Category: ರಾಜಕೀಯ

  • ಬೈಂದೂರು :ಮುಂದಿನ ಚುನಾವಣೆಗೆ ಸಿದ್ಧರಾಗಿ – ಗ್ರಾಮ ಪಂಚಾಯತ್ ಅಧ್ಯಕ್ಷ ಉಪಾಧ್ಯಕ್ಷರಿಗೆ ಸಂಸದ ಬಿ.ವೈಆರ್ ಕರೆ

    ಬೈಂದೂರು :ಮುಂದಿನ ಚುನಾವಣೆಗೆ ಸಿದ್ಧರಾಗಿ – ಗ್ರಾಮ ಪಂಚಾಯತ್ ಅಧ್ಯಕ್ಷ ಉಪಾಧ್ಯಕ್ಷರಿಗೆ ಸಂಸದ ಬಿ.ವೈಆರ್ ಕರೆ

    ಕುಂದಾಪುರ ಮಿರರ್ ಸುದ್ದಿ…

    ಕುಂದಾಪುರ: ಮುಂದಿನ ಎಲ್ಲಾ ಚುನಾವಣೆಗಳಿಗೆ ಭಾರತೀಯ ಜನತಾ ಪಾರ್ಟಿಯ ಸಾಧನೆಗಳು ಮತ್ತು ಅಗತ್ಯತೆಗಳ ಬಗ್ಗೆ ಇಂದಿನಿಂದಲೇ ಕಾರ್ಯೋನ್ಮುಖರಾಗಿ ಎಂದು ಶಿವಮೊಗ್ಗ ಸಂಸದ ಬಿ.ವೈ.ಆರ್.ರಾಘವೆಂದ್ರ ಕರೆ ನೀಡಿದರು. ಅವರು ಭಾರತೀಯ ಜನತಾ ಪಾರ್ಟಿ ಬೈಂದೂರು ಮಂಡಲ ವತಿಯಿಂದ ಆಯೋಜಿಸಿದ ನೂತನವಾಗಿ ಎರಡನೇ ಅವಧಿಗೆ ಆಯ್ಕೆಯಾಗಿರುವ ಪಂಚಾಯತ್ ಅಧ್ಯಕ್ಷರು ಮತ್ತು ಉಪಾಧ್ಯಕ್ಷರಿಗೆ ಅಭಿನಂದನಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು.

    ಪ್ರಧಾನಿ ನರೇಂದ್ರ ಮೋದಿಯವರ ಜನ್ಮದಿನದ ಪ್ರಯುಕ್ತ ಪ್ರತೀ ಪಂಚಾಯತ್ ಗಳಲ್ಲಿ ರಕ್ತದಾನ ಶಿಬಿರ ಮಾಡಬೇಕು ಎಂದರು. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಿಜೆಪಿ ಕಾರ್ಯಕರ್ತರ ವಿರುದ್ಧ ದಬ್ಬಾಳಿಕೆ ನಡೆಸಲು ಯತ್ನಿಸುತ್ತಿದೆ ಎಂದು ಆರೋಪಿಸಿದ ಅವರು, ನಾವ್ಯಾರೂ ಕೈಗೆ ಬಳೆ ಹಾಕಿ ಕುಳಿತುಕೊಂಡಿಲ್ಲ. ರಾಜ್ಯದಲ್ಲಿ ಪೊಲೀಸ್ ಮೂಲಕ ಕಾರ್ಯಕರ್ತರಿಗೆ ಗೂಂಡಾಗಿರಿ ಪ್ರದರ್ಶಿಸಿದರೆ ಬಿಜೆಪಿ ಕಾರ್ಯಕರ್ತರು ಸಿಡಿದೇಳಬೇಕಾಗುತ್ತದೆ ಎಂದು ಸರ್ಕಾರಕ್ಕೆ ಎಚ್ಚರಿಸಿದರು.

    ಮಾಜೀ ಸಚಿವ ಕೋಟ ಶ್ರಿನಿವಾಸ ಪೂಜಾರಿ, ಗ್ರಾಮ ಪಂಚಾಯತ್ ಎಂದರೆ ಸ್ಥಳೀಯ ಸಂಸತ್ತು. ಜನಸಾಮಾನ್ಯರ ಸಮಸ್ಯೆಗಳಿಗೆ ಮೊದಲ ಸ್ಪಂದನೆಗೆ ಸಿಗುವವರೇ ಪಂಚಾಯತ್ ಸದಸ್ಯರು. ಪಂಚಾಯತ್ ರಾಜ್ ಬಗ್ಗೆ ಮಾಹಿತಿ ಪಡೆದು ಪಂಚಾಯತ್ ಆಡಳಿತ ನಡೆಸಿ ಎಂದರು.

    ಇದೇ ಸಂದರ್ಭ ಎರಡನೇ ಅವಧಿಗೆ ನೂತನ ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ ಮತ್ತು ಉಪಾಧ್ಯಕ್ಷ ಆಯ್ಕೆಯಾದವರಿಗೆ ಸನ್ಮಾನಿಸಿ ಗೌರವಿಸಲಾಯಿತು. ಬೈಂದೂರು ಶಾಸಕ ಗುರುರಾಜ್ ಗಂಟಿಹೋಳೆ, ಶ್ರೀಮತಿ ಭಾರತಿ ಶೆಟ್ಟಿ, ಮಾಜಿ ಮಹಿಳಾ ಆಯೋಗದ ಅಧ್ಯಕ್ಷೆ ಮಂಜುಳಾ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸದಾನಂದ ಉಪ್ಪಿನಕುದ್ರು, ಮಂಡಲ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ, ಮಾಲತಿ ನಾಯ್ಕ್, ಮಂಡಲ ಪ್ರಧಾನ ಕಾರ್ಯದರ್ಶಿ ಪ್ರಿಯಾದರ್ಶಿನಿ ದೇವಾಡಿಗ, ಚಿತ್ತೂರು ಪಂಚಾಯತ್ ಅಧ್ಯಕ್ಷ ರವಿರಾಜ್ ಶೆಟ್ಟಿ ಮತ್ತು ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.

  • ಕುಂದಾಪುರ :ಮಾಜಿ ಸಭಾಪತಿ ಕೆ. ಪ್ರತಾಪಚಂದ್ರ ಶೆಟ್ಟಿಯವರ ನಿವಾಸಕ್ಕೆ ಸಚಿವ ಎನ್. ಎಸ್ ಭೋಸರಾಜು ಭೇಟಿ

    ಕುಂದಾಪುರ :ಮಾಜಿ ಸಭಾಪತಿ ಕೆ. ಪ್ರತಾಪಚಂದ್ರ ಶೆಟ್ಟಿಯವರ ನಿವಾಸಕ್ಕೆ ಸಚಿವ ಎನ್. ಎಸ್ ಭೋಸರಾಜು ಭೇಟಿ

    ಕುಂದಾಪುರ ಮಿರರ್ ಸುದ್ದಿ…

    ಕುಂದಾಪುರ :ಎನ್. ಎಸ್. ಭೋಸರಾಜು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು ವಿಧಾನ ಪರಿಷತ್ ಮಾಜಿ ಸಭಾಪತಿ ಕೆ. ಪ್ರತಾಪಚಂದ್ರ ಶೆಟ್ಟಿಯವರ ಹುಯ್ಯಾರು ನಿವಾಸಕ್ಕೆ ಬೇಟಿ ನೀಡಿದರು. ಈ ಸಂದರ್ಭದಲ್ಲಿ ಸಣ್ಣ ನೀರಾವರಿ ಇಲಾಖೆ ವಿಚಾರ ಮತ್ತು ಪ್ರಸಕ್ತ ರಾಜಕೀಯ ವಿದ್ಯಮಾನಗಳ ಬಗ್ಗೆ ಚರ್ಚಿಸಿದರು .

    ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ, ಮಾಜಿ ಶಾಸಕ ಬಿ.ಎಂ. ಸುಕುಮಾರ ಶೆಟ್ಟಿ , ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷ ಕೆ. ಕಿಶನ್ ಹೆಗ್ಡೆ , ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಾನ್ಮಕ್ಕಿ ಹರಿಪ್ರಸಾದ್ ಶೆಟ್ಟಿ , ಕಾಂಗ್ರೆಸ್ ಮುಖಂಡರಾದ ಎಂ. ದಿನೇಶ ಹೆಗ್ಡೆ , ಮುನಿಯಾಲು ಉದಯ ಕುಮಾರ ಶೆಟ್ಟಿ , ಹಾಲಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಅಶೋಕ ಶೆಟ್ಟಿ ಚೋರಾಡಿ, ಸಣ್ಣ ನೀರಾವರಿ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

  • ಮಾಜೀ ಶಾಸಕ ಬಿ.ಎಂ.ಎಸ್. ಕಾಂಗ್ರೆಸ್ ಗೆ?! ಸೇರ್ಪಡೆಯಷ್ಟೇ ಬಾಕಿ!

    ಮಾಜೀ ಶಾಸಕ ಬಿ.ಎಂ.ಎಸ್. ಕಾಂಗ್ರೆಸ್ ಗೆ?! ಸೇರ್ಪಡೆಯಷ್ಟೇ ಬಾಕಿ!

    ಕುಂದಾಪುರ ಮಿರರ್ ಸುದ್ದಿ…

    ಕುಂದಾಪುರ: ಬೈಂದೂರು ಮಾಜೀ ಶಾಸಕ ಬಿ.ಎಂ.ಸುಕುಮಾರ ಶೆಟ್ಟಿ ಕಾಂಗ್ರೆಸ್ ಸೇರ್ಪಡೆ ಬಹುತೇಕ ಖಚಿತವಾಗಿದ್ದು ದಿನಾಂಕವಷ್ಟೇ ಬಾಕಿಯಿದೆ.

    ದೆ. ಕಳೆದ ವಿಧಾನ ಸಭಾ ಕ್ಷೇತ್ರ ಚುನಾವಣೆಯಲ್ಲಿ ಬಿಜೆಪಿ ವರ್ತನೆಗೆ ಬೇಸರಗೊಂಡಿದ ಬಿ.ಎಂ.ಎಸ್. ಪಕ್ಷದ ಚಟುವಟಿಕೆಯಿಂದ ಹೊರಗುಳಿದಿದ್ದರು. ಆದರೆ ಚುನಾವಣೆ ಸಂದರ್ಭ ಕಾಂಗ್ರೆಸ್ ಗೆ ಪರೋಕ್ಷ ಬೆಂಬಲ ನೀಡಿದ್ದರು ಎನ್ನುವ ಆರೋಪವೂ ಕೇಳಿ ಬಂದಿತ್ತು.

    ಇದೀಗ ರಾಜ್ಯದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಮ್ಮ ಫೇಸ್ಬುಕ್ ಖಾತೆಯಲ್ಲಿ ಸುಕುಮಾರ ಶೆಟ್ಟರ ಕಾಂಗ್ರೆಸ್ ಸೇರ್ಪಡೆಯನ್ನು ಬಹುತೇಕ ಖಚಿತಗೊಳಿಸಿದ್ದಾರೆ. ಮಾಜೀ ಶಾಸಕ ಕೆ. ಗೋಪಾಲ ಪೂಜಾರಿ ಹಾಗೂ ಸುಕುಮಾರ ಶೆಟ್ಟಿ ಜೊತೆಯಾಗಿ ಡಿಕೆಶಿ ಜೊತೆ ನಿಂತುಕೊಂಡಿರುವ ಫೋಟೋ ವೈರಲ್ ಆಗಿದೆ.

    ಈ ಬಗ್ಗೆ ಪ್ರತಿಕ್ರಿಯಿಸಿದ ಮಾಜೀ ಶಾಸಕ ಬಿ.ಎಂ.ಎಸ್., ಕಾಂಗ್ರೆಸ್ ಸೇರ್ಪಡೆ ಬಗ್ಗೆ ಮೊದಲ ಸುತ್ತಿನ ಮಾತುಕತೆ ನಡೆದಿದ್ದು ಸೇರ್ಪಡೆಗೆ ದಿನ ನಿಗಧಿಯಾಗಿಲ್ಲ ಎಂದಿದ್ದಾರೆ.

  • ಕುಂದಾಪುರ: ಮಣಿಪುರ ಪ್ರಕರಣದಲ್ಲಿ ಕೇಂದ್ರದ ಮೌನ ನಡೆ ವಿರೋಧಿಸಿ ಕಾಂಗ್ರೆಸ್ ಪ್ರತಿಭಟನೆ

    ಕುಂದಾಪುರ: ಮಣಿಪುರ ಪ್ರಕರಣದಲ್ಲಿ ಕೇಂದ್ರದ ಮೌನ ನಡೆ ವಿರೋಧಿಸಿ ಕಾಂಗ್ರೆಸ್ ಪ್ರತಿಭಟನೆ

    Video:

    ಕುಂದಾಪುರ ಮಿರರ್ ಸುದ್ದಿ…

    ಕುಂದಾಪುರ: 93 ದಿನಗಳ ಹಿಂದೆ ಮಣಿಪುರದಲ್ಲಿ ನಡೆದ ಬೆತ್ತಲೆ ಮೆರವಣಿಗೆ ಅತ್ಯಾಚಾರದ ಬಗ್ಗೆ ಪ್ರಧಾನಮಂತ್ರಿಗಳು ಹಾಗೂ ಗೃಹ ಸಚಿವರು ಮೌನವಾಗುವ ಮೂಲಕ ಇಡೀ ದೇಶವೇ ತಲೆತಗ್ಗಿಸುವ ಸ್ಥಿತಿ ನಿರ್ಮಾಣವಾಗಿದೆ ಎಂದು ಕುಂದಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಾನ್ಮಕ್ಕಿ ಹರಿಪ್ರಸಾದ್ ಶೆಟ್ಟಿ ಆರೋಪಿಸಿದ್ದಾರೆ. ಕುಂದಾಪುರದ ಶಾಸ್ತ್ರೀ ವೃತ್ತದಲ್ಲಿ ಬುಧವಾರ ಬೆಳಿಗ್ಗೆ ಕಾಂಗ್ರೆಸ್ ವತಿಯಿಂದ ಹಮ್ಮಿಕೊಂಡ ಪ್ರತಿಭಟನಾ ಸಭೆಯಲ್ಲಿ ಅವರು ಮಾತನಾಡಿದರು. ಮಣಿಪುರದ ಜನಾಂಗೀಯ ಕಲಹವನ್ನು ಕೇಂದ್ರದ ಬಿಜೆಪಿ ಸರ್ಕಾರ ರಾಜಕೀಯ ಲಾಭಕ್ಕಾಗಿ ಬಳಸಿಕೊಳ್ಳುತ್ತಿದೆ ಎಂದ ಅವರು, ಸಂಸತ್ ಕಲಾಪದಲ್ಲಿ ಮೋದಿ ಮೌನವಾಗಿದ್ದಾರೆ ಎಂದು ಆರೋಪಿಸಿದರು.

    ಇದೇ ಸಂದರ್ಭ ಮಾತನಾಡಿದ ಮಲ್ಯಾಡಿ ಶಿವರಾಮ ಶೆಟ್ಟಿ, ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಕೇಮದ್ರದ ಬಿಜೆಪಿ ಸರ್ಕಾರ ಬುಡಮೇಲು ಮಾಡಲು ಹೊರಟಿರುವುದು ಆಘಾತಕಾರಿ ವಿಷಯ. ಮಣಿಪುರದ ಬುಕಟ್ಟು ಜನಾಂಗಕ್ಕೆ ನ್ಯಾಯ ಸಿಗುವವರೆಗೆ ಕಾಂಗ್ರೆಸ್ ಹೋರಾಟ ಮುಮದುವರೆಯುತ್ತದೆ ಎಂದರು. ವಿಕಾಸ್ ಹೆಗ್ಡೆ ಮಾತನಾಡಿ, ಮಣಿಪುರದಲ್ಲಿ ಬಿಜೆಪಿ ಸರ್ವಾಧಿಕಾರಿ ಧೋರಣೆ ಅನುಸರಿಸುತ್ತಿದೆ. ದೇಶದ ಮಹಿಳೆಯರಿಗೆ ರಕ್ಷಣೆ ಇಲ್ಲದಾಗಿದೆ. ಭೃಟಿ ಬಚಾವೋ ಭೇಟಿ ಪಡಾವೋ ಕೇವಲ ಮೋದಿಯವರ ಭಾಷಣಕ್ಕೆ ಸೀಮಿತವಾಗಿದೆ ಎಂದು ಆರೋಪಿಸಿದರು.

    ಕಿಶನ್ ಹೆಗ್ಡೆ ಕೊಳ್ಕೆಬೈಲ್ ಮಾತನಾಡಿ, ದೇಶದಲ್ಲಿ ಸಾಮಾಜಿಕ ಸ್ವಾತಂತ್ರ್ಯವಿಲ್ಲವಾಗಿದೆ. ಸೈನಿಕನೊಬ್ಬನ ಪತ್ನಿಗೇ ಈ ರೀತಿಯ ಸಾಮೂಹಿಕ ಅತ್ಯಾಚಾರ, ಬೆತ್ತಲೆಯಾಗುವ ಪರಿಸ್ಥಿತಿಯಾದರೆ ಜನಸಾಮಾನ್ಯರ ಪಾಡೇನು ಎನ್ನುವುದನ್ನು ಯೋಚಿಸಬೇಕಾಗಿದೆ. ಸರ್ವಜನಾಂಗದ ಶಾಂತಿಯ ತೋಟವಾಗಿದ್ದ ಭಾರತ ಅಶಾಂತಿಯಿಂದ ಬಳಲುತ್ತಿದೆ ಎಂದು ಆರೋಪಿಸಿದರು. ಮಣಿಪುರದ ಮಹಿಳೆಯರೇ ನಮ್ಮೊಂದಿಗೆ ನಾವಿದ್ದೇವೆ ಎನ್ನುವ ಘೋಷಣೆ ಪ್ರತಿಭಟನೆಯುದ್ದಕ್ಕೂ ಮೊಳಗಿತು.

    ಮುಖಂಡ ಶಂಕರ್ ಕುಂದರ್ ಮಾತನಾಡಿದರು. ಪುರಸಭಾ ಸದಸ್ಯರಾದ ಚಂದ್ರಶೇಖರ ಖಾರ್ವಿ, ಪ್ರಭಾವತಿ ಶೆಟ್ಟಿ, ಅಶ್ಬಕ್, ಶ್ರೀಧರ್ ಶೇರೆಗಾರ್, ಪಂಚಾಯತ್ ಸದಸ್ಯರಾದ ವಿದ್ಯಾಧರ್, ಸೌಮ್ಯ ಮೊಗವೀರ, ಗಣಪತಿ ಶೇಟ್, ರೋಶನ್ ಬರೆಟ್ಟೊ, ಮಹಿಳಾ ಅಧ್ಯಕ್ಷರಾದ ದೇವಕಿ ಸಣ್ಣಯ್ಯ, ಕ್ರಷ್ಣದೇವ್ ಕಾರಂತ,ಗಣೇಶ್ ಶೇರೆಗಾರ್, ಯುವ ಕಾಂಗ್ರೆಸ್ ಅಧ್ಯಕ್ಷರಾದ ಇಚ್ಚಿತಾರ್ಥ ಶೆಟ್ಟಿ, ಚಂದ್ರ ಅಮೀನ್, ಚಂದ್ರ ಶೇಖರ ಶೆಟ್ಟಿ, ಸೋಶಿಯಲ್ ಮೀಡಿಯಾ ಅಧ್ಯಕ್ಷ ರೋಶನ್ ಶೆಟ್ಟಿ, ಎನ್ ಎಸ್ ಯು ಐ ಅಧ್ಯಕ್ಷ ಸುಜನ್ ಶೆಟ್ಟಿ, ಗಂಗಾಧರ್ ಶೆಟ್ಟಿ, ನಾರಾಯಣ ಆಚಾರ್, ಕೇಶವ್ ಭಟ್, ಅಭಿಜಿತ್ ಪೂಜಾರಿ, ಧರ್ಮಪ್ರಕಾಶ್, ಕುಮಾರ್ ಖಾರ್ವಿ, ಮುನಾಫ್, ಸುನಿಲ್ ಪೂಜಾರಿ, ಸಚ್ಚಿದಾನಂದ , ರೇವತಿ ಶೆಟ್ಟಿ, ಆಶಾ ಕರ್ವಾಲ್ಲೊ, ಶೋಭಾ ಸಚ್ಚಿದಾನಂದ, ಜ್ಯೋತಿ ನಾಯ್ಕ್, ಸುವರ್ಣ ಅಲ್ಮೇಡಾ, ಪ್ರಭಾವತಿ,ಸುಮನಾ ಪೂಜಾರಿ, ಸವಿತಾ ಸಿಕ್ವೇರಾ, ಜ್ಯೋತಿ ಮೋಗವಿರ, ಪ್ರೇಮಾ, ವೇಲಾ ಬ್ರಗಾಂಜ, ವಿಠಲ ಕಾಂಚನ್, ಹಾರೋನ್ ಸಾಹೇಬ್, ಮೌರಿಸ್ ಕರ್ವಾಲ್ಲೊ, ಅಬ್ದುಲ್ಲಾ ಕೋಡಿ, ಪ್ರೀತಮ್ ಕರ್ವಾಲ್ಲೊ, ಅಶೋಕ್ ಸುವರ್ಣ, ಡೋಲ್ಫಿ ಡಿಕೋಸ್ತಾ, ಜೋಸೆಫ್ ರೆಬೆಲ್ಲೊ, ಕ್ಲಿಫರ್ಡ್ ಡಿಸಿಲ್ವಾ, ಗಣೇಶ್ ನೆಲ್ಲಿ ಬೆಟ್ಟು, ರಾಕೇಶ್ ಶೆಟ್ಟಿ, ಸುರೇಶ್ ಕೆ, ಅರುಣ್ ಪಟೇಲ್, ನಾಗರಾಜ್ ನಾಯ್ಕ್, ವೇಣುಗೋಪಾಲ್, ಶ್ರೀನಿವಾಸ ಶೆಟ್ಟಿ, ಕಿರಣ್ ಕಲ್ಲಾಗಾರ, ಶಶಿ ನಂದಿಬೆಟ್ಟ ಮೊದಲಾದವರಿದ್ದರು. ವಿನೋದ್ ಕ್ರಾಸ್ತಾ ಪ್ರಾಸ್ತಾವಿಸಿ ನಿರೂಪಿಸಿದರು.

  • ವಂಡ್ಸೆ ಬ್ಲಾಕ್ ಕಾಂಗ್ರೆಸ್ಸಿನಿಂದ ಮಣಿಪುರ ಘಟನೆಗೆ ಮೋದಿ ಮೌನದ ವಿರುದ್ಧ ಪ್ರತಿಭಟನೆ

    ವಂಡ್ಸೆ ಬ್ಲಾಕ್ ಕಾಂಗ್ರೆಸ್ಸಿನಿಂದ ಮಣಿಪುರ ಘಟನೆಗೆ ಮೋದಿ ಮೌನದ ವಿರುದ್ಧ ಪ್ರತಿಭಟನೆ

    Video:

    ಕುಂದಾಪುರ ಮಿರರ್ ಸುದ್ದಿ…

    ಕುಂದಾಪುರ: ದೇಶದ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿಯವರು ತನ್ನ ಪ್ರತೀ ಭಾಷಣದಲ್ಲಿಯೂ ಹೇಳುವ ಬೇಟಿ ಬಚಾವೋ ಬೇಟಿ ಪಡಾವೋ ಎನ್ನುವ ಮಾತಿಗೆ ವಿರುದ್ಧವಾಗಿ ತನ್ನದೇ ಬಿಜೆಪಿ ಅಧಿಕಾರದಲ್ಲಿರುವ ಮಣಿಪುರದಲ್ಲಿ ನಡೆದ ಘಟನೆಯ ಬಗ್ಗೆ ಮೌನವಾಗಿರುವುದೇಕೆ ಎಂದು ಬೈಂದೂರು ಮಾಜೀ ಶಾಸಕ ಕೆ. ಗೋಪಾಲ ಪೂಜಾರಿ ಆಕ್ರೋಶ ಹೊರಹಾಕಿದ್ದಾರೆ.

    ಮಣಿಪುರದಲ್ಲಿ ನಡೆದ ಘಟನೆಗೆ ಸಂಬಂಧಿಸಿ ಕೇಂದ್ರ ಸರ್ಕಾರದ ಮೌನ ನಡೆ ವಿರೊಧಿಸಿ ವಂಡ್ಸೆ ಬ್ಲಾಕ್ ಕಾಂಗ್ರೆಸ್ ವತಿಯಿಂದ ಹಮ್ಮಿಕೊಳ್ಳಲಾದ ಪ್ರತಿಭಟನೆಯನ್ನು ಉದ್ಧೇಶಿಸಿ ಮಾತನಾಡಿದರು. ಮಾನವೀಯತೆ ಎನ್ನುವುದನ್ನೂ ಮರೆತು ಈ ದೇಶದಲ್ಲಿ ಪ್ರಜೆಗಳು ತಲೆ ತಗ್ಗಿಸುವಂತಹಾ ಬೆತ್ತಲೆ ಮೆರವಣಿಗೆ ಘಟನೆಯಿಂದಾಗಿ ಜಗತ್ತಿನ ಮುಂದೆ ನಮ್ಮ ದೇಶ ಮಂಡಿಯೂರುವಂತಾಗಿದೆ. ತಕ್ಷಣ ಮಣಿಪುರದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಬೇಕು. ಮತ್ತು ಇಲ್ಲಿನ ಹಿಂಸಾಚಾರ ಮತ್ತು ದೌರ್ಜನ್ಯದ ಜವಾಬ್ಧಾರಿಯನ್ನು ಕೇಂದ್ರ ಸರ್ಕಾರವೇ ಹೊರಬೇಕು ಎಂದು ಆಗ್ರಹಿಸಿದರು.

    ಇದೇ ಸಂದರ್ಭ ಮಾತನಾಡಿದ ವಂಡ್ಸೆ ಬ್ಲಾಕ್ ಅಧ್ಯಕ್ಷ ಪ್ರದೀಶ್ ಕುಮಾರ್ ಶೆಟ್ಟಿ ಗುಡಿಬೆಟ್ಟು, ಮಣಿಪುರದಲ್ಲಿ ಬಿಜೆಪಿ ಮತ್ತು ಕೇಂದ್ರ ಸರ್ಕಾರವು ವೋಟ್ ಬ್ಯಾಂಕನ್ನಾಗಿ ಮಾಡಿಕೊಳ್ಳುವ ಕುತಂತ್ರ ರಾಜಕೀಯ ನಡೆಸುತ್ತಿದೆ ಎಂದು ಆರೋಪಿಸಿದರು. ಮೂಲನಿವಾಸಿಗಳಾದ ಕುಕಿ ಬುಡಕಟ್ಟು ಜನಾಂಗ ಹಾಗೂ ಮೈತೇಹಿ ಜನಾಂಗಗಳ ನಡುವಿನ ಸಂಘರ್ಷವನ್ನು ಶಮನ ಮಾಡಬೇಕಿದ್ದ ಅಲ್ಲಿನ ರಾಜ್ಯ ಬಿಜೆಪಿ ಸರ್ಕಾರ ಬೆತ್ತಲೆ ಮೆರವಣಿಗೆಯ ದೃಶ್ಯಗಳನ್ನು ನೋಡುತ್ತಾ ರಾಜಕೀಯ ತಂತ್ರ ರೂಪಿಸುತ್ತಿರುವುದು ದೇಶದ ದುರಂತ ಎಂದರು.

    ವಂಡಬಳ್ಳಿ ಜಯರಾಮ ಶೆಟ್ಟಿ ಮಾತನಾಡಿ ಮಾತೆತ್ತಿದರೆ ಜೈ ಶ್ರೀರಾಮ್ ಎನ್ನುವ ಬಿಜೆಪಿ ಮಣಿಪುರದಲ್ಲಿ ರಾಮನ ಪತ್ನಿ ಯನ್ನೇ ಬೆತ್ತಲೆಗೊಳಿಸುತ್ತಿದ್ದರೆ ಮೌನಕ್ಕೆ ಶರಣಾಗಿರುವುದು ನಾಚಿಕೆಗೆಡಿನ ಸಂಗತಿ ಎಂದರು. ವಂಡ್ಸೆ ಗ್ರಾಮ ಪಂಚಾಯತ್ ಅಧ್ಯಕ್ಷ ಅಡಕೆಕೊಡ್ಲು ಉದಯಕುಮಾರ್ ಶೆಟ್ಟಿ ಮಾತನಾಡಿದರು.

    ಮುಖಂಡರಾದ ಸಂಪಗೇಡಿ ಸಂಜೀವ ಶೆಟ್ಟಿ, ಉದಯ ಪೂಜಾರಿ ಚಿತ್ತೂರು, ನಾಗಪ್ಪ ಕೊಠಾರಿ, ಸದಾಶಿವ ಶೆಟ್ಟಿ, ಸುದೀಶ್ ಶೆಟ್ಟಿ ಗುಲ್ವಾಡಿ, ತಮ್ಮಯ್ಯ ದೇವಾಡಿಗ ಗುಜ್ಜಾಡಿ, ವಾಸುದೇವ ಪೈ ಸಿದ್ದಾಪುರ, ಉಮೇಶ ಕೊಠಾರಿ, ಮಂಜುಳಾ ದೇವಾಡಿಗ, ಕಿರಣ್ ಹೆಗ್ಡೆ, ಪ್ರಸನ್ನಕುಮಾರ್ ಶೆಟ್ಟ, ವಂಡ್ಸೆ ಗ್ರಾ.ಪಂ ಮಾಜಿ ಅದ್ಯಕ್ಷ ಶ್ರೀನಿವಾಸ ಪೂಜಾರಿ ಕಲ್ಮಡಿ, ಸಂಜೀವ ಪೂಜಾರಿ ವಂಡ್ಸೆ, ಗ್ರಾ.ಪಂ ಸದಸ್ಯರಾದ ಗೋವರ್ದನ್ ಜೋಗಿ, ಸುಬ್ಬು ಮೊದಲಾದವರು ಉಪಸ್ಥಿತರಿದ್ದರು.

  • ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್ ನಿಂದ ಜಿಲ್ಲಾಧಿಕಾರಿ ಭೇಟಿ

    ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್ ನಿಂದ ಜಿಲ್ಲಾಧಿಕಾರಿ ಭೇಟಿ

    ಕುಂದಾಪುರ ಮಿರರ್ ಸುದ್ದಿ…

    ಕುಂದಾಪುರ :ಉಡುಪಿಯ ಜಿಲ್ಲಾಧಿಕಾರಿಯಾಗಿ ನೂತನವಾಗಿ ಅಧಿಕಾರ ವಹಿಸಿಕೊಂಡಿರುವ ವಿದ್ಯಾಕುಮಾರಿ ಅವರನ್ನು ಇಂದು ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್ ವತಿಯಿಂದ ಭೇಟಿ ಮಾಡಿ ಅಭಿನಂದಿಸಲಾಯಿತು.

    ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಗೀತಾ ವಾಗ್ಳೆ ಅವರ ನೇತೃತ್ವದಲ್ಲಿ ಮಹಿಳಾ ಕಾಂಗ್ರೆಸ್ ತಂಡವು ಇಂದು ಜಿಲ್ಲಾಧಿಕಾರಿಗಳ ಕಚೇರಿಗೆ ತೆರಳಿ ವಿದ್ಯಾಕುಮಾರಿ ಅವರನ್ನು ಶಾಲು ಹೊದಿಸಿ,ಹೂ ಗುಚ್ಛ ನೀಡಿ ಶುಭಾಶಯ ಕೋರಿದರು. ಈ ಸಂದರ್ಭದಲ್ಲಿ ಪಡಿತರ ಚೀಟಿಯಲ್ಲಿನ ವಿವಿಧ ಸಮಸ್ಯೆಗಳು ಮತ್ತು ಗ್ರಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸುವಾಗ ಎದುರಾಗುವ ವಿವಿಧ ಸಮಸ್ಯೆಗಳ ಬಗ್ಗೆ ಜಿಲ್ಲಾಧಿಕಾರಿಗಳಿಗೆ ಮನವರಿಕೆ ಮಾಡಿಕೊಡಲಾಯಿತು. ಜಿಲ್ಲಾಧಿಕಾರಿಗಳು ಸೂಕ್ತ ರೀತಿಯಲ್ಲಿ ಸ್ಪಂದಿಸಿ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳುತ್ತೇವೆ ಎಂದು ಆಶ್ವಾಸನೆ ನೀಡಿದರು.

    ಕೆಪಿಸಿಸಿ ಪ್ಯಾನಲಿಸ್ಟ್ ವೆರೋನಿಕಾ ಕರ್ನೇಲಿಯೋ, , ಮಹಿಳಾ ಕಾಂಗ್ರೆಸ್ ಉಪಾಧ್ಯಕ್ಷರಾದ ಜ್ಯೋತಿ ಹೆಬ್ಬಾರ್,ಐಡಾ ಗಿಬ್ಬ ಡಿ’ಸೋಜ,ಚಂದ್ರಿಕಾ ಶೆಟ್ಟಿ,ಕಾರ್ಯದರ್ಶಿಗಳಾದ ಮೀನಾಕ್ಷಿ ಮಾಧವ ಬನ್ನಂಜೆ,ಶಾಂತಿ ಪಿರೇರಾ,ಜ್ಯೋತಿ ಮೆನನ್, ಆಶಾ ಚಂದ್ರಶೇಖರ್, ಬ್ಲಾಕ್ ಅಧ್ಯಕ್ಷರಾದ ಮಮತಾ ಶೆಟ್ಟಿ,ಉಡುಪಿ ಮತ್ತು ಶಾಂತಲತಾ ಶೆಟ್ಟಿ,ಕಾಪು,ಶ್ರೀಮತಿ ಲಕ್ಷ್ಮೀ ನಾಯ್ಕ್,ಜಯಶ್ರೀ ಶೇಟ್, ಸುಕನ್ಯಾ ಪೂಜಾರಿ ಕಡೇಕಾರ್, ಪ್ರಮೀಳಾ ಜತ್ತನ್ನ ,ಹಾಗೂ ಕಾಂಗ್ರೆಸ್ ಮುಖಂಡರಾದ ಕೃಷ್ಣ ಹೆಬ್ಬಾರ್ ಮುಂತಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

  • ಬೈಂದೂರು: ಬಿಜೆಪಿ ಷಡ್ಯಂತ್ರದ ವಿರುದ್ದ ಕಾಂಗ್ರೆಸ್ಸಿಗರಿಂದ ಮೌನ ಪ್ರತಿಭಟನೆ

    ಬೈಂದೂರು: ಬಿಜೆಪಿ ಷಡ್ಯಂತ್ರದ ವಿರುದ್ದ ಕಾಂಗ್ರೆಸ್ಸಿಗರಿಂದ ಮೌನ ಪ್ರತಿಭಟನೆ

    ಕುಂದಾಪುರ ಮಿರರ್ ‌ಸುದ್ದಿ…


    ಬೈಂದೂರು: ಕಾಂಗ್ರೆಸ್ಸಿನ ಮುಖಂಡ ರಾಹುಲ್ ಗಾಂಧಿಯ ಸದಸ್ಯತ್ವ ಅನೂರ್ಜಿತಕ್ಕೆ ಕಾಂಗ್ರೆಸ್ ಅವಕಾಶ ನೀಡುವುದಿಲ್ಲ ಎಂದು ಬೈಂದೂರು ಕಾಂಗ್ರೆಸ್ ನ ಮದನಕುಮಾರ್ ಎಚ್ಚರಿಸಿದ್ದಾರೆ.

    ಬುಧವಾರ ಬೈಂದೂರಿನ ಹೊಸ ಬಸ್ ನಿಲ್ದಾಣದ ಸಮೀಪ ನಡೆಸಿದ ಮೌನ ಪ್ರತಿಭಟನೆಯ ಸಂದರ್ಭ ಮಾಧ್ಯಮದೊಂದಿಗೆ ಮಾತನಾಡಿದರು

    ಬಿಜೆಪಿ ಷಡ್ಯಂತ್ರದ ವಿರುದ್ಧ ರಾಜ್ಯದ ಎಲ್ಲಾ 224 ಕ್ಷೇತ್ರದಲ್ಲಿ ಮೌನ ಪ್ರತಿಭಟನೆ ನಡೆಸಿದ್ದೇವೆ ಎಂದರು. ಬಿಜೆಪಿ ಮುಖಂಡರಾದ ಅರವಿಂದ ಪೂಜಾರಿ, ರಾಜು ಪೂಜಾರಿ, ಬಾಬು ಶೆಟ್ಟಿ, ವಿಜಯಶೆಟ್ಟಿ, ಶಾಂತಿ ಪಿರೇರಾ, ರಘುರಾಮ ಶೆಟ್ಟಿ, ಸದಾಶಿವ ಪಡುವರಿ, ನರಸಿಂಹ ಪೂಜಾರಿ, ಶೇಖರ್ ಪೂಜಾರಿ ಮೊದಲಾದವರು ಸೇರಿದಂತೆ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

  • ಕುಂದಾಪುರ :ರಾಹುಲ್ ಗಾಂಧಿಯವರ ತೇಜೊವಧೆಯ ವಿರುದ್ಧ ಕಾಂಗ್ರೆಸ್ ಮೌನ ಪ್ರತಿಭಟನೆ

    ಕುಂದಾಪುರ :ರಾಹುಲ್ ಗಾಂಧಿಯವರ ತೇಜೊವಧೆಯ ವಿರುದ್ಧ ಕಾಂಗ್ರೆಸ್ ಮೌನ ಪ್ರತಿಭಟನೆ

    ಕುಂದಾಪುರ ಮಿರರ್ ಸುದ್ದಿ …

    ಕುಂದಾಪುರ: ರಾಹುಲ್ ಗಾಂಧಿಯವರ ತೇಜೊವಧೆಯ ವಿರುದ್ಧ ಬ್ಲಾಕ್ ಕಾಂಗ್ರೆಸ್ ಸಮಿತಿ ಕುಂದಾಪುರ ನೇತೃತ್ವದಲ್ಲಿ ಜು.12ರಂದು ಕುಂದಾಪುರ ಶಾಸ್ತ್ರಿ ವೃತ್ತದ ಬಳಿಯಲ್ಲಿ ಮೌನ ಪ್ರತಿಭಟನೆ ನಡೆಯಿತು.

    ರಾಷ್ಟ್ರವ್ಯಾಪ್ತಿ ಮೌನ ಪ್ರತಿಭಟನೆಗೆ ಪಕ್ಷ ಕರೆ ನೀಡಿರುವ ಹಿನ್ನೆಲೆಯಲ್ಲಿ ಕುಂದಾಪುರದಲ್ಲಿ ಕೂಡಾ ಪ್ರತಿಭಟನಾನಿರತರು ಕುತ್ತಿಗೆಗೆ ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ ನಡೆಸಿದರು.

    ಈ ಸಂದರ್ಭದಲ್ಲಿ ಕುಂದಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹರಿಪ್ರಸಾದ್ ಶೆಟ್ಟಿ ಕಾನ್ಮಕ್ಕಿ, ಪ್ರಧಾನ ಕಾರ್ಯದರ್ಶಿ ವಿನೋದ್ ಕ್ರಾಸ್ಟೋ, ಕಾಂಗ್ರೆಸ್ ಮುಖಂಡರಾದ ದಿನೇಶ ಹೆಗ್ಡೆ, ಶಿವರಾಮ ಶೆಟ್ಟಿ ಮಲ್ಯಾಡಿ, ವಿಕಾಸ್ ಹೆಗ್ಡೆ, ಹಿರಿಯಣ್ಣ ಬಿ.,ಹಾರೂನ್ ಸಾಹೇಬ್ ಮೊದಲಾದವರು ಉಪಸ್ಥಿತರಿದ್ದರು.
    ಈ ಸಂದರ್ಭದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಕುಂದಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಹರಿಪ್ರಸಾದ್ ಶೆಟ್ಟಿ ಕಾನ್ಮಕ್ಕಿ, ಎಐಸಿಸಿ ಮಾಜಿ ಅಧ್ಯಕ್ಷರಾಗಿರುವ ರಾಹುಲ್ ಗಾಂಧಿಯವರು ವಿವಿಧ ವೇದಿಕೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಅದಾನಿ ನಡುವಿನ ಸಂಬಂಧವನ್ನು ನಿರಂತರವಾಗಿ ಬಹಿರಂಗಪಡಿಸುತ್ತಿದ್ದಾರೆ. ಈ ನಿರ್ಭಿತಿ ನಡೆಯನ್ನು ಸಹಿಸಿಕೊಳ್ಳದೆ ಪ್ರಧಾನಿ ನರೇಂದ್ರ ಮೋದಿ ಪದನಾಮ ಬಳಕೆಯನ್ನೇ ನೆಪವಾಗಿರಿಸಿಕೊಂಡು ರಾಹುಲ್ ಗಾಂಧಿಯವರನ್ನು ಲೋಕಸಭಾ ಸದಸ್ಯತ್ವದಿಂದ ಅನರ್ಹತೆಗೊಳಿಸಿದ ಕೇಂದ್ರ ಸರಕಾರ ಹಾಗೂ ಬಿಜೆಪಿಯ ಸೇಡಿನ ಹುನ್ನಾರ ಖಂಡನಾರ್ಹವಾದುದು. ಆ ಹಿನ್ನೆಲೆಯಲ್ಲಿ ಕುಂದಾಪುರ ಬ್ಲಾಕ್ ಕಾಂಗ್ರೆಸ್ ಇಂದು ಮೌನ ಪ್ರತಿಭಟನೆ ನಡೆಸುತ್ತಿದೆ ಎಂದರು.

    ಕುಂದಾಪುರ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಮೊಳಹಳ್ಳಿ ದಿನೇಶ ಹೆಗ್ಡೆ ಮಾಧ್ಯಮದವರೊಂದಿಗೆ ಮಾತನಾಡಿ ರಾಹುಲ್ ಗಾಂಧಿಯವರನ್ನು ರಾಜಕೀಯ ಮುಗಿಸುವ ಹುನ್ನಾರದೊಂದಿಗೆ ಈ ಎಲ್ಲ ಕಾರ್ಯಗಳು ನಡೆಯುತ್ತಿದೆ. ಇದನ್ನು ನಾವು ಖಂಡಿಸುತ್ತೇವೆ ಎಂದರು.

    ಕಾಂಗ್ರೆಸ್ ವಕ್ತಾರ ವಿಕಾಸ್ ಹೆಗ್ಡೆ ಮಾತನಾಡಿ, ಈ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿರುವುದು ಕಾಂಗ್ರೆಸ್ ಪಕ್ಷ. ಶಾಂತಿ, ಅಹಿಂಸೆ, ಸತ್ಯಾಗ್ರಹದ ಮೂಲಕ ಸ್ವಾತಂತ್ರ್ಯಕ್ಕಾಗಿ ಹೋರಾಡಿದವರ ಕುಡಿ ರಾಹುಲ್ ಗಾಂಧಿಯವರ ರಾಜಕೀಯ ಜೀವನವನ್ನು ಮುಗಿಸಲು ಸಾಂವೀಧಾನಿಕ ಸಂಸ್ಥೆಗಳನ್ನು ದುರುಪಯೋಗ ಪಡಿಸಿಕೊಳ್ಳಲಾಗುತ್ತಿದೆ. ಏನೇ ಮಾಡಿದರೂ ಕೂಡಾ ರಾಹುಲ್ ಗಾಂಧಿಯವರು ದೇಶದ ಮುಂದಿನ ಪ್ರಧಾನಿಯಾಗುವುದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದರು.

  • ನಾಳೆ ಕುಂದಾಪುರದಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ನಿಂದ ಮೌನ ಪ್ರತಿಭಟನೆ

    ನಾಳೆ ಕುಂದಾಪುರದಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ನಿಂದ ಮೌನ ಪ್ರತಿಭಟನೆ

    ಕುಂದಾಪುರ ಮಿರರ್ ಸುದ್ದಿ…

    ಕುಂದಾಪುರ: ಬಿಜೆಪಿಯ ಕುಟಿಲ ರಾಜನೀತಿ ಹಾಗೂ ರಾಹುಲ್ ಗಾಂಧಿಯವರ ತೇಜೋವಧೆ ನಡೆಸುತ್ತಿರುವುದರ ವಿರುದ್ಧ ನಾಳೆ ಕುಂದಾಪುರದಲ್ಲಿ ಕಾಂಗ್ರೆಸ್ ಮೌನ ಪ್ರತಿಭಟನೆ ನಡೆಸಲಿದೆ.

    ರಾಹುಲ್ ಗಾಂಧಿಯವರು ವಿವಿಧ ವೇದಿಕೆಯಲ್ಲಿ ಮೋದಿ ಹಾಗೂ ಅದಾನಿ ನಡುವಿನ ಸಂಬಂಧವನ್ನು ನಿರಂತರವಾಗಿ ಬಹಿರಂಗಪಡಿಸುತ್ತಿದ್ದಾರೆ. ಈ ನಿರ್ಭೀತಿ ನಡೆಯನ್ನು ಸಹಿಸಿಕೊಳ್ಳದೆ ಮೋದಿ ಪದನಾಮ ಬಳಕೆಯನ್ನೇ ನೆಪವಾಗಿರಿಸಿಕೊಂಡು ರಾಹುಲ್ ಗಾಂಧಿಯವರನ್ನು ಲೋಕಸಭಾ ಸದಸ್ಯತ್ವದಿಂದ ಅನರ್ಹತೆಗೊಳಿಸಿದ ಕೇಂದ್ರ ಸರಕಾರ ಹಾಗೂ ಬಿಜೆಪಿಯ ಸೇಡಿನ ಹುನ್ನಾರವನ್ನು ಪ್ರತಿಭಟಿಸಿ ಈ ಪ್ರತಿಭಟನೆ ನಡೆಯಲಿದೆ ಎಂದು ಕುಂದಾಪುರ ಬ್ಲಾಕ್ ಕಾಂಗ್ರೆಸ್ ಪ್ರಕಟಣೆಯಲ್ಲಿ ತಿಳಿಸಿದೆ. ನಾಳೆ ಬೆಳಿಗ್ಗೆ 10 ಗಂಟೆಯಿಂದ 5 ಗಂಟೆಯವರೆಗೆ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ

  • ಹೆಮ್ಮಾಡಿ :ರಾಜ್ಯ ಸರ್ಕಾರ ಚುನಾವಣಾ ಪೂರ್ವ ನೀಡಿದ ಗ್ಯಾರಂಟಿಗಳನ್ನು ಅನುಷ್ಟಾನಿಸಲು ಹಕ್ಕೋತ್ತಾಯ ಮಾಡುತ್ತೇವೆ – ಸಂಸದ ಬಿ.ವೈ.ರಾಘವೇಂದ್ರ

    ಹೆಮ್ಮಾಡಿ :ರಾಜ್ಯ ಸರ್ಕಾರ ಚುನಾವಣಾ ಪೂರ್ವ ನೀಡಿದ ಗ್ಯಾರಂಟಿಗಳನ್ನು ಅನುಷ್ಟಾನಿಸಲು ಹಕ್ಕೋತ್ತಾಯ ಮಾಡುತ್ತೇವೆ – ಸಂಸದ ಬಿ.ವೈ.ರಾಘವೇಂದ್ರ

    ಕುಂದಾಪುರ ಮಿರರ್ ಸುದ್ದಿ…


    ಕುಂದಾಪುರ :ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಕೇಂದ್ರ ಸರಕಾರ ೯ ವರ್ಷ ಪೂರೈಸಿದೆ. ಪ್ರಧಾನಿ ಹಾಗೂ ಹಿಂದಿನ ನಮ್ಮ ರಾಜ್ಯ ಸರಕಾರದ ಜನಪರ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸುವ ಕಾರ್‍ಯವನ್ನು ಮಾಡಬೇಕಾಗಿದೆ. ಕಾಂಗ್ರೆಸ್ಸಿನ ಅಪಪ್ರಚಾರ, ಸುಳ್ಳು ಭರವಸೆಯಿಂದ ಅಧಿಕಾರಕ್ಕೆ ಬಂದಿರಬಹುದು. ಗ್ಯಾರಂಟಿಗಳನ್ನು ಜಾರಿಗೆ ತರಲು ನಾವು ಹಕ್ಕೊತ್ತಾಯ ಮಾಡುತ್ತೇವೆ. ಖಾಸಗಿ ಬಸ್‌ಗಳಿಗೂ ಸಬ್ಸಿಡಿ ನೀಡುವ ಮೂಲಕ ಅದರಲ್ಲಿಯೂ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ಮಾಡಿಕೊಡಬೇಕು. ಇದಕ್ಕಾಗಿ ರಾಜ್ಯವ್ಯಾಪಿ ಬಿಜೆಪಿಯಿಂದ ಜನಾಂದೋಲನ ನಡೆಯಲಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದರು.

    ಅವರು ಹೆಮ್ಮಾಡಿಯ ಜಯಶ್ರೀ ಹಾಲ್‌ನಲ್ಲಿ ಶುಕ್ರವಾರ ನಡೆದ ಬಿಜೆಪಿ ಹಿರಿಯ ಕಾರ್‍ಯಕರ್ತರ ಹಾಗೂ ವಿವಿಧ ಮೋರ್ಚಾದ ಪದಾಧಿಕಾರಿಗಳ ಸಂಯುಕ್ತ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದರು.

    ೫ ಕೆ.ಜಿ. ಅಕ್ಕಿ ಕೇಂದ್ರ ಕೊಡುತ್ತಿದ್ದು, ಕಾಂಗ್ರೆಸ್ ಭರವಸೆ ಕೊಟ್ಟಂತೆ ಮೋದಿಯವರು ಕೊಡುತ್ತಿರುವ ೫ ಕೆ.ಜಿ. ಬಿಟ್ಟು ಹೆಚ್ಚುವರಿ ೧೦ ಕೆ.ಜಿ. ಕೊಡಬೇಕಾಗುತ್ತದೆ. ಇದು ಜಾರಿಗೆ ಬರುವವರೆಗೂ ಹೋರಾಟಕ್ಕೆ ಇಳಿಯಬೇಕು. ಪದವಿ, ಡಿಪ್ಲೋಮಾ ಮುಗಿಸಿದ ಎಲ್ಲ ವಿದ್ಯಾರ್ಥಿಗಳಿಗೆ ಹಣ ಕೊಡುತ್ತೇವೆ ಎಂದವರು ಈಗ ೨೦೨೨-೨೩ರಲ್ಲಿ ಪಾಸ್ ಆದವರು ಎನ್ನುತ್ತಿದ್ದಾರೆ. ಮಹಿಳೆಯರಿಗೆ ೨ ಸಾವಿರ ಹಣ ಕೊಡುವ ಯೋಜನೆ ಇನ್ನೂ ಶುರುವಾಗಿಲ್ಲ. ಚುನಾವಣಾ ಪೂರ್ವದಲ್ಲಿ ಗ್ಯಾರಂಟಿ ಘೋಷಿಸಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಈಗ ಷರತ್ತುಗಳನ್ನು ವಿಧಿಸುವ ಮೂಲಕ ಪಲಾಯನ ಮಾಡುತ್ತಿದೆ ಎಂದು ಆರೋಪಿಸಿದರು.

    ಶಾಸಕ ಗುರುರಾಜ್ ಗಂಟಿಹೊಳೆ ಮಾತನಾಡಿದರು‌.
    ಅನೇಕ ಮಂದಿ ಹಿರಿಯ ಕಾರ್‍ಯಕರ್ತರು ಪಕ್ಷ ಸಂಘಟನೆಯಲ್ಲಿನ ಲೋಪಗಳನ್ನು ಸಭೆಯಲ್ಲಿ ವ್ಯಕ್ತಪಡಿಸಿದರು.
    ಬೈಂದೂರು ಮಂಡಲದ ಅಧ್ಯಕ್ಷ ದೀಪಕ್ ಶೆಟ್ಟಿ, ಪ್ರಮುಖರಾದ ಪ್ರಿಯದರ್ಶಿನಿ ದೇವಾಡಿಗ, ಮಾಲತಿ ನಾಯ್ಕ್, ಆನಂದ ಖಾರ್ವಿ, ಸಂತೋಷ್ ಪೂಜಾರಿ, ಮತ್ತಿತರರು ಉಪಸ್ಥಿತರಿದ್ದರು.