Category: ಸುದ್ದಿ

  • ಮಾನವ ಕಳ್ಳ ಸಾಗಾಣಿಕೆಯಿಂದ ಮಕ್ಕಳ ಶೋಷಣೆ: ನ್ಯಾ.ಶಾಂತವೀರ ಶಿವಪ್ಪ

    ಮಾನವ ಕಳ್ಳ ಸಾಗಾಣಿಕೆಯಿಂದ ಮಕ್ಕಳ ಶೋಷಣೆ: ನ್ಯಾ.ಶಾಂತವೀರ ಶಿವಪ್ಪ

    ಕುಂದಾಪುರ ಮಿರರ್ ಸುದ್ದಿ…

    ಉಡುಪಿ :ಮಾನವ ಕಳ್ಳ ಸಾಗಾಣಿಕೆ ಮೂಲಕ ಮಕ್ಕಳನ್ನು ಅಪಾಯಕಾರಿ ಉದ್ದಿಮೆಗಳಲ್ಲಿ ಬಾಲ ಕಾರ್ಮಿಕರಾಗಿ ಹಾಗೂ ಮನೆಗೆಲಸ ಮತ್ತಿತರ ಕೆಲಸಗಳಿಗೆ ಬಳಕೆ ಮಾಡಲಾಗುತ್ತಿದ್ದು, ಇದನ್ನು ತಡೆಯಲು ವ್ಯಾಪಕ ಅರಿವು ಮೂಡಿಸುವುದು ಅಗತ್ಯವಿದೆ ಎಂದು
    ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷ ಶಾಂತವೀರ ಶಿವಪ್ಪ ಹೇಳಿದರು.

    ಅವರು ಇಂದು ಪಟ್ಲದ ಮೊರಾರ್ಜಿ ದೇಸಾಯಿ ಆಂಗ್ಲ ಮಾಧ್ಯಮ ವಸತಿ ಶಾಲೆಯಲ್ಲಿ,ಜಿಲ್ಲಾಡಳಿತ ,ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಪೊಲೀಸ್ ಇಲಾಖೆ,ಮಹಿಳಾ ಮತ್ತು ಮಕ್ಕಳ ಅಭಿವೃಧ್ದಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಉಡುಪಿ ಜಿಲ್ಲೆ ಇವರ ಸಹಯೋಗದಲ್ಲಿ ,ನಡೆದ ಮಾನವ ಕಳ್ಳ ಸಾಗಾಣಿಕೆ ತಡೆ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

    ಮಕ್ಕಳು ಮತ್ತು ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಮಾನವ ಕಳ್ಳ ಸಾಗಾಣಿಕೆಗೆ ಬಲಿಯಾಗುತ್ತಿದ್ದು, ಇದನ್ನು ತಡೆಯುವುದು ಸಮಾಜದ ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ಅಪರಾಧ ಕೃತ್ಯಗಳನ್ನು ಮಾಡಿದ ನಂತರ ಈ ಬಗ್ಗೆ ಕಾನೂನಿನ ಅರಿವು ಇಲ್ಲ ಎಂದು ಹೇಳುವ ಮೂಲಕ ಶಿಕ್ಷೆಯಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ಮಾನವ ಕಳ್ಳ ಸಾಗಾಣಿಕೆಯು ಕಾನೂನಡಿಯಲ್ಲಿ ಶಿಕ್ಷಾರ್ಹ ಅಪರಾಧವಾಗಿದೆ ಎಂದರು.

    ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

    ಮಾನವ ಕಳ್ಳ ಸಾಗಾಣಿಕೆ, ಪೋಕ್ಸೋ, ಬಾಲ್ಯ ವಿವಾಹ ನಿಷೇಧ ಕಾಯ್ದೆ ಬಗ್ಗೆ ವಿಶೇಷ ಸರಕಾರಿ ಅಭಿಯೋಜಕ ವೈ.ಟಿ.ರಾಘವೇಂದ್ರ ಉಪನ್ಯಾಸ ನೀಡಿದರು.

    ಮಾನವ ಕಳ್ಳ ಸಾಗಾಣಿಕೆ ತಡೆ ಕುರಿತು ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶರ್ಮಿಳಾ ಪ್ರತಿಜ್ಞಾ ವಿಧಿ ಬೋಧಿಸಿದರು. ಮಹಿಳಾ ಮತ್ತು ಮಕ್ಕಳ ಅಭಿವೃಧ್ದಿ ಇಲಾಖೆ ಉಪನಿರ್ದೇಶಕ ಕೃಷ್ಣಪ್ಪ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಕುಮಾರ ನಾಯಕ್, ಮಕ್ಕಳಾ ಕಲ್ಯಾಣ ಸಮಿತಿ ಅಧ್ಯಕ್ಷ ರೊನಾಲ್ಡ್ ಬಿ ಪುರ್ಟಾಡೊ, ಉಡುಪಿ ಮಹಿಳಾ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಜಯಾನಂದ,ಮೊರಾರ್ಜಿ ದೇಸಾಯಿ ಶಾಲೆಯ ಪ್ರಾಂಶುಪಾಲ ಕೃಷ್ಣಮೂರ್ತಿ ಮತ್ತಿತರರು ಉಪಸ್ಥಿತರಿದ್ದರು.

  • ಉಡುಪಿ ಶಾಸಕರ ಸೊಸೈಟಿ ಸಿಬ್ಬಂದಿ ಸಾವಿನ ಮರು ತನಿಖೆಗೆ ಕಾಂಗ್ರೆಸ್ ಆಗ್ರಹ

    ಉಡುಪಿ ಶಾಸಕರ ಸೊಸೈಟಿ ಸಿಬ್ಬಂದಿ ಸಾವಿನ ಮರು ತನಿಖೆಗೆ ಕಾಂಗ್ರೆಸ್ ಆಗ್ರಹ

    ಕುಂದಾಪುರ ಮಿರರ್ ಸುದ್ದಿ…

    ಕುಂದಾಪುರ: ಕರ್ನಾಟಕದ ಗೃಹಸಚಿವರ ಕುಟುಂಬದ ಬಗ್ಗೆ ಲಘುವಾಗಿ ಮಾತನಾಡಿದ್ದ ಉಡುಪಿ ಶಾಸಕ ಯಶಪಾಲ್ ಸುವರ್ಣ ಅವರ ಸೊಸೈಟಿಯಲ್ಲಿ ನಡೆದ ದಲಿತನ ಸಾವಿನ ಬಗ್ಗೆ ಮರು ತನಿಖೆ ನಡೆಸಬೇಕು ಎಂದು ಬೈಂದೂರು ಕಾಂಗ್ರೆಸ್ ಆಗ್ರಹಿಸಿದೆ.

    ವಂಡ್ಸೆ ಬ್ಲಾಕ್ ಕಾಂಗ್ರೆಸ್ ವ್ಯಾಪ್ತಿಯಲ್ಲಿ ಭಾನುವಾರ ವಂಡ್ಸೆಯಲ್ಲಿ ನಡೆದ ಪ್ರತಿಭಟನೆಯ ಸಂದರ್ರಭ ಮಾತನಾಡಿದ ಮಾಜೀ ಶಾಸಕ ಕೆ ಗೋಪಾಲ ಪೂಜಾರಿ ಈ ವಿಚಾರವನ್ನು ಪ್ರಸ್ತಾಪಿಸಿದ್ದು, ಉಡುಪಿ ಜಿಲ್ಲೆಯಲ್ಲಿ ಕೋಮು ಸಾಮರಸ್ಯವನ್ನು ಕಾಪಾಡಬೇಕಾದ ಜವಾಬ್ಧಾರಿಯುತ ಸ್ಥಾನದಲ್ಲಿರುವ ಉಡುಪಿ ಶಾಸಕ ಯಶಪಾಲ ಸುವರ್ಣ ತನ್ನ ಜವಾಬ್ಧಾರಿ ಮರೆತು ಗೃಹಮಂತ್ರಿಗಳ ಬಗ್ಗೆ ಮಾತನಾಡಿದ್ದಾರೆ. ಇದು ಅವರಿಗೆ ಶೋಭೆ ತರುವುದಿಲ್ಲ. ಯಶಪಾಲ್ ಸುವರ್ಣ ಅವರ ಸೊಸೈಟಿಯಲ್ಲಿ ಕೆಲಸ ಮಾಡುತ್ತಿದ್ದ ದಲಿತ ಸಿಬ್ಬಂದಿಯ ಸಾವಿನ ಪ್ರಕರಣದ ಮರುತನಿಖೆ ಮಾಡಿದಾಗ ನಿಜ ತಿಳಿಯುತ್ತದೆ ಎಂದು ಹರಿಹಾಯ್ದಿದ್ದಾರೆ.

    ಉಡುಪಿ ಜಿಲ್ಲೆಯಲ್ಲಿ ಪೊಲೀಸ್ ಕಾನೂನು ಸುವ್ಯವಸ್ಥೆ ಬಲಿಷ್ಟವಾಗಿದೆ ಎಂದ ಅವರು ಉಡುಪಿ ಪ್ರಕರಣ ತನಿಖೆಯಾಗಿ ಸತ್ಯಾಸತ್ಯತೆ ಹೊರಬರಲಿದೆ. ಆದರೆ ಶಾಸಕ ಯಶ್ಪಾಲ್ ಸುವರ್ಣರೇ ನೀವು ಮಾತನಾಡುವ ಮುನ್ನ ನಿಮ್ಮ ಮಹಾಲಕ್ಷ್ಮೀ ಕೊಪರೇಟಿವ್ ಸೊಸೈಟಿಯಲ್ಲಿ ನಡೆದ ನಿಮ್ಮದೇ ಸಿಬ್ಬಂದಿಯಾದ ದಲಿತ ಅಧಿಕಾರಿಯ ಸಾವಿಗೆ ಮೊದಲು ನ್ಯಾಯ ಕೊಡಿಸಿ. ಇಲ್ಲವೇ ಸರ್ಕಾರವೇ ಮರು ತನಿಖೆ ನಡೆಸುತ್ತದೆ ಎಂದು ವಂಡ್ಸೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರದೀಪ್ ಶೆಟ್ಟಿ ಗುಡುಬೆಟ್ಟು ಎಚ್ಚರಿಸಿದ್ದಾರೆ.

  • ಕುಂದಾಪುರ: ಶ್ರೀಗಂಧದ ಮರ ಕಡಿತ – ಅರಣ್ಯಾಧಿಕಾರಿಗಳಿಂದ ಕಾರ್ಯಾಚರಣೆ

    ಕುಂದಾಪುರ: ಶ್ರೀಗಂಧದ ಮರ ಕಡಿತ – ಅರಣ್ಯಾಧಿಕಾರಿಗಳಿಂದ ಕಾರ್ಯಾಚರಣೆ

    ಕುಂದಾಪುರ ಮಿರರ್ ಸುದ್ದಿ…

    ಕುಂದಾಪುರ : ಕುಂದಾಪುರ ತಾಲೂಕು ಬೆಳ್ಳಾಲ ಗ್ರಾಮದ ಕಾರಿಬ್ಯೆಲು ಎಂಬಲ್ಲಿ ಸಂಜೀವ ಶೆಟ್ಟಿ ಎಂಬವರ ಮನೆಯ ಸಮೀಪ ಅನುಮಾನಾಸ್ಪದ ಪಟ್ಟ ಸ್ಥಳದಲ್ಲಿ ಒಂದು ಶ್ರೀಗಂಧದ ಮರವನ್ನು ಕಡಿದ ತಕ್ಷೀರನ್ನು ಪತ್ತೆಹಚ್ಚಲಾಗಿದೆ.

    ಆರೋಪಿಗಳು ಸ್ಥಳೀಯರಾಗಿದ್ದು, ಅವರ ಸುಳಿವು ದೊರಕಿದ್ದು, ಶೀಘ್ರದಲ್ಲಿಯೇ ಅವರನ್ನು ಬಂಧಿಸಲಾಗುವುದು. ಸೊತ್ತುಗಳ ಒಟ್ಟು ಮೌಲ್ಯ ಸುಮಾರು ಎರಡು ಲಕ್ಷದ ವರೆಗೆ ಇರಬಹುದು ಎಂದು ಅಂದಾಜಿಸಲಾಗಿದೆ ಎಂದು ಅರಣ್ಯಾಧಿಕಾರಿಗಳು ತಿಳಿಸಿದ್ದಾರೆ.

    ಕಾರ್ಯಾಚರಣೆಯು ಡಿಸಿಎಫ್‌ ಉದಯ ಎಂ ನಾಯಕ್ ಅವರ ನಿರ್ದೇಶನದಂತೆ, ಎಸಿಎಫ್‌ ಕ್ಲಿಫರ್ಡ್ ಲೋಬೋ ಅವರ ಮಾರ್ಗದರ್ಶನದಲ್ಲಿ, ವಲಯ ಅರಣ್ಯಾಧಿಕಾರಿ ಕಿರಣ್ ಬಾಬು ಟಿ, ಉಪ ವಲಯ ಅರಣ್ಯಾಧಿಕಾರಿ ಆನಂದ ಬಳೆಗಾರ, ಶರತ್ ಗಾಣಿಗ, ಗೀತ ಯಾಸಣ್ಣನವರ್, ಗಸ್ತು ಅರಣ್ಯ ಪಾಲಕ ರಾಘವೇಂದ್ರ, ವಿಜಯ ಕೆ, ಅರಣ್ಯ ವೀಕ್ಷಕ ಉದಯ ಮತ್ತು ವಾಹನ ಚಾಲಕ ಅಶೋಕ ಇವರುಗಳು ಪಾಲ್ಗೊಂಡಿದ್ದರು.

  • ಕೋಟದ ದಿನೇಶ್ ಗಾಣಿಗರಿಗೆ ಗೌರವ ಡಾಕ್ಟರೇಟ್ ಪದವಿ

    ಕೋಟದ ದಿನೇಶ್ ಗಾಣಿಗರಿಗೆ ಗೌರವ ಡಾಕ್ಟರೇಟ್ ಪದವಿ

    ಕುಂದಾಪುರ ಮಿರರ್ ಸುದ್ದಿ…
    ಕೋಟ: ಕೋಟದ ಸಾಮಾಜಿಕ ಕಾರ್ಯಕರ್ತ ದಿನೇಶ್ ಗಾಣಿಗ ಇವರಿಗೆ ಏಷ್ಯಾ ಇಂಟರ್ ನ್ಯಾಷನಲ್ ಕಲ್ಚರ್ ರಿಸರ್ಚ್ ಯೂನಿವರ್ಸಿಟಿ ಬೆಂಗಳೂರು ಗೌರವ ಡಾಕ್ಟರೇಟ್ ಪದವಿ ನೀಡಿ ಗೌರವಿಸಿದೆ.

    ದಿನೇಶ್ ಗಾಣಿಗ ಕಳೆದ ಹಲವಾರು ವರ್ಷಗಳಿಂದ ಸಮಾಜಸೇವೆಯಲ್ಲಿ ನಿರತರಾಗಿದ್ದು ಕ್ರೀಡಾ ಕ್ಷೇತ್ರದಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಾಧನೆಗೈದಿದ್ದಾರೆ. ಇತ್ತೀಚಿಗೆ ರಾಜ್ಯ ಚಾಮರಾಜನಗರದ ಬುಡಕಟ್ಟು ಜನರ ಹಕ್ಕಿಗಾಗಿ ಹೋರಾಟ, ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತಗೊಂಡ ಸತ್ತ ನಾಯಿಗಳಿಗೆ ಮುಕ್ತಿ, ಸ್ವಚ್ಛಭಾರತ ಯೋಜನೆಯಲ್ಲಿ ಭಾಗವಹಿಸುವಿಕೆ ಸೇರಿದಂತೆ ಸಾಕಷ್ಟು ಸಾಮಾಜಿಕ ಕಾರ್ಯಕ್ರಮಗಳನ್ನು ಗುರುತಿಸಿ ಈ ಗೌರವ ಡಾಕ್ಟರೇಟ್ ಪುರಸ್ಕಾರ ನೀಡಿದೆ.

  • ಸಾಸ್ತಾನ: ನಾಳೆ ಸೊಸೈಟಿ ಚುನಾವಣೆ – ಇಂದು ಬಿಜೆಪಿಯಿಂದ ಪ್ರತಿಭಟನೆ

    ಸಾಸ್ತಾನ: ನಾಳೆ ಸೊಸೈಟಿ ಚುನಾವಣೆ – ಇಂದು ಬಿಜೆಪಿಯಿಂದ ಪ್ರತಿಭಟನೆ

    Video:

    ಕುಂದಾಪುರ ಮಿರರ್ ಸುದ್ದಿ…

    ಕುಂದಾಪುರ: ಸಾಸ್ತಾನ ಸಹಕಾರಿ ವ್ಯವಸಾಯಿಕ ಸಂಘದ ಚುನಾವಣೆ ಭಾನುವಾರ ನಡೆಯಲಿದ್ದು, ಹೈಕೋರ್ಟಿನಿಂದ ಅವಕಾಶ ಪಡೆದ ಮತದಾರರ ಪಟ್ಟಿಯನ್ನು ನಿಯಮಗಳ ಪ್ರಕಾರ ನೀಡಿಲ್ಲ ಎಂದು ಆರೋಪಿಸಿ ಬಿಜೆಪಿ ಇಂದು ಸೊಸೈಟಿ ಮುಂಭಾಗ ಪ್ರತಿಭಟನೆ ನಡೆಸಿತು.

    ಚುನಾವಣಾ ನಿಯಮಗಳ ಪ್ತಕಾರ ಅಭ್ಯರ್ಥಿಗಳ ಆಯ್ಕೆ, ನಾಮಪತ್ರ ಪರಿಶೀಲನೆ, ಮೊದಲಾದ ಪ್ರಕ್ರಿಯೆಗಳು ನಡೆದ ಬಳಿಕ ನಾಳೆ (ಭಾನುವಾರ) ಚುನಾವಣೆ ನಡೆಯಲಿದೆ. ಒಟ್ಟು 2170 ಮತದಾರರಿದ್ದು, ಈ ಬಗ್ಗೆ ಶಂಕರಾಚಾರ್ಯ ಎಂಬುವರು ಹೈಕೋರ್ಟಿಗೆ ಹೋಗಿದ್ದರು. ಪರಿಣಾಮವಾಗಿ ಹೆಚ್ಚುವರಿ 534 ಮತದಾರರಿಗೆ ಮತದಾನಕ್ಕೆ ಅವಕಾಶ ನೀಡುವಂತೆ ಹೈ ಕೋರ್ಟ್ ಆದೇಶ ನೀಡಿತ್ತು.

    ಆದರೆ ಸೇರ್ಪಡೆಗೊಂಡ ಮತದಾರರ ಪಟ್ಟಿ ಚುನಾವಣೆಗೆ ಒಂದು ದಿನ ಇರುವಾಗ ನೀಡಲಾಗಿದ್ದು, ಇದು ರಾಜಕೀಯ ದುರುದ್ಧೇಶದಿಂದ ಕೂಡಿದೆ ಎಂದು ಬಿಜೆಪಿ ಬೆಂಬಲಿತ ಅಭ್ಯರ್ಥಿಗಳ ಪರವಾಗಿ ಪ್ರತಿಭಟನೆ ನಡೆಸಲಾಯಿತು.

    ಈ ಸಂದರ್ಭ ಮಾತನಾಡಿದ ಹೋರಾಟ ಸಮಿತಿಯ ಮುಖಂಡ ಪ್ರತಾಪ್ ಮಾತನಾಡಿ, ಸೊಸೈಟಿ ಅಧಿಕಾರಿಗಳು ಹಾಗೂ ಚುನಾವಣಾಧಿಕಾರಿಗಳು ರಾಜಕೀಯ ಪ್ರೇರಿತರಾಗಿ ವರ್ತಿಸುತ್ತಿದ್ದಾರೆ. ಅದುದರಿಂದ ಚುನಾವಣೆಯನ್ನು ಮುಂದೂಡಬೇಕು ಎಂದು ಆಗ್ರಹಿಸಿದರು.

    ಬಿಜೆಪಿ ಮುಖಂಡ ವಿಠಲ ಪೂಜಾರಿ ಮಾತನಾಡಿ, ನಾಳೆ ನಡೆಯುವ ಚುನಾವಣೆ ಸಂವಿಧಾನ ಬಾಹಿರ ಈ ಬಗ್ಗೆ ಹೋರಾಟ ಮುಂದುವರೆಸುತ್ತೇವೆ. ಹೈಕೋರ್ಟ್ ಅವಕಾಶ ಕಲ್ಪಿಸಿದ ಮತದಾರರ ಪೈಕಿ 20 ಜನ ಸತ್ತುಹೋಗಿದ್ದಾರೆ. ಅವರಿಗೆ ಮತದಾನ ನೀಡಲಾಗಿದೆ ಎನ್ನುವುದೇ ಹಾಸ್ಯಾಸ್ಪದ ಎಂದರು.

    ಬಳಿಕ ಪ್ರತಿಕ್ರಿಯಿಸಿದ ರಿಟರ್ನಿಂಗ್ ಆಫೀಸರ್ ರೋಹಿತ್, ನಿಯಮದಂತೆ ಭಾನುವಾರ ಬೆಳಿಗ್ಗೆ ಚುನಾವಣೆ ನಡೆಯಲಿದೆ. ಹೈಕೋರ್ಟ್ ಆದೇಶ ಪಾಲುಸಲಾಗುವುದು ಎಂದಿದ್ದಾರೆ.

    ಅರ್ಹ ಮತದಾರರಿಗೆ ಮಾತ್ರ ಮತದಾನ ಇರುವುದರಿಂದ ಸತ್ತವರ ಬಗ್ಗೆ ಚಿಂತಿಸಬೇಕಿಲ್ಲ ಎನ್ನುವುದು ಕಾಂಗ್ರೆಸ್ ಬೆಂಬಲಿತರ ಅಭಿಪ್ರಾಯ. ಒಟ್ಟಿನಲ್ಲಿ ನಾಳೆ ನಡೆಯಲಿರುವ ಚುನಾವಣೆ ಸಾರ್ವಜನಿಕರಲ್ಲಿ ಕುತೂಹಲ ಮೂಡಿಸಿದೆ.

  • ಹೆಮ್ಮಾಡಿ :ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನಲ್ಲಿ ಅಭಿವಿನ್ಯಾಸ ಹಾಗೂ ಅಭಿನಂದನಾ ಸಮಾರಂಭ

    ಹೆಮ್ಮಾಡಿ :ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನಲ್ಲಿ ಅಭಿವಿನ್ಯಾಸ ಹಾಗೂ ಅಭಿನಂದನಾ ಸಮಾರಂಭ

    ಕುಂದಾಪುರ ಮಿರರ್ ಸುದ್ದಿ…

    ಹೆಮ್ಮಾಡಿ:ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜು ಹೆಮ್ಮಾಡಿಯಲ್ಲಿ ಪ್ರಥಮ ಪಿ.ಯು.ಸಿ ವಿದ್ಯಾರ್ಥಿಗಳಿಗೆ ಅಭಿವಿನ್ಯಾಸ ಕಾರ್ಯಕ್ರಮ(Freshrs day) ಹಾಗೂ ಕಳೆದ ಶೈಕ್ಷಣಿಕ ಸಾಲಿನ ದ್ವಿತೀಯ ಪಿ.ಯು.ಸಿ.ಸಾಧಕ ವಿದ್ಯಾರ್ಥಿಗಳಿಗೆ ಅಭಿನಂದನಾ ಸಮಾರಂಭವನ್ನು ಕುಂದಾಪುರದ ಮೊಗವೀರ ಭವನದಲ್ಲಿ ಆಯೋಜಿಸಲಾಯಿತು.

    ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷರು ಹಾಗೂ ಪ್ರಾಂಶುಪಾಲರಾದ ಗಣೇಶ ಮೊಗವೀರರವರು ವಹಿಸಿದ್ದರು.

    ಸಮಾರಂಭದ ಮುಖ್ಯ ಅತಿಥಿಯಾಗಿ ಆಗಮಿಸಿದ ಕುಂದಾಪುರದ ಆದರ್ಶ ಆಸ್ಪತ್ರೆಯ ಎಮ್.ಡಿ. ಡಾ|ಆದರ್ಶ ಹೆಬ್ಬಾರ್ ರವರು ಮಾತನಾಡಿ ಶಿಕ್ಷಣ, ಕ್ರೀಡೆ, ಕಲೆ, ಸಾಹಿತ್ಯದ ಸಂಗಮವೇ ನಿಜವಾದ ಶಿಕ್ಷಣ ವಿದ್ಯಾರ್ಥಿಗಳು ಸರ್ವತೋಮುಖ ಬೆಳವಣಿಗೆಯಾಗಬೇಕೆಂದು ಶುಭ ಹಾರೈಸಿದರು.

    ಮುಖ್ಯ ಅತಿಥಿಯಾಗಿ ಆಗಮಿಸಿದ ಬ್ರಹ್ಮಾವರದ ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಸುಬ್ರಹ್ಮಣ್ಯರವರು ಮಾತನಾಡಿ ಸ್ಪರ್ಧಾತ್ಮಕ ಯುಗದಲ್ಲಿ ಜನತಾ ಕಾಲೇಜಿನ ಶೈಕ್ಷಣಿಕ ಕೊಡುಗೆ ಅತೀ ಅಮೂಲ್ಯವಾದದ್ದು ವಿದ್ಯಾರ್ಥಿಗಳು ಉತ್ತಮ ರೀತಿಯಲ್ಲಿ ಸದ್ಬಳಕೆ ಮಾಡಿಕೊಂಡು ಉತ್ತಮ ನಾಗರಿಕರಾಗಿ ಹೊರಹೊಮ್ಮಿ ಎಂದು ಶುಭ ಹಾರೈಸಿದರು.

    ಕಾಲೇಜಿನ ಶೈಕ್ಷಣಿಕ ಮಾರ್ಗದರ್ಶಕರಾದ ಚಿತ್ರಾ ಕಾರಂತ್ ರವರು ಭವಿಷ್ಯದ ಬಹುಪಯೋಗಿ ವಿವಿಧ ಕೋರ್ಸ್‌ ಗಳ ಕುರಿತು ಮಾತನಾಡಿ ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಗುಣಮಟ್ಟದ ಶಿಕ್ಷಣ ಅತೀ ಮುಖ್ಯ ಎಂದು ಮಾರ್ಗದರ್ಶನ ನೀಡಿದರು.

    ಕಳೆದ ಶೈಕ್ಷಣಿಕ ಸಾಲಿನಲ್ಲಿ ದ್ವಿತೀಯ ಪಿ.ಯು.ಸಿ ವಾರ್ಷಿಕ ಫಲಿತಾಂಶ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿಗೈದ ಸಾಧಕ ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿ ಶುಭ ಹಾರೈಸಲಾಯಿತು‌.

    ಸಮಾರಂಭದಲ್ಲಿ ಪ್ರೌಢಶಾಲೆ ಹೆಮ್ಮಾಡಿಯ ಮುಖ್ಯ ಶಿಕ್ಷಕರಾದ ಮಂಜು ಕಾಳಾವರ, ಕಾಲೇಜಿನ ಉಪ ಪ್ರಾಂಶುಪಾಲರಾದ ರಮೇಶ್ ಪೂಜಾರಿ, ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ವಿದ್ಯಾರ್ಥಿ ಗಣೇಶ್ ಹಾಗೂ ಕಾರ್ಯದರ್ಶಿ ಸಿಂಚನಾ ಆರ್ ರಾವ್ , ವಿದ್ಯಾರ್ಥಿ ಪೋಷಕರು, ಕಾಲೇಜಿನ ಬೋಧಕ, ಬೋಧಕೇತರ ವೃಂದದವರ ಉಪಸ್ಥಿತರಿದ್ದರು.

    ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮವನ್ನು ಪ್ರಸ್ತುತ ಪಡಿಸಿದರು. ಉಪನ್ಯಾಸಕರಾದ ಉದಯ್ ನಾಯ್ಕ್ ಕಾರ್ಯಕ್ರಮ ನಿರೂಪಿಸಿ ಉಪ ಪ್ರಾಂಶುಪಾಲರಾದ ಶ್ರೀ ರಮೇಶ್ ಪೂಜಾರಿ ವಂದಿಸಿದರು. ಪ್ರಾಂಶುಪಾಲರಾದ ಗಣೇಶ ಮೊಗವೀರರವರು ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು.

  • ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

    ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

    ಕುಂದಾಪುರ ಮಿರರ್ ಸುದ್ದಿ…
    ಉಡುಪಿ : ಮಳೆಗಾಲವು ಕೀಟಜನ್ಯ ರೋಗಗಳ ಹರಡುವಿಕೆಗೆ ಪೂರಕವಾದ ವಾತಾವರಣವಾಗಿದ್ದು, ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆ ಇರುತ್ತದೆ. ಇವುಗಳ ನಿಯಂತ್ರಣಕ್ಕೆ ಅಗತ್ಯವಿರುವ ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಸೂಚಿಸಿದರು.

    ಅವರು ಇಂದು ನಗರದ ರಜತಾದ್ರಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ, ನಡೆದ ಜಿಲ್ಲಾ ಆರೋಗ್ಯ ಇಲಾಖೆಯ ವಿವಿಧ ಸಮಿತಿ ಸಭೆಗಳ ಅಧ್ಯಕ್ಷತೆ ವಹಿಸಿ ಮಾತನಾಡಿದರು.
    ಜಿಲ್ಲೆಯ ಸರ್ಕಾರಿ ಕಚೇರಿಗಳನ್ನು ತಂಬಾಕು ಮುಕ್ತ ಕಚೇರಿಗಳನ್ನಾಗಿ ಅನುಷ್ಠಾನಗೊಳಿಸಿದ್ದು, ಇದುವರೆಗೆ 51 ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಸಮುದಾಯ ಆರೋಗ್ಯ ಕೇಂದ್ರ, 13 ಗ್ರಾಮ ಪಂಚಾಯತ್ ಕಚೇರಿ, 18 ಜಿಲ್ಲಾ ಹಾಗೂ ತಾಲೂಕು ಮಟ್ಟದ ಕಚೇರಿಗಳನ್ನು ತಂಬಾಕು ಮುಕ್ತ ಕಚೇರಿ ಎಂದು ಘೋಷಿಸಲಾಗಿದೆ ಎಂದರು.

    ಹಾಸಿಗೆ ಪೀಡಿತರಾಗಿರುವ ಎಂಡೋಸಲ್ಫಾನ್ ಸಂತ್ರಸ್ಥರಿಗೆ ಅವರ ಮನೆಗೆ ತೆರಳಿ ಅವಶ್ಯಕತೆಯಿರುವ ಆರೋಗ್ಯ ಸೇವೆಯನ್ನು ನೀಡಬೇಕು. ಅವರಿಗೆ ಅಂಗವಿಕಲತೆಯ ಪ್ರಮಾಣ ಪತ್ರವನ್ನು ನೀಡಬೇಕು ಎಂದರು.

    ಬೀಡಿ ಕಾರ್ಮಿಕರ ಆರೋಗ್ಯ ಮತ್ತು ಆರ್ಥಿಕ ಪರಿಸ್ಥಿತಿಯ ಸುಧಾರಣೆ ಹಾಗೂ ಪರಿಹಾರಾತ್ಮಕ ಯೋಜನೆಯಡಿ ಬೀಡಿ ಕಾರ್ಮಿಕರುಗಳ ಜೀವನಾದಾಯಕ್ಕೆ ಪರ್ಯಾಯ ಉದ್ಯೋಗ ಕೈಗೊಳ್ಳಲು ಸ್ವ-ಉದ್ಯೋಗ ತರಬೇತಿ ನೀಡಿ, ಸ್ವಂತ ಉದ್ಯೋಗ ಕಲ್ಪಿಸುವ ನಿಟ್ಟಿನಲ್ಲಿ ಕಾರ್ಯ ಪ್ರವೃತ್ತರಾಗಬೇಕು ಎಂದರು.
    ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡಲು ನಗರ ಸ್ಥಳೀಯ ಸಂಸ್ಥೆಗಳಿಂದ ಪ್ರತ್ಯೇಕ ಪರವಾನಿಗೆ ಪಡೆದವರು ಮಾತ್ರ ಮಾರಾಟ ಮಾಡಲು ಅವಕಾಶವಿದ್ದು, ಈ ಬಗ್ಗೆ ಜಿಲ್ಲೆಯ ಎಲ್ಲಾ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳಿಗೆ ಕಾರ್ಯಾಗಾರ ನಡೆಸಬೇಕು ಎಂದರು.

    ಆಯುಷ್ಮಾನ್ ಆರೋಗ್ಯ ಕರ್ನಾಟಕ ಯೋಜನೆ ಅಡಿ ಸರ್ಕಾರಿ ಆಸ್ಪತ್ರೆಗಳು ತಮ್ಮಲ್ಲಿಗೆ ಬರುವ ರೋಗಿಗಳನ್ನು ಇತರೆ ಖಾಸಗಿ ಆಸ್ಪತ್ರೆಗಳಿಗೆ ಶಿಫಾರಸು ಮಾಡುವುದು ಕಡಿಮೆಯಾಗಬೇಕು. ಅವಶ್ಯವಿದ್ದಲ್ಲಿ ಮಾತ್ರ ಶಿಫಾರಸು ಮಾಡಬೇಕು ಎಂದರು.
    ಗರ್ಭಿಣಿಯರಿಗೆ ಸೂಕ್ತ ಸಮಯದಲ್ಲಿ ಆರೋಗ್ಯ ತಾಯಿ ಕಾರ್ಡ್ಗಳನ್ನು ವಿತರಿಸಿ, ಕಾಲಕಾಲಕ್ಕೆ ತಪಾಸಣೆ ಮಾಡಿ, ಚಿಕಿತ್ಸೆ ನೀಡಿರುವ ಬಗ್ಗೆ ಕಾರ್ಡುಗಳಲ್ಲಿ ನಮೂದಿಸಿ, ಚಿಕಿತ್ಸೆ ನೀಡುವುದರಿಂದ ತಾಯಿ ಹಾಗೂ ಶಿಶು ಮರಣವನ್ನು ತಡೆಗಟ್ಟಲು ಸಾಧ್ಯವಾಗುತ್ತದೆ ಎಂದರು.

    ಮಕ್ಕಳು ಯಾವುದೇ ಲಸಿಕೆಗಳಿಂದ ವಂಚಿತರಾಗದಂತೆ ರೋಗ ನಿರೋಧಕ ಚುಚ್ಚುಮದ್ದುಗಳನ್ನು ಸರ್ಕಾರ ನೀಡಿರುವ ಮಾರ್ಗಸೂಚಿ ಅನ್ವಯ ನಿಗಧಿತ ಅವಧಿಯಲ್ಲಿ ಮಕ್ಕಳಿಗೆ ನೀಡಬೇಕು. ಅಗತ್ಯವಿದ್ದಲ್ಲಿ ಈ ಕಾರ್ಯಕ್ಕೆ ಇತರೆ ಇಲಾಖೆಗಳ ಸಹಕಾರ ಪಡೆಯುವಂತೆ ತಿಳಿಸಿದರು.
    ಜನಸಾಮಾನ್ಯರು ಉತ್ತಮ ಆರೋಗ್ಯ ಹೊಂದಲು ಹಾಗೂ ರೋಗಗಳಿಂದ ದೂರವಿರಲು ತೆಗೆದುಕೊಳ್ಳಬೇಕಾದ ಅಗತ್ಯ ಮುನ್ನೆಚ್ಚರಿಕೆಯ ಬಗ್ಗೆ ಆರೋಗ್ಯ ಶಿಕ್ಷಣ ನೀಡಬೇಕು ಎಂದರು.
    ಜನ ಸಾಮಾನ್ಯರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಕಲಬೆರಕೆ ಆಹಾರ ಪದಾರ್ಥಗಳು ಮಾರುಕಟ್ಟೆಯಲ್ಲಿ ಮಾರಾಟವಾಗದಂತೆ ಎಚ್ಚರವಹಿಸಬೇಕು. ಆಹಾರ ಗುಣಮಟ್ಟದ ಬಗ್ಗೆ ಆಹಾರ ಮಾದರಿಗಳನ್ನು ತೆಗೆದು ಪರಿಕ್ಷಿಸಲು ಕ್ರಮ ತೆಗೆದುಕೊಳ್ಳಬೇಕು ಎಂದರು.

    ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್, ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್, ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶರ್ಮಿಳಾ ಎಸ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ನಾಗಭೂಷಣ ಉಡುಪ, ಜಿಲ್ಲಾ ಸರ್ಜನ್ ಡಾ. ಸುದೇಶ್ ಕುಮಾರ್ ಹಾಗೂ ಆರೋಗ್ಯ ಇಲಾಖೆಯ ಅಧಿಕಾರಿಗಳು ಹಾಗೂ ವಿವಿಧ ಇಲಾಖೆಯ ಅನುಷ್ಠಾನಾಧಿಕಾರಿಗಳು ಉಪಸ್ಥಿತರಿದ್ದರು.

  • ರೋಟರಿ ಕ್ಲಬ್ ಕೋಟ ಸಾಲಿಗ್ರಾಮದ ವತಿಯಿಂದ ಕುಟುಂಬ ಸಮ್ಮಿಲನ ಕಾರ್ಯಕ್ರಮ

    ರೋಟರಿ ಕ್ಲಬ್ ಕೋಟ ಸಾಲಿಗ್ರಾಮದ ವತಿಯಿಂದ ಕುಟುಂಬ ಸಮ್ಮಿಲನ ಕಾರ್ಯಕ್ರಮ

    • ಕುಂದಾಪುರ ಮಿರರ್ ಸುದ್ದಿ…

    ಕೋಟ: ರೋಟರಿ ಕ್ಲಬ್ ಕೋಟ ಸಾಲಿಗ್ರಾಮ ಮತ್ತು ಇನ್ನರ್ ವೀಲ್ ಕೋಟ ಸಾಲಿಗ್ರಾಮ ಜಂಟಿ ಆಶ್ರಯದಲ್ಲಿ ಕುಟುಂಬ ಸಮ್ಮಿಲನ ಕಾರ್ಯಕ್ರಮ ಇತ್ತೀಚಿಗೆ ನಡೆಯಿತು.

    ಕಾರ್ಯಕ್ರಮದ ಅಧ್ಯಕ್ಷತೆಯನ್ನು ರೋಟರಿ ಕ್ಲಬ್ ಕೋಟ ಸಾಲಿಗ್ರಾಮದ ಅಧ್ಯಕ್ಷ ದೇವಪ್ಪ ಪಟಗಾರ ವಹಿಸಿದ್ದರು.

    ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ರೋಟರಿ ವಲಯ 2ರ ಸಹಾಯಕ ಗವರ್ನರ್ ಕೆ.ನರಸಿಂಹ ಪ್ರಭು ಅವರು ರೋಟರಿ ಧ್ಯೇಹವಾಕ್ಯ ಸಮಾಜದ ಕಟ್ಟ ಕಡೆಯ ವ್ಯಕ್ತಿಯಲ್ಲಿ ಆಶಾ ಕಿರಣವನ್ನು ಮೂಡಿಸುವ ಕೆಲಸಗಳನ್ನು ರೋಟರಿ ಕ್ಲಬ್‍ಗಳು ಮಾಡಬೇಕೆಂದು ಕರೆ ನೀಡಿದರು. ಈ ಸಂದರ್ಭದಲ್ಲಿ ಸಮುದಾಯ ಆರೋಗ್ಯ ಕೇಂದ್ರ ಕೋಟದ ಮಕ್ಕಳ ತಜ್ಞ ವೈದ್ಯರಾದ ಡಾ|| ಮಾಧವ ಪೈ ಕೆ. ಮತ್ತು ಸಾಲಿಗ್ರಾಮದ ದಂತ ವೈದ್ಯರಾದ ಡಾ|| ಸರಿತ ಉಪಾಧ್ಯಾಯ ಇವರನ್ನು ಸನ್ಮಾನಿಸಿ ಗೌರವಿಸಲಾಯಿತು.

    ವೇದಿಕೆಯಲ್ಲಿ ಇನ್ನರ್ ವೀಲ್ ಕಾರ್ಯದರ್ಶಿ ಶಶಿರೇಖ ಸುವರ್ಣ ಉಪಸ್ಥಿತರಿದ್ದರು.

    ರೋಟರಿ ಕ್ಲಬ್ ಪಿ.ಹೆಚ್ ಎಫ್ ರಾಜೇಂದ್ರ ಸುವರ್ಣ ಸ್ವಾಗತಿಸಿದರು. ರೋಟರಿ ಕ್ಲಬ್‍ನ ಮಾಜಿ ಅಧ್ಯಕ್ಷ ಗಣೇಶ ಹೊಳ್ಳ ಸನ್ಮಾನಿತರನ್ನು ಪರಿಚಯಿಸಿದರು. ರೋಟರಿ ಕ್ಲಬ್ ಕೋಟ ಸಾಲಿಗ್ರಾಮದ ಸರ್ವ ಸದಸ್ಯರು ಇನ್ನರ್ ವೀಲ್ ಸದಸ್ಯರು ಉಪಸ್ಥಿತರಿದ್ದರು. ರೋಟರಿ ಕ್ಲಬ್ ಕಾರ್ಯದರ್ಶಿ ಜಿ. ತಿಮ್ಮ ಪೂಜಾರಿ ಕಾರ್ಯಕ್ರಮವನ್ನು ನಿರೂಪಿಸಿ ವಂದಿಸಿದರು.

  • ಜೆಸಿಐ ಕಲ್ಯಾಣಪುರಕ್ಕೆ ಸಮಗ್ರ ಪುರಸ್ಕಾರ, ಟಾಪ್ ಒನ್, ಚಾಂಪಿಯನ್ ಆಫ್ ಚಾಂಪಿಯನ್ ಪ್ರಶಸ್ತಿ

    ಜೆಸಿಐ ಕಲ್ಯಾಣಪುರಕ್ಕೆ ಸಮಗ್ರ ಪುರಸ್ಕಾರ, ಟಾಪ್ ಒನ್, ಚಾಂಪಿಯನ್ ಆಫ್ ಚಾಂಪಿಯನ್ ಪ್ರಶಸ್ತಿ

    ಕುಂದಾಪುರ ಮಿರರ್ ಸುದ್ದಿ…

    ಕೋಟ: ಜೆಸಿಐ ಇಂಡಿಯಾ ವಲಯ 15ರ ಬೆಳವಣಿಗೆ, ಅಭಿವೃದ್ಧಿ ಮತ್ತು ವ್ಯವಹಾರ ಸಮ್ಮೇಳನ ‘ವೃದ್ಧಿ’ ಜೂ.23ರಂದು ಜೆಸಿಐ ಶಂಕರನಾರಾಯಣ ಆತಿಥ್ಯದಲ್ಲಿ ಹಾಲಾಡಿಯ ಶಾಲಾನಿ ಜಿ. ಶಂಕರ್ ಕನ್ವೆನ್ಷನ್‌‌ ಸೆಂಟರ್ ನಲ್ಲಿ ಜೆಸಿಐ ಕಲ್ಯಾಣಪುರ ಜಿ&ಡಿ ಟಾಪ್-10 ವಿಭಾಗದಲ್ಲಿ ಜೆಸಿಐ ಕಲ್ಯಾಣಪುರ ಟಾಪ್-1 ಪ್ರಶಸ್ತಿಯನ್ನು ಹಾಗೂ ಚಾಂಪಿಯನ್ ಆಫ್ ಚಾಂಪಿಯನ್ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದಾರೆ. ವಲಯಾಧ್ಯಕ್ಷ ಪುರುಷೋತ್ತಮ ಶೆಟ್ಟಿ ಪ್ರಶಸ್ತಿಯನ್ನು ನೀಡಿದರು. ಅಧ್ಯಕ್ಷೆ ಅನಿತಾ ನರೇಂದ್ರಕುಮಾರ್ ಕೋಟ ಪ್ರಶಸ್ತಿಯನ್ನು ಸ್ವೀಕರಿಸಿದರು. ಈ ಸಂದರ್ಭದಲ್ಲಿ ಜೆಸಿಐ ಫೌಂಡೇಶನ್ ನಿರ್ದೇಶಕರಾದ ಅಲನ್ ರೋಹನ್ ವಾಜ್, ವಲಯ ಉಪಾಧ್ಯಕ್ಷರಾದ ಜಯಶ್ರೀ ಮಿತ್ರಕುಮಾರ್, ಸ್ಥಾಪಕಾಧ್ಯಕ್ಷರಾದ ಜಗದೀಶ ಕೆಮ್ಮಣ್ಣು, ಪೂರ್ವಾಧ್ಯಕ್ಷ ಚಿತ್ರಕುಮಾರ್, ತುಳಸೀದಾಸ್ ಸಾಲಿಯಾನ್, ಮಿತ್ರಕುಮಾರ್, ಅರುಣ್ ಕುಮಾರ್, ಪ್ರಶಾಂತ್ ಆಚಾರ್ಯ, ಉಮೇಶ ಅಮಿನ್, ವಿಜಯ ಸುವರ್ಣ, ಆಶಾ ಅಲನ್, ಶ್ವೇತಾ ಅರುಣ್, ಜ್ಯೂನಿಯರ್ ಜೇಸಿ ಅಧ್ಯಕ್ಷ ನಿರಂತರ ಎನ್. ಹಾಗೂ ಜೆಸಿಐ ಕಲ್ಯಾಣಪುರದ ಹಲವು ಸದಸ್ಯರು ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

  • ಬೈಂದೂರು :ಭಾರೀ ಗಾಳಿ ಮಳೆಗೆ ಕುಸಿದು ಬಿದ್ದ ತಾರಾಪತಿ ಶಾಲೆ

    ಬೈಂದೂರು :ಭಾರೀ ಗಾಳಿ ಮಳೆಗೆ ಕುಸಿದು ಬಿದ್ದ ತಾರಾಪತಿ ಶಾಲೆ

    ಕುಂದಾಪುರ ಮಿರರ್ ಸುದ್ದಿ…

    ಬೈಂದೂರು :ಕರಾವಳಿಯಲ್ಲಿ ಬೀಸುತ್ತಿರುವ ಭಾರೀ ಗಾಳಿ ಹಾಗೂ ಸುರಿಯುತ್ತಿರುವ ಮಳೆಗೆ ಕಳೆದ ಮೂರು ದಿನಗಳಿಂದ ಜಿಲ್ಲಾಡಳಿತ ರಜೆ ಘೋಷಣೆ ಮಾಡಿದೆ. ಆದರೆ ಬೈಂದೂರು ತಾಲೂಕಿನ ಪಡುವರಿ ಗ್ರಾಮ ಪಂಚಾಯತ್ ವ್ಯಾಪ್ತಿಯ ತಾರಾಪತಿ ಎಂಬಲ್ಲಿರುವ ಹಿರಿಯ ಪ್ರಾಥಮಿಕ ಶಾಲೆಯ ಕಟ್ಟಡವೊಂದು ಗುರುವಾರ ನಸುಕಿನಲ್ಲಿ ಕುಸಿದು ಬಿದ್ದಿದೆ.

    ಸುಮಾರು 30 ವರ್ಷ ಹಳೆಯ ಕಟ್ಟಡ ಇದಾಗಿದ್ದು, ಇಲ್ಲಿ 1ನೇ ತರಗತಿಯಿಂದ 8ನೇ ತರಗತಿಯವರೆಗೆ ಇದ್ದು 120 ಮಕ್ಕಳು ಹಾಗೂ ಕಿಂಡರ್ ಗಾರ್ಡನ್ ಮಾದರಿಯಲ್ಲಿ 30 ಮಕ್ಕಳು ಕಲಿಯುತ್ತಿದ್ದಾರೆ. ಕೊಠಡಿಯ ಕೊರತೆಯಿಂದಾಗಿ ಕುಸಿತಕ್ಕೊಳಗಾದ ಕಟ್ಟಡದಲ್ಲಿ ಮಳೆಗಾಲ ಹೊರತುಪಡಿಸಿ ಇತರೆ ಸಮಯದಲ್ಲಿ ಎರಡು ತರಗತಿಗಳನ್ನು ನಡೆಸಲಾಗುತ್ತಿತ್ತು.

    ಕಳೆದ ಮೂರು ವರ್ಷಗಳಿಂದ ಈ ಕಟ್ಟಡವು ಜೀರ್ಣಾವಸ್ಥೆಗೊಳಗಾಗಿದ್ದು, ಕಟ್ಟಡವನ್ನು ಮಗುಚಿ ಬೇರೆ ನಟ್ಟಡ ನಿರ್ಮಿಸುವಂತೆ ಶಾಲೆಯಿಂದ ಹಾಗೂ ಶಿಕ್ಷಣ ಇಲಾಖೆಯಿಂದ ವರದಿ ಸಲ್ಲಿಕೆಯಾಗಿದ್ದರೂ ಸಂಬಂಧಿಸಿದ ಇಂಜಿನಿಯರ್ಗಳಾಗಲೀ ಅಧಿಕಾರಿಗಳಾಗಲಿ ಸ್ಥಳಕ್ಕೆ ಬಂದಿಲ್ಲ. ಈ ಬಗ್ಗೆ ಇಲ್ಲಿನ ಮುಖಂಡರಾದ ಸದಾಶಿವ ಪಡುವರಿಯವರು ಮೂರು ವರ್ಷಗಳ ಹಿಂದೆಯೇ ಜಿಲ್ಲಾ ಪಂಚಾಯತ್ ಇಂಜಿನಿಯರ್ ಗಮನಕ್ಕೆ ತಂದಾಗ ಕಟ್ಟಡ ಭದ್ರವಾಗಿದೆ ಎಂದು ಅಂದಿನ ಇಂಜಿನಿಯರ್ ಶ್ರೀಕಾಂತ್ ಹೇಳಿದ್ದರು. ಬಳಿಕ ಕಳೆದ ವರ್ಷವೂ ಮನವಿ ಮಾಡಿಕೊಂಡಿದ್ದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ದೂರಿದ್ದಾರೆ