Category: ಸುದ್ದಿ

  • ಕುಂದಾಪುರ :ಯುವಜನತೆಗೆ ಶಕ್ತಿ ತುಂಬುವ ಕೆಲಸವಾಗಬೇಕಿದೆ – ಡಾ.ಎಂ.ಮೋಹನ್ ಆಳ್ವಾ

    ಕುಂದಾಪುರ :ಯುವಜನತೆಗೆ ಶಕ್ತಿ ತುಂಬುವ ಕೆಲಸವಾಗಬೇಕಿದೆ – ಡಾ.ಎಂ.ಮೋಹನ್ ಆಳ್ವಾ

    ಕುಂದಾಪುರ ಮಿರರ್ ಸುದ್ದಿ…

    ಕುಂದಾಪುರ: ಯುವಶಕ್ತಿಯಲ್ಲಿ ಚೈತನ್ಯ ಶಕ್ತಿ ತುಂಬುವ ಸಮಗ್ರ ಶಿಕ್ಷಣವನ್ನು ನೀಡಬೇಕು ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ಕರೆ ನೀಡಿದರು.

    ಅವರು ಮಾರ್ಚ್ 5ರಂದು ಇಲ್ಲಿನ ಭಂಡಾರ್ಕಾರ್ಸ್ ಪದವಿ ಕಾಲೇಜಿನಲ್ಲಿ 60ರ ಸಂಭ್ರಮದಲ್ಲಿ “ನಾಟಕೋತ್ಸವ”ವನ್ನು ಉದ್ಘಾಟಿಸಿ ಮಾತನಾಡಿದರು.

    ಭಾವಿ ಭವಿಷ್ಯವನ್ನು ಕಟ್ಟಿಕೊಡುವ ಯುವಜನತೆಯಲ್ಲಿ ಒಳ್ಳೆಯ ಮನಸ್ಥಿತಿ ಕಟ್ಟುವ ಕೆಲಸವಾಗಬೇಕು. ನಾವು ಜಾಗೃತರಾಗಬೇಕು. ಜಾತಿ,ಮಾತು,ಪಂಥ ಮೀರಿದ ಊರನ್ನು ಕಟ್ಟಬೇಕು. ಸಂಸ್ಕಾರದ ಸಂಸ್ಕೃತಿ ಕಟ್ಟುವುದು ಅವಿಭಾಜ್ಯ ಅಂಗವಾಗಬೇಕು ಅಲ್ಲದೆ ನಮ್ಮಲ್ಲಿ ಸದ್ವಿಚಾರದ ಸೌಂದರ್ಯ ಪ್ರಜ್ಞೆ ಇರಬೇಕು ಎಂದು ಹೇಳಿದರು.

    ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ವಿಶ್ವಸ್ಥ ಮಂಡಳಿಯ ಹಿರಿಯ ಸದಸ್ಯ ಕೆ.ಶಾಂತಾರಾಮ್ ಪ್ರಭು ವಹಿಸಿದ್ದರು.

    ವೇದಿಕೆಯಲ್ಲಿ ವಿಶ್ವಸ್ಥ ಮಂಡಳಿಯ ಸದಸ್ಯರಾದ ಕೆ.ದೇವದಾಸ್ ಕಾಮತ್, ರಾಜೇಂದ್ರ ತೋಳಾರ್, ಸದಾನಂದ ಚಾತ್ರ, ಡಾ.ರಂಜಿತ್ ಕುಮಾರ್ ಶೆಟ್ಟಿ, ಅಭಿನಂದನ್ ಶೆಟ್ಟಿ ಉಪಸ್ಥಿತರಿದ್ದರು.

    ಭಂಡಾರ್ಕಾರ್ಸ್ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ.ಎನ್.ಪಿ.ನಾರಾಯಣ ಶೆಟ್ಟಿ ಸ್ವಾಗತಿಸಿದರು. ಪದವಿ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಡಾ.ಶುಭಕರಾಚಾರಿ ವಂದಿಸಿದರು. ಕಲಾ ಸಂಪದ ಸಂಯೋಜಕರಾದ ಶಶಾಂಕ್ ಪಟೇಲ್ ಕಾರ್ಯಕ್ರಮ ನಿರೂಪಿಸಿದರು.

  • ಸಾಸ್ತಾನ- ಬ್ರಹ್ಮ ಬೈದರ್ಕಳ ಬಿಲ್ಲವ ಸೇವಾ ಸಂಘ ಸಾಸ್ತಾನ ಇದರ ಮಾಸಿಕ ಸಭೆ, ಸ್ಥಳ ಖರೀದಿ ಹಣ ಹಸ್ತಾಂತರ

    ಸಾಸ್ತಾನ- ಬ್ರಹ್ಮ ಬೈದರ್ಕಳ ಬಿಲ್ಲವ ಸೇವಾ ಸಂಘ ಸಾಸ್ತಾನ ಇದರ ಮಾಸಿಕ ಸಭೆ, ಸ್ಥಳ ಖರೀದಿ ಹಣ ಹಸ್ತಾಂತರ

    ಕುಂದಾಪುರ ಮಿರರ್ ಸುದ್ದಿ…

    ಕೋಟ: ಬ್ರಹ್ಮ ಬೈದರ್ಕಳ ಬಿಲ್ಲವ ಸೇವಾ ಸಂಘ ಸಾಸ್ತಾನ ಇದರ ಮಾಸಿಕ ಸಭೆ ಮಾ.26ಭಾನುವಾರ ಗೊಳಿಗರಡಿಯಲ್ಲಿ ಸಂಘದ ಅಧ್ಯಕ್ಷ ಎಂ.ಸಿ ಚಂದ್ರಶೇಖರ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.

    ಸಭಾಕಲಾಪದ ನಂತರ ಬ್ರಹ್ಮ ಬೈದರ್ಕಳ ಬಿಲ್ಲವ ಸೇವಾ ಸಂಘ ಸಭಾಭವನಕ್ಕಾಗಿ ಈಗಾಗಲೇ ಖರೀದಿ ಪ್ರಕ್ರೀಯೆ ಪೂರ್ಣಗೊಂಡಿದ್ದು ಸ್ಥಳದ ಮಾಲೀಕ ಸತ್ಯನಾರಾಯಣ ಚಡಗರಿಗೆ ದಾನಿಗಳಿಂದ ಸಂಗ್ರಹಿಸಿದ 1 ಕೋಟಿ ರೂಪಾಯಿ ಹಣವನ್ನು ಸಂಘದ ಅಧ್ಯಕ್ಷ ಎಂ.ಸಿ ಚಂದ್ರಶೇಖರ್ ಹಾಗೂ ಶ್ರೀ ಕ್ಷೇತ್ರ ಗೋಳಿಗರಡಿಯ ಪಾತ್ರಿ ಶಂಕರ ಪೂಜಾರಿಯವರು ಹಸ್ತಾಂತರ ಮಾಡಿದರು.

    ಕಾರ್ಯಕ್ರಮದಲ್ಲಿ ಸಂಘದ ಗೌರವಾಧ್ಯಕ್ಷ ವಿಠ್ಠಲ ಪೂಜಾರಿ, ಪ್ರಧಾನ ಕಾರ್ಯದರ್ಶಿ ಐರೋಡಿ ವಿಠ್ಠಲ ಪೂಜಾರಿ, ಕೋಶಾಧಿಕಾರಿ ವಿಜಯ ಪೂಜಾರಿ ಐರೋಡಿ, ಹಾಗೂ ಸಂಘದ ಇತರ ಪದಾಧಿಕಾರಿಗಳು ಉಪಸ್ಥಿತರಿದ್ದರು.

  • ಬಸ್ರೂರು : ಸಂತ ಫಿಲಿಪ್ ನೇರಿ ಚರ್ಚ್‌ನಲ್ಲಿ ಗರಿಗಳ ರವಿವಾರ ಆಚರಣೆ

    ಬಸ್ರೂರು : ಸಂತ ಫಿಲಿಪ್ ನೇರಿ ಚರ್ಚ್‌ನಲ್ಲಿ ಗರಿಗಳ ರವಿವಾರ ಆಚರಣೆ

    ಕುಂದಾಪುರ ಮಿರರ್ ಸುದ್ದಿ…

    ಕುಂದಾಪುರ: ಇಲ್ಲಿನ ಸಂತ ಫಿಲಿಪ್ ನೇರಿ ಚರ್ಚ್‌ನಲ್ಲಿ ಶುಭ ಶುಕ್ರವಾರದ ಹಿಂದಿನ ರವಿವಾರ ’ಗರಿಗಳ ರವಿವಾರ’ (ಪಾಮ್ ಸಂಡೇ) ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು.

    ಗರಿಗಳ ರವಿವಾರ ಆಚರಣೆಯೊಂದಿಗೆ ಕ್ರೈಸ್ತರ ಪವಿತ್ರ ಸಪ್ತಾಹವೂ ಆರಂಭಗೊಳ್ಳಲಿದ್ದು, ಈ ಹಿನ್ನಲೆಯಲ್ಲಿ ಭಕ್ತರು ಬಲಿ ಪೂಜೆಯಲ್ಲಿ ಪಾಲ್ಗೊಂಡರು. ಬಸ್ರೂರು ಚರ್ಚಿನ ಧರ್ಮಗುರುಗಳು ಫಾ. ಚಾರ್ಲ್ಸ್ ನರೋನ್ನ ಧಾರ್ಮಿಕ ವಿಧಿವಿಧಾನ, ಬಲಿಪೂಜೆ ನೆರವೇರಿಸಿದರು.

  • ಉಡುಪಿ :ಮಾಧ್ಯಮಗಳಲ್ಲಿ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಪ್ರಚಾರಪಡಿಸಲು ಅನುಮತಿ ಕಡ್ಡಾಯ : ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ.

    ಉಡುಪಿ :ಮಾಧ್ಯಮಗಳಲ್ಲಿ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಪ್ರಚಾರಪಡಿಸಲು ಅನುಮತಿ ಕಡ್ಡಾಯ : ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ.

    ಕುಂದಾಪುರ ಮಿರರ್ ಸುದ್ದಿ…

    ಉಡುಪಿ : ಜಿಲ್ಲೆಯಲ್ಲಿ ಮಾದರಿ ಚುನಾವಣಾ ನೀತಿ ಸಂಹಿತೆಯು ಜಾರಿಯಲಿದ್ದು, ಈ ಅವಧಿಯಲ್ಲಿ ಪತ್ರಿಕೆಗಳು, ದೃಶ್ಯ ಮಾಧ್ಯಮಗಳು, ಕೇಬಲ್ ಟಿವಿ, ಪೇಸ್‌ಬುಕ್ ವಾಟ್ಸಾಪ್ ಸೇರಿದಂತೆ ಎಲ್ಲಾ ರೀತಿಯ ಸೋಷಿಯಲ್ ಮೀಡಿಯಾಗಳಲ್ಲಿ , ಯಾವುದೇ ರಾಜಕೀಯ ಪಕ್ಷ ಅಥವಾ ಚುನಾವಣಾ ಅಭ್ಯರ್ಥಿಯ ಪರವಾಗಿ ಜಾಹೀರಾತುಗಳನ್ನು ಪ್ರಕಟಿಸಲು ಜಿಲ್ಲಾ ಎಂಸಿಎಂಸಿ ಸಮಿತಿಯ ಅನುಮತಿ ಕಡ್ಡಾಯವಾಗಿದ್ದು, ಸಮಿತಿಯ ಅನುಮತಿ ಪಡೆಯದೇ ಜಾಹೀರಾತು ಪ್ರಕಟಿಸಿದಲ್ಲಿ ಸಂಬಂದಪಟ್ಟವರ ವಿರುದ್ದ ಪ್ರಜಾಪ್ರತಿನಿಧಿ ಕಾಯ್ದೆಯನ್ವಯ ಪ್ರಕರಣ ದಾಖಲಿಸಲಾಗುವುದು ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಎಚ್ಚರಿಕೆ ನೀಡಿದ್ದಾರೆ.

    ಅವರು ಇಂದು ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದಲ್ಲಿನ ಎಂಸಿಎಂಸಿ ಕಚೇರಿಗೆ ಭೇಟಿ ನೀಡಿ ಮಾತನಾಡುತ್ತಾ, ಜಾಹೀರಾತುಗಳ ಪ್ರಕಟಣೆ ಬಗ್ಗೆ ಅನುಮತಿ ಪಡೆಯುವ ಕುರಿತಂತೆ, ಜಿಲ್ಲಾ ಎಂಸಿಎಂಸಿ ಸಮಿತಿಗೆ ಜಾಹೀರಾತು ಪ್ರಕಟಣೆ ಕೋರಿ ಲಿಖಿತ ಅರ್ಜಿಯನ್ನು ಸಲ್ಲಿಸಿ, ಅಗತ್ಯ ಅನುಮತಿ ಪಡೆದ ನಂತರವೇ ಜಾಹೀರಾತು ಪ್ರಕಟಿಸಬೇಕು ಎಂದು ಅವರು ಹೇಳಿದರು.

    ಚುನಾವಣಾ ಪ್ರಚಾರಕ್ಕಾಗಿ ಮುದ್ರಣಗೊಂಡ ಕರಪತ್ರಗಳ ಮೇಲೆ ಅದನ್ನು ಮುದ್ರಣ ಮಾಡಿದ ಮುದ್ರಕರ ಹೆಸರು, ಹಾಗೂ ವಿಳಾಸ,ಪ್ರತಿಗಳ ಸಂಖ್ಯೆ ಸೇರಿದಂತೆ ಮತ್ತಿತರ ವಿಷಯಗಳನ್ನು ಕಡ್ಡಾಯವಾಗಿ ಮುದ್ರಿಸಬೇಕು ಎಂದರು.

    ಮುದ್ರಣ ಕುರಿತ ಮಾಹಿತಿಯನ್ನು ನಿಗಧಿತ ನಮೂನೆಯಲ್ಲಿ 3 ದಿನಗಳ ಒಳಗಾಗಿ ಹಾಗೂ ಸಾಮಗ್ರಿಯ ಪ್ರತಿಯನ್ನು ಕಡ್ಡಾಯವಾಗಿ ಜಿಲ್ಲಾಧಿಕಾರಿ ಕಚೇರಿಗೆ ಒದಗಿಸಬೇಕು. ಇದರ ಉಲ್ಲಂಘನೆಯು ಪ್ರಜಾಪ್ರತಿನಿಧಿ ಕಾಯ್ದೆಯ ಉಲ್ಲಂಘನೆಯಾಗಲಿದೆ ಎಂದರು.

    ಜಿಲ್ಲಾ ಎಂಸಿಎಂಸಿ ಕಚೇರಿಯನ್ನು ಮಣಿಪಾಲದ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಮೊದಲನೇ ಮಹಡಿಯಲ್ಲಿ ತೆರೆಯಲಾಗಿದ್ದು, ಜಾಹೀರಾತು ಪ್ರಕಟಣೆ ಕುರಿತಂತೆ ಅನುಮತಿ ಪಡೆಯಲು ಈ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದರು.

    ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್., ಜಿಲ್ಲಾ ಎಂಸಿಎಂಸಿ ಸಮಿತಿಯ ನೋಡೆಲ್ ಅಧಿಕಾರಿ ಮತ್ತು ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ್ ಬಿ., ಮೇಲ್ವಿಚಾರಕರು ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಉಪಸ್ಥಿತರಿದ್ದರು.

  • ಕೋಟ – ಅಖಿಲ ಭಾರತೀಯ ಗ್ರಾಹಕ ಪಂಚಾಯತ್ ಶಿಬಿರ

    ಕೋಟ – ಅಖಿಲ ಭಾರತೀಯ ಗ್ರಾಹಕ ಪಂಚಾಯತ್ ಶಿಬಿರ

    ಕುಂದಾಪುರ ಮಿರರ್ ಸುದ್ದಿ…

    ಕೋಟ: ಅಖಿಲ ಭಾರತೀಯ ಗ್ರಾಹಕ ಪಂಚಾಯತ್, ಕರ್ನಾಟಕ ಪ್ರಾಂತ ಮತ್ತು ಕೋಟ ಸಹಕಾರಿ ವ್ಯವಸಾಯಕ ಸಂಘ ಕೋಟ ಇವರ ಸಂಯುಕ್ತ ಆಶ್ರಯದಲ್ಲಿ ಅಖಿಲ ಭಾರತೀಯ ಗ್ರಾಹಕ ಪಂಚಾಯತ್ ಶಿಬಿರವು ಮಾ.28ರಂದು ಗುರುವಾರ ಕೋಟ ಸಹಕಾರಿ ವ್ಯವಸಾಯಕ ಸಂಘದ ಪ್ರಧಾನ ಕಛೇರಿಯಲ್ಲಿ ಜರಗಿತು.

    ಅಖಿಲ ಭಾರತೀಯ ಗ್ರಾಹಕ ಪಂಚಾಯತ್, ಕರ್ನಾಟಕ ಪ್ರಾಂತದ ಕೋಶಾಧ್ಯಕ್ಷ ನರಸಿಂಹ ನಕ್ಷತ್ರಿ ಇವರು ಕಾರ್ಯಕ್ರಮದ ಹಿನ್ನೆಲೆ ಬಗ್ಗೆ ತಿಳಿಸಿ, ಅಭ್ಯಾಗತರನ್ನು ಪರಿಚಯಿಸಿದರು. ಕೋಟ ಸಹಕಾರಿ ವ್ಯವಸಾಯಕ ಸಂಘ ಕೋಟ ಇದರ ಅಧ್ಯಕ್ಷ ಜಿ. ತಿಮ್ಮ ಪೂಜಾರಿಯವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಪಕ್ಷಿನೋಟದ ಕುರಿತು ಮಾಹಿತಿ ನೀಡಿದರು.

    ಸಂಪನ್ಮೂಲ ವ್ಯಕ್ತಿಗಳಾಗಿ ಅಖಿಲ ಭಾರತೀಯ ಗ್ರಾಹಕ ಪಂಚಾಯತ್‍ನ ರಾಷ್ಟ್ರೀಯ ಜಂಟಿ ಕಾರ್ಯದರ್ಶಿ ನೇಹಾ ಸಂತೋಷ್ ಜೋಶಿ.ಜಿ ಇವರು ಸಮಾಜದಲ್ಲಿ ಗ್ರಾಹಕ ಪಂಚಾಯತ್ ಪಾತ್ರದ ಬಗ್ಗೆ ಮಾಹಿತಿ ನೀಡಿದರು. ಇನ್ನೋರ್ವ ಸಂಪನ್ಮೂಲ ವ್ಯಕ್ತಿ ಅಖಿಲ ಭಾರತೀಯ ಗ್ರಾಹಕ ಪಂಚಾಯತ್‍ನ ಕರ್ನಾಟಕ ಮಹಿಳಾ ಘಟಕದ ಪ್ರಮುಖ ಮತ್ತು ರಾಷ್ಟ್ರೀಯ ಆಹಾರ ಆಂದೋಲನದ ಪ್ರಮುಖ ಗಾಯತ್ರಿ ನಾಡಿಗ್ ಟಿ. ಆರ್. ಇವರು ಗ್ರಾಹಕ ಪಂಚಾಯತ್ ಕಾರ್ಯ ಚಟುವಟಿಕೆಗಳು, ಗ್ರಾಹಕ ಸಂರಕ್ಷಣಾ ಕಾಯ್ದೆ 2019 ಹಾಗೂ ಬ್ಯಾಂಕಿಂಗ್ ಒಂಬಡಸನ್ ಬಗ್ಗೆ ಮಾಹಿತಿ ನೀಡಿದರು. ನಂತರ ಗಣ್ಯರನ್ನು ಸಂಘದ ಪರವಾಗಿ ಆತ್ಮೀಯವಾಗಿ ಗೌರವಿಸಲಾಯಿತು.

    ಸಂಘದ ನಿರ್ದೇಶಕರು ಮುಖ್ಯ ಅತಿಥಿಗಳಾಗಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಸಂಘದ ನಿವೃತ್ತ ಮತ್ತು ಹಾಲಿ ಸಿಬ್ಬಂದಿಗಳು, ಸಲಹಾ ಸಮಿತಿ ಸದಸ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

    ಮುಖ್ಯಕಾರ್ಯನಿರ್ವಹಣಾಧಿಕಾರಿ ಶರತ ಕುಮಾರ್ ಶೆಟ್ಟಿ ಸ್ವಾಗತಿಸಿ, ಧನ್ಯವಾದ ಸಮರ್ಪಿಸಿದರು. ಸಂಘದ ಸಿಬ್ಬಂದಿ ಶಾಲಿನಿ ಹಂದೆ ಇವರು ಕಾರ್ಯಕ್ರಮ ನಿರೂಪಿಸಿದರು.

     

  • ಬೆಂಗಳೂರು : ಮಹಾಲಕ್ಷ್ಮಿ.ಜಿ ಶೈಕ್ಷಣಿಕ ಸಾಧನೆ

    ಬೆಂಗಳೂರು : ಮಹಾಲಕ್ಷ್ಮಿ.ಜಿ ಶೈಕ್ಷಣಿಕ ಸಾಧನೆ

    ಕುಂದಾಪುರ ಮಿರರ್ ಸುದ್ದಿ…

    ಕೋಟ: ಬೆಂಗಳೂರು ವಿಶ್ವವಿದ್ಯಾನಿಲಯವು ಇತ್ತೀಚೆಗೆ ನಡೆಸಿದ (Bachelor of Business Administration) ಅಂತಿಮ ಪರೀಕ್ಷೆಯಲ್ಲಿ ಕುಮಾರಿ ಮಹಾಲಕ್ಷ್ಮಿ ಜಿ ಇವರು ವಿಶ್ವವಿದ್ಯಾನಿಲಯಕ್ಕೆ 5ನೇ ರ್ಯಾಂಕ್‍ನ್ನು ಪಡೆದಿದ್ದಾರೆ.

    ಇವರು ಮೂಲತಃ ಕೋಟದ ಜಿ.ಎನ್ ಗಣಪತಯ್ಯ ಇವರ ಪುತ್ರಿಯಾಗಿದ್ದು ಪ್ರಸ್ತುತ ಬೆಂಗಳೂರಿನ ರಾಜಾಜಿನಗರದ ಶ್ರೀ ಅರಬಿಂದೋ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ.

  • ಕೋಟ :ಯಂಗ್ ಬ್ರಿಗೇಡ್ ಸೇವಾದಳದ ಅಧ್ಯಕ್ಷರಾಗಿ ಗಣೇಶ್ ನೆಲ್ಲಿಬೆಟ್ಟು

    ಕೋಟ :ಯಂಗ್ ಬ್ರಿಗೇಡ್ ಸೇವಾದಳದ ಅಧ್ಯಕ್ಷರಾಗಿ ಗಣೇಶ್ ನೆಲ್ಲಿಬೆಟ್ಟು

    ಕುಂದಾಪುರ ಮಿರರ್ ಸುದ್ದಿ…
    ಕೋಟ: ಕರ್ನಾಟಕ ಪ್ರದೇಶ ಕಾಂಗ್ರೆಸ್ “ಯಂಗ್ ಬ್ರಿಗೇಡ್ ಸೇವಾದಳದ ಉಡುಪಿ ಜಿಲ್ಲೆಯ ಜಿಲ್ಲಾಧ್ಯಕ್ಷರಾಗಿ ಗಣೇಶ್ ಕೆ ನೆಲ್ಲಿಬೆಟ್ಟು ಇವರನ್ನು ಆಯ್ಕೆಗೊಳಿಸಿ ರಾಜ್ಯಾಧ್ಯಕ್ಷ “ಜುನೈದ್ ಪಿ.ಕೆ ಆದೇಶ ಹೊರಡಿಸಿದ್ದಾರೆ.

  • ಕೋಟ – ಕಲ್ಲಟ್ಟು ದೇವಳದ ಸುತ್ತು ಪೌಳಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಸಹಾಯಧನ ಹಸ್ತಾಂತರ

    ಕೋಟ – ಕಲ್ಲಟ್ಟು ದೇವಳದ ಸುತ್ತು ಪೌಳಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಸಹಾಯಧನ ಹಸ್ತಾಂತರ

    ಕುಂದಾಪುರ ಮಿರರ್ ‌ಸುದ್ದಿ…

    ಕೋಟ: ಶ್ರೀ ಕ್ಷೇತ್ರ ಕಲ್ಲಟ್ಟು ಮಹಾಲಿಂಗೇಶ್ವರ ದೇವಸ್ಥಾನ ಹರ್ತಟ್ಟು ಗಿಳಿಯಾರು ಇದರ ಸುತ್ತುಪೌಳಿ ನಿರ್ಮಾಣಕ್ಕೆ ಶ್ರೀಕ್ಷೇತ್ರ ಧರ್ಮಸ್ಥಳದಿಂದ 3ಲಕ್ಷ ಸಹಾಯಧನ ಬಿಡುಗಡೆಗೊಂಡಿದ್ದು ಇದರ ಚೆಕ್‍ನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಬ್ರಹ್ಮಾವರ ತಾಲೂಕು ಯೋಜನಾಧಿಕಾರಿ ದಿನೇಶ್ ಶೇರಿಗಾರ್ ದೇವಳದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಶೇವಧಿ ಸುರೇಶ್ ಗಾಣಿಗ ಇವರಿಗೆ ಹಸ್ತಾಂತರಿಸಿದರು.

    ಈ ಸಂದರ್ಭದಲ್ಲಿ ದೇವಳದ ವತಿಯಿಂದ ಯೋಜನಾಧಿಕಾರಿಗಳನ್ನು ಗೌರವಿಸಲಾಯಿತು. ಸೇವಾ ಪ್ರತಿನಿಧಿ ಸರೋಜ ಚಂದ್ರ ಪೂಜಾರಿ, ಮೇಲ್ವಿಚಾರಕಿ ಸುಲೋಚನಾ, ದೇವಳದ ಜೀರ್ಣೋದ್ಧಾರ ಸಮಿತಿ ಕಾರ್ಯದರ್ಶಿ ಹರೀಶ್ ದೇವಾಡಿಗ, ಕೋಶಾಧಿಕಾರಿ ಶ್ರೀಕಾಂತ್ ಶೆಣೈ, ಉಪಾಧ್ಯಕ್ಷ ತಿಮ್ಮ ಕಾಂಚನ್, ಸಿದ್ಧ ದೇವಾಡಿಗ, ಚಂದ್ರ ಹಾಡಿಕೆರೆ, ರಾಘವೇಂದ್ರ, ಅರ್ಚಕ ಸುಧೀರ್ ಐತಾಳ್ ಮತ್ತಿತರರು ಉಪಸ್ಥಿತರಿದ್ದರು.

  • ಪಾಂಡೇಶ್ವರ ಗ್ರಾಮ ಪಂಚಾಯತ್‍ನ ಸ್ನೇಹ ಸಂಜೀವಿನಿ ಒಕ್ಕೂಟದ ಭಗವತಿ ಸಂಜೀವಿನಿ ಘಟಕ ಜಿಲ್ಲಾ ಮಟ್ಟದಲ್ಲಿ ಘನ ಸಂಪನ್ಮೂಲ ನಿರ್ವಹಣೆಯಲ್ಲಿ ತೃತೀಯ ಸ್ಥಾನ

    ಪಾಂಡೇಶ್ವರ ಗ್ರಾಮ ಪಂಚಾಯತ್‍ನ ಸ್ನೇಹ ಸಂಜೀವಿನಿ ಒಕ್ಕೂಟದ ಭಗವತಿ ಸಂಜೀವಿನಿ ಘಟಕ ಜಿಲ್ಲಾ ಮಟ್ಟದಲ್ಲಿ ಘನ ಸಂಪನ್ಮೂಲ ನಿರ್ವಹಣೆಯಲ್ಲಿ ತೃತೀಯ ಸ್ಥಾನ

    ಕುಂದಾಪುರ ಮಿರರ್ ಸುದ್ದಿ…

    ಕೋಟ: ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಜಿಲ್ಲಾ ಮಟ್ಟದಲ್ಲಿ ಘನ ಸಂಪನ್ಮೂಲ ನಿರ್ವಹಣೆಯಲ್ಲಿ ಅತ್ಯುತ್ತಮ ಕಾರ್ಯ ನಿರ್ವಹಿಸುತ್ತಿರುವ ಪಾಂಡೇಶ್ವರ ಗ್ರಾಮ ಪಂಚಾಯತಿಯ ಸ್ನೇಹ ಸಂಜೀವಿನಿ ಒಕ್ಕೂಟದ ಭಗವತಿ ಸಂಜೀವಿನಿ ಎಸ್ ಎಲ್ ಆರ್ ಎಮ್ ಘಟಕವು ಜಿಲ್ಲಾ ಮಟ್ಟದಲ್ಲಿ ತೃತೀಯ ಬಹುಮಾನ ನೀಡಿ ಗೌರವಿಸಲಾಯಿತು.

    ಈ ಸಂದರ್ಭದಲ್ಲಿ ಒಕ್ಕೂಟದ ಅಧ್ಯಕ್ಷರು ಕಾರ್ಯದರ್ಶಿ ಪಂಚಾಯತ್ ಕಾರ್ಯದರ್ಶಿ ಒಕ್ಕೂಟ ದ ಪದಾಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.

  • ಪಾರಂಪಳ್ಳಿ- ಶ್ರೀ ಮಹಾವಿಷ್ಣು ಭಜನಾ ಸಂಘ ಶತಮಾನೋತ್ಸವ,ಅಖಂಡ ಭಜನೆ

    ಪಾರಂಪಳ್ಳಿ- ಶ್ರೀ ಮಹಾವಿಷ್ಣು ಭಜನಾ ಸಂಘ ಶತಮಾನೋತ್ಸವ,ಅಖಂಡ ಭಜನೆ

    ಕುಂದಾಪುರ ಮಿರರ್ ಸುದ್ದಿ…

    ಕೋಟ :ಸಾಲಿಗ್ರಾಮದ ಪಾರಂಪಳ್ಳಿ ಶ್ರೀ ಮಹಾ ವಿಷ್ಣು ಭಜನಾ ಸಂಘ ಶತಮಾನೋತ್ಸವ ಸಂಭ್ರಮಾಚರಣೆಯ ಅಂಗವಾಗಿ ಶ್ರೀ ರಾಮ ಭಜನಾ ಶತಮಾನೋತ್ಸವ, ಅಖಂಡ ಭಜನಾ ಸಪ್ತಾಹ , ಶ್ರೀ ರಾಮಭಜನಾ ವಸಂತೋತ್ಸವ ಸೇರಿದಂತೆ ವಿವಿಧ ರೀತಿಯ ಕಾರ್ಯಕ್ರಮಗಳು ಗುರುವಾರ ಚಾಲನೆಗೊಂಡಿತು. ಈ ಹಿನ್ನಲೆಯಲ್ಲಿ ಅಖಂಡ ಭಜನಾ ಕಾರ್ಯಕ್ರಮದಲ್ಲಿ ಉಡುಪಿ ಜಿಲ್ಲೆಯ ಸಾಕಷ್ಟು ಭಜನಾ ತಂಡಗಳಿಂದ ಭಜನೆ,ಕುಣಿತ ಭಜನಾ ಕಾರ್ಯಕ್ರಮ ನಡೆಯಿತು.