Category: ಸುದ್ದಿ

  • ಕೋಡಿ – ಸ್ವ ಸಹಾಯ ಸಂಘದ ಸದಸ್ಯರಿಗೆ ಸಾಮಥ್ರ್ಯ ಅಭಿವೃದ್ಧಿ ತರಬೇತಿ ಕಾರ್ಯಕ್ರಮ

    ಕೋಡಿ – ಸ್ವ ಸಹಾಯ ಸಂಘದ ಸದಸ್ಯರಿಗೆ ಸಾಮಥ್ರ್ಯ ಅಭಿವೃದ್ಧಿ ತರಬೇತಿ ಕಾರ್ಯಕ್ರಮ

    ಕುಂದಾಪುರ ಮಿರರ್ ಸುದ್ದಿ…

    ಕೋಟ: ಬ್ರಹ್ಮಾವರ ತಾಲೂಕಿನ ಕೋಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೋಡಿಬೆಂಗ್ರೆ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಸಭಾಂಗಣದಲ್ಲಿ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ , ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಅಭಿಯಾನ ಜಿಲ್ಲಾ ಪಂಚಾಯತ್ ಉಡುಪಿ, ತಾಲೂಕು ಪಂಚಾಯತ್ ಬ್ರಹ್ಮಾವರ ಹಾಗೂ ಸಮನ್ವಯ ಸಂಜೀವಿನಿ ಗ್ರಾಮ ಮಟ್ಟದ ಒಕ್ಕೂಟ , ಕೋಡಿ ಇವರ ಸಹಯೋಗದೊಂದಿಗೆ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟದ ಕಾರ್ಯಕಾರಿ ಸಮಿತಿ, ವಾರ್ಡ ಮಟ್ಟದ ಒಕ್ಕೂಟ ಹಾಗೂ ಸ್ವ ಸಹಾಯ ಸಂಘದ ಸದಸ್ಯರಿಗೆ ಸಾಮಥ್ರ್ಯ ಅಭಿವೃದ್ಧಿ ತರಬೇತಿ ಕಾರ್ಯಕ್ರಮ ಜರುಗಿಸಿದರು.

    ಕೋಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಪ್ರಭಾಕರ ಮೆಂಡನ್ ಹಾಗೂ ಅಭಿವೃದ್ಧಿ ಅಧಿಕಾರಿ ರವೀಂದ್ರ ರಾವ್ ಇವರು ದೀಪ ಬೆಳಗುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.

    ಸಂಪನ್ಮೂಲ ವ್ಯಕ್ತಿ ವೀಣಾ ಪಿ ಶ್ಯಾನುಭೋಗ, ತಾಲೂಕು ವ್ಯವಸ್ಥಾಪಕಿ ಸ್ವಾತಿ ಒಕ್ಕೂಟದ ಸದಸ್ಯರಿಗೆ ಸಮರ್ಪಕ ಮಾಹಿತಿಯನ್ನು ನೀಡಿದರು. ಕಾರ್ಯಕ್ರಮದಲ್ಲಿ ಒಕ್ಕೂಟದ ಉಪಾಧ್ಯಕರು ಜಯಶ್ರೀ, ಎಂಬಿಕೆ ಅನಿತಾ , ಎಲ್ ಸಿ ಆರ್ ಪಿ , ಸಂಘದ ಸದಸ್ಯರು ಹಾಗೂ ಗ್ರಾಮ ಪಂಚಾಯತ್ ಸಿಬ್ಬಂದಿ ಉಪಸ್ಥಿತರಿದ್ದರು.

  • ಮಣೂರು ಪಡುಕರೆ: ಪಿಯುಸಿ ಪ್ರಾರಂಭೋತ್ಸವ

    ಮಣೂರು ಪಡುಕರೆ: ಪಿಯುಸಿ ಪ್ರಾರಂಭೋತ್ಸವ

    ಕುಂದಾಪುರ ಮಿರರ್ ಸುದ್ದಿ…

    ಕೋಟ: ಅಧ್ಯಯನಶೀಲತೆ ಮತ್ತು ಶಿಸ್ತು ವಿದ್ಯಾರ್ಥಿ ಜೀವನದಲ್ಲಿ ರೂಢಿಸಿಕೊಳ್ಳಬೇಕಾದ ಜೀವನ ಮೌಲ್ಯಗಳು. ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿ ಹಾಗೂ ವ್ಯಕ್ತಿತ್ವ ವಿಕಸನಕ್ಕೆ ಈ ಗುಣಗಳು ಸಹಕಾರಿ”, ಎಂದು ಮಣೂರು ಪಡುಕರೆ ಸರಕಾರಿ ಪದವಿ ಪೂರ್ವ ಕಾಲೇಜು ಶೈಕ್ಷಣಿಕ ಸಮಿತಿಯ ಅಧ್ಯಕ್ಷ ಆನಂದ ಸಿ. ಕುಂದರ್ ಹೇಳಿದರು.

    ಕೋಟ ಪಡುಕರೆ ಪದವಿಪೂರ್ವ ಕಾಲೇಜಿನ ಈ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು ಹಾಗೂ ವಿದ್ಯಾರ್ಥಿಗಳಿಗೆ ಪಠ್ಯ ಪುಸ್ತಕಗಳನ್ನು ವಿತರಿಸುವ ಮೂಲಕ ಶೈಕ್ಷಣಿಕ ವರ್ಷಕ್ಕೆ ಸ್ವಾಗತ ಕೋರಿದರು.

    ಲಕ್ಷ್ಮೀ ಸೋಮ ಬಂಗೇರ ಪ್ರಥಮ ದರ್ಜೆ ಕಾಲೇಜು ಪಡುಕರೆಯ ಪ್ರಾಂಶುಪಾಲರಾದ ಡಾ. ಸುನೀತಾ, ಕಾಲೇಜು ಶೈಕ್ಷಣಿಕ ಸಮಿತಿಯ ಸದಸ್ಯರಾದ ಜಯರಾಮ ಶೆಟ್ಟಿ ಹಾಗೂ ಪ್ರೌಢಶಾಲಾ ಮುಖ್ಯೋಪಾಧ್ಯಾಯ ನಿರಂಜನ ನಾಯಕ್ ಮುಖ್ಯ ಅತಿಥಿಗಳಾಗಿದ್ದರು.

    ಪಿಯು ಪ್ರಾಂಶುಪಾಲ ಡೆನಿಸ್ ಬಾಂಜಿ ಸ್ವಾಗತಿಸಿ, ಪ್ರಾಸ್ತಾವಿಕ ಮಾತುಗಳನ್ನಾಡಿದರು. ಉಪನ್ಯಾಸಕ ಸತ್ಯನಾರಾಯಣ ಆಚಾರ್ ಕಾರ್ಯಕ್ರಮ ನಿರ್ವಹಿಸಿದರು. ಗೀತಾನಂದ ಫೌಂಡೇಶನ್‍ನ ರವಿಕಿರಣ್ ಸಹಕರಿಸಿದರು. ಕಾಲೇಜು ಉಪನ್ಯಾಸಕರು ಉಪಸ್ಥಿತರಿದ್ದರು.

  • ಕೋಡಿ ಕನ್ಯಾಣ – ಶೀಘ್ರದಲ್ಲೇ ಹಕ್ಕುಪತ್ರ ವಿತರಣೆ: ಜಯಪ್ರಕಾಶ್ ಹೆಗ್ಡೆ ವಿಶ್ವಾಸ

    ಕೋಡಿ ಕನ್ಯಾಣ – ಶೀಘ್ರದಲ್ಲೇ ಹಕ್ಕುಪತ್ರ ವಿತರಣೆ: ಜಯಪ್ರಕಾಶ್ ಹೆಗ್ಡೆ ವಿಶ್ವಾಸ

    ಕುಂದಾಪುರ ಮಿರರ್ ಸುದ್ದಿ…

    ಕೋಟ: ಬ್ರಹ್ಮಾವರ ತಾಲೂಕಿನ ಕೋಡಿ ಕನ್ಯಾಣದ ಭಾಗದ ಜನರ ಹಕ್ಕುಪತ್ರದ ಸಮಸ್ಯೆ ಮುಕ್ತಿ ದೊರಕಲಿದ್ದು ಕೂಡಲೇ ಹಕ್ಕುಪತ್ರವನ್ನು ವಿತರಣೆ ಮಾಡುವ ವಿಶ್ವಾಸ ಹೊಂದಿದ್ದೇವೆ ಎಂದು ರಾಜ್ಯದ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ.ಜಯಪ್ರಕಾಶ್ ಹೆಗ್ಡೆ ಹೇಳಿದರು.

    ಅವರು ಗುರುವಾರ ಕೋಡಿ ಕನ್ಯಾಣಕ್ಕೆ ಆಗಮಿಸಿ ಇಲ್ಲಿನ ಜನರ ಬಹುವರ್ಷದ ಬೇಡಿಕೆ ಹಕ್ಕುಪತ್ರ ಕುರಿತು ಸಾರ್ವಜನಿಕರೊಂದಿಗೆ ಮಾತನಾಡಿದರು.

    ಬ್ರಹ್ಮಾವರ ವಿಧಾನಸಭಾ ಕ್ಷೇತ್ರ ಇರುವಾಗಲೇ ಈ ಸಮಸ್ಯೆ ಬಗೆಹರಿಸಲು ನಾನು ಮತ್ತು ನಾಡೋಜ ಡಾ. ಜಿ.ಶಂಕರ್ ಪ್ರಯತ್ನಿಸಿದ್ದೇವೆ. ಅದಾದ ನಂತರ ರಾಜಕೀಯ ವಿದ್ಯಾಮಾನದಿಂದ ನಿರಂತವಾಗಿ ಇಲ್ಲಿನ ಸಾರ್ವಜನಿಕರು ನಮ್ಮ ಸಂಪರ್ಕದಲ್ಲಿದ್ದು, ನಾವುಗಳು ಅವರ ಸಮಸ್ಯೆಗಳ ಬಗ್ಗೆ ಹೆಚ್ಚಿನ ಗಮನ ಹರಿಸಿದ್ದೇವೆ. ಈಗಿನ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಸಹಕಾರದಿಂದ ಜನರ ಸಮಸ್ಯೆ ಬಗೆಹರಿಯುವ ಹಂತದಲ್ಲಿದೆ. ಅನಾದಿನ 103ಪ್ರಕರಣಗಳು ಇತ್ಯರ್ಥಗೊಳ್ಳಲಿದ್ದು, 178 ಪರಂಬೋಕು, ಸಮುದ್ರ ಪ್ರದೇಶ 132 ಪ್ರಕರಣಗಳು ಶೀಘ್ರದಲ್ಲೇ ಸರಕಾರದ ಗಮನ ಸೆಳೆದು ಬಗೆಹರಿಸುವ ವಿಶ್ವಾಸವನ್ನು ವ್ಯಕ್ತಪಡಿಸಿದರು.

    ಈ ಸಂದರ್ಭದಲ್ಲಿ ಸೆಂಟ್ಸ್ ಒಂದಕ್ಕೆ ಐದು ಸಾವಿರ ರೂಪಾಯಿ ಮಾನದಂಡ ಕಡಿತಗೊಳಿಸಲು ಸರಕಾರದ ಗಮನ ಸೆಳೆಯಲು ಜಯಪ್ರಕಾಶ್ ಹೆಗ್ಡೆ ಅವರಲ್ಲಿ ಮನವಿ ಮಾಡಿದ ಗ್ರಾಮಸ್ಥರು, ನಗರ ವ್ಯಾಪ್ತಿಗೆ ಸೆಂಟ್ಸ್ 600 ರೂಪಾಯಿ ಇದ್ದು,ಗ್ರಾಮೀಣ ಭಾಗದಲ್ಲಿ 250 ರೂಪಾಯಿ ಇದ್ದು, ಅದೇ ಮಾನದಂಡದ ಕೋಡಿಗೂ ಅನ್ವಯಿಸಲಿ. ಜತೆಗೆ ಹಂಗಾರಕಟ್ಟೆ ಅಳಿವೆಯಿಂದ ಕೋಡಿ ಕನ್ಯಾಣ ಭಾಗದ 3ಕಿಮೀ ವ್ಯಾಪ್ತಿಯ ಜೆಟ್ಟಿ ಹೂಳೆತ್ತಿ ಅಭಿವೃದ್ಧಿ ಪಡಿಸುವ ಕುರಿತಂತೆ ಪ್ರಸ್ತುತ ಸರಕಾರದ ಗಮನ ಸೆಳೆಯಲು ಮೀನುಗಾರ ಮುಖಂಡರು ಜಯಪ್ರಕಾಶ್ ಹೆಗ್ಡೆ ಅವರಲ್ಲಿ ಮನವಿ ಮಾಡಿದರು. ಈ ಕುರಿತಂತೆ ಬಂದರು ಮತ್ತು ಮೀನುಗಾರಿಕೆ, ಸಣ್ಣ ನೀರಾವರಿ ಇಲಾಖೆ ಸಚಿವರ ಜತೆ ಚರ್ಚೆ ನಡೆಸುತ್ತೇನೆ ಎಂದು ಭರವಸೆ ನೀಡಿದರು.

    ಕೋಡಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಲಕ್ಷ್ಮಣ್ ಸುವರ್ಣ, ಕೋಡಿ ಮೀನುಗಾರಿಕಾ ಸಹಕಾರಿ ಸಂಘದ ಅಧ್ಯಕ್ಷ ಅಶೋಕ್ ತಿಂಗಳಾಯ, ಕೋಡಿ ಗ್ರಾಮ ಪಂಚಾಯಿತಿ ಸದಸ್ಯ ಅಂತೋನಿ ಡಿ.ಸೋಜ, ಸ್ಥಳೀಯರಾದ ಚಂದ್ರ ಕಾಂಚನ್, ಕೃಷ್ಣಪ್ಪ ಬಂಗೇರ, ಕೃಷ್ಣ ಖಾರ್ವಿ, ಆಶಾ ಹಾಗೂ ಹೆಗ್ಡೆ ಅಭಿಮಾನಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.

  • ಮಾಸ್ಟರ್ ಅಥ್ಲೆಟಿಕ್ ಪಟುಗೆ ಶ್ರೀ ಕ್ಷೇತ್ರ ಅಮೃತೇಶ್ವರಿ ದೇವಸ್ಥಾನ ವತಿಯಿಂದ ಗೌರವ

    ಮಾಸ್ಟರ್ ಅಥ್ಲೆಟಿಕ್ ಪಟುಗೆ ಶ್ರೀ ಕ್ಷೇತ್ರ ಅಮೃತೇಶ್ವರಿ ದೇವಸ್ಥಾನ ವತಿಯಿಂದ ಗೌರವ

    ಕುಂದಾಪುರ ಮಿರರ್ ಸುದ್ದಿ…

    ಕೋಟ: ಇತ್ತೀಚಿಗೆ ಮಲೇಷಿಯಾದಲ್ಲಿ ನಡೆದ ಜೋಹಾರ್ ಸಿಂಗಾಪುರ ಮಾಸ್ಟರ್ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ಕೋಟದ ದಿನೇಶ್ ಗಾಣಿಗ ಒಂದು ಬೆಳ್ಳಿ, ಕಂಚಿನ ಪದಕ ವಿಜೇತರಾಗಿ ಶುಕ್ರವಾರ ಹುಟ್ಟೂರಿಗೆ ಮರಳಿದರು. ಈ ಹಿನ್ನಲ್ಲೆಯಲ್ಲಿ ಕೋಟ ಅಮೃತೇಶ್ವರಿ ದೇವಸ್ಥಾನದ ವತಿಯಿಂದ ಸ್ವಾಗತಿಸಿ ಶಾಲು ಹೋದಿಸಿ ಗೌರವ ಸಲ್ಲಿಸಿತು.

    ಈ ಸಂದರ್ಭದಲ್ಲಿ ದೇವಳದ ಟ್ರಸ್ಟಿ ಚಂದ್ರ ಪೂಜಾರಿ, ಮಾಜಿ ಟ್ರಸ್ಟಿ ಚಂದ್ರ ಆಚಾರ್ಯ, ಪ್ರದಾನ ಅರ್ಚಕ ಪ್ರಕಾಶ್ ಜೋಗಿ, ಪಂಚವರ್ಣ ಸಂಸ್ಥೆಯ ಸ್ಥಾಪಾಕಧ್ಯಕ್ಷ ಸುರೇಶ್ ಗಾಣಿಗ, ಕೋಟ ಹಿ.ಜಾ.ವೇ ಮಾಜಿ ಅಧ್ಯಕ್ಷ ಸುರೇಶ್ ಸಮತಾ, ಕೋಟ ಆಟೋ ಚಾಲಕ ಸಂಘದ ಅಧ್ಯಕ್ಷ ಅಣ್ಣಪ್ಪ ಪೂಜಾರಿ ಮತ್ತಿತರರು ಉಪಸ್ಥಿತರಿದ್ದರು.

  • ಕೋಟ ಸೇವಾಸಂಗಮ ಶಿಶು ಮಂದಿರದಲ್ಲಿ ಪ್ರಾರಂಭೋತ್ಸವ

    ಕೋಟ ಸೇವಾಸಂಗಮ ಶಿಶು ಮಂದಿರದಲ್ಲಿ ಪ್ರಾರಂಭೋತ್ಸವ

    ಕುಂದಾಪುರ ಮಿರರ್ ಸುದ್ದಿ…

    ಕೋಟ: ಕೋಟದ ಸೇವಾಸಂಗಮ ಶಿಶುಮಂದಿರ ಇಲ್ಲಿ ಈ ವರ್ಷದ ಶೈಕ್ಷಣಿಕ ಆರಂಭೋತ್ಸವ ಗುರುವಾರ ನಡೆಯಿತು.

    ಸೇವಾಸಂಗಮ ಶಿಶುಮಂದಿರ ಟ್ರಸ್ಟಿಗಳು ಹಾಗೂ ಅಲ್ಲಿನ ಮಾತಾಜಿ ಪುಟಾಣಿಗಳನ್ನು ಆರತಿ ಬೆಳಗಿ, ಅಕ್ಷತೆ ಹಾಕಿ ಸ್ವಾಗತಿಸಿ, ನಂತರ ಪುಟಾಣಿಗಳಿಗೆ ಸಿಹಿಹಂಚಿ ಸಂಭ್ರಮಿಸಿಕೊಂಡರು.

    ಟ್ರಸ್ಟಿ ಅಧ್ಯಕ್ಷೆ ನಾಗಲಕ್ಷ್ಮೀ ಹೆಗ್ಡೆ,ಕಾರ್ಯದರ್ಶಿ ಸುಷ್ಮಾ ಹೊಳ್ಳ, ಟ್ರಸ್ಟಿಗಳಾದ ಅಮೃತ್ ಜೋಗಿ, ರವೀಂದ್ರ ಕೋಟ, ಮಾತಾಜಿ ದೀಪ,ಸಹಾಯಕಿ ಜ್ಯೋತಿ ಮತ್ತಿತರರು ಉಪಸ್ಥಿತರಿದ್ದರು.

  • ಕುಂದಾಪುರ :ಸರಕಾರಿ ಹಿರಿಯ ಪ್ರಾಥಮಿಕ ಶಾಲೆ – ಶಾಲಾ ಪ್ರಾರಂಭೊತ್ಸವ ಉಚಿತ ಪಠ್ಯ ಪುಸ್ತಕ, ಸಮವಸ್ತ್ರ ಮತ್ತು ನೋಟ್‌ ಪುಸ್ತಕ ವಿತರಣೆ

    ಕುಂದಾಪುರ :ಸರಕಾರಿ ಹಿರಿಯ ಪ್ರಾಥಮಿಕ ಶಾಲೆ – ಶಾಲಾ ಪ್ರಾರಂಭೊತ್ಸವ ಉಚಿತ ಪಠ್ಯ ಪುಸ್ತಕ, ಸಮವಸ್ತ್ರ ಮತ್ತು ನೋಟ್‌ ಪುಸ್ತಕ ವಿತರಣೆ

    ಕುಂದಾಪುರ ಮಿರರ್ ಸುದ್ದಿ…

    ಕುಂದಾಪುರ :ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬೈಲೂರು ಕುಂದಾಪುರ ವಲಯ ಇಲ್ಲಿನ ಶಾಲಾ ಎಸ್‌ ಡಿ ಎಮ್‌ ಸಿ ಅಧ್ಯಕ್ಷರಾದ ಸಂತೋಷ ಕುಮಾರ ಅಧ್ಯಕ್ಷತೆಯಲ್ಲಿ ಶಾಲಾ ಪ್ರಾರಂಭೊತ್ಸವದ ಅಂಗವಾಗಿ ಉಚಿತ ಪಠ್ಯ ಪುಸ್ತಕ, ಸಮವಸ್ತ್ರ ಮತ್ತು ನೋಟ್‌ ಪುಸ್ತಕ ವಿತರಣಾ ಸಮಾರಂಭವು ನಡೆಯಿತು.

    ಶಾಲಾ ಮಕ್ಕಳಿಗೆ ಸುಮಾರು ರೂ. 35,000/ ವೆಚ್ಚದಲ್ಲಿ ಉಚಿತ ನೋಟ ಪುಸ್ತಕ ಕೊಡುಗೆಯಾಗಿ ನೀಡಿದ ಶಾಲಾ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರು, ರೆಡ್ ಕ್ರಾಸ್‌ ಸಂಸ್ಥೆ ಕುಂದಾಪುರ ಘಟಕದ ಸಭಾಪತಿಗಳಾದ ಜಯಕರ ಶೆಟ್ಟಿ ಮೂಡುಬೈಲೂರು ಇವರು ಮಾತನಾಡುತ್ತ, “ನಮ್ಮ ಶಾಲೆ ನಮ್ಮೂರ ಹೆಮ್ಮೆ. ಈ ಶಾಲೆ ಖಾಸಗಿ ಶಾಲೆಗಳಿಗಿಂತಲೂ ಅತ್ಯುತ್ತಮ ಮೂಲಭೂತ ಸೌಕರ್ಯವನ್ನು ಹೊಂದಿದ್ದು ಇದರ ಸದುಪಯೋಗವನ್ನು ಊರವರು ಪಡೆದುಕೊಳ್ಳ ಬೇಕು” ಎಂದು ಅಭಿಪ್ರಾಯ ಪಟ್ಟರು.

    ಈ ಸಂದರ್ಭದಲ್ಲಿ ಶಾಲಾ ಎಸ್‌ ಡಿ ಎಮ್‌ ಸಿ ಸದಸ್ಯರಾದ ಜೈವೀರ ಶೆಟ್ಟಿ, ರಚನಾ ಕ್ರೋಡಬೈಲೂರಿನ ಕಾರ್ಯದರ್ಶಿ ಸುಧಾಕರ ಬೈಲೂರು, ಉಪಸ್ಥಿತರಿದ್ದರು.

    ಶಾಲಾ ಮುಖು ಶಿಕ್ಷಕಿ ಗಿರಿಜಾ ಡಿ ಸ್ವಾಗತಿಸಿದರು. ಸಹಶಿಕ್ಷಕ ಆನಂದ ಕುಲಾಲ ಪ್ರಸ್ತವನೆಗೈದರು. ಸಹ ಶಿಕ್ಷಕಿ ಸಂದ್ಯಾ ಪಠ್ಯಪುಸ್ತಕ ಮತ್ತು ನೋಟ್‌ ಪುಸ್ತಕ ವಿತರಣೆಗೆ ಸಹಕರಿಸಿದರು. ಶಾಲಾ ಪ್ರೌಢ ಶಾಲಾ ವಿಭಾಗದ ಸಹ ಶಿಕ್ಷಕ ನಾರಾಯಣ ಅಡಿಗ ವಂದಿಸಿದರು. ಸಹ ಶಿಕ್ಷಕ ಸಂತೋಷ ವಂದಿಸಿದದರು.

  • ಕೋಟ ಪಡುಕರೆ ಸಂಯುಕ್ತ ಪ್ರೌಢಶಾಲೆ ಪ್ರಾರಂಭೋತ್ಸವ

    ಕೋಟ ಪಡುಕರೆ ಸಂಯುಕ್ತ ಪ್ರೌಢಶಾಲೆ ಪ್ರಾರಂಭೋತ್ಸವ

    ಕುಂದಾಪುರ ಮಿರರ್ ಸುದ್ದಿ…

    ಕೋಟ: ಕೋಟದ ಮಣೂರು ಪಡುಕರೆ ಸಂಯುಕ್ತ ಪ್ರೌಢಶಾಲೆ ಇಲ್ಲಿ ಈ ವರ್ಷದ ಪ್ರಾರಂಭೋತ್ಸವನ್ನು ವಿಶೇಷವಾಗಿ ಆಚರಿಸಿಕೊಳ್ಳಲಾಯಿತು. ಉಡುಪಿ ಜಿಲ್ಲೆಯಲ್ಲಿ ಅತಿ ಹೆಚ್ಚು ಮಕ್ಕಳನ್ನು ಹೊಂದಿರುವ ಮಣೂರು ಶಾಲೆಯಲ್ಲಿ ಪುಟಾಣಿಗಳಿಂದ ಹಿಡಿದು ಹೈಸ್ಕೂಲ್ ನವರೆಗಿನ ವಿದ್ಯಾರ್ಥಿಗಳು ಸಾಲು ಸಾಲಾಗಿ ನಿಂತು ಬಲೂನ್ ಗಳ ಶೃಂಗಾರದ ನಡುವೆ ಸ್ವಾಗತಿಸಿಕೊಳ್ಳಲಾಯಿತು.

    ಶಾಲೆಯ ಮಹಾಪೋಷಕ ಗೀತಾನಂದ ಫೌಂಡೇಶನ್ ಪ್ರವರ್ತಕ ಆನಂದ್ ಸಿ ಕುಂದರ್ ಮಕ್ಕಳಿಗೆ ಸಿಹಿ ತಿಂಡಿ ನೀಡಿ ನಗುವಿನೊಂದಿಗೆ ಬರಮಾಡಿಕೊಂಡರು.

    ಈ ಸಂದರ್ಭದಲ್ಲಿ ಅಂಕದಕಟ್ಟೆ ನಿವೃತ್ತ ಶಿಕ್ಷಕ ಬಾಲಕೃಷ್ಣ ಶೆಟ್ಟಿ,ಶಾಲಾ ಮುಖ್ಯ ಶಿಕ್ಷಕಿ ಜಯಂತಿ, ಪ್ರೌಢಶಾಲಾ ವಿಭಾಗದ ಮುಖ್ಯ ಶಿಕ್ಷಕ, ನಿರಂಜನ್ ನಾಯಕ್, ಪಿಯು ಕಾಲೇಜಿನ ಪ್ರಾಂಶುಪಾಲ ಡೆನಿಸ್ ಬಾಂಝಾ, ಉಪನ್ಯಾಸಕ ಸತ್ಯನಾರಾಯಣ ಆಚಾರ್ಯ, ಪ್ರೌಢಶಾಲಾ ಸಹ ಶಿಕ್ಷಕರಾದ ರಾಮದಾಸ್ ನಾಯಕ್, ಶ್ರೀಧರ ಶಾಸ್ತ್ರಿ, ಪ್ರಾಥಮಿಕ ಶಾಲಾ ಎಸ್‍ಡಿಎಂಸಿ ಅಧ್ಯಕ್ಷ ನಾಗರಾಜ್, ಪ್ರೌಢಶಾಲಾ ವಿಭಾಗದ ಎಸ್‍ಡಿಎಂಸಿ ಅಧ್ಯಕ್ಷ ಜಯರಾಮ ಶೆಟ್ಟಿ , ಗೀತಾನಂದ ಫೌಂಡೇಶನ್ ಸಮಾಜಕಾರ್ಯ ವಿಭಾಗದ ರವಿಕಿರಣ್ ಕಾಂಚನ್ ಮತ್ತಿತರರು ಉಪಸ್ಥಿತರಿದ್ದರು.

  • ವಡ್ಡರ್ಸೆ ಪ್ರೌಢ ಶಾಲೆಯಲ್ಲಿ ಪ್ರಾರಂಭೋತ್ಸವ ಸಂಭ್ರಮ ಜ್ಞಾನ ಸೌಧದಲ್ಲಿ ಮಕ್ಕಳ ಕಲರವ

    ವಡ್ಡರ್ಸೆ ಪ್ರೌಢ ಶಾಲೆಯಲ್ಲಿ ಪ್ರಾರಂಭೋತ್ಸವ ಸಂಭ್ರಮ ಜ್ಞಾನ ಸೌಧದಲ್ಲಿ ಮಕ್ಕಳ ಕಲರವ

    ಕುಂದಾಪುರ ಮಿರರ್ ಸುದ್ದಿ…

    ಕೋಟ: ಕಲಿಕೆ ಪ್ರಕ್ರಿಯೆಯ ಮೂಲಕ ಶಾಲಾ ಶಿಕ್ಷಣದ ಆರಂಭೋತ್ಸವ ಕಾರ್ಯಕ್ರಮ ಹಬ್ಬದ ವಾತವರಣ ಮಾಡಿಸಿದೆ. ಸುತ್ತ ಮುತ್ತಲಿನ ಪರಿಸರದಲ್ಲಿ ಪಠ್ಯ ಮತ್ತು ಸಹ ಪಠ್ಯ ಚಟುವಟಿಕೆಗೆ ತನ್ನದೇ ರೀತಿಯಲ್ಲಿ ಕೆಲಸ ನಿರ್ವಹಿಸುತ್ತಿರುವುದು ಶ್ಲಾಘನೀಯ. ಶೈಕ್ಷಣಿಕ ಕ್ಷೇತ್ರದಲ್ಲಿ ಉತ್ತಮ ಗುಣಮಟ್ಟದ ಶ್ರೇಯಾಂಕಿತ ಸ್ಥಾನ ಪಡೆಯುತ್ತಿರುವುದು ಸಂಸ್ಥೆಯ ಬೆಳವಣಿಗೆಯ ಹೆಗ್ಗಳಿಕೆ. ಶಾಲಾ ಬೆಳವಣಿಗೆ ಸಮುದಾಯದ ನೆರವಿನೊಂದಿಗೆ ಸಾಗಬೇಕು ಎಂದು ಹಳೆವಿದ್ಯಾರ್ಥಿ ಸಂಘ ಅಧ್ಯಕ್ಷ ಚಂದ್ರ ಶೆಟ್ಟಿಯಾಳಹಕ್ಲು ಹೇಳಿದರು.

    ಸರಕಾರಿ ಪ್ರೌಢ ಶಾಲೆ ವಡ್ಡರ್ಸೆ ಇಲ್ಲಿ 2023 – 24 ನೇ ಶೈಕ್ಷಣಿಕ ಸಾಲಿನ ಆರಂಭೋತ್ಸವ ಬುಧವಾರ ಸಂಪನ್ನಗೊಂಡಿತು. ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷ ಮಂಜುನಾಥ ಮಧುವನ ಮಾತನಾಡಿ, ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ಶೈಕ್ಷಣಿಕ ಚಟುವಟಿಕೆಯ ಅದ್ದೂರಿಯಾಗಿ ನಡೆಯುತ್ತಿದ್ದು , ಈಗಾಗಲೇ ಪಠ್ಯ ಪುಸ್ತಕ , ಸಮವಸ್ತ್ರ ದೊರೆಯುತ್ತಿರುವುದು ಅಭ್ಯಾಸಕ್ಕೆ ಬಹಳಷ್ಟು ಅನುಕೂಲವಾಗಲಿದೆ . ಶಾಲಾ ಮಕ್ಕಳು ಬೇಸಿಗೆ ರಜೆಯನ್ನು ಮುಗಿಸಿಕೊಂಡು, ಶಿಕ್ಷಣದ ಚಟುವಟಿಕೆಗೆ ಮಕ್ಕಳನ್ನು ಅಣಿಗೊಳಿಸುವುದು ಶಿಕ್ಷಕರ ಕರ್ತವ್ಯವಾಗಬೇಕು ಎಂದರು. ಸಂಸ್ಥೆಯ ಮುಖ್ಯ ಶಿಕ್ಷಕರಾದ ಗಾಯತ್ರಿದೇವಿ.ಎಂ. ಪ್ರಾಸ್ತಾವಿಕ ಮಾತನಾಡಿದರು. ಶಾಲಾ ಮಕ್ಳಳು ಮತ್ತು ಪೋಷಕರು ಬಣ್ಣದ ಚಿಟ್ಟೆಯ ಚಿತ್ರವನ್ನು ಅಂಟಿಸುವ ಮೂಲಕ ಹರ್ಷವನ್ನು ವ್ಯಕ್ತಪಡಿಸಿದರು. ಇದೇ ಸಂದರ್ಭದಲ್ಲಿ ಪಠ್ಯ ಪುಸ್ತಕ, ಸಮವಸ್ತ, ಲೇಖನವನ್ನು ಮಕ್ಕಳಿಗೆ ನೀಡಲಾಯಿತು. ಹಳೆ ವಿದ್ಯಾರ್ಥಿ ರವಿ ಬನ್ನಾಡಿ ವೇದಿಕೆಯಲ್ಲಿದ್ದರು. ಸಹಶಿಕ್ಷಕ ಆನಂದ ಶೆಟ್ಟಿ ಸ್ವಾಗತಿಸಿದರು, ಕನ್ನಡ ಭಾಷಾ ಶಿಕ್ಷಕಿ ಗೀತಾ ವಂದಿಸಿದರು. ಶಿಕ್ಷಕ ಹೆರಿಯ ಮಾಷ್ಟರ್ ಕಾರ್ಯಕ್ರಮ ನಿರ್ವಹಿಸಿದರು.

  • ಕುಂದಾಪುರ :ಹೆಸಕುತ್ತೂರು ಪ್ರಾಥಮಿಕ ಶಾಲೆ: ಸಂಭ್ರಮದ ಪ್ರಾರಂಭೋತ್ಸವ

    ಕುಂದಾಪುರ :ಹೆಸಕುತ್ತೂರು ಪ್ರಾಥಮಿಕ ಶಾಲೆ: ಸಂಭ್ರಮದ ಪ್ರಾರಂಭೋತ್ಸವ

    ಕುಂದಾಪುರ ಮಿರರ್ ಸುದ್ದಿ…

    ಕೋಟ: ಗುಣಮಟ್ಟದ ಶಿಕ್ಷಣಕ್ಕೆ ಹೆಸರಾಗಿರುವ ಕುಂದಾಪುರ ವಲಯದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಹೆಸಕುತ್ತೂರು ಇಲ್ಲಿ 2023 – 24 ನೇ ಸಾಲಿನ ಹೊಸ ಶೈಕ್ಷಣಿಕ ವರ್ಷಕ್ಕೆ ಸಂಭ್ರಮದ ಚಾಲನೆ ನೀಡಲಾಯಿತು.

    ಶಾಲಾ ಎಸ್‍ಡಿಎಂಸಿ ಅಧ್ಯಕ್ಷರಾದ ಕೃಷ್ಣ ಕೆದ್ಲಾಯ ಪ್ರಾರಂಭೋತ್ಸವಕ್ಕೆ ಚಾಲನೆ ನೀಡಿದರು.

    ಶೈಕ್ಷಣಿಕ ಘೋಷಣೆ ,ಬೇಂಡು ವಾದನದೊಂದಿಗೆ ಬಲೂನು ಹಿಡಿದು, ಬಣ್ಣದ ಮುಖವಾಡಗಳನ್ನು ಧರಿಸಿ ವಿದ್ಯಾರ್ಥಿಗಳು ಊರ ಬೀದಿಗಳ ಮುಖಾಂತರ ಮೆರವಣಿಗೆಯಲ್ಲಿ ಸಾಗಿದರು. ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ಶಾಲೆಯ ಎಲ್ಲಾ ವಿದ್ಯಾರ್ಥಿಗಳಿಗೆ ಸರಕಾರದ ವತಿಯಿಂದ ಒದಗಿಸಲಾದ ಪಠ್ಯ ಪುಸ್ತಕ ಹಾಗೂ ಸಮವಸ್ತ್ರ ವಿತರಣೆ ಮಾಡಲಾಯಿತು.

    ಸ್ಥಳೀಯ ಗ್ರಾಮ ಪಂಚಾಯಿತ್ ಸದಸ್ಯರಾದ ರಾಘವೇಂದ್ರ ಶೆಟ್ಟಿ ಹಾಗೂ ಅಶೋಕ ಮೊಗವೀರ, ಎಸ್‍ಡಿಎಂಸಿ ಉಪಾಧ್ಯಕ್ಷೆ ಗಾಯತ್ರಿ ಆಚಾರ್, ಎಸ್‍ಡಿಎಂಸಿ ಸದಸ್ಯರು, ಪೋಷಕರು ಹಾಗೂ ಶಾಲಾ ಶಿಕ್ಷಕರಾದ ಸಂಜೀವ ಎಂ, ಜಯರಾಮ ಶೆಟ್ಟಿ, ವಿಜಯಾ ಆರ್,ವಿಜಯ ಶೆಟ್ಟಿ, ರವೀಂದ್ರ ನಾಯಕ್ ಉಪಸ್ಥಿತರಿದ್ದರು.

    ಶಾಲಾ ಮುಖ್ಯ ಶಿಕ್ಷಕ ಶೇಖರಕುಮಾರ್ ಸ್ವಾಗತಿಸಿದರು. ಅಶೋಕ ತೆಕ್ಕಟ್ಟೆ ನಿರೂಪಿಸಿದರು. ಜಯಲಕ್ಷ್ಮಿ ಬಿ ವಂದಿಸಿದರು.

  • ಕುಂದಾಪುರ :ಬಸ್ರೂರು ನಿವೇದಿತಾ ಪ್ರೌಢ ಶಾಲೆಯಲ್ಲಿ ಪ್ರಾರಂಭೋತ್ಸವ

    ಕುಂದಾಪುರ :ಬಸ್ರೂರು ನಿವೇದಿತಾ ಪ್ರೌಢ ಶಾಲೆಯಲ್ಲಿ ಪ್ರಾರಂಭೋತ್ಸವ

    ಕುಂದಾಪುರ ಮಿರರ್ ಸುದ್ದಿ…

    ಕುಂದಾಪುರ: ಇಂದು ಎಲ್ಲೆಡೆ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ತರಗತಿಗಳ ಆರಂಭಗೊಂಡಿದ್ದು, ವಿದ್ಯಾರ್ಥಿ ಗಳನ್ನು ಆಕರ್ಷಿಸಲು ಶಾಲಾ ಆಡಳಿತ ಸಮಿತಿ ಕಸರತ್ತು ನಡೆಸಿರುವುದು ಕಂಡುಬಂದಿದೆ.

    ಕುಂದಾಪುರ ತಾಲೂಕಿನ ಬಸ್ರೂರು ನಿವೇದಿತಾ ಪ್ರೌಢಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ ನಡೆಯಿತು. ಬಸ್ರೂರು ಗ್ರಾಮ ಪಂಚಾಯತ್ ಅಧ್ಯಕ್ಷ ಬೇಳೂರು ದಿನಕರ ಶೆಟ್ಟಿ ವಿದ್ಯಾರ್ಥಿಗಳಿಗೆ ಹೂ ನೀಡಿ ಬರಮಾಡಿಕೊಂಡರು.

    ಶಾಲಾಭಿವೃದ್ಧಿ ಮತ್ತು ಮೇಲುಸ್ತವಾರಿ ಸಮಿತಿ ಅಧ್ಯಕ್ಷ ಮುಂಬಾರು ದಿನಕರ ಶೆಟ್ಟಿ, ಸದಸ್ಯ ನಾಗರಾಜ ಪೂಜಾರಿ ಹಾಗೂ ಮುಖ್ಯ ಶಿಕ್ಷಕರು, ಎಲ್ಲಾ ಅಧ್ಯಾಪಕರು ಉಪಸ್ಥಿತರಿದ್ದು ಸಹಕರಿಸಿದರು.