Category: ಸುದ್ದಿ

  • ಕುಂದಾಪುರ :ಎಸ್.ಎಸ್.ಎಲ್.ಸಿ ಫಲಿತಾಂಶ – ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ವಿದ್ಯಾರ್ಥಿನಿ ಶ್ರೀಲಹರಿ ರಾಜ್ಯಮಟ್ಟದಲ್ಲಿ ದ್ವಿತೀಯ ಹಾಗೂ ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ

    ಕುಂದಾಪುರ :ಎಸ್.ಎಸ್.ಎಲ್.ಸಿ ಫಲಿತಾಂಶ – ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ವಿದ್ಯಾರ್ಥಿನಿ ಶ್ರೀಲಹರಿ ರಾಜ್ಯಮಟ್ಟದಲ್ಲಿ ದ್ವಿತೀಯ ಹಾಗೂ ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ

    ಕುಂದಾಪುರ ಮಿರರ್ ಸುದ್ದಿ…

    ಕುಂದಾಪುರ :2022-23ನೇ ಸಾಲಿನ ಎಸ್.ಎಸ್.ಎಲ್.ಸಿ ಫಲಿತಾಂಶದಲ್ಲಿ ಕುಂದಾಪುರ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ವಿದ್ಯಾರ್ಥಿನಿ ಶ್ರೀಲಹರಿ 624 ಅಂಕಗಳಿಸಿ ರಾಜ್ಯಮಟ್ಟದಲ್ಲಿ ದ್ವಿತೀಯ ಹಾಗೂ ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದ ಏಕೈಕ ವಿದ್ಯಾರ್ಥಿನಿಯಾಗಿದ್ದಾರೆ.

    ಇವರು ಹೆಮ್ಮಾಡಿ ಸಮೀಪದ ಜಾಲಾಡಿ ನಿವಾಸಿ ವಾದ್ಯ ತಂಡ ನಡೆಸುತ್ತಿರುವ ಶ್ರೀಧರ್ ದೇವಾಡಿಗ ಮತ್ತು ಕುಂದಾಪುರ ನಗರ ಯೋಜನಾ ಪ್ರಾಧಿಕಾರದ ಸಿಬ್ಬಂದಿ ಲಲಿತಾ ಎಸ್. ದೇವಾಡಿಗ ದಂಪತಿಗಳ ಪುತ್ರಿ.

    ಶ್ರೀಲಹರಿ ಸಹೋದರಿ ಶ್ರೀಲಕ್ಷಾ ಬಿಎಸ್ಸಿ ಮುಗಿಸಿದ್ದಾರೆ. ತಂಗಿಗೆ ಮಾರ್ಗದರ್ಶನ ಮಾಡಿದ್ದಾರೆ. ತಂದೆ-ತಾಯಿ ಕೂಡಾ ಮಗಳ ಆಸಕ್ತಿಗೆ ಅನುಗುಣವಾಗಿ ಪ್ರೋತ್ಸಾಹ ನೀಡಿದ್ದಾರೆ.

    ಯಾವುದೇ ಟ್ಯೂಷನ್‍ಗೆ ಹೋಗಿಲ್ಲ. ಶಾಲೆಯಲ್ಲಿ ಶಿಕ್ಷಕವೃಂದದವರ ಮಾರ್ಗದರ್ಶನ, ಮನೆಯಲ್ಲಿ ತಂದೆ-ತಾಯಿ, ಅಕ್ಕ ತುಂಬಾ ಮಾರ್ಗದರ್ಶನ ಮಾಡುತ್ತಿದ್ದರು. ಆ ದಿನದ ಪಾಠ ಆ ದಿನವೇ ಓದುತ್ತಿದ್ದೆ. ಈಗ ಫಲಿತಾಂಶ ನೋಡಿ ತುಂಬಾ ಖುಷಿಯಾಯಿತು. ಮುಂದೆ ಸೈನ್ಸ್ ತಗೆದುಕೊಂಡು ವೈದ್ಯೆ ಆಗಬೇಕು ಎನ್ನುವ ಕನಸಿದೆ ಎನ್ನುತ್ತಾರೆ.

    ಶ್ರೀಲಹರಿ ತಾಯಿ ಲಲಿತಾ ಎಸ್. ದೇವಾಡಿಗ ಮಗಳ ಸಾಧನೆಗೆ ಆಕೆಯ ಆಸಕ್ತಿ, ಶ್ರದ್ದೆಯಿಂದ ಆವತ್ತಿನ ಪಾಠವನ್ನು ಅಂದೇ ಅಭ್ಯಾಸ ಮಾಡುತ್ತಿದ್ದಳು. ನಾವು ಅವಳಿಗೆ ಪ್ರೋತ್ಸಾಹ ಕೊಡುತ್ತಿದ್ದೇವು. 625 ಅಂಕ ಬರುತ್ತದೆ ಎನ್ನುವ ನಿರೀಕ್ಷೆ ಇತ್ತು. ತುಂಬಾ ಖುಷಿಯಾಗುತ್ತಿದೆ ಎನ್ನುತ್ತಾರೆ.

  • ಕುಂದಾಪುರ : ಎಕ್ಸಲೆಂಟ್ ಪ್ರೌಢಶಾಲೆ ಸುಣ್ಣಾರಿ. ಎಸ್.ಎಸ್.ಎಲ್.ಸಿ ಫಲಿತಾಂಶ: ಶೇ. 98%

    ಕುಂದಾಪುರ : ಎಕ್ಸಲೆಂಟ್ ಪ್ರೌಢಶಾಲೆ ಸುಣ್ಣಾರಿ. ಎಸ್.ಎಸ್.ಎಲ್.ಸಿ ಫಲಿತಾಂಶ: ಶೇ. 98%

    ಕುಂದಾಪುರ ಮಿರರ್ ಸುದ್ದಿ…

    ಕುಂದಾಪುರ :ಕರ್ನಾಟಕ ಪ್ರೌಢಶಿಕ್ಷಣ ಮಂಡಳಿಯು 2022-23ನೇ ಸಾಲಿನ ಮೇ.8 ರಂದು ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳ ಫಲಿತಾಂಶವನ್ನು ಪ್ರಕಟಿಸಿದ್ದು, ಎಕ್ಸಲೆಂಟ್ ಪ್ರೌಢಶಾಲೆಯು ಶೇ.98 ಫಲಿತಾಂಶ ದಾಖಲಿಸಿಕೊಂಡಿದೆ.

    ಸಂಸ್ಥೆಯ ವಿದ್ಯಾರ್ಥಿನಿ ತನ್ವಿ ಶೆಟ್ಟಿ ಇವರು 625 ಕ್ಕೆ 611 ಅಂಕ ಪಡೆದು ಶಾಲೆಗೆ ಪ್ರಥಮ ಸ್ಥಾನಿಯಾಗಿದ್ದಾರೆ. ವೃತಿನ್ 610 ಅಂಕ, ಶಮನ 609 ಅಂಕ, ವಿವೇಕ್ 609 ಅಂಕ, ಆಧ್ಯಾ ಅಜಯ್ 605 ಅಂಕ, ಸಮೃದ್ಧ್ 602 ಅಂಕ, ಸ್ವಸ್ತಿಕ್ ಆರ್ ಶೆಟ್ಟಿ 602 ಅಂಕ, ಸಾತ್ವಿಕ್ ಆರ್ ಶೆಟ್ಟಿ 601 ಅಂಕ. ಎಕ್ಸಲೆಂಟ್ ಶಿಕ್ಷಣ ಸಂಸ್ಥೆಯಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಒಟ್ಟು 43 ವಿದ್ಯಾರ್ಥಿಗಳಲ್ಲಿ 19 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದುದರ ಮೂಲಕ ಉತ್ತಮ ಫಲಿತಾಂಶ ದಾಖಲಿಸಿದ್ದಾರೆ. 21 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ, 02 ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ ಉತ್ತೀರ್ಣರಾಗಿದ್ದು ಸಂಸ್ಥೆ ಹಾಗೂ ಪೋಷಕರು ಹೆಮ್ಮೆ ಪಡುವಂತಹ ಫಲಿತಾಂಶ ನೀಡಿರುತ್ತಾರೆ.

    ಎಕ್ಸಲೆಂಟ್ ಶಿಕ್ಷಣ ಸಂಸ್ಥೆಯಲ್ಲಿ ರಾಜ್ಯದ ನಾನಾ ಭಾಗದ ವಿದ್ಯಾರ್ಥಿಗಳು ಇಲ್ಲಿ ಪ್ರೌಢಶಿಕ್ಷಣ ಹಾಗೂ ಪದವಿ ಪೂರ್ವ ಶಿಕ್ಷಣದೊಂದಿಗೆ ಅಧ್ಯಯನ ಮಾಡುತ್ತಿದ್ದಾರೆ. ಅನುಭವಿ ನುರಿತ ಶಿಕ್ಷಕರ ಸಮೂಹವನ್ನು ಹೊಂದಿದ್ದು ಗುಣಮಟ್ಟದ ಶಿಕ್ಷಣವನ್ನು ನೀಡುತ್ತಿದ್ದು, ವಿದ್ಯಾರ್ಥಿಗಳ ಸಾಧನೆಗೆ ಸಹಕಾರಿಯಾಗಿದೆ ಎಂದು ಸುಜ್ಞಾನ್ ಎಜುಕೇಶನಲ್ ಟ್ರಸ್ಟ್‌ನ ಅಧ್ಯಕ್ಷರಾದ ಡಾ. ರಮೇಶ್ ಶೆಟ್ಟಿ, ಕಾರ್ಯದರ್ಶಿ ಪ್ರತಾಪಚಂದ್ರ ಶೆಟ್ಟಿ ಹಾಗೂ ಖಜಾಂಚಿ ಭರತ್ ಶೆಟ್ಟಿಯವರು ತಿಳಿಸಿದ್ದಾರೆ. ಮತ್ತು ಎಲ್ಲಾ ವಿದ್ಯಾರ್ಥಿಗಳಿಗೂ ಬೋಧಕ ಬೋಧಕೇತರ ಸಿಬ್ಬಂದಿ ವರ್ಗದವರಿಗೂ ಎಂ.ಎಂ. ಹೆಗ್ಡೆ ಎಜುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್‌ನ ಅಧ್ಯಕ್ಷರಾದ ಎಂ. ಮಹೇಶ್ ಹೆಗ್ಡೆಯವರು ಅಭಿನಂದನೆ ತಿಳಿಸಿದ್ದಾರೆ.

  • ಕುಂದಾಪುರದಲ್ಲಿ ಕಾಂಗ್ರೆಸ್ ಶಕ್ತಿ ಪ್ರದರ್ಶನ: ಬೈಕ್ ರ್ಯಾಲಿ, ಪಾದಯಾತ್ರೆ

    ಕುಂದಾಪುರದಲ್ಲಿ ಕಾಂಗ್ರೆಸ್ ಶಕ್ತಿ ಪ್ರದರ್ಶನ: ಬೈಕ್ ರ್ಯಾಲಿ, ಪಾದಯಾತ್ರೆ

    ಕುಂದಾಪುರ ಮಿರರ್ ಸುದ್ದಿ…


    ಕುಂದಾಪುರ :ಕುಂದಾಪುರದಲ್ಲಿ ಕಾಂಗ್ರೆಸ್ ಪಕ್ಷದ ಕುಂದಾಪುರದ ಕ್ಷೇತ್ರದ ಅಭ್ಯರ್ಥಿ ಮೊಳಹಳ್ಳಿ ದಿನೇಶ ಹೆಗ್ಡೆ ಅವರ ಪರವಾಗಿ ಬೃಹತ್ ಬೈಕ್ ರ್ಯಾಲಿ, ಪಾದಯಾತ್ರೆ ಸೋಮವಾರ ನಡೆಯಿತು.

    ಈ ಸಂದರ್ಭದಲ್ಲಿ ವಿಧಾನಪರಿಷತ್ ಸದಸ್ಯ, ವಿಧಾನಪರಿಷತ್ ಮಾಜಿ ಸಭಾಪತಿ ಕೆ.ಪ್ರತಾಪಚಂದ್ರ ಶೆಟ್ಟಿ, ಅಭ್ಯರ್ಥಿ ಮೊಳಹಳ್ಳಿ ದಿನೇಶ ಹೆಗ್ಡೆ, ಪಕ್ಷದ ಪ್ರಮುಖರಾದ ಹರಿಪ್ರಸಾದ್ ಶೆಟ್ಟಿ ಕಾನ್ಮಕ್ಕಿ, ಶಂಕರ ಕುಂದರ್ ಕೋಟ, ಸತೀಶ್ ಕಿಣಿ, ವಿಕಾಸ್ ಹೆಗ್ಡೆ, ಅಶೋಕ್ ಪೂಜಾರಿ ಬೀಜಾಡಿ, ಮೊಳಹಳ್ಳಿ ಮಹೇಶ ಹೆಗ್ಡೆ, ಮೊದಲಾದವರು ಉಪಸ್ಥಿತರಿದ್ದರು.

  • ಕುಂದಾಪುರ :ಯುವ ಬಂಟರ ಸಂಘದ ವತಿಯಿಂದ 2 ಲಕ್ಷ ರೂಪಾಯಿ ಆರ್ಥಿಕ ನೆರವು ವಿತರಣೆ

    ಕುಂದಾಪುರ :ಯುವ ಬಂಟರ ಸಂಘದ ವತಿಯಿಂದ 2 ಲಕ್ಷ ರೂಪಾಯಿ ಆರ್ಥಿಕ ನೆರವು ವಿತರಣೆ

    ಕುಂದಾಪುರ ಮಿರರ್ ಸುದ್ದಿ…

    ಕುಂದಾಪುರ: ಕುಂದಾಪುರ ತಾಲೂಕು ಯುವ ಬಂಟರ ಸಂಘದ ವತಿಯಿಂದ ಮಾಂಗಲ್ಯ ಸೂತ್ರ ಮತ್ತು ಆರೋಗ್ಯ ಭಾಗ್ಯ ಯೋಜನೆಯಡಿಯಲ್ಲಿ ಕುಂದಾಪುರ ಹಾಗೂ ಬೈಂದೂರು ತಾಲೂಕಿನ ಆಯ್ದ ಫಲಾನುಭವಿಗಳಿಗೆ ಚೆಕ್ ವಿತರಿಸುವ ಕಾರ್ಯಕ್ರಮ ಆರ್. ಎನ್. ಶೆಟ್ಟಿ ಸಭಾಭವನದಲ್ಲಿ ಕುಂದಾಪುರ ತಾಲೂಕು ಯುವ ಬಂಟರ ಸಂಘದ ಅಧ್ಯಕ್ಷರಾದ ಡಾ. ಅಂಪಾರು ನಿತ್ಯಾನಂದ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ನೆರವೇರಿತು.

    ಸಂಘದ ದಶಮ ಸಂಭ್ರಮ ಮಹಾಪೋಷಕರಾದ ಬಿ. ವಿನಯ್ ಕುಮಾರ್ ಶೆಟ್ಟಿ , ಪೋಷಕರಾದ ಉದ್ಯಮಿ ಹೊಂಬಾಡಿ ಮೇಲ್ಮನೆ ಜಗನ್ನಾಥ ಶೆಟ್ಟಿ ಫಲಾನುಭವಿಗಳಿಗೆ ಚೆಕ್ ವಿತರಿಸಿ ಸಂಘ ನಡೆಸಿಕೊಂಡು ಬಂದ ಕಾರ್ಯಕ್ರಮಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಶುಭಕೋರಿದರು.

    ಮಾಂಗಲ್ಯ ಸೂತ್ರ ಯೋಜನೆಯ ಫಲಾನುಭವಿಗಳಾದ ಕಮಲಶಿಲೆಯ ಪೂರ್ಣಿಮಾ ಶೆಟ್ಟಿ, ಯಡಮೊಗೆಯ ಸವಿತಾ ಶೆಟ್ಟಿ, ಸಿದ್ದಾಪುರದ ಉಷಾ ಶೆಟ್ಟಿ ಯವರಿಗೆ ಹಾಗೂ ಆರೋಗ್ಯ ಭಾಗ್ಯ ಯೋಜನೆಯಡಿಯಲ್ಲಿ ಆನಂದ ಶೆಟ್ಟಿ ನಂಚಾರು, ಕಿರಣ್ ಶೆಟ್ಟಿ ಅಂಪಾರು, ದಿವಾಕರ ಶೆಟ್ಟಿ ಆಲೂರು, ರಾಧಾಕೃಷ್ಣ ಶೆಟ್ಟಿ ಯಳೂರು, ಭವಾನಿ ಶೆಟ್ಟಿ ಆಲೂರು, ರಂಜಿತಾ ಶೆಟ್ಟಿ ಸಿರಿಮಠ, ಶಿವ ಕುಮಾರ್ ಮಂಗಲ್ ಪಾಂಡ್ಯ ರಸ್ತೆ ಕುಂದಾಪುರ ಹಾಗೂ ವಿಶ್ವನಾಥ ಶೆಟ್ಟಿ ಸಾರ್ಕಲ್ ಕಾವ್ರಾಡಿಯವರಿಗೆ ಆರ್ಥಿಕ ನೆರವಿನ ಚೆಕ್ ವಿತರಿಸಲಾಯಿತು.

    ಸಂಘದ ಪ್ರಧಾನ ಕಾರ್ಯದರ್ಶಿ ನಿತೀಶ್ ಶೆಟ್ಟಿ ಬಸ್ರೂರು ಹಾಗೂ ಸಂಘದ ಪದಾಧಿಕಾರಿಗಳಾದ ಪ್ರವೀಣ್ ಕುಮಾರ್ ಶೆಟ್ಟಿ ಹರ್ಕೂರು, ಸತೀಶ್ ಶೆಟ್ಟಿ ಹೆಸ್ಕತ್ತೂರು, ಸುಕುಮಾರ್ ಶೆಟ್ಟಿ ಕಮಲಶಿಲೆ, ಪ್ರಶಾಂತ್ ಕುಮಾರ್ ಶೆಟ್ಟಿ ಶಿರೂರು, ಉದಯ್ ಕುಮಾರ್ ಶೆಟ್ಟಿ ಮಚ್ಚಟ್ಟು, ಉದಯ ಶೆಟ್ಟಿ ಹೊಸಂಗಡಿ, ಮಾಜಿ ಅಧ್ಯಕ್ಷರಾದ ಸುಕೇಶ್ ಶೆಟ್ಟಿ ಹೊಸಮಠ, ಸುಕುಮಾರ್ ಶೆಟ್ಟಿ ಹೇರಿಕುದ್ರು, ರಾಜೀವ ಶೆಟ್ಟಿ ಹೆಂಗವಳ್ಳಿ, ಪುರಂದರ ಶೆಟ್ಟಿ ಹಿಲಿಯಾಣ ಉಪಸ್ಥಿತರಿದ್ದರು.

    ಸಂಘದ ಅಧ್ಯಕ್ಷರಾದ ಡಾ. ಅಂಪಾರು ನಿತ್ಯಾನಂದ ಶೆಟ್ಟಿ ಪ್ರಸ್ತಾಪಿಸಿ ಸರ್ವರನ್ನು ಸ್ವಾಗತಿಸಿದರು. ಸಂಘದ ಮಾಜಿ ಕೋಶಾಧಿಕಾರಿ ಮನೋರಾಜ್ ಶೆಟ್ಟಿ ಜಾಂಬೂರು ನಿರೂಪಿಸಿ ವಂದಿಸಿದರು.

  • ಕೋಟತಟ್ಟುಪಡುಕರೆ – ಪರಿಸರದ ಬಗ್ಗೆ ಇಂದೇ ಜಾಗೃತಗೊಳ್ಳದಿದ್ದರೆ ಮುಂದಿದೆ ಆಪತ್ತು, ಪರಿಸರದ ಬಗ್ಗೆ ಕಾಳಜಿ ವಹಿಸಲು ಕರೆ – ಪರಿಸರ ಇಲಾಖಾಧಿಕಾರಿ ಡಾ.ಕೆ.ಎಂ ರಾಜು

    ಕೋಟತಟ್ಟುಪಡುಕರೆ – ಪರಿಸರದ ಬಗ್ಗೆ ಇಂದೇ ಜಾಗೃತಗೊಳ್ಳದಿದ್ದರೆ ಮುಂದಿದೆ ಆಪತ್ತು, ಪರಿಸರದ ಬಗ್ಗೆ ಕಾಳಜಿ ವಹಿಸಲು ಕರೆ – ಪರಿಸರ ಇಲಾಖಾಧಿಕಾರಿ ಡಾ.ಕೆ.ಎಂ ರಾಜು

    ಕುಂದಾಪುರ ಮಿರರ್ ‌ಸುದ್ದಿ…

    ಕೋಟ: ಪರಿಸರದ ಒರ್ವ ಗಣ್ಯ ವ್ಯಕ್ತಿಯ ಹೆಸರಿನಲ್ಲಿ ಪರಿಸರ ಕಾಳಜಿಯ ಕಾರ್ಯಕ್ರಮ ನಿಜಕ್ಕೂ ಶ್ಲಾಘನೀಯ ಎಂದು ಉಡುಪಿ ಜಿಲ್ಲಾ ಪರಿಸರ ಇಲಾಖೆಯ ಅಧಿಕಾರಿ ಡಾ.ಕೆ.ಎಂ ರಾಜು ಹೇಳಿದರು.

    ಬರೇ ಶ್ರೀಮಂತಿಕೆಯಿಂದ ವ್ಯಕ್ತಿ ನಿರ್ಮಾಣವಾಗಲು ಸಾಧ್ಯವಿಲ್ಲ ಬದಲಾಗಿ ಸಮಾಜಕ್ಕೆ ನಾವೆನು ನೀಡುತ್ತೆವೆ ಎನ್ನುವುದು ಅತೀ ಮುಖ್ಯವಾಗಿದೆ ಈ ದಿಸೆಯಲ್ಲಿ ಪಂಚವರ್ಣ ಮತ್ತು ಅದರ ಸಹಸಂಸ್ಥೆಗಳ ಕಾರ್ಯ ಇತರ ಸಂಘ ಸಂಸ್ಥೆಗಳಿಗೆ ಮಾದರಿಯಾಗಿದೆ.

    ಎಂದರಲ್ಲದೆ ಪ್ರಕೃತಿಯನ್ನು ಹಾಳುಗೆಡವ ಮನಸ್ಥಿತಿ ಕ್ರೂರಕರವಾಗಿದೆ.ಪ್ರಸ್ತುತ ವಿದ್ಯಾಮಾನಗಳಲ್ಲಿ ಪ್ರಕೃತಿಯನ್ನು ಪ್ರೀತಿಸದೆ ಅದರ ಉಳಿವಿನ ಬಗ್ಗೆ ಚಿಂತಿಸದೆ ಇದ್ದರೆ ಮುಂದೊಂದು ದಿನ ನಮ್ಮಗೆ ಆಪತ್ತು ತಪ್ಪಿದಲ್ಲ,ಸ್ವಯಂ ಸೇವಕರಾಗಿ ಸಮಾಜದ ಪರಿವರ್ತನೆಯಲ್ಲಿ ಯುವ ಸಮುದಾಯದ ಪಾತ್ರ ಗಣನೀವಾದದ್ದು ಇದಕ್ಕೆ ಪಂಚವರ್ಣ ಸಂಸ್ಥೆಯೇ ಸಾಕ್ಷಿಯಾಗಿದೆ.ಸಂಘಸಂಸ್ಥೆಗಳಿಗಿದ್ದ ಪ್ರಜ್ಞೆ ಸ್ಥಳೀಯಾಡಳಿತಗಳಿಗೂ ಇರಬೇಕು ಎಲ್ಲೆಲ್ಲಿ ತ್ಯಾಜ್ಯ ಎಸೆಯುತ್ತಾರೆ ಅಲ್ಲಿ ಸಿಸಿ ಕ್ಯಾಮರ ಅಳವಡಿಸಿ ಕಸ ಎಸೆಯುವ ಕೈಗೆ ಬಾರಿ ದಂಡ ವಿಧಿಸಿ ಜಾಗೃತಿ ಮೂಡಿಸಬೇಕು, ದೇಶದ ಪ್ರಧಾನಿ ಕನಸಿನಂತೆ ಸ್ವಚ್ಛತೆ ಪ್ರತಿಯೊಬ್ಬನಿಗೂ ಪಾಠವಾಗಬೇಕು ತನ್ಮೂಲಕ ಪರಿಸರ ಪ್ರಜ್ಞೆ ಮೊಳಗಲಿ ನಿಮ್ಮ ಕಾಳಜಿಯ ಈ ಕಾರ್ಯಕ್ರಮಕ್ಕೆ ಮುಂದೊಂದು ದಿನ ಉಡುಪಿ ಜಿಲ್ಲಾಧ್ಯಂತ ಏಕ ಕಾಲದಲ್ಲಿ ಬೃಹತ್ ಆಂದೋಲನದ ಮೂಲಕ ಜನಜಾಗೃತಿ ಮೊಳಗಿಸುವ ಎಂದರು.

    ಈ ಸಂದರ್ಭದಲ್ಲಿ ಪರಿಸರ ಜಾಗೃತಿ ಪ್ರತಿಜ್ಞಾ ವಿಧಿಯನ್ನು ಭೋಧಿಸಲಾಯಿತು.

    ಪರಿಸರ ಇಲಾಖೆಯ ಉಪ ಅಧಿಕಾರಿ ಪ್ರಮೀಳಾ ಕೋಟದ ಜನತಾ ಫಿಶ್ ಮೀಲ್ ಮ್ಯಾನೇಜರ್ ಶ್ರೀನಿವಾಸ ಕುಂದರ್, ಪಂಚವರ್ಣಸಂಸ್ಥೆಯ ಸಂಘಟನಾ ಕಾರ್ಯದರ್ಶಿ ಗಿರೀಶ್ ಆಚಾರ್,ಹಂದಟ್ಟು ಮಹಿಳಾ ಬಳಗದ ಶಕೀಲ ಪೂಜಾರಿ, ಕೋಟತಟ್ಟು ಗ್ರಾಮಪಂಚಾಯತ್ ಸಂಜೀವಿನಿ ಒಕ್ಕೂಟದ ಸುಜಾತ ಉದಯ್ ತಿಂಗಳಾಯ,ಮಣೂರು ಫ್ರೆಂಡ್ಸ್ ಅಧ್ಯಕ್ಷ ದಿನೇಶ್ ಆಚಾರ್ಯ, ಪಂಚವರ್ಣ ಮಹಿಳಾ ಮಂಡಲದ ಕಾರ್ಯದರ್ಶಿ ಲಲಿತಾ ಪೂಜಾರಿ ಮತ್ತಿತರರು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಪಂಚವರ್ಣದ ಕಾರ್ಯಾಧ್ಯಕ್ಷ ರವೀಂದ್ರ ಕೋಟ ನಿರೂಪಿಸಿ ವಂದಿಸಿದರು.

  • ಉಡುಪಿ :ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮತದಾರರಲ್ಲದವರು ಕ್ಷೇತ್ರ ತೊರೆಯಲು ಸೂಚನೆ: ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ

    ಉಡುಪಿ :ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮತದಾರರಲ್ಲದವರು ಕ್ಷೇತ್ರ ತೊರೆಯಲು ಸೂಚನೆ: ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ

    ಕುಂದಾಪುರ ಮಿರರ್ ಸುದ್ದಿ…

    ಉಡುಪಿ: ಜಿಲ್ಲೆಯಲ್ಲಿ ಮೇ 10 ರಂದು ಚುನಾವಣೆ ನಡೆಯಲಿರುವ ಹಿನ್ನೆಲೆ, ಸ್ಥಳೀಯ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮತದಾರರಲ್ಲದ ರಾಜಕೀಯ ಪ್ರಚಾರಕರು, ಕಾರ್ಯಕರ್ತರು, ಮೆರವಣಿಗೆ ಅಯೋಜಕರು ಸೇರಿದಂತೆ ಮತ್ತಿತರರು ಮೇ 8 ರಂದು ಸಂಜೆ 6 ಗಂಟೆಗೆ ಕ್ಷೇತ್ರ ಬಿಡಬೇಕೆಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ತಿಳಿಸಿದ್ದಾರೆ.

    ಅವರು ಇಂದು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

    ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ-2023 ರ ಮತದಾನವು ಮೇ 10 ರಂದು ನಡೆಯಲಿದ್ದು, ಚುನಾವಣೆಯು ಮುಕ್ತ , ನ್ಯಾಯ ಸಮ್ಮತ ಹಾಗೂ ಶಾಂತಿಯುತವಾಗಿ ನಡೆಯಬೇಕಾದ ಹಿನ್ನಲೆ, ಮತದಾನದ ಅಂತ್ಯದ 48 ಗಂಟೆ ಮುಂಚಿತವಾಗಿ ಯಾವುದೇ ರೀತಿಯ ಬಹಿರಂಗ ಪ್ರಚಾರಗಳನ್ನು ಕೈಗೊಳ್ಳಲು ಅನುಮತಿ ಇರುವುದಿಲ್ಲ, ಜಿಲ್ಲೆಯ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಮತದಾರರಲ್ಲದವರು ನಿಗಧಿತ ಸಮಯಕ್ಕಿಂತ ಮುಂಚೆ ಹೊರಹೋಗಬೇಕು ಎಂದರು
    ಯಾವುದೆ ರಾಜಕೀಯ ಪಕ್ಷಕ್ಕೆ ಸಂಬಂದಿಸಿದ ಅಥವಾ ಅಧಿಕೃತ ಅಭ್ಯರ್ಥಿಗಳ ಪ್ರಚಾರಕ್ಕಾಗಿ ವಿಧಾನಸಭಾ ಕ್ಷೇತ್ರದ ಹೊರಗಿನಿಂದ ಬಂದು ಉಳಿದುಕೊಂಡಿದ್ದಲ್ಲಿ ಅಂತಹವರು ನಿಗಧಿಪಡಿಸಿರುವ ಕಾಲಕ್ಕಿಂತ ಮುಂಚೆ ಕ್ಷೇತ್ರದಿಂದ ಹೊರಗೆ ಹೋಗಬೇಕು ಒಂದೊಮ್ಮೆ ಯಾವುದೇ ವಸತಿಗೃಹಗಳಲ್ಲಿ , ಕಲ್ಯಾಣ ಮಂಟಪಗಳಲ್ಲಿ ಉಳಿದುಕೊಂಡಿದ್ದಲ್ಲಿ ಅಂತಹವರಿಗೆ ಆಸ್ಪದ ನೀಡಬಾರದು. ಅನಧಿಕೃತವಾಗಿ ಉಳಿದುಕೊಂಡಿರುವ ಬಗ್ಗೆ ಮಾಹಿತಿಯಿದ್ದಲ್ಲಿ ಜಿಲ್ಲಾಡಳಿತ ಅಥವಾ ಜಿಲ್ಲಾ ಪೊಲೀಸ್ ಇಲಾಖೆಗೆ ಮಾಹಿತಿಗೆ ನೀಡಬೇಕು ಎಂದರು.

    ಈ ಬಗ್ಗೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಚುನಾವಣಾಧಿಕಾರಿಗಳು ಹಾಗೂ ಪೊಲೀಸ್ ಅಧಿಕಾರಿಗಳು ಆಗಾಗ್ಗೆ ಪರಿಶೀಲಿಸಲಿದ್ದಾರೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮತದಾರಲ್ಲದ ರಾಜಕೀಯ ಕಾರ್ಯಕರ್ತರು ,ಪಕ್ಷದ ಸಂಘಟಕರು, ಸೇರಿದಂತೆ ಮತ್ತಿತರರು ಅನಧಿಕೃತವಾಗಿ ನೆಲೆಸಿದ್ದಲ್ಲಿ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಹಾಗೂ ಅವರಿಗೆ ಆಶ್ರಯ ನೀಡುವವರ ಮೇಲೆಯೂ ಸಹ ಕ್ರಮ ಕೈಗೊಳ್ಳಲಾಗುವುದು ಎಂದರು.
    ಮತದಾನಕ್ಕೆ ನಿಗಧಿಪಡಿಸಿದ ಅವಧಿ ಕೊನೆಗೊಳ್ಳುವುದಕ್ಕಿಂತ 48 ಗಂಟೆಗಳ ಮುಂಚೆ ಯಾವುದೇ ಮುದ್ರಣ ಮಾದ್ಯಮಗಳಲ್ಲಿ ಜಾಹೀರಾತು ಪ್ರಕಟಸಬೇಕಾದರೆ ಸಂಬಂದಪಟ್ಟ ಅಭ್ಯರ್ಥಿಗಳು ಅಥವಾ ಪಕ್ಷವು ಮಾಧ್ಯಮ ಪ್ರಾಮಾಣಿಕರಣ ಸಮಿತಿ ವತಿಯಿಂದ ಪ್ರಮಾಣಪತ್ರ ಪಡೆಯುವುದು ಕಡ್ಡಾಯವಾಗಿರುತ್ತದೆ ಎಂದರು.

    ಮೇ 8 ರಂದು ಸಂಜೆ 5 ಗಂಟೆಯಿಂದ ಮೇ 10 ರ ಮಧ್ಯರಾತ್ರಿ 12 ರ ವರೆಗೆ ಹಾಗೂ ಮೇ 12 ರ ಮಧ್ಯರಾತ್ರಿ 12 ಗಂಟೆಯಿಂದ ಮೇ 13 ರ ಮಧ್ಯರಾತ್ರಿ 12 ರ ವರೆಗೆ ಜಿಲ್ಲೆಯಾದ್ಯಂತ ಮದ್ಯ ಮಾರಾಟ ಹಾಗೂ ಸರಬರಾಜನ್ನು ನಿಷೇಧಿಸಲಾಗಿದ್ದು, ಯಾವುದೇ ವಸತಿಗೃಹಗಳಲ್ಲಿ, ಕಲ್ಯಾಣ ಮಂಟಪಗಳು ಸೇರಿದಂತೆ ಮತ್ತಿತರ ಎಲ್ಲಾ ಸಭಾಂಗಣಗಳಲ್ಲಿ ಮದ್ಯ ಸೇವನೆಗೆ ಅವಕಾಶ ಕಲ್ಪಿಸದಂತೆ ಎಚ್ಚರಿಕೆ ವಹಿಸಬೇಕು ಎಂದರು.

    ಸಭೆಯಲ್ಲಿ ಮಾದರಿ ನೀತಿ ಸಂಹಿತೆ ಜಿಲ್ಲಾ ನೋಡಲ್ ಅಧಿಕಾರಿ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್, ಅಪರ ಜಿಲ್ಲಾಧಿಕಾರಿ ವೀಣಾ, ತರಬೇತಿ ನಿರತ ಐ.ಎ.ಎಸ್ ಆಧಿಕಾರಿ ಯತೀಶ್, ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ್ ಬಿ, ಹಾಗೂ ವಿವಿಧ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.

  • ಮರವಂತೆ :ಚುನಾವಣಾ ಬಹಿಷ್ಕಾರದ ನಿರ್ಧಾರದಿಂದ ಹಿಂದೆ ಸರಿದ ಮರವಂತೆಯ ಮೀನುಗಾರರು

    ಮರವಂತೆ :ಚುನಾವಣಾ ಬಹಿಷ್ಕಾರದ ನಿರ್ಧಾರದಿಂದ ಹಿಂದೆ ಸರಿದ ಮರವಂತೆಯ ಮೀನುಗಾರರು

    ಕುಂದಾಪುರ ಮಿರರ್ ಸುದ್ದಿ…

    ಗಂಗೊಳ್ಳಿ : ಮರವಂತೆ ಹೊರ ಬಂದರು ವಿಚಾರಕ್ಕೆ ಸಂಬಂಧಪಟ್ಟಂತೆ ಚುನಾವಣೆ ಬಹಿಷ್ಕರಿಸಲು ನಿರ್ಧರಿಸಿದ್ದ ಮರವಂತೆ ಮೀನುಗಾರರು ತಮ್ಮ ನಿರ್ಧಾರದಿಂದ ಹಿಂದೆ ಸರಿದಿದ್ದಾರೆ.

    ಮರವಂತೆಯ ಶ್ರೀ ರಾಮ ಮಂದಿರದಲ್ಲಿ ಗುರುವಾರ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಮರವಂತೆ ಮೀನುಗಾರರ ಸೇವಾ ಸಮಿತಿ ಅಧ್ಯಕ್ಷ ಕೆ.ಎಂ.ವಾಸುದೇವ ಖಾರ್ವಿ, ಅಪೂರ್ಣಗೊಂಡಿರುವ ಮರವಂತೆಯ ಕೇರಳ ಮಾದರಿಯ ಔಟ್ ಡೋರ್ ಬಂದರಿನ 2ನೇ ಹಂತದ ಕಾಮಗಾರಿಯನ್ನು ಚುನಾವಣೆ ಮುಗಿದ ತಕ್ಷಣ ಪ್ರಾರಂಭಿಸುವುದಾಗಿ, ಕಡಲ್ಕೊರೆತ ತಡೆಗೆ ಜಪಾನ್ ಮಾದರಿಯ ಶಾಶ್ವತ ತಡೆಗೋಡೆ ನಿರ್ಮಾಣ ಮಾಡಲು ಪ್ರಯತ್ನಿಸುವುದಾಗಿ ಹಾಗೂ ಮೀನುಗಾರರಿಗೆ ಸಕಾಲದಲ್ಲಿ ಸೀಮೆಎಣ್ಣೆ ಒದಗಿಸಲು ಕೇಂದ್ರ ಸರಕಾರದ ಬಜೆಟ್‍ನಲ್ಲಿ ಅನುದಾನ ಮೀಸಲಿರಿಸುವ ಭರವಸೆಯನ್ನು ಸಂಸದ ಬಿ.ವೈ.ರಾಘವೇಂದ್ರ ನೀಡಿದ್ದಾರೆ. ಹೀಗಾಗಿ ಇಂದು ಮೀನುಗಾರರ ಸಭೆ ನಡೆಸಿ ಸಂಸದ ಬಿ.ವೈ.ರಾಘವೇಂದ್ರ ಭರವಸೆ, ಆಶ್ವಾಸನೆ ಮೇರೆಗೆ ಮೀನುಗಾರರು ಚುನಾವಣೆ ಬಹಿಷ್ಕಾರದ ನಿರ್ಧಾರದಿಂದ ಹಿಂದೆ ಸರಿದಿರುವುದಾಗಿ ಅವರು ಹೇಳಿದರು.
    ಮರವಂತೆ ಮೀನುಗಾರರು ಚುನಾವಣೆ ಬಹಿಷ್ಕರಿಸುವುದಾಗಿ ಘೋಷಿಸಿದ ಬಳಿಕ ಸಂಸದ ಬಿ.ವೈ.ರಾಘವೇಂದ್ರ, ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ, ಹಾಲಿ ಬಿಜೆಪಿ ಅಭ್ಯರ್ಥಿ ಗುರುರಾಜ್ ಗಂಟಿಹೊಳೆ ಮತ್ತು ಬಂದರು ಮತ್ತು ಮೀನುಗಾರಿಕೆ ಇಲಾಖೆ ಅಧಿಕಾರಿಗಳು ಮರವಂತೆಗೆ ಭೇಟಿ ನೀಡಿ ಮೀನುಗಾರರ ಸಮಸ್ಯೆಗಳನ್ನು ಆಲಿಸಿ, ಸಮಸ್ಯೆಗಳನ್ನು ಬಗೆಹರಿಸುವ ಭರವಸೆ ನೀಡಿದ್ದರು. ಈ ಬಗ್ಗೆ ಸಂಸದ ಬಿ.ವೈ.ರಾಘವೇಂದ್ರ ಅವರು, ಮರವಂತೆ ಹೊರ ಬಂದರು 2ನೇ ಹಂತದ ಕಾಮಗಾರಿಯನ್ನು ಖುದ್ದು ನಿಂತು ಮಾಡಿಸುವುದಾಗಿಯೂ ಮತ್ತು ದೆಹಲಿಗೆ ಹೋಗಿ ಆದರೂ ಸರಿ ಇದಕ್ಕಿರುವ ಅಡೆತಡೆಗಳನ್ನು ನಿವಾರಿಸುವುದಾಗಿ ಭರವಸೆ ನೀಡಿದ್ದಾರೆ. ಸಂಸದರ ಮೇಲೆ ವಿಶ್ವಾಸ ಇಟ್ಟು, ಅವರ ನೀಡಿರುವ ಭರವಸೆ ಹಿನ್ನಲೆಯಲ್ಲಿ ಚುನಾವಣೆ ಬಹಿಷ್ಕಾರದಿಂದ ಹಿಂದೆ ಸರಿದಿದ್ದೇವೆ. ನಮ್ಮ ಬೇಡಿಕೆ ಈಡೇರದಿದ್ದಲ್ಲಿ ಮುಂಬರು ಚುನಾವಣೆಗಳಲ್ಲಿ ತಕ್ಕ ಪಾಠ ಕಲಿಸುವುದಾಗಿ ಅವರು ಎಚ್ಚರಿಕೆ ನೀಡಿದರು.
    ಮರವಂತೆ ಮೀನುಗಾರರ ಸೇವಾ ಸಮಿತಿ ಮಾಜಿ ಅಧ್ಯಕ್ಷ ಪಿ.ಚಂದ್ರ ಖಾರ್ವಿ, ಮಾರ್ಕೇಟಿಂಗ್ ಸಮಿತಿ ಅಧ್ಯಕ್ಷ ಎಂ.ಶಂಕರ ಖಾರ್ವಿ ಉಪಾಧ್ಯಕ್ಷ ಸುರೇಶ ಖಾರ್ವಿ ಉಪಸ್ಥಿತರಿದ್ದರು. ಕಾರ್ಯದರ್ಶಿ ಈಶ್ವರ ಖಾರ್ವಿ, ಸುರೇಶ ಖಾರ್ವಿ, ಶ್ರೀಧರ ಖಾರ್ವಿ, ಲಕ್ಷ್ಮಣ ಖಾರ್ವಿ, ಗಣೇಶ ಖಾರ್ವಿ ಉಪಸ್ಥಿತರಿದ್ದರು.
  • ಕುಂದಾಪುರ :NATA ಪರೀಕ್ಷೆಯಲ್ಲಿ ಎಕ್ಸಲೆಂಟ್ ಕಾಲೇಜಿನ ವಿದ್ಯಾರ್ಥಿಗಳ ಸಾಧನೆ.

    ಕುಂದಾಪುರ :NATA ಪರೀಕ್ಷೆಯಲ್ಲಿ ಎಕ್ಸಲೆಂಟ್ ಕಾಲೇಜಿನ ವಿದ್ಯಾರ್ಥಿಗಳ ಸಾಧನೆ.

    ಕುಂದಾಪುರ ಮಿರರ್ ಸುದ್ದಿ…

    ಕುಂದಾಪುರ :ಆರ್ಕಿಟೆಕ್ಟರ್ ಇಂಜಿನಿಯರಿಂಗ್‍ಗೆ ಸೇರ್ಪಡೆ ಬಯಸುವ ವಿದ್ಯಾರ್ಥಿಗಳಿಗಾಗಿ ಎಪ್ರಿಲ್ 2023 ರಲ್ಲಿ ನಡೆದ ಪ್ರಥಮ ಹಂತದ ನಾಟಾ ಪರೀಕ್ಷೆಯಲ್ಲಿ ಕುಂದಾಪುರದ ಎಕ್ಸಲೆಂಟ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ ವೈಷ್ಣವಿ ಶೆಟ್ಟಿ ಎಚ್ ಹಾಗೂ ಭೂಮಿಕಾ ಇವರು ನಾಟಾ ಪರೀಕ್ಷೆಗೆ ಹಾಜರಾಗಿ ಉತ್ತಮ ಅಂಕಗಳೊಂದಿಗೆ ಉತ್ತೀರ್ಣರಾಗಿದ್ದಾರೆ. ಎಕ್ಸಲೆಂಟ್ ಕಾಲೇಜಿನಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಪ್ರಥಮ ಪಿ. ಯು. ಸಿ ಯಿಂದಲೇ ಸಿ.ಇ.ಟಿ/ನೀಟ್, ಜೆಇಇ , ನಾಟಾ , ಸಿಎ/ ಸಿಎಸ್ ಸ್ಪರ್ಧಾತ್ಮಕ ಪರೀಕ್ಷೆಗೆ ವಿಶೇಷವಾಗಿ ತರಬೇತಿ ನೀಡಲಾಗುತ್ತದೆ.

    ನಾಟಾ ಪರೀಕ್ಷೆಯಲ್ಲಿ ಉತ್ತಮ ಅಂಕಗಳಿಸಿ ಸಾಧನೆ ಮಾಡಿದ ಸಾಧಕ ವಿದ್ಯಾರ್ಥಿಗಳನ್ನು ಸುಜ್ಞಾನ ಎಜುಕೇಶನಲ್ ಟ್ರಸ್ಟ್ ನ ಅಧ್ಯಕ್ಷರಾದ ಡಾ. ರಮೇಶ್ ಶೆಟ್ಟಿ , ಕಾರ್ಯದರ್ಶಿಗಳಾದ ಪ್ರತಾಪಚಂದ್ರ ಶೆಟ್ಟಿ, ಖಜಾಂಚಿಗಳಾದ ಭರತ್ ಶೆಟ್ಟಿ ಹಾಗೂ ಎಂ.ಎಂ ಹೆಗ್ಡೆ ಎಜುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷರಾದ ಎಂ ಮಹೇಶ್ ಹೆಗ್ಡೆ, ಉಪನ್ಯಾಸಕ ವೃಂದದವರು, ಬೋಧಕೇತರ ಸಿಬ್ಬಂದಿ ವರ್ಗದವರು ವಿದ್ಯಾರ್ಥಿಗಳನ್ನು ಅಭಿನಂದಿಸಿ ಸಂತಸವನ್ನು ವ್ಯಕ್ತಪಡಿಸಿ ಶುಭಹಾರೈಸಿದ್ದಾರೆ.

  • ಉಡುಪಿ :ಚುನಾವಣಾ ತರಬೇತಿ  ತೆರಳುವ ಸಿಬ್ಬಂದಿಗೆ ಉಚಿತ ಬಸ್ ವ್ಯವಸ್ಥೆ.

    ಉಡುಪಿ :ಚುನಾವಣಾ ತರಬೇತಿ  ತೆರಳುವ ಸಿಬ್ಬಂದಿಗೆ ಉಚಿತ ಬಸ್ ವ್ಯವಸ್ಥೆ.

    ಕುಂದಾಪುರ ಮಿರರ್ ಸುದ್ದಿ…
    ಉಡುಪಿ : ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಚುನಾವಣೆ ಕರ್ತವ್ಯಕ್ಕಾಗಿ ನೇಮಕ ಮಾಡಿರುವ ಪಿಆರ್‌ಓ, ಎಪಿಆರ್‌ಓ, ಪಿಓಗಳಿಗೆ ಮೇ 2 ರಂದು ನಡೆಯುವ ಕಾರ್ಯಾಗಾರಕ್ಕೆ ತೆರಳಲು ಜಿಲ್ಲಾಾಡಳಿತದ ವತಿಯಿಂದ ಉಚಿತ ಬಸ್ ವ್ಯವಸ್ಥೆ ಮಾಡಲಾಗಿದೆ.
    ಬೈಂದೂರಿನ ಶಿರೂರು ಗ್ರೀನ್ ವ್ಯಾಾಲಿ ಇಂಟರ್‌ನ್ಯಾಷನಲ್ ಸ್ಕೂಲ್, ಕುಂದಾಪುದ  ಭಂಡಾಕರ್‌ಸ್‌  ಆರ್ಟ್ಸ್  ಮತ್ತು ವಿಜ್ಞಾನ ಕಾಲೇಜು ಉಡುಪಿಯ ಸೈಂಟ್ ಸಿಸಿಲಿಸ್ ಸ್ಕೂಲ್ ಬ್ರಹ್ಮಗಿರಿ, ಕಾಪು ದಂಡತೀರ್ಥ ಪಿ.ಯು. ಕಾಲೇಜು, ಕಾರ್ಕಳದ ಕ್ರೈಸ್ಟ್‌ ಕಿಂಗ್ ಪಿ.ಯು. ಕಾಲೇಜಿನಲ್ಲಿ ತರಬೇತಿ ನಡೆಯಲಿದೆ.
     ತರಬೇತಿಗೆ ನಿಯೋಜಿಸಿರುವ ಅಧಿಕಾರಿ, ಸಿಬಂದಿಗೆ ತರಬೇತಿ ಕಾರ್ಯಾಗಾರಕ್ಕೆ ಭೇಟಿ ನೀಡಲು ಉಚಿತ ಬಸ್ ವ್ಯವಸ್ಥೆಯನ್ನು ಎಲ್ಲ ವಿಧಾನಸಭಾ ಕ್ಷೇತ್ರ ವ್ಯಾಾಪ್ತಿಯಲ್ಲಿ ಮಾಡಲಾಗಿದೆ.
     ತರಬೇತಿ ಕಾರ್ಯಾಗಾರ ಸ್ಥಳಗಳಿಗೆ ಪ್ರಯಾಣಿಸಲು ಈ ಕೆಳಗೆ ತಿಳಿಸಿರುವ ಸ್ಥಳಗಳಿಂದ ಬಸ್ಸುಗಳು ಹೊರಡಲಿದ್ದು, ಸಂಪರ್ಕಿಸಬೇಕಾದ ಅಧಿಕಾರಿಗಳ ವಿವರ ಮುಂದಿನಂತಿದೆ.
    ಬೈಂದೂರು ತಾಲೂಕು ಆಡಳಿತ ಸೌಧದಲ್ಲಿ ಭೀಮಪ್ಪ – 8105025695, ಕಾಂತರಾಜು -9482036207,  ಶ್ರೀಶಾಂತ್ 9620428828,
    ಕುಂದಾಪುರದ ಶಾಸ್ತ್ರೀ ಸರ್ಕಲ್‌ನಲ್ಲಿ  ಭಾಗ್ಯಲಕ್ಷ್ಮೀ 9481144043, ವಾಲೇಕರ್ 9341049161, ರಂಗರಾಜು 8197809032,
     ಉಡುಪಿ ಹಳೆ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದಲ್ಲಿ ಅಶ್ವಥ್ 9113042711, ಪುನೀತ್ 9036681599, ಜಗದೀಶ್ ಮುರನಾಳ 8310498064,
    ಕಾಪು ಸರ್ವಿಸ್ ಬಸ್ ನಿಲ್ದಾಣದಲ್ಲಿ ಸುಧೀರ್ ಕುಮಾರ್ ಶೆಟ್ಟಿ 9008922727, ವಿಜಯಾ 9845162068, ಕ್ಲಾರೇನ್ಸ್  ಲೆಸ್ಟಾನ್ 8095101024,
     ಕಾರ್ಕಳ ಬಂಡೀಮಠದಲ್ಲಿ ಮಂಜುನಾಥ ನಾಯ್ಕ್ 9880019100, ಮಹೇಶ್ ಕುಮಾರ್ 9741560924, ಆನಂದ ಬಿ., 9844111931.
    ಮೇ 2 ರಂದು ಬೆಳಗ್ಗೆ 7 ಗಂಟೆಗೆ ನಿಗದಿತ ಸ್ಥಳದಿಂದ  ಬಸ್‌ಗಳು ಹೊರಡಲಿದೆ ಎಂದು ಪ್ರಕಟನೆ ತಿಳಿಸಿದೆ.
  • ಕುಂದಾಪುರ :ಕೋಡಿ ಬ್ಯಾರೀಸ್ ನಲ್ಲಿ ಸ್ವಚ್ಛ ಕಡಲತೀರ – ಹಸಿರು ಕೋಡಿ , ಅಭಿಯಾನ- 20

    ಕುಂದಾಪುರ :ಕೋಡಿ ಬ್ಯಾರೀಸ್ ನಲ್ಲಿ ಸ್ವಚ್ಛ ಕಡಲತೀರ – ಹಸಿರು ಕೋಡಿ , ಅಭಿಯಾನ- 20

    ಕುಂದಾಪುರ ಮಿರರ್ ಸುದ್ದಿ…

    ಕುಂದಾಪುರ: ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳು ಕೋಡಿ ಕುಂದಾಪುರ ಇದರ ವತಿಯಿಂದ ಪ್ರತಿ ತಿಂಗಳ ಕೊನೆಯ ಭಾನುವಾರ ನಡೆಯುವ “ಸ್ವಚ್ಛ ಕಡಲತೀರ – ಹಸಿರು ಕೋಡಿ” ಅಭಿಯಾನ 20 ನೇ ಹಂತ ಎ.30ರಂದು ನೆರವೇರಿತು.

    ನಮ್ಮ ಬದುಕಿನಲ್ಲಿ ಒಂದಷ್ಟು ಸಮಯವನ್ನು ನಮ್ಮ ಸಮಾಜಕ್ಕೆ ಮೀಸಲಿಡಬೇಕು. ಇದು ದೇವರ ಕೆಲಸ ಎಂದು ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳ ಪರಿಸರ ಪ್ರೇಮಿ ಸಂಚಾಲಕರಾದ ಸಯ್ಯದ್ ಮೊಹಮ್ಮದ್ ಬ್ಯಾರಿ ಇವರು ಶುಭ ಹಾರೈಸಿದರು.

    ಸಂಯೋಜಕರಾದ ಪ್ರೊ. ಆಕಾಶ್ ಮಾತನಾಡಿ “ನಾವೇನೇ ಪಡೆದಿದ್ದರೂ ಈ ಸುಂದರ ಪರಿಸರದಿಂದಲೇ, ಹಾಗಾಗಿ ಈ ಪರಿಸರವನ್ನು ಸುಂದರವಾಗಿಟ್ಟು ಮುಂದಿನ ಪೀಳಿಗೆಗೆ ಕೊಡುವುದು ನಮ್ಮೆಲ್ಲರ ಜವಬ್ದಾರಿ” ಎಂದರು.

    ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಹಾಜಿ ಕೆ ಎಂ ಅಬ್ದುಲ್ ರೆಹಮಾನ್, ಸಲಹಾ ಮಂಡಳಿಯ ಸದಸ್ಯರಾದ ಅಬುಶೇಕ್ ಸಾಹೇಬ್, ವಿಶ್ವಸ್ಥ ಮಂಡಳಿಯ ಸದಸ್ಯರಾದ ಡಾ. ಆಸೀಫ್, ವಿವಿಧ ವಿಭಾಗಗಳ ಮುಖ್ಯಸ್ಥರುಗಳಾದ ಡಾ. ಫಿರ್ದೋಸ್, ಡಾ. ಶಮೀರ್, ಡಾ. ಸುರೇಶ್ ಶೆಟ್ಟಿ, ಜಯಶೀಲ ಶೆಟ್ಟಿ, ಅಶ್ವಿನಿ ಶೆಟ್ಟಿ, ಜಟ್ಟಪ್ಪ ಹಾಗೂ ಬೋಧಕ – ಬೋಧಕೇತರ ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಈ ಸ್ವಚ್ಛತಾ ಅಭಿಯಾನದಲ್ಲಿ ಪಾಲ್ಗೊಂಡರು.