Category: ರಾಜಕೀಯ

  • ಕುಂದಾಪುರ ಕ್ಷೇತ್ರ: ಬಿಜೆಪಿ ಅಭ್ಯರ್ಥಿ ಕಿರಣ್ ಕುಮಾರ್ ಕೊಡ್ಗಿ ನಾಮಪತ್ರ ಸಲ್ಲಿಕೆ

    ಕುಂದಾಪುರ ಕ್ಷೇತ್ರ: ಬಿಜೆಪಿ ಅಭ್ಯರ್ಥಿ ಕಿರಣ್ ಕುಮಾರ್ ಕೊಡ್ಗಿ ನಾಮಪತ್ರ ಸಲ್ಲಿಕೆ

    ಕುಂದಾಪುರ ಮಿರರ್ ಸುದ್ದಿ….
    ಕುಂದಾಪುರ: ಕುಂದಾಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕಿರಣ್ ಕುಮಾರ್ ಕೊಡ್ಗಿ ಎ.೧೬ರಂದು ಕುಂದಾಪುರದ ಚುನಾವಣಾಧಿಕಾರಿಗಳ ಕಛೇರಿಯಲ್ಲಿ ಚುನಾವಣಾಧಿಕಾರಿ ರಶ್ಮಿ ಅವರಿಗೆ ನಾಮಪತ್ರ ಸಲ್ಲಿಸಿದರು.

    ಈ ಸಂದರ್ಭದಲ್ಲಿ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ, ಪುರಸಭಾ ಮಾಜಿ ಅಧ್ಯಕ್ಷ ಮೋಹನದಾಸ ಶೆಣೈ, ಸದಾನಂದ ಬಳ್ಕೂರು, ಸಂಪತ್ ಕುಮಾರ್ ಶೆಟ್ಟಿ, ಸತೀಶ ಪೂಜಾರಿ ವಕ್ವಾಡಿ, ಪ್ರಭಾರಿ ಶ್ಯಾಮಲ ಕುಂದರ್ ಮೊದಲಾದವರು ಉಪಸ್ಥಿತರಿದ್ದರು.

  • ಕುಂದಾಪುರ :ದೇಶದ ಸುಭದ್ರತೆಗೆ ಮೋದಿಯೇ ಪರಿಹಾರ – ಕೋಟ ಶ್ರೀನಿವಾಸ ಪೂಜಾರಿ

    ಕುಂದಾಪುರ :ದೇಶದ ಸುಭದ್ರತೆಗೆ ಮೋದಿಯೇ ಪರಿಹಾರ – ಕೋಟ ಶ್ರೀನಿವಾಸ ಪೂಜಾರಿ

    ಕುಂದಾಪುರ ಮಿರರ್ ಸುದ್ದಿ…

    ಕುಂದಾಪುರ: ದೇಶ ಸಮೃದ್ಧಿಯಾಗಲಿಕ್ಕೆ, ದೇಶ ಶಕ್ತಿ ಶಾಲಿಯಾಗಲಿಕ್ಕೆ, ದೇಶದ ಜನರು ಸ್ವಾಭಿಮಾನದಿಂದ ಬದುಕಲು ಪ್ರಧಾನಿ ನರೇಂದ್ರ ಮೋದಿ ಅವರು, ಇನ್ನಷ್ಟು ಕಾಲ ಈ ದೇಶದ ಪ್ರಧಾನಮಂತ್ರಿಯಾಗಿ ಮುಂದುವರೆಯಬೇಕಾದ ಅನೀವಾರ್ಯತೆ ಇದೆ ಎಂದು ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿದರು.

    ಇಲ್ಲಿಗೆ ಸಮೀಪದ ಹೆಮ್ಮಾಡಿಯ ಜಯಶ್ರೀ ಸಭಾಂಗಣದಲ್ಲಿ ಭಾನುವಾರ ನಡೆದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು.

    ಶಾಸಕ ಬಿ.ಎಂ.ಸುಕುಮಾರ ಶೆಟ್ಟಿ ಹಾಗೂ ಸಂಸದ ಬಿ.ವೈ.ರಾಘವೇಂದ್ರ ಅವರ ಕಾಲದಲ್ಲಿ ಮಾಡಿರುವ ಅಭಿವೃದ್ಧಿ ಕಾರ್ಯಗಳೇ ಚುನಾವಣೆಯ ದಿಕ್ಸೂಚಿಯಾಗಲಿದೆ. ಯಾವುದೇ ಖರ್ಚು ಮಾಡದೆ, ಅರ್ಜಿಯನ್ನೂ ನೀಡದೆ ರೈತರ ಖಾತೆಗೆ ಸರ್ಕಾರದಿಂದ ಹಣ ಬರುವ ಕಿಸಾನ್ ಸಮ್ಮಾನ್ ಯೋಜನೆಯನ್ನು ಜಾರಿಗೆ ತಂದಿರುವ ಶ್ರೇಯಸ್ಸು ಹಾಗೂ ಜನ ಸಾಮಾನ್ಯರಿಗೂ ಪಿಂಚಣೆ ಯೋಜನೆ ತಂದಿರುವುದು ನಮ್ಮ ಸರ್ಕಾರದ ಸಾಧನೆಯಾಗಿದೆ. ಜನಸಾಮಾನ್ಯರ ಬದುಕನ್ನು ಬದಲಾಯಿಸಲು ಬಿಜೆಪಿ ಕಟಿಬದ್ಧವಾಗಿರುವ ಬಿಜೆಪಿ ಸರ್ಕಾರಗಳು ಜನಪರ ಯೋಜನೆಗಳನ್ನು ಜಾರಿಗೊಳಿಸುವಾಗ ಯಾವುದೇ ಗ್ಯಾರಂಜಿ ಕಾರ್ಡ್ನ್ನೂ ನೀಡಿರಲಿಲ್ಲ. ಈ ಬಾರಿಯ ಚುನಾವಣೆ ಜಾತಿ-ವರ್ಗದ ಚುನಾವಣೆಯಲ್ಲ, ರಾಷ್ಟ್ರಕ್ಕಾಗಿ ನಡೆಯುವ ಚುನಾವಣೆ ಎಂದ ಅವರು, ಜಿಲ್ಲೆಯ ಐದು ಕ್ಷೇತ್ರಗಳಲ್ಲಿಯೂ ಬಿಜೆಪಿ ಅಭ್ಯರ್ಥಿಗಳು ಜಯಗಳಿಸುವ ವಿಶ್ವಾಸ ವ್ಯಕ್ತಪಡಿಸಿದರು.

    ಬೈಂದೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗುರುರಾಜ್ ಗಂಟಿಹೊಳೆ ಮಾತನಾಡಿ, ಈ ಚುನಾವಣೆ ಹಣವಂತರದ್ದೋ, ಜಾತಿವಂತರದ್ದೋ ಚುನಾವಣೆಯಲ್ಲ, ಇದು ಕಾರ್ಯಕರ್ತರ ಚುನಾವಣೆ. ಯಾವುದೇ ಕಾರಣದಿಂದಲೂ ಕಾರ್ಯಕರ್ತರೂ ವಿಶ್ವಾಸ ಕಳೆದುಕೊಳ್ಳಬಾರದು. ಮುಂದಿನ ಚುನಾವಣೆಗಳಲ್ಲಿಇನ್ನೊಬ್ಬ ಕಾರ್ಯಕರ್ತನಿಗೆ ಪಕ್ಷ ಅವಕಾಶ ನೀಡಿದರೂ ನಾನು ಅದನ್ನು ಮನ:ಪೂರ್ವಕವಾಗಿ ಸ್ವೀಕರಿಸುತ್ತೇನೆ. ಈ ರೀತಿಯ ವ್ಯವಸ್ಥೆ ಕೇವಲ ಬಿಜೆಪಿ ಮಾತ್ರ ಸಾಧ್ಯ. ನಾನು ಇನ್ನೂ ಬರೆಗಾಲಿನಲ್ಲಿಯೇ ತಿರುಗುತ್ತೇನೆ. ನೆಲದಲ್ಲಿಯೇ ಮಲಗುತ್ತೇನೆ ಇದು ನನ್ನ ಬದ್ಧತೆಯೂ ಕೂಡ. ಸಮುಷ್ಠಿ ಅಭಿಪ್ರಾಯಕ್ಕೆ ಗೌರವ ಕೊಡುವ ನನಗೆ, ವೇದಿಕೆಯ ಭಾಷಣಕ್ಕಿಂತ ಒಟ್ಟಾಗಿ ಕೂತು ಮಾತಾಡುವ ಬೈಠಕ್ನಲ್ಲಿ ವಿಶ್ವಾಸ ಇದೆ. ಕೊಟ್ಟ ಮಾತನ್ನು ಉಳಿಸಿಕೊಳ್ಳದೆ ಇದ್ದಾಗ ಪ್ರಶ್ನಿಸುವ ಮನೋಭಾವವನ್ನು ರೂಢಿಸಿಕೊಳ್ಳಬೇಕು. ಕಾರ್ಯಕರ್ತರು ತೋರಿಸುತ್ತಿರುವ ಪ್ರೀತಿ-ವಿಶ್ವಾಸಗಳು ಚುನಾವಣೆಯಲ್ಲಿ ಗೆಲ್ಲುವ ವಿಶ್ವಾಸವನ್ನು ಇಮ್ಮಡಿಗೊಳಿಸಿದೆ ಎಂದರು.

    ಬೈಂದೂರು ಬಿಜೆಪಿ ಮಂಡಲದ ಅಧ್ಯಕ್ಷರಾದ ದೀಪಕ್ಕುಮಾರ ಶೆಟ್ಟಿ, ಪ್ರಧಾನ ಕಾರ್ಯದರ್ಶಿನಿ ಪ್ರಿಯದರ್ಶಿನಿ ದೇವಾಡಿಗ, ಪಕ್ಷದ ಪ್ರಮುಖರಾದ ಮಾಲತಿ ನಾಯ್ಕ್ ಇದ್ದರು.

  • ಕುಂದಾಪುರ :ಹಾಲಾಡಿ ಅಭಯ ಪಡೆದ ಗುರುರಾಜ್ ಗಂಟಿಹೊಳೆ

    ಕುಂದಾಪುರ :ಹಾಲಾಡಿ ಅಭಯ ಪಡೆದ ಗುರುರಾಜ್ ಗಂಟಿಹೊಳೆ

    ಕುಂದಾಪುರ ಮಿರರ್ ಸುದ್ದಿ…

    ಕುಂದಾಪುರ: ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರನ್ನು ಬೈಂದೂರು ಬಿಜೆಪಿ ಅಭ್ಯರ್ಥಿ ಗುರುರಾಜ್ ಗಂಟಿಹೊಳೆ ಅವರು ಶನಿವಾರ ಬೆಳಗ್ಗೆ ಹಾಲಾಡಿಯವರ ನಿವಾಸದಲ್ಲಿ ಭೇಟಿಯಾಗಿ ಆಶೀರ್ವಾದ ಪಡೆದು, ಸಹಕಾರ ಕೋರಿದರು.

    ಈ ಸಂದರ್ಭದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರು, ಪಕ್ಷದ ಹಿರಿಯ ನಾಯಕರು, ಪ್ರಮುಖರು ನನಗೆ ಬೈಂದೂರು ಕ್ಷೇತ್ರದ ಜವಾಬ್ದಾರಿಯನ್ನು ವಹಿಸಿಕೊಳ್ಳುವಂತೆ ಮನವಿ ಮಾಡಿದ್ದಾರೆ. ಇದು ನನ್ನ ಕರ್ತವ್ಯವೂ ಹೌದು. ಯುವ ನಾಯಕ ಗುರುರಾಜ್ ಅವರಿಗೆ ನಿಮ್ಮೆಲ್ಲರ ಬೆಂಬಲ, ಸಹಕಾರ ಬೇಕಾಗಿದೆ. ನಾನು ಕೂಡ ಬೈಂದೂರು ಭಾಗದಲ್ಲಿ ಪ್ರಚಾರದಲ್ಲಿ ಭಾಗವಹಿಸುತ್ತೇನೆ ಎಂದರು.

    ಅಭ್ಯರ್ಥಿ ಗುರುರಾಜ್ ಗಂಟಿಹೊಳೆ ಮಾತನಾಡಿ, ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರು ನಮಗೆಲ್ಲ ಆದರ್ಶಪ್ರಾಯರು. ಅವರ ಆರ್ಶಿವಾದವನ್ನು ಪಡೆದಿದ್ದೇನೆ. ಅವರ ಬೆಂಬಲ, ಸಹಕಾರವಿಂದು ಸಿಕ್ಕಿದೆ. ಈಗ ನನಗೆ ಧೈರ್ಯ ಬಂದಿದೆ. ಅವರ ಸಾಮಾಜಿಕ ಕೈಂಕರ್ಯ ನಮಗೆಲ್ಲ ಮಾದರಿ ಎಂದರು. ಇದೇ ವೇಳೆ ಬೈಂದೂರು ಸುಕುಮಾರ ಶೆಟ್ಟಿ ಅವರೂ ಬೆಂಬಲ ನೀಡಿರುವುದಾಗ ಸ್ಪಷ್ಟಪಡಿಸಿದರು.

  • ಕೋಟೇಶ್ವರ :ನಾನು ದೊಡ್ಡ ರಾಜಕಾರಣಿಯಲ್ಲ. ನನಗೆ ವೇಷ ಹಾಕಲು ಬರುವುದಿಲ್ಲ – ಹಾಲಾಡಿ ಶ್ರೀನಿವಾಸ ಶೆಟ್ಟಿ

    ಕೋಟೇಶ್ವರ :ನಾನು ದೊಡ್ಡ ರಾಜಕಾರಣಿಯಲ್ಲ. ನನಗೆ ವೇಷ ಹಾಕಲು ಬರುವುದಿಲ್ಲ – ಹಾಲಾಡಿ ಶ್ರೀನಿವಾಸ ಶೆಟ್ಟಿ

    Video:

    ಕುಂದಾಪುರ ಮಿರರ್ ಸುದ್ದಿ…

    ಕುಂದಾಪುರ: ನಾನು ದೊಡ್ಡ ರಾಜಕಾರಣಿಯಲ್ಲ. ನನಗೆ ವೇಷ ಹಾಕಲು ಬರುವುದಿಲ್ಲ ಎಂದು ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಹೇಳಿದರು.

    ಅವರು ಶುಕ್ರವಾರ ಕೋಟೇಶ್ವರದ ಸರಸ್ವತಿ ಸಭಾಂಗಣದಲ್ಲಿ ಬಿಜೆಪಿ ಕಾರ್ಯಕರ್ತರ ಬೃಹತ್ ಸಭೆಯಲ್ಲಿ ಮಾತನಾಡಿದರು.

    ನನ್ನ ಇಚ್ಚಾಶಕ್ತಿ ಸ್ಪಷ್ಟವಾಗಿದೆ. ನಾನು ಒಮ್ಮೆ ತೀರ್ಮಾನಿಸಿದರೆ ಅದನ್ನೇ ಪಾಲಿಸುವವ. ಕಲಾವಿದನಂತೆ ರಾಜಕೀಯ ಮಾಡಿ ಗೊತ್ತಿಲ್ಲ. ನಾನು ವಿಧಾನಸಭೆಗೆ ಪ್ರವೇಶಪಡೆಯಲು ನನಗಿಂತ ನೂರು ಪಟ್ಟು ನನ್ನ ಕಾರ್ಯಕರ್ತರು ಶ್ರಮ ವಹಿಸಿದ್ದಾರೆ. ನಿಮ್ಮ ಋಣ ತೀರಿಸಲು ಇನ್ನೊಂದು ಜನ್ಮ ಪಡೆಯಬೇಕೇನೋ. ನೀವು ನನ್ನ ಮೇಲಿಟ್ಟ ನಂಬಿಕೆಗಳಿಗೆ ನಾನು ಋಣಿಯಾಗಿದ್ದೇನೆ ಎಂದರು.

    ಕಾಂಗ್ರೆಸ್ ಅಭ್ಯರ್ಥಿ ನನಗೆ ವಯಸ್ಸಾಗಿದೆ ಎಂದು ಸಭೆಯೊಂದರಲ್ಲಿ ಹೇಳಿದ್ದನ್ನು ಕೇಳಿದೆ. ಚುನಾವಣೆ ಎನ್ನುವುದು ಎರಡು ತಂಡಗಳ ನಡುವಿನ ಧರ್ಮ ಯುದ್ಧವಾಗಬೇಕೇ ಹೊರತು ಹೊಲಸು ರಾಜಕೀಯವಾಗಬಾರದು. ನನ್ನ ವರಸ್ಸಿನ ಜಾತಕ ಅವರ ಬಳಿ ಇರಬಹುದು ಆದರೆ ನನಗೆ ಯಾವುದರಲ್ಲಿ ವಯಸ್ಸಾಗಿದೆ ಎನ್ನುವುದನ್ನು ಅವರು ಸ್ಪಷ್ಟಪಡಿಸಬೇಕು. ನನಗೆ ನಡೆಯಲಾಗುವುದಿಲ್ಲವೇ? ನನ್ನ ಮೆದುಳು ನಿಷ್ಕ್ರಿಯವಾಗಿದೆಯೇ? ಅಥವಾ ಹಾಸಿಗೆ ಹಿಡಿದ್ದೇನೆಯೇ? ಗೆಲುವಿಗಾಗಿ ಕೆಳಮಟ್ಟದ ಮಾತುಗಳನ್ನಾಡುವುದು ಶೋಭೆ ತರುವುದಿಲ್ಲ ಎಂದರು. ಇನ್ನೂ ಮುಂದಕ್ಕೆ ಹೋಗಿರುವ ಕಾಂಗ್ರೆಸ್ ಅಭ್ಯರ್ಥಿ ಚುನಾವಣೆಗೆ ನಿಲ್ಲಲು ಶ್ರೀನಿವಾಸ ಶೆಟ್ಟಿಯೇ ಹೇಳಿದ್ದು ಎನ್ನುವ ಮಾತುಗಳನ್ನು ಮತದಾರರ ಬಳಿ ಹೇಳುತ್ತಿದ್ದಾರೆ. ಇದು ಕಾಂಗ್ರೆಸ್ಸಿಗೆ ನಾಚಿಕೆಗೇಡಿನ ಪರಿಸ್ಥಿತಿ. ನಾನು ನಂಬಿದ ಕಾರ್ಯಕರ್ತರಿಗೆ ಮೋಸ ಮಾಡುವ ಪ್ರಶ್ನೆಯೇ ಇಲ್ಲ ಎಂದ ಅವರು, ನನ್ನ ತಲೆಗೆ ಗುಂಡಿಟ್ಟರೂ ನನ್ನ ಬದ್ದತೆ ಬಿಜೆಪಿಯೇ ಎಂದು ಕಾಂಗ್ರೆಸ್ ಅಭ್ಯರ್ಥಿಗೆ ಪರೋಕ್ಷವಾಗಿ ಟಾಂಗ್ ನೀಡಿದರು.

    ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಸಾಮಾಜಿಕ ನ್ಯಾಯವನ್ನು ಒಪ್ಪಿಕೊಂಡು ಕೆಲಸ ಮಾಡಿದ್ದೇನೆ. ಜಾತ್ಯಾತೀತವಾಗಿ ನನ್ನನ್ನು ಮತದಾರರು ಆಯ್ಕೆಮಾಡಿದ್ದಾರೆ ಎಂದ ಅವರು ನಾವು ನಿಮಗೆ ಗ್ಯಾರೆಂಟಿ ಕಾರ್ಡ್ ನೀಡುವುದಿಲ್ಲ. ನಿಮಗೆ ನಾನೇ ಗ್ಯಾರೆಂಟಿ ಎಂದರು.

    ಸಚಿವ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ, ರಾಹುಲ್ ಗಾಂಧೀ ಭಾರತ್ ಜೋಡೋ ಯಾತ್ರೆ ಮಾಡಿದರು. ನೀವು ಕಾಂಗ್ರೆಸ್ ನವರಿಗೆ ಕೇಳಿ ಭಾರತವನ್ನು ಒಡೆದದ್ದು ಯಾರು? ಜಮ್ಮು ಕಾಶ್ಮೀರದಲ್ಲಿ ರಾಹುಲ್ ಗೆ ಉಗ್ರಗಾಮಿಗಳು ಏನೂ ಮಾಡಿಲ್ಲ ಎಂದು ರಾಹುಲ್ ಹೇಳಿಕೆ ಪ್ರಸ್ತಾಪಿಸಿ, ಮನುಷ್ಯರಲ್ಲಿ ಸಂಬಂಧಿಕರಿಗೆ ಸಂಬಂಧಿಕರು ಏನೂ ಮಾಡುವುದಿಲ್ಲ ಎಂದು ಚಾಟಿ ಬೀಸಿದರು.

    ಬಿಜೆಪಿ ಅಭ್ಯರ್ಥಿ ಕಿರಣ್ ಕುಮಾರ್ ಕೊಡ್ಗಿ ಮಾತನಾಡಿ, ಕಳೆದ‌ ನಲ್ವತ್ತು ವರ್ಷಗಳಿಂದ ನಿಮ್ಮ ಮಧ್ಯೆ ಬೆಳಿದಿದ್ಧೇನೆ. ಮುಂದೆಯೂ ನಿಮ್ಮ ಜೊತೆ ಇರುತ್ತೇನೆ ಎಂದರು.

    ಬಿಜೆಪಿ ಜಿಲ್ಲಾ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಕಾರ್ಯಕರ್ತರನ್ನು ಉದ್ಧೇಶಿಸಿ ಮಾತನಾಡಿದರು. ಇದೇ ಸಂದರ್ಭ 17 ಮಂದಿಗೆ ಹಾಲಾಡಿ ಶ್ರೀನಿವಾಸ್ ಶೆಟ್ಟಿ ಪಕ್ಷದ ಬಾವುಟ ನೀಡಿ ಪಕ್ಷಕ್ಕೆ ಸೇರ್ಪಡೆಗೊಳಿಸಿದರು.

    ಕುಂದಾಪುರ ಮಂಡಲದ ಪ್ರಧಾನ ಕಾರ್ಯದರ್ಶಿ ಸುರೇಶ್ ಬೀಜಾಡಿ ಸ್ವಾಗತಿಸಿ, ಸತೀಶ ಪೂಜಾರಿ ವಕ್ವಾಡಿ ಕಾರ್ಯಕ್ರಮ ನಿರೂಪಿಸಿದರು. ಮಂಡಲದ ಅಧ್ಯಕ್ಷ ಶಂಕರ ಅಂಕದಕಟ್ಟೆ ಪ್ರಾಸ್ತಾವಿಕ ಮಾತನಾಡಿದರು.

  • ನನ್ನನ್ನು ಬಿಜೆಪಿ ನಡೆಸಿಕೊಂಡ ರೀತಿ ಬೇಸರ ತರಿಸಿದೆ : ಶಾಸಕ ಬಿ.ಎಂ.ಸುಕುಮಾರ ಶೆಟ್ಟಿ

    ನನ್ನನ್ನು ಬಿಜೆಪಿ ನಡೆಸಿಕೊಂಡ ರೀತಿ ಬೇಸರ ತರಿಸಿದೆ : ಶಾಸಕ ಬಿ.ಎಂ.ಸುಕುಮಾರ ಶೆಟ್ಟಿ

    ಕುಂದಾಪುರ ಮಿರರ್ ಸುದ್ದಿ…

    ಕುಂದಾಪುರ: ನಾನು ಬಿಜೆಪಿ ಬಿಡುವ ಪ್ರಶ್ನೆಯೇ ಇಲ್ಲ. ಆದರೆ ಪಕ್ಷದ ನಾಯಕರು ನನ್ನನ್ನು ನಡೆಸಿಕೊಂಡ ರೀತಿ ಸರಿಯಲ್ಲ ಎನ್ನುವ ಬೇಸರವಿದೆ ಎಂದು ಬೈಂದೂರು ಶಾಸಕ ಬಿ.ಎಂ.ಸುಕುಮಾರ ಶೆಟ್ಟಿ ಹೇಳಿದ್ದಾರೆ.

    ಪತ್ರಿಕಾಗೋಷ್ಟಿ ಯಲ್ಲಿ ಅವರು ಮಾತನಾಡುತ್ತಾ ತನ್ನ ಅಭಿಪ್ರಾಯ ಹೇಳಿದರು. ನನಗೆ ಟಿಕೆಟ್ ನೀಡದೆ ಇರುವುದಕ್ಕೆ ಬೇಸರವಿಲ್ಲ. ನನಗೆ ನನ್ನ ಕೆಲಸದ ಬಗ್ಗೆ ತೃಪ್ತಿಯಿದೆ. ಇನ್ನೆರಡು ದಿನಗಳಲ್ಲಿ ಕಾರ್ಯಕರ್ತರ ಜೊತೆ ಚರ್ಚಿಸಿ ನಿಲುವು ಪ್ರಕಟಿಸುತ್ತೇನೆ ಎಂದರು.

    5 ವರ್ಷ ಜನಸೇವೆಗೆ ಅವಕಾಶ ಸಿಕ್ಕಿರುವುದು ನನ್ನ ಭಾಗ್ಯ. 2013 ರಲ್ಲಿ 15 ದಿನಗಳ ಹಿಂದೆಯಷ್ಟೇ ಟಿಕೆಟ್ ನೀಡಿದ್ದರೂ ಹೋರಾಡಿ ಸೋತಿದ್ದೆ. ಬಳಿಕ 5 ವರ್ಷ ಕ್ಷೇತ್ರದಾದ್ಯಂತ ಓಡಾಟ ಮಾಡಿ, ಪಕ್ಷ ಸಂಘಟಿಸುವ ಮೂಲಕ ಲೋಕಸಭೆ, ಜಿ.ಪಂ., ತಾ.ಪಂ., ಗ್ರಾ.ಪಂ. ಚುನಾವಣೆಗಳಲ್ಲಿ ಪಕ್ಷದ ಹೆಚ್ಚಿನ ಬೆಂಬಲಿತರು ಗೆಲ್ಲುವಲ್ಲಿ ಶ್ರಮಿಸಿದ್ದೇನೆ ಎಂದು ನೆನಪಿಸಿಕೊಂಡರು.

    ಎರಡು ಬಾರಿ ಬೃಹತ್ ಸಮಾವೇಶ ಮಾಡಿಸುವ ಮೂಲಕ ನನ್ನನ್ನು ಬಳಸಿಕೊಂಡರು. ಆದರೆ ನನಗೆ ಟಿಕೆಟ್ ಇಲ್ಲ ಎನ್ನುವುದನ್ನು ಮೊದಲೇ ತಿಳಿಸಿದ್ದರೆ ಪಕ್ಷದ ನಾಯಕರ ಮೇಲೆ ಗೌರವ ಹೆಚ್ಚುತ್ತಿತ್ತು ಎಂದ ಅವರು, ಕುಮಾರ ಸ್ವಾಮಿ ಕರೆ ಮಾಡಿ ಬನ್ನಿ ಎಂದರು. ಆದರೆ ನಾನು ಪಕ್ಷದ ನಿಷ್ಟಾವಂತ ಕಾರ್ಯಕರ್ತ ಎಂದ ಅವರು, ಬಿಎಸ್‌ವೈ ಹಾಗೂ ಸಿಎಂ ಬೊಮ್ಮಾಯಿ ಕರೆ ಮಾಡಿ, ನಾವು ನಿಮ್ಮೊಂದಿಗಿದ್ದೇವೆ. ದುಡುಕಿನ ನಿರ್ಧಾರ ಕೈಗೊಳ್ಳಬೇಡಿ ಎಂದು ತಿಳಿಸಿದ್ದಾರೆ. ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸುವುದಿಲ್ಲ ವಿರೋಧವನ್ನೂ ಮಾಡುವುದಿಲ್ಲ. ಶುಭಹಾರೈಸುವೆ ಎಂದಿದ್ದಾರೆ.

    ಬೈಂದೂರು ಮಂಡಲದ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ ಮಾತನಾಡಿ, ಹಾಲಿ ಶಾಸಕ ಸುಕುಮಾರ್ ಶೆಟ್ಟರಿಗೆ ಟಿಕೆಟ್ ಕೊಡಬೇಕು ಎನ್ನುವ ಅಭಿಪ್ರಾಯ ಕ್ಷೇತ್ರದಾದ್ಯಂತ ಇತ್ತು. ಗೆಲ್ಲುವ ವಿಶ್ವಾಸವೂ ಇತ್ತು. ಮತ್ತೊಂದು ಬಾರಿಗೆ ಶಾಸಕರಾಗುವ ಭಾವನೆ ಕಾರ್ಯಕರ್ತರದ್ದಾಗಿತ್ತು. ಪಕ್ಷ ಯಾರನ್ನು ಅಭ್ಯರ್ಥಿಯಾಗಿ ಘೋಷಿಸಿದೆಯೋ, ಅವರನ್ನು ಗೆಲ್ಲಿಸುವ ಪ್ರಯತ್ನ ಮಾಡೋಣ. ನಾವೆಲ್ಲರೂ ಸುಕುಮಾರ್ ಶೆಟ್ಟರೊಂದಿಗೆ ಇದ್ದೇವೆ ಎಂದರು.
    ಪಕ್ಷದ ಪ್ರಮುಖರಾದ ಪ್ರಿಯದರ್ಶಿನಿ ದೇವಾಡಿಗ, ಪ್ರಕಾಶ್ ಪೂಜಾರಿ ಜೆಡ್ಡು, ಹರ್ಕೂರು ಮಂಜಯ್ಯ ಶೆಟ್ಟಿ, ಆನಂದ ಖಾರ್ವಿ ಉಪ್ಪುಂದ, ಪತ್ರಿಕಾಗೋಷ್ಠಿಯಲ್ಲಿದ್ದರು.

  • ಕುಂದಾಪುರ :ಕಾಂಗ್ರೆಸ್ ಜನರ ಭಾವನೆಗಳ ಜೊತೆ ಆಟವಾಡುತ್ತಿಲ್ಲ – ಸುದೀರ್ ಕುಮಾರ್ ಮರೋಳ್ಳಿ

    ಕುಂದಾಪುರ :ಕಾಂಗ್ರೆಸ್ ಜನರ ಭಾವನೆಗಳ ಜೊತೆ ಆಟವಾಡುತ್ತಿಲ್ಲ – ಸುದೀರ್ ಕುಮಾರ್ ಮರೋಳ್ಳಿ

    ಕುಂದಾಪುರ ಮಿರರ್ ಸುದ್ದಿ…

    ಕುಂದಾಪುರ :ಕಾಂಗ್ರೆಸ್ ಜನರ ಬದುಕನ್ನು ರೂಪಿಸುವ ಕೆಲಸ ಮಾಡುತ್ತಿದೆ. ಬದುಕನ್ನು ಕಟ್ಟಿಕೊಡುವ ಕೆಲಸ ಮಾಡುತ್ತದೆಯೇ ಹೊರತು ಜನರ ಭಾವನೆಗಳ ಜೊತೆ ಆಟವಾಡುತ್ತಿಲ್ಲ. ಬಿಜೆಪಿಯ ಸಂಸದೆ ಇವತ್ತು ಚುನಾಯಿತ ಕ್ಷೇತ್ರವನ್ನೇ ಮರೆತು ಬಿಟ್ಟಿದ್ದಾರೆ. ನಿರುದ್ಯೋಗ, ಬೆಲೆ ಏರಿಕೆ, ರೈತರ ಸಮಸ್ಯೆಗಳಿಗೆ ಸರ್ಕಾರದ ಬಳಿ ಉತ್ತರವಿಲ್ಲ ಎಂದು ನ್ಯಾಯವಾದಿ, ಚಿಂತಕ ಸುದೀರ್ ಕುಮಾರ್ ಮುರೋಳಿ ಹೇಳಿದರು.

    ಕುಂದಾಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮೊಳಹಳ್ಳಿ ದಿನೇಶ ಹೆಗ್ಡೆ ಅವರ ನಾಮಪತ್ರ ಸಲ್ಲಿಕೆಗೆ ಮೊದಲು ಕುಂದಾಪುರದಲ್ಲಿ ನಡೆದ ಬಹಿರಂಗ ಸಭೆಯಲ್ಲಿ ಅವರು ಮಾತನಾಡಿದರು.

    ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ ಮಾತನಾಡಿ ಕುಂದಾಪುರದಲ್ಲಿ ಮತ್ತೆ ಕಾಂಗ್ರೆಸ್ ಗೆಲುವು ಸಾಧಿಸಬೇಕು. ಆ ಮೂಲಕ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಬೇಕು. ಕಾರ್ಯಕರ್ತರು ಮತದಾರರ ಮನವೊಲಿಸುವ ಕೆಲಸ ಮಾಡಬೇಕು ಎಂದು ಹೇಳಿದರು.

    ಆಡಳಿತರೂಢ ಬಿಜೆಪಿ ಚುನಾವಣಾ ಸಂದರ್ಭದಲ್ಲಿ ವಿಷಯಾಂತರಕ್ಕೆ ಮುಂದಾಗಿದೆ. ಆಧಾರ್-ಫಾನ್ ಕಾರ್ಡ್ ಲಿಂಕ್ ಬಗ್ಗೆ ಮಾಹಿತಿ ನೀಡದೆ ದಂಡದ ಹೆಸರಲ್ಲಿ ಲೂಟಿ ಮಾಡಲು ಮುಂದಾಗಿದ್ದಾರೆ. ಹಿಂದಿನ ಚುನಾವಣೆಗಳಲ್ಲಿ ನೀಡಿದ ಭರವಸೆಗಳೆಲ್ಲ ಭರವಸೆಯಾಗಿಯೇ ಇದೆ. ಜನರಿಗೆ ಬಿಜೆಪಿ ಕೇವಲ ಭರವಸೆಯಾಗಿಯೇ ಉಳಿದಿದೆ ಎಂದರು.

    ಕಾಂಗ್ರೆಸ್ ವಕ್ತಾರ ವಿಕಾಸ್ ಹೆಗ್ಡೆ ಮಾತನಾಡಿ ರಾಜ್ಯದಲ್ಲಿ ನೂರಕ್ಕೆ ನೂರು ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತದೆ. ಕುಂದಾಪುರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ದಿನೇಶ ಹೆಗ್ಡೆ ಅವರಿಗೆ ರಾಜಕಾರಣ ಹೊಸತಲ್ಲ, ಕ್ಷೇತ್ರದ ಸಮಗ್ರ ಪರಿಚಯ ಹೊಂದಿದ್ದಾರೆ. ಅವರು ಗೆಲುವು ಸಾಧಿಸಲಿದ್ದಾರೆ ಎಂದರು.

    ಅಭ್ಯರ್ಥಿ ಮೊಳಹಳ್ಳಿ ದಿನೇಶ ಹೆಗ್ಡೆ ಮಾತನಾಡಿದರು.

    ಕಾರ್ಯಕ್ರಮವನ್ನು ಮಾಜಿ ಸಭಾಪತಿ ಕೆ.ಪ್ರತಾಪಚಂದ್ರ ಶೆಟ್ಟಿ ಉದ್ಘಾಟಿಸಿದರು. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ ಕುಮಾರ್ ಕೊಡವೂರು, ಕ್ಷೇತ್ರದ ಮಾಜಿ ಅಧ್ಯಕ್ಷ ಮಲ್ಯಾಡಿ ಶಿವರಾಮ ಶೆಟ್ಟಿ, ಅಶೋಕ್ ಪೂಜಾರಿ ಬೀಜಾಡಿ, ಹಿರಿಯಣ್ಣ ಚಾತ್ರಬೆಟ್ಟು, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ರಾಜು ಪೂಜಾರಿ, ಬೈಂದೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮದನ್ ಕುಮಾರ್, ವಂಡ್ಸೆ ಬ್ಲಾಕ್ ಅಧ್ಯಕ್ಷ ಪ್ರದೀಪ ಶೆಟ್ಟಿ ಗುಡಿಬೆಟ್ಟು, ಕೃಷ್ಣದೇವ ಕಾರಂತ, ವಂಡಬಳ್ಳಿ ಜಯರಾಮ ಶೆಟ್ಟಿ, ಪಂಚಾಯತ್ ರಾಜ್ ಒಕ್ಕೂಟದ ಅಧ್ಯಕ್ಷ ಉದಯಕುಮಾರ್ ಶೆಟ್ಟಿ ವಂಡ್ಸೆ, ಮಹಿಳಾ ಕಾಂಗ್ರೆಸ್‍ನ ದೇವಕಿ ಸಣ್ಣಯ್ಯ, ರೇಖಾ ಸುವರ್ಣ, ಪ್ರಕಾಶ್ಚಂದ್ರ ಶೆಟ್ಟಿ, ದೇವಾನಂದ ಶೆಟ್ಟಿ, ಸದಾನಂದ ಶೆಟ್ಟಿ, ದಿನೇಶ ಪುತ್ರನ್, ಹರೀಶ ಕಿಣಿ, ಬೆಳ್ವೆ ಸತೀಶ ಕಿಣಿ ಮೊದಲಾದವರು ಉಪಸ್ಥಿತರಿದ್ದರು.
    ಕುಂದಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಾನ್ಮಕ್ಕಿ ಹರಿಪ್ರಸಾದ್ ಶೆಟ್ಟಿ ಸ್ವಾಗತಿಸಿ, ಕೋಟ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶಂಕರ್ ಕುಂದರ್ ವಂದಿಸಿದರು. ವಿನೋದ್ ಕ್ರಾಸ್ಟೋ ಕಾರ್ಯಕ್ರಮ ನಿರ್ವಹಿಸಿದರು.

  • ಕುಂದಾಪುರ ಕ್ಷೇತ್ರ: ಕಾಂಗ್ರೆಸ್ ಅಭ್ಯರ್ಥಿ ದಿನೇಶ ಹೆಗ್ಡೆ ನಾಮಪತ್ರ ಸಲ್ಲಿಕೆ

    ಕುಂದಾಪುರ ಕ್ಷೇತ್ರ: ಕಾಂಗ್ರೆಸ್ ಅಭ್ಯರ್ಥಿ ದಿನೇಶ ಹೆಗ್ಡೆ ನಾಮಪತ್ರ ಸಲ್ಲಿಕೆ

    ಕುಂದಾಪುರ ಮಿರರ್ ಸುದ್ದಿ…


    ಕುಂದಾಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮೊಳಹಳ್ಳಿ ದಿನೇಶ ಹೆಗ್ಡೆ ಎ.13ರಂದು ಕುಂದಾಪುರದ ಚುನಾವಣಾಧಿಕಾರಿಗಳ ಕಛೇರಿಯಲ್ಲಿ ಚುನಾವಣಾಧಿಕಾರಿ ಅವರಿಗೆ ನಾಮಪತ್ರ ಸಲ್ಲಿಸಿದರು.

    ಈ ಸಂದರ್ಭದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ದಿನೇಶ ಹೆಗ್ಡೆ, ಹಾಲಾಡಿ ಶ್ರೀನವಾಸ ಶೆಟ್ಟರು ಸ್ಪರ್ಧೆ ಮಾಡದೇ ಇರುವುದರಂದ ನಮಗೆ ಸುಲಭವಾಗಿದೆ. ಕ್ಷೇತ್ರದಲ್ಲಿ ಉತ್ತಮ ವಾತಾವರಣವಿದೆ. ಪ್ರತಾಪಚಂದ್ರ ಶೆಟ್ಟರ ಮಾರ್ಗದರ್ಶನದಲ್ಲಿ ಚುನಾವಣೆ ಎದುರಿಸಲಿದ್ದೇವೆ ಎಂದರು.

    ಈ ಸಂದರ್ಭದಲ್ಲಿ ಕುಂದಾಪುರ ಬ್ಲಾಕ್ ಅಧ್ಯಕ್ಷ ಹರಿಪ್ರಸಾದ್ ಶೆಟ್ಟಿ ಕಾನ್ಮಕ್ಕಿ, ಕೋಟ ಬ್ಲಾಕ್ ಅಧ್ಯಕ್ಷ ಶಂಕರ್ ಕುಂದರ್ ಮೊದಲಾದವರು ಉಪಸ್ಥಿತರಿದ್ದರು.

  • ಕುಂದಾಪುರ ಕ್ಷೇತ್ರ: ಬಿಜೆಪಿ ಅಭ್ಯರ್ಥಿ ಕಿರಣ್ ಕುಮಾರ್ ಕೊಡ್ಗಿ ನಾಮಪತ್ರ ಸಲ್ಲಿಕೆ

    ಕುಂದಾಪುರ ಕ್ಷೇತ್ರ: ಬಿಜೆಪಿ ಅಭ್ಯರ್ಥಿ ಕಿರಣ್ ಕುಮಾರ್ ಕೊಡ್ಗಿ ನಾಮಪತ್ರ ಸಲ್ಲಿಕೆ

    ಕುಂದಾಪುರ ಮಿರರ್ ಸುದ್ದಿ….
    ಕುಂದಾಪುರ : ಕುಂದಾಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕಿರಣ್ ಕುಮಾರ್ ಕೊಡ್ಗಿ ಎ.13ರಂದು ಕುಂದಾಪುರದ ಚುನಾವಣಾಧಿಕಾರಿಗಳ ಕಛೇರಿಯಲ್ಲಿ ಚುನಾವಣಾಧಿಕಾರಿ ರಶ್ಮಿ ಅವರಿಗೆ ನಾಮಪತ್ರ ಸಲ್ಲಿಸಿದರು.


    ಈ ಸಂದರ್ಭದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಕಿರಣ್ ಕುಮಾರ್ ಕೊಡ್ಗಿ, ಕ್ಷೇತ್ರ ಬಿಜೆಪಿಗೆ ಪೂರಕವಾದ ವಾತಾವರಣವಿದೆ. ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟರ ಪ್ರಭಾವೂ ಕ್ಷೇತ್ರದಲ್ಲಿದೆ. ಅವರು ಸ್ವ ಇಚ್ಛೆಯಿಂದ ಸ್ಪರ್ಧೆ ಮಾಡಲು ನಿರಾಕರಿಸಿದ್ದರು. ಹಾಗಾಗಿ ಪಕ್ಷ ನನಗೆ ಟಿಕೆಟು ನೀಡಿದೆ. ಹಿಂದಿನ ಚುನಾವಣೆಗಳಲ್ಲಿ ಸಕ್ರಿಯವಾಗಿ ಕೆಲಸ ಮಾಡಿದ್ದೇನೆ. ಕ್ಷೇತ್ರದ ಸಂಪೂರ್ಣ ಅರಿವಿದೆ. ಕ್ಷೇತ್ರದ ಮತದಾರರನ್ನು ನನ್ನನ್ನು ಬೆಂಬಲಿಸಲಿದ್ದಾರೆ ಎಂದರು.
    ಈ ಸಂದರ್ಭದಲ್ಲಿ ಕುಂದಾಪುರ ಮಂಡಲದ ಅಧ್ಯಕ್ಷ ಶಂಕರ ಅಂಕದಕಟ್ಟೆ, ಮಾಜಿ ಅಧ್ಯಕ್ಷ ಸುರೇಶ ಶೆಟ್ಟಿ ಕಾಡೂರು ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.
    ತಹಶೀಲ್ದಾರ್ ಶೋಭಾಲಕ್ಷ್ಮೀ ಹಾಜರಿದ್ದರು.

  • ಬೈಂದೂರು ಕ್ಷೇತ್ರ ಫೈನಲ್ ಮಾಡಿದ ಬಿಜೆಪಿ: ಗುರುರಾಜ್ ಗಂಟಿಹೊಳೆ ಅಭ್ಯರ್ಥಿ

    ಬೈಂದೂರು ಕ್ಷೇತ್ರ ಫೈನಲ್ ಮಾಡಿದ ಬಿಜೆಪಿ: ಗುರುರಾಜ್ ಗಂಟಿಹೊಳೆ ಅಭ್ಯರ್ಥಿ

    ಕುಂದಾಪುರ ಮಿರರ್ ಸುದ್ದಿ…

    ಕುಂದಾಪುರ: ಕುತೂಹಲಕ್ಕೆ ಕಾರಣವಾಗಿದ್ದ ಬಿಜೆಪಿ ಹೈಕಮಾಂಡ್ ಬುಧವಾರ ತಡರಾತ್ರಿ 23 ವಿಧಾನಸಭಾ ಕ್ಷೇತ್ರಗಳ ಅಭ್ಯರ್ಥಿ ಘೋಷಣೆ ಮಾಡಿದೆ. ಎರಡನೇ ಪಟ್ಟಿಯಲ್ಲಿ ಬೈಂದೂರು ಕ್ಷೇತ್ರದ ಅಭ್ಯರ್ಥಿ ಘೋಷಣೆಯಾಗಿದ್ದು, ಆರೆಸ್ಸೆಸ್ ತೆಕ್ಕೆಗೆ ಬಂದಿದೆ.

    ಬೈಂದೂರು ತಾಲೂಕಿನ ಬಿಜೂರಿನ ಗಂಟಿಹೊಳೆಯ ಗುರುರಾಜ್ ಶೆಟ್ಟಿ ಗಂಟಿಹೊಳೆಗೆ ಬೈಂದೂರು ಬಿಜೆಪಿಯ ಟಿಕೆಟ್ ಘೋಷಣೆಯಾಗುವ ಮೂಲಕ ಅಧಿಕೃತ ಅಭ್ಯರ್ಥಿ ಎನ್ನಿಸಿಕೊಂಡಿದ್ದಾರೆ.

    ಕೆಳ ಮಧ್ಯಮ ವರ್ಗದ ಕುಟುಂಬದಲ್ಲಿ ಜನಿಸಿದ ಗುರುರಾಜ್ ಗಂಟಿಹೊಳೆ ಆರೆಸ್ಸೆಸ್ ಸ್ವಯಂಸೇವಕರಾಗಿದ್ದಾರೆ. ಹಲವಾರು ವರ್ಷಗಳ ಕಾಲ ತನ್ನ ಕುಟುಂಬವನ್ನೇ ತೊರೆದು ಸಂಘಕ್ಕಾಗಿ ಸೇವೆ ಸಲ್ಲಿಸಿದ ಅವರು ಸುಳ್ಯ, ಪುತ್ತೂರು ಭಾಗಗಳಲ್ಲಿ ಪ್ರಚಾರಕರಾಗಿದ್ದವರು. ಪ್ರಸ್ತುತ ಶಿಕ್ಷಣ ಸಂಸ್ಥೆಯೊಂದರ ವಿಶ್ವಸ್ಥರಾಗಿರುವ ಗುರುರಾಜ್ ಸಾಲ ಮಾಡಿ ಹಲವಾರು ಮಕ್ಕಳಿಗೆ ಉಚಿತವಾಗಿ ವಿದ್ಯಾಭ್ಯಾಸ ನೀಡುತ್ತಿದ್ದಾರೆ.

    ಒಟ್ಟಾರೆಯಾಗಿ ಕಳೆದ ಹಲವಾರು ದಿನಗಳಿಂದ ಕುತೂಹಲಕ್ಕೆ ಕಾರಣವಾಗಿದ್ದ ಬೈಂದೂರು ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಗಳ ಆಯ್ಕೆಗೆ ತೆರೆಬಿದ್ದಂತಾಗಿದೆ. ಇನ್ನೇನಿದ್ದರೂ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಚುನಾವಣಾ ಹಣಾಹಣಿಯಷ್ಟೇ ಬಾಕಿಯಿದೆ.

  • ಉಡುಪಿ: ಯಶ್ ಪಾಲ್, ಗುರ್ಮೆ, ಕಿರಣ್ ಕುಮಾರ್ ಗೆ ಟಿಕೆಟ್-ಕಾರ್ಕಳದಲ್ಲಿ ಹಾಲಿ ಸಚಿವರ ಸ್ಪರ್ಧೆ

    ಉಡುಪಿ: ಯಶ್ ಪಾಲ್, ಗುರ್ಮೆ, ಕಿರಣ್ ಕುಮಾರ್ ಗೆ ಟಿಕೆಟ್-ಕಾರ್ಕಳದಲ್ಲಿ ಹಾಲಿ ಸಚಿವರ ಸ್ಪರ್ಧೆ

    ಕುಂದಾಪುರ ಮಿರರ್ ಸುದ್ದಿ…
    ಉಡುಪಿ :ವಿಧಾನಸಭಾ ಕ್ಷೇತ್ರಕ್ಕೆ ಯಶ್ ಪಾಲ್ ಸುವರ್ಣ ಅವರನ್ನು ಅಭ್ಯರ್ಥಿಯಾಗಿ ಘೋಷಿಸಲಾಗಿದೆ. ಮತ್ತೊಂದೆಡೆ ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಕಳೆದ ಬಾರಿ ಗೆದ್ದಿದ್ದ ಶಾಸಕ ಲಾಲಾಜಿ ಮೆಂಡನ್ ಅವರನ್ನು ಬದಲಾಯಿಸಲಾಗಿದೆ. ಅವರ ಬದಲಾಗಿ, ಗುರ್ಮೆ ಸುರೇಶ್ ಶೆಟ್ಟಿಯವರಿಗೆ ಬಿಜೆಪಿ ಟಿಕೆಟ್ ನೀಡಿದೆ. ಮತ್ತೊಂದೆಡೆ ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ್ ಶೆಟ್ಟಿ ಈಗಾಗಲೇ ಚುನಾವಣಾ ಕಣಕ್ಕೆ ರಾಜೀನಾಮೆ ನೀಡಿರುವ ಹಿನ್ನೆಲೆಯಲ್ಲಿ ಆ ಕ್ಷೇತ್ರಕ್ಕೆ ಕಿರಣ್ ಕುಮಾರ್ ಕೋಡ್ಗಿ ಅವರನ್ನು ಕಣಕ್ಕಿಳಿಸಲಾಗಿದೆ.

    ಇನ್ನು ಕಾರ್ಕಳ ಕ್ಷೇತ್ರದಿಂದ ಹಾಲಿ ಶಾಸಕ ಹಾಗೂ ಸಚಿವ ಸುನಿಲ್ ಕುಮಾರ್ ಅವರನ್ನೇ ಮುಂದುವರೆಸಲಾಗಿದೆ. ಉಡುಪಿ ಜಿಲ್ಲೆಯ ಕಡೇಯ ವಿಧಾನಸಭಾ ಕ್ಷೇತ್ರವೆಂದೇ ಗುರುತಿಸಿಕೊಂಡಿರುವ ಬೈಂದೂರು ಕ್ಷೇತ್ರಕ್ಕೆ ಮಾತ್ರ ಅಭ್ಯರ್ಥಿಯ ಘೋಷಣೆಯನ್ನು ಬಿಜೆಪಿ ಮಾಡಿಲ್ಲ.