Category: ಸುದ್ದಿ

  • ಕೊಲ್ಲೂರು ದೇವಳಕ್ಕೆ ಗೋವಾ ರಾಜ್ಯಪಾಲ ಪಿ.ಎಸ್.ಶ್ರೀಧರನ್ ಪಿಳ್ಳೈ ಭೇಟಿ

    ಕೊಲ್ಲೂರು ದೇವಳಕ್ಕೆ ಗೋವಾ ರಾಜ್ಯಪಾಲ ಪಿ.ಎಸ್.ಶ್ರೀಧರನ್ ಪಿಳ್ಳೈ ಭೇಟಿ

    ಕುಂದಾಪುರ ಮಿರರ್ ಸುದ್ದಿ…

    Video:

    ಕುಂದಾಪುರ : ಶಂಕರಾಚಾರ್ಯರು ಆರಂಭಿಸಿದ ಶಾಕ್ತೈ ಪೂಜೆ ಅತ್ಯಂತ ಶ್ರೇಷ್ಟ ಪೂಜೆ ಎನ್ನಿಸಿದೆ ಎಂದು ಗೋವಾ ರಾಜ್ಯಪಾಲ ಪಿ.ಎಸ್ ಶ್ರೀಧರನ್ ಪಿಳ್ಳೈ ಹೇಳಿದರು.

    ಅವರು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಪತ್ನಿ ರೀನಾ ಸಹಿತ ಕುಟುಂಬದೊಂದಿಗೆ ಭಾನುವಾರ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿ ಪತ್ರಕರ್ತರೊಂದಿಗೆ ಮಾತನಾಡಿದರು.

    ತಿರುಪತಿಯಂತಹಾ ಕ್ಷೇತ್ರಗಳಲ್ಲಿಯೂ ಶಾಕ್ತೈ ಪೂಜೆ ನಡೆಯುತ್ತಿದೆ. ಆದರೆ ಕೊಲ್ಲೂರು ಕ್ಷೇತ್ರದ ಪೂಜೆಗೆ ವಿಶೇಷ ಮಹತ್ವವಿದೆ ಎಂದ ಅವರು, ಮುಂದಿನ ಅಷ್ಟಬಂಧ ಬ್ರಹ್ಮಕಲಶೋತ್ಸವಕ್ಕೆ ಭಕ್ತರನ್ನು ಇಲ್ಲಿಗೆ ಆಹ್ವಾನಿಸುತ್ತೇನೆ ಎಂದರು.

    ಉಡುಪಿಯಿಂದ ಕೊಲ್ಲೂರು ದೇವಳಕ್ಕೆ ಆಗಮಿಸಿದ ಪಿ.ಎಸ್. ಶ್ರೀಧರನ್ ಪಿಳ್ಳೈ ಅವರಿಗೆ ಪೂರ್ಣಕುಂಭ ಸ್ವಾಗತ ನೀಡಲಾಯಿತು. ದೇವಾಲಯದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದ ರಾಜ್ಯಪಾಲರು ತುಪ್ಪದ ದೀಪದಿಂದ ಆರತಿ ಬೆಳಗಿದರು. ಬ್ರಹ್ಮಾರ್ಪಣ ನೆರವೇರಿಸಿದರು ಹಾಗೂ ಅರ್ಚನೆ ಮಾಡಿಸಿದರು.

    ದೇವಾಲಯದ ಆವರಣದಲ್ಲಿ ವೀರಭದ್ರಸ್ವಾಮಿ ದೇವರಿಗೆ ಪೂಜೆ ಸಲ್ಲಿಸಿ, ದೇವಳದ ಪ್ರಧಾನ ತಂತ್ರಿ ಹಾಗೂ ಅರ್ಚಕ ಡಾ ಕೆ. ರಾಮಚಂದ್ರ ಅಡಿಗ ಅವರ ನೇತೃತ್ವದಲ್ಲಿ ತಮ್ಮ ಮೊಮ್ಮಕ್ಕಳಿಗೆ ವಿದ್ಯಾರಂಭ ಮಾಡಿಸಿದರು.

    ಬಳಿಕ ದೇವಳದ ಕಛೇರಿಯಲ್ಲಿ ವ್ಯವಸ್ಥಾಪನಾ ಸಮಿತಿ ವತಿಯಿಂದ ಗೋವಾ ರಾಜ್ಯಪಾಲ ಪಿ.ಎಸ್. ಶ್ರೀಧರನ್ ಪಿಳ್ಳೈ ಅವರಿಗೆ ಶಾಲು ಹೊದಿಸಿ ಗೌರವಿಸಿ, ಶ್ರೀದೇವಿಯ ಪ್ರಸಾದ ನೀಡಲಾಯಿತು.

    ದೇವಳದ ವ್ಯವಸ್ಥಾಪನಾ ಸಮಿತಿ ಸದಸ್ಯರಾದ ರತ್ನಾ ರಮೇಶ್ ಕುಂದರ್, ಸಂಧ್ಯಾ ರಮೇಶ್, ಕೊಲ್ಲೂರು ಉದ್ಯಮಿ ಚಿಕ್ಕಯ್ಯ ಮೊಗವೀರ, ಬೈಂದೂರು ತಹಶೀಲ್ದಾರ್ ಶ್ರೀಕಾಂತ್ ಕೆ ಹೆಗ್ಡೆ, ಬೈಂದೂರು ಪಟ್ಟಣ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನವೀನ್ ಕುಮಾರ್, ಕೊಲ್ಲೂರು ಗ್ರಾಮ ಲೆಕ್ಕಾಧಿಕಾರಿ ವೀರೇಶ್, ದೇವಳದ ಅರ್ಚಕ ಡಾ. ಕೆ ನರಸಿಂಹ ಅಡಿಗ, ಬೈಂದೂರು ವೃತ್ತ ನಿರೀಕ್ಷಕ ಸಂತೋಷ್ ಕಾಯ್ಕಿಣಿ, ದೇವಳದ ಕಾರ್ಯನಿರ್ವಹಣಾಧಿಕಾರಿ ಇದ್ದರು.

  • ಬೈಂದೂರು: ಸಾಮಾನ್ಯ ಕಾರ್ಯಕರ್ತನಿಗೆ ಅವಕಾಶ ಕಲ್ಪಿಸುವ ಪಕ್ಷ ಬಿಜೆಪಿ – ಗುರುರಾಜ್ ಗಂಟಿಹೊಳೆ

    ಬೈಂದೂರು: ಸಾಮಾನ್ಯ ಕಾರ್ಯಕರ್ತನಿಗೆ ಅವಕಾಶ ಕಲ್ಪಿಸುವ ಪಕ್ಷ ಬಿಜೆಪಿ – ಗುರುರಾಜ್ ಗಂಟಿಹೊಳೆ

    ಕುಂದಾಪುರ ಮಿರರ್ ಸುದ್ದಿ…

    ಬೈಂದೂರು: ನಾನೊಬ್ಬ ಸಾಮಾನ್ಯ ಕಾರ್ಯಕರ್ತ. ನನಗೆ ಅವಕಾಶ ನೀಡಿದೆ ಎಮದರೆ ಅದು ಪ್ರತಿಯೊಬ್ಬ ಕಾರ್ಯಕರ್ತನಿಗೆ ಅವಕಾಶ ನೀಡುತ್ತದೆ ಎಂದೇ ಅರ್ಥ. ಹಾಗಾಗಿ ಸಾಮಾನ್ಯ ಕಾರ್ಯಕರ್ತರ ಪಕ್ಷ ಬಿಜೆಪಿ ಎಂದು ಬೈಂದೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗುರುರಾಜ್ ಗಂಟಿಹೊಳೆ ಹೇಳಿದ್ದಾರೆ.

    ಬೈಂದೂರು ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಸೀಟು ಪಡೆದ ಬಳಿಕ ಬೈಂದೂರು ಬಿಜೆಪಿ ಕಚೇರಿಯಲ್ಲಿ ಕರೆಯಲಾದ ಮೊದಲ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು. ನನ್ನ ಬಾಲ್ಯದಿಂದಲೂ ನಾನೊಬ್ಬ ಸಾಮಾನ್ಯ ಕಾರ್ಯಕರ್ತನಂತೆ ಬೆಳೆದವನು. ಅಧಿಕಾರದ ಆಸೆಯಿಲ್ಲ. ನಾನು ಗೆದ್ದರೆ ಬಿಜೆಪಿ ಗೆದ್ದಂತೆ. ಬಿಜೆಪಿ ಗೆದ್ದರೆ ಪಕ್ಷದ ಪ್ರತಿಯೊಬ್ಬ ಸಾಮಾನ್ಯ ಕಾರ್ಯಕರ್ತ ಗೆದ್ದಂತೆ. ಯಾವತ್ತೂ ನಾನು ಪಕ್ಷ ಸಂಘಟನೆಗೆ ಒತ್ತು ಕೊಟ್ಟಿದ್ದೇನೆಯೇ ಹೊರತು ಅಧಿಕಾರದ ಲಾಲಸೆಗಾಗಿ ಅಲ್ಲ ಎಂದರು. ನನಗೆ ಈ ಅವಧಿಗೆ ಅವಕಾಶ ನೀಡಿದೆ. ಮುಂದಿನ ಸರದಿ ಇನ್ಯಾರದ್ದೋ ಆಗಿರಬಹುದು. ಅದನ್ನು ಒಪ್ಪಿಕೊಳ್ಳುತ್ತೇನೆ. ನನ್ನ ಅವಧಿಯಲ್ಲಿ ಬೈಂದೂರಿನ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸುವೆ ಎಂದರು.

    ಅಭ್ಯರ್ಥಿ ಆಯ್ಕೆಯಲ್ಲಿ ತಡವಾಗಿದೆ ಎನ್ನುವುದು ಸುಳ್ಳು. ಯಾಕೆಂದ್ರೆ ನಮ್ಮ ಪಕ್ಷದಲ್ಲಿ ಅಭ್ಯರ್ಥಿ ಯಾರು ಎನ್ನುವುದು ಮುಖ್ಯವೇ ಅಲ್ಲ. ಕಾರ್ಯಕರ್ತರು ಸೈನಿಕರಂತೆ ಸಿದ್ಧರಾಗಿದ್ದಾರೆ. ಕಮಾಂಡಿಗಾಗಿ ಕಾಯುತ್ತಾರೆ ಅಷ್ಟೆ. ಹಾಗಾಗಿ ಚುನಾವಣೆಯನ್ನು ಗೆಲ್ಲುವುದು ಪಕ್ಷದ ಕಾರ್ಯಕರ್ತರೇ ಹೊರತು ನಾಯಕರಲ್ಲ ಎಂದರು.

    ಕೈಗಾರಿಕಾ ಪ್ರಕೋಷ್ಟ ಜಿಲ್ಲಾ ಅಧ್ಯಕ್ಷ ಬಿ.ಎಸ್.ಸುರೇಶ್ ಶೆಟ್ಟಿ, ಬೈಂದೂರು ಮಂಡಲ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ, ಕಾರ್ಯದರ್ಶಿ ಪ್ರಿಯದರ್ಶಿನಿ ಬಿಜೂರು, ಜಿಲ್ಲಾ ಪ್ರದಾನ ಕಾರ್ಯದರ್ಶಿ ಸದಾನಂದ ಉಪ್ಪಿನಕುದ್ರು, ಉವ ಮೋರ್ಚಾ ಮುಖಂಡ ಶರತ್ ಶೆಟ್ಟಿ ಉಪ್ಪುಂದ, ಉದ್ಯಮಿ ಅಶೀಕ್ ಕುಮಾರ್ ಶೆಟ್ಟಿ, ಉಸ್ತುವಾರಿ ಬಿ. ಕಿಶೋರ್ ಕುಮಾರ್ ಮೊದಲಾದವರು ಉಪಸ್ಥಿತರಿದ್ದರು.

  • ಕೊಲ್ಲೂರು :ಆಂತರಿಕ ಸಮೀಕ್ಷೆ ಆಧರಿಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗಿದೆ – ಸಿ.ಎಂ.ಬೊಮ್ಮಾಯಿ

    ಕೊಲ್ಲೂರು :ಆಂತರಿಕ ಸಮೀಕ್ಷೆ ಆಧರಿಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗಿದೆ – ಸಿ.ಎಂ.ಬೊಮ್ಮಾಯಿ

    ಕುಂದಾಪುರ ಮಿರರ್ ಸುದ್ದಿ…

    ಕುಂದಾಪುರ : ಪಕ್ಷದ ವತಿಯಿಂದ ಮಾಡಿರುವ ಸರ್ವೇ ಆಧಾರದಲ್ಲಿ ಈಗಾಗಲೇ ಚರ್ಚೆ ಮಾಡಿ ತೆಗೆದುಕೊಂಡಿರುವ ತೀರ್ಮಾನದಂತೆ ಮೂಡಗೆರೆ ಸೇರಿದಂತೆ ಕೆಲವೊಂದು ಕ್ಷೇತ್ರಗಳಲ್ಲಿ ಹಾಲಿ ಶಾಸಕರ ಬದಲಿಗೆ ಬೇರೆ ಅಭ್ಯರ್ಥಿಯನ್ನು ಘೋಷಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸ್ವಷ್ಟಪಡಿಸಿದ್ದಾರೆ.

    ಕೊಲ್ಲೂರಿನಲ್ಲಿ ಗುರುವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮೂರು ಅವಧಿಗೆ ಶಾಸಕರಾಗಿರುವ ಎಂ.ಪಿ.ಕುಮಾರಸ್ವಾಮಿಯೊಂದಿಗೆ ಮಾತನಾಡಿ ಪರಿಸ್ಥಿತಿಯನ್ನು ತಿಳಿಗೊಳಿಸಿ ಅವರನ್ನು ಪಕ್ಷದಲ್ಲಿ ಉಳಿಸಿಕೊಳ್ಳುವ ಪ್ರಯತ್ನ ಮಾಡಲಾಗುವುದು. ಯಾವುದೇ ಚುನಾವಣೆ ಗೆಲ್ಲದವರು ಶಾಸಕರಾಗಿರುವ ಹಾಗೂ ಇತರ ಚುನಾವಣೆಗಳಲ್ಲಿ ಗೆದ್ದಿರುವ ಸಾಕಷ್ಟು ಉದಾಹರಣೆ ನಮ್ಮಲ್ಲಿ ಇದೆ. ಪಕ್ಷ ಹಾಗೂ ಸಂಘಟನೆ ಗಟ್ಟಿಯಾಗಿದೆ ಎಂದರು.

    ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು ಹಾಲಿ ಶಾಸಕರ ಬದಲಾವಣೆಗಾಗಿ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರಯೋಗ ಶಾಲೆಯನ್ನಾಗಿಸಿದೆ ಎನ್ನುವುದರಲ್ಲಿ ಅರ್ಥವಿಲ್ಲ. ಇಲ್ಲಿನ ಯಾವುದೇ ರಿಸ್ಕ್ ತೆಗೆದುಕೊಂಡು ಮಾಡಿರುವ ಆತುರದ ನಿರ್ಧಾರವೂ ಅಲ್ಲ. ಈಗ ಘೋಷಣೆಯಾಗಿರುವ ಅಭ್ಯರ್ಥಿಗಳು ಸಂಘಟನೆಯಲ್ಲಿ ಪ್ರಬಲ ಹಾಗೂ ಗಟ್ಟಿಯಾದ ನೆಲೆಯನ್ನು ಹೊಂದಿದವರಾಗಿದ್ದಾರೆ. ಬದಲಾವಣೆ ಸಂಘಟನೆಯ ಒಂದು ಭಾಗವಾಗಿದೆ ಎಂದು ತಿಳಿಸಿದರು.

    ಚುನಾವಣೆಯ ಕಾರ್ಯದಲ್ಲಿ ಇರುವ ಜಿಲ್ಲೆಯ ಐದು ಕ್ಷೇತ್ರದ ಶಾಸಕರು ಹಾಗೂ ಮುಖಂಡರನ್ನು ನಾನೇ ಬರುವುದು ಬೇಡ ಎಂದಿರುವುದರಿಂದ ಕೊಲ್ಲೂರಿಗೆ ಯಾರು ಬಂದಿಲ್ಲ, ಇದರಲ್ಲಿ ಅನ್ಯ ಉದ್ದೇಶಗಳಿಲ್ಲ. ಮೀನುಗಾರ ಮುಖಂಡರಾಗಿರುವ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಅವರನ್ನು ಚುನಾವಣೆಯ ವೇಳೆ ಪಕ್ಷ ರಾಜ್ಯ ಮಟ್ಟದಲ್ಲಿ ಬಳಸಿಕೊಳ್ಳಲಿದೆ. ಮುಂಬರುವ ದಿನಗಳಲ್ಲಿ ಅವರಿಗೂ ಒಳ್ಳೆಯ ಅವಕಾಶಗಳು ದೊರಕುವ ವಿಶ್ವಾಸವಿದೆ ಎಂದರು.

    ನಾನು ಮತ್ತು ರಿಷಬ್ ಶೆಟ್ಟಿ ಮೊದಲಿನಿಂದಲೂ ಒಳ್ಳೆಯ ಸ್ನೇಹಿತರು, ಅವರು ದೇವಸ್ಥಾನಕ್ಕೆ ಬರುವ ವಿಚಾರ ನನಗೆ ಗೊತ್ತೇ ಇರಲಿಲ್ಲ. ಇಲ್ಲಿಗೆ ಬಂದ ಬಳಿಕವಷ್ಟೇ ಅವರ ಭೇಟಿಯಾಗಿದೆ. ಪಕ್ಷದ ಚುನಾವಣಾ ಪ್ರಚಾರ ಕಾರ್ಯಕ್ಕೆ ಅವರನ್ನು ಬಳಸಿಕೊಳ್ಳುವ ಕುರಿತು ಈವರೆಗೂ ಯಾವುದೆ ಯೋಜನೆ ರೂಪಿಸಿಲ್ಲ ಎಂದು ಹೇಳಿದ ಅವರು, ನಾಡಿನ ಜನರಿಗೆ ಒಳ್ಳೆಯದಾಗಲಿ ಹಾಗೂ ನಾಡು ಸುಭೀಕ್ಷೆಯಾಗಲಿ ಎಂದು ತಾಯಿ ಮೂಕಾಂಬಿಕೆಯಲ್ಲಿ ಬೇಡಿಕೊಂಡಿದ್ದೇನೆ ಎಂದರು.

  • ಕೋಟ – ರೈತರೆಡೆಗೆ ನಮ್ಮ ನಮ್ಮ ನಡಿಗೆ – ಮಣೂರು ಪಡುಕರೆ ಕೃಷ್ಣ ಹಂದೆ ಅವರಿಗೆ ಗೌರವ

    ಕೋಟ – ರೈತರೆಡೆಗೆ ನಮ್ಮ ನಮ್ಮ ನಡಿಗೆ – ಮಣೂರು ಪಡುಕರೆ ಕೃಷ್ಣ ಹಂದೆ ಅವರಿಗೆ ಗೌರವ

    ಕುಂದಾಪುರ ಮಿರರ್ ಸುದ್ದಿ…

    ಕೋಟ: ಪಂಚವರ್ಣ ಯುವಕ‌ ಮಂಡಲ (ರಿ) ಕೋಟ ಇದರ ಅಧೀನ‌ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲ ನೇತ್ರತ್ವದಲ್ಲಿ ಗೀತಾನಂದ ಫೌಂಡೇಶನ್ ಮಣೂರು, ರೈತ ಧ್ವನಿ ಸಂಘ ಕೋಟ, ಗೆಳೆಯರ ಬಳಗ ಕಾರ್ಕಡ, ರೋಟರಿ ಕ್ಲಬ್ ಕೋಟ ಸಾಲಿಗ್ರಾಮ, ವಿಪ್ರ ಮಹಿಳಾ ಬಳಗ ಸಾಲಿಗ್ರಾಮ ಇವರುಗಳ ಸಂಯುಕ್ತ ಸಹಯೋಗದೊಂದಿಗೆ ಪ್ರತಿ ತಿಂಗಳ ಸರಣಿ ಕಾರ್ಯಕ್ರಮ ರೈತರೆಡೆಗೆ ನಮ್ಮ ನಡಿಗೆ 24ನೇ ಮಾಲಿಕೆ (ಏ.18) ಮಂಗಳವಾರ ಸಂಜೆ 4.ಗ ನಡೆಯಲಿದೆ ಈ ಬಾರಿ ಹಿರಿಯ ಕೃಷಿ ಕಾಯಕ ಜೀವಿ ಕೃಷ್ಣ ಹಂದೆ ಮಣೂರು ಪಡುಕರೆ ಇವರನ್ನು ಗೌರವಿಸಲಾಗುವುದು ಎಂದು ಪಂಚವರ್ಣ ಯುವಕ ಮಂಡಲದ ಅಧ್ಯಕ್ಷ ಅಜಿತ್ ಆಚಾರ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

  • ವಂಡ್ಸೆ: ಶಾಸಕರ ಮನೆ ಮುಂದೆ ಬಿಜೆಪಿ ಕಾರ್ಯಕರ್ತರ ಆಕ್ರೋಶ: ಸೀಟ್ ತಪ್ಪುವ ಭೀತಿಯಲ್ಲಿ ಸುಕುಮಾರ ಶೆಟ್ಟಿ ಅಭಿಮಾನಿಗಳು – ನಾಳೆ ಕಾರ್ಯಕರ್ತರ ಸಭೆ

    ವಂಡ್ಸೆ: ಶಾಸಕರ ಮನೆ ಮುಂದೆ ಬಿಜೆಪಿ ಕಾರ್ಯಕರ್ತರ ಆಕ್ರೋಶ: ಸೀಟ್ ತಪ್ಪುವ ಭೀತಿಯಲ್ಲಿ ಸುಕುಮಾರ ಶೆಟ್ಟಿ ಅಭಿಮಾನಿಗಳು – ನಾಳೆ ಕಾರ್ಯಕರ್ತರ ಸಭೆ

    ಕುಂದಾಪುರ ಮಿರರ್ ಸುದ್ದಿ…

    ವಂಡ್ಸೆ: ಬಿಜೆಪಿಯ ಬೈಂದೂರು ವಿಧಾನಸಭಾ ಕ್ಷೇತ್ರದ ಹಾಲೀ ಶಾಸಕ ಬಿ.ಎಂ.ಸುಕುಮಾರ ಶೆಟ್ಟಿಯವರಿಗೆ ಮುಂದಿನ ಚುನಾವಣೆಯಲ್ಲಿ ಸೀಟು ತಪ್ಪಿರುವ ವಿಚಾರ ತಿಳಿದ ಬಿಜೆಪಿ ಕಾರ್ಯಕರ್ತರು ಆಕ್ರೋಶ ಹೊರ ಹಾಕಿದ್ದಾರೆ

    ಮಂಗಳವಾರ ರಾತ್ರಿ ಬಿ.ಎಂ. ಸುಕುಮಾರ ಶೆಟ್ಟಿಯವರಿಗೆ ಸೀಟು ಸಿಕ್ಕಿಲ್ಲ ಎನ್ನುವ ಮಾಹಿತಿ ಖಚಿತಗೊಳ್ಳುತ್ತಿದ್ದಂತೆ ಶಾದಕರ ಮನೆ ಮುಂದೆ ತಂಡೋಪತಂಡವಾಗಿ ಬಿಜೆಪಿ ಕಾರ್ಯಕರ್ತರು ಹಾಗೂ ಶಾಸಕರ ಅಭಿಮಾನಿಗಳು ಜಮಾಯಿಸಿದರು.

    ಸುಮಾರು ಐನೂರಕ್ಕೂ ಹೆಚ್ಚು ಕಾರ್ಯಕರ್ತರು ಬಿಜೆಪಿ ಹೈಕಮಾಂಡ್ ನಿರ್ಧಾರಕ್ಕೆ ಆಕ್ರೋಶ ಹೊರಹಾಕಿ, ಶಾಸಕರ ನಿರ್ಧಾರ ಪ್ರಕಟಿಸುವಂತೆ ಆಗ್ರಹಿಸಿದರು. ಈ ಸಂದರ್ಭ ಕಾರ್ಯಕರ್ತರು ಹಾಗೂ ಅಭಿಮಾನಿಗಳನ್ನು ಸಮಾಧಾನ ಮಾಡಿದರೂ ಪ್ರಯೋಜನವಾಗಿಲ್ಲ. ಪಕ್ಷಕ್ಕಾಗಿ ಕೇಸು ಮೈಮೇಲೆ ಎಳೆದುಕೊಂಡಿದ್ದರೂ, ಕಾರ್ಯಕರ್ತರನ್ನು ಕಡೆಗಣನೆ ಮಾಡಲಾಗಿದ್ದು, ಶಾಸಕರಿಗೆ ಸೀಉಟ ಕೊಡುವಂತೆ ಆಗ್ರಹಿಸಿದರು.

    ಬಳಿಕ ಕಾರ್ಯಕರ್ತರೊಂದಿಗೆ ಮಾತನಾಡಿದ ಬಿಜೆಪಿ ಬೈಂದೂರು ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ, ನಾಳೆ ಬುಧವಾರ ಬೆಳಿಗ್ಗೆ ಹತ್ತು ಗಂಟೆಗೆ ಶಾಸಕರ ಮನೆಯಲ್ಲಿ ಸಭೆ ಕರೆಯಲಾಗಿದ್ದು, ಸಭೆಯಲ್ಲಿ ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಿಸಿ ಮುಂದಿನ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.

  • ಕುಂದಾಪುರ: ಶತಾಯುಷಿ ಮತದಾರೆಗೆ ಡಿಸಿ ಆಹ್ವಾನ

    ಕುಂದಾಪುರ: ಶತಾಯುಷಿ ಮತದಾರೆಗೆ ಡಿಸಿ ಆಹ್ವಾನ

    ಕುಂದಾಪುರ ಮಿರರ್ ಸುದ್ದಿ…

    ಕುಂದಾಪುರ: ಉಡುಪಿ ಜಿಲ್ಲೆಯಲ್ಲಿರುವ ೨೦೯ ಮಂದಿ ಶತಾಯುಷಿ ಮತದಾರರಿಗೆ ಮೇ ೧೦ ರಂದು ನಡೆಯುವ ಮತದಾನದಲ್ಲಿ ಭಾಗವಹಿಸುವಂತೆ ಜಿಲ್ಲಾ ಸ್ವೀಪ್ ಸಮಿತಿಯಿಂದ ವಿಶೇಷ ಆಹ್ವಾನ ನೀಡಲಾಗುತ್ತಿದ್ದು, ತಲ್ಲೂರು ಗ್ರಾ.ಪಂ. ವ್ಯಾಪ್ತಿಯ ಉಪ್ಪಿನಕುದ್ರುವಿನಲ್ಲಿ ಉಡುಪಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಅವರು ಸೋಮವಾರ ಸಂಜೆ ಶತಾಯುಷಿ ಮತದಾರೆ ೧೦೧ ವರ್ಷದ ಆಲಿಸ್ ಅವರಿಗೆ ಆಹ್ವಾನ ಪತ್ರವನ್ನು ನೀಡುವ ಮೂಲಕ ಈ ಅಭಿಯಾನಕ್ಕೆ ಚಾಲನೆ ನೀಡಿದರು.
    ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿಗಳು, ಸ್ವೀಪ್ ಸಮಿತಿಯಿಂದ ವಿಶೇಷ ಆಹ್ವಾನ ನೀಡಲಾಗುವ ಅಭಿಯಾನ ಹಮ್ಮಿಕೊಂಡಿದ್ದು, ಉಪ್ಪಿನಕುದ್ರುವಿನಲ್ಲಿ ಶತಾಯುಷಿಯೊಬ್ಬರಿಗೆ ಮೊದಲಿಗೆ ಆಹ್ವಾನ ಕೊಟ್ಟಿದ್ದೇವೆ. ಈವರೆಗಿನ ಚುನಾವಣೆಯೆಲ್ಲ ಭಾಗವಹಿಸಿದ್ದು, ಅವರನ್ನು ಅದಕ್ಕಾಗಿ ಸಮ್ಮಾನಿಸಿದ್ದೇವೆ. ಇದೊಂದು ಖುಷಿಯ ಸಂಗತಿ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಚುನಾವಣೆ ದೊಡ್ಡ ಹಬ್ಬ. ಇವರು ಪ್ರತಿ ಚುನಾವಣೆಯಲ್ಲೂ ಭಾಗವಹಿಸಿದ್ದಾರೆ. ಇಂತಹ ಶತಾಯುಷಿ ಮತದಾರರು ನಮ್ಮ ಜಿಲ್ಲೆಯ ಹೆಮ್ಮೆ. ಉಡುಪಿ ಜಿಲ್ಲೆಯ ಮತದಾರರು ತಾವೆಲ್ಲರೂ ಇವರನ್ನು ಪ್ರೇರಣೆಯಾಗಿಟ್ಟುಕೊಂಡು, ಮತದಾನ ಪ್ರಕ್ರಿಯೆಯಲ್ಲಿ ‘ಗವಹಿಸಿ. ವಿಶೇಷವಾಗಿ ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯೇ ಅನ್ನುವುದನ್ನು ನಮ್ಮ ಸಹಾಯವಾಣಿ, ಮತಗಟ್ಟೆ ಅಽಕಾರಿಗಳ ಬಳಿ ಖಚಿತಪಡಿಸಿಕೊಳ್ಳಿ ಎಂದವರು ಹೇಳಿದರು.
    ಮತದಾನ ಮಾಡಿ..
    ಇದೇ ವೇಳೆ ೧೦೧ ವರ್ಷದ ಆಲಿಸ್ ಅವರನ್ನು ಜಿಲ್ಲಾಡಳಿತದ ವತಿಯಿಂದ ಸಮ್ಮಾನಿಸಲಾಯಿತು. ಈ ವೇಳೆ ಸಂತಸ ವ್ಯಕ್ತಪಡಿಸಿದ ಅವರು, ನಾನು ಪ್ರತಿ ಸಲ ಮತದಾನ ಮಾಡಿದ್ದೇನೆ. ನೀವೆಲ್ಲ ಮತದಾನ ಮಾಡಿ. ಎಲ್ಲರೂ ಮತದಾನದಲ್ಲಿ ಭಾಗವಹಿಸಿ ಎಂದು ಮನವಿ ಮಾಡಿದರು.
    ೧೯ ವರ್ಷದ ನಿಶಾಂತ್ ಪ್ರಥಮ ಬಾರಿಗೆ ಈ ಬಾರಿ ಮತ ಚಲಾಯಿಸುತ್ತಿದ್ದು, ಈ ವಿಶೇಷ ಆಹ್ವಾನ ಪತ್ರವನ್ನು ಅವರೇ ಓದಿದ್ದು ವಿಶೇಷ.
    ೧೦೧ ವರ್ಷದ ಆಲಿಸ್ ಅವರಲ್ಲಿ ಆತ್ಮೀಯವಾಗಿ ಕುಶಲೋಪರಿ ನಡೆಸಿದ ಜಿಲ್ಲಾಽಕಾರಿಗಳು, ನಾನು ಯಾರೆಂದು ನಿಮಗೆ ಗೊತ್ತೇ? ನಾನು ನಿಮ್ಮ ಜಿಲ್ಲಾಧಿಕಾರಿ. ಇವರು ಜಿ.ಪಂ. ಸಿಇಒ ಎನ್ನುವುದಾಗಿ ಪರಿಚಯಿಸಿಕೊಂಡರು. ನಿಮ್ಮಿಂದ ಇಡೀ ಜಿಲ್ಲೆಯ ಜನರಿಗೆ ಮತದಾನದಲ್ಲಿ ಭಾಗವಹಿಸುವಂತೆ ಒಂದು ಸಂದೇಶ ಬೇಕಿದೆ. ನಿಮ್ಮ ಇಷ್ಟು ವರ್ಷದ ಮತದಾನದ ಅನುಭವ ಹೇಗಿದೆ? ಓಟು ಹಾಕಲು ಎಷ್ಟು ದೂರವಿದೆ. ಹೇಗೆ ಹೋಗುತ್ತಿದ್ದೀರಿ ಎನ್ನುವುದಾಗಿ ಕೇಳಿದರಲ್ಲದೆ, ನಿಮಗೆ ಮನೆಯಿಂದಲೇ ಈ ಬಾರಿ ಮತದಾನ ಮಾಡಲು ಅವಕಾಶವಿದೆ ಎಂದು ತಿಳಿಸಿದರು. ಇದಕ್ಕೆ ತಮ್ಮದೇ ಮಾತಲ್ಲಿ ಆಲಿಸ್ ಅವರು ಉತ್ತರಿಸಿದರು
    ಈ ಸಂದ‘ದಲ್ಲಿ ಜಿ.ಪಂ. ಸಿಇಒ ಪ್ರಸನ್ನ ಎಚ್., ಕುಂದಾಪುರ ಎಸಿ ರಶ್ಮಿ ಎಸ್.ಆರ್., ಕುಂದಾಪುರ ತಹಶೀಲ್ದಾರ್ ಶೋಭಾಲಕ್ಷ್ಮಿ, ತಾ.ಪಂ. ಇಒ ಮಹೇಶ್ ಹೊಳ್ಳ, ತಲ್ಲೂರು ಗ್ರಾ.ಪಂ. ಪಿಡಿಒ ನಾಗರತ್ನ, ವಿಎ ಹರೀಶ್, ಬಿಎಲ್‌ಒ ನಾರಾಯಣ್,  ಮತ್ತಿತರರು ಉಪಸ್ಥಿತರಿದ್ದರು.
  • ಕುಂದಾಪುರ :ಶಿಕ್ಷ ಪ್ರಭ ಅಕಾಡೆಮಿ ಕುಂದಾಪುರ – ಸಿಎ/ ಸಿಎಸ್ ಆಸಕ್ತ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ

    ಕುಂದಾಪುರ :ಶಿಕ್ಷ ಪ್ರಭ ಅಕಾಡೆಮಿ ಕುಂದಾಪುರ – ಸಿಎ/ ಸಿಎಸ್ ಆಸಕ್ತ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ

    ಕುಂದಾಪುರ ಮಿರರ್ ಸುದ್ದಿ…

    ಕುಂದಾಪುರ: ಪಿಯುಸಿ ನಂತರ ಪ್ರೊಫೆಷನಲ್ ಕೋರ್ಸುಗಳಾದ ಸಿಎ /ಸಿಎಸ್ ಕೋರ್ಸುಗಳನ್ನು ಮಾಡಲಿಚ್ಛಿಸುವ ವಿದ್ಯಾರ್ಥಿಗಳಿಗೆ ಕಳೆದ ಕೆಲವು ವರ್ಷಗಳಿಂದ ಗುಣಮಟ್ಟದ ತರಬೇತಿ ನೀಡುತ್ತ ಬಂದಿರುವ ಪ್ರತಿಷ್ಠಿತ ಶಿಕ್ಷಣ ಸಂಸ್ಥೆ ಶಿಕ್ಷ ಪ್ರಭ ಅಕಾಡೆಮಿ ಆಫ್ ಕಾಮರ್ಸ್ ಎಜುಕೇಶನ್ (ಸ್ಪೇಸ್) , ಆಸಕ್ತ ವಿದ್ಯಾರ್ಥಿಗಳಿಗಾಗಿ ನೂತನ ಬ್ಯಾಚ್ ಆರಂಭಿಸುತ್ತಿದ್ದು, ದ್ವಿತೀಯ ಪಿಯುಸಿ ಪೂರ್ಣಗೊಳಿಸಿದ ವಿದ್ಯಾರ್ಥಿಗಳು ಇದರ ಪ್ರಯೋಜನವನ್ನು ಪಡೆಯಬಹುದಾಗಿದೆ. ಪದವಿ ಜೊತೆಗೆ ಸಿಎ/ಸಿಎಸ್ ಪರೀಕ್ಷೆಯನ್ನು ಪೂರೈಸಲು ಅನುಕೂಲವಾಗುವ ರೀತಿಯಲ್ಲಿ ತರಗತಿಗಳನ್ನು ಸಂಸ್ಥೆ ನೆಡೆಸುತ್ತಿದ್ದು ವಿದ್ಯಾರ್ಥಿಗಳು ಪದವಿಯೊಂದಿಗೆ ಸಿಎ/ಸಿಎಸ್ ಪರೀಕ್ಷೆಯನ್ನು ತೇರ್ಗಡೆಹೊಂದಲು ಸಹಕಾರಿಯಾಗುತ್ತದೆ.

    ಅಖಿಲ ಭಾರತ ಮಟ್ಟದ ರ್ಯಾಂಕ್ಗಳು: ಶಿಕ್ಷ ಪ್ರಭ ಸಂಸ್ಥೆಯ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಸಿಎ /ಸಿಎಸ್ ಪರೀಕ್ಷೆಯಲ್ಲಿ ಉತ್ತೀರ್ಣರಾಗು ವುದಲ್ಲದೆ ಅಖಿಲ ಭಾರತಕ್ಕೆ ರ್ಯಾಂಕ್ಗಳಿಸುವುದರ ಮೂಲಕ ರಾಷ್ಟ್ರೀಯ ಮಟ್ಟದಲ್ಲಿ ಸಾಧನೆಗೈದಿದ್ದಾರೆ ಸಂಸ್ಥೆಯ ಪ್ರಥಮ ಬ್ಯಾಚ್ನಲ್ಲೇ ಸಿಎ ಫೌಂಡೇಶನ್ ಪರೀಕ್ಷೆಗೆ ಅಖಿಲ ಭಾರತಕ್ಕೆ 21ನೇ ಮತ್ತು 27ನೇ ರ್ಯಾಂಕ್ ಜೊತೆಗೆ ಕರ್ನಾಟಕಕ್ಕೆ ಪ್ರಥಮ ರ್ಯಾಂಕ್ಗಳಿಸಿದ ಹೆಗ್ಗಳಿಕೆ ಸಂಸ್ಥೆಗೆ ಇದೆ. ಸಿಎ ಇಂಟರ್ಮೀಡಿಯೇಟ್ ಪರೀಕ್ಷೆಯಲ್ಲಿ ಅಖಿಲ ಭಾರತಕ್ಕೆ 29ನೇ ರ್ಯಾಂಕ್ಗಳಿಸಿ ಸಂಸ್ಥೆ ಇಂಟರ್ಮೀಡಿಯೇಟ್ ಪರೀಕ್ಷೆಯಲ್ಲೂ ರಾಷ್ಟ್ರಮಟ್ಟದ ಸಾಧನೆ ತೋರಿದೆ. ಶಿಕ್ಷ ಪ್ರಭ ಸಂಸ್ಥೆಯ ಸಿಎಸ್ ಫೌಂಡೇಶನ್ ಬ್ಯಾಚ್ ಸತತ ಎರಡು ಬಾರಿ ಶೇಕಡ 100 ಫಲಿತಾಂಶ ಪಡೆಯುವುದರ ಮೂಲಕ ದಾಖಲೆ ಸೃಷ್ಟಿಸಿದೆ. ಸಂಸ್ಥೆಯಲ್ಲಿ ಭೋಧಕ ಸಿಬ್ಬಂಧಿಗಳಾಗಿ ಅನುಭವಿ ಲೆಕ್ಕಪರಿಶೋಧಕರು ಮತ್ತು ಕಂಪೆನಿ ಸೆಕ್ರೆಟರಿಯವರು ಆಗಮಿಸುವುದರಿಂದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ದೊರೆತು ರಾಷ್ಟ್ರೀಯ ಮಟ್ಟದಲ್ಲಿ ಸಾಧನೆಗೈಯಲು ಸಹಕಾರಿಯಾಗಿದೆ. ಸಂಸ್ಥೆಯ ಅನೇಕ ವಿದ್ಯಾರ್ಥಿಗಳು ಸಿಎ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ದೇಶದ ನಾನಾ ಭಾಗಗಳಲ್ಲಿ ಉನ್ನತವಾದ ಹುದ್ದೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.

    ನೊಂದಣಿ ಆರಂಭ: ಶಿಕ್ಷ ಪ್ರಭ ಸಂಸ್ಥೆಯಲ್ಲಿ ಈಗಾಗಲೇ ಸಿಎ ಫೌಂಡೇಶನ್ ಮತ್ತು ಸಿಎಸ್ಇಇಟಿ(ಫೌಂಡೇಶನ್) ತರಗತಿಗಳಿಗೆ ನೋಂದಣಿ ಆರಂಭವಾಗಿದ್ದು ಏಪ್ರಿಲ್ 15ರಿಂದ ತರಗತಿಗಳು ಆರಂಭವಾಗಲಿದೆ. ಈ ಬ್ಯಾಚ್ನ ವಿದ್ಯಾರ್ಥಿಗಳನ್ನು ಡಿಸೆಂಬರ್‌ನಲ್ಲಿ ನಡೆಯುವ ಸಿಎ ಫೌಂಡೇಶನ್‌ ಪರೀಕ್ಷೆಗೆ ಮತ್ತು ನವೆಂಬರ್‌ನಲ್ಲಿ ನೆಡೆಯುವ ಸಿಎಸ್ ಫೌಂಡೇಶನ್ ಪರೀಕ್ಷೆಗೆ ತರಬೇತಿ ನೀಡಿ ಸಿದ್ಧಗೊಳಿಸಲಾಗುವುದು. ಕೆಲವೇ ಸೀಟುಗಳು ಮಾತ್ರ ಲಭ್ಯವಿದ್ದು ಆಸಕ್ತ ವಿದ್ಯಾರ್ಥಿಗಳು ತಮ್ಮ ಹೆಸರನ್ನು ನೋಂದಾಯಿಸಿಕೊಂಡರೆ ಪದವಿ ಜೊತೆಗೆ ಸಿಎ /ಸಿಎಸ್ ಪರೀಕ್ಷೆಯ ತರಬೇತಿ ಪಡೆದು ಉತ್ತೀರ್ಣರಾಗಬಹುದು. ಸಂಸ್ಥೆಯಲ್ಲಿ ರಾಷ್ಟ್ರ ಹಾಗೂ ರಾಜ್ಯದ ನಾನಾ ಭಾಗಗಳಿಂದ ಅನುಭವಿ ತರಬೇತುದಾರರಿಂದ ನಿರಂತರ ತರಬೇತಿ ವಿದ್ಯಾರ್ಥಿಗಳಿಗೆ ದೊರಕುವುದರಿಂದ ಅತ್ಯುತ್ತಮ ಫಲಿತಾಂಶ ಪಡೆಯಲು ಸಹಕಾರಿಯಾಗಲಿದೆ. ಸಿಎ/ಸಿಎಸ್ ಮಾಡಲಿಚ್ಛಿಸುವ ವಿದ್ಯಾರ್ಥಿಗಳಿಗೆ ನಿರಂತರ ಪ್ರೋತ್ಸಾಹ ಮತ್ತು ತರಬೇತಿ ನೀಡಿದ ರಾಜ್ಯದ ಕೆಲವೇ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾಗಿರುವ ಶಿಕ್ಷ ಪ್ರಭ ಸಂಸ್ಥೆ ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಗೆ ಹೆಚ್ಚಿನ ಮನ್ನಣೆ ನೀಡುತ್ತಿದೆ.

    ಕೋರ್ಸುಗಳ ಕುರಿತಾದ ಮಾಹಿತಿಗಾಗಿ ಕುಂದಾಪುರ ಕುಂದೇಶ್ವರ ರಸ್ತೆಯ ಸಿರಿ ಬಿಲ್ಡಿಂಗ್‌ನಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿಕ್ಷ ಪ್ರಭ ಅಕಾಡೆಮಿಯ ಕಚೇರಿಗೆ ಭೇಟಿ ನೀಡಬಹುದು ಅಥವಾ WWW.SHIKSHAPRABHA.COM ಗೆ ಲಾಗಿನ್ ಆಗಬಹುದು ಎಂದು ಸಂಸ್ಥೆಯ ಮುಖ್ಯಸ್ಥರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

  • ಕೆರಾಡಿ: ವರಸಿದ್ಧಿ ವಿನಾಯಕ ದೇವಸ್ಥಾನದಲ್ಲಿ ವರ್ಧಂತ್ಯುತ್ಸವ ಸಂಪನ್ನ

    ಕೆರಾಡಿ: ವರಸಿದ್ಧಿ ವಿನಾಯಕ ದೇವಸ್ಥಾನದಲ್ಲಿ ವರ್ಧಂತ್ಯುತ್ಸವ ಸಂಪನ್ನ

    ಕುಂದಾಪುರ ಮಿರರ್ ಸುದ್ದಿ…

    ಕುಂದಾಪುರ: ಶತಮಾನಗಳ ಇತಿಹಾಸವಿರುವ ಕೆರಾಡಿಯ ವರಸಿದ್ದಿ ಶ್ರೀ ವಿನಾಯಕ ದೇವಸ್ಥಾನದ ಸನ್ನಿದಾನದಲ್ಲಿ ಲೋಕ ಕಲ್ಯಾಣಾರ್ಥ ಪ್ರತೀ ವರ್ಷದಂತೆ ನಡೆಯುವ ವರ್ಧಂತ್ಯೋತ್ಸವ, 1108 ಕಾಯಿಗಳ ಸಹಸ್ರ ನಾಳಿಕೇರ, ಮಹಾಗಣಪತಿ ಯಾಗ ಕಾರ್ಯಕ್ರಮವು ಎ.9 ಭಾನುವಾರದಂದು ವಿಜೃಂಭಣೆಯಿಂದ ನಡೆಯಿತು.

    ಬೆಳಗ್ಗೆ 6ರಿಂದ ಶ್ರೀ ಗುರು ಗಣಪತಿ ಪ್ರಾರ್ಥನೆ, ಸ್ವಸ್ತಿ ಪುಣ್ಯಾಹವಾಚನ, ಋತ್ವಿಕಾ ವರ್ಣ, ಶಾಂತಿ ಹೋಮ, ಪ್ರಾಯಶ್ಚಿತ್ತ ಹೋಮ, ಬ್ರಹ್ಮ ಕಲಶಾಭಿಷೇಕ ಹಾಗೂ ಅಷ್ಟೋತ್ತರ ಶತಾಧಿಕ, ಸಹಸ್ರ ನಾಟಕೇರ, ಮಹಾ ಗಣಪತಿ ತೀರ್ಥಪ್ರಸಾದ ವಿತರಣೆ. ಯಾಗ, ಮಹಾ ಪೂಜೆ, ಕಳಶಾಭಿಷೇಕ, ಮಧ್ಯಾಹ್ನ ಮಹಾ ಅನ್ನ ಸಂತರ್ಪಣೆ ನಡೆಯಿತು.

    ಕಾರ್ಯಕ್ರಮದ ಸಂಪೂರ್ಣ ನೇತೃತ್ವವನ್ನು ವರಸಿದ್ಧಿ ವಿನಾಯಕ ದೇವಸ್ಥಾನ, ಕೆರಾಡಿ ಇದರ ಅಧ್ಯಕ್ಷ ಕೊಲ್ಲೂರು ಮೂಕಾಂಬಿಕ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೆರಾಡಿ ಚಂದ್ರಶೇಖರ ಶೆಟ್ಟಿ ವಹಿಸಿದ್ದರು.

    ಈ ಸಂದರ್ಭದಲ್ಲಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಸದಸ್ಯರಾದ ಡಾ.ಅತುಲಕುಮಾರ ಶೆಟ್ಟಿ, ಬೆಳ್ವೆ ಗಣೇಶ್ ಕಿಣಿ, ಪ್ರಮುಖರಾದ ವಸಂತ್ ಬೆಳ್ವೆ ಮೊದಲಾದವರು ಹಾಜರಿದ್ದರು.

  • ಕುಂದಾಪುರ :ಭಂಡಾರ್ಕಾರ್ಸ್ ಪದವಿ ಕಾಲೇಜಿನಲ್ಲಿ ಪೋಷಕರ ಸಮ್ಮಿಲನ ಕಾರ್ಯಕ್ರಮ

    ಕುಂದಾಪುರ :ಭಂಡಾರ್ಕಾರ್ಸ್ ಪದವಿ ಕಾಲೇಜಿನಲ್ಲಿ ಪೋಷಕರ ಸಮ್ಮಿಲನ ಕಾರ್ಯಕ್ರಮ

    ಕುಂದಾಪುರ ಮಿರರ್ ಸುದ್ದಿ…

    ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಪದವಿ ಕಾಲೇಜಿನಲ್ಲಿ ಏಪ್ರಿಲ್ 8ರಂದು ಹೆತ್ತವರು ಮತ್ತು ಪೋಷಕರ ಸಮ್ಮಿಲನ ಕಾರ್ಯಕ್ರಮ ನಡೆಯಿತು.

    ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ರವಿರಾಜ್ ನಾಯಕ್ ಮಾತನಾಡಿ ವಿದ್ಯಾರ್ಥಿಗಳು ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಲು ಇರುವಂತಹ ನೆಲೆಗಳನ್ನು ತಿಳಿಸಿದರು. ವಿದ್ಯಾರ್ಥಿಗಳು ತಮ್ಮನ್ನು ತಾವು ಮೊದಲು ಅರಿಯಬೇಕು. ತನ್ನಲ್ಲಿರುವ ಕೌಶಲಗಳನ್ನು ಗುರುತಿಸಿಕೊಳ್ಳಬೇಕು. ಜೊತೆಗೆ ಉತ್ತಮ ಅಂಕಗಳನ್ನು ಪಡೆಯುವುದು ತುಂಬಾ ಮುಖ್ಯ. ಅಲ್ಲದೆ ಸಾಮಾನ್ಯ ಜ್ಞಾನ ಅಷ್ಟೇ ಅಗತ್ಯ ಅಲ್ಲದೆ ಹೆತ್ತವರ ಜವಾಬ್ದಾರಿಯನ್ನು ನೆನಪಿಸಿದರು.

    ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಿಕ್ಷಕ ರಕ್ಷಕ ಸಂಘದ ಉಪಾಧ್ಯಕ್ಷೆ ಪ್ರಭಾವತಿ ಶೆಟ್ಟಿ ವಹಿಸಿದ್ದರು.

    ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಭಂಡಾರ್ಕಾರ್ಸ್ ಕಾಲೇಜಿನ ವಿಶ್ವಸ್ಥ ಮಂಡಳಿಯ ಸದಸ್ಯರಾದ ಕೆ.ಶಾಂತಾರಾಮ್ ಪ್ರಭು, ಭಂಡಾರ್ಕಾರ್ಸ್ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ.ಎನ್.ಪಿ.ನಾರಾಯಣ ಶೆಟ್ಟಿ, ರಕ್ಷಕ ಶಿಕ್ಷಕ ಸಂಘದ ಸದಸ್ಯರಾದ ಆದಂ ಗುಲ್ವಾಡಿ, ರಾಜೇಂದ್ರ ಉರಾಳ್ ಪ್ರಾಕ್ತನ ಉಪಸ್ಥಿತರಿದ್ದರು.

    ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಡಾ.ಶುಭಕರಾಚಾರಿ ಕಾರ್ಯಕ್ರಮ ನಿರೂಪಿಸಿದರು. ವಿದ್ಯಾರ್ಥಿ ಸಂಘದ ಅಧ್ಯಕ್ಷ ಕಾಲೇಜಿನ ಪ್ರಾಧ್ಯಾಪಕ ಪ್ರೊ. ಸತ್ಯನಾರಾಯಣ ಸ್ವಾಗತಿಸಿದರು. ಇತಿಹಾಸ ಪ್ರಾಧ್ಯಾಪಕ ಪ್ರೊ. ಗೋಪಾಲ್ ಕೆ ವಂದಿಸಿದರು.

  • ಕುಂದಾಪುರ :ಕುಂದೇಶ್ವರ ಸನ್ನಿಧಿಯಲ್ಲಿ ಶತಚಂಡಿಕಾಯಾಗ ಸಂಪನ್ನ

    ಕುಂದಾಪುರ :ಕುಂದೇಶ್ವರ ಸನ್ನಿಧಿಯಲ್ಲಿ ಶತಚಂಡಿಕಾಯಾಗ ಸಂಪನ್ನ

    ಕುಂದಾಪುರ ಮಿರರ್ ಸುದ್ದಿ…

    ಕುಂದಾಪುರ :ಕುಂದಾಪುರದ ಅಧಿ ದೇವತೆ ಶ್ರೀ ಕುಂದೇಶ್ವರ ದೇವಸ್ಥಾನದಲ್ಲಿ ಶತ ಚಂಡಿಕಾ ಯಾಗ ನಡೆಯಿತು. ಸಾವಿರಾರು ಭಕ್ತರು ಆಗಮಿಸಿ ದೇವರ ದರ್ಶನ ಪಡೆದು ಅನ್ನ ಪ್ರಸಾದ ಸ್ವೀಕರಿಸಿದರು. ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಕೃಷ್ಣಾನಂದ ಚಾತ್ರ, ಶತ ಚಂಡಿಕಾ ಯಾಗ ಸಮಿತಿ ಅಧ್ಯಕ್ಷರಾದ ಚಂದ್ರಶೇಖರ ಕಲ್ಪತರು, ಕಾರ್ಯದರ್ಶಿ ಸುಬ್ರಹ್ಮಣ್ಯ ಹೊಳ್ಳ, ಕೋಶಾಧಿಕಾರಿ ಶ್ರೀಕಾಂತ್ ಕನ್ನಂತ, ವ್ಯವಸ್ಥಾಪನ ಸಮಿತಿ ಸದಸ್ಯರಾದ ಸತೀಶ್ ಶೆಟ್ಟಿ, ವಿಶ್ವನಾಥ ಗರಡಿ ಮನೆ, ನಾಗರಾಜ್ ರಾಯಪ್ಪನ ಮಠ,ಜಯಾನಂದ ಖಾರ್ವಿ,ಸವಿತಾ ಜಗದೀಶ್, ವೀಣಾ ಕೆ, ಸತೀಶ್,, ಯಾಗ ಸಮಿತಿ ಪ್ರಮುಖರಾದ ಕಿಶೋರ್ ಹೆಗ್ಡೆ, ಸಚಿನ್ ನಕ್ಕತ್ತಾಯ, ರಾಜೇಂದ್ರ ಕಟ್ಟೆ, ಧೀರಜ್ ಹೆಜಮಾಡಿ, ಡಾ ಅಶೋಕ್, ರಮೇಶ್ ಪ್ರಭು, ಉದಯ ಶೇಟ್, ಹೃದಯ ಕುಮಾರ್ ಶೆಟ್ಟಿ, ರಾಮಾನಂದ ಗಾಣಿಗ, ಸೀತಾರಾಮ್ ಶೆಟ್ಟಿ, ಶ್ರೀಮತಿ ಶೇಖರ್, ನಾಗರಾಜ್ ನಾಯಕ್, ಶಂಕರ್ ಪೂಜಾರಿ ಕೋಡಿ, ಗೀತಾ ವಸಂತ ರೇಣುಕಾ ಆಚಾರ್ಯ, ಅನ್ನದಾನದ ಸೇವಾಕರ್ತರಾದ ಹೆಚ್ ರಘುರಾಮ್ ಶೆಟ್ಟಿ ಬರೆಕಟ್ಟು ಉಪಸ್ಥಿತರಿದ್ದರು.