Category: ಸುದ್ದಿ

  • ದ.ಕ ಹಾಲು ಒಕ್ಕೂಟದ ಪ್ರಧಾನ ವ್ಯವಸ್ಥಾಪಕರಾಗಿ ನಿವೃತ್ತರಾದ ಡಾ.ನಿತ್ಯಾನಂದ ಭಕ್ತ ಇವರಿಗೆ ಅಭಿನಂದನಾ ಕಾರ್ಯಕ್ರಮ

    ದ.ಕ ಹಾಲು ಒಕ್ಕೂಟದ ಪ್ರಧಾನ ವ್ಯವಸ್ಥಾಪಕರಾಗಿ ನಿವೃತ್ತರಾದ ಡಾ.ನಿತ್ಯಾನಂದ ಭಕ್ತ ಇವರಿಗೆ ಅಭಿನಂದನಾ ಕಾರ್ಯಕ್ರಮ

    ಹೈನುಗಾರಿಕಾ ಕ್ಷೇತ್ರದಲ್ಲಿ ಕ್ರಾಂತಿಕಾರಿ ಬದಲಾವಣೆ ಅಗತ್ಯ – ಕಿಶನ್ ಹೆಗ್ಡೆ ಕೊಳ್ಕೆಬೈಲ್

    ಕುಂದಾಪುರ ಮಿರರ್ ಸುದ್ದಿ…
    ಕೋಟ: ಹೈನುಗಾರಿಕಾ ಕ್ಷೇತ್ರದಲ್ಲಿ ಒಂದಿಷ್ಟು ಬದಲಾವಣೆ ತರಬೇಕಾದ ಅವಶ್ಯಕತೆ ಇದೆ ಎಂದು ಶಿರಿಯಾರ ಮೆಕ್ಕೆಕಟ್ಟೆ ಶ್ರೀ ನಂದಿಕೇಶ್ವರ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ಕಿಶನ್ ಹೆಗ್ಡೆ ಕೊಳ್ಕೆಬೈಲ್ ಹೇಳಿದರು

    ಕೋಟ ಸಿ ಎ ಬ್ಯಾಂಕ್ ಬಿ.ಸಿ ಹೊಳ್ಳ ಸಭಾಂಗಣದಲ್ಲಿ ಸಾಸ್ತಾನ ಶಿಬಿರ ಕಛೇರಿ ವ್ಯಾಪ್ತಿಯ ಹಾಲು ಉತ್ಪಾದಕರ ಸಹಕಾರ ಸಂಘಗಳ ವತಿಯಿಂದ ಇತ್ತೀಚಿಗೆ ದ.ಕ ಹಾಲು ಉತ್ಪಾದಕರ ಒಕ್ಕೂಟದ ಪ್ರಧಾನ ವ್ಯವಸ್ಥಾಪಕರಾಗಿ ನಿವೃತ್ತರಾದ ಡಾ.ನಿತ್ಯಾನಂದ ಭಕ್ತ ಇವರಿಗೆ ಅಭಿನಂದನಾ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿ ಹಾಲು ಉತ್ಪಾದಕರ ಒಕ್ಕೂಟದಲ್ಲಿ ಕೆಳವರ್ಗದ ಸಿಬ್ಬಂದಿಗಳ ಬಗ್ಗೆ ಹೆಚ್ಚಿನ ಮುತುವರ್ಜಿ ಹಾಗೂ ಪ್ರೋತ್ಸಾಹ ನೀಡಬೇಕಾದ ಅಗತ್ಯತೆ ಇದೆ
    ಏಕೆಂದರೆ ಮೇಲ್ವರ್ಗದ ಅಧಿಕಾರಿಗಳಿಗಿಂತ ಕೆಳವರ್ಗದ ಸಿಬ್ಬಂದಿಗಳ ಸಮಸ್ಯೆ ಆಲಿಸುವುದು ಇತ್ತೀಚಿಗಿನ ದಿನಗಳಲ್ಲಿ ಕ್ಷೀಣಿಸುತ್ತಿದೆ, ಇದು ಬೇಸರದ ಸಂಗತಿ ಅವರ ಕಾರ್ಯಭಾರದಿಂದಲೇ ಹಾಲು ಉತ್ಪಾದಕ ಸಹಕಾರಿ ಕ್ಷೇತ್ರ ಗಟ್ಟಿಗೊಳ್ಳುತ್ತಿದೆ.ಹೈನುಗಾರಿಕೆ ಕ್ಷೇತ್ರದಲ್ಲಿ ಬಹಳಷ್ಟು ಉನ್ನತಿ ಕಂಡಿದ್ದೇವೆ ಅವರಿಗೆ ಹೆಚ್ಚಿನ ಪ್ರೋತ್ಸಾಹ ನೀಡಬೇಕು ಆ ಮೂಲಕ ಹೈನುಗಾರಿಕೆ ಇನ್ನಷ್ಟು ಗಟ್ಟಿಗೊಳಿಸುವ ಕಾರ್ಯ ಮಾಡಬೇಕು, ಸಹಕಾರಿ ಕ್ಷೇತ್ರದಲ್ಲಿ ಸಶಕ್ತರಾಗಿಸಿ ಆರ್ಥಿಕವಾಗಿ ಬಲಾಢ್ಯರಾಗಿಸಲು ಯೋಜನೆ ರೂಪಿಸಬೇಕು,ಅಲ್ಲಿನ ಕಟ್ಟ ಕಡೆಯ ನೌಕರರಿಗೂ ನ್ಯಾಯ,ಭದ್ರತೆ ಒದಗಿಸಬೇಕು ,ವೃತ್ತಿಯಲ್ಲಿ ನಿವೃತ್ತರಾದವರು ಪ್ರವೃತ್ತಿಯಾಗಿ ಕಾರ್ಯನಿರ್ವಹಿಸಬೇಕು ಅದನ್ನು ನಾವುಗಳು ಸನ್ಮಾನಗೊಂಡ ಭಕ್ತರಲ್ಲಿ ಕಂಡಿದ್ದೇವೆ ಇವರನ್ನು ಗುರುತಿಸುವ ನಿಮ್ಮ ಕಾರ್ಯ ನಿಜಕ್ಕೂ ಪ್ರಶಂಸನೀಯ ಎಂದು ಅಭಿಪ್ರಾಯಪಟ್ಟರು.
    ಅಧ್ಯಕ್ಷತೆಯನ್ನು ದ.ಕ ಹಾಲು ಉತ್ಪಾದಕರ ಒಕ್ಕೂಟದ ಇದರ ಮಾಜಿ ಅಧ್ಯಕ್ಷ ಐರೋಡಿ ಜಗದೀಶ್ ಕಾರಂತ್ ವಹಿಸಿದ್ದರು.
    ಈ ಸಂದರ್ಭದಲ್ಲಿ ದ.ಕ ಹಾಲು ಉತ್ಪಾದಕರ ಒಕ್ಕೂಟ ಮಂಗಳೂರು ಪ್ರಧಾನ ವ್ಯವಸ್ಥಾಪಕರಾಗಿ ನಿವೃತ್ತರಾದ ಡಾ.ನಿತ್ಯಾನಂದ ಭಕ್ತ ಇವರನ್ನು ಅಭಿನಂದಿಸಿ ಗೌರವಿಸಲಾಯಿತು.

    ಮುಖ್ಯ ಅಭ್ಯಾಗತರಾಗಿ ಕೋಟ ಸಿ.ಎ ಬ್ಯಾಂಕ್ ಅಧ್ಯಕ್ಷ ಜಿ.ತಿಮ್ಮ ಪೂಜಾರಿ, , ದ.ಕ ಹಾಲು ಉತ್ಪಾದಕರ ಒಕ್ಕೂಟ ಮಂಗಳೂರು ಮಾಜಿ ನಿರ್ದೇಶಕರಾದ ಜಾನಕಿ ಹಂದೆ, ದ.ಕ ಹಾಲು ಉತ್ಪಾದಕರ ಒಕ್ಕೂಟ ಮಂಗಳೂರು ಉಪ ವ್ಯವಸ್ಥಾಪಕ ಡಾ.ಅನಿಲ್ ಕುಮಾರ್ ಶೆಟ್ಟಿ, ಡಾ.ಮಾಧವ ಐತಾಳ್, ದ.ಕ ಹಾಲು ಉತ್ಪಾದಕರ ಒಕ್ಕೂಟದ ವಿಸ್ತರ್ಣಾಧಿಕಾರಿ ಸರಸ್ವತಿ , ದ.ಕ ಹಾಲು ಉತ್ಪಾದಕರ ಒಕ್ಕೂಟದ ಸಾಸ್ತಾನ ಶಿಬಿರ ಕಛೇರಿ ಇದರ ಪಶುವೈದ್ಯಾಧಿಕಾರಿ ನಿಜಾಮ್ ಪಾಟೀಲ್ ಉಪಸ್ಥಿತರಿದ್ದರು. ಕೋಟ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ಪ್ರಕಾಶ್ ಶೆಟ್ಟಿ ಸ್ವಾಗತಿಸಿದರು. ಪಾಂಡೇಶ್ವರ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ಯಾಮಲ ವಿಜಯ್ ಪ್ರಾರ್ಥನೆಗೈದರು. ಕಾರ್ಯಕ್ರಮವನ್ನು ಹಂದಟ್ಟು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುಜಾತ ಬಾಯರಿ ನಿರೂಪಿಸಿದರು. ಎತ್ತಿನಟ್ಟಿ ಹಾಲು ಉತ್ಪಾದಕರ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಕೇಶ್ ವಂದಿಸಿದರು.

  • ಶ್ರೀ ಶಿರಸಿ ಮಾರಿಕಾಂಬ ದೇವಳದ ನೂತನ ಆಡಳಿತ ಮಂಡಳಿಗೆ ಅಧ್ಯಕ್ಷರಾಗಿ ರಮೇಶ್ ಪೂಜಾರಿ ಆಯ್ಕೆ

    ಶ್ರೀ ಶಿರಸಿ ಮಾರಿಕಾಂಬ ದೇವಳದ ನೂತನ ಆಡಳಿತ ಮಂಡಳಿಗೆ ಅಧ್ಯಕ್ಷರಾಗಿ ರಮೇಶ್ ಪೂಜಾರಿ ಆಯ್ಕೆ

    ಕುಂದಾಪುರ ಮಿರರ್ ಸುದ್ದಿ…

    ಕೋಟ: ಇಲ್ಲಿನ ಕೋಟತಟ್ಟು ಪಡುಕರೆ ಶ್ರೀ ಶಿರಸಿ ಮಾರಿಕಾಂಬ ದೇವಸ್ಥಾನದ ವಾರ್ಷಿಕ ಮಹಾಸಭೆ ಭಾನುವಾರ ಶ್ರೀ ದೇವಸ್ಥಾನದ ಸಭಾಂಗಣದಲ್ಲಿ ನಡೆಯಿತು.

    ವಾರ್ಷಿಕ ಮಹಾಸಭೆಯಲ್ಲಿ ದೇವಸ್ಥಾನದ ಅಭಿವೃದ್ಧಿ ಕುರಿತಂತೆ ಚರ್ಚಿಸಲಾಯಿತು. ಅಲ್ಲದೆ ಪ್ರತಿ ಸಂಕ್ರಮಣದಂದು ಅನ್ನ ಸಂತರ್ಪಣೆ ನಡೆಸುವುದೆಂದು ಸಭೆಯಲ್ಲಿ ತಿರ್ಮಾನಿಸಿ ದೇವಸ್ಥಾನದ ಆಡಳಿತ ಮಂಡಳಿಯ ಗೌರವಾಧ್ಯಕ್ಷ ಆನಂದ್ ಸಿ ಕುಂದರ್ ನೇತ್ರತ್ವದಲ್ಲಿ ಭಾನುವಾರ ಮೊದಲ ಸಂಕ್ರಮಣ ಅನ್ನಸಂತಪರ್ಣ ಕಾರ್ಯಕ್ರಮ ನೆರವೆರಿತು.

    ಈ ಸಂದರ್ಭದಲ್ಲಿ ನೂತನ ಆಡಳಿತ ಮಂಡಳಿಯ ಆಯ್ಕೆ ಪ್ರಕ್ರಿಯೆ ನಡೆಯಿತು. ನೂತನ ಅಧ್ಯಕ್ಷರಾಗಿ ರಮೇಶ್ ಪೂಜಾರಿ, ಗೌರವಾಧ್ಯಕ್ಷರಾಗಿ ಆನಂದ್ ಸಿ ಕುಂದರ್, ಕಾರ್ಯದರ್ಶಿ ಮಂಜುನಾಥ ನಾಯ್ಕ್,ಉಪಾಧ್ಯಕ್ಷರಾಗಿ ಚಂದ್ರ ಪುತ್ರನ್, ಚಂದ್ರ ಪುತ್ರನ್ ಬಾರಕೂರು, ಜೊತೆ ಕಾರ್ಯದರ್ಶಿ ರಾಜೇಂದ್ರ ಕಾಂಚನ್, ಅರುಣ್ ಸಾಲಿಯಾನ್, ಸತೀಶ್ ಮೆಂಡನ್, ಕೋಶಾಧಿಕಾರಿಯಾಗಿ ನಾಗಪ್ಪ ಪೂಜಾರಿ, ಜತೆಕೋಶಾಧಿಕಾರಿಯಾಗಿ ವಿನಯ್ ಕುಂದರ್,
    ಸಂಘಟನಾ ಕಾರ್ಯದರ್ಶಿಯಾಗಿ ಶರತ್ ಪೂಜಾರಿ, ಪ್ರದೀಪ್ ಪೂಜಾರಿ, ಗೌರವ ಸಲಹೆಗಾರರಾಗಿ ಸಂಜೀವ ಕುಂದರ್,ಬಸವ ಕುಂದರ್ ,ಬಾಬು ಪೂಜಾರಿ,ಶ್ರಿನಿವಾಸ ಪೂಜಾರಿ ಸಿದ್ಧಿ,ಕೃಷ್ಣ ಪುತ್ರನ್,ಅಶೋಕ್ ಪೂಜಾರಿ,ಉದಯ್ ತಿಂಗಳಾಯ,ಚಂದ್ರ ಎಸ್ ಮೆಂಡನ್,ಪ್ರಕಾಶ್ ತಿಂಗಳಾಯ,ಯೋಗೇಂದ್ರ ತಿಂಗಳಾಯ,ರಘು ಪೂಜಾರಿ,ಅಣ್ಣಪ್ಪ ತಿಂಗಳಾಯ,ಪ್ರಭಾಕರ ತಿಂಗಳಾಯ,ಚಂದ್ರ ಮರಕಾಲ, ಪ್ರಶಾಂತ್ ತೋಳಾರ್,ಅರುಣ್ ಕಾಂಚನ್, ಸತೀಶ್ ಮೆಂಡನ್,ಆನಂದ್ ಪೂಜಾರಿ ,ಸತೀಶ್ ಕಾನ್ ಮನೆ,ಸತೀಶ್ ಪಡುಕರೆ,ಸುಧಾಕರ ಶ್ರೀಯಾನ್,ವಿಠ್ಠಲ ಪೂಜಾರಿ,ಅನಂತ ಕುಂದರ್,ಅರ್ಚಕರಾಗಿ ನೆಂದಪ್ಪ ಪೂಜಾರಿ,ಸಂಜೀವ ಪೂಜಾರಿ ಆಯ್ಕೆಗೊಂಡರು.

  • ಚಿತ್ರಪಾಡಿ – ನೀರಿನಲ್ಲಿ ಪವರ್ ಮೆನ್‍ಗಳ ಸಾಹಸ

    ಚಿತ್ರಪಾಡಿ – ನೀರಿನಲ್ಲಿ ಪವರ್ ಮೆನ್‍ಗಳ ಸಾಹಸ

    ಕುಂದಾಪುರ ಮಿರರ್ ಸುದ್ದಿ…

    ಕೋಟ: ಕಳೆದ ವಾರ ಸುರಿದ ಬಾರಿ ಗಾಳಿ ಮಳೆಗೆ ಇಲ್ಲಿನ ಕೋಟ ಮೆಸ್ಕಾಂ ವ್ಯಾಪ್ತಿಯ ಚಿತ್ರಪಾಡಿ ಪರಿಸರದ ಹಡಲು ಬಿದ್ದ ಪ್ರದೇಶ ವಿದ್ಯುತ್ ಕಂಬಗಳು ಹಾನಿಗೊಂಡಿದ್ದು ಬಾರಿ ಪ್ರಮಾಣದಲ್ಲಿ ನೀರು ಹರಿಯುತ್ತಿರಯವ ಹಿನ್ನಲ್ಲೆಯಲ್ಲಿ ಕೋಟ ಮೆಸ್ಕಾಂ ವಿಭಾಗದಲ್ಲಿ ಕಾರ್ಯನಿರ್ವಹಿಸುವ ಪವರ್‍ಮೆನ್‍ಗಳು ಕಯಾಕಿಂಗ್ ದೋಣಿಯ ಮೂಲಕ ಸರಿಪಡಿಸಲಾಯಿತು, ಪರಿಸರದ ಹತ್ತಾರು ಮನೆಗಳಿಗೆ ಸಂಪರ್ಕಿಸುವ ಈ ವಿದ್ಯುತ್ ತಂತಿ ಹಾನಿಗೊಂಡ ದಿಸೆಯಲ್ಲಿ ಮೆಸ್ಕಾಂ ಸಹಾಯಕ ಇಂಜಿನಿಯರ್ ಪ್ರಶಾಂತ್ ಶೆಟ್ಟಿ ನೇತೃತ್ವದಲ್ಲಿ ಸರಿಪಡಿಸುವ ಕಾರ್ಯ ಸೋಮವಾರ ನಡೆಯಿತು.

    ಬಾರಿ ನೆರೆಪೀಡಿಯ ಪ್ರದೇಶವಾದ ಈ ಭಾಗ ನೀರಿನ ಇಳಿಮುಖದ ನೋಡಿ ಈ ಕಾರ್ಯ ಹಮ್ಮಿಕೊಂಡಿತು. ಇವರ ಈ ಸಾಹಸಕ್ಕೆ ಸಾರ್ವಜನಿಕರು ಪ್ರಶಂಸೆ ವ್ಯಕ್ತಪಡಿಸಿ ಕೃತಜ್ಞತೆ ಸಲ್ಲಿಸಿದ್ದಾರೆ.

     

  • ಸಾಸ್ತಾನ- ಅನ್ಯೋನ್ಯತಾ ಗೂಡ್ಸ್ ವಾಹನ ಚಾಲಕರು ಮತ್ತು ಮಾಲಕರು ಸಾಸ್ತಾನ ವತಿಯಿಂದ ವನಮಹೋತ್ಸವ

    ಸಾಸ್ತಾನ- ಅನ್ಯೋನ್ಯತಾ ಗೂಡ್ಸ್ ವಾಹನ ಚಾಲಕರು ಮತ್ತು ಮಾಲಕರು ಸಾಸ್ತಾನ ವತಿಯಿಂದ ವನಮಹೋತ್ಸವ

    ಕುಂದಾಪುರ ಮಿರರ್ ಸುದ್ದಿ…

    ಕೋಟ: ಅನ್ಯೋನ್ಯತಾ ಗೂಡ್ಸ್ ವಾಹನ ಚಾಲಕರು ಮತ್ತು ಮಾಲಕರು ಸಾಸ್ತಾನ ಇವರ ನೇತ್ರತ್ವದಲ್ಲಿ ಭಾನುವಾರ ವನಮಹೋತ್ಸವ ಕಾರ್ಯಕ್ರಮ ಜರಗಿತು. ಅನ್ಯೋನ್ಯತಾ ಗೂಡ್ಸ್ ವಾಹನ ಚಾಲಕರು ಮತ್ತು ಮಾಲಕ ಸಂಘದ ಅಧ್ಯಕ್ಷ ಸಂಜೀವ ಪೂಜಾರಿ, ಉಪಾಧ್ಯಕ್ಷ ಸೂರ್ಯ ಪೂಜಾರಿ, ಉದ್ಯಮಿ ಐರೋಡಿ ಸುರೇಶ್ ಕುಂದರ್ ಮಾರ್ಗದರ್ಶನದಲ್ಲಿ ಸಸಿ ವಿತರಣೆಗೆ ಚಾಲನೆ ನೀಡಲಾಯಿತು.

    ಈ ಸಂದರ್ಭದಲ್ಲಿ ಐರೋಡಿ ಗ್ರಾ. ಪಂ. ಮಾಜಿ ಅಧ್ಯಕ್ಷರು ವಿಠ್ಠಲ ಪೂಜಾರಿ, ಬ್ರಹ್ಮಾವರ ತಾ.ಪಂ ಮಾಜಿ ಅಧ್ಯಕ್ಷೆ ಜ್ಯೋತಿ ಉದಯ ಕುಮಾರ್ , ಸಾಸ್ತಾನ ಗೋಳಿಗರಡಿ ದೈವಸ್ಥಾನದ ಧರ್ಮದರ್ಶಿ ವಿಠ್ಠಲ ಪೂಜಾರಿ ಪಾಂಡೇಶ್ವರ , ರಕ್ತೇಶ್ವರಿ ದೇವಸ್ಥಾನ ಪಾಂಡೇಶ್ವರ ಧರ್ಮದರ್ಶಿ ಕೆ.ವಿ ರಮೇಶ್ ರಾವ್ ಪಾಂಡೇಶ್ವರ, , ಪಾಂಡೇಶ್ವರ ಗ್ರಾಮ ಪಂಚಾಯತ್ ಸದಸ್ಯರಾದ ಅನಿಲ್ ಹಾಂಡ, ಚಂದ್ರ ಮೋಹನ್, ಪ್ರತಾಪ್ ಶೆಟ್ಟಿ, ಸಾಸ್ತಾನ ಸಿ ಎ ಬ್ಯಾಂಕ್ ಅಧ್ಯಕ್ಷ ಶ್ರೀಧರ್ ಪಿ.ಎಸ್, ಸ್ಥಳೀಯ ಉದ್ಯಮಿಗಳಾದ ಗಣಪಯ್ಯ ಆಚಾರ್, ಡೆರಿಕ್ ಡಿಸೋಜ, ಸುಭಾಷ್ ಶೆಟ್ಟಿ, ಸುರೇಶ್ ಶೆಟ್ಟಿ, ಪ್ರಕಾಶ್, ದಿನಕರ್ ಕೋಡಿ, ತ್ಯಾಗರಾಜ್, ವಸಂತ, ಹಾಗೂ ಬ್ರಹ್ಮಾವರ ಚಾಲಕರ ಸಂಘದ ಅಧ್ಯಕ್ಷ ಹಾಗೂ ಸದಸ್ಯರು ಉಪಸ್ಥಿತರಿದ್ದರು. ಕೇಶವ ಆಚಾರ್ ನಿರೂಪಿಸಿ ವಂದಿಸಿದರು.

  • ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ವಿಶ್ವ ಕುಂದಾಪ್ರ ಕನ್ನಡ ದಿನ’ಆಚರಣೆ

    ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ವಿಶ್ವ ಕುಂದಾಪ್ರ ಕನ್ನಡ ದಿನ’ಆಚರಣೆ

    ಕುಂದಾಪುರ ಮಿರರ್ ಸುದ್ದಿ…
    ಕುಂದಾಪುರ :ನಿವೃತ್ತ ಅಂಚೆ ಇಲಾಖೆ ಸಿಬ್ಬಂದಿ ಅಂಪಾರಿನ ರತ್ನಾಕರ ಕಿಣಿ (ಆರ್ ಕೆ. ಯವರನ್ನು) ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆಯ ಪ್ರಯುಕ್ತ ಕುಂದಾಪುರ ಡಾ| ಬಿ. ಬಿ. ಹೆಗ್ಡೆ ಕಾಲೇಜಿನ ಕನ್ನಡ ವಿಭಾಗದ ಆಶ್ರಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು.

    ರತ್ನಾಕರ ಕಿಣಿಯವರು ಕುಂದಗನ್ನಡ ಅಜ್ಜಿಕತೆ, ಭತ್ತಕುಟ್ಟುವ ಹಾಡು ಹಾಗೂ ಸ್ವರಚಿತ ಕುಂದಾಪ್ರ ಕನ್ನಡ ಹಾಡೊಂದನ್ನು ವಾಚಿಸಿದರು ಇದೇ ಸಂದರ್ಭ ಕುಂದಾಪ್ರ ಭಾಷೆಯ ಅನನ್ಯತೆ ಮತ್ತು ಸಾಂಸ್ಕ್ರತಿಕ ಮಹತ್ವದ ಕುರಿತು ಮಾತನಾಡಿದರು.

    ಕಾಲೇಜಿನ ಪ್ರಾಂಶುಪಾಲರಾದ ಪ್ರೋ| ಕೆ. ಉಮೇಶ್ ಶೆಟ್ಟಿಯವರು ಅಧ್ಯಕ್ಷತೆ ವಹಿಸಿದ್ದರು. ಉಪಪ್ರಾಂಶುಪಾಲರು ಹಾಗೂ ಕನ್ನಡ ವಿಭಾಗದ ಮುಖ್ಯಸ್ಥರಾದ ಚೇತನ್ ಶೆಟ್ಟಿ ಕೋವಾಡಿ ಆಶಯ ನುಡಿಗಳನ್ನಾಡಿ, ಕನ್ನಡ ವಿಭಾಗದ ಉಪನ್ಯಾಸಕರಾದ ಸುಕುಮಾರ್ ಶೆಟ್ಟಿ ಕಮಲಶಿಲೆ ಅತಿಥಿಯನ್ನು ಪರಿಚಯಿಸಿ, ರೇಷ್ಮಾ ಶೆಟ್ಟಿ ಸ್ವಾಗತಿಸಿ, ವಾಣಿಜ್ಯ ಉಪನ್ಯಾಸಕ ರಕ್ಷಿತ್ ರಾವ್ ಗುಜ್ಜಾಡಿ ವಂದಿಸಿದರು. ಸ್ವಚ್ಛತಾ ಸಿಬ್ಬಂದಿ ರತ್ನಾ ಪ್ರಾರ್ಥಿಸಿ, ಗಣಕ ವಿಜ್ಞಾನ ವಿಭಾಗದ ಉಪನ್ಯಾಸಕ ಹರೀಶ್ ಕಾಂಚನ್ ನಿರೂಪಿಸಿದರು.

  • ಪಂಚವರ್ಣ ಮಹಿಳಾ ಮಂಡಲದ ಅರಿವು ನಿಮ್ಮಗಿರಲಿ ನೆರವು 6ನೇ ಮಾಲಿಕೆ

    ಪಂಚವರ್ಣ ಮಹಿಳಾ ಮಂಡಲದ ಅರಿವು ನಿಮ್ಮಗಿರಲಿ ನೆರವು 6ನೇ ಮಾಲಿಕೆ

    ಮಕ್ಕಳ ಬಗ್ಗೆ ಪೋಷಕರು ಜಾಗೃತಿ ವಹಿಸಬೇಕು – ಡಾ.ಉಷಾ ಹೇಮಂತ್

    ಕುಂದಾಪುರ ‌ಮಿರರ್ ಸುದ್ದಿ…
    ಕೋಟ: ಮಕ್ಕಳ ಬಗ್ಗೆ ಪೋಷಕರು ಹೆಚ್ಚಿನ ಮುತುವರ್ಜಿ ವಹಿಸಬೇಕು ಆಗ ಮಾತ್ರ ತಮ್ಮ ಮಕ್ಕಳನ್ನು ಸುಸಂಸ್ಕೃತರನ್ನಾಗಿಸಲು ಸಾಧ್ಯವಿದೆ ಎಂದು ಸಾಸ್ತಾನದ ಪ್ರಸಿದ್ಧ ವೈದ್ಯೆ ಡಾ.ಉಷಾ ಹೇಮಂತ್ ಹೇಳಿದರು.

    ಕೋಟದ ಪಂಚವರ್ಣ ಮಹಿಳಾ ಮಂಡಲದ ನೇತ್ರತ್ವದಲ್ಲಿ ಮಾತೃ ಸಂಸ್ಥೆ ಪಂಚವರ್ಣ ಯುವಕ ಮಂಡಲದ ಸಹಯೋಗದೊಂದಿಗೆ ಅರಿವು ನಿಮ್ಮಗಿರಲಿ ನೆರೆವು ಹದಿಹರೆಯದವರ ಸಮಸ್ಯೆಗಳ ಬಗ್ಗೆ ಮಾಹಿತಿ ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಪ್ರಸ್ತುತ ವಿದ್ಯಾಮಾನಗಳಲ್ಲಿ ಮಕ್ಕಳ ಬಗ್ಗೆ ಪೋಷಕರು ನಿರ್ಲಕ್ಷೀಯ ಧೋರಣೆಗಳ ಬಗ್ಗೆ ಸವಿವರವಾಗಿ ಮಾಹಿತಿ ನೀಡಿ ಮಕ್ಕಳು ಆಧುನಿಕ ತಂತ್ರಜ್ಞಾನಗಳಾದ ಮೊಬೈಲ್ ,ಟಿವಿ ಇನ್ನಿತರ ವಿಚಾರಗಳಲ್ಲಿ ಸಾಕಷ್ಟು ಕ್ರಮಿಸಿ ಕೊಂಡಿದ್ದಾರೆ ,ಈ ಬೆಳವಣಿಗೆ ಮಾರಕವಾಗಿ ಪರಿಣಮಿಸಲಿದೆ. ಜಂಕ್ ಫುಡ್‍ಗಳ ಬಳಕೆಯಿಂದ ಎದುರಾಗುತ್ತಿರುವ ಇತರ ಸಮಸ್ಯೆಗಳ ಬಗ್ಗೆ ಮನದಟ್ಟಾಗುವ ರೀತಿಯಲ್ಲಿ ವಿವಿರಿಸಿದರು. ಹೆಣ್ಣು ಮಕ್ಕಳ ದೇಹದಲ್ಲಿ ಬದಲಾಗುವ ಬೆಳವಣಿಗೆಯ ಬಗ್ಗೆ ತಾತ್ಸಾರ ಸಲ್ಲ ,ಅದನ್ನು ಮನೆಯ ತಾಯಂದಿರರ ಬಳಿ ತೋಡಿ ಕೊಳ್ಳಿ ಇಲ್ಲ ವೈದ್ಯರ ಬಳಿ ಮಾಹಿತಿ ಪಡೆಯಿರಿ ಎಂದು ಸಭೆಯಲ್ಲಿ ತಿಳಿ ಹೇಳಿದರು.

    ಕಾರ್ಯಕ್ರಮವನ್ನು ಕೋಟ ಮಹಿಳಾ ಮಂಡಲದ ಮಾಜಿ ಅಧ್ಯಕ್ಷೆ ಯಶೋಧ ಹಂದೆ ಉದ್ಘಾಟಿಸಿದರು.

    ಅಧ್ಯಕ್ಷತೆಯನ್ನು ಪಂಚವರ್ಣ ಮಹಿಳಾ ಮಂಡಲದ ಅಧ್ಯಕ್ಷೆ ಕಲಾವತಿ ಅಶೋಕ್ ವಹಿಸಿದ್ದರು.

    ಮುಖ್ಯ ಅಭ್ಯಾಗತರಾಗಿ ಕೋಟ ಶಾಲೆಯ ಮುಖ್ಯ ಶಿಕ್ಷಕಿ ಪುಷ್ಭಾವತಿ ಹೊಳ್ಳ,ಪಂಚವರ್ಣ ಯುವಕ ಮಂಡಲದ ಅಧ್ಯಕ್ಷ ಅಜಿತ್ ಆಚಾರ್, ಸ್ಥಾಪಕಾಧ್ಯಕ್ಷ ಸುರೇಶ್ ಗಾಣಿಗ ಮತ್ತಿತರರು ಉಪಸ್ಥಿತರಿದ್ದರು.

    ಪಂಚವರ್ಣ ಮಹಿಳಾ ಮಂಡಲದ ಸಂಚಾಲಕಿ ಪುಷ್ಭಾ ಕೆ ಹಂದಟ್ಟು ಸ್ವಾಗತಿಸಿ, ಸದಸ್ಯೆ ಸುಜಾಯ ಬಾಯರಿ ನಿರೂಪಿಸಿ,ವಸಂತಿ ಹಂದಟ್ಟು ವಂದಿಸಿದರು.

  • ಉಡುಪಿ :ಜಿಲ್ಲೆಯಲ್ಲಿ ಕೆಲಸ ನಿರ್ವಹಿಸಿದ್ದು ಮರೆಯಲಾಗದ ಅನುಭವ : ಕೂರ್ಮಾರಾವ್ ಎಂ

    ಉಡುಪಿ :ಜಿಲ್ಲೆಯಲ್ಲಿ ಕೆಲಸ ನಿರ್ವಹಿಸಿದ್ದು ಮರೆಯಲಾಗದ ಅನುಭವ : ಕೂರ್ಮಾರಾವ್ ಎಂ

    ಕುಂದಾಪುರ ಮಿರರ್ ಸುದ್ದಿ.

    ಉಡುಪಿ : ಉಡುಪಿ ಜಿಲ್ಲೆಯ ಜಿಲ್ಲಾಧಿಕಾರಿಯಾಗಿ 1 ವರ್ಷ 10 ತಿಂಗಳ ಕಾಲ ಕಾರ್ಯನಿರ್ವಹಿಸಿದ್ದು ಅತ್ಯುತ್ತಮ ರೀತಿಯ ಮರೆಯಲಾಗದ ಅನುಭವ ನೀಡಿದೆ, ಜಿಲ್ಲೆಯ ಅಭಿವೃದ್ದಿಗಾಗಿ ಮುಂದಿನ ದಿನದಲ್ಲಿ ಯಾವುದೇ ಹುದ್ದೆಯಲ್ಲಿದ್ದರೂ ತನ್ನಿಂದ ಅಗತ್ಯವಿರುವ ಸಹಕಾರ ನೀಡಲಾಗುವುದು ಎಂದು ನಿರ್ಗಮಿತ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಹೇಳಿದರು.

    ಅವರು ಇಂದು ರಜತಾದ್ರಿಯ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಅಯೋಜಿಸಿದ್ದ ಬೀಳ್ಕೊಡುಗೆ ಸಮಾರಂಭದಲ್ಲಿ ಮಾತನಾಡಿದರು.

    ಉಡುಪಿ ಜಿಲ್ಲೆಯನ್ನು ರಾಜ್ಯದಲ್ಲೇ ಸದಾ ಮಾದರಿ ಜಿಲ್ಲೆಯನ್ನಾಗಿ ಮಾಡುವ ತುಡಿತ ಜಿಲ್ಲೆಯ ಸಾರ್ವಜನಿಕರು ಮತ್ತು ನೌಕರರ ವಲಯದಲ್ಲಿದೆ ಈ ಸ್ಪೂರ್ತಿ ಸದಾ ಕಾಲ ಇದೇ ರೀತಿ ಮುಂದುವರೆಯಬೇಕು, ಜಿಲ್ಲೆಯಲ್ಲಿ ಕಾರ್ಯನಿರ್ವಹಿಸಿದ ಅವಧಿಯಲ್ಲಿ ಜಿಲ್ಲೆಯ ಜನತೆ ಮತ್ತು ಅಧಿಕಾರಿ ಹಾಗೂ ಸಿಬ್ಬಂದಿಗಳು ಉತ್ತಮ ರೀತಿಯ ಸಹಕಾರ ನೀಡಿದ್ದು, ಎಲ್ಲರ ಸಹಕಾರದಿಂದ ಒಂದು ತಂಡದ ರೀತಿಯಲ್ಲಿ ಜಿಲ್ಲೆಯ ಪ್ರಗತಿಗೆ ಕಾರ್ಯನಿರ್ವಹಿಸಲು ಸಾದ್ಯವಾಯಿತು ಎಂದರು.

    ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ನೂತನ ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ ಮಾತನಾಡಿ, ವಿದ್ಯಾವಂತ ಮತ್ತು ಬುದ್ದಿವಂತರ ಜಿಲ್ಲೆಯಾದ ಉಡುಪಿ ಜಿಲ್ಲೆಯಲ್ಲಿನ ಹಲವು ಸವಾಲುಗಳನ್ನು ಜಿಲ್ಲಾಧಿಕಾರಿಯಾಗಿದ್ದ ಕೂರ್ಮಾರಾವ್ ಎಂ. ಅವರು ಯಶಸ್ವಿಯಾಗಿ ನಿರ್ವಹಿಸಿದ್ದಾರೆ. ಮುಂದಿನ ದಿನಗಳಲ್ಲಿ ಸಾರ್ವಜನಿಕರಿಗೆ ಉತ್ತಮ ಮತ್ತು ಪ್ರಾಮಾಣಿಕ ಸೇವೆ ನೀಡುವ ನಿಟ್ಟಿನಲ್ಲಿ , ಜಿಲ್ಲೆಯ ಪ್ರಮುಖ ಇಲಾಖೆಗಳಾದ ಕಂದಾಯ, ಜಿಲ್ಲಾ ಪಂಚಾಯತ್ ಮತ್ತು ಪೊಲೀಸ್ ಇಲಾಖೆಗಳು ಪರಸ್ಪರ ಪೂರಕವಾಗಿ ಕೆಲಸ ಮಾಡಬೇಕಿದೆ. ಎಲ್ಲ ಅಧಿಕಾರಿ ಮತ್ತು ಸಿಬ್ಬಂದಿಗಳು ಒಂದು ತಂಡವಾಗಿ ಕಾರ್ಯನಿರ್ವಹಿಸಿ ಜಿಲ್ಲೆಯ ಪ್ರಗತಿಗೆ ಒಟ್ಟಾಗಿ ಶ್ರಮಿಸೋಣ ಎಂದರು.

    ಜಿ.ಪಂ. ಸಿಇಓ ಪ್ರಸನ್ನ ಮಾತನಾಡಿ, ಜಿಲ್ಲಾಧಿಕಾರಿ ಕೂರ್ಮಾರಾವ್ ಅವರ ತಾಳ್ಮೆಯ ಗುಣ,ನಿರ್ಣಯಗಳನ್ನು ತೆಗೆದುಕೊಳ್ಳುವ ಗುಣ ಎಲ್ಲಾ ಅಧಿಕಾರಿಗಳಿಗೆ ಮಾದರಿಯಾಗಬೇಕು. ಜಿಲ್ಲಾ ಪಂಚಾಯತ್ ನ ಹಲವು ಯಶಸ್ವಿ ಯೋಜನೆಗಳಿಗೆ ಉತ್ತಮ ಸಹಕಾರ ನೀಡಿದ್ದು, ಚುನಾವಣೆಯಲ್ಲಿ ಸ್ವೀಪ್ ಮೂಲಕ ರಾಜ್ಯ ಮತ್ತು ದೇಶದಲ್ಲೇ ಗಮನ ಸೆಳೆಯುವಂತಹ ಕಾರ್ಯಕ್ರಮಗಳನ್ನು ಇವರ ಮಾರ್ಗದರ್ಶನದಲ್ಲಿ ಮಾಡಲಾಗಿದ್ದು, ಇಂಜಿನಿಯರಿಂಗ್ ವಿದ್ಯಾಭ್ಯಾಸ ಪಡೆದಿರುವ ಇವರಿಂದ ಎನ್.ಐ.ಸಿ. ಮೂಲಕ ಕಂದಾಯ ಇಲಾಖೆಗೆ ವಿವಿಧ ರೀತಿಯ ಬಹುಪಯೋಗಿಯ 3 ನೂತನ ತಂತ್ರಾಂಶಗಳನ್ನು ಸಿದ್ದಪಡಿಸುವ ಕಾರ್ಯ ನಡೆಯುತ್ತಿದೆ ಎಂದರು.

    ಎಸ್ಪಿ ಅಕ್ಷಯ್ ಎಂ ಹಾಕೆ ಮಾತನಾಡಿ, ಜಿಲ್ಲೆಯಲ್ಲಿ ಡ್ರಗ್ಸ್ ಹಾವಳಿ ನಿಯಂತ್ರಣಕ್ಕೆ ಪೊಲೀಸ್ ಇಲಾಖೆಗೆ ದಿಟ್ಟ ನಿರ್ಧಾರಗಳನ್ನು ಕೈಗೊಳ್ಳಲು ಎಲ್ಲಾ ಅಗತ್ಯ ಬೆಂಬಲ ಮತ್ತು ಸಹಕಾರ ನೀಡಿದ್ದಾರೆ, ಉಡುಪಿಯನ್ನು ಸೇಫ್ ಸಿಟಿ ಮಾಡುವ ಯೋಜನೆ ಮತ್ತು ರಾಷ್ಟ್ರೀಯ ಹೆದ್ದಾರಿ ಮತ್ತು ನಗರದಲ್ಲಿ ಟ್ರಾಫಿಕ್ ವ್ಯವಸ್ಥೆ ನಿರ್ವಹಣೆ ಮೂಲಕ ಸ್ಮಾರ್ಟ್ ಸಿಟಿ ಮಾಡಲು ಒತ್ತು ನೀಡಿದ್ದರು ಎಂದರು.

    ಕುಂದಾಪುರ ಉಪ ವಿಭಾಗಾಧಿಕಾರಿ ರಶ್ಮಿ, ಜಿಲ್ಲಾ ಪಿಎಫ್ ಆಯುಕ್ತ ಅಭಿಷೇಕ್ ಉಪಸ್ಥಿತರಿದ್ದರು.

    ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್ ಸ್ವಾಗತಿಸಿದರು, ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ. ರೋಶನ್ ಕುಮಾರ್ ಶೆಟ್ಟಿ ನಿರೂಪಿಸಿದರು.

    ಜಿಲ್ಲೆಯ ವಿವಿಧ ಇಲಾಖೆಗಳ ಅಧಿಕಾರಿ ಸಿಬ್ಬಂದಿಗಳು, ಸಾರ್ವಜನಿಕರು, ವಿವಿಧ ಸಂಘ ಸಂಸ್ಥೆಗಳು ಹಾಗೂ ಧಾರ್ಮಿಕ ಸಂಸ್ಥೆಗಳಿಔದ ಅಭಿನಂದನೆ ನಡೆಯಿತು.

  • ಉಡುಪಿ :ನೂತನ ಜಿಲ್ಲಾಧಿಕಾರಿ ಡಾ.ವಿದ್ಯಾ ಕುಮಾರಿ ಕೆ. ಅಧಿಕಾರ ಸ್ವೀಕಾರ

    ಉಡುಪಿ :ನೂತನ ಜಿಲ್ಲಾಧಿಕಾರಿ ಡಾ.ವಿದ್ಯಾ ಕುಮಾರಿ ಕೆ. ಅಧಿಕಾರ ಸ್ವೀಕಾರ

    ಕುಂದಾಪುರ ಮಿರರ್ ಸುದ್ದಿ…

    ಉಡುಪಿ : ಉಡುಪಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿ ಡಾ. ವಿದ್ಯಾ ಕುಮಾರಿ ಕೆ. ಅವರು ಇಂದು ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಿರ್ಗಮಿತ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಅವರಿಂದ ಅಧಿಕಾರ ಸ್ವೀಕರಿಸಿದರು.

    ಉಳ್ಳಾಲ ತಾಲೂಕಿನ ಪಾವೂರು ಗ್ರಾಮದವರಾದ ಇವರು ಮಂಗಳೂರಿನಲ್ಲಿ ಶಿಕ್ಷಣ ಪಡೆದಿದ್ದು, ಮಂಗಳೂರು ವಿವಿಯಲ್ಲಿ ಕನ್ನಡ ಸ್ನಾತಕೋತ್ತರ ಪದವಿ ಪಡೆದಿದ್ದಾರೆ.

    ಚಿತ್ರದುರ್ಗದಲ್ಲಿ ಪ್ರೊಬೇಷನರಿ ಉಪವಿಭಾಗಾಧಿಕಾರಿಯಾಗಿ, ಮೈಸೂರು ಕಾರ್ಪೋರೇಷನ್ ಕೌನ್ಸಿಲ್ ಕಾರ್ಯದರ್ಶಿ, ಹುಣಸೂರು ಉಪವಿಭಾಗಾಧಿಕಾರಿ, ಮೈಸೂರು ಮುಡಾ ಕಾರ್ಯದರ್ಶಿ, ಬೆಂಗಳೂರು ನಗರಾಭಿವೃದ್ಧಿ ಇಲಾಖೆಯ ಜಂಟಿ ನಿರ್ದೇಶಕಿ, ವೈದ್ಯಕೀಯ ಶಿಕ್ಷಣ ಇಲಾಖೆಯ ಉಪ ಕಾರ್ಯದರ್ಶಿ, ಕೆ.ಎಸ್.ಟಿ.ಡಿ.ಸಿ ಜನರಲ್ ಮ್ಯಾನೇಜರ್, ಪ್ರವಾಸೋದ್ಯಮ ಇಲಾಖೆಯ ಜಂಟಿ ಆಯುಕ್ತೆ, ಕೋಲಾರ ಹೆಚ್ಚುವರಿ ಜಿಲ್ಲಾಧಿಕಾರಿ, ಉಡುಪಿ ಹೆಚ್ಚುವರಿ ಜಿಲ್ಲಾಧಿಕಾರಿ, ಬೆಂಗಳೂರು ವಿಭಾಗದ ಅಪರ ಪ್ರಾದೇಶಿಕ ಆಯುಕ್ತೆಯಾಗಿ ಕಾರ್ಯನಿರ್ವಹಿಸಿದ್ದಾರೆ.

    2020 ರಲ್ಲಿ ಹಂಪಿ ವಿವಿ ಯಿಂದ ಡಾಕ್ಟರೇಟ್ ಪಡೆದಿದ್ದು, 2021 ರಲ್ಲಿ ಐಎಎಸ್ ಅಧಿಕಾರಿಯಾಗಿ ಭಡ್ತಿ ಹೊಂದಿ, ತುಮಕೂರು ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದಾರೆ.

  • ತಲ್ಲೂರು :ಮಾಜಿ ಗ್ರಾ.ಪಂ. ಸದಸ್ಯ ವಾಸುದೇವ ಖಾರ್ವಿ ನಿಧನ

    ತಲ್ಲೂರು :ಮಾಜಿ ಗ್ರಾ.ಪಂ. ಸದಸ್ಯ ವಾಸುದೇವ ಖಾರ್ವಿ ನಿಧನ

    ಕುಂದಾಪುರ ಮಿರರ್ ಸುದ್ದಿ…

    ಕುಂದಾಪುರ: ತಲ್ಲೂರು ಮಾಜಿ ಗ್ರಾಮ ಪಂಚಾಯತ್ ಸದಸ್ಯ ವಾಸುದೇವ ಖಾರ್ವಿ(61 )ಅವರು ತಲ್ಲೂರು ಕೋಟೆಬಾಗಿಲಿನಲ್ಲಿರುವ ತಮ್ಮ ಸ್ವಗ್ರಹದಲ್ಲಿ ಅಲ್ಪಕಾಲದ ಅಸೌಖ್ಯದಿಂದ ಜುಲೈ 13ರ ರಾತ್ರಿ ನಿಧನರಾದರು. ಮೀನುಗಾರಿಕಾ ವೃತ್ತಿಯಲ್ಲಿದ್ದ ಅವರು ಸಮಾಜ ಸೇವೆಯಲ್ಲೂ ಗುರುತಿಸಿಕೊಂಡಿದ್ದರು. ಮೃತರು ಪತ್ನಿ, ಓರ್ವ ಪುತ್ರಿ ಹಾಗೂ ಮಾಜಿ ಗ್ರಾ.ಪಂ.ಸದಸ್ಯ ಸುನೀಲ್ ಖಾರ್ವಿ ಸಹಿತ ಇಬ್ಬರು ಪುತ್ರರನ್ನು ಅಗಲಿದ್ದಾರೆ.

  • ಕುಂದಾಪುರ :ಲಯನ್ಸ್ ಕ್ಲಬ್ ಕುಂದಾಪುರ ಅಮೃತಧಾರ ವತಿಯಿಂದ ರೆಡ್ ಕ್ರಾಸ್ ಸಂಸ್ಥೆಗೆ ಗೌರವ

    ಕುಂದಾಪುರ :ಲಯನ್ಸ್ ಕ್ಲಬ್ ಕುಂದಾಪುರ ಅಮೃತಧಾರ ವತಿಯಿಂದ ರೆಡ್ ಕ್ರಾಸ್ ಸಂಸ್ಥೆಗೆ ಗೌರವ

    ಕುಂದಾಪುರ ಮಿರರ್ ಸುದ್ದಿ…

    ಕುಂದಾಪುರ :ಪ್ರತಿಷ್ಠಿತ ಅಂತರಾಷ್ಟ್ರೀಯ ಸೇವಾ ಸಂಸ್ಥೆಯಾದ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಕುಂದಾಪುರ ಇದರ ಅಧ್ಯಕ್ಷರಾದ ಜಯಕರ್ ಶೆಟ್ಟಿ ಅವರನ್ನು ಲಯನ್ಸ್ ಕ್ಲಬ್ ಕುಂದಾಪುರ ಅಮೃತಧಾರ ವತಿಯಿಂದ ಗೌರವಿಸಲಾಯಿತು.

    ಕುಂದಾಪುರ ರೆಡ್ ಕ್ರಾಸ್ ಸಂಸ್ಥೆಯ ಗಣನೀಯ ಸೇವೆಗಾಗಿ ಲಯನ್ಸ್ ಕ್ಲಬ್ ಪರವಾಗಿ ಮಾಜಿ ಜಿಲ್ಲಾ ಗವರ್ನರ್ ನೀಲಕಾಂತ ಎಂ ಹೆಗ್ಡೆಯವರು ಶಾಲು ಹೊದಿಸಿ ಫಲ ಪುಷ್ಪ ನೀಡಿ ಗೌರವಿಸಿ, ಸಂಸ್ಥೆಯಿಂದ ಮತ್ತಷ್ಟು ಸೇವಾ ಕಾರ್ಯಗಳು ಸಮಾಜಕ್ಕೆ ರೆಡ್ ಕ್ರಾಸ್ ಸಂಸ್ಥೆಯಿಂದ ಆಗಲಿ ಎಂದು ಶುಭ ಹಾರೈಸಿದರು.

    ಈ ಸಂದರ್ಭದಲ್ಲಿ ಲಯನ್ಸ್ ಅಧ್ಯಕ್ಷೆ ಆಶಾ ಶಿವರಾಮ ಶೆಟ್ಟಿ, ನಿಕಟ ಪೂರ್ವ ಅಧ್ಯಕ್ಷೆ ಸರಸ್ವತಿ ಪುತ್ರನ್ , ಕಾರ್ಯದರ್ಶಿ ಅಧಿಕಾರಿ ಕಲ್ಪನಾ ಭಾಸ್ಕರ್ ನಿಕಟಪೂರ್ವ ಕಾರ್ಯದರ್ಶಿ ಜಯಶೀಲ ಕಾಮತ್, ಲಯನ್ಸ್ ಹಿರಿಯರಾದ ಅರುಣ್ ಕುಮಾರ್ ಹೆಗ್ಡೆ, ರವಿರಾಜ್ ನಾಯಕ್, ಏಕನಾಥ ಬೋಳಾರ್, ಭೋಜರಾಜ್ ಶೆಟ್ಟಿ, ನವೀನ್ ಶೆಟ್ಟಿ , ಅಕ್ಷಯ ಹೆಗಡೆ, ಭಾರತೀಯ ರೆಡ್ ಕ್ರಾಸ್ ರೆಡ್ ಕ್ರಾಸ್ ಸಂಸ್ಥೆಯ ಪದಾಧಿಕಾರಿಗಳಾದ ಗಣೇಶ್ ಆಚಾರ್ಯ, ವೈ ಸೀತಾರಾಮ್ ಶೆಟ್ಟಿ, ಶಿವರಾಮ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

    ಡಾ.ವಾಣಿಶ್ರೀ ಐತಾಳ್ ಸ್ವಾಗತಿಸಿ, ಡಾ. ಮೈತ್ರಿ ಪ್ರಸ್ತಾಪಿಸಿದರು, ಶ್ರೀವಿದ್ಯಾ, ಡಾ. ಶಿಲ್ಪಾ ಸಹಕರಿಸಿದರು. ದೀಪಿಕಾ ಸಾಮಗ ವಂದಿಸಿದರು. ಚಂದ್ರಿಕಾ ಧನ್ಯ ಕಾರ್ಯಕ್ರಮ ನಿರೂಪಿಸಿದರು.