Category: ಸುದ್ದಿ

  • ಕೋಟ ಗಿಳಿಯಾರು ಶಾಂಭವೀ ಶಾಲೆ ಶತಮಾನೋತ್ಸವ ಪೂರ್ವಭಾವಿ ಸಭೆ, ಹಳೇ ವಿದ್ಯಾರ್ಥಿ ಸಂಘ ರಚನೆ

    ಕೋಟ ಗಿಳಿಯಾರು ಶಾಂಭವೀ ಶಾಲೆ ಶತಮಾನೋತ್ಸವ ಪೂರ್ವಭಾವಿ ಸಭೆ, ಹಳೇ ವಿದ್ಯಾರ್ಥಿ ಸಂಘ ರಚನೆ

    ಕುಂದಾಪುರ ಮಿರರ್ ಸುದ್ದಿ…

    ಕೋಟ: ಕೀರ್ತಿಶೇಷ ಕೋಟ ಶೇಷ ಕಾರಂತರು ಹುಟ್ಟುಹಾಕಿದ ಗಿಳಿಯಾರು ಶಾಂಭವೀ ವಿದ್ಯಾದಾಯನೀ ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ಇದರ ಶತಮಾನೋತ್ಸವದ ಹಿನ್ನಲೆಯಲ್ಲಿ ಪೂರ್ವಭಾವಿ ಸಭೆ ಭಾನುವಾರ ಶಾಲಾ ಸಭಾಂಗಣದಲ್ಲಿ ನಡೆಯಿತು.

    ಇದೇ ಸಂದರ್ಭದಲ್ಲಿ ಶಾಲಾ ಹಳೇ ವಿದ್ಯಾರ್ಥಿ ಸಂಘ ರಚನೆ ನಡೆಯಿತು.

    ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕ ಮಾತನಾಡಿದ ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷ ಕೆ.ರಾಜಾರಾಮ್ ಐತಾಳ್ ಡಾ.ಶಿವರಾಮ ಕಾರಂತರ ತಂದೆ ಕೀರ್ತಿಶೇಷ ಕಾರಂತರು 1924ರಲ್ಲಿ ರಚನೆಗೈದ ಶಾಂಭವೀ ಶಾಲೆ ಇದೀಗ ಶತಮಾನೋತ್ಸವ ಸಂಭ್ರಮಾಚರಣೆಯಲ್ಲಿದೆ ಈ ದಿಸೆಯಲ್ಲಿ ಅನುದಾನಿತ ಕನ್ನಡ ಮಾಧ್ಯಮ ಶಾಲೆಯಾಗಿ ಸಾಕಷ್ಟು ವಿದ್ಯಾನಿಧಿಗಳನ್ನು ಈ ಸಮಾಜಕ್ಕೆ ಧಾರೆ ಎರೆದಿದೆ. ಇಂಥಹ ಶಿಕ್ಷಣ ಸಂಸ್ಥೆಯನ್ನು ಬಹುಎತ್ತರಕ್ಕೆ ಕೊಂಡ್ಯೋಯಬೇಕಾದರೆ ಹಿಂದಿನ ವಿದ್ಯಾರ್ಥಿಗಳ ಪಾತ್ರ ಅಷ್ಟೆ ಗಣನೀಯವಾದದ್ದು ಈ ದಿಸೆಯಲ್ಲಿ ಶಾಲಾ ಹಳೇ ವಿದ್ಯಾರ್ಥಿ ಸಂಘ ರಚಿಸಿ ಶಾಲೆಯನ್ನು ಇನ್ನಷ್ಟು ಅಭಿವೃದ್ಧಿಗೊಳಿಸಬೇಕು ಶತಮಾನೋತ್ಸವದ ಅಂಗವಾಗಿ ಒಂದಿಷ್ಟು ಕಾರ್ಯಕ್ರಮಗಳ ಕಾರ್ಯಸೂಚಿ ಸಿದ್ಧಪಡಿಸಿ,ಹೊಸ ಹೊಸ ಯೋಜನೆಗಳನ್ನು ಪ್ರಚುರಪಡಿಸವ ಬಗ್ಗೆ ಸಭೆಯಲ್ಲಿ ಉಲ್ಲೇಖಿಸಿದರು.

    ಶಾಲಾ ಆಡಳಿತ ಮಂಡಳಿಯ ಸಂಚಾಲಕ ಸಚಿನ್ ಕಾರಂತ ಅಧ್ಯಕ್ಷತೆ ವಹಿಸಿದ್ದರು.ಶಾಲಾ ಹಳೇ ವಿದ್ಯಾರ್ಥಿ ಸಂಘದ ಅಧ್ಯಕ್ಷ ಕವಿತಾ ಸದಾನಂದ ಗಿಳಿ,ಶಾಲಾ ಎಸ್‍ಡಿಎಂಸಿ ಅಧ್ಯಕ್ಷ ರವೀಂದ್ರ ಜೋಗಿ ಉಪಸ್ಥಿತರಿದ್ದರು.

    ಶಾಲಾ ಮುಖ್ಯ ಶಿಕ್ಷಕ ದಿವಾಕರ್ ರಾವ್ ಸ್ವಾಗತಿಸಿ ನಿರೂಪಿಸಿ ವಂದಿಸಿದರು.ಹಳೇ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಸಂತೋಷ್ ಪ್ರಭು ಸಹಕರಿಸಿದರು.

  • ಪಾಂಡೇಶ್ವರ – ವಿಶ್ವಮಹಿಳಾ ದಿನಾಚರಣೆ , ಸಾಧಕರಿಗೆ ಸನ್ಮಾನ

    ಪಾಂಡೇಶ್ವರ – ವಿಶ್ವಮಹಿಳಾ ದಿನಾಚರಣೆ , ಸಾಧಕರಿಗೆ ಸನ್ಮಾನ

    ಕುಂದಾಪುರ ಮಿರರ್ ಸುದ್ದಿ…

    ಕೋಟ: ಮಹಿಳಾ ಮಂಡಲ ಸಾಸ್ತಾನ ಇವರ ಆಶ್ರಯದಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಮಹಿಳಾ ಮಂಡಲದ ಕಛೇರಿಯಲ್ಲಿ ಆಚರಿಸಿತು.

    ಕಾರ್ಯಕ್ರಮದಲ್ಲಿ ಹೈನುಗಾರಿಕೆಯಲ್ಲಿ ಸಾಧನೆ ಮಾಡಿದ ಲೀಲಾ ಮರಕಾಲ್ತಿ ಹಾಗೂ ಹೋಂ ನರ್ಸ್ ಆಗಿ ಹಲವು ವರ್ಷಗಳ ಕಾಲ ಸೇವೆ ಸಲ್ಲಿಸಿದ ನೀಲು ಮಡಿವಾಳ್ತಿಯವರನ್ನು ಗುರುತಿಸಿ ಸನ್ಮಾನಿಸಲಾಯಿತು. ಮಹಿಳಾ ಮಂಡಲದ ಅಧ್ಯಕ್ಷ ಸುಮಿತ್ರ ಸುಧಾಕರ್ ಅಧ್ಯಕ್ಷತೆಯನ್ನು ವಹಿಸಿದ್ದರು.

    ಪಾಂಡೇಶ್ವರ ಗ್ರಾಮಪಂಚಾಯತ್ ಅಧ್ಯಕ್ಷೆ ಕಲ್ಪನಾ ದಿನಕರ್ ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭ ಹಾರೈಸಿದರು.

    ಪಾಂಡೇಶ್ವರ ಸಂಜೀವಿನಿ ಒಕ್ಕೂಟದ ಅಧ್ಯಕ್ಷೆ ಲೀಲಾವತಿ ಗಂಗಾಧರ್ ಮಹಿಳಾ ದಿನಾಚರಣೆಯ ಮಹತ್ವವನ್ನು ತಿಳಿಸಿದರು.

    ನಂತರ ಹಲವು ಆಟೋಟ ಸ್ಪರ್ಧೆ ಏರ್ಪಡಿಸಿ ವಿಜೇತರಿಗೆ ಪ್ರಶಸ್ತಿ ನೀಡಲಾಯಿತು. ಮಹಿಳಾ ಮಂಡಲದ ಕಾರ್ಯದರ್ಶಿ ಜ್ಞಾನೇಶ್ವರಿ ಉಡುಪ ಸರ್ವರನ್ನು ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಶೈಲಜಾ ಪ್ರಕಾಶ್ ಧನ್ಯವಾದಗೈದರು. ವರಲಕ್ಷ್ಮಿ ಅವರು ಕಾರ್ಯಕ್ರಮವನ್ನು ನಿರೂಪಿಸಿದರು.

  • “ನನ್ನ ಸಹೋದರಿ” ಲೋಗೋ ಅನಾವರಣ ಮತ್ತು ಜಾಗೃತಿ ಕಾರ್ಯಕ್ರಮ

    “ನನ್ನ ಸಹೋದರಿ” ಲೋಗೋ ಅನಾವರಣ ಮತ್ತು ಜಾಗೃತಿ ಕಾರ್ಯಕ್ರಮ

    ಕುಂದಾಪುರ ಮಿರರ್ ಸುದ್ದಿ…

    ಕುಂದಾಪುರ: ಬಡತನದ ಕಾರಣಕ್ಕೆ ಹೆಣ್ಣುಮಕ್ಕಳ ಮದುವೆ ನಿಂತುಹೋಗದಂತೆ “ನನ್ನ ಸಹೋದರಿ” ಕೆಲಸ ಮಾಡುತ್ತದೆ ಎಂದು ದಕ್ಷಿಣ ಕನ್ನಡ ಜಿಲ್ಲೆಯ ಸಾಮಾಜಿಕ ಕಾರ್ಯಕರ್ತ ರಫೀಕ್ ಮಾಸ್ಟರ್ ಹೇಳಿದರು.

    ಅವರು ಮಾರ್ಚ್ 17ರಂದು ತೆಕ್ಕಟ್ಟೆಯ ಪ್ರೆಸಿಡೆಂಟ್ ಕನ್ವೆನ್ಷನ್ ಸೆಂಟರ್ ನಲ್ಲಿ “ನನ್ನ ಸಹೋದರಿ” ಕಾರ್ಯಕ್ರಮದ ಲೋಗೋ ಅನಾವರಣ ಮತ್ತು ಜಾಗೃತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

    ಬಡತನದ ಕಾರಣದಿಂದಾಗಿ ಮದುವೆಯಾಗಲು ಸಾಧ್ಯವಾಗದ ಸಮುದಾಯದ ಸಹೋದರಿಯರ ಪರಿಸ್ಥಿತಿ ಮತ್ತು ಸಮಾಜದ ಜವಾಬ್ದಾರಿಗಳ ಬಗ್ಗೆ ವಿವರಿಸಿದರು. ಶ್ರೀಮಂತರು ಬಡ ಹೆಣ್ಣುಮಕ್ಕಳನ್ನು ತನ್ನ ಸಹೋದರಿ ಎಂಬ ಭಾವನೆಯೊಂದಿಗೆ ಮದುವೆಯ ಜವಾಬ್ದಾರಿವಹಿಸುವಂತೆ ಕರೆ ನೀಡಿದರು.

    ನನ್ನ ಸಹೋದರಿ ಯೋಜನೆಯ ಅಧ್ಯಕ್ಷ ಅಬ್ದುಲ್ ಖಾದರ್ ಮೂಡಗೋಪಾಡಿಯವರ ಅಧ್ಯಕ್ಷತೆ ವಹಿಸಿದ್ದರು. ಪ್ರಧಾನ ಕಾರ್ಯದರ್ಶಿ ಮೌ/ ಝಮೀರ್ ಅಹ್ಮದ್ ರಶಾದಿಯವರ ಕುರ್ ಆನ್ ಪಠಣದೊಂದಿಗೆ ಕಾರ್ಯಕ್ರಮ ಆರಂಭವಾಯಿತು. ಅಧ್ಯಕ್ಷ ಅಬ್ದುಲ್ ಖಾದರ್ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಸಯ್ಯದ್ ಜಾಫರ್ ತಂಙಲ್ ಕೋಟೇಶ್ವರ ಮತ್ತು ಮೌಲಾನಾ ಉಬೈದುಲ್ಲಾ ನದ್ವೀ ಕಂಡ್ಲೂರು ಸಂಸ್ಥೆಯ ಲೋಗೋ ಅನಾವರಣಗೊಳಿಸಿ ಶುಭ ಹಾರೈಸಿ ಮಾತನಾಡಿದರು.

    ಈ ಸಂದರ್ಭದಲ್ಲಿ ಉದ್ಯಮಿ ಮತ್ತು ಸಮಾಜ ಸೇವಕ ಅಬ್ದುಲ್ ಸತ್ತಾರ್ ಕೋಟೇಶ್ವರ ಹಾಗೂ ಸೌದಿ ಅರೇಬಿಯಾದ ಉದ್ಯಮಿ ಮೊಹಮ್ಮದ್ ಆಸಿಫ್ ಪಾರಂಪಳ್ಳಿಯವರನ್ನು ‘ನನ್ನ ಸಹೋದರಿ’ ಸಂಸ್ಥೆಯಿಂದ ಸನ್ಮಾನಿಸಲಾಯಿತು.

    ಸಂಸ್ಥೆಯ ಕಾರ್ಯದರ್ಶಿ ವಂದಿಸಿದರು ಮತ್ತು ಹುಸೇನ್ ಹೈಕಾಡಿ ಕಾರ್ಯಕ್ರಮ ನಿರೂಪಿಸಿದರು. ಕುಂದಾಪುರ ವಲಯದ ಜಮಾಅತ್ ಹೊಣೆಗಾರರು, ಸಾಮಾಜಿಕ ಕಾರ್ಯಕರ್ತರು, ಗಣ್ಯ ವ್ಯಕ್ತಿಗಳು ಭಾಗವಹಿಸಿದರು.

  • ಉಡುಪಿ :ಜಿಲ್ಲಾ ವ್ಯಾಪ್ತಿಯಲ್ಲಿ ಪ್ರಚಾರ ಫಲಕ ಅಳವಡಿಸಲು ಅನುಮತಿ ಪಡೆಯಬೇಕು: ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ.

    ಉಡುಪಿ :ಜಿಲ್ಲಾ ವ್ಯಾಪ್ತಿಯಲ್ಲಿ ಪ್ರಚಾರ ಫಲಕ ಅಳವಡಿಸಲು ಅನುಮತಿ ಪಡೆಯಬೇಕು: ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ.

    ಕುಂದಾಪುರ ಮಿರರ್ ಸುದ್ದಿ…

    ಉಡುಪಿ: ಜಿಲ್ಲೆಯ ನಗರ ಸೇರಿದಂತೆ ಗ್ರಾಮೀಣ ಭಾಗದಲ್ಲಿ ಯಾವುದೇ ರೀತಿಯ ಸಭೆ ಸಮಾರಂಭಗಳು ಸೇರಿದಂತೆ ಮತ್ತಿತರ ಕಾರ್ಯಕ್ರಮಗಳಲ್ಲಿ ಪ್ರಚಾರ ಫಲಕಗಳನ್ನು ಅಳವಡಿಸುವ ಮುನ್ನ ಸ್ಥಳೀಯ ಸಂಸ್ಥೆಗಳು ಅಥವಾ ಗ್ರಾಮ ಪಂಚಾಯತ್ ನಿಂದ ಅನುಮತಿ ಪಡೆಯುವುದು ಕಡ್ಡಾಯವಾಗಿದೆ ತಪ್ಪಿದಲ್ಲಿ ಅಂತಹವರ ವಿರುದ್ದ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ತಿಳಿಸಿದರು.

    ಅವರು ಇಂದು ಮಣಿಪಾಲದ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ನಡೆದ ರಾಜಕೀಯ ಪಕ್ಷಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

    ಸಾಮಾನ್ಯವಾಗಿ ಯಾವುದೇ ಪ್ರಚಾರ ಫಲಕಗಳು ಭಿತ್ತಿಪತ್ರಗಳು ಕರಪತ್ರಗಳು ಧ್ವನಿವರ್ಧಕಗಳ ಬಳಕೆ ಸೇರಿದಂತೆ ಮತ್ತಿತರ ಪ್ರಚಾರ ಕೈಗೊಳ್ಳುವ ಮುನ್ನ ನಿಗಧಿತ ಪ್ರಾಧಿಕಾರದಿಂದ ಕಾನೂನುನಡಿಯಲ್ಲಿ ಅವಶ್ಯವಿರುವ ಅನುಮತಿ ಪತ್ರವನ್ನು ಪಡೆದು ಕಾರ್ಯಗತಗೊಳಿಸಬೇಕು. ಒಂದೊಮ್ಮೆ ಉಲ್ಲಂಘಿಸಿ ನಡೆದುಕೊಂಡಲ್ಲಿ ಅಂತಹವರ ವಿರುದ್ದ ಕಾನೂನಡಿಯಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

    ಯಾವುದೇ ರೀತಿಯ ಪ್ರಚಾರ ಫಲಕಗಳು ಸೇರಿದಂತೆ ಮತ್ತಿತರ ಪ್ರಚಾರ ಸಾಮಗ್ರಿಗಳನ್ನು ಅನುಮತಿ ಪಡೆದು ಬಳಸಿದ್ದಲ್ಲಿ ,ಅನುಮತಿಯ ಕಾಲಾವಧಿ ಮುಗಿದ ಕೂಡಲೇ ಅವುಗಳನ್ನು ತೆರವುಗೊಳಿಸಬೇಕು ಎಂದ ಅವರು ಯಾವುದೇ ಸಭೆ ಸಮಾರಂಭ ಮೆರವಣಿಗೆ ನಡೆಸಲು ಅನುಮತಿ ತೆಗೆದುಕೊಳ್ಳುವುದು ಕಡ್ಡಾಯ ಎಂದರು.

    ಮತದಾರರ ಪಟ್ಟಿಯಲ್ಲಿ ಜಿಲ್ಲೆಯ ಪ್ರತಿಯೊಬ್ಬ ಅರ್ಹ ಮತದಾರರು ತಮ್ಮ ಹೆಸರು ನೊಂದಾವಣಿ ಆಗಿದೆಯೇ ಎಂಬ ಬಗ್ಗೆ ಖಚಿತಪಡಿಸಿಕೊಳ್ಳಬೇಕು , ಹೆಸರು ಬಿಟ್ಟು ಹೋದಲ್ಲಿ ಕೂಡಲೇ ಹೆಸರು ನೊಂದಾಯಿಸಿಕೊಳ್ಳಬೇಕು, ಮುಂದಿನ ವಾರದಲ್ಲಿ ಬಿ.ಎಲ್.ಓ ಗಳು ಹಾಗೂ ಚುನಾವಣಾ ಏಜೆಂಟರುಗಳ ಮತಗಟ್ಟೆ ಕೇಂದ್ರಗಳಲ್ಲಿ ಮತದಾರರ ಪಟ್ಟಿಯನ್ನು ಪರಿಶೀಲಿಸಿ ಯಾವುದೇ ರೀತಿ ಗೊಂದಲಗಳಿದ್ದಲ್ಲಿ ಚುನಾವಣಾಧಿಕಾರಿಗಳ ಗಮನಕ್ಕೆ ತರುವಂತೆ ತಿಳಿಸಿದರು.
    ಪ್ರತಿ ಮತದಾನದ ಕೇಂದ್ರಗಳಲ್ಲಿ ಅಗತ್ಯ ಮೂಲಭೂತ ಸೌಕರ್ಯಗಳನ್ನು ವೀಕ್ಷಿಸಿ ಒಂದೊಮ್ಮೆ ಯಾವುದೇ ಸೌಕರ್ಯಗಳ ಕೊರತೆಯಿದ್ದಲ್ಲಿ ಚುನಾವಣಾಧಿಕಾರಿಗಳ ಗಮನಕ್ಕೆ ತರಬೇಕು ಎಂದ ಅವರು ಈ ಬಾರಿ ವಿಶೇಷವಾಗಿ 80 ವರ್ಷ ಮೇಲ್ಪಟ್ಟವರು ಮತ್ತು ವಿಶೇಷ ಚೇತನರಿಗೆ ಅಂಚೆ ಮತದಾನ ಮಾಡಲು ಅವಕಾಶ ಕಲ್ಪಿಸುವ ಸಾಧ್ಯತೆಗಳಿವೆ ಎಂದರು.

    ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್, ಎಸ್ಪಿ ಹಾಕೆ ಅಕ್ಷಯ್ ಮಚ್ಚೀಂದ್ರ , ಅಪರ ಜಿಲ್ಲಾಧಿಕಾರಿ ವೀಣಾ, ತಾಲೂಕು ಚುನಾವಣಾ ಅಧಿಕಾರಿಗಳು ಹಾಗೂ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.

  • ಕುಂದಾಪುರ :ದುಬೈ ಉದ್ಯಮಿ ವಕ್ವಾಡಿ ಪ್ರವೀಣ್ ಕುಮಾರ್ ಶೆಟ್ಟಿಗೆ ರಜತ ಸನ್ಮಾನ

    ಕುಂದಾಪುರ :ದುಬೈ ಉದ್ಯಮಿ ವಕ್ವಾಡಿ ಪ್ರವೀಣ್ ಕುಮಾರ್ ಶೆಟ್ಟಿಗೆ ರಜತ ಸನ್ಮಾನ

    ಗ್ರಾಮಗಳ ಅಭಿವೃದ್ಧಿಯಲ್ಲಿ ಸಂಘ ಸಂಸ್ಥೆಗಳ ಪಾತ್ರ ಮುಖ್ಯ: ವಕ್ವಾಡಿ ಪ್ರವೀಣ್ ಕುಮಾರ್ ಶೆಟ್ಟಿ

    ಕುಂದಾಪುರ ಮಿರರ್ ಸುದ್ದಿ…

    ಕುಂದಾಪುರ: ಸನ್ಮಾನ ಎನ್ನುವುದು ಎಂದಿಗೂ ನನಗೆ ಖುಷಿ ಕೊಡುವುದಿಲ್ಲ. ನಿಮ್ಮ ಜೊತೆ ಸೇರಿ ನನಗೆ ಇನ್ನಷ್ಟು ಸಮಾಜ ಸೇವೆ ಮಾಡಲು ಅವಕಾಶ ಸಿಕ್ಕಿರುವುದು ಸಂತೋಷದ ವಿಷಯವಾಗಿದೆ. ಗ್ರಾಮಗಳ ಅಭಿವೃದ್ಧಿಯಲ್ಲಿ ಸಂಘ ಸಂಸ್ಥೆಗಳ ಪಾತ್ರ ಬಹಳ ಮುಖ್ಯವಾದದ್ದು. ಈ ನಿಟ್ಟಿನಲ್ಲಿ ಮಿತ್ರಸಂಗಮ ಸಂಸ್ಥೆ ಜನಪರ ಕಾರ್ಯಗಳನ್ನು ಸಮಾಜಕ್ಕೆ ನೀಡುತ್ತಾ ಆಶಕ್ತರಿಗೆ ನೆರವು ನೀಡಿ ಸಮಾಜ ಮುಖಿಯಾಗಿ ತನ್ನದೇ ಆದ ವಿಶಿಷ್ಠ ಸೇವೆಯನ್ನು ನೀಡಿ ಮಾದರಿ ಸಂಸ್ಥೆಯಾಗಿ ಗುರುತಿಸಿಕೊಂಡಿದೆ ಎಂದು ದುಬೈ ಉದ್ಯಮಿ ವಕ್ವಾಡಿ ಪ್ರವೀಣ್ ಕುಮಾರ್ ಶೆಟ್ಟಿ ಹೇಳಿದರು.

    ಜಿಲ್ಲಾ ಅತ್ಯುತ್ತಮ ಯುವಕ ಮಂಡಲ ಪ್ರಶಸ್ತಿ ಪುರಸ್ಕೃತ ಸಂಸ್ಥೆಯಾದ ಬೀಜಾಡಿ ಗೋಪಾಡಿ ಮಿತ್ರಸಂಗಮದ ರಜತ ಮಹೋತ್ಸವದ ಅಂಗವಾಗಿ ಊರ ಗೌರವದ ನಮ್ಮೂರ ಪ್ರಶಸ್ತಿಯನ್ನು ಸ್ವೀಕರಿಸಿ ಅವರು ಮಾತನಾಡಿದರು.

    ಮಿತ್ರಸಂಗಮದ ಗೌರವಧ್ಯಕ್ಷ ವಾದಿರಾಜ್ ಹೆಬ್ಬಾರ್ ಅಧ್ಯಕ್ಷತೆ ವಹಿಸಿದ್ದರು. ಕಾರ್ಯದಶಿ೯ ರಾಜೇಶ್ ಆಚಾರ್, ರಜತ ಮಹೋತ್ಸವ ಸಮಿತಿ ಅಧ್ಯಕ್ಷ ದೀಪಾನಂದ ಉಪಾಧ್ಯಾಯ ಉಪಸ್ಥಿತರಿದ್ದರು.
    ಗಣೇಶ್ ಐಶ್ವರ್ಯ ಬೀಜಾಡಿ ಸ್ವಾಗತಿಸಿದರು. ಮಿತ್ರಸಂಗಮದ ಅಧ್ಯಕ್ಷ ಚಂದ್ರಶೇಖರ ಬೀಜಾಡಿ ಕಾರ್ಯಕ್ರಮ ನಿರೂಪಿಸಿದರು. ಉಪನ್ಯಾಸಕ ಪಾಂಡುರಂಗ ಬೀಜಾಡಿ ವಂದಿಸಿದರು.

  • ಕುಂದಾಪುರ: ನವೀಕರಣಗೊಂಡ ಹೂವಿನ ಮಾರುಕಟ್ಟೆ ಉದ್ಘಾಟನೆ

    ಕುಂದಾಪುರ: ನವೀಕರಣಗೊಂಡ ಹೂವಿನ ಮಾರುಕಟ್ಟೆ ಉದ್ಘಾಟನೆ

    ಕುಂದಾಪುರ ಮಿರರ್ ಸುದ್ದಿ…

    ಕುಂದಾಪುರ : ಕುಂದಾಪುರದ ಹೂವಿನ ಮಾರುಕಟ್ಟೆ ನವೀಕರಣಗೊಂಡಿದ್ದು ಅದರ ಉದ್ಘಾಟನಾ ಕಾರ್ಯಕ್ರಮ ಮಾ.17ರಂದು ನಡೆಯಿತು. ಕುಂದಾಪುರ ಪುರಸಭೆಯ ಸದಸ್ಯೆ ಹಾಗೂ ಮಾಜಿ ಅಧ್ಯಕ್ಷೆ ದೇವಕಿ ಸಣ್ಣಯ್ಯ ಉದ್ಘಾಟಿಸಿ, ನಗರೋತ್ಥಾನ ಯೋಜನೆಯ ಅನುದಾನ ಬಳಸಿಕೊಂಡು ಹೂವಿನ ಮಾರುಕಟ್ಟೆ ನವೀಕರಣ ಮಾಡಲಾಗಿದೆ. ಕುಂದಾಪುರ ಪೇಟೆಯ ನಡುವೆ ಇರುವ ಹೂವಿನ ಮಾರುಕಟ್ಟೆಯನ್ನು ಸುಂದರವಾಗಿ ನವೀಕರಣ ಮಾಡಲಾಗಿದೆ ಎಂದರು.


    ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಪುರಸಭೆ ಅಧ್ಯಕ್ಷೆ ವೀಣಾ ಭಾಸ್ಕರ ಮೆಂಡನ್ ಮಾತನಾಡಿ, ಕುಂದಾಪುರ ಪುರಸಭೆಗೆ ಲಭ್ಯವಾದ 6.5 ಕೋಟಿ ನಗರೋತ್ಥಾನ ಯೋಜನೆಯ ಅನುದಾನದ ಕ್ರಿಯಾಯೋಜನೆ ಸಿದ್ಧಪಡಿಸುವ ಸಂದರ್ಭ ಸ್ಥಳೀಯ ಸದಸ್ಯೆ ದೇವಕಿ ಸಣ್ಣಯ್ಯ ಅವರು ಹೂವಿನ ಮಾರುಕಟ್ಟೆ ನವೀಕರಣಕ್ಕೆ ಸಲಹೆ ನೀಡಿದಂತೆ ನವೀಕರಣ ಕಾರ್ಯ ಕೈಗೊಳ್ಳಲಾಯಿತು ಎಂದರು.
    ಈ ಸಂದರ್ಭದಲ್ಲಿ ಶಣೈ ಪಾರ್ಕನ್ನು ಪುರಸಭಾ ಉಪಾಧ್ಯಕ್ಷ ಸಂದೀಪ್ ಖಾರ್ವಿ ಉದ್ಘಾಟಿಸಿದರು. ಪುರಸಭೆಯ ಸದಸ್ಯರಾದ ಪ್ರಭಾಕರ, ಶ್ರೀಧರ ಶೇರುಗಾರ್, ಚಂದ್ರಶೇಖರ ಖಾರ್ವಿ, ಪ್ರಭಾವತಿ ಶೆಟ್ಟಿ, ಶೇಖರ ಪೂಜಾರಿ, ರಾಘವೇಂದ್ರ ಖಾರ್ವಿ, ನಾಮನಿರ್ದೇಶನ ಸದಸ್ಯರಾದ ಪುಷ್ಪಾ ಶೇಟ್, ರತ್ನಾಕರ, ಪುರಸಭೆ ಅಧಿಕಾರಿಗಳು ಉಪಸ್ಥಿತರಿದ್ದರು.
    ಪುರಸಭಾ ಮುಖ್ಯಾಧಿಕಾರಿ ಮಂಜುನಾಥ ವಂದಿಸಿದರು. ಚಂದ್ರಕಾಂತ್ ಕಾರ್ಯಕ್ರಮ ನಿರ್ವಹಿಸಿದರು.

  • ಕೋಟ- ಪಂಚವರ್ಣ ರಜತ ಗೌರವಕ್ಕೆ ಲಲಿತಾ ಪೂಜಾರಿ ಆಯ್ಕೆ

    ಕೋಟ- ಪಂಚವರ್ಣ ರಜತ ಗೌರವಕ್ಕೆ ಲಲಿತಾ ಪೂಜಾರಿ ಆಯ್ಕೆ

    ಕುಂದಾಪುರ ಮಿರರ್ ಸುದ್ದಿ…

    ಕೋಟ: ಕೋಟದ ಪಂಚವರ್ಣ ಯುವಕ ಮಂಡಲ ಹಾಗೂ ಪಂಚವರ್ಣ ಮಹಿಳಾ ಮಂಡಲ ಇದರ ಬೆಳ್ಳಿ ಹಬ್ಬದ ವರ್ಷಾಚರಣೆಯ ಅಂಗವಾಗಿ ಸಾಧಕರಿಗೆ ರಜತ ಗೌರವಾರ್ಪಣೆ ನೀಡುತ್ತಿದ್ದು ಈ ಹಿನ್ನಲ್ಲೆಯಲ್ಲಿ ಈ ತಿಂಗಳು ವಿಶೇಷಚೇತನರಾಗಿ ತನ್ನ ಅಂಗವೈಕಲ್ಯದ ನಡುವೆ ಕಲಾಪ್ರಕಾರಗಳಿಗೆ ಜೀವತುಂಬುವ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕ್ರತೆ ಲಲಿತಾ ಪೂಜಾರಿ ಕೊರವಾಡಿ ಇವರನ್ನು ಆಯ್ಕೆಗೊಳಿಸಲಾಗಿದೆ.

    ಪಂಚವರ್ಣ ಸಂಸ್ಥೆ ನೀಡುತ್ತಿರುವ ನಾಲ್ಕನೇ ಸಾಧಕ ಶಕ್ತಿಯಾಗಿದ್ದು ಈ ಹಿಂದೆ ಸಹಕಾರಿ ಕ್ಷೇತ್ರದಲ್ಲಿ ಸಾಧನೆಗೈದ ಜಿ.ತಿಮ್ಮ ಪೂಜಾರಿ,ಸಮಾಜಸೇವಕ ಈಶ್ವರ್ ಮಲ್ಪೆ,ಅನಾಥದ ಬದುಕಿನ ಆಶಾಕಿರಣ ವಿನಯಚಂದ್ರ ಸಾಸ್ತಾನ ಇವರುಗಳನ್ನು ಗುರುತಿಸಿದ್ದು ಇಲ್ಲಿ ಸ್ಮರಿಸಬಹುದಾಗಿದೆ.ಇದೇ ಮಾ.25ರಂದು ಕುಂಭಾಶಿಯ ಕೊರವಡಿ ಅವರ ಸ್ವಗೃಹದಲ್ಲಿ ಈ ಗೌರವ ಕಾರ್ಯಕ್ರಮ ನಡೆಯಲಿದೆ ಎಂದು ಪಂಚವರ್ಣ ಸಂಸ್ಥೆಯ ಅಧ್ಯಕ್ಷ ಅಜಿತ್ ಆಚಾರ್ಯ ತಿಳಿಸಿದ್ದಾರೆ.

  • ಕೋಟ- ಮಾ.19 ರಂದು ಪಂಚವರ್ಣ ಮಹಿಳಾ ಮಂಡಲ ನೇತ್ರತ್ವದಲ್ಲಿ ಹದಿಹರೆಯದ ಸಮಸ್ಯೆಗಳ ಮಾಹಿತಿ ಕಾರ್ಯಾಗಾರ

    ಕೋಟ- ಮಾ.19 ರಂದು ಪಂಚವರ್ಣ ಮಹಿಳಾ ಮಂಡಲ ನೇತ್ರತ್ವದಲ್ಲಿ ಹದಿಹರೆಯದ ಸಮಸ್ಯೆಗಳ ಮಾಹಿತಿ ಕಾರ್ಯಾಗಾರ

    ಕುಂದಾಪುರ ಮಿರರ್ ಸುದ್ದಿ…

    ಕೋಟ: ಪಂಚವರ್ಣ ಮಹಿಳಾ ಮಂಡಲ ನೇತ್ರತ್ವದಲ್ಲಿ ಮಾತೃಸಂಸ್ಥೆ ಕೋಟ ಪಂಚವರ್ಣ ಯುವಕ ಮಂಡಲದ ಸಹಯೋಗದೊಂದಿಗೆ ಇದೇ ಮೊದಲ ಬಾರಿಗೆ ಸಾಮಾಜಿಕ ಕಾರ್ಯಕ್ರಮ ಹದಿಹರೆಯದವರ ಸಮಸ್ಯೆಗಳ ಬಗ್ಗೆ ಎರಡನೇ ಸರಣಿ ಮಾಹಿತಿ ಕಾರ್ಯಕ್ರಮ ಅರಿವು ನಿಮಗಿರಲಿ ನೆರವು ಎಂಬ ಶೀರ್ಷಿಕೆಯಡಿ ಕೋಟ ಮೂಡುಗಿಳಿಯಾರು ಶಾಲಾ ಸಭಾಂಗಣದಲ್ಲಿ ಸ್ಥಳೀಯ ಸಂಜೀವಿನಿ ಸ್ವಸಹಾಯ,ಧರ್ಮಸ್ಥಳ ಗ್ರಾ.ಯೋ.ಸ್ತ್ರೀ ಶಕ್ತಿ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಮಾ.19 ಭಾನುವಾರ ಪೂರ್ವಾಹ್ನ 11ಗ. ಕಾರ್ಯಕ್ರಮ ಹಮ್ಮಿಕೊಂಡಿದೆ. ಸಂಪನ್ಮೂಲ ವ್ಯಕ್ತಿಯಾಗಿ ಸಮಾಜಸೇವಕಿ ಕಲ್ಪನಾ ಭಾಸ್ಕರ್ ಭಾಗವಹಿಸಲಿದ್ದಾರೆ ಎಂದು ಪಂಚವರ್ಣ ಮಹಿಳಾ ಮಂಡಲದ ಆದ್ಯಕ್ಷೆ ಕಲಾವತಿ ಅಶೋಕ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

     

  • ಕೋಟ :ಸ್ಪರ್ಧಾ ಜಗತ್ತಿನಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಾಗಿ – ಎಚ್ ಪ್ರಸನ್ನ

    ಕೋಟ :ಸ್ಪರ್ಧಾ ಜಗತ್ತಿನಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಾಗಿ – ಎಚ್ ಪ್ರಸನ್ನ

    ಕುಂದಾಪುರ ಮಿರರ್ ಸುದ್ದಿ…

    ಕೋಟ : ಸ್ಪರ್ಧಾ ಜಗತ್ತಿನಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಾಗಬೇಕಾದ ಅವಶ್ಯಕತೆಯಿದೆ. ಗ್ರಾಮೀಣ ಭಾಗದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ಬಗ್ಗೆ ಗಮನ ಹರಿಸಿ ಯಶಸ್ಸು ಕಾಣಬೇಕು, ವಿ-ಶೈನ್ ಕೋಚಿಂಗ್ ಸೆಂಟರ್ ಕೋಟ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಉಪಯುಕ್ತವಾದ ಸೇವೆ ನೀಡುತ್ತಿರುವುದು ಶ್ಲಾಘನೀಯ ಎಂದು ಉಡುಪಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಎಚ್ ಪ್ರಸನ್ನ ಅವರು ಹೇಳಿದರು.

    ಅವರು ಕೋಟದ ಡಾ. ಶಿವರಾಮ ಕಾರಂತ ಥೀಮ್ ಪಾರ್ಕ್‍ನಲ್ಲಿ ವಿ-ಶೈನ್ ಕೋಚಿಂಗ್ ಸೆಂಟರ್ ಕೋಟ ಇವರ ಆಶ್ರಯದಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಲೆಕ್ಕ ಸಹಾಯಕ, ಗ್ರೇಡ್-1 ಕಾರ್ಯದರ್ಶಿ ಮತ್ತು ಗ್ರಾಮ ಲೆಕ್ಕಿಗರ ಸ್ಪರ್ಧಾತ್ಮಕ ಪರೀಕ್ಷೆಯ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಡುತ್ತಿದ್ದರು.
    ವಿ-ಶೈನ್ ಕೋಚಿಂಗ್ ಸೆಂಟರ್‍ನ ಸಂಚಾಲಕ ಹರೀಶ್ ಕುಮಾರ್ ಶೆಟ್ಟಿ ಮಾತಾನಾಡಿ ಕರಾವಳಿ ಭಾಗದ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ತರಬೇತಿ ಕಾರ್ಯಾಗಾರ ಆಯೋಜಿಸುತ್ತಿದ್ದು, ನಮ್ಮ ಸಂಸ್ಥೆಯಿಂದ ತರಬೇತಿ ಪಡೆದವರು ಹಲವಾರು ಮಂದಿ ಈಗಾಗಲೇ ಉದ್ಯೋಗ ಪಡೆದಿದ್ದಾರೆ, ಪ್ರತಿ ಭಾನುವಾರ ಕೋಟದ ಕಾರಂತ ಥೀಮ್ ಪಾರ್ಕ್‍ನಲ್ಲಿ ಈ ತರಬೇತಿಯು ನಡೆಯಲಿದ್ದು ಹೆಚ್ಚಿನ ಸಂಖ್ಯೆಯಲ್ಲಿ ಪ್ರಯೋಜನ ಪಡೆದುಕೊಳ್ಳಿ ಎಂದರು.

    ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಡಾ|| ಶಿವರಾಮ ಕಾರಂತ ಪ್ರತಿಷ್ಠಾನದ ಕಾರ್ಯಾಧ್ಯಕ್ಷ ಆನಂದ್ ಸಿ ಕುಂದರ್, ಕೋಟತಟ್ಟು ಗ್ರಾಮ ಪಂಚಾಯತ್ ಉಪಾಧ್ಯಕ್ಷ ವಾಸು ಪೂಜಾರಿ, ಪ್ರತಿಷ್ಠಾನದ ಟ್ರಸ್ಟಿ ಸುಬ್ರಾಯ್ ಆಚಾರ್ಯ, ವಿ-ಶೈನ್‍ನ ಗಿರೀಶ್ ಕುಮಾರ್ ಶೆಟ್ಟಿ, ವಿವೇಕ್ ಅಮೀನ್ ಅವರು ಉಪಸ್ಥಿತರಿದ್ದರು.

  • ಉಡುಪಿ ಜಿಲ್ಲಾ ಜನಜಾಗೃತಿ ವೇದಿಕೆಯ ನೂತನ ಅಧ್ಯಕ್ಷರಾಗಿ ರಟ್ಟಾಡಿ ನವೀನಚಂದ್ರ ಶೆಟ್ಟಿ ಆಯ್ಕೆ

    ಉಡುಪಿ ಜಿಲ್ಲಾ ಜನಜಾಗೃತಿ ವೇದಿಕೆಯ ನೂತನ ಅಧ್ಯಕ್ಷರಾಗಿ ರಟ್ಟಾಡಿ ನವೀನಚಂದ್ರ ಶೆಟ್ಟಿ ಆಯ್ಕೆ

    ಕುಂದಾಪುರ ಮಿರರ್ ಸುದ್ದಿ…

    ಕುಂದಾಪುರ: ಉಡುಪಿ ಜಿಲ್ಲಾ ಜನಜಾಗೃತಿ ವೇದಿಕೆಯ ನೂತನ ಅಧ್ಯಕ್ಷರಾಗಿ ರಟ್ಟಾಡಿ ನವೀನಚಂದ್ರ ಶೆಟ್ಟಿ ಆಯ್ಕೆಯಾಗಿದ್ದಾರೆ. ಉಡುಪಿಯ ಪ್ರಗತಿಯ ಸೌಧ ಕಟ್ಟಡದ ಸಭಾಂಗಣದಲ್ಲಿ ಮಾ.14ರಂದು ನಡೆದ ಉಡುಪಿ ಪ್ರಾದೇಶಿಕ ಕಚೇರಿ ವ್ಯಾಪ್ತಿಯ ಉಡುಪಿ ಜಿಲ್ಲಾ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಸಭೆಯಲ್ಲಿ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.

    ಕುಂದಾಪುರ, ಬೈಂದೂರು ತಾಲೂಕಿನ ಜನಜಾಗೃತಿ ವೇದಿಕೆಯ ಸ್ಥಾಪಕಾಧ್ಯಕ್ಷರಾದ ಬಿ. ಅಪ್ಪಣ್ಣ ಹೆಗ್ಡೆ ಅವರು ದೀಪ ಬೆಳಗಿಸಿ ಚಾಲನೆ ನೀಡಿದರು. ವೇದಿಕೆಯಲ್ಲಿ ಜಿಲ್ಲಾ ಜನಜಾಗೃತಿ ವೇದಿಕೆಯ ಅಧ್ಯಕ್ಷರಾದ ನವೀನ್ ಅಮೀನ್, ರಾಜ್ಯ ವೇದಿಕೆಯ ನಿಕಟಪೂರ್ವ ಅಧ್ಯಕ್ಷರಾದ ದೇವದಾಸ್ ಹೆಬ್ಬಾರ್, ಪ್ರಾದೇಶಿಕ ನಿರ್ದೇಶಕರಾದ ವಸಂತ ಸಾಲ್ಯಾನ್, ಜನಜಾಗೃತಿ ವೇದಿಕೆಯ ಪ್ರಾದೇಶಿಕ ನಿರ್ದೇಶಕಾದ ವಿವೇಕ್ ವಿನ್ಸೆಂಟ್ ಪಾಯಸ್, ಜಿಲ್ಲಾ ನಿರ್ದೇಶಕರಾದ ಶಿವರಾಯ ಪ್ರಭು ಮುಂತಾದವರು ಉಪಸ್ಥಿತರಿದ್ದರು.

    ಸಭೆಯಲ್ಲಿ 2023-24ನೇ ಸಾಲಿನ ಕ್ರಿಯಾ ಯೋಜನೆಯ ಕುರಿತಂತೆ ಸಮಗ್ರ ಚರ್ಚೆ ನಡೆಸಲಾಯಿತು.

    ಈ ಸಂದರ್ಭದಲ್ಲಿ ಮುಂದಿನ 2 ವರ್ಷಗಳ ಅವಧಿಗೆ ಉಡುಪಿ ಜಿಲ್ಲಾ ಜನಜಾಗೃತಿ ವೇದಿಕೆಯ ನೂತನ ಅಧ್ಯಕ್ಷರಾಗಿ ಕುಂದಾಪುರ ತಾಲೂಕಿನ ನವೀನ್ ಚಂದ್ರ ಶೆಟ್ಟಿ ಅವರು ಆಯ್ಕೆಯಾದರು. ಉಪಾಧ್ಯಕ್ಷರಾಗಿ ಕಾರ್ಕಳ ತಾಲೂಕಿನ ಸುಭಾಷ್‍ಚಂದ್ರ ಚೌಟ ಆಯ್ಕೆಯಾದರು. ಕಾರ್ಯಕ್ರಮವನ್ನು ಕುಂದಾಪುರ-2 ತಾಲೂಕಿನ ಯೋಜನಾಧಿಕಾರಿಗಳಾದ ನಾರಾಯಣ ಪಾಲನ್ ನಿರ್ವಹಿಸಿ, ಜನಜಾಗೃತಿ ಯೋಜನಾಧಿಕಾರಿಗಳಾದ ತಿಮ್ಮಯ್ಯ ನಾಯ್ಕ್ ಸ್ವಾಗತಿಸಿದರು. ಉಡುಪಿ ತಾಲೂಕಿನ ಯೋಜನಾಧಿಕಾರಿ ರಾಮ ಎಮ್ ವಂದಿಸಿದರು.