Category: ರಾಜಕೀಯ

  • ವಂಡ್ಸೆ :ರಾಜ್ಯದಲ್ಲಿ 130ರಿಂದ 135 ಕ್ಷೇತ್ರಗಳನ್ನು ಗೆಲ್ಲುವ ಮೂಲಕ ಬಿಜೆಪಿ ಸರ್ಕಾರ ರಚಿಸಲಿದೆ-ಬಿ.ಎಸ್.ವೈ

    ವಂಡ್ಸೆ :ರಾಜ್ಯದಲ್ಲಿ 130ರಿಂದ 135 ಕ್ಷೇತ್ರಗಳನ್ನು ಗೆಲ್ಲುವ ಮೂಲಕ ಬಿಜೆಪಿ ಸರ್ಕಾರ ರಚಿಸಲಿದೆ-ಬಿ.ಎಸ್.ವೈ

    ಕುಂದಾಪುರ ಮಿರರ್ ಸುದ್ದಿ…

    ಬೈಂದೂರು :ವಂಡ್ಸೆ ಬೈಂದೂರು ವಿಧಾನಸಭಾ ಕ್ಷೇತ್ರ ಸೇರಿದಂತೆ ರಾಜ್ಯದಲ್ಲಿ 130ರಿಂದ 135 ಕ್ಷೇತ್ರಗಳನ್ನು ಗೆಲ್ಲುವ ಮೂಲಕ ಬಿಜೆಪಿ ಸ್ಪಷ್ಟ ಬಹುಮತದೊಂದಿಗೆ ಸರ್ಕಾರ ರಚನೆ ಮಾಡಲಿದೆ. ಹಾಗೆಯೇ ಬೈಂದೂರು ಬಿಜೆಪಿ ಅಭ್ಯರ್ಥಿ ಗುರುರಾಜ ಗಂಟಿಹೊಳೆಯವರು 25 ರಿಂದ 30 ಸಾವಿರ ಮತಗಳ ಅಂತರದಲ್ಲಿ ಜಯ ಸಾಧಿಸಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹೇಳಿದರು.

    ಭಾರತೀಯ ಜನತಾ ಪಕ್ಷ ಬೈಂದೂರು ಮಂಡಲದ ವತಿಯಿಂದ ವಂಡ್ಸೆಯಲ್ಲಿ ಶನಿವಾರ ನಡೆದ ಸಾರ್ವಜನಿಕ ಸಭೆಯಲ್ಲಿ ಅವರು ಮಾತನಾಡಿದವರು, ಬೈಂದೂರು ಕ್ಷೇತ್ರಕ್ಕೆ ಯೋಗ್ಯ, ಪ್ರಾಮಾಣಿಕ ಅಭ್ಯರ್ಥಿಯನ್ನು ಪಕ್ಷ ನೀಡಿದೆ. ಅವರನ್ನು ಹೆಚ್ಚಿನ ಮತಗಳ ಅಂತರದಲ್ಲಿ ಗೆಲ್ಲಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ಗುರುರಾಜ ಗಂಟೆಹೊಳೆಯವರು ಚಪ್ಪಲಿಯನ್ನು ಹಾಕದೆ ಪಕ್ಷಕ್ಕಾಗಿ ಶ್ರಮಿಸುತ್ತಿದ್ದಾರೆ ಎಂದರು.

    ಚುನಾವಣೆ ಸಂದರ್ಭದಲ್ಲಿ ಕೆಲವರು ನಮ್ಮ ಅಭ್ಯರ್ಥಿ ವಿರುದ್ಧ ಅಪಪ್ರಚಾರ ಮಾಡುತ್ತಿದ್ದಾರೆ. ಇದ್ಯಾವುದಕ್ಕೂ ಕವಡೆ ಕಾಸಿನ ಕಿಮ್ಮತ್ತಿಲ್ಲ. ಯಾರು ಕೂಡ ಇಂಥ ಅಪಪ್ರಚಾರಕ್ಕೆ ತಲೆ ಕೆಡಿಸಿಕೊಳ್ಳುವ ಅಗತ್ಯವಿಲ್ಲ. ಎಂದು ಹೇಳಿದ ಅವರು, ಎಲ್ಲವೂ ತನಗೆ ಬೇಕು, ಬೇರೆಯವರಿಗೆ ಸಿಕ್ಕಾಗ ವಿರೋಧ ಮಾಡುವವರನ್ನು ಖಂಡಿಸಬೇಕು ಎಂದರು.

    ಪ್ರಧಾನ ನರೇಂದ್ರ ಮೋದಿ, ಕೇಂದ್ರ ಸಚಿವ ಅಮಿತ್ ಶಾ, ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಮೊದಲಾದವರು ರಾಜ್ಯಾದ್ಯಂತ ಪ್ರವಾಸ ಮಾಡುತ್ತಿದ್ದಾರೆ. ಬಿಜೆಪಿ 130 ಸೀಟುಗಳನ್ನು ಗೆಲ್ಲಲಿದ್ದೇವೆ ಎಂಬ ಭರವಸೆಯನ್ನು ಅವರಿಗೆ ಈಗಾಗಲೇ ನೀಡಿದ್ದೇವೆ. ಹೀಗಾಗಿ ನಾವೆಲ್ಲರೂ ಸೇರಿ ಗುರುರಾಜ ಗಂಟಿಹೊಳೆಯವರನ್ನು ಗೆಲ್ಲಿಸಬೇಕು ಎಂದರು.

    ನಮ್ಮ ಸರ್ಕಾರ ಅಧಿಕಾರಕ್ಕೆ ಬರುತ್ತದೆ. ಬೈಂದೂರು ಕ್ಷೇತ್ರದಲ್ಲಿ ಕಾಲೇಜುಗಳು, ಗೋಶಾಲೆಗಳ ಸ್ಥಾಪನೆ ಮಾಡಲಿದ್ದೇವೆ. ಈಗಾಗಲೇ ಉತ್ತಮವಾದ ಪ್ರನಾಳಿಕೆಯನ್ನು ನೀಡಿದ್ದೇವೆ. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದು ವಾರದ ಒಳಗೆ ಪ್ರನಾಳಿಕೆ ಈಡೇರಿಸಲಿದ್ದೇವೆ ಎಂದರು.

    ಅಭ್ಯರ್ಥಿ ಗುರುರಾಜ ಗಂಟಿಹೊಳೆ ಮಾತನಾಡಿ, ರಾಜಕೀಯದಲ್ಲಿ ಪೆಟ್ಟು, ಪಟ್ಟು ನಾಯಕರು ನೀಡಬಹುದು. ಪ್ರಾಮಾಣಿಕ ಕಾರ್ಯಕರ್ತರು ಇರುವ ತನಕ ಯಾವ ಪೆಟ್ಟು-ಪಟ್ಟು ತಾಗುವುದಿಲ್ಲ. ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರ ಆಶೀರ್ವಾದ ಸಿಕ್ಕಿದೆ. ಯಡಿಯೂರಪ್ಪನವರು, ನರೇಂದ್ರ ಮೋದಿಯವರು ಈ ನಾಡಿಗೆ ಕೊಟ್ಟಷ್ಟು ಕೊಡುಗೆ ಯಾರು ನೀಡಿಲ್ಲ. ನನ್ನ ಜೀವನ ಪರ್ಯಂತ ಪಕ್ಷ ಹಾಗೂ ಕ್ಷೇತ್ರಕ್ಕಾಗಿ ದುಡಿಯುತ್ತೇನೆ ಎಂದರು.
    ಮಾಜಿ ಶಾಸಕರಾದ ಬಿ.ಅಪ್ಪಣ್ಣ ಹೆಗ್ಡೆ, ಲಕ್ಷ್ಮೀನಾರಾಯಣ, ಹಿಂದುಳಿದ ವರ್ಗಗಳ ಮೋರ್ಚಾದ ಕಾರ್ಯದರ್ಶಿ ಗೋವಿಂದ ಬಾಬು ಪೂಜಾರಿಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು.ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸದಾನಂದ ಉಪ್ಪಿನಕುದ್ರು, ಪಕ್ಷದ ಪ್ರಮುಖರಾದ ಪ್ರಣಯ ಕುಮಾರ್ ಶೆಟ್ಟಿ, ಶ್ಯಾಮಲ ಕುಂದರ್, ಶೋಭಾ ಪುತ್ರನ್, ಹರ್ಕೂರು ಮಂಜಯ್ಯ ಶೆಟ್ಟಿ, ಸುರೇಶ ಬಟ್ವಾಡಿ, ರೋಹಿತ್ ಕುಮಾರ್ ಶೆಟ್ಟಿ, ಮಹೇಂದ್ರ ಪೂಜಾರಿ, ನಾಗರಾಜ ಶೆಟ್ಟಿ, ಮಾಲತಿನ ನಾಯಕ್, ಭಾಗೀರಥಿ, ಚುನಾವಣಾ ಉಸ್ತುವಾರಿ ಕ್ಯಾ|ಬ್ರಿಜೇಶ್ ಚೌಟ,ಹೊರ ರಾಜ್ಯದ ಉಸ್ತುವಾರಿ ಉನ್ನಿಕೃಷ್ಣ, ಮಂಡಲದ ಪ್ರಧಾನ ಕಾರ್ಯದರ್ಶಿ ಪ್ರಿಯದರ್ಶಿನಿ ದೇವಾಡಿಗ ಮೊದಲಾದವರು ಉಪಸ್ಥಿತರಿದ್ದರು.

    ಮಂಡಲದ ಅಧ್ಯಕ್ಷ ದೀಪಕ ಕುಮಾರ್ ಶೆಟ್ಟಿ ಪ್ರಾಸ್ತಾವಿಕ ಮಾತನಾಡಿ ಸ್ವಾಗತಿಸಿದರು. ಜಿಲ್ಲಾ ಉಪಾಧ್ಯಕ್ಷ ಆನಂದ ಖಾರ್ವಿ ಕಾರ್ಯಕ್ರಮ ನಿರ್ವಹಿಸಿದರು.

  • ಕುಂದಾಪುರದಲ್ಲಿ ಕಾಂಗ್ರೆಸ್ ಅಲೆಯೇ ಇದೆ – ಮೊಳಹಳ್ಳಿ ದಿನೇಶ ಹೆಗ್ಡೆ

    ಕುಂದಾಪುರದಲ್ಲಿ ಕಾಂಗ್ರೆಸ್ ಅಲೆಯೇ ಇದೆ – ಮೊಳಹಳ್ಳಿ ದಿನೇಶ ಹೆಗ್ಡೆ

    ಕುಂದಾಪುರ ಮಿರರ್ ಸುದ್ದಿ…

    ಕುಂದಾಪುರ :ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಕಾರ್ಡ್. ಅದರಲ್ಲಿ ಇರುವ ಪ್ರಮುಖ ಐದು ಅಂಶಗಳು. ಗೃಹಲಕ್ಷ್ಮೀ, ಗೃಹ ಜ್ಯೋತಿ, ಅನ್ನಭಾಗ್ಯ, ಯುವನಿಧಿ ಹಾಗೂ ಮಹಿಳೆಯರಿಗೆ ಸರ್ಕಾರಿ ಬಸ್‍ನಲ್ಲಿ ಉಚಿತ ಬಸ್ ಪಾಸ್ ಸೌಲಭ್ಯ. ಈ ಭರವಸೆಗಳನ್ನು ಖಂಡಿತಾ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ತಕ್ಷಣ ಅನುಷ್ಟಾನ ಮಾಡಲಿದೆ ಎಂದು ಕುಂದಾಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮೊಳಹಳ್ಳಿ ದಿನೇಶ್ ಹೆಗ್ಡೆ ಹೇಳಿದರು.

    ಅವರು ಕುಂದಾಪುರದಲ್ಲಿ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದರು.

    ಕುಂದಾಪುರ ವಿಧಾನಸಭಾ ಕ್ಷೇತ್ರದಲ್ಲಿ ಸಾಕಷ್ಟು ಜ್ವಲಂತ ಸಮಸ್ಯೆಗಳಿವೆ. ಪುರಸಭಾ ವ್ಯಾಪ್ತಿಯಲ್ಲಿ ಒಳಚರಂಡಿ ವ್ಯವಸ್ಥೆ ಇನ್ನೂ ನೆನಗುದಿಗೆ ಬಿದ್ದಿದೆ. ಸಿಆರ್‍ಜೆಡ್, 94ಸಿ, 94ಸಿಸಿ, ಅಕ್ರಮ ಸಕ್ರಮ ಸಮಸ್ಯೆಗಳಿವೆ. ಕುಂದಾಪುರದಲ್ಲಿ ಆರ್.ಟಿ.ಓ ಕಛೇರಿ ಬೇಡಿಕೆ ಇದೆ. ಕೋಡಿ ಕನ್ಯಾಣ ಭಾಗದಲ್ಲಿ ಹಕ್ಕುಪತ್ರ ಸಮಸ್ಯೆ, ನದಿ ದಂಡೆಯ ಸಮಸ್ಯೆ, ಗಂಗೊಳ್ಳಿ-ಕುಂದಾಪುರ ಸೇತುವೆ ಬೇಡಿಕೆ, 44 ವರ್ಷಗಳಾದರೂ ಬಾಕಿ ಇರುವ ವರಾಹಿ ನೀರಾವರಿ ಯೋಜನೆಯ ಕಾಮಗಾರಿ ಇನ್ನೂ ಪೂರ್ಣಗೊಂಡಿಲ್ಲ. ಉಪ ಕಾಲುವೆಗಳ ನಿರ್ಮಾಣಗೊಂಡಿಲ್ಲ. ನಾನು ಶಾಸಕನಾಗಿ ಆಯ್ಕೆಯಾದರೆ ಈ ಎಲ್ಲಾ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಕುಂದಾಪುರ ಕ್ಷೇತ್ರದಲ್ಲಿ ಯುವಕರು, ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ನಮಗೆ ಬೆಂಬಲ ನೀಡುತ್ತಿದ್ದಾರೆ. ಕ್ಷೇತ್ರದಲ್ಲಿ ಕಾಂಗ್ರೆಸ್‍ಗೆ ಸಿಗುತ್ತಿರುವ ಬೆಂಬಲ ನೋಡಿದಾಗ ಕಾಂಗ್ರೆಸ್ ಗೆಲ್ಲುವುದು ಸ್ಪಷ್ಟ ಎಂದರು.

    ಕಾಂಗ್ರೆಸ್ ಪ್ರನಾಳಿಕೆಯಲ್ಲಿ ಬಜರಂಗದಳದ ಪ್ರಸ್ತಾಪದ ಮಾಧ್ಯಮದರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು ಬಜರಂಗದಳ ವಿರೋಧ ಸ್ಪಷ್ಟವಾಗಿ ಹೇಳಿಲ್ಲ. ಇದನ್ನು ಬಿಜೆಪಿಗರು ಹತಾಶರಾಗಿದ್ದಾರೆ. ಈ ಚುನಾವಣೆಯಲ್ಲಿ ಅವರಿಗೆ ಹೇಳಲು ಬೇರೆ ವಿಷಯಗಳಿಲ್ಲ. ಚುನಾವಣೆಯ ಲಾಭ ಪಡೆದುಕೊಳ್ಳಲು ಪ್ರಯತ್ನಿಸುತ್ತಿದ್ದಾರೆ ಎಂದರು.

    ಕಾಂಗ್ರೆಸ್ ಪಕ್ಷದ ವಕ್ತಾರ ವಿಕಾಸ್ ಹೆಗ್ಡೆ ಮಾತನಾಡಿ, ಇವತ್ತು ಬಿಜೆಪಿಗರು ಸೋಲಿನ ಭಯದಿಂದ ಹತಾಸರಾಗಿ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಕಾಂಗ್ರೆಸ್ ಪಕ್ಷ ಹಿಂದು ವಿರೋಧಿಯಲ್ಲ, ನಮ್ಮ ಅಭ್ಯರ್ಥಿ ಮೊಳಹಳ್ಳಿ ದಿನೇಶ ಹೆಗ್ಡೆ ಅವರು ಧಾರ್ಮಿಕ ವ್ಯವಸ್ಥೆಯಲ್ಲಿ ಸಕ್ರೀಯವಾಗಿ ತೊಡಗಿಸಿಕೊಂಡವರು. ಗಣೇಶೋತ್ಸವ ಸಮಿತಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದವರು. ವರ್ಷಂಪ್ರತಿ ಶ್ರೀರಾಮ ಭಜನೆಯನ್ನು ನೆಡೆಸಿಕೊಂಡು ಬರುತ್ತಿದ್ದಾರೆ. ಪರಿಸರದ ದೇವಸ್ಥಾನ, ದೈವಸ್ಥಾನಗಳ ಜೀರ್ಣೋದ್ದಾರ ಸಮಿತಿಯಲ್ಲಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದವರು. ಹಾಗಾಗಿ ಇಡೀ ಕ್ಷೇತ್ರದ ಜನರಿಗೆ ದಿನೇಶ ಹೆಗ್ಡೆ ಅವರ ವ್ಯಕ್ತಿತ್ವದ ಅರಿವಿದೆ. ಪ್ರತಿ ಚುನಾವಣೆಯಲ್ಲಿ ಬಿಜೆಪಿ ಭಾವನಾತ್ಮಕ ವಿಷಯಗಳನ್ನು ಇಟ್ಟುಕೊಂಡು ಚುನಾವಣೆ ಹೋಗುತ್ತಾರೆ. ಹಿಂದುತ್ವ, ಹಿಂದು ಸಂಘಟನೆಯ ಬಗ್ಗೆ ಬಿಜೆಪಿಗೆ ಅಷ್ಟೊಂದು ಅಭಿಮಾನ ಇದ್ದರೆ ಹಿಂದೂ ನಾಯಕರುಗಳು ಚುನಾವಣೆಗೆ ಸ್ಪರ್ಧೆ ಮಾಡಿದ್ದಾರೆ ಅವರಿಗೆ ಏಕೆ ಬೆಂಬಲ ಕೊಡಲಿಲ್ಲ. ಪುತ್ತೂರು, ಕಾರ್ಕಳದಲ್ಲಿ ಹಿಂದು ಸಂಘಟನೆಯ ಮುಖಂಡರು ಸ್ಪರ್ಧೆ ಮಾಡಿದ್ದಾರೆ. ಅವರನ್ನು ಏಕೆ ಬೆಂಬಲಿಸುತ್ತಿಲ್ಲ ಎಂದು ಪ್ರಶ್ನಿಸಿದರು.

    ಕುಂದಾಪುರ ಕ್ಷೇತ್ರದಲ್ಲಿ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟರು ಚುನಾವಣಾ ಸ್ಪರ್ಧೆಯಿಂದ ಹಿಂದೆ ಸರಿದಿದ್ದಾರೆ. ಅವರ ನಾಯಕತ್ವ ಈ ಚುನಾವಣೆಯಲ್ಲಿ ಇರಬಹುದು. ಆದರೆ ಇಲ್ಲಿ ಅಭ್ಯರ್ಥಿಯ ಪರವಾಗಿ ಮತ ಕೇಳುತ್ತಿಲ್ಲ. ಹಾಲಾಡಿ ಶ್ರೀನಿವಾಸ ಶೆಟ್ಟರ ಹೆಸರು ಹೇಳಿ ಮತ ಕೇಳಲಾಗುತ್ತಿದೆ ಎಂದು ದೂರಿದರು.
    ಇವತ್ತು ಅಮಾಸೆಬೈಲು ಗ್ರಾಮದಲ್ಲಿ 11 ಶಾಲೆಗಳಿದ್ದು 3 ಶಾಲೆಗಳಲ್ಲಿ ಶೂನ್ಯ ಶಿಕ್ಷಕರ ಶಾಲೆಯಾಗಿದೆ. ಅಮಾಸೆಬೈಲು ಗ್ರಾಮದಲ್ಲಿ ಹಿಂದು ರುದ್ರಭೂಮಿ ಇಲ್ಲ, ಜೂನಿಯರ್ ಕಾಲೇಜು ಬೇಡಿಕೆ ಇದೆ. ವಾರಾಹಿ ನೀರು ಅಮಾಸೆಬೈಲು ಗ್ರಾಮಕ್ಕೆ ಸಿಗುತ್ತಿಲ್ಲ. ಕೃಷಿಕರ ಪಾಡು ಹೇಳತಿರದು. ಇಷ್ಟೊಂದು ಸಮಸ್ಯೆ ಅಮಾಸೆಬೈಲು ಗ್ರಾಮದಲ್ಲಿದ್ದರೂ ಕೂಡಾ ಕಳೆದ 30 ವರ್ಷಗಳಿಂದ ಶಾಸಕರ ನಿಕಟ ಸಂಪರ್ಕ ಇರುವ ಕಿರಣ್ ಕೊಡ್ಗಿಯವರಿಂದ ಏಕೆ ಪರಿಹರಿಸಲು ಆಗಲಿಲ್ಲ ಎಂದು ಪ್ರಶ್ನಿಸಿದರು.

    ಈ ಸಂದರ್ಭದಲ್ಲಿ ಕುಂದಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹರಿಪ್ರಸಾದ್ ಶೆಟ್ಟಿ, ಕೋಟ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶಂಕರ್ ಕುಂದರ್, ಕೃಷ್ಣದೇವ ಕಾರಂತ, ವಿನೋದ್ ಕ್ರಾಸ್ತ್,  ಅಶೋಕ್ ಪೂಜಾರಿ ಉಪಸ್ಥಿತರಿದ್ದರು.

  • ಗಂಗೊಳ್ಳಿ : ತಾಕತ್ತಿದ್ದರೆ ಬಜರಂಗದಳವನ್ನು ಬ್ಯಾನ್ ಮಾಡಲಿ – ಸಂಸದ ರಾಘವೇಂದ್ರ

    ಗಂಗೊಳ್ಳಿ : ತಾಕತ್ತಿದ್ದರೆ ಬಜರಂಗದಳವನ್ನು ಬ್ಯಾನ್ ಮಾಡಲಿ – ಸಂಸದ ರಾಘವೇಂದ್ರ

    ಕುಂದಾಪುರ ಮಿರರ್ ಸುದ್ದಿ…

    ಗಂಗೊಳ್ಳಿ : ಕಾಂಗ್ರೆಸ್‍ನವರಿಗೆ ನಾಚಿಕೆಯಾಗಬೇಕು. ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯಲ್ಲಿ ಬಜರಂಗ ದಳವನ್ನು ಬ್ಯಾನ್ ಮಾಡುವುದಾಗಿ ಹೇಳಿದ್ದು, ಕಾಂಗ್ರೆಸ್‍ನವರಿಗೆ ತಾಕತ್ತಿದ್ದರೆ ಬಜರಂಗ ದಳವನ್ನು ಬ್ಯಾನ್ ಮಾಡುವ ಧೈರ್ಯ ತೋರಿಸಲಿ. ಆಗ ಅವರ ಕೈಗೆ ಬಳೆ ತೊಡಿಸುವ ಕೆಲಸವನ್ನು ಹಿಂದು ಸಂಘಟನೆಗಳ ಕಾರ್ಯಕರ್ತರು ಮಾಡಲಿದ್ದಾರೆ. ಪ್ರವೀಣ್ ನೆಟ್ಟಾರ್, ಶಿವಮೊಗ್ಗದ ಹರ್ಷ ಸೇರಿದಂತೆ ಅನೇಕ ಹಿಂದು ಕಾರ್ಯಕರ್ತರ ರಕ್ತದೊಕುಳಿ ಈ ನೆಲದಲ್ಲಿ ಆಗಿದೆ. ಮುಂದಿನ ದಿನಗಳಲ್ಲಿ ಯಾವನೇ ಒಬ್ಬ ಹಿಂದು ಕಾರ್ಯಕರ್ತರ ರಕ್ತವನ್ನು ಈ ನೆಲದಲ್ಲಿ ಬಿಡದಂತೆ ಮಾಡಬೇಕಾದರೆ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಬಾರದು ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.

    ಗಂಗೊಳ್ಳಿಯಲ್ಲಿ ಬಿಜೆಪಿ ಅಭ್ಯರ್ಥಿ ಗುರುರಾಜ್ ಗಂಟಿಹೊಳೆ ಪರವಾಗಿ ಬುಧವಾರ ಬೈಂದೂರು ವಿಧಾನಸಭಾ ಚುನಾವಣಾ ಪ್ರಚಾರದ ಬೃಹತ್ ರೋಡ್ ಶೋದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

    ಕಾಂಗ್ರೆಸ್ ಪಕ್ಷದ ವಾರಂಟಿ ಮುಗಿದಿದೆ. ಹೀಗಾಗಿ ಅವರು ಕೊಡುವ ಗ್ಯಾರಂಟಿ ಕಾರ್ಡ್‍ಗೆ ಯಾವುದೇ ಬೆಲೆ ಇಲ್ಲ. ಕೇವಲ ಓಟಿಗಾಗಿ ಗ್ಯಾರಂಟಿ ಕಾರ್ಡ್ ನೀಡುತ್ತಿದ್ದು ಜನರನ್ನು ವಂಚಿಸುವ ಪ್ರಯತ್ನ ಇದಾಗಿದೆ. ಇಂದಿರಾ ಗಾಂಧಿ ಕಾಲದಲ್ಲಿ 425 ಸೀಟುಗಳನ್ನು ಗೆದ್ದಿದ್ದ ಕಾಂಗ್ರೆಸ್ ಪಕ್ಷ ಇದೀಗ 43 ಸ್ಥಾನಗಳಿಗೆ ಸೀಮಿತವಾಗಿದ್ದು, ಕನಿಷ್ಠ ವಿರೋಧ ಪಕ್ಷದ ಸ್ಥಾನಮಾನ ಕೂಡ ಇಲ್ಲ. ಹೀಗಾಗಿ ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಠೇವಣಿ ಸಿಗದ ರೀತಿಯಲ್ಲಿ ಸೋಲಿಸಿ ಭಾರತೀಯ ಜನತಾ ಪಕ್ಷವನ್ನು ಮತ್ತೊಮ್ಮೆ ಅಧಿಕಾರಕ್ಕೆ ತರಬೇಕು. ಹಿಂದುಗಳ ಹುಲಿಯಾಗಿ, ಹಿಂದುಗಳ ಧ್ವನಿಯಾಗಿ ಗುರುರಾಜ್ ಗಂಟಿಹೊಳೆ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದು ಅತ್ಯಧಿಕ ಮತಗಳಿಂದ ಅವರನ್ನು ಗೆಲ್ಲಿಸಬೇಕು ಎಂದು ಕರೆ ನೀಡಿದರು.

    ಬಿಜೆಪಿ ಅಭ್ಯರ್ಥಿ ಗುರುರಾಜ್ ಗಂಟಿಹೊಳೆ ಮಾತನಾಡಿ, ಗಂಗೊಳ್ಳಿ ಶಿವಾಜಿಯ ಪ್ರತಾಪಗಡ ಇದ್ದಂತೆ. ಇಲ್ಲಿ ಪ್ರತಿಯೊಂದು ಮನೆಯಲ್ಲೂ ಹಿಂದುತ್ವದ ಕೆಚ್ಚು ಇದೆ. ಬೇರೆ ಕಡೆ ಹೋದರೆ ಹಿಂದುತ್ವವನ್ನು ಹೇಳಿ ಕೊಡಬೇಕಾದರೆ, ಗಂಗೊಳ್ಳಿಯಲ್ಲಿ ಮಾತ್ರ ಹಿಂದುತ್ವದ ಕೆಚ್ಚನ್ನು ತೆಗೆದುಕೊಂಡು ಹೋಗಬಹುದು. ಶಾಸಕನಾಗಿ ಆಯ್ಕೆಯಾದರೆ ತಾಯಂದಿರ ರಕ್ಷಣೆ, ಗೋ ಮಾತೆಯ ರಕ್ಷಣೆ ಜೊತೆಗೆ ಪ್ರತಿಯೊಬ್ಬ ಹಿಂದು ಕಾರ್ಯಕರ್ತರ ಬೆನ್ನಿಗೆ ನಿಂತು ಸಮಾಜದ ಪರವಾಗಿ ಕೆಲಸ ಮಾಡುವುದಾಗಿ ಅವರು ಭರವಸೆ ನೀಡಿದರು.
    ಬೈಂದೂರು ಮಂಡಲ ಬಿಜೆಪಿ ಉಸ್ತುವಾರಿ ಬ್ರಿಜೇಶ ಚೌಟ, ರಾಜ್ಯ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ಉಪಾಧ್ಯಕ್ಷ ಡಾ.ಗೋವಿಂದ ಬಾಬು ಪೂಜಾರಿ, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸದಾನಂದ ಉಪ್ಪಿನಕುದ್ರು, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಆನಂದ ಖಾರ್ವಿ, ತಾಪಂ ಮಾಜಿ ಸದಸ್ಯ ಸುರೇಂದ್ರ ಖಾರ್ವಿ, ತ್ರಾಸಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ರವಿ ಶೆಟ್ಟಿಗಾರ್ ತ್ರಾಸಿ, ಬಿಜೆಪಿ ಮುಖಂಡರು, ಗ್ರಾಪಂ ಸದಸ್ಯರು ಮೊದಲಾದವರು ಉಪಸ್ಥಿತರಿದ್ದರು.
    ಗಂಗೊಳ್ಳಿಯ ಶ್ರೀ ರಾಮ ಮಂದಿರದ ಬಳಿಯಿಂದ ಗಂಗೊಳ್ಳಿ ಬಂದರು ಬಸ್ ನಿಲ್ದಾಣದ ತನಕ ಸುಮಾರು 2 ಕಿ.ಮೀ. ಬೃಹತ್ ರೋಡ್ ಶೋ ನಡೆಯಿತು. ಸಹಸ್ರಾರು ಸಂಖ್ಯೆಯಲ್ಲಿ ಆಗಮಿಸಿದ್ದ ಮಹಿಳೆಯರ ಹಾಗೂ ಯುವ ಕಾರ್ಯಕರ್ತರ ಜಯಘೋಷ ಮುಗಿಲು ಮುಟ್ಟಿತ್ತು.

  • ಬೈಂದೂರು :ಬಜರಂಗದಳ ನಿಷೇಧ ಪ್ರಸ್ತಾಪವೇ ಇಲ್ಲ; ಬಿಜೆಪಿ ಸುಳ್ಳಿನ ಕತೆಗಳಿಗೆ ಮತದಾರರು ದಿಕ್ಕು ತಪ್ಪದಿರಿ ಎಂದ ಮೊಯಿಲಿ

    ಬೈಂದೂರು :ಬಜರಂಗದಳ ನಿಷೇಧ ಪ್ರಸ್ತಾಪವೇ ಇಲ್ಲ; ಬಿಜೆಪಿ ಸುಳ್ಳಿನ ಕತೆಗಳಿಗೆ ಮತದಾರರು ದಿಕ್ಕು ತಪ್ಪದಿರಿ ಎಂದ ಮೊಯಿಲಿ

    ಕುಂದಾಪುರ ಮಿರರ್ ಸುದ್ದಿ…

    ಕುಂದಾಪುರ: ಬಜರಂಗದಳ ನಿಷೇಧಿಸುವ ಯೋಚನೆಯಾಗಲೀ ಪ್ರಸ್ತಾವನೆಯಾಗಲೀ ಕಾಂಗ್ರೇಸ್ ಪಕ್ಷದ ಮುಂದಿಲ್ಲ ಎಂದು ಮಾಜೀ ಮುಖ್ಯಮಂತ್ರಿ ವೀರಪ್ಪ ಮೊಯಿಲಿ ಹೇಳಿದರು. ಅವರು ಬುಧವಾರ ಸಂಜೆ ಬೈಂದೂರಿನಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದರು.

    ದೇಶಕ್ಕೆ ಸ್ವಾತಂತ್ರ್ಯ ಸಿಕ್ಕ ಸಂದರ್ಭದಲ್ಲಿ ಅಂದಿನ ಕೇಂದ್ರ ಗೃಹ ಮಂತ್ರಿ ಸರ್ದಾರ್ ವಲ್ಲಭಭಾಯಿ ಪಟೇಲರು ಆರೆಸ್ಸೆಸ್ಸನ್ನು ಬ್ಯಾನ್ ಮಾಡಿಯೇ ಬಿಟ್ಟಿದ್ದರು. ಆದರೆ ಎರಡು ಮೂರು ದಿನಗಳಲ್ಲಿ ಪ್ರಧಾನಿ ನೆಹರೂರವರು ಆ ಆದೇಶವನ್ನು ಹಿಂಪಡೆಯುವಂತೆ ಪಟೇಲರಿಗೆ ಸೂಚಿಸಿದ್ದಲ್ಲದೇ ಹಿಂಪಡೆದಿದ್ದರು. ದುರಂತವೆಂದರೆ ಆರೆಸ್ಸೆಸ್ ಬ್ಯಾನ್ ಮಾಡಿದವರು ಇಂದು ಅವರದ್ದೇ ದೇವರಾಗಿದ್ದಾರೆ ಮತ್ತು ಕಾಂಗ್ರೆಸ್ ಬಗ್ಗೆ ಬಿಜೆಪಿ ಮತ್ತ ಪರಿವಾರ ಅಪಪ್ರಚಾರ ಮಾಡುತ್ತಿದೆ. ಇದು ಜನಸಾಮಾನ್ಯರಿಗೆ ಗೊತ್ತಿರಬೇಕಾದ ವಿಚಾರ ಎಂದ ಮೊಯಿಲಿ, ಬಿಜೆಪಿ ಬರೀ ಸುಳ್ಳುಗಳನ್ನು ಹೇಳುತ್ತಲೇ ಜನರನ್ನು ನಂಬಿಸುತ್ತಾ ಇದುವರೆಗೂ ಅಧಿಕಾರ ನಡೆಸಿದೆ. ಈ ಬಗ್ಗೆ ರಾಜ್ಯದ ಜನರಿಗೆ ಈಗಾಗಲೇ ಗೊತ್ತಾಗಿದೆ. ಆದರೂ ಸುಳ್ಳಿನ ಕಥೆಗಳನ್ನು ನಂಬಿಸುವಲ್ಲಿ ಬಿಜೆಪಿ ತನ್ನ ಪ್ರಯತ್ನವನ್ನು ಮುಂದುವರೆಸುತ್ತಿದ್ದು, ಪ್ರಜ್ಞಾವಂತ ಮತದಾರರು ಬಿಜೆಪಿ ಮಾತಿಗೆ ದಿಕ್ಕು ತಪ್ಪಬಾರದು ಎಂದರು.

    ಕಳೆದ ಬಾರಿ ಪರೇಶ್ ಮೇಸ್ತ ಸಾವಿನ ಪ್ರಕರಣವನ್ನು ಕಾಂಗ್ರೆಸ್ ವಿರುದ್ದ ಎತ್ತಿಕಟ್ಟುವ ಮೂಲಕ ರಾಜಕೀಯ ಲಾಭ ಪಡೆದುಕೊಂಡಿತ್ತು. ಆದರೆ ಬಿಜೆಪಿಯ ಡಬ್ಬಲ್ ಇಂಜಿನ್ ಕೆಲಸ ಮಾಡುತ್ತಿಲ್ಲ ಬದಲಾಗಿ ಬರೀ ಸದ್ದು ಮಾಡುತ್ತಿದೆ ಎನ್ನುವುದು ಜನರಿಗೆ ಗೊತ್ತಾಗಿದೆ. ಸಾಮಾಜಿಕ ನ್ಯಾಯ ಕೊಡುವಲ್ಲಿ ಬಿಜೆಪಿ ವಿಫಲವಾಗಿದೆ. ಭ್ರಷ್ಟಾಚಾರದ ಮೂಲಕ ಬಿಜೆಪಿ ಜನರ ವಿಶ್ವಾಸ ಕಳೆದುಕೊಂಡಿದೆ. ಇದೆಲ್ಲದರ ಪರಿಣಾಮ ರಾಜ್ಯದಲ್ಲಿ ಕಾಂಗ್ರೆಸ್ ಪರ ಅಲೆ ಎದ್ದಿದ್ದು, ಮುಂದಿನ ಸರ್ಕಾರ ನಮ್ಮದೇ ಎಂದರು.

    ಬೈಂದೂರು ಕಾಂಗ್ರೆಸ್ ಅಭ್ಯರ್ಥಿ ಕೆ.ಗೋಪಾಲ ಪೂಜಾರಿ, ಕಿಶನ್ ಹೆಗ್ಡೆ ಕೊಳ್ಕೆಬೈಲ್, ಕಾಂಗ್ರೆಸ್ ಮುಖಂಡರಾದ ಎಸ್.ಪ್ರಕಾಶ್ಚಂದ್ರ ಶೆಟ್ಟಿ, ರಘುರಾಮ ಶೆಟ್ಟಿ, ಎಸ್.ರಾಜು ಪೂಜಾರಿ, ಮುರುಳಿ ಶೆಟ್ಟಿ, ಕೃಷ್ಣಮೂರ್ತಿ, ನಾಗರಾಜ ಗಾಣಿಗ, ವಡಂಬಳ್ಳಿ ಜಯರಾಮ ಶೆಟ್ಟಿ, ದಿನೇಶ ಪುತ್ರನ್, ಬೈಂದೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮದನ್ ಕುಮಾರ್, ಯುವ ಕಾಂಗ್ರೆಸ್ ಅಧ್ಯಕ್ಷ ಶೇಖರ ಪೂಜಾರಿ ಉಪಸ್ಥಿತರಿದ್ದರು.

  • ಗಂಗೊಳ್ಳಿ: ಗುರುರಾಜ್ ಗಂಟಿಹೊಳೆ ಅಭೂತಪೂರ್ವ ಗೆಲುವು ಸಾಧಿಸಲಿದ್ದಾರೆ – ಭಾರತಿ ಶೆಟ್ಟಿ

    ಗಂಗೊಳ್ಳಿ: ಗುರುರಾಜ್ ಗಂಟಿಹೊಳೆ ಅಭೂತಪೂರ್ವ ಗೆಲುವು ಸಾಧಿಸಲಿದ್ದಾರೆ – ಭಾರತಿ ಶೆಟ್ಟಿ

    ಕುಂದಾಪುರ ಮಿರರ್ ಸುದ್ದಿ…

    ಗಂಗೊಳ್ಳಿ : ಬೈಂದೂರು ಕ್ಷೇತ್ರದಲ್ಲಿ ಸುಮಾರು 3500 ಕೋಟಿ ರೂ. ಯೋಜನೆ ಅನುಷ್ಠಾನಗೊಂಡಿದ್ದು, ನೀರಾವರಿ, ರಸ್ತೆ, ಆಸ್ಪತ್ರೆ, ಶಾಲಾ ಕಟ್ಟಡಗಳು ಸೇರಿದಂತೆ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಭಾರತೀಯ ಜನತಾ ಪಕ್ಷದ ರಾಜ್ಯ ಸರಕಾರ ಸಮಾಜಕ್ಕೆ ನೀಡಿದೆ. ಹೀಗಾಗಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಗುರುರಾಜ್ ಗಂಟಿಹೊಳೆ ಅಭೂತಪೂರ್ವ ಗೆಲುವು ಸಾಧಿಸಲಿದ್ದಾರೆ ಎಂದು ವಿಧಾನಪರಿಷತ್ ಸದಸ್ಯೆ ಭಾರತಿ ಶೆಟ್ಟಿ ಹೇಳಿದರು.

    ಹೆಮ್ಮಾಡಿಯಲ್ಲಿ ಸುದ್ಧಿಗೋಷ್ಟಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಕಾರ್ಯಕರ್ತರು ಬಹಳ ಹುರುಪಿನಿಂದ ಕೆಲಸ ಮಾಡುತ್ತಿದ್ದಾರೆ. ಬಿಜೆಪಿ ತನ್ನ ಪ್ರಣಾಳಿಕೆಯಲ್ಲಿ ಅನೇಕ ಯೋಜನೆಗಳನ್ನು ಚಿಂತನೆ ನಡೆಸಿ ಜನತೆ ಮುಂದಿಟ್ಟಿದೆ. ಪ್ರಣಾಳಿಕೆಯಲ್ಲಿ ಇಲ್ಲದ ಹಲವಾರು ಕಾರ್ಯಕ್ರಮಗಳನ್ನು ರಾಜ್ಯ ಸರಕಾರ ಮಾಡಿದ್ದು, ಮುಂದೆ ಕೂಡ ಜನರ ಬೇಡಿಕೆಗನುಗುಣವಾಗಿ ಮಾಡಲಾಗುವುದು. ಬಿಜೆಪಿ ನೇತೃತ್ವದ ರಾಜ್ಯ ಸರಕಾರ ಜಾರಿಗೆ ತಂದಿರುವ ಗೋಹತ್ಯೆ ನಿಷೇಧ, ಮತಾಂತರ ನಿಷೇಧ ಕಾಯ್ದೆ ಸಹಿತ ಅನೇಕ ಕಾಯ್ದೆಗಳನ್ನು ರದ್ದು ಮಾಡುವುದಾಗಿ ಡಿ.ಕೆ.ಶಿವಕುಮಾರ್ ಮತ್ತು ಸಿದ್ಧರಾಮಯ್ಯ ಹೇಳಿದ್ದಾರೆ. ಕಾಂಗ್ರೆಸ್ ಇತಿಹಾಸವೇ ಅಂತದ್ದು ಎಂದು ಲೇವಡಿ ಮಾಡಿದ ಅವರು, ಅವರು ಅಧಿಕಾರಕ್ಕೆ ಬಂದರೆ ತಾನೆ ಅದನ್ನು ಮಾಡುವುದು. ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ ಖಂಡಿತವಾಗಿ ಅಧಿಕಾರಕ್ಕೆ ಬರುವುದಿಲ್ಲ. ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಬಂದೇ ಬರುತ್ತದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

    ಇತಿಹಾಸಕ್ಕೆ ಮಾರಕವಾಗಿರುವ ಪಿಎಫ್‍ಐ ಮೇಲಿನ ಸುಮಾರು 1500 ಕೇಸುಗಳನ್ನು ಸಿದ್ಧರಾಮಯ್ಯ ಹಿಂಪಡೆದಿದ್ದಾರೆ. ಕೇವಲ ಶೇ.20ರಷ್ಟಿರುವ ಮುಸ್ಲಿಂ ಸಮುದಾಯದ ಅಭಿವೃದ್ಧಿಗಾಗಿ ಯೋಜನೆ ರೂಪಿಸುವ ಬದಲು, ಅವರ ಓಟಿಗಾಗಿ ಸಮಾಜಕ್ಕೆ ಹಾನಿಯಾಗುತ್ತಿರುವ ಭಯೋತ್ಪಾದನೆ, ಕೊಲೆ, ಸುಲಿಗೆ, ಕುಕ್ಕರ್ ಬ್ಲಾಸ್ಟ್ ಪ್ರಕರಣ, ಕೆಜೆ ಹಳ್ಳಿ ಡಿಜೆ ಹಳ್ಳಿ ಘಟನೆಯ ಆರೋಪಿಗಳು ನಿರಪರಾಧಿಗಳು, ಅಮಾಯಕರು ಎಂದು ಹೇಳಿಕೆ ನೀಡಿ ಅವರ ಬೆಂಬಲಕ್ಕೆ ನಿಲ್ಲುತ್ತಿರುವ ಕಾಂಗ್ರೆಸ್‍ಗೆ ಈ ಬಾರಿ ರಾಜ್ಯದ ಮತದಾರರು, ಮಹಿಳೆಯರು ತಕ್ಕ ಪಾಠ ಕಲಿಸಲಿದ್ದಾರೆ ಎಂದು ಅವರು ಹೇಳಿದರು.

    ಕಾಂಗ್ರೆಸ್ ಬಜರಂಗ ದಳವನ್ನು ಬ್ಯಾನ್ ಮಾಡುವುದಾಗಿ ಹೇಳಿರುವುದನ್ನು ಖಂಡಿಸಿದ ಅವರು, ಈ ವಿಚಾರದಲ್ಲಿ ಮಹಿಳೆಯರು ಎದ್ದು ನಿಂತು ತಕ್ಕ ಪ್ರತ್ಯುತ್ತರ ನೀಡಲಿದ್ದಾರೆ. ಚುನಾವಣಾ ಪ್ರಚಾರಕ್ಕೆ ಶಾಸಕ ಸುಕುಮಾರ್ ಶೆಟ್ಟಿ ಬಾರದಿರುವುದಕ್ಕೆ ಪ್ರತಿಕ್ರಿಯಿಸಿದ ಅವರು ಸುಕುಮಾರ್ ಶೆಟ್ಟಿ ಅವರು ಪ್ರಚಾರಕ್ಕೆ ಬಂದು ಗುರುರಾಜ್ ಗಂಟಿಹೊಳೆ ಅವರ ಗೆಲುವಿಗೆ ಶ್ರಮಿಸಲಿದ್ದಾರೆ ಎಂದರು.

    ಬಿಜೆಪಿ ಅಭ್ಯರ್ಥಿ ಗುರುರಾಜ್ ಗಂಟಿಹೊಳೆ ಮಾತನಾಡಿ, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಬಜರಂಗದಳ ಬ್ಯಾನ್ ಮಾಡುವುದಾಗಿ ಹೇಳಿರುವುದು ಅವರಿಗೆ ತಿರುಗುಬಾಣವಾಗಲಿದೆ. ಬಜರಂಗ ದಳದ ಒಬ್ಬನೇ ಒಬ್ಬ ಕಾರ್ಯಕರ್ತನ ಮೈ ಮುಟ್ಟಲು ಅವರಿಗೆ ಸಾಧ್ಯವಿಲ್ಲ. ಕಾಂಗ್ರೆಸ್ ಅಧಿಕಾರಕ್ಕೆ ಬರುದಿಲ್ಲ. ಕಾಂಗ್ರೆಸ್‍ನ ಹಿಂದು ದಮನ ನೀತಿಯ ವಿರುದ್ಧ ಸಮಸ್ತ ಹಿಂದು ಸಮಾಜದ ಒಗ್ಗಟ್ಟಾಗಿ ಎದುರಿಸಲಿದ್ದು, ಬಜರಂಗ ದಳ ಬ್ಯಾನ್ ಬಗ್ಗೆ ರಾಜ್ಯಾದ್ಯಂತ ಹೋರಾಟ ಮಾಡಲಾಗುವುದು ಎಂದರು.

    ಬೈಂದೂರು ಮಂಡಲ ಬಿಜೆಪಿ ಉಸ್ತುವಾರಿ ಕ್ಯಾ.ಬ್ರಿಜೇಶ್ ಚೌಟ, ಬೈಂದೂರು ಮಂಡಲ ಅಧ್ಯಕ್ಷ ದೀಪಕ ಕುಮಾರ್ ಶೆಟ್ಟಿ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸದಾನಂದ ಉಪ್ಪಿನಕುದ್ರು, ಬೈಂದೂರು ಮಂಡಲ ಮಹಿಳಾ ಮೋರ್ಚಾ ಅಧ್ಯಕ್ಷೆ ಭಾಗೀರಥಿ ಸುರೇಶ, ಅನಿತಾ ಆರ್.ಕೆ. ಉಪಸ್ಥಿತರಿದ್ದರು.

  • ಬೈಂದೂರು :ಬಿಜೆಪಿ ಮಹಿಳಾ ಮೋರ್ಚಾ ಬೈಂದೂರು ಮಂಡಲದ ವತಿಯಿಂದ ಬೃಹತ್ ಮಹಿಳಾ ಸಮಾವೇಶ “ನಾರೀ ಶಕ್ತಿ ನಾಡಿನ ಶಕ್ತಿ”

    ಬೈಂದೂರು :ಬಿಜೆಪಿ ಮಹಿಳಾ ಮೋರ್ಚಾ ಬೈಂದೂರು ಮಂಡಲದ ವತಿಯಿಂದ ಬೃಹತ್ ಮಹಿಳಾ ಸಮಾವೇಶ “ನಾರೀ ಶಕ್ತಿ ನಾಡಿನ ಶಕ್ತಿ”

    ಕುಂದಾಪುರ ಮಿರರ್ ಸುದ್ದಿ…

    ಗಂಗೊಳ್ಳಿ : ಇಂದಿನ ಈ ಮಹಿಳಾ ಸಮಾವೇಶದಲ್ಲಿ ಪಾಲ್ಗೊಂಡ ಅಪಾರ ಸಂಖ್ಯೆಯ ತಾಯಂದಿರು, ಅಕ್ಕ- ತಂಗಿಯರನ್ನು ಕಂಡಾಗ, ಬಿಜೆಪಿ ಬಗ್ಗೆ ಬೈಂದೂರಿನ ಮಹಿಳೆಯರಿಗೆ ಅಪಾರ ನಂಬಿಕೆಯಿರುವುದು ಖಾತ್ರಿ. ಹಾಗಾಗಿ ಮುಂಬರುವ ಚುನಾವಣೆಯಲ್ಲಿ ಬೈಂದೂರಲ್ಲಿ ಗುರುರಾಜ್ ಗಂಟಿಹೊಳೆ ಅವರ ಗೆಲುವು ನಿಶ್ಚಿತ ಎಂದು ಬಿಜೆಪಿಯ ಸ್ಟಾರ್ ಪ್ರಚಾರಕಿ, ನಟಿ ತಾರಾ ವಿಶ್ವಾಸ ವ್ಯಕ್ತಪಡಿಸಿದರು.

    ಅವರು ಬಿಜೆಪಿ ಮಹಿಳಾ ಮೋರ್ಚಾ ಬೈಂದೂರು ಮಂಡಲದ ವತಿಯಿಂದ ಹೆಮ್ಮಾಡಿಯ ಜಯಶ್ರೀ ಸಭಾಂಗಣದಲ್ಲಿ ಮಂಗಳವಾರ ನಡೆದ ಬಿಜೆಪಿ ಮಹಿಳಾ ಸಮಾವೇಶವನ್ನುದ್ದೇಶಿಸಿ ಮಾತನಾಡಿದರು.

    ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಮಾತನಾಡಿ, ಬೈಂದೂರಿಗೆ ಹೊಸತನ, ಹೊಸ ಉತ್ಸಾಹ, ಹೊಸ ಚೈತನ್ಯ ಬೇಕಾಗಿದ್ದು, ಅದಕ್ಕಾಗಿ ಬಿಜೆಪಿಯು ಸಾಮಾನ್ಯ ಕಾರ್ಯಕರ್ತನಾಗಿದ್ದ ಗುರುರಾಜ್ ಗಂಟಿಹೊಳೆ ಅವರನ್ನು ಆಯ್ಕೆ ಮಾಡಿದೆ. ಅವರನ್ನು ಗೆಲ್ಲಿಸುವ ಮಹತ್ತರ ಜವಾಬ್ದಾರಿ ನಿಮ್ಮೆಲ್ಲರದು ಎಂದು ಹೇಳಿದರು.

    ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ಜನರನ್ನು ಮರಳು ಮಾಡುವ ಕಾರ್ಡ್ ಆಗಿದ್ದು, ಅದನ್ನು ನಂಬಬೇಡಿ. ಬಿಜೆಪಿ ಕಳೆದ ಅವಧಿಯಲ್ಲಿ ರಾಜ್ಯ ಹಾಗೂ ದೇಶದಲ್ಲಿ ಮಾಡಿರುವ ಅಭಿವೃದ್ಧಿಯ ರಿರ್ಪೊರ್ಟ್ ಕಾರ್ಡನ್ನು ನೋಡಿ ಯಾರು ಉತ್ತಮರು ಎನ್ನುವುದಾಗಿ ಯೋಚಿಸಿ ಎಂದು ವಿಧಾನ ಪರಿಷತ್ ಸದಸ್ಯೆ ಭಾರತಿ ಶೆಟ್ಟಿ ಹೇಳಿದರು.

    ಬೈಂದೂರು ಬಿಜೆಪಿ ಅಭ್ಯರ್ಥಿ ಗುರುರಾಜ್ ಗಂಟಿಹೊಳೆ ಮಾತನಾಡಿ, ನನಗೆ ಗೊತ್ತಿಲ್ಲದೆ ಕ್ಷೇತ್ರದಲ್ಲಿ ಅನೇಕ ಮಂದಿ ತಾಯಂದಿರು ಬಿಜೆಪಿಯನ್ನು ಗೆಲ್ಲಿಸಲು ಶ್ರಮಿಸುತ್ತಿದ್ದಾರೆ. ಅವರೆಲ್ಲರ ಶ್ರಮವನ್ನು ವ್ಯರ್ಥವಾಗಲು ಬಿಡುವುದಿಲ್ಲ. ಮಹಿಳೆಯರೆಲ್ಲರ ರಕ್ಷಣೆಗೆ ಪ್ರಥಮ ಆದ್ಯತೆ ಎಂದರು.
    ರಾಜ್ಯ ಬಿಜೆಪಿ ಒಬಿಸಿ ಮೋರ್ಚಾ ಕಾರ್ಯದರ್ಶಿ ಡಾ.ಗೋವಿಂದ ಬಾಬು ಪೂಜಾರಿ, ಬಿಜೆಪಿ ಬೈಂದೂರು ಮಂಡಲ ಉಸ್ತುವಾರಿ ಕ್ಯಾ. ಬ್ರಿಜೇಶ್ ಚೌಟ, ಬಿಜೆಪಿ ಬೈಂದೂರು ಮಂಡಲದ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ, ಬಿಜೆಪಿ ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ವೀಣಾ ಶೆಟ್ಟಿ, ಬಿಜೆಪಿ ಬೈಂದೂರು ಅಧ್ಯಕ್ಷೆ ಭಾಗೀರಥಿ ಸುರೇಶ್, ಪ್ರಮುಖರಾದ ದೀಪಾ, ಶೋಭಾ ಜಿ.ಪುತ್ರನ್ ಮತ್ತಿತರರು ಉಪಸ್ಥಿತರಿದ್ದರು.

    ಬಿಜೆಪಿ ಬೈಂದೂರು ಮಂಡಲ ಪ್ರಧಾನ ಕಾರ್ಯದರ್ಶಿ ಪ್ರಿಯದರ್ಶಿನಿ ದೇವಾಡಿಗ ಮತ್ತು ಅನಿತಾ ಆರ್.ಕೆ. ಕಾರ್ಯಕ್ರಮ ನಿರೂಪಿಸಿದರು.

  • ಬೈಂದೂರು :ಮೀನುಗಾರರಿಗೆ ಸೀಮೆ ಎಣ್ಣೆ ರದ್ದು ಮಾಡಿದ್ದು ಬಿಜೆಪಿ ಅಲ್ಲ ಕಾಂಗ್ರೆಸ್ – ಪ್ರಮೋದ್ ಮಧ್ವರಾಜ್

    ಬೈಂದೂರು :ಮೀನುಗಾರರಿಗೆ ಸೀಮೆ ಎಣ್ಣೆ ರದ್ದು ಮಾಡಿದ್ದು ಬಿಜೆಪಿ ಅಲ್ಲ ಕಾಂಗ್ರೆಸ್ – ಪ್ರಮೋದ್ ಮಧ್ವರಾಜ್

    ಕುಂದಾಪುರ ಮಿರರ್ ಸುದ್ದಿ….

    ಬೈಂದೂರು: ಕೇಂದ್ರ ಸರ್ಕಾರದ 100 ಕೋಟಿ ಬಹುಮಾನದ ಆಸೆಗೆ ಮೀನುಗಾರರಿಗೆ ಸಿಗುತ್ತಿದ್ದ ಸೀಮೆಎಣ್ಣೆಯನ್ನು ರದ್ಧುಗೊಳಿಸಿದ್ದು ರಾಜ್ಯದಲ್ಲಿ ಹಿಂದೆ ಸರ್ಕಾರ ನಡೆಸಿದ ಕಾಂಗ್ರೆಸ್ ಎಂದು ಮಾಜೀ ಸಚಿವ ಪ್ರಮೋದ್ ಮಧ್ವರಾಜ್ ಆರೋಪಿಸಿದ್ದಾರೆ. ಅವರು ಬೈಂದೂರಿನ ಬಿಜೆಪಿ ಕಚೇರಿಯಲ್ಲಿ ಮಂಗಳವಾರ ನಡೆದ ಪತ್ರಿಕಾಗೋಷ್ಟಿಯಲ್ಲಿ ಅವರು ಈ ಹೇಳಿಕೆ ನೀಡಿದ್ದಾರೆ.

    ಅಂದಿನ ಕೇಂದ್ರ ಸರ್ಕಾರ ಪಿಡಿಎಸ್ ಸೀಮೆ ಎಣ್ಣೆಯಿಂದ ಆರೋಗ್ಯದ ಸಮಸ್ಯೆ ಬರುತ್ತದೆ ಎನ್ನುವ ಧೋರಣೆಯಿಂದ ಪಿಡಿಎಸ್ ಸೀಮೆಎಣ್ಣೆ ಬಳಕೆ ನಿಲ್ಲಿಸಿದರೆ 100 ಕೋಟಿ ಬಹುಮಾನ ನೀಡುವುದಾಗಿ ಹೇಳಿದ್ದರಿಂದ ರಾಜ್ಯ ಸರ್ಕಾರ 100 ಕೋಟಿ ದುರಾಶೆಗೆ ಯುಟಿ ಖಾದರ್ ಈ ಕ್ರಮ ಕೈಗೊಂಡಿದ್ದರು. ಈಗ ಅದೇ ಕಾಂಗ್ರೆಸ್ ಪಕ್ಷ ಮೀನುಗಾರರಿಗೆ ಸೀಮೆ ಎಣ್ಣೆ ಕೊಡುತ್ತಿಲ್ಲ ಎಂದು ಆರೋಪಿಸುತ್ತಿದೆ. ಆದರೆ ನರೇಂದ್ರ ಮೋದಿ ಸರ್ಕಾರ ನೇರವಾಗಿ ಮೀನುಗಾರರಿಗೆ ಸೀಮೆ ಎಣ್ಣೆ ನೀಡುವ ಕ್ರಮ ಕೈಗೊಂಡಿದೆ. ಈಗಾಗಲೇ 1488 ಕೆಎಲ್ ಸೀಮೆಣ್ಣೆಯನ್ನು ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಮೀನುಗಾರರಿಗೆ ಬಿಡುಗಡೆ ಮಾಡಿದೆ ಎಂದರು.

    ಪ್ರತಿಯೊಂದು ರಾಜಕೀಯ ಪಕ್ಷಗಳೂ ಆರ್ಥಿಕವಾಗಿ ಸದೃಢರಾದವರನ್ನೇ ಚುನಾವಣೆಗೆ ನಿಲ್ಲಿಸಿ, ಅವರ ಹಣದಿಂದಲೇ ಚುನಾವಣೆ ಎದುರಿಸುತ್ತಿದ್ದರೆ, ಸಾಮಾನ್ಯರಲ್ಲಿ ಸಾಮಾನ್ಯರನ್ನು ಚುನಾವಣೆಗೆ ನಿಲ್ಲಿಸ ಶಾಸಕರನ್ನಾಗಿ ಮಾಡುವ ಪಕ್ಷ ಬಿಜೆಪಿ ಮಾತ್ರ ಎಂದರು.

    ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಗಡಿ ಭಾಗವಾದ ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ ಸಾಮಾನ್ಯ ಕಾರ್ಯಕರ್ತನಾಗಿರುವ ಗುರುರಾಜ ಗಂಟಿಹೊಳೆಯವರಿಗೆ ಬಿಜೆಪಿ ಟಿಕೆಟ್ ನೀಡಿದರೆ ಇನ್ನೊಂದು ತುದಿಯಲ್ಲಿ ಸುಳ್ಯ ವಿಧಾನಸಭಾ ಕ್ಷೇತ್ರಕ್ಕೆ ಕೂಲಿ ಕಾರ್ಮಿಕೆಯಾಗಿರುವ ಭಾಗಿರಥಿಯವರಿಗೆ ಟಿಕೆಟ್ ಕೊಡುವ ಮೂಲಕ ಬಿಜೆಪಿ ಜನಸಾಮಾನ್ಯನ ಪಕ್ಷ ಎನ್ನುವುದನ್ನು ಸಾಬೀತು ಮಾಡಿದೆ ಎಂದರು.

    ಇಡೀ ದೇಶ ಹಿಂದೂ ಬಹುಸಂಖ್ಯಾತರನ್ನು ಹೊಂದಿರುವ ದೇಶ. ಹಿಂದುತ್ವದ ಪರವಾಗಿರುವ ಬಿಜೆಪಿಯ ವಿರುದ್ಧ ಕಾಂಗ್ರೆಸ್ ಹರಿಹಾಯುತ್ತಿದೆ ಮಾತ್ರವಲ್ಲ ಕಾಂಗ್ರೆಸ್ ಮುಖಂಡರು ಬಹಿರಂಗವಾಗಿ ನಾವು ಹಿಂದುತ್ವವನ್ನು ವಿರೋಧಿಸುತ್ತೇವೆ ಎನ್ನುವ ಹೇಳಿಕೆ ನೀಡುತ್ತಿದ್ದಾರೆ. ಹಿಂದುತ್ವದ ವಿರೋಧಿ ಎಂದರೆ ಹಿಂದೂ ವಿರೋಧಿಗಳು ಎಂದೇ ಅರ್ಥ. ಹಾಗಾಗಿ ದೇಶದ ಅಭಿವೃದ್ಧಿಯ ಜೊತೆಗೆ ಬಹುಸಂಖ್ಯಾತ ಹಿಂದೂಗಳು ಹಿಂದೂ ಧರ್ಮದ ರಕ್ಷಣೆಯ ಬಗ್ಗೆಯೂ ಹೆಚ್ಚು ಎಚ್ಚರದಿಂದಿರಬೇಕು ಎಂದು ಹೇಳಿದರು.

    ಇತ್ತೀಚೆಗೆ ಕಾಂಗ್ರೆಸ್ ರಾಜ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್ ನೀಡಿದ್ದ ಹೇಳಿಕೆಗೆ ಪ್ರತಿಕ್ರಿಯಿಸಿದ ಮಧ್ವರಾಜ್, 1989ರಲ್ಲಿ ಡೀಕೇಶೀ ಮತ್ತು ನಾನು ಸ್ನೇಹಿತರಾಗಿದ್ದೆವು. ಆಗ ಅವರ ಘೋಷಿತ ಆಸ್ತಿ ಎಷ್ಟಿತ್ತು ಮತ್ತು ಈ ವರ್ಷದ ಚುನಾವಣೆಯಲ್ಲಿ ಅವರ ಆಸ್ತಿ ಎಷ್ಟಾಗಿದೆ ಎನ್ನುವುದನ್ನು ಒಂದು ಸಲ ನೋಡಿದರೆ ಗೊತ್ತಾಗುತ್ತದೆ ಅವರು ಸರ್ಕಾರದ ಹಣವನ್ನು ಎಷ್ಟು ಲೂಟಿ ಮಾಡಿದ್ದಾರೆ ಎನ್ನುವುದು. ಆದುದರಿಂದ ಸರ್ಕಾರವನ್ನೇ ಲೂಟುವುದಕ್ಕಿಂತ ಗಾಳ ಹಾಕಿ ಮೀನು ಹಿಡಿಯುವ ವೃತ್ತಿ ಸರ್ವ ಶ್ರೇಷ್ಟವಾದುದು. ಆದರೆ ನನಗೆ ಬಿಜೆಪಿ ಸೇರಿದ ಮೇಲೆ ಗಾಳ ಹಾಕುವುದಕ್ಕೆ ಪಕ್ಷ ಪುರುಸೊತ್ತು ನೀಡಿಲ್ಲ ಎಂದು ವ್ಯಂಗ್ಯವಾಡಿದರು.

  • ಬೈಂದೂರು ಕ್ಷೇತ್ರ ಬಿಜೆಪಿ ಪ್ರನಾಳಿಕೆ ಬಿಡುಗಡೆ

    ಬೈಂದೂರು ಕ್ಷೇತ್ರ ಬಿಜೆಪಿ ಪ್ರನಾಳಿಕೆ ಬಿಡುಗಡೆ

    ಕುಂದಾಪುರ ಮಿರರ್ ಸುದ್ದಿ….

    ಬೈಂದೂರು :ಇಡೀ ಕ್ಷೇತ್ರದ ರಾಜಕಾರಣದ ದಿಕ್ಕನ್ನು ಬದಲಾಯಿಸುವ ಶಕ್ತಿ ಗ್ರಾಮ ಪಂಚಾಯಿತಿ ಪ್ರತಿನಿಧಿಗಳಿಗಿದೆ. ಆ ಹಿನ್ನೆಲೆಯಲ್ಲಿ ಪ್ರನಾಳಿಕೆಯನ್ನು ಮನೆ ಮನೆಗೂ ತಲುಪಿಸುವ ಕಾರ್ಯ ವಾಗಬೇಕು ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

    ಭಾರತೀಯ ಜನತಾ ಪಕ್ಷ ಬೈಂದೂರು ಮಂಡಲದ ವತಿಯಿಂದ ತ್ರಾಸಿಯ ಕೊಂಕಣ ಖಾರ್ವಿ ಸಭಾಭವನದಲ್ಲಿ ನಡೆದ ಪಂಚಾಯತ್ ಪ್ರತಿನಿಧಿಗಳ ಸಮಾವೇಶದಲ್ಲಿ ಪಕ್ಷದ ಬೈಂದೂರು ಕ್ಷೇತ್ರದ ಪ್ರನಾಳಿಕೆ ಬಿಡುಗಡೆ ಮಾಡಿ ಮಾತನಾಡಿದರು.

    ಬಿಜೆಪಿ ಸರ್ಕಾರ ಇವತ್ತು ಪಂಚಾಯತ್ ವ್ಯವಸ್ಥೆಗೆ ಶಕ್ತಿ ನೀಡಿದೆ. ಶಾಸನಬದ್ದ ಅನುದಾನ ಇವತ್ತು ಉಳ್ಳಾಲದಂತಹ ಗ್ರಾಮ ಪಂಚಾಯಿತಿಗೆ ಜನಸಂಖ್ಯಾಗನುಗುಣವಾಗಿ 98 ಲಕ್ಷ ಸಿಗುತ್ತದೆ. ಪಂಚಾಯತ್ ಪ್ರತಿನಿಧಿಗಳ ಗೌರವ ಧನ ಒಂದು ಸಾವಿರದಿಂದ ಎರಡು ಸಾವಿರಕ್ಕೆ ಹೆಚ್ಚಳವಾಗಿದೆ ಎಂದರು.

    ಒಳಮೀಸಲಾತಿಯ ಬಗ್ಗೆ ಸಾಕಷ್ಟು ಚರ್ಚೆ ಆಗುತ್ತಿದೆ. ಜೇನು ಗೂಡಿಗೆ ಕೈಹಾಕಿದ್ದಾರೆ ಎಂದು ಟೀಕಿಸಿದರು. ಜೇನು ಗೂಡಿಗೆ ಕೈ ಹಾಕಿದ್ದು ನಿಜ, ಜೇನು ತಗೆದೇ ತಗೆಯುತ್ತೇವೆ. ಎಂದ ಅವರು, ಗುರುರಾಜ ಗಂಟಿಹೊಳೆ ಅಪರೂಪದ ಅಭ್ಯರ್ಥಿ. ಅವರನ್ನು ಗೆಲ್ಲಿಸಿ ವಿಧಾನಸಭೆಗೆ ಕಳುಹಿಸುವ ಕೆಲಸವಾಗಬೇಕು ಎಂದರು.

    ಬೈಂದೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗುರುರಾಜ ಗಂಟಿಹೊಳೆ ಮಾತನಾಡಿ, ಒಮ್ಮೆಯಾದರೂ ಕಾರ್ಯಕರ್ತರು ಜನಪ್ರತಿನಿಧಿಗಳಾಗಬೇಕು. ಪಂಚಾಯತ್ ಸದಸ್ಯರಿಗೆ ಜನರ ಸಮಸ್ಯೆ ಏನು ಎನ್ನುವುದರ ಸ್ಪಷ್ಟವಾದ ಅರಿವಿರುತ್ತದೆ. ಪ್ರತಿ ವಾರ್ಡ್ ಸ್ಪಷ್ಟ ಚಿತ್ರಣ ಗ್ರಾ.ಪಂಗೆ ಸ್ಪರ್ಧಿಸಿ ಸೋತವರು ಅಥವಾ ಗೆದ್ದವರಿಗೆ ತಿಳಿದಿರುತ್ತದೆ. ಒಂದು ಗ್ರಾಮದಲ್ಲಿ ಯೋಜನೆಯ ಸಮರ್ಪಕ ಅನುಷ್ಟಾನ, ಅನುದಾನ ಎಲ್ಲಿ ಹಾಕಬೇಕು ಎನ್ನುವುದನ್ನು ಸ್ಥಳೀಯ ಗ್ರಾ.ಪಂ. ಸದಸ್ಯರಲ್ಲಿ ಚರ್ಚಿಸಿ ಅನುಷ್ಟಾನಿಸಿದರೆ ಹೆಚ್ಚು ಪರಿಣಾಮಕಾರಿಯಾಗುತ್ತದೆ. ಶಾಸಕನಾದರೆ ಗ್ರಾಮ ಪಂಚಾಯತ್ ಸದಸ್ಯರ ಮೂಲಕ ಚರ್ಚಿಸಿ ಅವರ ಸಲಹೆ ಸೂಚನೆಗಳನ್ನು ಪಡೆದುಕೊಂಡು ಮುಂದುವರಿಯಲು ಯೋಚಿಸಿದ್ದೇನೆ ಎಂದರು.
    ಬಿಜೆಪಿ ಒಬಿಸಿ ಮೋರ್ಚಾದ ಕಾರ್ಯದರ್ಶಿ ಗೋವಿಂದ ಬಾಬು ಪೂಜಾರಿ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು. ಕ್ಷೇತ್ರದ ಉಸ್ತುವಾರಿ ಬ್ರಿಜೇಶ್ ಚೌಟ ಉಪಸ್ಥಿತರಿದ್ದರು.

    ಚುನಾವಣಾ ಪ್ರನಾಳಿಕೆ ಸಂಚಾಲಕ ಚಿಟ್ಟೆ ರಾಜಗೋಪಾಲ ಹೆಗ್ಡೆ ಪ್ರನಾಳಿಕೆಯ ಬಗ್ಗೆ ವಿವರಿಸಿದರು. ಮಂಡಲದ ಅಧ್ಯಕ್ಷ ದೀಪಕ ಕುಮಾರ್ ಶೆಟ್ಟಿ ಪ್ರಸ್ತಾವಿಕ ಮಾತುಗಳನ್ನಾಡಿದರು. ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಆನಂದ ಖಾರ್ವಿ ವಂದಿಸಿದರು. ಮಂಡಲದ ಪ್ರಧಾನಕಾರ್ಯದರ್ಶಿ ಪ್ರಿಯದರ್ಶಿನಿ ದೇವಾಡಿಗ ಕಾರ್ಯಕ್ರಮ ನಿರ್ವಹಿಸಿದರು.

  • ಸಾಲಿಗ್ರಾಮ :ಸಿದ್ದರಾಮಯ್ಯ ಭ್ರಷ್ಟಚಾರದ ಬಗ್ಗೆ ಮಾತನಾಡುವುದು ಕೇಳಿದರೆ ನಗು ಬರುತ್ತದೆ- ಸಾಲಿಗ್ರಾಮ ರೋಡ್ ಶೋ ನಲ್ಲಿ ಜೆ.ಪಿ ನಡ್ಡಾ

    ಸಾಲಿಗ್ರಾಮ :ಸಿದ್ದರಾಮಯ್ಯ ಭ್ರಷ್ಟಚಾರದ ಬಗ್ಗೆ ಮಾತನಾಡುವುದು ಕೇಳಿದರೆ ನಗು ಬರುತ್ತದೆ- ಸಾಲಿಗ್ರಾಮ ರೋಡ್ ಶೋ ನಲ್ಲಿ ಜೆ.ಪಿ ನಡ್ಡಾ

    Video:

    ಕುಂದಾಪುರ ಮಿರರ್ ಸುದ್ದಿ…


    ಕೋಟ: ನಮ್ಮದು ಹೆಸರಿಗೆ ಡಬಲ್ ಇಂಜಿನ್ ಸರ್ಕಾರ ಅಲ್ಲ, ಕರೋನ ಸಮಯದಲ್ಲಿ ವ್ಯಾಕ್ಸಿನ್, ಸ್ಟೀಲ್ ಉತ್ಪಾದಕ ಘಟಕ, ಮೊಬೈಲ್ ಉತ್ಪಾದಕ ಘಟಕ, ರಾಷ್ಟ್ರೀಯ ಹೆದ್ದಾರಿಯ ಅಭಿವೃದ್ಧಿ ಹೀಗೆ ಹಲವಾರು ಯೋಜನೆಗಳನ್ನು ಡಬಲ್ ಇಂಜಿನ್ ಸರ್ಕಾರ ನೀಡಿದೆ.
    ಕರ್ನಾಟಕಕ್ಕೆ ಈ ವರ್ಷವೇ ರಾಷ್ಟ್ರೀಯ ಹೆದ್ದಾರಿಗೆ ಒಂದು ಲಕ್ಷ ಕೋಟಿ ಅನುದಾನವನ್ನು ಘೋಷಿಸಲಿದ್ದೇವೆ. ಹಾಗೆ ತುಮಕೂರಿನಲ್ಲಿ ಅತಿ ದೊಡ್ಡ ಉತ್ಪಾದನಾ ಘಟಕ ಸ್ಥಾಪಿತವಾಗಲಿದ್ದು, ಮುಂದಿನ ದಿನಗಳಲ್ಲಿ ದಕ್ಷಿಣದ ಅತಿ ದೊಡ್ಡ ಉದ್ಯಮ ಕೇಂದ್ರವಾಗಲಿದೆ. ಹೆಲಿಕ್ಯಾಪ್ಟರ್ ತಯಾರಿಕೆ, ರೈಲ್ವೆ ಭೋಗಿಗಳ ತಯಾರಿಕಾ ಘಟಕ ತುಮಕೂರಿನಲ್ಲಿ ಸ್ಥಾಪಿತವಾಗಲಿದೆ. ಅಲ್ಲದೆ ಹಲವಾರು ಜನರಿಗೆ ಎಲ್ಲಿ ಉದ್ಯೋಗ ಲಭಿಸಲಿದೆ.

    ಬಿಜೆಪಿ ಸರ್ಕಾರ ರೈತರಿಗೆ ಮತ್ತು ಅವರ ಮಕ್ಕಳಿಗೆ ಉತ್ತಮ ಶಿಕ್ಷಣ ಮತ್ತು ಆರ್ಥಿಕ ವ್ಯವಸ್ಥೆಯನ್ನು ಹೆಚ್ಚಿಸಲು ಬೊಮ್ಮಾಯಿ ಸರ್ಕಾರ ಈಗಾಗಲೇ ಸಾಕಷ್ಟು ಅನುದಾನ ನೀಡಿದೆ. ಜೆಡಿಎಸ್ ಮತ್ತು ಕಾಂಗ್ರೆಸ್ ಸರ್ಕಾರ ಇರುವಾಗ ಪ್ರಧಾನ್ ಮಂತ್ರಿ ಆವಾಸ್ ಯೋಜನ, ಆಯುಷ್ಮಾನ್ ಯೋಜನೆ, ಕಿಸಾನ್ ಯೋಜನೆಯನ್ನು ಕೇಂದ್ರದಿಂದ ಕರ್ನಾಟಕದ ಜನತೆಗೆ ನೀಡಲು ವಿಫಲವಾಗಿತ್ತು, ಆದರೆ ಯಡಿಯೂರಪ್ಪ ಮತ್ತು ಬೊಮ್ಮಾಯಿ ಈ ಎಲ್ಲಾ ಯೋಜನೆಯನ್ನು ಸಮರ್ಪಕವಾಗಿ ಕರ್ನಾಟಕದ ಜನತೆಗೆ ತಲುಪಿಸಲು ಯಶಸ್ವಿಯಾಗಿದೆ. ಅಲ್ಲದೆ ಪಿಎಫ್‍ಐ ಸಂಘಟನೆಯನ್ನು ಬ್ಯಾನ್ ಮಾಡಿ ನಮ್ಮ ಡಬಲ್ ಇಂಜಿನ್ ಸರ್ಕಾರದ ಶಕ್ತಿಯನ್ನು ಈಗಾಗಲೇ ಕರ್ನಾಟಕಕ್ಕೆ ತೋರಿಸಿದ್ದೇವೆ. ಸಿದ್ದರಾಮಯ್ಯ ಚುನಾವಣೆ ಪ್ರಚಾರದಲ್ಲಿ ಭ್ರಷ್ಟಾಚಾರದ ಬಗ್ಗೆ ಮಾತನಾಡುತ್ತಿದ್ದಾರೆ ಇದನ್ನು ಕೇಳಿದರೆ ನಗು ಬರುತ್ತಿದೆ. ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಇವರುಗಳ ಅಕ್ರಮ ಆಸ್ತಿ, ಭೂಕಬಳಿಕೆ, ಮನಿ ಲಾಂಡ್ರಿಂಗ್ ಪ್ರಕರಣ ದಾಡಿಯಲ್ಲಿ ಈಗ ಬೇಲ್‍ನಲ್ಲಿ ಹೊರಗಿದ್ದಾರೆ . ರಾಹುಲ್ ಗಾಂಧಿ ಹಾಗೂ ಇತರ ಕಾಂಗ್ರೆಸ್ ಲೀಡರ್ ಕಥೆ ಸಹ ಇದೇ ಆಗಿದೆ. ಕಾಂಗ್ರೆಸ್ ನಲ್ಲಿ ನಾಯಕರುಗಳು ಒಂದೇ ಜೈಲ್ನಲ್ಲಿ ಇಲ್ಲ ಬೇಲ್‍ನಲ್ಲಿ ಹೊರಗಿದ್ದಾರೆ.

    ಸಚಿವ ಕೋಟ ಶ್ರೀನಿವಾಸ ಪೂಜಾರಿ, ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ, ಕುಂದಾಪುರ ವಿಧಾನಸಭಾ ಅಭ್ಯರ್ಥಿ ಕಿರಣ್ ಕುಮಾರ್ ಕೊಡ್ಗಿ, ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಕುಂದಾಪುರ ಬಿಜೆಪಿ ಮಂಡಲ ಅಧ್ಯಕ್ಷ ಶಂಕರ್ ಅಂಕದಕಟ್ಟೆ, ಮುಖಂಡರಾದ ಉದಯ್ ಕುಮಾರ್ ಶೆಟ್ಟಿ, ಶ್ಯಾಮಲ ಕುಂದರ್, ಸುಲತಾ ಹೆಗ್ಡೆ, ರಾಜು ಪೂಜಾರಿ, ಜಯೇಂದ್ರ ಪೂಜಾರಿ, ಸುರೇಶ್ ಕುಂದರ್, ಸುರೇಶ್ ಶೆಟ್ಟಿ ,ಸತೀಶ್ ಪೂಜಾರಿ,ಸತೀಶ್ ಬಾರಿಕೆರೆ ಮತ್ತಿತರರು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಬಿಜೆಪಿ ಮುಖಂಡ ಬೈಕಾಡಿ ಸುಪ್ರಸಾದ್ ಶೆಟ್ಟಿ ನಿರೂಪಿಸಿದರು.ಈ ಮೊದಲು ಸಾಲಿಗ್ರಾಮದ ಆಂಜನೇಯ ದೇವಳದ ರಸ್ತೆ ಮೂಲಕ ರಾಷ್ಟ್ರೀಯ ಹೆದ್ದಾರಿಯ ಮೂಲಕ ಸಹಸ್ರ ಸಂಖ್ಯೆಯಲ್ಲಿ ಕಾರ್ಯಕರ್ತರು ರೋಡ್ ಶೋ ನಲ್ಲಿಭಾಗಿಯಾದರು.

    ಶಾಸಕ ಹಾಲಾಡಿಗೆ ಅಭಿಮಾನಿಗಳ ಮಹಾಪೂರ
    ರೋಡ್ ಶೋ ಉದ್ದಕ್ಕೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಹಾಗೂ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ,ಅಭ್ಯರ್ಥಿ ಕಿರಣ್ ಕುಮಾರ್ ಕೊಡ್ಗಿವರ ಪರವಾಗಿ ಕಾರ್ಯಕರ್ತರು ಘೋಷಣೆಗಳ ಮಹಾಪೂರ ಹರಿಸಿದರು. ಅದರಲ್ಲೂ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಕಾರ್ಯಕರ್ತರ ನಡುವೆ ಕಾರ್ಯಕ್ರಮದಲ್ಲಿ ಭಾಗಿಯಾಗಿ ಗಮನ ಸೆಳೆದು ಕಾರ್ಯಕ್ರಮದ ನಂತರ ಅಭಿಮಾನಿಗಳು ಹಾಗೂ ಕಾರ್ಯಕರ್ತರ ದಂಡು ಹಾಲಾಡಿ ಶ್ರೀನಿವಾಸ ಶೆಟ್ಟಿ ನಡೆದುಹೋದ ದಾರಿ ಉದ್ದಕ್ಕೂ ರೋಡ್ ಶೋ ವಿಶೇಷವಾಗಿ ಗಮನ ಸೆಳೆಯಿತು.

  • ಕುಂದಾಪುರ :ಭಾರತೀಯ ಜನತಾ ಪಕ್ಷ ಎಂದರೆ ಅಭಿವೃದ್ದಿ-ಶೋಭಾ ಕರಂದ್ಲಾಜೆ

    ಕುಂದಾಪುರ :ಭಾರತೀಯ ಜನತಾ ಪಕ್ಷ ಎಂದರೆ ಅಭಿವೃದ್ದಿ-ಶೋಭಾ ಕರಂದ್ಲಾಜೆ

    ಕುಂದಾಪುರ ಮಿರರ್ ಸುದ್ದಿ…

    ಕುಂದಾಪುರ :ಭಾರತೀಯ ಜನತಾ ಪಕ್ಷ ಎಂದರೆ ಅಭಿವೃದ್ದಿ. ಇವತ್ತು ಕೇಂದ್ರ, ರಾಜ್ಯದಲ್ಲಿ ಅಭಿವೃದ್ದಿಯನ್ನು ಕಂಡಿದ್ದೇವೆ. ಉಡುಪಿ ಜಿಲ್ಲೆಯಲ್ಲಿ ಐದು ಸ್ಥಾನಗಳನ್ನು ಬಿಜೆಪಿ ಗೆಲ್ಲಲಿದೆ. ಕುಂದಾಪುರ ಕ್ಷೇತ್ರದಲ್ಲಿ ಹಾಲಾಡಿ ಶ್ರೀನಿವಾಸ ಶೆಟ್ಟರು ನಿರಂತರ ಗೆಲುವು ಸಾಧಿಸಿದ ರೀತಿಯಲ್ಲಿಯೇ ಕಿರಣ್ ಕೊಡ್ಗಿ ಗೆಲುವು ಸಾಧಿಸಲಿದ್ದಾರೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.
    ಅವರು ಕುಂದಾಪುರದ ಸಂಗಮ್ ಪರಿಸರದಲ್ಲಿ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
    ರಾಜ್ಯ ಮತ್ತು ಕೇಂದ್ರದಲ್ಲಿ ಒಂದೇ ಸರ್ಕಾರವಿದ್ದರೆ ಅಭಿವೃದ್ದಿ ವೇಗ ಪಡೆಯುತ್ತದೆ. ಕೇಂದ್ರದ ಯೋಜನೆಗಳು ರಾಜ್ಯದಲ್ಲಿ ಸಮರ್ಪಕವಾಗಿ ಅನುಷ್ಠಾನವಾಗಲು ಡಬ್ಬಲ್ ಇಂಜಿನ್ ಸರ್ಕಾರ ಇರಬೇಕು. ಈ ಬಾರಿ ಪಕ್ಷ ಹೆಚ್ಚಿನ ಸಂಖ್ಯೆಯಲ್ಲಿ ಯುವಕರಿಗೆ ಟಿಕೆಟು ನೀಡಿದೆ. ಕೇಂದ್ರ ಸರ್ಕಾರದ ಜನತೆಗೆ ನೀಡಿದ ಯೋಜನೆಗಳು ಪ್ರತಿಯೋರ್ವರನ್ನು ತಲುಪಿಸಿದೆ ಎಂದರು.
    ಅಭ್ಯರ್ಥಿ ಕಿರಣ್ ಕುಮಾರ್ ಕೊಡ್ಗಿ ಮಾತನಾಡಿ ಹಾಲಾಡಿ ಶ್ರೀನಿವಾಸ ಶೆಟ್ಟರು ರಾಜಕೀಯ ನಿವೃತ್ತಿ ಪಡೆದಿಲ್ಲ. ಚುನಾವಣೆಗೆ ಸ್ಪರ್ಧೆಯಿಂದ ಹಿಂದೆ ಸರಿದಿದ್ದಾರೆ. ನಮ್ಮೆಲ್ಲರ ಅಪೇಕ್ಷೆ ಹಾಲಾಡಿಯವರೇ ಸ್ಪರ್ಧೆ ಮಾಡಬೇಕು ಎನ್ನುವುದಾಗಿತ್ತು. ಪಕ್ಷ ನನಗೆ ಅವಕಾಶ ನೀಡಿತು. ಹಾಲಾಡಿಯವರ ಮಾರ್ಗದರ್ಶನದಲ್ಲಿ ಚುನಾವಣೆ ಎದುರಿಸುತ್ತಿದ್ದೇನೆ ಎಂದರು.
    ಈ ಸಂದರ್ಭದಲ್ಲಿ ಚುನಾವಣಾ ಪ್ರಭಾರಿ ಶ್ಯಾಮಲ ಕುಂದರ್, ಮಂಡಲದ ಮಾಜಿ ಅಧ್ಯಕ್ಷ ಸುರೇಶ ಶೆಟ್ಟಿ ಕಾಡೂರು, ಪುರಸಭಾ ಸದಸ್ಯ ಮೋಹನದಾಸ ಶೆಣೈ, ಭಾಸ್ಕರ ಪುತ್ರನ್ ಉಪಸ್ಥಿತರಿದ್ದರು.