಂಗ ಮಾಸ್ಟರ್ ಕುಟುಂಬಿಕರು ಉಪಸ್ಥಿತರಿದ್ದರು.

    ಪಂಚವರ್ಣ ಮಹಿಳಾ ಮಂಡಲದ ಸದಸ್ಯೆ ಸುಜಾತ ಬಾಯರಿ ಸ್ವಾಗತಿಸಿ ನಿರೂಪಿಸಿದರು. ಪಂಚವರ್ಣದ ಸದಸ್ಯ ಕೇಶವ ಆಚಾರ್ ವಂದಿಸಿದರು. ಕಾರ್ಯಾಧ್ಯಕ್ಷ ರವೀಂದ್ರ ಕೋಟ ಕಾರ್ಯಕ್ರಮ ಸಂಯೋಜಿಸಿದರು.

  • ಕುಂದಾಪುರ :ಶಿಕ್ಷಣ ಮತ್ತು ವಿದ್ಯಾರ್ಥಿಯ ಭವಿಷ್ಯದ ವಿಚಾರದಲ್ಲಿ ಶಿಕ್ಷಕರ ಹೊಣೆಗಾರಿಕೆ ಹೆಚ್ಚು- ಜಯಪ್ರಕಾಶ್ ಹೆಗ್ಡೆ

    ಕುಂದಾಪುರ :ಶಿಕ್ಷಣ ಮತ್ತು ವಿದ್ಯಾರ್ಥಿಯ ಭವಿಷ್ಯದ ವಿಚಾರದಲ್ಲಿ ಶಿಕ್ಷಕರ ಹೊಣೆಗಾರಿಕೆ ಹೆಚ್ಚು- ಜಯಪ್ರಕಾಶ್ ಹೆಗ್ಡೆ

    ಕುಂದಾಪುರ ಮಿರರ್ ಸುದ್ದಿ…


    ಕುಂದಾಪುರ: ಶಿಕ್ಷಣ ಮತ್ತು ಆರೋಗ್ಯ ಪ್ರಮುಖ ಆದ್ಯತೆಗಳಾಗಿದ್ದು, ಶಿಕ್ಷಣ ಕ್ಷೇತ್ರದಲ್ಲಿ ಹೊಸ ಶಿಕ್ಷಣ ನೀತಿ ಅನುಷ್ಠಾನದ ಸಂದರ್ಭದಲ್ಲಿ ಶಿಕ್ಷಕರ ಅಭಿಪ್ರಾಯವನ್ನೂ ಪರಿಗಣಿಸಬೇಕು. ಪ್ರಾಥಮಿಕ, ಹಿರಿಯ ಪ್ರಾಥಮಿಕ ಶಾಲಾ ಶಿಕ್ಷಕರಿಗೂ ಮತದಾನದ ಹಕ್ಕು ಸಿಗುವಂತಾಗಬೇಕು ಎಂದು ಹಿಂದುಳಿದ ವರ್ಗಗಳ ಅಭಿವೃದ್ದಿ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಹೇಳಿದರು.

    ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಮತ್ತು ಸಂಪನ್ಮೂಲ ಕೇಂದ್ರ ಕುಂದಾಪುರ ವಲಯ ಇವರ ಆಶ್ರಯದಲ್ಲಿ ಕುಂದಾಪುರದ ಆರ್.ಎನ್.ಶೆಟ್ಟಿ ಸಭಾಭವನದಲ್ಲಿ ನಡೆದ ಶಿಕ್ಷಕರ ದಿನಾಚರಣೆ-2023 ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

    ಶಿಕ್ಷಣವೆಂದರೆ ಕೇವಲ ಅಕ್ಷರಾಭ್ಯಾಸ ಮಾತ್ರವಲ್ಲ. ಕ್ರೀಡೆ, ಕಲೆ ಎಲ್ಲವೂ ಒಳಗೊಂಡಿದೆ. ಮಕ್ಕಳ ಆಸಕ್ತಿಯನ್ನು ಪೋಷಕರು, ಶಿಕ್ಷಕರು ಗುರುತಿಸಿ ಪ್ರೋತ್ಸಾಹಿಸಬೇಕು. ಶಾಲೆಗೆ ಮಗುವಿನ ದಾಖಲಾತಿಯ ಸಂದರ್ಭದಲ್ಲಿ ಜಾತಿಯನ್ನು ಸ್ಪಷ್ಟವಾಗಿ ನಮೋದಿಸಬೇಕು. ಪ್ರಾರಂಭದಲ್ಲಿ ಜಾತಿ ನಮೋದನೆ ಸರಿಯಾಗಿಲ್ಲದಿದ್ದರೆ ಮುಂದೆ ವಿದ್ಯಾರ್ಥಿ ಮೀಸಲಾತಿ ಸೌಲಭ್ಯ ಪಡೆಯುವಾಗ ಸಮಸ್ಯೆಯಾಗುತ್ತದೆ. ಪೋಷಕರು ಕೂಡಾ ಈ ಬಗ್ಗೆ ಗಮನ ಹರಿಸಬೇಕು ಎಂದರು.

    ಕಾರ್ಯಕ್ರಮದಲ್ಲಿ ಪ್ರಧಾನ ಭಾಷಣ ಮಾಡಿದ ವಿಶ್ರಾಂತ ಕನ್ನಡ ಪ್ರಾಧ್ಯಾಪಕ ಡಾ.ಶ್ರೀಕಾಂತ ರಾವ್ ಸಿದ್ಧಾಪುರ, ಕಲಿಸುವುದರ ಜೊತೆ ಶಿಕ್ಷಕರು ಕಲಿಯುತ್ತಾರೆ. ಶಿಕ್ಷಣ ಕ್ಷೇತ್ರದಲ್ಲಿ ಕೆಲಸ ಮಾಡುವುದೆಂದರೆ ಜೀವಂತ ಕಡತ ಪತ್ರಗಳೊಂದಿಗೆ ಕೆಲಸ ಮಾಡಿದಂತೆ. ಪ್ರಾಯೋಗಿಕ ಜ್ಞಾನ ಮಕ್ಕಳೊಂದಿಗೆ ಬೆರೆತಾಗ ಬೇರೆಯದೆ ರೀತಿಯ ಅನುಭವವಾಗುತ್ತದೆ. ಜ್ಞಾನಕ್ಕೆ ಮಿಗಿಲಾದ ಸಂಪತ್ತಿಲ್ಲ. ಹಿಂದೆ ಭೌದ್ಧಿಕ ಸಾಮಥ್ರ್ಯವನ್ನೇ ಮಾನದಂಡವಾಗಿ ನೋಡಲಾಗುತ್ತಿದೆ ಎಂದರು.

    ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಶಶಿಧರ್ ಎಂ. ಅಧ್ಯಕ್ಷತೆ ವಹಿಸಿದ್ದರು. ಬಂಟರ ಯಾನೆ ನಾಡವರ ಸಂಘ ಕುಂದಾಪುರದ ಸಂಚಾಲಕ ಆವರ್ಸೆ ಸುಧಾಕರ ಶೆಟ್ಟಿ, ಕ್ಷೇತ್ರ ಸಮನ್ವಯಾಧಿಕಾರಿ ಅಶೋಕ್ ನಾಯಕ್, ಟೀಚರ್ಸ್ ಕೋ ಆಪರೇಟಿವ್ ಸೊಸೈಟಿ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ, ಜಿಲ್ಲಾ ಪ್ರಶಸ್ತಿ ಪುರಸ್ಕøತ ನಿವೃತ್ತ ಶಿಕ್ಷಕ ನವೀನಚಂದ್ರ ಶೆಟ್ಟಿ, ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ರವೀಂದ್ರ ನಾಯಕ್, ಪುರಸಭೆ ಸದಸ್ಯೆ ಪ್ರಭಾವತಿ ಶೆಟ್ಟಿ, ಶಿಕ್ಷಕರ ಸಂಘಟನೆ ಅಧ್ಯಕ್ಷರುಗಳಾದ ಉದಯ ಕುಮಾರ್ ಶೆಟ್ಟಿ, ಗಣೇಶ ಕುಮಾರ್ ಶೆಟ್ಟಿ, ಜ್ಯೋತಿ, ಮೂರ್ತಿ ಎಂ.ಎಸ್., ಪ್ರದೀಪ್ ಭಂಡಾರಿ, ಪ್ರದೀಪ್ ಕುಮಾರ್ ಶೆಟ್ಟಿ, ಮಂಜುನಾಥ ಉಪಸ್ಥಿತರಿದ್ದರು.

    ಈ ಸಂದರ್ಭದಲ್ಲಿ ಕಳೆದ ಸಾಲಿನಲ್ಲಿ ಪ್ರಶಸ್ತಿ ಪುರಸ್ಕೃತರಾದ ಶಿಕ್ಷಕರನ್ನು ಸನ್ಮಾನಿಸಲಾಯಿತು. ಕಳೆದ ಸಾಲಿನಲ್ಲಿ ನಿವೃತ್ತರಾದ ಪ್ರಾಥಮಿಕ, ಪ್ರೌಢಶಾಲಾ ಶಿಕ್ಷಕರನ್ನು ಸನ್ಮಾನಿಸಲಾಯಿತು.
    ಕ್ಷೇತ್ರ ಶಿಕ್ಷಣಾಧಿಕಾರಿ ಶೋಭಾ ಶೆಟ್ಟಿ ಸ್ವಾಗತಿಸಿದರು.

    ಕಾರ್ಯಕ್ರಮಕ್ಕೂ ಮೊದಲು ಶಿಕ್ಷಕರಿಂದ ಯಕ್ಷ ಗಾನ ವೈಭವ ನಡೆಯಿತು.

  • ಕುಂದಾಪುರ :ಗೋಳಿಯಂಗಡಿಯಲ್ಲಿ ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ಎಟಿಎಂ ಉದ್ಘಾಟನೆ

    ಕುಂದಾಪುರ :ಗೋಳಿಯಂಗಡಿಯಲ್ಲಿ ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ಎಟಿಎಂ ಉದ್ಘಾಟನೆ

    ಸಹಕಾರ ಸಂಸ್ಥೆಗಳು ಲಾಭದ ದೃಷ್ಟಿಕೋನವನ್ನು ಇರಿಸಿಕೊಳ್ಳದೇ ಸೇವಾ ಮನೋಭಾವದಿಂದ ಮುನ್ನೆಡೆಯುತ್ತಿವೆ – ಡಾ.ಎಂ.ಎನ್ ರಾಜೇಂದ್ರ ಕುಮಾರ್

    Video:-

    ಕುಂದಾಪುರ ಮಿರರ್ ಸುದ್ದಿ…


    ಕುಂದಾಪುರ :ಸಹಕಾರ ಸಂಸ್ಥೆಗಳು ಲಾಭದ ದೃಷ್ಟಿಕೋನವನ್ನು ಇರಿಸಿಕೊಳ್ಳದೇ ಸೇವಾ ಮನೋಭಾವದಿಂದ ಮುನ್ನೆಡೆಯುತ್ತಿವೆ. ಕೃಷಿಪತ್ತಿನ ಸಹಕಾರ ಸಂಘಗಳು ಸರ್ಕಾರ ನೀಡುವ ನಿಬಡ್ಡಿ ಸಾಲ, ಶೇ.3% ಬಡ್ಡಿ ಸಾಲಗಳನ್ನು ನೀಡಿ ರೈತರನ್ನು ಪ್ರೋತ್ಸಾಹಿಸುತ್ತಿವೆ. ಮರುಪಾವತಿಯಲ್ಲಿಯೂ ಕೂಡಾ ಅವಿಭಜಿತ ಜಿಲ್ಲೆ ಪ್ರಥಮ ಸ್ಥಾನದಲ್ಲಿದೆ. ಇಲ್ಲಿ ಸಾಲ ಪಾವತಿಸಲಾಗದ ರೈತರ ಆತ್ಮಹತ್ಯೆ ಪ್ರಕರಣಗಳು ಇಲ್ಲ. ಕಾರಣ ವಿಶ್ವಾಸ, ಸದೃಢತೆ ಬಂದಿದೆ ಎಂದು ದ.ಕ ಜಿಲ್ಲಾ ಕೇಂದ್ರ ಬ್ಯಾಂಕ್ ಅಧ್ಯಕ್ಷರು, ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ನಿ., ಬೆಂಗಳೂರು ಇದರ ಅಧ್ಯಕ್ಷರಾದ ಡಾ.ಎಂ.ಎನ್ ರಾಜೇಂದ್ರ ಕುಮಾರ್ ಹೇಳಿದರು.

    ಅವರು ಕುಂದಾಪುರ ತಾಲೂಕು ಗೋಳಿಯಂಗಡಿಯಲ್ಲಿ ಎಸ್.ಸಿ.ಡಿ.ಸಿ.ಸಿ ಬ್ಯಾಂಕ್‍ನ ಎಟಿಎಂ ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

    ಕಳೆದ 25 ವರ್ಷಗಳಿಂದ ಮಹಿಳೆಯರು ನವೋದಯ ಸ್ವಸಹಾಯ ಗುಂಪುಗಳ ಮೂಲಕ ಆರ್ಥಿಕವಾಗಿ ಸದೃಢರಾಗಿದ್ದಾರೆ. ನಾವು ಚಕ್ರಬಡ್ಡಿ ವಿಧಿಸುತ್ತಿಲ್ಲ. ಶೇ.12 ಬಡ್ಡಿದರದಲ್ಲಿ ಸ್ವಸಹಾಯ ಗುಂಪುಗಳಿಗೆ ಸಾಲ ನೀಡುತ್ತಿದ್ದೇವೆ ಎಂದರು.

    ಎಟಿಎಂ ಉದ್ಘಾಟಿಸಿದ ಕುಂದಾಪುರದ ವಿಧಾನಸಭಾ ಕ್ಷೇತ್ರದ ಶಾಸಕ ಎ.ಕಿರಣ್ ಕುಮಾರ್ ಕೊಡ್ಗಿ ಮಾತನಾಡಿ, ರಾಷ್ಟ್ರೀಕೃತ ಬ್ಯಾಂಕುಗಳು, ಖಾಸಗಿ ಬ್ಯಾಂಕುಗಳಿಗೆ ಹೋಲಿಸಿದರೆ ಸಹಕಾರ ಸಂಸ್ಥೆಗಳು ಎಲ್ಲ ಸ್ತರದ ಜನರಿಗೂ ಸರಳ ವ್ಯವಹಾರದಿಂದ ಆಪ್ತವಾಗಿದೆ ಎಂದು ಹೇಳಿದ ಅವರು, ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಸಾಕಷ್ಟು ಸಾಧನೆಗಳನ್ನು ಮಾಡಿದೆ. ಕೃಷಿ ಪತ್ತಿನ ಸಹಕಾರ ಸಂಘಗಳು ಕೂಡಾ ಬೆಳೆದಿವೆ. ಈ ಸಾಧನೆಗಳ ಹಿಂದಿನ ಪ್ರೇರಕ ಶಕ್ತಿ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರು ಎಂದರು.

    ಈ ಸಂದರ್ಭದಲ್ಲಿ ನೂತನ ಶಾಸಕರಾಗಿ ಆಯ್ಕೆಯಾದ ಎ.ಕಿರಣ್ ಕುಮಾರ್ ಕೊಡ್ಗಿಯವರನ್ನು ದಕಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ವತಿಯಿಂದ ಗೌರವಿಸಲಾಯಿತು.

    ಗೋಳಿಯಂಗಡಿಗೆ ಎಟಿಎಂ ಮಂಜೂರುಗೊಳಿಸಿದ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷರಾದ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರನ್ನು ಗೌರವಿಸಲಾಯಿತು. ಕಟ್ಟಡ ಮಾಲೀಕ ನಾಗರಾಜ ಭಟ್ ಅವರನ್ನು ಸನ್ಮಾನಿಸಲಾಯಿತು.

    ಬೆಳ್ವೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ರಾಧಾ, ಬೆಳ್ವೆ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾದ ಎಸ್.ಚಂದ್ರಶೇಖರ ಶೆಟ್ಟಿ, ಕಟ್ಟಡ ಮಾಲಿಕರಾದ ನಾಗರಾಜ ಭಟ್ ಉಪಸ್ಥಿತರಿದ್ದರು.

    ಇದೇ ಸಂದರ್ಭದಲ್ಲಿ ಠೇವಣಿ ಪತ್ರ, ಸಾಲಪತ್ರ, ವಾಹನ ಸಾಲಪತ್ರವನ್ನು ಸಾಂಕೇತಿಕವಾಗಿ ಹಸ್ತಾಂತರಿಸಲಾಯಿತು. ಹೊಸದಾಗಿ ರಚನೆಗೊಂಡ ನವೋದಯ ಸ್ವಸಹಾಯ ಗುಂಪುಗಳನ್ನು ಉದ್ಘಾಟಿಸಲಾಯಿತು. ಸ್ವಸಹಾಯ ಗುಂಪುಗಳಿಗೆ ಸಾಲಪತ್ರ ವಿತರಣೆ ಮಾಡಲಾಯಿತು.ಚೈತನ್ಯ ವಿಮಾ ಪರಿಹಾರ ಮೊತ್ತವನ್ನು ಹಸ್ತಾಂತರ ಮಾಡಲಾಯಿತು.
    ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ ಎಂ.ಮಹೇಶ ಹೆಗ್ಡೆ ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿ, 2007ರಲ್ಲಿ ಗೋಳಿಯಂಡಿಗಡಿಯಲ್ಲಿ ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ಶಾಖೆ ಆರಂಭವಾಯಿತು. 2022ರಲ್ಲಿ ಹೊಸ ಕಟ್ಟಡಕ್ಕೆ ಸ್ಥಳಾಂತರಗೊಂಡಿತು. ಆ ಸಂದರ್ಭದಲ್ಲಿ ಎಟಿಎಂ ಬೇಡಿಕೆ ಸಲ್ಲಿಸಲಾಯಿತು. ತೀರಾ ಗ್ರಾಮೀಣ ಪ್ರದೇಶಗಳನ್ನು ಒಳಗೊಂಡ ಗೋಳಿಯಂಡಿಗೆ ಕುಂದಾಪುರ ತಾಲೂಕಿನ 2ನೇ ಎಟಿಎಂನ್ನು ಡಾ.ಎಂ.ಎನ್,ರಾಜೇಂದ್ರ ಕುಮಾರ್ ಮಂಜೂರುಗೊಳಿಸಿದ್ದಾರೆ ಎಂದರು.

    ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ (ಪ್ರಭಾರ) ಗೋಪಾಲಕೃಷ್ಣ ಭಟ್ ಕೆ ವಂದಿಸಿದರು. ಪತ್ರಕರ್ತ ಸುಬ್ರಹ್ಮಣ್ಯ ಪಡುಕೋಣೆ ಕಾರ್ಯಕ್ರಮ ನಿರ್ವಹಿಸಿದರು.

  • ಕುಂದಾಪುರ :ಕುಸ್ತಿ ಪಂದ್ಯಾಟದಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ

    ಕುಂದಾಪುರ :ಕುಸ್ತಿ ಪಂದ್ಯಾಟದಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ

    ಕುಂದಾಪುರ ಮಿರರ್ ಸುದ್ದಿ…

    ಕುಂದಾಪುರ : ಉಡುಪಿ ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ಮೂಕಾಂಬಿಕಾ ಪದವಿ ಪೂರ್ವ ಕಾಲೇಜು ಕೊಲ್ಲೂರು ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಕುಸ್ತಿ ಪಂದ್ಯಾಟದಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ ಮಹಮ್ಮದ್ ಪೈಜಾನ್ ಮತ್ತು ಲಕ್ಷ್ಮೀಶ್ ಜಿಲ್ಲಾ ಮಟ್ಟದಲ್ಲಿ ಚಿನ್ನದ ಪದಕ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗುವುದರ ಮೂಲಕ ಸಾಧನೆ ಮೆರೆದಿದ್ದಾರೆ.

    ಸ್ರವೀಶ್ ಶೆಟ್ಟಿ ಬೆಳ್ಳಿ ಪದಕ ಹಾಗೂ ಎನ್. ಆಶ್ರಯ ಕಾಮತ್ ಮತ್ತು ಪ್ರತೀಕ್ ಕಂಚಿನ ಪದಕ ಪಡೆದಿದ್ದಾರೆ.

    ವಿದ್ಯಾರ್ಥಿಗಳ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕರು ಹಾಗೂ ಬೋಧಕೇತರ ಸಿಬ್ಬಂದಿ ಅಭಿನಂದನೆ ಸಲ್ಲಿಸಿದ್ದಾರೆ.

  • ಕೋಟದ ವಿವೇಕ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

    ಕೋಟದ ವಿವೇಕ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

    ಕುಂದಾಪುರ ಮಿರರ್ ಸುದ್ದಿ…

    ಕೋಟ: ಪದವಿಪೂರ್ವ ಶಿಕ್ಷಣ ಇಲಾಖೆಯವರು ನಡೆಸಿದ ವಿವಿಧ ಸ್ಪರ್ಧೆಯಲ್ಲಿ ಕೋಟದ ವಿವೇಕ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ ಇತ್ತೀಚಿಗೆ ಜಿಲ್ಲಾಮಟ್ಟದ ಚೆಸ್ ಸ್ಪರ್ಧೆಯಲ್ಲಿ ಕಾರ್ತಿಕ್ ಭಾಗವಹಿಸಿ ಪ್ರಶಸ್ತಿ ಪಡೆದು ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಜಿಲ್ಲಾಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಕುಮಾರಿ ಅನಘ ಭಾಗವಹಿಸಿ ಪ್ರಶಸ್ತಿ ಪಡೆದು ರಾಜ್ಯಮಟ್ಟಾದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಜಿಲ್ಲಾಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಸಂಹಿತಾ ಆಚಾರ್ಯ ಭಾಗವಹಿಸಿ ಪ್ರಶಸ್ತಿ ಪಡೆದು ರಾಜ್ಯಮಟ್ಟಾದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.

  • ಕೋಟ ಪಂಚವರ್ಣ ಸಂಸ್ಥೆಯ ಸತತ ಮೂರು ತಿಂಗಳ ವನಮಹೋತ್ಸವ ಕಾರ್ಯಕ್ರಮದ ಸಮಾರೋಪ

    ಕೋಟ ಪಂಚವರ್ಣ ಸಂಸ್ಥೆಯ ಸತತ ಮೂರು ತಿಂಗಳ ವನಮಹೋತ್ಸವ ಕಾರ್ಯಕ್ರಮದ ಸಮಾರೋಪ

    ಗಿಡಮರದ ಬಗ್ಗೆ ನಿರ್ಲಕ್ಷಿಸಿದರೆ ಕೃತಕ ಆಕ್ಸಿಜನ್ ಸೃಷ್ಠಿ – ಕಲ್ಪನಾ ದಿನಕರ್ ಪೂಜಾರಿ

    ಕುಂದಾಪುರ ಮಿರರ್ ‌ಸುದ್ದಿ…
    ಕೋಟ: ಪ್ರತಿಯೊಂದು ಮನೆಯಲ್ಲೂ ಪರಿಸರ ಜಾಗೃತಿ ಮೆರೆಯದಿದ್ದರೆ ಮುಂದಿನ ದಿನಗಳಲ್ಲಿ ಕೃತಕ ಆಕ್ಸಿಜನ್ ಗತಿ ಸೃಷ್ಠಿಯಾಗುವುದರಲ್ಲಿ ಅನುಮಾನವೇ ಇಲ್ಲ ಎಂದು ಸಾಮಾಜಿಕ ಚಿಂತಕಿ ಪಾಂಡೇಶ್ವರದ ಕಲ್ಪನಾ ದಿನಕರ್ ಹೇಳಿದರು.

    ಭಾನುವಾರ ಸಾಸ್ತಾನದ ಪಾಂಡೇಶ್ವರ ಹೈನಬೆಟ್ಟು ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘ ಇಲ್ಲಿ ಕೋಟ ಪಂಚವರ್ಣ ಯುವಕ ಮಂಡಲ ಹಾಗೂ ಅಧೀನ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲದ ನೇತ್ರತ್ವದಲ್ಲಿ ಹೈನಬೆಟ್ಟು ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘ ಸಹಬಾಗಿತ್ವದಡಿ ಮಣೂರು ಫ್ರೆಂಡ್ಸ್, ಗೆಳೆಯರ ಬಳಗ ಕಾರ್ಕಡ,ವಿಪ್ರ ಮಹಿಳಾ ಬಳಗ ಸಾಲಿಗ್ರಾಮ, ಹಂದಟ್ಟು ಮಹಿಳಾ ಬಳಗ ಕೋಟ ಇವರ ಸಹಯೋಗದೊಂದಿಗೆ ಪರಿಸರಸ್ನೇಹಿ ಅಭಿಯಾನಕ್ಕೆ 178ನೇ ವಾರದ ಸಂಭ್ರದ ಅಂಗವಾಗಿ ಸತತ ಮೂರು ತಿಂಗಳುಗಳ ಕಾಲ ನಡೆದ ಹಸಿರೇ ಉಸಿರು ಸಮಾರೋಪ ಕಾರ್ಯಕ್ರಮದಲ್ಲಿ ಮಾತನಾಡಿ ಪರಿಸರದ ಬಗ್ಗೆ ಕಾಳಜಿ ಕ್ಷೀಣಿಸುತ್ತಿದೆ ಇದರ ಅನುಭವಗಳು ಇಂದು ಅನುಭವಿಸುತ್ತಿದ್ದೇವೆ,ಮಳೆಗಾಲದಲ್ಲೆ ಮಳೆ ಇಲ್ಲದ ಸ್ಥಿತಿ ಸೃಷ್ಟಿಯಾಗಿದೆ,ಉಷ್ಣಾಂಶ ದಿನದಿಂದ ದಿನಕ್ಕೆ ಏರತೋಡಗಿದೆ.ಹಿಂದೆ ಇದ್ದ ಹಸಿರು ವಾತಾವರಣ ಈಗಿಲ್ಲ ಮುಂದಿನ ದಿನಗಳಲ್ಲಿ ಕೋವಿಡ್ ಸಂದರ್ಭದಲ್ಲಿ ಎದುರಾದ ಕೃತಕ ಆಕ್ಸಿಜನ್ ಅನಿವಾರ್ಯವಾಗಲಿದೆ. ಇದಕ್ಕೆ ಪರ್ಯಾಯವಾಗಿ ಪಂಚವರ್ಣ ಸಂಸ್ಥೆ ಹಮ್ಮಿಕೊಂಡ ಅಭಿಯಾನ ಪೂರಕವಾಗಿದೆ ಇದರ ಲಾಭ ಪ್ರತಿಯೊಬ್ಬರು ಅಲ್ಲದೆ ಭಾಗಗಳು ಅನುಸರಿಸಿ ಹಸಿರು ಕ್ರಾಂತಿ ಪಸರಿಸಿ ಆ ಮೂಲಕ ಪರಿಸರ ಜಾಗೃತಿ ಮೆರೆಯಲಿ ಎಂದು ಪಂಚವರ್ಣ ಸಂಸ್ಥೆಯ ಸಾಮಾಜಿಕ ,ಪರಿಸರ ಕಾಳಜಿಯನ್ನು ಪ್ರಶಂಸಿದರು.

    ಈ ಸಂದರ್ಭದಲ್ಲಿ ಪರಿಸರದ ಸಾರ್ವಜನಿಕರಿಗೆ ಗಿಡ ವಿತರಿಸಿ ಒಂದಿಷ್ಟು ಮನೆಗಳನ್ನು ಆಯ್ಕೆಗೊಳಿಸಿ ಗಿಡನಡಲಾಯಿತು.

    ಪಾಂಡೇಶ್ವರ ಗ್ರಾಮಪಂಚಾಯತ್ ಅಧ್ಯಕ್ಷೆ ಸುಶೀಲ ಪೂಜಾರಿ,ಉಪಾಧ್ಯಕ್ಷ ವೈ ಬಿ ರಾಘವೇಂದ್ರ ಆಚಾರ್, ಸದಸ್ಯರಾದ ಪ್ರತಾಪ್ ಶೆಟ್ಟಿ ಸಾಸ್ತಾನ,ಸಂಧ್ಯಾ ರಾವ್,ಸುಜಾತ ವೆಂಕಟೇಶ, ಹೈನಬೆಟ್ಟು ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ಅಧ್ಯಕ್ಷೆ ವಿಶಾಲಾಕ್ಷಿ ರಾವ್,ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗಂಗಾ, ಪಾಂಡೇಶ್ವರ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ಸಿಇಓ ಶ್ಯಾಮಲ,ಪಂಚವರ್ಣ ಯುವಕ ಮಂಡಲದ ಅಧ್ಯಕ್ಷ ಅಜಿತ್ ಆಚಾರ್,ಸಂಚಾಲಕ ಅಮೃತ್ ಜೋಗಿ,ಪಂಚವರ್ಣ ಮಹಿಳಾ ಮಂಡಲದ ಅಧ್ಯಕ್ಷೆ ಕಲಾವತಿ ಅಶೋಕ್,ಕಾರ್ಯದರ್ಶಿ ಲಲಿಲಾ ಪೂಜಾರಿ,ಸ್ಥಳೀಯರಾದ ಸುರೇಶ್ ಪೂಜಾರಿ ಮತ್ತಿತರರು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಪಂಚವರ್ಣ ಮಹಿಳಾ ಮಂಡಲದ ಸದಸ್ಯೆ ಸುಜಾತ ಬಾಯರಿ ಸ್ವಾಗತಿಸಿ ನಿರೂಪಿದರು.ಪಂಚವರ್ಣದ ಕಾರ್ಯಾಧ್ಯಕ್ಷ ರವೀಂದ್ರ ಕೋಟ ಸಂಯೋಜಿಸಿ ವಂದಿಸಿದರು.

    ಜಯಂಟ್ಸ್ ಕ್ಲಬ್ ಬ್ರಹ್ಮಾವರ ಹಾಗೂ ಕೋಟದ ಗೀತಾನಂದ ಫೌಂಡೇಶನ್ ಗಿಡಗಳ ವ್ಯವಸ್ಥೆ ಕಲ್ಪಿಸಿತು.

  • ಕೋಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಹೊಸಬೆಂಗ್ರೆ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಮಾಹೆ 2023ರ ಕಾರ್ಯಕ್ರಮ

    ಕೋಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಹೊಸಬೆಂಗ್ರೆ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಮಾಹೆ 2023ರ ಕಾರ್ಯಕ್ರಮ

    ಕುಂದಾಪುರ ಮಿರರ್ ಸುದ್ದಿ…

    ಕೋಟ : ಕೋಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಹೊಸಬೆಂಗ್ರೆ ಅಂಗನವಾಡಿ ಕೇಂದ್ರದಲ್ಲಿ ಕೋಡಿ ಗ್ರಾಮ ಪಂಚಾಯತ್ , ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಡುಪಿ, ಶಿಶು ಅಭಿವೃದ್ಧಿ ಇಲಾಖೆ, ಬ್ರಹ್ಮಾವರ, ಪ್ರಾಥಮಿಕ ಆರೋಗ್ಯ ಕೇಂದ್ರ ಕೋಡಿಬೆಂಗ್ರೆ ಇವರ ಸಹಯೋಗದೊಂದಿಗೆ ಪೋಷಣ್ ಮಾಹೆ 2023ರ ಕಾರ್ಯಕ್ರಮ ಜರಗಿತು.

    ಕಾರ್ಯಕ್ರಮವನ್ನು ಕೋಡಿ ಪಂಚಾಯತ್ ಅಧ್ಯಕ್ಷ ಪ್ರಭಾಕರ ಮೆಂಡನ್ ಉದ್ಘಾಟಿಸಿದರು. ಪ್ರಾಥಮಿಕ ಆರೋಗ್ಯ ಉಪಕೇಂದ್ರದ ಸಮುದಾಯ ಆರೋಗ್ಯ ಅಧಿಕಾರಿ ಪರಸಪ್ಪ ದೊಡ್ಡಮನಿ ಇವರು ಪೋಷಣ್ ಮಾಹೆಯ ಉದ್ದೇಶ ಮತ್ತು ಮಹತ್ವವನ್ನು ಕಾರ್ಯಕ್ರಮದಲ್ಲಿ ತಿಳಿಸಿದರು.

    ಕಾರ್ಯಕ್ರಮದಲ್ಲಿ ಸಮನ್ವಯ ಸಂಜೀವಿನಿ ಸಂಘದ ಅಧ್ಯಕ್ಷೆ ದೀಪಾ ಖಾರ್ವಿ, ಬಾಲವಿಕಾಸ ಸಮಿತಿ ಅಧ್ಯಕ್ಷೆ ಸುಲೋಚನಾ, ಸದಸ್ಯೆ ನಿರ್ಮಲಾ , ಪೋಷಕರು, ತಾಯಂದಿರು ಉಪಸ್ಥಿತರಿದ್ದರು. ಆಶಾಕಾರ್ಯಕರ್ತೆ ಜ್ಯೋತಿ ಸ್ವಾಗತಿಸಿದರು. ಆಂಗನವಾಡಿ ಸಹಾಯಕಿ ರೋಹಿಣಿ ಧನ್ಯವಾದಗೈದರು.

    ಕಾರ್ಯಕ್ರಮವನ್ನು ಅಂಗನವಾಡಿ ಕಾರ್ಯಕರ್ತೆ ಯಮುನಾ ನಿರೂಪಿಸಿದರು.

  • ಕೋಟ ವಿವೇಕ ವಿದ್ಯಾ ಸಂಸ್ಥೆಯಲ್ಲಿ ಇಂಟರ್ಯಾಕ್ಟ್ ಕ್ಲಬ್‍ಗಳ ಪದಗ್ರಹಣ

    ಕೋಟ ವಿವೇಕ ವಿದ್ಯಾ ಸಂಸ್ಥೆಯಲ್ಲಿ ಇಂಟರ್ಯಾಕ್ಟ್ ಕ್ಲಬ್‍ಗಳ ಪದಗ್ರಹಣ

    ಕುಂದಾಪುರ ಮಿರರ್ ಸುದ್ದಿ…

    ಕೋಟ: ಕೋಟ ವಿವೇಕ ವಿದ್ಯಾ ಸಂಸ್ಥೆಯಲ್ಲಿ ನಾಲ್ಕು ಇಂಟರ್ಯಾಕ್ಟ್ ಕ್ಲಬ್‍ಗಳ ಪದಗ್ರಹಣ ಸಮಾರಂಭವನ್ನು ಇತ್ತೀಚಿಗೆ ವಿದ್ಯಾಸಂಸ್ಥೆಯಲ್ಲಿ ನಡೆಯಿತು.

    ಕಾರ್ಯಕ್ರಮದಲ್ಲಿ ಪದಗ್ರಹಣ ಅಧಿಕಾರಿಯಾಗಿ ವಲಯ 2ರ ಅಸಿಸ್ಟೆಂಟ್ ಗವರ್ನರ್ ನರಸಿಂಹ ಪ್ರಭು ನಾಲ್ಕು ಕೋಟ ವಿವೇಕ ವಿದ್ಯಾ ಸಂಸ್ಥೆಯಲ್ಲಿ ಇಂಟರ್ಯಾಕ್ಟ್ ಕ್ಲಬ್‍ಗಳ ಅಧ್ಯಕ್ಷರು ಮತ್ತು ಕಾರ್ಯದರ್ಶಿಯವರಿಗೆ ಪದ ಪ್ರಧಾನ ಮಾಡಿದರು. ಮುಖ್ಯ ಅತಿಥಿಗಳಾಗಿ ಶಾರದಾ ಕಾಲೇಜು ಬಸ್ಸೂರು ನಿವೃತ್ತ ಪ್ರಾಂಶುಪಾಲೆ ಚಂದ್ರಕಲಾ ಹೆಗ್ಡೆ ಪ್ರಧಾನ ಭಾಷಣಗೈದರು.

    ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೋಟ ಸಾಲಿಗ್ರಾಮ ರೋಟರಿ ಕ್ಲಬ್‍ನ ಅಧ್ಯಕ್ಷ ದೇವಪ್ಪ ಪಟಗಾರ ವಹಿಸಿದ್ದರು.

    ಮುಖ್ಯ ಅತಿಥಿಗಳಾಗಿ ವಿವೇಕ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಜಗದೀಶ ನಾವಡ, ಜಿಲ್ಲಾ ಡ್ರೈವ್ ಸೇಫ್ ಸೇವ್ ಲೈಫ್ ಚೇರ್ಮನ್ ರಾಜೇಂದ್ರ ಸುವರ್ಣ, ಕೋಟ ಸಾಲಿಗ್ರಾಮ ರೋಟರಿ ಕ್ಲಬ್‍ನ ಕಾರ್ಯದರ್ಶಿ ತಿಮ್ಮ ಪೂಜಾರಿ ಮತ್ತು ನಾಲ್ಕು ಇಂಟ್ರಾಕ್ಟ್ ಕ್ಲಬ್‍ಗಳ ಅಧ್ಯಕ್ಷರು ಕಾರ್ಯದರ್ಶಿಯವರು ವೇದಿಕೆಯಲ್ಲಿದ್ದರು.

  • ಯಡ್ತಾಡಿ – ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವನದುರ್ಗಿ ಜ್ಞಾನವಿಕಾಸ ಕೇಂದ್ರದ ಎರಡನೇ ವರ್ಷದ ವಾರ್ಷಿಕೋತ್ಸವ ಕಾರ್ಯಕ್ರಮ

    ಯಡ್ತಾಡಿ – ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವನದುರ್ಗಿ ಜ್ಞಾನವಿಕಾಸ ಕೇಂದ್ರದ ಎರಡನೇ ವರ್ಷದ ವಾರ್ಷಿಕೋತ್ಸವ ಕಾರ್ಯಕ್ರಮ

    ಕುಂದಾಪುರ ಮಿರರ್ ಸುದ್ದಿ…

    ಕೋಟ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿಸಿ ಟ್ರಸ್ಟ್ ಬ್ರಹ್ಮಾವರ ,ಜ್ಞಾನವಿಕಾಸ ಮಹಿಳಾ ಕಾರ್ಯಕ್ರಮದಡಿಯಲ್ಲಿ ಯಡ್ತಾಡಿ ವಲಯದ ಕಾರ್ಯಕ್ಷೇತ್ರದ ವನದುರ್ಗಿ ಜ್ಞಾನವಿಕಾಸ ಕೇಂದ್ರದ ಎರಡನೇ ವರ್ಷದ ವಾರ್ಷಿಕೋತ್ಸವ ಕಾರ್ಯಕ್ರಮ ಇತ್ತೀಚಿಗೆ ಜರಗಿತು.

    ಕಾರ್ಯಕ್ರಮವನ್ನು ಯಡ್ತಾಡಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಪ್ರಕಾಶ್ ಶೆಟ್ಟಿ ಉದ್ಘಾಟಿಸಿ ಮಾತನಾಡಿ ಮಹಿಳೆಯರಿಗೆ ತಮ್ಮಲ್ಲಿರುವ ಪ್ರತಿಭೆಯನ್ನು ವ್ಯಕ್ತಪಡಿಸಲು ಇದು ಒಂದು ಉತ್ತಮ ವೇದಿಕೆ ಯಾಗಿದೆ. ಈ ಕಾರ್ಯಕ್ರಮದ ಮೂಲಕ ಎಷ್ಟೋ ಮಹಿಳೆಯರು ಸ್ವ- ಉದ್ಯೋಗವನ್ನು ಮಾಡುತ್ತಿದ್ದು ಸಂತೋಷದ ವಿಷಯವಾಗಿದೆ ಹಾಗೂ ತನ್ನನ್ನು ತಾನು ಪರಿವರ್ತಿಸಿಕೊಂಡು ಸಮಾಜದ ಮುಖ್ಯ ವಾಹಿನಿಗೆ ಬಂದಿರುತ್ತಾರೆ ಎಂದು ತಿಳಿಸಿ ಮಾತೃಶ್ರೀ ಹೇಮಾವತಿ ಅಮ್ಮನವರ ಈ ಕಾರ್ಯಕ್ರಮ ಎಷ್ಟೋ ಮಹಿಳೆಯರ ಬಾಳಿಗೆ ಬೆಳಕಾಗಿದೆ ಎಂದು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

    ಈ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿನ ಸದಸ್ಯರಾದ ಸುನಿತ ಶೆಟ್ಟಿ ಹಾಗೂ ಕುಡುಬಿ ಸಮುದಾಯ ಭವನದ ಅಧ್ಯಕ್ಷ ಜಯಪ್ರಕಾಶ್, ,ವಲಯದ ಮೇಲ್ವಿಚಾರಕರಾದ ರಾಘವೇಂದ್ರ, ತಾಲ್ಲೂಕು ಸಮನ್ವಯಾಧಿಕಾರಿ ಪುಷ್ಪಲತಾ , ಸೇವಾ ಪ್ರತಿನಿಧಿ ಉಷಾ ಹಾಗೂ ಕೇಂದ್ರದ ಸಂಯೋಜಕೀಯರಾದ ವಿನಯ ಉಪಸ್ಥಿತರಿದ್ದರು. ಕೇಂದ್ರದ ಸದಸ್ಯರು ವಿವಿಧ ರೀತಿಯ ಜನಪದ ಶೈಲಿಯ ನೃತ್ಯ ಹಾಗೂ ಕುಣಿತ ಭಜನೆ ಗಳನ್ನು ಮಾಡುವುದರ ಮೂಲಕ ಮನೋರಂಜನ ಕಾರ್ಯಕ್ರಮ ನೀಡಿದರು. ಈ ಕಾರ್ಯಕ್ರಮದಲ್ಲಿ 60 ಮಂದಿ ಕೇಂದ್ರದ ಸದಸ್ಯರು ಭಾಗವಹಿಸಿದ್ದರು.