Category: ಸುದ್ದಿ

  • ಕುಂದಾಪುರ : ಡಾ| ಬಿ. ಬಿ. ಹೆಗ್ಡೆ ಕಾಲೇಜು, ಕುಂದಾಪುರ – ಕೈಗಾರಿಕಾ ಭೇಟಿ

    ಕುಂದಾಪುರ : ಡಾ| ಬಿ. ಬಿ. ಹೆಗ್ಡೆ ಕಾಲೇಜು, ಕುಂದಾಪುರ – ಕೈಗಾರಿಕಾ ಭೇಟಿ

    ಕುಂದಾಪುರ ಮಿರರ್ ಸುದ್ದಿ…


    ಕುಂದಾಪುರ : ಪದವಿಪೂರ್ವ ಹಂತದಲ್ಲಿ ವಾಣಿಜ್ಯೇತರ ವಿಭಾಗಗಳಲ್ಲಿ ತೇರ್ಗಡೆಗೊಂಡು ಪ್ರಸ್ತುತ ವಾಣಿಜ್ಯ ಹಾಗೂ ನಿರ್ವಹಣಾ ವಿಭಾಗದಲ್ಲಿ ಪ್ರವೇಶಾತಿ ಪಡೆದ ವಿದ್ಯಾರ್ಥಿಗಳಿಗೆ ಸೇತುಬಂಧ/ತರಗತಿಗಳನ್ನು ಕಾಲೇಜಿನ ವಾಣಿಜ್ಯ ವಿಭಾಗದ ಆಶ್ರಯದಲ್ಲಿ ಹಮ್ಮಿಕೊಳ್ಳಲಾಯಿತು. ವಿದ್ಯಾರ್ಥಿಗಳಿಗೆ ಕೈಗಾರಿಕೆ, ಉದ್ಯಮ, ವ್ಯಾಪಾರ ಮುಂತಾದವುಗಳ ಬಗ್ಗೆ ಪ್ರಾತ್ಯಕ್ಷಿತೆಯನ್ನು ನೀಡುವುದು ಮತ್ತು ಪ್ರಾಯೋಗಿಕವಾಗಿ ವಾಣಿಜ್ಯ ವಿಷಯಗಳನ್ನು ಅರ್ಥೈಸುವ ನಿಟ್ಟಿನಲ್ಲಿ ಬೈಂದೂರು ಮಾಜಿ ಶಾಸಕರು ಹಾಗೂ ಸಂಸ್ಥೆಯ ಅಧ್ಯಕ್ಷರಾದ ಬಿ.ಎಮ್. ಸುಕುಮಾರ ಶೆಟ್ಟಿಯವರ ಕೈಗಾರಿಕೆಗಳಾದ ಮುಳ್ಳುಗುಡ್ಡೆ ಸೌಪರ್ಣಿಕ ಹಂಚಿನ ಕಾರ್ಖಾನೆ, ಸೌಪರ್ಣಿಕ ಡೆಕೋರೇಟಿವ್ ಟೈಲ್ಸ್, ಸೌಪರ್ಣಿಕ ಗೇರುಬೀಜ ಕಾರ್ಖಾನೆಗೆ ಭೇಟಿ ನೀಡಲಾಯಿತು.

    ಈ ಸಂದರ್ಭ ಕಾರ್ಖಾನೆಯ ಮ್ಯಾನೇಜರಾದ ದಯಾನಂದ ಗಾಣಿಗ, ಅಕೌಂಟೆಂಟ್ ಸತೀಶ್ ಅಡಿಗ ಇವರು ವಿದ್ಯಾರ್ಥಿಗಳಿಗೆ ಸೂಕ್ತ ಮಾರ್ಗದರ್ಶನ ಮತ್ತು ಮಾಹಿತಿ ನೀಡಿದರು. ವಾಣಿಜ್ಯ ವಿಭಾಗದ ಮುಖ್ಯಸ್ಥೆ ವೀಣಾ ಭಟ್, ವಿದ್ಯಾರ್ಥಿ ಕ್ಷೇಮ ಪಾಲನಾಧಿಕಾರಿ ರಕ್ಷಿತ್ ರಾವ್ ಗುಜ್ಜಾಡಿ, ವಾಣಿಜ್ಯ ವಿಭಾಗದ ಉಪನ್ಯಾಸಕರಾದ ರಾಜೇಶ್ ಶೆಟ್ಟಿ, ಸತೀಶ್ ಶೆಟ್ಟಿ, ದೀಪ ಪೂಜಾರಿ, ಶರತ್ ಕುಮಾರ್, ಅಕ್ಷಯ್ ಕುಮಾರ್, ಜೋಸ್ಲಿನ್ ಅಲ್ಮೇಡಾ ಉಪಸ್ಥಿತರಿದ್ದರು.

  • ಬ್ಯಾಂಕಿಂಗ್ ಕ್ಷೇತ್ರದ ಸಾಧಕ ಜಯರಾಮ ಭಟ್ ನಿಧನ-  ಡಾ.ಕೆ.ಎಸ್.ಕಾರಂತ ಕಂಬನಿ

    ಬ್ಯಾಂಕಿಂಗ್ ಕ್ಷೇತ್ರದ ಸಾಧಕ ಜಯರಾಮ ಭಟ್ ನಿಧನ- ಡಾ.ಕೆ.ಎಸ್.ಕಾರಂತ ಕಂಬನಿ

    ಕುಂದಾಪುರ ಮಿರರ್ ಸುದ್ದಿ…

    ಕುಂದಾಪುರ: ಕರ್ನಾಟಕ ಬ್ಯಾಂಕಿನ ಪೂರ್ವ ಅಧ್ಯಕ್ಷ ಪೊಳಲಿ ಜಯರಾಮ ಭಟ್ಟರ ನಿಧನಕ್ಕೆ ಸಾಲಿಗ್ರಾಮ ಶ್ರೀ ಗುರು ನರಸಿಂಹ ದೇವಳದ ಅಧ್ಯಕ್ಷ ಡಾ.ಕೆ.ಎಸ್.ಕಾರಂತರು ಕಂಬನಿ ಮಿಡಿದಿದ್ದಾರೆ.

    ಸುಮಾರು ನಾಲ್ಕು ದಶಕಗಳಿಗೂ ಮಿಕ್ಕಿ ಬ್ಯಾಂಕಿಂಗ್ ಕ್ಷೇತ್ರದಲ್ಲಿ ನಿಸ್ಪ್ರಹ ಸೇವೆ ಸಲ್ಲಿಸಿ, ಅಪಾರ ಜನಮನ್ನಣೆಗೆ ಪಾತ್ರರಾಗಿದ್ದ ಜಯರಾಮ ಭಟ್ಟರ‌ ಮತ್ತು ನನ್ನ ಒಡನಾಟವು ಎರಡು ದಶಕಗಳಿಗೂ ಮಿಕ್ಕಿದ್ದಾಗಿದ್ದು ಅವರ ಅಕಾಲಿಕ ನಿಧನದಿಂದ ಸಮಾಜಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಡಾ.ಕೆ.ಎಸ್.ಕಾರಂತ್ ಹೇಳಿದ್ದಾರೆ.

  • ಬೈಂದೂರಿಗೆ ಕೇಂದ್ರೀಯ ವಿದ್ಯಾಲಯ: ಸಂಸದರಿಂದ ಬೇಡಿಕೆ

    ಬೈಂದೂರಿಗೆ ಕೇಂದ್ರೀಯ ವಿದ್ಯಾಲಯ: ಸಂಸದರಿಂದ ಬೇಡಿಕೆ

    ಕುಂದಾಪುರ ಮಿರರ್ ಸುದ್ದಿ…

    ಕುಂದಾಪುರ: ಶಿವಮೊಗ್ಗ ಲೋಕಸಭಾ ಕ್ಷೇತ್ರದ ಉಡುಪಿ ಜಿಲ್ಲೆಯ ಬೈಂದೂರು ವಿಧಾನಸಭಾ ವ್ಯಾಪ್ತಿಯಲ್ಲಿ ಕೇಂದ್ರ ಸರಕಾರದ ಕೇಂದ್ರೀಯ ವಿದ್ಯಾಲಯ ಮಂಜೂರು ಮಾಡುವಂತೆ ಸಂಸದ ಬಿ.ವೈ ರಾಘವೇಂದ್ರ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರಿಗೆ ಮನವಿ ಮಾಡಿದ್ದಾರೆ.

    ಮಂಗಳವಾರ ಸಚಿವ ಪ್ರಧಾನ್ ಅವರನ್ನು ಭೇಟಿ ಮಾಡಿದ ಸಂಸದ ರಾಘವೇಂದ್ರ, ವಿದ್ಯಾಲಯದ ಅಗತ್ಯತೆಗಳ ಬಗ್ಗೆ ಮನವರಿಕೆ ಮಾಡಿಕೊಟ್ಟಿದ್ದು, ಸಚಿವರು ಅಗತ್ಯ ಕ್ರಮ ಕೈಗೊಳ್ಳುವ ಭರವಸೆ ನೀಡಿರುವುದಾಗಿ ಪ್ರಕಟಣೆ ತಿಳಿಸಿದೆ.

  • ಕೋಟ ವಿವೇಕ ಆಂಗ್ಲಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿ ಚೆಸ್‍ನಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ

    ಕೋಟ ವಿವೇಕ ಆಂಗ್ಲಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿ ಚೆಸ್‍ನಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ

    ಕುಂದಾಪುರ ಮಿರರ್ ಸುದ್ದಿ…

    ಕೋಟ : ಉಡುಪಿ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರ ಕಛೇರಿ ವತಿಯಿಂದ, ಆ.8ರಂದು ಸರಕಾರಿ ಪದವಿ ಪೂರ್ವ ಕಾಲೇಜು ಕಂಬದಕೋಣೆಯಲ್ಲಿ ನಡೆದ ಪ್ರಾಥಮಿಕ ಪ್ರೌಢಶಾಲಾ ವಿದ್ಯಾರ್ಥಿಗಳ ಜಿಲ್ಲಾಮಟ್ಟದ ಚೆಸ್ ಸ್ಪರ್ಧೆಯಲ್ಲಿ ಕೋಟ ವಿವೇಕ ಆಂಗ್ಲಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿ ಶ್ರೀರಾಮ್ ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆ ಆಗಿರುತ್ತಾರೆ.

  • ರೋಟರಿ ಕ್ಲಬ್ ಕೋಟ ಸಾಲಿಗ್ರಾಮ ವತಿಯಿಂದ ವನಮಹೋತ್ಸವ ಕಾರ್ಯಕ್ರಮ

    ರೋಟರಿ ಕ್ಲಬ್ ಕೋಟ ಸಾಲಿಗ್ರಾಮ ವತಿಯಿಂದ ವನಮಹೋತ್ಸವ ಕಾರ್ಯಕ್ರಮ

    ಕುಂದಾಪುರ ಮಿರರ್ ಸುದ್ದಿ…

    ಕೋಟ: ರೋಟರಿ ಕ್ಲಬ್ ಕೋಟ ಸಾಲಿಗ್ರಾಮ ಮತ್ತು ಮೂಡಗಿಳಿಯಾರು ರೋಟರಿ ಗ್ರಾಮೀಣ ದಳದ ವತಿಯಿಂದ ಮೂಡಗಿಳಿಯಾರು ಸರಕಾರಿ ಪ್ರೌಢ ಶಾಲಾ ಆವರಣದಲ್ಲಿ ವನಮಹೋತ್ಸವ ಕಾರ್ಯಕ್ರಮ ಇತ್ತಿಚಿಗೆ ಹಮ್ಮಿಕೊಂಡಿತು. ಈ ಕಾರ್ಯಕ್ರಮವನ್ನು ರೋಟರಿ ಜಿಲ್ಲಾ ಆರ್‍ಸಿಸಿ ಚೇರ್ಮನ್ ಕುಮಾರಸ್ವಾಮಿ ಪಿ.ಎ. ಗಿಡ ನೆಡುವ ಮೂಲಕ ಉದ್ಘಾಟಿಸಿದರು.

    ಈ ಕಾರ್ಯಕ್ರಮದಲ್ಲಿ ರೋಟರಿ ಕ್ಲಬ್ ಕೋಟ ಸಾಲಿಗ್ರಾಮದ ಅಧ್ಯಕ್ಷ ದೇವಪ್ಪ ಪಟೆಗಾರ್, ಕಾರ್ಯದರ್ಶಿ ಜಿ.ತಿಮ್ಮ ಪೂಜಾರಿ, ಮತ್ತು ಸರ್ವ ಸದಸ್ಯರು ಹಾಗೂ ಮೂಡಗಿಳಿಯಾರು ರೋಟರಿ ಗ್ರಾಮೀಣದಳದ ಅಧ್ಯಕ್ಷರು ಕಾರ್ಯದರ್ಶಿ , ಸದಸ್ಯರು ಭಾಗವಹಿಸಿದ್ದರು.

  • ಪಾಂಡೇಶ್ವರ- ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸತೀಶ್ ವಡ್ಡರ್ಸೆಗೆ ಸನ್ಮಾನ

    ಪಾಂಡೇಶ್ವರ- ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸತೀಶ್ ವಡ್ಡರ್ಸೆಗೆ ಸನ್ಮಾನ

    ಕುಂದಾಪುರ ಮಿರರ್ ಸುದ್ದಿ…

    ಕೋಟ: ಸ್ನೇಹ ಸಂಜೀವಿನಿ ಒಕ್ಕೂಟ ಪಾಂಡೇಶ್ವರ ಇದರ ವಾರ್ಷಿಕ ಮಹಾಸಭೆಯು ಪಂಚಾಯತ್ ಸಭಾಂಗಣದಲ್ಲಿ ಇತ್ತೀಚಿಗೆ ಜರಗಿತು.

    ಸ್ನೇಹ ಸಂಜೀವಿನಿ ಒಕ್ಕೂಟದ ಅಧ್ಯಕ್ಷೆ ಲೀಲಾವತಿ ಗಂಗಾಧರ್ ಅಧ್ಯಕ್ಷತೆ ವಹಿಸಿದ್ದರು.

    ಬ್ರಹ್ಮಾವರ ತಾಲೂಕಿನ ಬಿಇಆರ್‍ಇಪಿ ಅನಿತಾ ಸ್ವ ಉದ್ಯೋಗದ ಮೂಲಕ ತಯಾರಿಸುವ ಉತ್ಪನ್ನಗಳಿಗೆ ಸಂಜೀವಿನಿ ಸಂತೆ ಹಾಗೂ ಸಂಜೀವಿನಿ ಸೂಪರ್ ಮಾರ್ಕೆಟ್ ಇರುವುದರ ಬಗ್ಗೆ ಸದಸ್ಯರಿಗೆ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಸಂಜೀವಿನಿ ನೂಡಲ್ ಅಧಿಕಾರಿ ಕಾರ್ಯನಿರ್ವಹಿಸಿ ವರ್ಗಾವಣೆಗೊಂಡ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸತೀಶ್ ವಡ್ಡರ್ಸೆ ಇವರನ್ನು ಗೌರವಿಸಲಾಯಿತು.

    ಒಕ್ಕೂಟದ ಕಾರ್ಯದರ್ಶಿ ಕವಿತಾ ವಾರ್ಷಿಕ ವರದಿ ಮಂಡಿಸಿದರು. ಒಕ್ಕೂಟದ ಎಂಬಿಕೆ ಉಷಾ ಗಣೇಶ್ ವಾರ್ಷಿಕ ಆಯವ್ಯಯ ಮಂಡಿಸಿದರು. ಸಭೆಯಲ್ಲಿ ಒಕ್ಕೂಟದ ಪದಾಧಿಕಾರಿಗಳು,ಎಂಬಿಕೆ,ಎಲ್‍ಸಿಆರ್‍ಪಿ ,ಕೃಷಿ ಪಶುಸಕಿ ಸಖಿ ಸಂಜೀವಿನಿ ಸದಸ್ಯರು ಉಪಸ್ಥಿತರಿದ್ದರು.

  • ಕೋಟ :ಆಜಾದಿ ಕಾ ಅಮೃತ್ ಮಹೋತ್ಸವದ ಪ್ರತಿಜ್ಞೆ

    ಕೋಟ :ಆಜಾದಿ ಕಾ ಅಮೃತ್ ಮಹೋತ್ಸವದ ಪ್ರತಿಜ್ಞೆ

    ಕುಂದಾಪುರ ಮಿರರ್ ಸುದ್ದಿ…

    ಕೋಟ: ಇಲ್ಲಿನ ಕೋಟ ಗ್ರಾಮಪಂಚಾಯತ್ ನಲ್ಲಿ ಸ್ವಾತಂತ್ರ್ಯೋತ್ಸವದ ಅಮೃತಮಹೋತ್ಸವದ ಹಿನ್ನಲ್ಲೆಯಲ್ಲಿ ಆಜಾದಿ ಕಾ ಅಮೃತ್ ಮಹೋತ್ಸವದ ಪ್ರತಿಜ್ಞೆ ವಿಧಿ ಭೋದನೆ ಕಾರ್ಯಕ್ರಮ ಇತ್ತೀಚಿಗೆ ಪಂಚಾಯತ್ ಸಭಾಂಗಣದಲ್ಲಿ ಜರಗಿತು.

    ಕೋಟ ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ವಿಶ್ವನಾಥ ಆಜಾದಿ ಕಾ ಅಮೃತ್ ಮಹೋತ್ಸವದ ಪ್ರತಿಜ್ಞಾ ವಿಧಿ ಬೋಧಿಸಿದರು.

    ಈ ವೇಳೆ ಪಂಚಾಯತ್ ಅಧ್ಯಕ್ಷ ಅಜಿತ್ ದೇವಾಡಿಗ,ಉಪಾಧ್ಯಕ್ಷೆ ಜಯಂತಿ ಪೂಜಾರಿ,ಪಿಡಿಓ ಸತೀಶ್ ವಡ್ಡರ್ಸೆ ಮತ್ತಿತರರು ಉಪಸ್ಥಿತರಿದ್ದರು.

  • ಬಸ್ರೂರು ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಗೋಪಾಲ ಪೂಜಾರಿ ನಿಧನ

    ಬಸ್ರೂರು ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಗೋಪಾಲ ಪೂಜಾರಿ ನಿಧನ

    ಕುಂದಾಪುರ ಮಿರರ್ ಸುದ್ದಿ…

    ಕುಂದಾಪುರ: ಹಿರಿಯ ಸಹಕಾರಿ ಧುರೀಣ, ಬಸ್ರೂರು ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷರು, ಬಸ್ರೂರು ಕೋಟಿ ಚೆನ್ನಯ್ಯ ಗರಡಿಯ ಮುಖ್ಯಸ್ಥರಾದ ಗೋಪಾಲ ಪೂಜಾರಿ (68ವ) ಆ.8ರಂದು ಹೃದಯಘಾತದಿಂದ ನಿಧನರಾದರು.

    ಸಹಕಾರ ಕ್ಷೇತ್ರದಲ್ಲಿ ಸುದೀರ್ಘ ಅವಧಿಯಿಂದ ಗುರುತಿಸಿಕೊಂಡಿದ್ದ ಅವರು ಕಳೆದ 25 ವರ್ಷಗಳಿಗೂ ಹೆಚ್ಚು ಕಾಲ ಬಸ್ರೂರು ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾಗಿ ಸಂಘವನ್ನು ಮುನ್ನೆಡೆಸಿದ್ದರು. ಬಸ್ರೂರು ಗರಡಿಯ ಪಾತ್ರಿಗಳಾಗಿ, ಗರಡಿಯ ಅಭಿವೃದ್ದಿಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ಬಸ್ರೂರು ಪರಿಸರದ ಧಾರ್ಮಿಕ, ಸಹಕಾರ, ಸಾಮಾಜಿಕ ಕ್ಷೇತ್ರಗಳಲ್ಲಿ ಸಕ್ರೀಯವಾಗಿ ತೊಡಗಿಸಿಕೊಳ್ಳುತ್ತಿದ್ದರು.

    ಮೃತರು ಪತ್ನಿ, ನಾಲ್ವರು ಪುತ್ರರು, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

  • ಶಿಕ್ಷ ಪ್ರಭ ಅಕಾಡೆಮಿ ಕುಂದಾಪುರ: ಸಿಎ ಫಲಿತಾಂಶದಲ್ಲಿ ಶ್ರೇಷ್ಠ ಸಾಧನೆ

    ಶಿಕ್ಷ ಪ್ರಭ ಅಕಾಡೆಮಿ ಕುಂದಾಪುರ: ಸಿಎ ಫಲಿತಾಂಶದಲ್ಲಿ ಶ್ರೇಷ್ಠ ಸಾಧನೆ

    ಕುಂದಾಪುರ ಮಿರರ್ ಸುದ್ದಿ…

    ಕುಂದಾಪುರ: ಸಿಎ/ಸಿಎಸ್ ಪ್ರೊಫೆಷನಲ್ ಕೋರ್ಸುಗಳಿಗೆ ಗುಣಮಟ್ಟದ ತರಬೇತಿ ನೀಡುವುದರಲ್ಲಿ ಮುಂಚೂಣಿಯಲ್ಲಿರುವ ಕುಂದಾಪುರದ ಕುಂದೇಶ್ವರ ದೇವಸ್ಥಾನ ರಸ್ಥೆಯ ಸಿರಿ ಬಿಲ್ಡಿಂಗ್‌ನಲ್ಲಿ ಕಾರ್ಯನಿರ್ವಹಿಸುತ್ತಿರುವ ಹೆಸರಾಂತ ಸಂಸ್ಥೆ ಶಿಕ್ಷ ಪ್ರಭ ಅಕಾಡೆಮಿ ಆಫ್ ಕಾಮರ್ಸ್ ಎಜ್ಯುಕೇಶನ್ (ಸ್ಪೇಸ್) ನ ವಿದ್ಯಾರ್ಥಿಗಳು ಇನ್ಸ್ಟಿಟೂಟ್ ಆಫ್ ಚಾರ್ಟಡ್ ಅಕೌಂಟೆಂಟ್ಸ್ ಆಫ್ ಇಂಡಿಯ ಜೂನ್ 2023ರಲ್ಲಿ ನೆಡೆಸಿದ ಸಿಎ ಫೌಂಡೇಶನ್ ಪರೀಕ್ಷೆಯಲ್ಲಿ ಉತ್ತಮ ಅಂಕಗಳೊಂದಿಗೆ ತೇರ್ಗಡೆ ಹೊಂದುವುದರ ಮೂಲಕ ಸಾಧನೆಗೈದಿದ್ದಾರೆ.

    ಸಂಸ್ಥೆಯ ವಿದ್ಯಾರ್ಥಿಗಳಾದ ಅನ್ವಿತಾ ಎ(286), ಕೃತಿಕಾ (248), ಪೌರ್ಣಮಿ ಐತಾಳ್ (243), ಪ್ರೇಕ್ಷಿತಾ (243), ದೀಕ್ಷಿತಾ ಗೋಪಾಲ್ (238), ಚಿರಾಗ್ ಮೆಂಡನ್ (232), ಶ್ರಾವ್ಯ ಪೂಜಾರಿ (227), ಸುಜನಾ(223), ಆಶಿಷ್ ಶೆಟ್ಟಿ(222), ತರುಣ್ (218), ಅಶ್ವಿತಾ (216), ಸುಜೇತಾ ಶೆಟ್ಟಿ (214), ಅಖಿಲೇಶ್ (211), ಪೂಜಾ ಶೇಟ್(210), ಸೂರಜ್ ಆಚಾರ್ (208), ನಿಶಿತಾ (207), ತೇಜಸ್ವಿ ಪೋಜಾರಿ (207), ಛಾಯ ಕಿರಣ್ (205), ಸುಶ್ಮಿತಾ (200), ಶ್ರಾವ್ಯ ಭಟ್ (200) ಅಂಕಗಳೊಂದಿಗೆ ಸಿಎ ಫೌಂಡೇಶನ್ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ್ದಾರೆ.
    ಶಿಕ್ಷ ಪ್ರಭ ಅಕಾಡೆಮಿಯು ಕಳೆದ ಕೆಲವು ವರ್ಷಗಳಿಂದ ಸಿಎ ಮತ್ತು ಸಿಎಸ್ ಪ್ರೊಫೆಷನಲ್ ಕೋರ್ಸುಗಳಿಗೆ ಗುಣಮಟ್ಟದ ತರಬೇತಿ ನೀಡುತ್ತಾ ಬಂದಿದ್ದು ಅನೇಕ ವಿದ್ಯಾರ್ಥಿಗಳು ಸಿಎ/ಸಿಎಸ್ ನ ಎಲ್ಲಾ ಹಂತದ ಪರೀಕ್ಷೆಯಲ್ಲೂ ಉತ್ತೀರ್ಣರಾಗಿ ದೇಶದ ನಾನಾ ಭಾಗಗಳಲ್ಲಿ ಉದ್ಯೋಗದಲ್ಲಿದ್ದಾರೆ. ಸಂಸ್ಥೆಯಲ್ಲಿ ಬೋಧಕ ಸಿಬ್ಭಂದಿಗಳಾಗಿ ಆಗಮಿಸುವ ಅನುಭವಿ ಲೆಕ್ಕ ಪರಿಶೋಧಕರು, ತರಬೇತುದಾರರು, ವಿದ್ಯಾರ್ಥಿಗಳಿಗೆ ಗುಣಮಟ್ಟದ ತರಬೇತಿ ನೀಡುವುದರ ಪರಿಣಾಮ ಪ್ರತಿ ಬ್ಯಾಚ್‌ನಲ್ಲಿ ಉತ್ತಮ ಫಲಿತಾಂಶ ಪಡೆಯಲು ಸಾಧ್ಯವಾಯಿತು. ಬೋಧಕ ಸಿಬ್ಬಂಧಿ ವರ್ಗದವರಿಗೂ ಪರೀಕ್ಷೆಯಲ್ಲಿ ಉತ್ತೀರ್ಣರಾದ ಎಲ್ಲಾ ವಿದ್ಯಾರ್ಥಿಗಳಿಗೂ ಸಂಸ್ಥೆಯ ಮುಖ್ಯಸ್ಥರಾದ ಪ್ರತಾಪ್‌ಚಂದ್ರ ಶೆಟ್ಟಿ ಮತ್ತು ಭರತ್ ಶೆಟ್ಟಿಯವರು ಅಭಿನಂದಿಸಿದ್ದಾರೆ.

    “ನಾನು ಡಿಸ್ಟಿಂಕ್ಷನ್ ನಲ್ಲಿ ತೇರ್ಗಡೆ ಯಾಗಿದ್ದು ನನಗೆ ತುಂಬಾ ಖುಷಿ ಕೊಟ್ಟಿದೆ. ನನಗೆ ತರಬೇತಿ ನೀಡಿದ ಶಿಕ್ಷಪ್ರಭಾ ಸಂಸ್ಥೆ ಹಾಗೂ ನನ್ನ ಪೋಷಕರ ಪ್ರೋತ್ಸಾಹ ನನಗೆ ಸಹಾಯವಾಗಿದೆ .ಇದಕ್ಕೆ ನಾನು ಶಿಕ್ಷಕ ವೃಂದ ಹಾಗೂ ನನ್ನ ಪೋಷಕರಿಗೆ ಧನ್ಯವಾದಗಳನ್ನು ತಿಳಿಸುತ್ತೇನೆ.” – ಸಿಎ ಫೌಂಡೇಶನ್ ಉತ್ತೀರ್ಣ ವಿದ್ಯಾರ್ಥಿನಿಅನ್ವಿತಾ ಎ.

  • ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಅನುಷಾ ಪ್ರಭು ಸಿ ಎ ಫೌಂಡೇಶನ್ ಪರೀಕ್ಷೆಯಲ್ಲಿ ಉತ್ತೀರ್ಣ

    ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಅನುಷಾ ಪ್ರಭು ಸಿ ಎ ಫೌಂಡೇಶನ್ ಪರೀಕ್ಷೆಯಲ್ಲಿ ಉತ್ತೀರ್ಣ

    ಕುಂದಾಪುರ ಮಿರರ್ ಸುದ್ದಿ…

    ಕುಂದಾಪುರ : 2023 ರ ಜೂನ್ ನಲ್ಲಿ ನಡೆದ ಸಿ ಎ ಫೌಂಡೇಶನ್ ಪರೀಕ್ಷೆಯಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಅನುಷಾ ಪ್ರಭು ಉತ್ತೀರ್ಣರಾಗಿದ್ದಾರೆ.

    ವಿದ್ಯಾರ್ಥಿನಿಯ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು ಉಪನ್ಯಾಸಕರು ಮತ್ತು ಬೋಧಕೇತರ ಸಿಬ್ಬಂದಿಗಳು ಅಭಿನಂದನೆ ಸಲ್ಲಿಸಿದ್ದಾರೆ.