Category: ಸುದ್ದಿ

  • ಕುಂದಾಪುರ: ತಾಲೂಕು ಆಡಳಿತದಿಂದ ನಾರಾಯಣಗುರು ಜಯಂತಿ ಆಚರಣೆ

    ಕುಂದಾಪುರ: ತಾಲೂಕು ಆಡಳಿತದಿಂದ ನಾರಾಯಣಗುರು ಜಯಂತಿ ಆಚರಣೆ

    Video:

    ಕುಂದಾಪುರ ಮಿರರ್ ಸುದ್ದಿ…

    ಕುಂದಾಪುರ: ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ, ತಾಲ್ಲೂಕು ಆಡಳಿತ ಹಾಗೂ ತಾಲ್ಲೂಕು ಪಂಚಾಯಿತಿ ಆಶ್ರಯದಲ್ಲಿ ನಡೆದ ಕುಂದಾಪುರ ತಾಲ್ಲೂಕು ಮಟ್ಟದ ಬ್ರಹ್ಮಶ್ರೀ ನಾರಾಯಣ ಗುರು ಅವರ 169ನೇ ಜಯಂತಿ ಕಾರ್ಯಕ್ರಮವು ತಾಲೂಕು ಕಚೇರಿ ಕೋರ್ಟ್ ಹಾಲ್ ನಲ್ಲಿ ಗುರುವಾರ ನಡೆಯಿತು. ಗಣ್ಯರು ನಾರಾಯಣ ಗುರುಗಳ ಭಾವಚಿತ್ರಕ್ಕೆ ಪುಷ್ಪಾರ್ಪಣೆಗೈದರು.

    ಕುಂದಾಪುರ ಶಾಸಕ ಎ. ಕಿರಣ್  ಕುಮಾರ್ ಕೊಡ್ಗಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಈ ದೇಶ ಕಂಡ ಮಹಾನ್ ಸಮಾಜ ಸುಧಾರಕ ನಾರಾಯಣಗುರುಗಳು ನಮಗೆಲ್ಲ ಆದರ್ಶಪ್ರಾಯರಾಗಿದ್ದು ಅವರು ಹಾಕಿಕೊಟ್ಟ ದಾರಿಯಲ್ಲಿ ಸಾಗಬೇಕು ಎಂದು ಕರೆ ನೀಡಿದರು.

    ತಾಲ್ಲೂಕು ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಅಶೋಕ ಪೂಜಾರಿ ಬೀಜಾಡಿ ಮಾತನಾಡಿ, ಸಮಾಜದಲ್ಲಿ ಬೇರು ಬಿಟ್ಟಿದ್ದ ಅಸ್ಪೃಶ್ಯತೆ, ಶೋಷಣೆ, ಮೂಢನಂಬಿಕೆಯಂತಹ ಅನಿಷ್ಠ ಪದ್ಧತಿಯ ವಿರುದ್ಧ ಸಾಮಾಜಿಕ ಕ್ರಾಂತಿ ಮಾಡಿದ್ದ ಬ್ರಹ್ಮಶ್ರೀ ನಾರಾಯಣ ಗುರುಗಳು ಸಮಾಜದ ಅನೇಕ ತೊಡಕುಗಳನ್ನು ಹೋಗಲಾಡಿಸಿ, ಸಮಾಜದ ಸುಧಾರಣೆಗಾಗಿ ಶ್ರಮಿಸಿದ ದಾರ್ಶನಿಕರು ಎಂದರು.

    ಕುಂದಾಪುರ ಉಪ ವಿಭಾಗದ ಸಹಾಯಕ ಆಯುಕ್ತರಾದ ರಶ್ಮಿ, ತಹಶಿಲ್ದಾರರ ಶೋಭಾಲಕ್ಷ್ಮೀ, ಕಾರ್ಯದರ್ಶಿ ಗಣೇಶ್ ವಿಠ್ಠಲವಾಡಿ, ಯುವಕ ಮಂಡಲದ ಅಧ್ಯಕ್ಷ ಯೋಗೀಶ್ ಕೋಡಿ, ಗುಣರತ್ನ, ಸುಮನಾ ಮೊದಲಾದವರು ಉಪಸ್ಥಿತರಿದ್ದರು. ಉಪ ತಹಶೀಲ್ದಾರ್ ವಿನಯ್ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.

  • ಕೋಟ ಪಂಚವರ್ಣ ಮಹಿಳಾ ಮಂಡಲದ ನೇತ್ರತ್ವದಲ್ಲಿ ಹದಿಹರೆಯದವರಿಗೆ ಮಾಹಿತಿ ಕಾರ್ಯಾಗಾರ 7ನೇ ಮಾಲಿಕೆ

    ಕೋಟ ಪಂಚವರ್ಣ ಮಹಿಳಾ ಮಂಡಲದ ನೇತ್ರತ್ವದಲ್ಲಿ ಹದಿಹರೆಯದವರಿಗೆ ಮಾಹಿತಿ ಕಾರ್ಯಾಗಾರ 7ನೇ ಮಾಲಿಕೆ

    ಹದಿಹರೆಯದವರ ಸಮಸ್ಯೆಗಳ ಬಗ್ಗೆ ಅವಲೋಕಿಸುವ ಅಗತ್ಯತೆ ಇದೆ – ಜ್ಯೋತಿ ಉದಯ್ ಕುಮಾರ್

    ಕುಂದಾಪುರ ಮಿರರ್ ಸುದ್ದಿ…
    ಕೋಟ: ಸಂಘಸಂಸ್ಥೆಗಳು ಸಮಾಜಮುಖಿ ಕಾರ್ಯಗಳ ಜತೆಗೆ ಪ್ರಸ್ತುತ ಯುವ ಸಮುದಾಯಗಳ ಕಳಕಳಿ ಅಗತ್ಯವಾಗಿದೆ ಎಂದು ಬ್ರಹ್ಮಾವರ ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷೆ ಜ್ಯೋತಿ ಉದಯ್ ಕುಮಾರ್ ಹೇಳಿದರು.

    ಸರಕಾರಿ ಪ್ರೌಢಶಾಲೆ ಗುಂಡ್ಮಿ ಇಲ್ಲಿ ಕೋಟದ ಪಂಚವರ್ಣ ಮಹಿಳಾ ಮಂಡದ ನೇತ್ರತ್ವದಲ್ಲಿ ಮಾತೃ ಸಂಸ್ಥೆ ಪಂಚವರ್ಣ ಯುವಕ ಮಂಡಲದ ಸಹಭಾಗಿತ್ವದಲ್ಲಿ ಹದಿಹರೆಯದವರ ಕುರಿತು ಅರಿವು ನಿಮಗಿರಲಿ ನೆರವು 7ನೇ ಮಾಲಿಕೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಪಂಚವರ್ಣ ಸಂಸ್ಥೆ ಹಲವಾರು ಸಾಮಾಜಿಕ ಕಾರ್ಯಗಳ ಜತೆಗೆ ಹಲವಾರು ಮಾಹಿತಿ ನೀಡುವ ಕಾರ್ಯಕ್ರಮಗಳು ಈ ವ್ಯವಸ್ಥೆ ಪೂರಕವಾಗಿದೆ ಇದರ ಸದ್ವಿನಿಯೋಗ ಪ್ರತಿಯೊಬ್ಬರು ಪಡೆಯಬೇಕು ಆ ಮೂಲಕ ಸಮಾಜದ ಸ್ವಾಸ್ಥ್ಯ ಕಾಪಾಡುವ ಕಾರ್ಯಗಳಾಗಲಿ ಎಂದು ಹಾರೈಸಿದರು.

    ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾಹಿತಿ ನೀಡಿದ ತೆಕ್ಕಟ್ಟೆ ಪರಿರದ ಪ್ರಸಿದ್ಧ ಸ್ತ್ರೀ ರೋಗ ತಜ್ಞೆ ವೈದ್ಯೆ ಡಾ.ಸುಮಂಗಲ ಮಾತನಾಡಿ ಆಧುನಿಕ ಕಾಲಘಟ್ಟದಲ್ಲಿ ನಾವಿದ್ದೇವೆ ನಮ್ಮ ಆಹಾರ, ನಮ್ಮ ಜೀವನ ಕ್ರಮ, ಮೊಬೈಲ್ ವ್ಯಾಮೂಹ, ಜಂಕ್ ಪುಡ್ ಸೇವನೆಯಿಂದ ಆರೋಗ್ಯ ಸಮಸ್ಯೆ, ಹೆಣ್ಣು ಮಕ್ಕಳಲ್ಲಿಎದುರಾಗುವ ಹದಿಹರೆಯದ ಸಮಸ್ಯೆಗಳು ಅದರ ಪರಿಹಾರ ಕ್ರಮಗಳ ಬಗ್ಗೆ ಸವಿವರವಾಗಿ ಮಾಹಿತಿ ನೀಡಿದರು.

    ಅಧ್ಯಕ್ಷತೆಯನ್ನು ಪಂಚವರ್ಣ ಮಹಿಳಾ ಮಂಡಲದ ಅಧ್ಯಕ್ಷೆ ಕಲಾವತಿ ಅಶೋಕ್ ವಹಿಸಿ ಪ್ರಾಸ್ತಾವನೆ ಸಲ್ಲಿಸಿದರು.

    ಮುಖ್ಯ ಅಭ್ಯಾಗತರಾಗಿ ನಿವೃತ್ತ ಮುಖ್ಯ ಶಿಕ್ಷಕ ಗಣೇಶ್ ಜಿ,ರೋಟರಿ ಕ್ಲಬ್ ಹಂಗಾರಕಟ್ಟೆ ಸಾಸ್ತಾನ ಅಧ್ಯಕ್ಷ ಅರವಿಂದ ಶರ್ಮ,ಪಂಚವರ್ಣ ಯುವಕ ಮಂಡಲದ ಉಪಾಧ್ಯಕ್ಷ ರವೀಂದ್ರ ಜೋಗಿ, ಶಾಲಾ ಎಸ್‍ಡಿಎಂಸಿ ಅಧ್ಯಕ್ಷ ರಾಘವೇಂದ್ರ, ಶಿಕ್ಷಕ ವೃಂದ ಉಪಸ್ಥಿತರಿದ್ದರು. ಶಾಲಾ ಮುಖ್ಯ ಶಿಕ್ಷಕ ಸತೀಶ್ ಐತಾಳ್ ಸ್ವಾಗತಿಸಿದರು. ಕಾರ್ಯಕ್ರಮವನ್ನು ಮಹಿಳಾ ಮಂಡಲದ ಉಪಾಧ್ಯಕ್ಷೆ ವಸಂತಿ ಹಂದಟ್ಟು ನಿರೂಪಿಸಿದರು. ಕಾರ್ಯದರ್ಶಿ ಲಲಿತಾ ಪೂಜಾರಿ ವಂದಿಸಿದರು. ಪಂಚವರ್ಣದ ಕಾರ್ಯಾಧ್ಯಕ್ಷ ರವೀಂದ್ರ ಕೋಟ ಕಾರ್ಯಕ್ರಮ ಸಂಯೋಜಿಸಿದರು. ಶಶಿಧರ ತಿಂಗಳಾಯ ಸಹಕರಿಸಿದರು.

    ಸರಕಾರಿ ಪ್ರೌಢಶಾಲೆ ಗುಂಡ್ಮಿ ಇಲ್ಲಿ ಕೋಟದ ಪಂಚವರ್ಣ ಮಹಿಳಾ ಮಂಡದ ನೇತ್ರತ್ವದಲ್ಲಿ ಮಾತೃ ಸಂಸ್ಥೆ ಪಂಚವರ್ಣ ಯುವಕ ಮಂಡಲದ ಸಹಭಾಗಿತ್ವದಲ್ಲಿ ಹದಿಹರೆಯದವರ ಕುರಿತು ಅರಿವು ನಿಮಗಿರಲಿ ನೆರವು 7ನೇ ಮಾಲಿಕೆ ಕಾರ್ಯಕ್ರಮವನ್ನು ಬ್ರಹ್ಮಾವರ ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷೆ ಜ್ಯೋತಿ ಉದಯ್ ಕುಮಾರ್ ಉದ್ಘಾಟಿಸಿದರು. ನಿವೃತ್ತ ಮುಖ್ಯ ಶಿಕ್ಷಕ ಗಣೇಶ್ ಜಿ,ರೋಟರಿ ಕ್ಲಬ್ ಹಂಗಾರಕಟ್ಟೆ ಸಾಸ್ತಾನ ಅಧ್ಯಕ್ಷ ಅರವಿಂದ ಶರ್ಮ,ಪಂಚವರ್ಣ ಯುವಕ ಮಂಡಲದ ಉಪಾಧ್ಯಕ್ಷ ರವೀಂದ್ರ ಜೋಗಿ ಇದ್ದರು.

     

  • ಕುಂದಾಪುರ :ಮಹಿಳಾ ಸಬಲೀಕರಣಕ್ಕೆ ಗೃಹಲಕ್ಷ್ಮೀ ಯೋಜನೆ ಪೂರಕ – ಶೋಭಾಲಕ್ಷ್ಮೀ

    ಕುಂದಾಪುರ :ಮಹಿಳಾ ಸಬಲೀಕರಣಕ್ಕೆ ಗೃಹಲಕ್ಷ್ಮೀ ಯೋಜನೆ ಪೂರಕ – ಶೋಭಾಲಕ್ಷ್ಮೀ

    ಕುಂದಾಪುರ ಮಿರರ್ ಸುದ್ದಿ…

    ಕುಂದಾಪುರ: ಇಲ್ಲಿನ ಮೊಗವೀರ ಭವನದಲ್ಲಿ ತಾಲೂಕು ಆಡಳಿತ, ಮಕ್ಕಳ ಅಭಿವೃದ್ದಿ ಇಲಾಖೆ ಕುಂದಾಪುರ ತಾಲೂಕು, ಕುಂದಾಪುರ ಪುರಸಭೆ ವತಿಯಿಂದ ನಡೆದ ಗೃಹಲಕ್ಷ್ಮೀ ಯೋಜನೆಯ ಉದ್ಘಾಟನೆಯನ್ನು ಕುಂದಾಪುರದ ತಹಶೀಲ್ದಾರ್ ಶೋಭಾಲಕ್ಷ್ಮೀ ಉದ್ಘಾಟಿಸಿದರು.

    ಈ ಸಂದರ್ಭದಲ್ಲಿ ಮಾತನಾಡಿದ ಅವರು ಜಿಲ್ಲೆಯ ೧೫೫ ಗ್ರಾಮ ಪಂಚಾಯಿತಿಯ ಕೇಂದ್ರ ಸ್ಥಾನದಲ್ಲಿ ಹಾಗೂ ಪ್ರತಿ ನಗರ ಸ್ಥಳೀಯ ಸಂಸ್ಥೆಯ ೫೨ ವಾರ್ಡ್‌ಗಳಲ್ಲಿ ಹಾಗೂ ೬ ತಾಲೂಕು ಕೇಂದ್ರಗಳಲ್ಲಿ ಮತ್ತು ೧ ಜಿಲ್ಲಾ ಕೇಂದ್ರದಲ್ಲಿ ಸೇರಿದಂತೆ ಒಟ್ಟು ೨೧೪ ಸ್ಥಳಗಳಲ್ಲಿ ಏಕ ಕಾಲದಲ್ಲಿ ಉದ್ಘಾಟನಾ ಕಾರ್ಯಕ್ರಮ ಆಯೋಜಿಸಲಾಗಿದೆ. ೨.೮೬ ಸಾವಿರ ಫಲಾನುಭವಿಗಳಲ್ಲಿ ಈಗಾಗಲೇ ೨.೪೮ ಸಾವಿರ ಫಲಾನುಭವಿಗಳು ನೋಂದಾಯಿಸಿಕೊಂಡಿದ್ದಾರೆ. ಗೃಹಲಕ್ಷ್ಮೀ ಯೋಜನೆಯ ಮೂಲಕ ಮಹಿಳಾ ಸಬಲೀಕರಣಕ್ಕೆ ಪೂರಕವಾಗುತ್ತದೆ ಎಂದರು.

    ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ರಾಘವೇಂದ್ರ ವರ್ಣೆಕರ್, ಪುರಸಭಾ ಮುಖ್ಯಾಧಿಕಾರಿ ಮಂಜುನಾಥ, ಪುರಸಭಾ ಸದಸ್ಯ ಶ್ರೀಧರ ಶೇರೆಗಾರ್ ಉಪಸ್ಥಿತರಿದ್ದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಯೋಜನಾಧಿಕಾರಿ ಅನುರಾಧ ಹಾದಿಮನೆ ಸ್ವಾಗತಿಸಿದರು. ಪತ್ರಕರ್ತ ಚಂದ್ರಶೇಖರ ಬೀಜಾಡಿ ಕಾರ್ಯಕ್ರಮ ನಿ

  • ಕೋಟ :ಸವಿತಾ ಸಮಾಜದ ಅಶೋಕ್ ಭಂಡಾರಿ ಕೋಣಿಯವರಿಗೆ ಸನ್ಮಾನ

    ಕೋಟ :ಸವಿತಾ ಸಮಾಜದ ಅಶೋಕ್ ಭಂಡಾರಿ ಕೋಣಿಯವರಿಗೆ ಸನ್ಮಾನ

    ಕುಂದಾಪುರ ಮಿರರ್ ಸುದ್ದಿ…

    ಕುಂದಾಪುರ :ಕೋಟ ವಲಯ ಸವಿತಾ ಸಮಾಜದ ವತಿಯಿಂದ ಕೋಣಿ ಗ್ರಾಮಪಂಚಾಯತ್ ಅಧ್ಯಕ್ಷರಾಗಿ ಆಯ್ಕೆಯಾದ ಸವಿತಾ ಸಮಾಜದ ಅಶೋಕ್ ಭಂಡಾರಿ ಕೋಣಿಯವರನ್ನು ಸನ್ಮಾಸಿ ಗೌರವಿಸಲಾಯಿತು.

    ಸಭೆಯಲ್ಲಿ ಸಮಾಜದ ಮುಖಂಡರಾದ ರಮೇಶ್ ಭಂಡಾರಿ, ಪ್ರಶಾಂತ್ ಭಂಡಾರಿ ಸಾಲಿಗ್ರಾಮ , ಹರೀಶ್ ಭಂಡಾರಿ ಗಿಳಿಯಾರು, ಮಾಧವ ಭಂಡಾರಿ ಕೋಟ, ಅನಿಲ್ ಭಂಡಾರಿ ಕೋಣಿ ಉಪಸ್ಥಿತರಿದ್ದರು. ಪಡುಕರೆ ಮಂಜುನಾಥ ಭಂಡಾರಿ ಕಾರ್ಯಕ್ರಮ ನಿರೂಪಿಸಿದರು.

  • ವಂಡ್ಸೆ ಗ್ರಾಮ ಪಂಚಾಯತ್‍ನಲ್ಲಿ ಗೃಹಲಕ್ಷ್ಮೀ ಯೋಜನೆ ಅನುಷ್ಠಾನ ಕಾರ್ಯಕ್ರಮಕ್ಕೆ ಚಾಲನೆ

    ವಂಡ್ಸೆ ಗ್ರಾಮ ಪಂಚಾಯತ್‍ನಲ್ಲಿ ಗೃಹಲಕ್ಷ್ಮೀ ಯೋಜನೆ ಅನುಷ್ಠಾನ ಕಾರ್ಯಕ್ರಮಕ್ಕೆ ಚಾಲನೆ

    ಕುಂದಾಪುರ ಮಿರರ್ ಸುದ್ದಿ….

    ಬೈಂದೂರು :ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ, ತಾಲೂಕು ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಕುಂದಾಪುರ ತಾಲೂಕು, ಗ್ರಾಮ ಪಂಚಾಯತ್ ವಂಡ್ಸೆ ಇವರ ಸಹಯೋಗದಲ್ಲಿ ಗೃಹಲಕ್ಷ್ಮೀ ಯೋಜನೆ ಅನುಷ್ಠಾನ ಕಾರ್ಯಕ್ರಮ ಉಡುಪಿ ಜಿಲ್ಲೆಯ ಗ್ರಾಮ ಪಂಚಾಯತ್ ಪೈಕಿ ವಂಡ್ಸೆ ಗ್ರಾಮ ಪಂಚಾಯತ್‍ನಲ್ಲಿ ಮೈಸೂರು ಕಾರ್ಯಕ್ರಮದ ಸ್ಥಳದಿಂದ ನೇರಾ ಸಂವಾದ ಕಾರ್ಯಕ್ರಮ ಆಯೋಜಿಸಲಾಗಿತ್ತು.

    ವಂಡ್ಸೆಯ ಮಹಾತ್ಮಾಗಾಂಧಿ ಸಭಾಭವನದಲ್ಲಿ ನಡೆದ ಕಾರ್ಯಕ್ರಮವನ್ನು ಹಿರಿಯ ಗೃಹಲಕ್ಷ್ಮೀಯರಾದ ಚಿಕ್ಕು ಬಳಗೇರಿ, ಶೇಷಿ ಪೂಜಾರಿ ದೀಪ ಪ್ರಜ್ವಲನೆಗೊಳಿಸುವ ಮೂಲಕ ಉದ್ಘಾಟಿಸಿದರು.

    ಕುಂದಾಪುರ ಉಪ ವಿಭಾಗದ ಸಹಾಯಕ ಆಯುಕ್ತರಾದ ರಶ್ಮಿ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿ, ರಾಜ್ಯದಲ್ಲಿ ಮಹಿಳೆಯರ ಆರ್ಥಿಕ ಸಬಲೀಕರಣ ಧೈಯದೊಂದಿಗೆ ಕುಟುಂಬದ ಯಜಮಾನಿ ಮಹಿಳೆಗೆ ಪ್ರತಿ ತಿಂಗಳು 2000 ರೂ. ನೀಡುವ ಗೃಹಲಕ್ಷ್ಮಿ ಯೋಜನೆಯನ್ನು ರಾಜ್ಯ ಸರ್ಕಾರವು ಜಾರಿಗೆ ತಂದಿದ್ದು, ಇದು ಸ್ತ್ರೀ ಸಬಲೀಕರಣಕ್ಕೆ ಮಹತ್ವದ್ದಾಗಿದೆ. ಮನೆಯಲ್ಲಿ ಮಹಿಳೆಯೊಬ್ಬಳು ಶಿಕ್ಷಣ ಪಡೆದರೆ ಇಡಿ ಕುಟುಂಬವೇ ಉದ್ದಾರವಾಗುತ್ತದೆ. ಅದೇ ರೀತಿ ಮಹಿಳೆ ಆರ್ಥಿಕವಾಗಿ ಶಕ್ತಳಾದರೆ ಇಡೀ ಕುಟುಂಬಕ್ಕೆ ಅವಳು ದಿಕ್ಕಾಗುತ್ತಾಳೆ ಎಂದು ಹೇಳಿದರು.

    ಗ್ರಾಮ ಪಂಚಾಯತ್ ಅಧ್ಯಕ್ಷೆ ಗೀತಾ ಅವಿನಾಶ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಶಶಿಧರ್ ಕೆ.ಜಿ, ಜಿಲ್ಲಾ ಕಾರ್ಯಕ್ರಮ ಸಂಯೋಜಕ ಕೃಷ್ಣಪ್ಪ, ಗ್ರಾಮ ಪಂಚಾಯತ್ ನೋಡೆಲ್ ಅಧಿಕಾರಿ ಉಮೇಶ್, ತಹಶೀಲ್ದಾರ್ ಶೋಭಾಲಕ್ಷ್ಮೀ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಯೋಜನಾಧಿಕಾರಿ ಅನುರಾಧ ಹಾದಿಮನೆ, ಗ್ರಾಮ ಪಂಚಾಯತ್ ಸದಸ್ಯರಾದ ಸುಬ್ಬು, ಸುಶೀಲಾ ಉಪಸ್ಥಿತರಿದ್ದರು.

    ಗ್ರಾಮ ಪಂಚಾಯತ್ ಅಭಿವೃದ್ದಿ ಅಧಿಕಾರಿ ರೇಣುಕಾ ಹೆಗ್ಡೆ ಸ್ವಾಗತಿಸಿ ಕಾರ್ಯಕ್ರಮ ನಿರ್ವಹಿಸಿದರು. ಗ್ರಾಮ ಪಂಚಾಯತ್ ನಿಕಟಪೂರ್ವ ಅಧ್ಯಕ್ಷ ಉದಯ ಕುಮಾರ್ ಶೆಟ್ಟಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಗ್ರಾಮ ಪಂಚಾಯತ್ ಉಪಾಧ್ಯಕ್ಷ ಗೋವರ್ದನ್ ಜೋಗಿ ವಂದಿಸಿದರು.

    ಕಾರ್ಯಕ್ರಮದಲ್ಲಿ ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ, ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷ ಪ್ರದೀಪ್ ಕುಮಾರ್ ಶೆಟ್ಟಿ, ವಂಡಬಳ್ಳಿ ಜಯರಾಮ ಶೆಟ್ಟಿ ಮೊದಲಾದವರು ಭಾಗವಹಿಸಿದ್ದರು,
    ಮೈಸೂರಿನಿಂದ ನೇರ ಸಂವಾದ ಕಾರ್ಯಕ್ರಮಕ್ಕೆ ಉಡುಪಿ ಜಿಲ್ಲೆಯಲ್ಲಿ ವಂಡ್ಸೆ ಗ್ರಾಮ ಪಂಚಾಯತ್‍ನ್ನು ಆಯ್ಕೆ ಮಾಡಿಕೊಳ್ಳಲಾಗಿತ್ತು. ಅದಕ್ಕೆ ಬೇಕಾದ ಪೂರಕ ವ್ಯವಸ್ಥೆಗಳನ್ನು ಮಾಡಿಕೊಳ್ಳಲಾಗಿತ್ತು. ಆದರೆ ಮೈಸೂರಲ್ಲಿ ಕಾರ್ಯಕ್ರಮ ನಿಗದಿತ ಸಮಯಕ್ಕಿಂತ ವಿಳಂಬವಾಗಿ ಆರಂಭವಾದ್ದರಿಂದ ಮುಖ್ಯಮಂತ್ರಿಗಳ ಭಾಷಣ ಮುಗಿಯುತ್ತಲೇ ಸಂವಾದ ಕಾರ್ಯಕ್ರಮವನ್ನು ರದ್ದುಗೊಳಿಸಲಾಯಿತು. ಸಂವಾದ ಇರುವುದರಿಂದ ಸಾಕಷ್ಟು ಸಂಖ್ಯೆಯಲ್ಲಿ ಗ್ರಾಮಸ್ಥರು, ಸಾರ್ವಜನಿಕರು ಪಾಲ್ಗೊಂಡಿದ್ದರು.

  • ಕುಂದಾಪುರ: ಹೊಸ ಆಲೋಚನಾ ಶಕ್ತಿ ಹೆಚ್ಚಿಸುವ ಸಾಮರ್ಥ್ಯ ಸಾಹಿತ್ಯಕ್ಕಿದೆ – ಹೆಚ್.ಬಿ ಇಂದ್ರಕುಮಾರ್

    ಕುಂದಾಪುರ: ಹೊಸ ಆಲೋಚನಾ ಶಕ್ತಿ ಹೆಚ್ಚಿಸುವ ಸಾಮರ್ಥ್ಯ ಸಾಹಿತ್ಯಕ್ಕಿದೆ – ಹೆಚ್.ಬಿ ಇಂದ್ರಕುಮಾರ್

    ಹೆಚ್.ಬಿ ಇಂದ್ರಕುಮಾರ್ ಅವರಿಗೆ ಡಾ.ಹೆಚ್.ಶಾಂತಾರಾಮ್ ಸಾಹಿತ್ಯ ಪ್ರಶಸ್ತಿ ಪ್ರದಾನ ಮತ್ತು ತಳಿಕಂಡಿ ಕುಂದಾಪ್ರ ಕನ್ನಡ ಸಾಂಸ್ಕೃತಿಕ ಕೋಶ ಪುಸ್ತಕ ಲೋಕಾರ್ಪಣೆ

    ಕುಂದಾಪುರ ಮಿರರ್ ಸುದ್ದಿ….
    ಕುಂದಾಪುರ: ಸಾಹಿತ್ಯ ಕ್ಷೇತ್ರಕ್ಕೆ ಅಗಾಧವಾದ ಶಕ್ತಿಯಿದ್ದು, ಅದು ನಮ್ಮನ್ನು ಹೆಚ್ಚು ಹೆಚ್ಚು ಆಲೋಚಿಸುವಂತೆ ಮಾಡುತ್ತದೆ. ಸಾಹಿತ್ಯ ಭಿನ್ನ ನೆಲೆಗಳ ಹುಡುಕಾಟಕ್ಕೆ ಅನುವು ಮಾಡಿಕೊಡುತ್ತದೆ ಎಂದು ಹೆಚ್.ಬಿ ಇಂದ್ರಕುಮಾರ್ ಹೇಳಿದರು.

    ಆಗಸ್ಟ್ 30ರಂದು ಇಲ್ಲಿನ ಭಂಡಾರ್ಕಾರ್ಸ್ ಪದವಿ ಕಾಲೇಜಿನಲ್ಲಿ ನಡೆದ ಡಾ.ಹೆಚ್.ಶಾಂತಾರಾಮ್ ಸಾಹಿತ್ಯ ಪ್ರಶಸ್ತಿ ಪ್ರದಾನ ಸಮಾರಂಭ ಮತ್ತು ತಳಿಕಂಡಿ ಕುಂದಾಪ್ರ ಕನ್ನಡ ಸಾಂಸ್ಕೃತಿಕ ಕೋಶ ಪುಸ್ತಕ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಡಾ.ಹೆಚ್.ಶಾಂತಾರಾಮ್ ಸಾಹಿತ್ಯ ಪ್ರಶಸ್ತಿ ಸ್ವೀಕರಿಸಿ ಮಾತನಾಡಿದರು.

    ಸಾಹಿತ್ಯದ ಕಥೆ ಕಾದಂಬರಿ ಕವನ ಸಂಕಲನಗಳನ್ನು ಬೇರೆ ಬೇರೆ ನೆಲೆಗಳಲ್ಲಿ ಅರ್ಥೈಸಬಹುದು. ಕೆಲವು ಸಂದರ್ಭಗಳಲ್ಲಿ ಸಾಹಿತ್ಯ ರಚನೆಗಳ ವಸ್ತು ತುಂಬಾ ಚೆನ್ನಾಗಿರುತ್ತದೆ ಮತ್ತು ಓದುಗರನ್ನು ಚಿಂತನೆಗೆ ಒಳಪಡಿಸಿ ಓದುವಂತೆ ಮಾಡುತ್ತದೆ. ಅಲ್ಲದೆ ಓದುಗರನ್ನು ಇನ್ನೂ ಹೆಚ್ಚು ಆಕರ್ಷಿಸುವಂತೆ ಮತ್ತು ಓದುವಂತೆ ಸಾಹಿತ್ಯದ ರಚನೆಯಾಗಬೇಕು. ಯಾವುದೇ ಸಾಹಿತ್ಯ ರಚನೆಯಲ್ಲಿ ಭಾಷೆ, ಸಮೃದ್ಧ, ನಿಗೂಢತೆ ಮತ್ತು ಮನಸಿಗೆ ಹಿತವೆನಿಸುವ ವಿಸ್ಮಯಗಳ ಹೂರಣವನ್ನು ಸಾಹಿತ್ಯವು ಒಳಗೊಂಡಿದ್ದರೆ ಓದುಗರನ್ನು ಹೆಚ್ಚು ಆಕರ್ಷಿಸುತ್ತದೆ. ಮನುಷ್ಯನ ಸಂವೇದನೆಯಲ್ಲಿಯೇ ಸಾಹಿತ್ಯ ಅಡಗಿದೆ. ಸಮಯದ ಪರಿವೆಯೇ ಇಲ್ಲದೆ ನಮ್ಮನ್ನು ಯಾವುದೋ ಲೋಕಕ್ಕೆ ಪ್ರವೇಶ ಮಾಡಿಸುವ ಶಕ್ತಿ ಸಾಹಿತ್ಯಕ್ಕೆ ಇದೆ. ಹಾಗೆ ಈ ಪ್ರಶಸ್ತಿಯು ನನ್ನ ಬರವಣಿಗೆಯ ಜವಾಬ್ದಾರಿಯನ್ನು ಇಮ್ಮಡಿಗೊಳಿಸಿದೆ ಎಂದರು.

    ಭಂಡಾರ್ಕಾರ್ಸ್ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ಡಾ.ಹೆಚ್.ಶಾಂತಾರಾಮ್ ಅವರು ಮಾತನಾಡಿ ಸಾಹಿತ್ಯ ಸೇವೆ ಮುಂದುವರಿಯಲಿ ಎಂದು ಶುಭಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ವಿಶ್ವಸ್ಥ ಮಂಡಳಿಯ ಹಿರಿಯ ಸದಸ್ಯರಾದ ಕೆ.ಶಾಂತಾರಾಮ ಪ್ರಭು ಮಾತನಾಡಿ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಸಾಹಿತ್ಯ, ಸಂಗೀತ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ತೊಡಗಿಸಿಕೊಳ್ಳಿ ಮತ್ತು ಓದುವ ಹವ್ಯಾಸವನ್ನು ಬೆಳೆಸಿಕೊಳ್ಳಿ. ಈ ಪ್ರಶಸ್ತಿ ತುಂಬಾ ಶ್ರೇಷ್ಠವಾದದ್ದು ಎಂದು ಹೇಳಿದರು.

    ತಳಿಕಂಡಿ – ಕುಂದಾಪ್ರ ಕನ್ನಡ ಸಾಂಸ್ಕೃತಿಕ ಕೋಶವನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಕುಂದಾಪುರ ತಾಲೂಕಾ ತಹಶೀಲ್ದಾರ್ ಶೋಭಲಕ್ಷ್ಮಿ ಅವರು ಭಾಷೆ ಎಂದರೆ ಬದುಕು. ಭಾಷೆ ಎಂದರೆ ಸಂಸ್ಕೃತಿ ಎಂದು ಹೇಳಿದರು.
    ಈ ಸಂದರ್ಭದಲ್ಲಿ ವೇದಿಕೆಯಲ್ಲಿ ವಿಶ್ವಸ್ಥ ಮಂಡಳಿಯ ಸದಸ್ಯರಾದ ದೇವದಾಸ್ ಕಾಮತ್ ಮತ್ತು ರಾಜೇಂದ್ರ ತೋಳಾರ್ ಉಪಸ್ಥಿತರಿದ್ದರು. ಡಾ.ಹೆಚ್.ಶಾಂತಾರಾಮ್ ಸಾಹಿತ್ಯ ಪ್ರಶಸ್ತಿ ಆಯ್ಕೆ ಸಮಿತಿಯ ಸಂಚಾಲಕರಾದ ಡಿ.ರೇಖಾ ಬನ್ನಾಡಿ ಪ್ರಾಸ್ತಾವಿಕವಾಗಿ ಮಾತನಾಡಿದರು.
    ಭಂಡಾರ್ಕಾರ್ಸ್ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ.ಶುಭಕರಾಚಾರಿ ಸ್ವಾಗತಿಸಿದರು. ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಡಾ.ಜಿ.ಎಂ.ಗೊಂಡ ವಂದಿಸಿದರು. ಕನ್ನಡ ಉಪನ್ಯಾಸಕರಾದ ಮೈತ್ರಿ “ತಳಿಕಂಡಿ” ಪುಸ್ತಕದ ಕುರಿತು ಮಾತನಾಡಿದರು. ಆಂಗ್ಲ ಭಾಷಾ ಉಪನ್ಯಾಸಕಿ ರೋಹಿಣಿ ಹೆಚ್.ಬಿ ಕಾರ್ಯಕ್ರಮ ನಿರೂಪಿಸಿದರು.

  • ಉಡುಪಿ :ಸರ್ಕಾರಿ ಶಾಲೆಗಳ ಅಭಿವೃದ್ಧಿಯ ಹರಿಕಾರ ಪ್ರಶಸ್ತಿಗೆ ಮಾರಣಕಟ್ಟೆ ಕೃಷ್ಣಮೂರ್ತಿ ಮಂಜ ಆಯ್ಕೆ

    ಉಡುಪಿ :ಸರ್ಕಾರಿ ಶಾಲೆಗಳ ಅಭಿವೃದ್ಧಿಯ ಹರಿಕಾರ ಪ್ರಶಸ್ತಿಗೆ ಮಾರಣಕಟ್ಟೆ ಕೃಷ್ಣಮೂರ್ತಿ ಮಂಜ ಆಯ್ಕೆ

    ಕುಂದಾಪುರ ಮಿರರ್ ಸುದ್ದಿ…

    ಕುಂದಾಪುರ: ಕರ್ನಾಟಕ ರಾಜ್ಯ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಗಳ(ಎಸ್ಡಿಎಂಸಿ) ಸಮನ್ವಯ ವೇದಿಕೆ, ಉಡುಪಿ ಜಿಲ್ಲೆ ಕೊಡಮಾಡುವ ಜಿಲ್ಲಾ ಮಟ್ಟದ ಸರಕಾರಿ ಶಾಲೆಗಳ ಅಭಿವೃದ್ಧಿ ಹರಿಕಾರ ಪ್ರಶಸ್ತಿಗೆ ಕರ್ನಾಟಕ ರಾಜ್ಯ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಉದ್ಯಮಿ ಮಾರಣಕಟ್ಟೆ ಕೃಷ್ಣಮೂರ್ತಿ ಮಂಜ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಸಮನ್ವಯ ವೇದಿಕೆಯ ಜಿಲ್ಲಾಧ್ಯಕ್ಷ ಅಬ್ದುಲ್ ಸಲಾಂ ಚಿತ್ತೂರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಅವರು ನೀಡಿದ ಅಮೂಲ್ಯ ಕೊಡುಗೆಗಳನ್ನು ಪರಿಗಣಿಸಿ ಈ ಪ್ರಶಸ್ತಿ ನೀಡಲಾಗುತ್ತಿದೆ. ಪ್ರಶಸ್ತಿ ಪ್ರದಾನ ಸಮಾರಂಭ ಸೆ.10ರಂದು ಕೊಟೇಶ್ವರದ ಸರಸ್ವತೀ ಕಲ್ಯಾಣ ಮಂಟಪದಲ್ಲಿ ನಡೆಯಲಿದೆ. ತಾಲೂಕು ಕಾನೂನು ಸೇವಾ ಸಮಿತಿ ಸಹಭಾಗಿತ್ವದಲ್ಲಿ ನಡೆಯುವ ಈ ಕಾರ್ಯಕ್ರಮದಲ್ಲಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ತಾಲೂಕು ನ್ಯಾಯಾಧೀಶರು ಭಾಗವಹಿಸಿ ಪ್ರಶಸ್ತಿ ಪ್ರಧಾನಿಸಲಿದ್ದಾರೆ. ಶಿಕ್ಷಣ ತಜ್ಞ ಡಾ.ವಿ.ಪಿ. ನಿರಂಜನ ಆರಾಧ್ಯ ಹಾಗೂ ರಾಜ್ಯದ ವಿವಿಧ ಜಿಲ್ಲೆಗಳ ಸಮನ್ವಯ ವೇದಿಕೆ ಪದಾಧಿಕಾರಿಗಳು, ಶಿಕ್ಷಣಾಭಿಮಾನಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದವರು ಹೇಳಿದ್ದಾರೆ.

    ಕಾರ್ಯಕ್ರಮದಲ್ಲಿ ಶೂನ್ಯ ಶಿಕ್ಷಕರಿರುವ ಶಾಲೆಗಳಲ್ಲಿ ಅತ್ಯುತ್ತಮವಾಗಿ ಸೇವೆ ಸಲ್ಲಿಸಿದ ಶಿಕ್ಷಣ ಇಲಾಖೆಯ ಸಿಆರ್ಪಿಯವರನ್ನು ಗುರುತಿಸಿ ಉತ್ತಮ ಸಿಆರ್ಪಿ ಪ್ರಶಸ್ತಿ ನೀಡಿ ಅವರನ್ನು ಗೌರವಿಸಲಾಗುವುದು. ಇದೇ ಸಂದರ್ಭದಲ್ಲಿ ನಿವೃತ್ತರಾದರೂ ಶಾಲೆಯಲ್ಲಿ ಸೇವೆ ಸಲ್ಲಿಸುತ್ತಿರುವ ನಿವೃತ್ತ ಶಿಕ್ಷಕ ನಡೂರು ವಿಶ್ವನಾಥ ಶೆಟ್ಟಿಯವರಿಗೆ ಗುರುವಂದನೆ ಸಲ್ಲಿಸಲಾಗುವುದು. ಅಲ್ಲದೆ ಗ್ರಾಮೀಣ ಭಾಗದ ಶಾಲೆಗಳ ಅಭಿವೃದ್ಧಿ ಸಾಧಕ ಪ್ರಶಸ್ತಿಯನ್ನು ಅಮಾಸೆಬೈಲು ಪರಿಸರದ ಶಾಲೆಗಳ ಅಭಿವೃದ್ಧಿಗೆ ಅಮೂಲ್ಯ ಕೊಡುಗೆ ನೀಡಿರುವ ಶಂಕರ ಐತಾಳ ಅಮಾಸೆಬೈಲು ಇವರಿಗೆ ನೀಡಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

  • ಕುಂದಾಪುರ :ಲಿಟ್ಲಸ್ಟಾರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿದ್ಯಾರ್ಥಿ ಸಂಸತ್ತು ಪದಗ್ರಹಣ ಹಾಗೂ ಕಾನೂನು ಅರಿವು ಮಾಹಿತಿ ಕಾರ್ಯಕ್ರಮ

    ಕುಂದಾಪುರ :ಲಿಟ್ಲಸ್ಟಾರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿದ್ಯಾರ್ಥಿ ಸಂಸತ್ತು ಪದಗ್ರಹಣ ಹಾಗೂ ಕಾನೂನು ಅರಿವು ಮಾಹಿತಿ ಕಾರ್ಯಕ್ರಮ

    ಕುಂದಾಪುರ ಮಿರರ್ ಸುದ್ದಿ…

    ಕುಂದಾಪುರ :ಸುಜ್ಣಾನ ಎಜ್ಯುಕೇಶನ್ ಟ್ರಸ್ಟ್ ಪ್ರವರ್ತಿತ ಲಿಟ್ಲಸ್ಟಾರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿದ್ಯಾರ್ಥಿ ಸಂಸತ್ತು ಪದಗ್ರಹಣ ಹಾಗೂ ಕಾನೂನು ಅರಿವು ಮಾಹಿತಿ ಕಾರ್ಯಕ್ರಮ ಆ ೨೯ರಂದು ಜರಗಿತು.

    ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಧೀಶ ಅಬುಲ್ ರಹೀಂ ಹುಸೇನ್ ಶೇಖ್ ಮಾತನಾಡಿ, ವಿದ್ಯಾರ್ಥಿದಿಸೆಯಲ್ಲಿ ನಾಯಕತ್ವ ಬೆಳೆಸಿಕೊಳ್ಳಬೇಕು. ಆಗ ಮುಂದೆ ಮಾದರಿ ನಾಯಕನಾಗಿ ಬೆಳೆಯಲು ಸಾಧ್ಯ. ಶಿಕ್ಷಣದ ಜೊತೆ ಜೊತೆ ವ್ಯವಸ್ಥೆಗಳ ಅರಿವು, ಜ್ಞಾನ ಹೊಂದುವುದು ಅತ್ಯಗತ್ಯ. ಹಾಗೆಯೇ ಕಾನೂನು ತಿಳುವಳಿಕೆಯನ್ನು ಹೊಂದಬೇಕು. ಹಂತಹಂತವಾಗಿ ವಿದ್ಯಾರ್ಥಿಗಳು ಬೆಳವಣಿಗೆ ಹೊಂದಿದಂತೆ ಪಡೆದ ಅರಿವು ಭವಿಷ್ಯದಲ್ಲಿ ಅನುಕೂಲಕ್ಕೆ ಬರುತ್ತದೆ ಎಂದರು.

    ಕುಂದಾಪುರ ವಕೀಲರ ಸಂಘದ ಅಧ್ಯಕ್ಷ ಬನ್ನಾಡಿ ಸೋಮನಾಥ ಹೆಗ್ಡೆ ಮುಖ್ಯ ಅತಿಥಿ ಯಾಗಿ ಭಾಗವಹಿಸಿದ್ದರು.

    ಸಂಸ್ಥೆಯ ಛೇರ್ ಮನ್ ಡಾ.ರಮೇಶ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು.

    ಕುಂದಾಪುರ ದ ಹಿರಿಯ ಸಿವಿಲ್ ನ್ಯಾಯಧೀಶ ರಾಜು ಎನ್., ಕುಂದಾಪುರ ವಕೀಲರ ಸಂಘದ ಕಾರ್ಯದರ್ಶಿ ಜೆ.ಶ್ರೀನಾಥ್ ರಾವ್ ಅತಿಥಿಗಳಾಗಿ ಭಾಗವಹಿಸಿದ್ದರು.

    ಸಂಸ್ಥೆಯ ಕಾರ್ಯದರ್ಶಿ ಪ್ರತಾಪಚಂದ್ರ ಶೆಟ್ಟಿ, ಕೋಶಾಧಿಕಾರಿ ಭರತ್ ಶೆಟ್ಟಿ, ಪ್ರಾಂಶುಪಾಲ ಆಗಸ್ಟಿನ್, ವಿದ್ಯಾರ್ತಿ ಸಂಸತ್ ಸಲಹೆಗಾರ ಸತೀಶ್, ಶಾಲಾವಿದ್ಯಾರ್ತಿ ನಾಯಕಿ ಪ್ರಾವ್ಯ ಉಪಸ್ಥಿತರಿದ್ದರು.
    .

  • ಸೆ. 3ರಂದು ಯಡಾಡಿ ಮತ್ಯಾಡಿ ಲಿಟಲ್ ಸ್ಟಾರ್ ಆಂಗ್ಲ ಮಾಧ್ಯಮ ಶಾಲಾ ಆವರಣದಲ್ಲಿ ಸಾರ್ವಜನಿಕರಿಗೆ ಮುದ್ದು ಕೃಷ್ಣ, ಮುದ್ದು ರಾಧೆ ಸ್ಪರ್ಧೆ

    ಸೆ. 3ರಂದು ಯಡಾಡಿ ಮತ್ಯಾಡಿ ಲಿಟಲ್ ಸ್ಟಾರ್ ಆಂಗ್ಲ ಮಾಧ್ಯಮ ಶಾಲಾ ಆವರಣದಲ್ಲಿ ಸಾರ್ವಜನಿಕರಿಗೆ ಮುದ್ದು ಕೃಷ್ಣ, ಮುದ್ದು ರಾಧೆ ಸ್ಪರ್ಧೆ

    ಕುಂದಾಪುರ ಮಿರರ್ ಸುದ್ದಿ…

    ಕುಂದಾಪುರ : ಶ್ರೀಕೃಷ್ಣ ಜನ್ಮಾಷ್ಟಮಿಯ ಅಂಗವಾಗಿ ಸಾರ್ವಜನಿಕರಿಗಾಗಿ ಕುಂದಾಪುರದ ಎಕ್ಸಲೆಂಟ್ ಆಂಗ್ಲ ಮಾಧ್ಯಮ ಶಾಲೆ ಮತ್ತು ಲಿಟ್ಲ್ ಸ್ಟಾರ್ ಆಂಗ್ಲ ಮಾಧ್ಯಮ ಶಾಲೆಗಳ ಸಹಯೋಗದೊಂದಿಗೆ ಮುದ್ದು ಕೃಷ್ಣ, ಮುದ್ದು ರಾಧೆ ಸ್ಪರ್ಧೆಯನ್ನು ಹಮ್ಮಿಕೊಂಡಿದ್ದು, ಉಡುಪಿ ಜಿಲ್ಲೆಯ 1 ರಿಂದ 6ನೇ ವಯಸ್ಸಿನ ಮಕ್ಕಳು ಮುಕ್ತವಾಗಿ ಭಾಗವಹಿಸಲು ಅವಕಾಶವಿರುತ್ತದೆ.

    ಸೆಪ್ಟಂಬರ್ 03, 2023ರ ಭಾನುವಾರ ಸಮಯ 9:30ಕ್ಕೆ ಯಡಾಡಿ ಮತ್ಯಾಡಿ ಲಿಟಲ್ ಸ್ಟಾರ್ ಆಂಗ್ಲ ಮಾಧ್ಯಮ ಶಾಲಾ ಆವರಣದಲ್ಲಿ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿದೆ.

    ಎರಡು ವಿಭಾಗ : ಮುದ್ದು ಕೃಷ್ಣ, ಮುದ್ದು ರಾಧೆ ಸ್ಪರ್ಧೆಯನ್ನು ಎರಡು ವಿಭಾಗದಲ್ಲಿ ನಡೆಸಲಾಗುವುದು. 1 ವರ್ಷದಿಂದ 3 ವರ್ಷದ ಮಕ್ಕಳನ್ನು ಮತ್ತು 4 ವರ್ಷದಿಂದ 6 ವರ್ಷದವರೆಗಿನ ಮಕ್ಕಳನ್ನು ಎರಡು ಪ್ರತ್ಯೇಕ ವಿಭಾಗವನ್ನಾಗಿಸಿ ಸ್ಪರ್ಧೆ ಏರ್ಪಡಿಸಲಾಗಿದ್ದು, ಸ್ಪರ್ಧೆಯಲ್ಲಿ ವಿಜೇತರಾದ ಮಕ್ಕಳಿಗೆ ನಗದು ಬಹುಮಾನದ ಜೊತೆಗೆ ಫಲಕ ಮತ್ತು ಪ್ರಮಾಣ ಪತ್ರ ನೀಡಲಾಗುವುದು. ಪ್ರಥಮ ಸ್ಥಾನ ಗಳಿಸಿದ ಮಕ್ಕಳಿಗೆ ರೂ.5,000, ದ್ವಿತೀಯ ಬಹುಮಾನ ರೂ.4000, ತೃತೀಯ ಬಹುಮಾನ ರೂ.3000 ಹಾಗೂ ಭಾಗವಹಿಸಿದ ಪ್ರತಿಸ್ಪರ್ಧಿಗಳಿಗೂ ಸ್ಮರಣಿಕೆ ಹಾಗೂ ಪ್ರಮಾಣ ಪತ್ರ ನೀಡಲಾಗುವುದು.

    ಸ್ಪರ್ಧೆಯು ವೇಷಭೂಷಣ, ಹಾವಭಾವ, ಅಭಿನಯ, ಸೃಜನಶೀಲತೆಗೆ ಆದ್ಯತೆ ನೀಡುವುದರೊಂದಿಗೆ ಮಾತಿಗೆ ಯಾವುದೇ ಅವಕಾಶವನ್ನು ಒಳಗೊಂಡಿರುವುದಿಲ್ಲ, ಹಿನ್ನೆಲೆ ಸಂಗೀತ ಬಳಸಲು ದ್ವನಿವರ್ಧಕವನ್ನು ಮಕ್ಕಳಿಗೆ ಒದಗಿಸಲಾಗುವುದು. ಸ್ಪರ್ಧೆಯಲ್ಲಿ ತೀರ್ಪುಗಾರರ ತೀರ್ಪೆ ಅಂತಿಮವಾಗಿರುತ್ತದೆ. ಸ್ಪರ್ಧೆಗೆ ಹಾಜರಾಗುವ ಸ್ಪರ್ಧಾರ್ಥಿಗಳು ಜನನ ಪ್ರಮಾಣ ಪತ್ರದ ಪ್ರತಿಯನ್ನು ಕಡ್ಡಾಯವಾಗಿ ಸಲ್ಲಿಸಬೇಕಾಗುತ್ತದೆ. ಜೊತೆಗೆ ಸ್ಪರ್ಧೆಯಲ್ಲಿ ಭಾಗವಹಿಸುವ ಸಾರ್ವಜನಿಕರಿಗೆ ಗುಡ್ಡೆಅಂಗಡಿ (ಯಡಾಡಿ ಮತ್ಯಾಡಿ) ಬಸ್ ನಿಲ್ದಾಣದಿಂದ ಸ್ಕೂಲಿನ ತನಕ ಉಚಿತ ಬಸ್ ವ್ಯವಸ್ಥೆ ಕಲ್ಪಿಸಲಾಗುತ್ತದೆ. ಆಸಕ್ತರು 01/09/2023 ಶುಕ್ರವಾರದ ಒಳಗೆ ತಮ್ಮ ಹೆಸರನ್ನು ನೊಂದಾಯಿಸಲು 9740932487, 9964291755 ಸಂಖ್ಯೆಗೆ ಸಂಪರ್ಕಿಸಬಹುದು ಎಂದು ಸಂಸ್ಥೆಯ ಮುಖ್ಯಸ್ಥರಾದ ಎಂ. ಮಹೇಶ್ ಹೆಗಡೆ, ಡಾ. ರಮೇಶ್ ಶೆಟ್ಟಿ, ಪ್ರತಾಪ್ ಚಂದ್ರ ಶೆಟ್ಟಿ ಮತ್ತು ಭರತ್ ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

  • ಕುಂದಾಪುರ :ಗೃಹಲಕ್ಷ್ಮಿ ಯೋಜನೆ ಚಾಲನ ಕಾರ್ಯಕ್ರಮಕ್ಕೆ ಆಹ್ವಾನ – ಬ್ಲಾಕ್ ಕಾಂಗ್ರೆಸ್ ಕುಂದಾಪುರ

    ಕುಂದಾಪುರ :ಗೃಹಲಕ್ಷ್ಮಿ ಯೋಜನೆ ಚಾಲನ ಕಾರ್ಯಕ್ರಮಕ್ಕೆ ಆಹ್ವಾನ – ಬ್ಲಾಕ್ ಕಾಂಗ್ರೆಸ್ ಕುಂದಾಪುರ

    ಕುಂದಾಪುರ ಮಿರರ್ ಸುದ್ದಿ…

    ಕುಂದಾಪುರ :ರಾಜ್ಯದಲ್ಲಿರುವ ಮಹಿಳೆಯರ ಆರ್ಥಿಕ ಸಬಲೀಕರಣದ ಉದ್ದೇಶದಿಂದ ಕುಟುಂಬದ ಯಜಮಾನಿ ಮಹಿಳೆಗೆ ಪ್ರತಿ ತಿಂಗಳು ತಲ ರೂ. 2000/- ಗಳನ್ನು ನೀಡುವ ಗ್ರಹಲಕ್ಷ್ಮಿ ಯೋಜನೆಯನ್ನು ಕರ್ನಾಟಕದ ಸರ್ಕಾರ ಜಾರಿಗೆ ತಂದಿದೆ. ಈಗಾಗಲೇ ಯೋಜನೆಯಡಿ ನೋಂದಣಿ ಯಾಗಿರುವ ಫಲಾನುಭೂಮಿಗಳಿಗೆ ಅಗಸ್ಟ್ 30ರಂದು ಮೈಸೂರಿನಲ್ಲಿ ಗ್ರಹಲಕ್ಷ್ಮೀ ಯೋಜನೆಯನ್ನು ಮಾನ್ಯ ಮುಖ್ಯ ಮಂತ್ರಿಗಳು ಲೋಕಾರ್ಪಣೆ ಗೊಳಿಸಲಿದ್ದು, ಸದರಿ ಕಾರ್ಯಕ್ರಮಕ್ಕೆ ಎಲ್ಲಾ ಫಲಾನುಭೂಮಿಗಳು, ಸಾರ್ವಜನಿಕರು ,ಭಾಗಿಯಾಗಲು ಬ್ಲಾಕ್ ಕಾಂಗ್ರೆಸ್ ಕುಂದಾಪುರ ವ್ಯಾಪ್ತಿಯ ವಾರ್ಡ್ ಹಂತದಲ್ಲಿ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಈ ಕಾರ್ಯಕ್ರಮವನ್ನು ವೀಕ್ಷಣೆ ಮಾಡಲು ಟಿ.ವಿ/ ಎಲ್.ಇ.ಡಿ ಪರದೇ ವ್ಯವಸ್ಥಗೊಳಿಸಲಾಗುತ್ತದೆ. ಸದರಿ ಕಾರ್ಯಕ್ರಮಕ್ಕೆ ಸಾರ್ವಜನಿಕರು, ಫಲಾನುಭೂಮಿಗಳು, ಚುನಾಯಿತ ಜನಪ್ರತಿನಿಧಿಗಳು ಹಾಜರಾಗಬೇಕೆಂದು ತಮ್ಮಲ್ಲಿ ವಿನಂತಿಸಿಕೊಳ್ಳಲಾಗಿದೆ.

    ಫಲಾನುಭೂಮಿಗಳಿಗೆ ನೇರ ನಗದು ವರ್ಗಾವಣೆ ಮಾಡುವ ಸಂದೇಶ ಬರುವುದರಿಂದ ನೋಂದಾಯಿತ ಫಲಾನುಭೂಮಿಗಳು ಬ್ಯಾಂಕ್ ಖಾತೆಯೊಂದಿಗೆ ಜೋಡಣೆ ಮಾಡಿಕೊಂಡಿರುವ ಮೊಬೈಲ್ ಫೋನ್ಗಳೊಂದಿಗೆ ಕಾರ್ಯಕ್ರಮಕ್ಕೆ ಹಾಜರಾಗಬೇಕಾಗಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹರಿಪ್ರಸಾದ್ ಶೆಟ್ಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    ಗೃಹಲಕ್ಷ್ಮಿ ಕಾರ್ಯಕ್ರಮ ಆಯೋಜಿಸಿದ ಸ್ಥಳದ ವಿವರ