Category: ಸುದ್ದಿ

  • ಕುಂದಾಪುರ: ನಮಿತಾ ವಿಯೋನಾ ಪಾಯಸ್ ಗೆ ಅಮೆರಿಕಾದ ಕನೆಕ್ಟಿಕಟ್ ವಿಶ್ವವಿದ್ಯಾಲಯದಿಂದ ಡಾಕ್ಟರೇಟ್ ಪದವಿ

    ಕುಂದಾಪುರ: ನಮಿತಾ ವಿಯೋನಾ ಪಾಯಸ್ ಗೆ ಅಮೆರಿಕಾದ ಕನೆಕ್ಟಿಕಟ್ ವಿಶ್ವವಿದ್ಯಾಲಯದಿಂದ ಡಾಕ್ಟರೇಟ್ ಪದವಿ

    ಕುಂದಾಪುರ ಮಿರರ್ ಸುದ್ದಿ…

    ಕುಂದಾಪುರ: ಇಲ್ಲಿನ ನಮಿತಾ ವಿಯೋನಾ ಪಾಯಸ್ ಅವರ ‘ಟಾಪಿಕ್ ಮಾಡೆಲಿಂಗ್ ಆಫ್ ಕ್ರಾಸ್-ಸೆಕ್ಷನಲ್, ರಿಪೀಟೆಡ್ ಮೆಶರ್ಸ್ ಎಂಡ್ ಟೈಮ್ ಸೀರೀಸ್ ಡೇಟಾ ಸ್ಟ್ರಕ್ಚರ್ಸ್’. ಎಂಬ ಸಂಶೋಧನಾ ಪ್ರಬಂಧಕ್ಕೆ ಅಮೆರಿಕದ ಕನೆಕ್ಟಿಕಟ್ ವಿಶ್ವವಿದ್ಯಾಲಯವು ಡಾಕ್ಟರೇಟ್ ಪದವಿ ನೀಡಿದೆ.

    ಕುಂದಾಪುರದ ಉದ್ಯಮಿ, ಪತ್ರಕರ್ತ ವಿನಯ್ ಎ ಪಾಯಸ್ ಹಾಗೂ ಜೆಸಿಂತಾ ಪಾಯಸ್ ದಂಪತಿಗಳ ಪುತ್ರಿಯಾಗಿರುವ ನಮಿತಾ ವಿಯೋನಾ ಪಾಯಸ್ ಅಮೆರಿಕಾದ ಕನೆಕ್ಟಿಕಟ್ ವಿಶ್ವವಿದ್ಯಾನಿಲಯದ ಅಂಕಿಅಂಶ ವಿಭಾಗದ ಡಾ ನಳಿನಿ ರವಿಶಂಕರ್ ಅವರು ಡಾ.ನಮಿತಾ ಅವರ ಮಾರ್ಗದರ್ಶನದಲ್ಲಿ ಸಂಶೋಧನಾ ಪ್ರಬಂಧ ರಚಿಸಿದ್ದರು. ನಮಿತಾ ವಿಯೋನಾ ಪಾಯಸ್ ಲಿಟ್ಲ್ ರಾಕ್ ಇಂಡಿಯನ್ ಸ್ಕೂಲ್ ಬ್ರಹ್ಮಾವರ, ಮಂಗಳೂರಿನ ಸೇಂಟ್ ಅಲೋಶಿಯಸ್ ಕಾಲೇಜಿನ (ಸ್ವಾಯತ್ತ) ಹಳೆಯ ವಿದ್ಯಾರ್ಥಿನಿ.

  • ಮುಂದುವರೆದ ಮಳೆ :ಉಡುಪಿ ಜಿಲ್ಲೆಯ ಎಲ್ಲಾ ಶಾಲೆ, ಪಿಯು ಕಾಲೇಜುಗಳಿಗೆ ನಾಳೆ (ಜು. 26) ರಜೆ

    ಮುಂದುವರೆದ ಮಳೆ :ಉಡುಪಿ ಜಿಲ್ಲೆಯ ಎಲ್ಲಾ ಶಾಲೆ, ಪಿಯು ಕಾಲೇಜುಗಳಿಗೆ ನಾಳೆ (ಜು. 26) ರಜೆ

     

    ಕುಂದಾಪುರ ಮಿರರ್ ಸುದ್ದಿ…

    ಕುಂದಾಪುರ : ಉಡುಪಿ ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆಯ ರೆಡ್ ಅಲರ್ಟ್ ಮುನ್ಸೂಚನೆಯಂತೆ ಹೆಚ್ಚು ಮಳೆಯಾಗುತ್ತಿರುವುದರಿಂದ ಮುಂಜಾಗೃತ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ದಿನಾಂಕ:26.07.2023 ರಂದು ಉಡುಪಿ ಜಿಲ್ಲೆಯ ಎಲ್ಲಾ ತಾಲೂಕಿನ ಅಂಗನವಾಡಿ ಕೇಂದ್ರಗಳಿಗೆ, ಹಾಗೂ ಪ್ರಾಥಮಿಕ, ಪ್ರೌಢ ಶಾಲೆ, ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ ರಜೆಯನ್ನು ಘೋಷಿಸಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಆದೇಶಿಸಿದ್ದಾರೆ.

  • ಕುಂದಾಪುರದ ಸಮಾನ ಮನಸ್ಕ ಸಂಘಟನೆಗಳ ವತಿಯಿಂದ ಮಣಿಪುರ ಘಟನೆ ಖಂಡಿಸಿ ಪ್ರತಿಭಟನೆ

    ಕುಂದಾಪುರದ ಸಮಾನ ಮನಸ್ಕ ಸಂಘಟನೆಗಳ ವತಿಯಿಂದ ಮಣಿಪುರ ಘಟನೆ ಖಂಡಿಸಿ ಪ್ರತಿಭಟನೆ

    ಕುಂದಾಪುರ ಮಿರರ್ ಸುದ್ದಿ…

    ಕುಂದಾಪುರ: ಶಾಂತಿ, ಅಹಿಂಸೆಯ ಮೂಲಕ ಈ ದೇಶ ಸ್ವಾತಂತ್ರ್ಯವನ್ನು ಪಡೆದುಕೊಂಡಿದೆ. ಸೌಹಾರ್ದ, ಶಾಂತಿ, ಸಾಮರಸ್ಯವಾಗಿ ಜನತೆ ಇಲ್ಲಿ ಬದುಕುತ್ತಿದ್ದಾರೆ. ಆದರೆ ಇಂದು ನಮ್ಮ ನಡುವೆ ಅಶಾಂತಿಯನ್ನು ಉಂಟು ಮಾಡುವ ಪ್ರಕ್ರಿಯೆಗಳು ನಿರಂತರವಾಗಿ ನಡೆಯುತ್ತಿದೆ. ಮಣಿಪುರದಲ್ಲಿ ನಡೆದ ಘಟನೆ ದೇಶವೇ ತಲೆ ತಗ್ಗಿಸುವಂತಾಹದ್ದು. ಮೇ 4ರಂದು ನಡೆದ ಈ ಘಟನೆಯ ವಿಡಿಯೋಗಳು ಹೊರ ಬಂದಿದ್ದು ಮೊನ್ನೆಯಷ್ಟೆ. ಈ ಘಟನೆಯ ನಡೆದ ಮಾಹಿತಿ ಸ್ಥಳೀಯ ಪೊಲೀಸ್, ಸರ್ಕಾರಕ್ಕೆ ಗೊತ್ತಿದ್ದರೂ ಆಗ ಕ್ರಮ ಕೈಗೊಳ್ಳಲಿಲ್ಲ ಏಕೆ? ಕೇಂದ್ರ ಸರ್ಕಾರ ಈ ಬಗ್ಗೆ ಮೌನ ವಹಿಸಿದ್ದು ಏಕೆ? ಎಂದು ಪ್ರಗತಿಪರ ಚಿಂತಕ ಶಶಿಧರ ಹೆಮ್ಮಾಡಿ ಪ್ರಶ್ನಿಸಿದರು.

    ಅವರು ಕುಂದಾಪುರದ ಸಮಾನ ಮನಸ್ಕ ಸಂಘಟನೆಗಳ ವತಿಯಿಂದ ಸಹಬಾಳ್ವೆ ಕುಂದಾಪುರ, ದಸಂಸ ತಾಲೂಕು ಘಟಕ ಕುಂದಾಪುರ, ಸಮುದಾಯ ಕುಂದಾಪುರ ಮೊದಲಾದ ಸಂಘಟನೆಗಳ ನೇತೃತ್ವದಲ್ಲಿ ಮಣಿಪುರದಲ್ಲಿ ನಡೆಯುತ್ತಿರುವ ಹಿಂಸಾಚಾರವನ್ನು ಖಂಡಿಸಿ ಸೋಮವಾರ ಸಂಜೆ ನಡೆದ ಪ್ರತಿಭಟನಾ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.
    ಮಣಿಪುರದ ಬುಡಕಟ್ಟು ಜನಾಂಗವೊಂದರ ಮೇಲೆ ಕೌರ್ಯ ನಡೆದಿದೆ. ಮಹಿಳೆಯರನ್ನು ದೇವರು ಎನ್ನುವ ಬಿಜೆಪಿ ನೇತೃತ್ವದ ಸರ್ಕಾರ, ಪರಿವಾರ ಈ ಘಟನೆಯ ಬಗ್ಗೆ ಕಠಿಣ ನಿಲುವುಗಳನ್ನು ತಳೆಯದಿರುವುದರ ಹಿಂದೆ ಆನೇಕ ಕಾರಣಗಳು ಇವೆ. ಮಣಿಪುರ ಘರ್ಷಣೆಯಲ್ಲಿ 5ಸಾವಿರಕ್ಕೂ ಹೆಚ್ಚು ಮನೆಗಳನ್ನು ಸುಟ್ಟು ಹಾಕಿದರು. 25ಕ್ಕೂ ಹೆಚ್ಚು ಚರ್ಚ್‍ಗಳಿಗೆ ಹಾನಿಯಾಗಿದೆ. ಸರ್ಕಾರಗಳ ವೈಫಲ್ಯ ಇಲ್ಲಿ ಸ್ಪಷ್ಟವಾಗುತ್ತದೆ ಎಂದರು.

    ಪ್ರತಿಭಟನೆಯಲ್ಲಿ ಕ್ಯಾಂಡಲ್ ಬೆಳಗಲಾಯಿತು. ಪ್ರತಿಭಟನೆಯಲ್ಲಿ ಜುಡಿತ್ ಮೆಂಡೋನ್ಸಾ, ರಫೀಕ್ ಗಂಗೊಳ್ಳಿ, ಮಂಜು ಕಾಳಾವರ, ವಿನೋದ್ ಕ್ರಾಸ್ತಾ , ವಿಕಾಸ್ ಹೆಗ್ಡೆ ಮೊದಲಾದವರು ಉಪಸ್ಥಿತರಿದ್ದರು.

  • ಉಡುಪಿ :ಬೀಚ್, ನದಿ ಹಾಗೂ ಜಲಪಾತಗಳ ಬಳಿ ತೆರಳದಂತೆ ಸೂಚನೆ

    ಉಡುಪಿ :ಬೀಚ್, ನದಿ ಹಾಗೂ ಜಲಪಾತಗಳ ಬಳಿ ತೆರಳದಂತೆ ಸೂಚನೆ

    ಕುಂದಾಪುರ ಮಿರರ್ ಸುದ್ದಿ…

     ಉಡುಪಿ,: ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆಯಾಗುತ್ತಿದ್ದು, ಸಮುದ್ರದಲ್ಲಿ ಅಲೆಗಳ ಅಬ್ಬರ ಹೆಚ್ಚಾಗಿದ್ದು, ನದಿಗಳು, ಹಳ್ಳಗಳು, ತೋಡುಗಳು ತುಂಬಿ ಹರಿಯುತ್ತಿರುವ ಕಾರಣ,  ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲೆಯ ಯುವಜನರು, ಸಾರ್ವಜನಿಕರು ಮತ್ತು ಜಿಲ್ಲೆಗೆ ಆಗಮಿಸುವ ಪ್ರವಾಸಿಗರು, ಬೀಚ್‌ಗಳು, ನದಿಗಳು ಹಾಗೂ ಜಲಪಾತಗಳ ಬಳಿ ತೆರಳದಂತೆ ಹಾಗೂ ಫೋಟೋ ಮತ್ತು ವಿಡಿಯೋ ಚಿತ್ರೀಕರಣ ಮಾಡುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

     

  • ಉಡುಪಿ :ಮುಂದುವರೆದ ಮಳೆ ಹಿನ್ನೆಲೆ: ನಾಳೆಯೂ ಶಾಲಾ ಕಾಲೇಜುಗಳಿಗೆ ರಜೆ – ಡಿಸಿ ಆದೇಶ

    ಉಡುಪಿ :ಮುಂದುವರೆದ ಮಳೆ ಹಿನ್ನೆಲೆ: ನಾಳೆಯೂ ಶಾಲಾ ಕಾಲೇಜುಗಳಿಗೆ ರಜೆ – ಡಿಸಿ ಆದೇಶ

    ಕುಂದಾಪುರ ಮಿರರ್ ಸುದ್ದಿ…

    ಕುಂದಾಪುರ :ಉಡುಪಿ ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆಯ ಆರೆಂಜ್ ಅಲರ್ಟ್ ಮುನ್ಸೂಚನೆಯಂತೆ ಹೆಚ್ಚು ಮಳೆಯಾಗುತ್ತಿರುವುದರಿಂದ ಮುಂಜಾಗೃತ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ದಿನಾಂಕ:25.07.2023 ರಂದು ಉಡುಪಿ ಜಿಲ್ಲೆಯ ಎಲ್ಲಾ ತಾಲೂಕಿನ ಅಂಗನವಾಡಿ ಕೇಂದ್ರಗಳಿಗೆ, ಹಾಗೂ ಪ್ರಾಥಮಿಕ, ಪ್ರೌಢ ಶಾಲೆ, ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ ರಜೆಯನ್ನು ಘೋಷಿಸಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಆದೇಶಿಸಿದ್ದಾರೆ.

  • ಮಣಿಪುರ ಮಹಿಳೆಯರ ಬೆತ್ತಲೆ ಮೆರವಣಿಗೆ ಕುಂದಾಪುರದಲ್ಲಿ ಪ್ರತಿಭಟನೆ

    ಮಣಿಪುರ ಮಹಿಳೆಯರ ಬೆತ್ತಲೆ ಮೆರವಣಿಗೆ ಕುಂದಾಪುರದಲ್ಲಿ ಪ್ರತಿಭಟನೆ

    ಕುಂದಾಪುರ ಮಿರರ್ ಸುದ್ದಿ…

    ಕುಂದಾಪುರ: ಮೇ 04 ರಂದು ಕುಕಿ ಸಮುದಾಯದ ಮೇಲೆ ನಡೆಯುತ್ತಿರುವ ದೌರ್ಜನ್ಯ ಮಹಿಳೆಯರ ಅತ್ಯಾಚಾರ, ಕೊಲೆಗಳನ್ನು ಖಂಡಿಸಿ ಇಂದು ಕುಂದಾಪುರದಲ್ಲಿ ಸಿಐಟಿಯು, ಜನವಾದಿ ಮಹಿಳಾ ಸಂಘಟನೆ,ರೈತ ಸಂಘದ ಕಾರ್ಯಕರ್ತರು ಹಂಚು ಕಾರ್ಮಿಕರ ಭವನದ ಆವರಣದಲ್ಲಿ ಪ್ರತಿಭಟನಾ ಸಭೆ ನಡೆಸಿದರು.

    ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಸಿಐಟಿಯು ಸಂಚಾಲಕ ಚಂದ್ರಶೇಖರ ವಿ ಮಾತನಾಡಿ; ಮಣಿಪುರದಲ್ಲಿ ಬಿಜೆಪಿ ನೇತೃತ್ವದ ಬಿರೇನ್ ಸಿಂಗ್ ಸರ್ಕಾರ ಬಹುಸಂಖ್ಯಾತರನ್ನು ಓಲೈಸುವ ರಾಜಕಾರಣದಿಂದಾಗಿ ರಾಜ್ಯದಲ್ಲಿ ಹಿಂಸಾಚಾರ ಭುಗಿಲೆದ್ದಿದೆ. ಮೈತೇಹಿ ಕುಕಿ ಸಮುದಾಯದ ಜನರ ಮಧ್ಯೆ ವೈಷಮ್ಯ ಬೆಳೆದು ಹೆಣ್ಣು ಮಕ್ಕಳ ಬೆತ್ತಲೆ ಮೆರವಣಿಗೆ ಬಹಿರಂಗ ಅತ್ಯಾಚಾರ ನಡೆಯುತ್ತಿದೆ. ಕೊಲೆಗಳು,ದೊಂಬಿಗಳು ನಡೆಯುತ್ತಿದ್ದರೂ ಬಿಜೆಪಿ ರಾಜ್ಯ ಸರ್ಕಾರ ಗಲಭೆ ನಿಯಂತ್ರಿಸುವಲ್ಲಿ ವಿಫಲವಾಗಿದೆ ಎಂದು ಅವರು ಹೇಳಿದರು.

    ಕಳೆದ ಸುಮಾರು ತಿಂಗಳಿಂದ ಗಲಭೆಗಳು ನಡೆಯುತ್ತಿರುವ ಮಾಹಿತಿ ಇದ್ದರೂ ಪ್ರಧಾನ ಮಂತ್ರಿಗಳು ಮಾತನಾಡದಿರುವುದು ದುರಂತವಾಗಿದೆ ಕೂಡಲೇ ಕೇಂದ್ರ ಸರ್ಕಾರ ರಾಜ್ಯ ಸರ್ಕಾರವನ್ನು ವಜಾ ಮಾಡಿ ಕಾನೂನು ಸುವ್ಯವಸ್ಥೆ ಮರುಸ್ಥಾಪನೆ ಸಿಗಬೇಕೆಂದು ಆಗ್ರಹಿಸಿದರು.

    ಪ್ರತಿಭಟನೆಯಲ್ಲಿ ಸಿಐಟಿಯು ಮುಖಂಡ ಎಚ್ ನರಸಿಂಹ ಪ್ರಾಸ್ತಾವಿಕವಾಗಿ ಮಾತನಾಡಿ ಬೆತ್ತಲೆ ಮೆರವಣಿಗೆ ಹಾಗೂ ಬಿಜೆಪಿ ವಿಭಜನಕಾರಿ ನೀತಿಗಳು ದೇಶಕ್ಕೆ ಅಪಾಯಕಾರಿಯಾಗಿದೆ ಎಂದು ಹೇಳಿ ಖಂಡಿಸಿದರು.

    ಸಿಐಟಿಯು ಹಿರಿಯ ಮುಖಂಡ ಕೆ ಶಂಕರ್ , ಜನವಾದಿ ಮಹಿಳಾ ಸಂಘಟನೆ ನಾಯಕಿ ಶೀಲಾವತಿ ಪಡುಕೋಣೆ,ಬಲ್ಕೀಸ್, ಆಟೋರಿಕ್ಷಾ ಚಾಲಕರ ಸಂಘದ ಅಧ್ಯಕ್ಷ ರಮೇಶ ವಿ, ಪ್ರಧಾನ ಕಾರ್ಯದರ್ಶಿ ರಾಜು ದೇವಾಡಿಗ,ರವಿ ವಿ ಎಂ,ಕಟ್ಟಡ ಕಾರ್ಮಿಕರ ಸಂಘಟನೆಯ ಸಂತೋಷ ಹೆಮ್ಮಾಡಿ ಮೊದಲಾದವರಿದ್ದರು.

  • ಕುಂದಾಪುರ :ಕೊಂಡಳ್ಳಿಯಲ್ಲಿ ವರ್ಗಾವಣೆ ಹೊಂದಿದ ಮುಖ್ಯ ಶಿಕ್ಷಕರಿಗೆ ಬೀಳ್ಕೊಡುಗೆ

    ಕುಂದಾಪುರ :ಕೊಂಡಳ್ಳಿಯಲ್ಲಿ ವರ್ಗಾವಣೆ ಹೊಂದಿದ ಮುಖ್ಯ ಶಿಕ್ಷಕರಿಗೆ ಬೀಳ್ಕೊಡುಗೆ

    ಕುಂದಾಪುರ ಮಿರರ್ ಸುದ್ದಿ…

    ಕುಂದಾಪುರ :ಕಳೆದ ಐದು ವರ್ಷಗಳಿಂದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೊಂಡಳ್ಳಿಯಲ್ಲಿ ಮುಖ್ಯ ಶಿಕ್ಷಕರಾಗಿ ಸೇವೆ ಸಲ್ಲಿಸಿ ಇದೀಗ ಮೊಳಹಳ್ಳಿ ಶಾಲೆಗೆ ವರ್ಗಾವಣೆ ಹೊಂದಿದ ಗೋವಿಂದ ಎಸ್ ರನ್ನು ಶಾಲಾಭಿವೃದ್ಧಿ ಮತ್ತು ಮೇಲು ಉಸ್ತುವಾರಿ ಸಮಿತಿ, ಪೋಷಕರು, ಅಧ್ಯಾಪಕ ವೃಂದ ಹಾಗೂ ವಿದ್ಯಾರ್ಥಿಗಳ ಪರವಾಗಿ ಶಾಲೆಯ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರು ಹಾಗೂ ಗ್ರಾಮ ಪಂಚಾಯತ್ ಸದಸ್ಯರಾದ ಶಂಕರನಾರಾಯಣ ಭಟ್ ಕೊಂಡಳ್ಳಿಯವರ ನೇತೃತ್ವದಲ್ಲಿ ಸನ್ಮಾನಿಸಿ ಗೌರವಿಸಿ ಬೀಳ್ಕೊಡಲಾಯಿತು.

    ಗ್ರಾಮ ಪಂಚಾಯತ್ ಅಧ್ಯಕ್ಷೆ ಗೀತಾ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.

    ಈ ಸಂದರ್ಭದಲ್ಲಿಎಸ್.ಡಿ.ಎಂ.ಸಿ ಅಧ್ಯಕ್ಷರಾದ ಭಾಸ್ಕರ ನಾಯ್ಕ , ಗ್ರಾಮ ಪಂಚಾಯತ್ ಉಪಾಧ್ಯಕ್ಷ ರವಿಕುಲಾಲ, ಗ್ರಾಮ ಪಂಚಾಯತ್ ಸದಸ್ಯ ಗುರುದತ್ ಶೇಟ್, ಶಂಕರನಾರಾಯಣ ರೋಟರಿ ಕ್ಲಬ್ ಅಧ್ಯಕ್ಷ ಶರತ್ ಹೆಗ್ಡೆ,ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ಮಮತಾ ಆರ್ ಶೆಟ್ಟಿ, ಅಂಗನವಾಡಿ ಕಾರ್ಯಕರ್ತೆ ವಿನೋದಾ ಶೆಟ್ಟಿ ಉಪಸ್ಥಿತರಿದ್ದರು.

    ಪ್ರಭಾರ ಮುಖ್ಯ ಶಿಕ್ಷಕ ರಾಮ ಮೊಗವೀರ ಸ್ವಾಗತಿಸಿ, ಪ್ರಸ್ಥಾವನೆಗೈದರು. ಸಹಶಿಕ್ಷಕಿ ಸುಜಾತ ಎಚ್ ಕಾರ್ಯಕ್ರಮ ನಿರೂಪಿಸಿದರು. ಶಾಲಾ ಎಸ್ ಡಿ ಎಮ್ ಸಿ ಸದಸ್ಯರು, ಪೋಷಕರು ಮತ್ತು ಹಳೆ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

  • ನಿರಂತರ ಮಳೆ :ಉಡುಪಿ ಜಿಲ್ಲೆಯ ಎಲ್ಲಾ ಶಾಲೆ, ಪಿಯು ಕಾಲೇಜುಗಳಿಗೆ ರಜೆ

    ನಿರಂತರ ಮಳೆ :ಉಡುಪಿ ಜಿಲ್ಲೆಯ ಎಲ್ಲಾ ಶಾಲೆ, ಪಿಯು ಕಾಲೇಜುಗಳಿಗೆ ರಜೆ

    ಕುಂದಾಪುರ ಮಿರರ್ ಸುದ್ದಿ…

    ಉಡುಪಿ: ಜಿಲ್ಲೆಯಲ್ಲಿ ನಿರಂತರ ಮಳೆ ಮುಂದುವರೆದಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಶಾಲೆ, ಪಿಯು ಕಾಲೇಜುಗಳಿಗೆ ಜುಲೈ 24ರ ಸೋಮವಾರ(ನಾಳೆ) ರಜೆ ಘೋಷಣೆ ಮಾಡಿ ಜಿಲ್ಲಾಡಳಿತ ಆದೇಶ ನೀಡಿದೆ.

    ಜಿಲ್ಲೆಯಲ್ಲಿ ಹೆಚ್ಚಿನ ಮಳೆಯಿಂದಾಗಿ ನದಿ ,ಹಳ್ಳ ಕೊಳ್ಳಗಳಲ್ಲಿ ಹೆಚ್ಚಿನ ನೀರಿನ ಹರಿವು ಹಾಗೂ ಹೆಚ್ಚು ಮಳೆ ಆಗುವ ಸಂಭವ ಇದೆ ಎಂದು ಹವಾಮಾನ ಇಲಾಖೆಯ ವರದಿ ಮಾಡಿದೆ. ಈ ಹಿನ್ನೆಲೆ ಉಡುಪಿ ಜಿಲ್ಲಾ ವ್ಯಾಪ್ತಿಯ ಎಲ್ಲಾ ಶಾಲೆಗಳು ಹಾಗೂ ಪದವಿಪೂರ್ವ ಕಾಲೇಜುಗಳ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.

  • ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೊಂಡಳ್ಳಿ – ಉಚಿತ ನೋಟ್ ಪುಸ್ತಕ ಹಾಗೂ ಲೇಖನ ಸಾಮಗ್ರಿ ವಿತರಣೆ

    ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೊಂಡಳ್ಳಿ – ಉಚಿತ ನೋಟ್ ಪುಸ್ತಕ ಹಾಗೂ ಲೇಖನ ಸಾಮಗ್ರಿ ವಿತರಣೆ

    ಕುಂದಾಪುರ ಮಿರರ್ ಸುದ್ದಿ…

    ಕುಂದಾಪುರ :ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೊಂಡಳ್ಳಿ, ಕುಂದಾಪುರ ತಾಲೂಕು ಇಲ್ಲಿನ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರು ಹಾಗೂ ಗ್ರಾಮ ಪಂಚಾಯತ್ ಸದಸ್ಯರಾದ ಶಂಕರನಾರಾಯಣ ಭಟ್ ಕೊಂಡಳ್ಳಿಯವರು ಅಂಗನವಾಡಿ ಹಾಗೂ ಶಾಲಾ ವಿದ್ಯಾರ್ಥಿಗಳಿಗೆ ನೀಡಿದ ಉಚಿತ ನೋಟ್ ಪುಸ್ತಕ ಹಾಗೂ ಲೇಖನ ಸಾಮಗ್ರಿ ವಿತರಣ ಸಮಾರಂಭವು ಗ್ರಾಮ ಪಂಚಾಯತ್ ಅಧ್ಯಕ್ಷೆ ಗೀತಾ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.

    ಈ ಸಂದರ್ಭದಲ್ಲಿಎಸ್.ಡಿ.ಎಂ.ಸಿ ಅಧ್ಯಕ್ಷರಾದ ಭಾಸ್ಕರ ನಾಯ್ಕ ಶಾಲಾ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರು ಹಾಗೂ ಗ್ರಾಮ ಪಂಚಾಯತ್ ಸದಸ್ಯರಾದ ಶಂಕರನಾರಾಯಣ ಭಟ್ ಕೊಂಡಳ್ಳಿ , ಗ್ರಾಮ ಪಂಚಾಯತ್ ಉಪಾಧ್ಯಕ್ಷ ರವಿಕುಲಾಲ, ಗ್ರಾಮ ಪಂಚಾಯತ್ ಸದಸ್ಯ ಗುರುದತ್ ಶೇಟ್, ಶಂಕರನಾರಾಯಣ ರೋಟರಿ ಕ್ಲಬ್ ಅಧ್ಯಕ್ಷ ಶರತ್ ಹೆಗ್ಡೆ,ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ಮಮತಾ ಆರ್ ಶೆಟ್ಟಿ, ವರ್ಗಾವಣೆ ಹೊಂದಿದ ಮುಖ್ಯ ಶಿಕ್ಷಕ ಗೋವಿಂದ ಎಸ್, ಅಂಗನವಾಡಿ ಕಾರ್ಯಕರ್ತೆ ವಿನೋದಾ ಶೆಟ್ಟಿ ಉಪಸ್ಥಿತರಿದ್ದರು.

    ಪ್ರಭಾರ ಮುಖ್ಯ ಶಿಕ್ಷಕ ರಾಮ ಮೊಗವೀರ ಸ್ವಾಗತಿಸಿ, ಪ್ರಸ್ಥಾವನೆಗೈದರು. ಸಹಶಿಕ್ಷಕಿ ಸುಜಾತ ಎಚ್ ಕಾರ್ಯಕ್ರಮ ನಿರೂಪಿಸಿದರು. ಗೌರವ ಶಿಕ್ಷಕಿಯರಾದ ಭಾರತಿ ಮತ್ತು ಶಿವಾನಿ, ಶಾಲಾ ಎಸ್ ಡಿ ಎಮ್ ಸಿ ಸದಸ್ಯರು, ಪೋಷಕರು ಮತ್ತು ಹಳೆ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

     

  • ಬೈಂದೂರು ತಾಲೂಕಿನ ವ್ಯಾಪ್ತಿಯಲ್ಲಿ ಶಾಲಾ ಮತ್ತು ಪಿ.ಯು ಕಾಲೇಜುಗಳಿಗೆ ರಜೆ ಘೋಷಣೆ

    ಬೈಂದೂರು ತಾಲೂಕಿನ ವ್ಯಾಪ್ತಿಯಲ್ಲಿ ಶಾಲಾ ಮತ್ತು ಪಿ.ಯು ಕಾಲೇಜುಗಳಿಗೆ ರಜೆ ಘೋಷಣೆ

    ಕುಂದಾಪುರ ಮಿರರ್ ಸುದ್ದಿ…

    ಬೈಂದೂರು :ಭಾರಿ ಮಳೆಯಾಗುತ್ತಿರುವ ಕಾರಣ ಸೋಮವಾರ ಬೈಂದೂರು ತಾಲೂಕಿನ ಶಾಲಾ ಮತ್ತು ಪಿಯು ಕಾಲೇಜುಗಳಿಗೆ ಉಡುಪಿ ಜಿಲ್ಲಾಧಿಕಾರಿ ಕೆ. ವಿದ್ಯಾಕುಮಾರಿ ರಜೆ ಘೋಷಿಸಿದ್ದಾರೆ.