Category: ರಾಜಕೀಯ

  • ಬೈಂದೂರು ಬಿಜೆಪಿಯಿಂದ ವಿಜಯ ಸಂಕಲ್ಪ ಅಭಿಯಾನ

    ಬೈಂದೂರು ಬಿಜೆಪಿಯಿಂದ ವಿಜಯ ಸಂಕಲ್ಪ ಅಭಿಯಾನ

    ಕುಂದಾಪುರ ಮಿರರ್ ಸುದ್ದಿ…

    ಕುಂದಾಪುರ: ಭಾರತೀಯ ಜನತಾ ಪಾರ್ಟಿ ಬೈಂದೂರು ಮಂಡಲದ ವತಿಯಿಂದ ವಿಜಯ ಸಂಕಲ್ಪ ಅಭಿಯಾನ ನಡೆಯಿತು.

    ಆಬಿಯಾನದಲ್ಲಿ ರಾಜ್ಯ ಉಪಾಧ್ಯಕ್ಷ ನಯನಾ ಗಣೇಶ್ ಪಾಲ್ಗೊಂಡರು. ಮಯ್ಯಾಡಿ, ಬಾಡ, ಸೂರ್ಕುಂದ, ತೊಂಡೆಮಕ್ಕಿ ಬೂತ್ ಗಳಲ್ಲಿ ಸದಸ್ಯತ್ವ ಅಭಿಯಾನ, ಸ್ಟಿಕ್ಕರ್ ಅಳವಡಿಕೆ ಮತ್ತು ಯೋಜನಾ ಪತ್ರಕ ನೀಡಿ ಗೋಡೆ ಬರಹ ಮಾಡಲಾಯಿತು.

    ಬೈಂದೂರು ಮಂಡಲ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಪ್ರಿಯದರ್ಶಿನಿ ದೇವಾಡಿಗ, ಕಾರ್ಯದರ್ಶಿ ಮಾಲಿನಿ ಕೆ, ಮಹಿಳಾ ಮೋರ್ಚಾ ಅಧ್ಯಕ್ಷೆ ಭಾಗೀರಥಿ ಸುರೇಶ್, ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ಅನುರ ಮೆಂಡನ್ , ಮಹಾಶಕ್ತಿ ಕೇಂದ್ರ ಅಧ್ಯಕ್ಷ ರಾಘವೇಂದ್ರ ಪೂಜಾರಿ, ಶಶಿಪ್ರಭಾ ಕಾಪು, ಶಕ್ತಿ ಕೇಂದ್ರದ ಪ್ರಮುಖರು ಹಾಗೂ ಬೂತ್ ಅಧ್ಯಕ್ಷರು ಉಪಸ್ಥಿತರಿದ್ದರು.

  • ಕುಂದಾಪುರ :ಮೀನುಗಾರರ ಕಾಂಗ್ರೆಸ್ ಸಮಿತಿ ಕುಂದಾಪುರ ಅಧ್ಯಕ್ಷರಾಗಿ ಶೇಖರ ಚಾತ್ರಬೆಟ್ಟು ಆಯ್ಕೆ

    ಕುಂದಾಪುರ :ಮೀನುಗಾರರ ಕಾಂಗ್ರೆಸ್ ಸಮಿತಿ ಕುಂದಾಪುರ ಅಧ್ಯಕ್ಷರಾಗಿ ಶೇಖರ ಚಾತ್ರಬೆಟ್ಟು ಆಯ್ಕೆ

    ಕುಂದಾಪುರ ಮಿರರ್ ಸುದ್ದಿ…

    ಕುಂದಾಪುರ: ಕುಂದಾಪುರ ಬ್ಲಾಕ್ ಕಾಂಗ್ರೆಸ್ ಮೀನುಗಾರರ ಘಟಕ ಅಧ್ಯಕ್ಷರಾಗಿ ಶೇಖರ ಚಾತ್ರಬೆಟ್ಟು ಆಯ್ಕೆಯಾಗಿದ್ದಾರೆ.

    ಕರ್ನಾಟಕ ವಿಧಾನ ಪರಿಷತ್ ಮಾಜಿ ಸಭಾಪತಿ ಕೆ. ಪ್ರತಾಪಚಂದ್ರ ಶೆಟ್ಟಿಯವರ ಸೂಚನೆ ಮೇರೆಗೆ ಕುಂದಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಾನ್ಮಕ್ಕಿ ಹರಿಪ್ರಸಾದ ಶೆಟ್ಟಿಯವರ ಶಿಫಾರಸ್ಸಿನ ಮೇರೆಗೆ ಜಿಲ್ಲಾದ್ಯಕ್ಷ ರಾಜೇಶ್ ಜಿ. ಮೆಂಡನ್ ಈ ಆಯ್ಕೆ ಮಾಡಿದ್ದಾರೆ.

    2 ಬಾರಿ ಕುಂದಾಪುರ ತಾಲೂಕು ಪಂಚಾಯತ್ ಸದಸ್ಯರಾಗಿ, ಉಪಾದ್ಯಕ್ಷರಾಗಿ 3 ಬಾರಿ ಬೀಜಾಡಿ ಗ್ರಾಮ ಪಂಚಾಯತ್ ಸದಸ್ಯರಾಗಿ ಗಂಗೊಳ್ಳಿ ಪರ್ಸಿಸ್ ಮೀನುಗಾರರ ಸಂಘದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಶೇಖರ ಚಾತ್ರಬೆಟ್ಟು ಪ್ರಸ್ತುತ ಬೀಜಾಡಿ ಗ್ರಾಮ ಪಂಚಾಯತ್ ಸದಸ್ಯರಾಗಿ, ಕುಂದಾಪುರ ಪಿ ಎಲ್ ಡಿ ಬ್ಯಾಂಕ ನಿರ್ದೇಶಕರಾಗಿದ್ದಾರೆ.

  • ತ್ರಾಸಿ: ಬಿಜೆಪಿ ಸಾಧನಾಪತ್ರಕ, ಸ್ಟಿಕ್ಕರ್ ಅಭಿಯಾನ

    ತ್ರಾಸಿ: ಬಿಜೆಪಿ ಸಾಧನಾಪತ್ರಕ, ಸ್ಟಿಕ್ಕರ್ ಅಭಿಯಾನ

    ಕುಂದಾಪುರ ಮಿರರ್ ಸುದ್ದಿ…

    ಕುಂದಾಪುರ: ಚುನಾವಣೆಯ ಹಿನ್ನೆಲೆಯಲ್ಲಿ ಬಿಜೆಪಿ ವಿಜಯ ಸಂಕಲ್ಪ ಅಭಿಯಾನದ ನಿಮಿತ್ತ ಬೈಂದೂರು ವಿಧಾನಸಭಾ ಕ್ಷೇತ್ರದ ತ್ರಾಸಿ ಮಹಾಶಕ್ತಿ ಕೇಂದ್ರದ ಬೂತ್ ವ್ಯಾಪ್ತಿಯಲ್ಲಿ ಭಾನುವಾರ ಕೇಂದ್ರ ಸರ್ಕಾರದ ಸಾಧನೆಗಳ ಪತ್ರಕ ನೀಡಿ, ಸ್ಟಿಕ್ಕರ್ ಅಳವಡಿಸಿ ಗೋಡೆ ಬರಹಕ್ಕೆ ಚಾಲನೆ ನೀಡಲಾಯಿತು.

    ಈ ಸಂದರ್ಭದಲ್ಲಿ ಬೈಂದೂರು ಮಂಡಲ ಬಿಜೆಪಿ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ಅನುರ ಮೆಂಡನ್, ಶಕ್ತಿಕೇಂದ್ರದ ಅಧ್ಯಕ್ಷ ಪ್ರಶಾಂತ್ ಪೂಜಾರಿ, ಗ್ರಾಮ್ ಪಂಚಾಯತ್ ಸದಸ್ಯ ಆನಂದ್ ಪೂಜಾರಿ ಹಾಗೂ ಪಕ್ಷದ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.

  • ಕೋಟೇಶ್ವರ :ಭಾರತೀಯ ಜನತಾ ಪಾರ್ಟಿ ಕುಂದಾಪುರ ಮಂಡಲ – ಬೂತ್ ವಿಜಯ ಸಂಕಲ್ಪ ಅಭಿಯಾನಕ್ಕೆ ಚಾಲನೆ.

    ಕೋಟೇಶ್ವರ :ಭಾರತೀಯ ಜನತಾ ಪಾರ್ಟಿ ಕುಂದಾಪುರ ಮಂಡಲ – ಬೂತ್ ವಿಜಯ ಸಂಕಲ್ಪ ಅಭಿಯಾನಕ್ಕೆ ಚಾಲನೆ.

    ಕುಂದಾಪುರ ಮಿರರ್ ಸುದ್ದಿ…

    ಕುಂದಾಪುರ: ಕೋಟೇಶ್ವರ ಮಹಾಶಕ್ತಿ ಕೇಂದ್ರ ವ್ಯಾಪ್ತಿಯ ಹಂಗಳೂರು ಬೂತ್ ಸಂಖ್ಯೆ 3ರಲ್ಲಿ ಇಂದು ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ರವಿಕುಮಾರ್ ಅವರು ಮಂಡಲ ಅಧ್ಯಕ್ಷ ಶಂಕರ ಅಂಕದಕಟ್ಟೆ ಅವರ ಉಪಸ್ಥಿತಿಯಲ್ಲಿ ಬೂತ್ ಅಧ್ಯಕ್ಷರ ಮನೆಗೆ ಗೋಡೆ ಬರಹ ಹಾಗೂ ಪಕ್ಷದ ಸ್ಟಿಕರ್ ಅಳವಡಿಸುವುದರ ಮೂಲಕ ಚಾಲನೆ ನೀಡಿದರು.

    ನಂತರ ಮಾತನಾಡಿದ ಅವರು ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ನಿಟ್ಟಿನಲ್ಲಿ ರಾಜ್ಯಾದ್ಯಂತ ಪ್ರತಿ ಬೂತ್ ನಲ್ಲು ಈ ಕಾರ್ಯಕ್ರಮ ನಡೆಯುತ್ತಿದೆ, ಕೇಂದ್ರ ಹಾಗೂ ರಾಜ್ಯ ಸರ್ಕಾರದ ಮತ್ತು ಸ್ಥಳೀಯ ಶಾಸಕರ ಸಾಧನೆಗಳ ಸಮಗ್ರ ಮಾಹಿತಿ ಇರುವ ಕರಪತ್ರವನ್ನು ಮನೆ ಮನೆಗೆ ತಲುಪಿಸಿ ಬಿಜೆಪಿ ಸರ್ಕಾರದ ಜನಪರ ಯೋಜನೆಗಳನ್ನು ತಿಳಿಸಬೇಕು ಆ ಮೂಲಕ ಪ್ರತಿ ಬೂತ್ ಗಳಲ್ಲೂ ಅತೀ ಹೆಚ್ಚು ಮತಗಳ ಅಂತರ ಪಡೆಯಬೇಕು ಎಂದು ತಿಳಿಸಿದರು.

    ಮಂಡಲ ಅಧ್ಯಕ್ಷ ಶಂಕರ ಅಂಕದಕಟ್ಟೆ ಸ್ವಾಗತಿಸಿ ಪ್ರಾಸ್ತಾವಿಕ ಮಾತನಾಡಿದರು.

    ಕಾರ್ಯಕ್ರಮದಲ್ಲಿ ರಾಜ್ಯ ಉಪಾಧ್ಯಕ್ಷೆ ನಯನಾ ಗಣೇಶ್, ಮಂಗಳೂರು ವಿಭಾಗ ಪ್ರಭಾರಿ ಉದಯ್ ಕುಮಾರ್ ಶೆಟ್ಟಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸದಾನಂದ ಉಪ್ಪಿನ ಕುದ್ರು, ಅಭಿಯಾನದ ಜಿಲ್ಲಾ ಸಹಸಂಚಾಲಕಿ ಗೀತಾಂಜಲಿ ಸುವರ್ಣ, ಮಂಗಳೂರು ವಿಭಾಗ ಪ್ರಭಾರಿ ರಾಜೇಶ್ ಕಾವೇರಿ, ಕುಂದಾಪುರ ಮಂಡಲ ಪ್ರಭಾರಿ ಸುಪ್ರಸಾದ್ ಶೆಟ್ಟಿ, ಮಂಡಲ ಪ್ರಧಾನ ಕಾರ್ಯದರ್ಶಿ ಸತೀಶ್ ಪೂಜಾರಿ, ಸುರೇಶ್ ಶೆಟ್ಟಿ, ಜಿಲ್ಲಾ ಕಾರ್ಯದರ್ಶಿ ಸದಾನಂದ ಬಳ್ಕೂರು, ಜಿಲ್ಲಾ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ಶರತ್ ಶೆಟ್ಟಿ, ಎಸ್ಸಿ ಮೋರ್ಚಾ ಜಿಲ್ಲಾಧ್ಯಕ್ಷ ಗೋಪಾಲ್ ಕಳಂಜಿ, ಅಭಿಯಾನದ ಮಂಡಲ ಪ್ರಮುಖರಾದ ಸುರೇಂದ್ರ ಕಾಂಚನ್, ಅರುಣ್ ಭಾಣ, ವಿದ್ಯಾ ಸಾಲಿಯಾನ್, ಕೋಟೇಶ್ವರ ಮಹಾಶಕ್ತಿ ಕೇಂದ್ರ ಪ್ರಧಾನ ಕಾರ್ಯದರ್ಶಿ ನಾಗರಾಜ್ ಆಚಾರ್, ಬೂತ್ ಅಧ್ಯಕ್ಷ ಹರೀಶ್ ಪೂಜಾರಿ, ಹಂಗಳೂರು ಗ್ರಾಮ ಪಂಚಾಯತ್ ಅಧ್ಯಕ್ಷ ಆನಂದ ಪೂಜಾರಿ, ಮುಖಂಡರಾದ ಶಾನಾಡಿ ಸಂಪತ್ ಶೆಟ್ಟಿ, ಪ್ರಣಯ್ ಶೆಟ್ಟಿ, ವಿವಿಧ ಮೋರ್ಚಾ, ಪ್ರಕೋಷ್ಠಗಳ, ಮಹಾಶಕ್ತಿ ಕೇಂದ್ರ, ಶಕ್ತಿಕೇಂದ್ರ ಅಧ್ಯಕ್ಷರು ಪ್ರಧಾನ ಕಾರ್ಯದರ್ಶಿಗಳು, ಗ್ರಾಮ ಪಂಚಾಯತ್ ಸದಸ್ಯರು, ಕಾರ್ಯಕರ್ತರು ಉಪ್ಥಿತರಿದ್ದರು.

  • ಮರವಂತೆ: ಬಿಜೆಪಿಯಿಂದ ಸದಸ್ಯತ್ವ ಅಭಿಯಾನಕ್ಕೆ ಚಾಲನೆ

    ಮರವಂತೆ: ಬಿಜೆಪಿಯಿಂದ ಸದಸ್ಯತ್ವ ಅಭಿಯಾನಕ್ಕೆ ಚಾಲನೆ

    ಕುಂದಾಪುರ ಮಿರರ್ ಸುದ್ದಿ…

    Video:

    ಕುಂದಾಪುರ: ಮುಂಬರುವ ಚುನಾವಣೆಗೆ ಬಿಜೆಪಿ ತ್ರಾಸಿ ಬೀಚಿನಿಂದ ಅಭಿಯಾನ ಆರಂಭಿಸಿದೆ.

    ರಾಜ್ಯಾದ್ಯಂತ ಹಮ್ಮಿಕೊಂಡಿರುವ ವಿಜಯ ಸಂಕಲ್ಪ ಅಭಿಯಾನದ ಅಂಗವಾದ ಸದಸ್ಯತ್ವ ಅಭಿಯಾನಕ್ಕೆ ಬೈಂದೂರು ಮಂಡಲದಿಂದ ಸಮುದ್ರ ತೀರದಲ್ಲಿ ಚಾಲನೆ ನೀಡಲಾಯಿತು.

    ಸಾವಿರಾರು ಮಂದಿ ಪ್ರವಾಸಿಗರು ಬರುವ ತ್ರಾಸಿ , ಮರವಂತೆ ಬೀಚ್ ನ ತೀರದಲ್ಲಿ ವಿಜಯ ಸಂಕಲ್ಪ ಅಭಿಯಾನದ ಲೋಗೋ ಹಾಗೂ ಮಿಸ್ಡ್ ಕಾಲ್ ನಂಬರ್ ಹಾಕಿ ಮರಳಿನಲ್ಲಿ ಆಕೃತಿ ರಚಿಸಲಾಯಿತು.

    ಇದನ್ನು ನೋಡಲು ಬಂದ ಸ್ಥಳೀಯ ಹಾಗೂ ಹೊರ ಭಾಗದ ಪ್ರವಾಸಿಗರನ್ನೇ ಸದಸ್ಯರನ್ನಾಗಿ ಮಾಡಲಾಗಿದೆ. ಈ ಸಂದರ್ಭದಲ್ಲಿ ಮಂಡಲ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿ, ಪಕ್ಷದ ಪ್ರಮುಖರು ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

  • ಕುಂದಾಪುರ :ರಾಜ್ಯಯುವ ಕಾಂಗ್ರೆಸ್‍ನ ಪ್ರಧಾನ ಕಾರ್ಯದರ್ಶಿಯಾಗಿ ಅಜಿತ್ ಕುಮಾರ್ ಶೆಟ್ಟಿ ವಡ್ಡರ್ಸೆ ಪುನರಾಯ್ಕೆ

    ಕುಂದಾಪುರ :ರಾಜ್ಯಯುವ ಕಾಂಗ್ರೆಸ್‍ನ ಪ್ರಧಾನ ಕಾರ್ಯದರ್ಶಿಯಾಗಿ ಅಜಿತ್ ಕುಮಾರ್ ಶೆಟ್ಟಿ ವಡ್ಡರ್ಸೆ ಪುನರಾಯ್ಕೆ

    ಕುಂದಾಪುರ ಮಿರರ್ ಸುದ್ದಿ…

    ಕೋಟ: ರಾಜ್ಯಯುವ ಕಾಂಗ್ರೆಸ್‍ನ ಪ್ರಧಾನ ಕಾರ್ಯದರ್ಶಿಯಾಗಿ ಅಜಿತ್ ಕುಮಾರ್ ಶೆಟ್ಟಿ ವಡ್ಡರ್ಸೆ ಅವರನ್ನು ಮುಂಬಡ್ತಿಗೊಳಿಸಿ ಕರ್ನಾಟಕ ಪ್ರದೇಶ ಯುವಕಾಂಗ್ರೆಸ್ ಸಮಿತಿಯು ಪ್ರಕಟಿಸಿದೆ.

    ಎನ್.ಎಸ್.ಯು.ಐ ಅಧ್ಯಕ್ಷರಾಗಿ, ವಡ್ಡರ್ಸೆ ಬೂತ್ ಕಾಂಗ್ರೆಸ್ ಅಧ್ಯಕ್ಷರಾಗಿ, ಕುಂದಾಪುರ ಯುವ ಇಂಟೆಕ್ (ಕಾರ್ಮಿಕ ಸಂಘಟನೆ) ಅಧ್ಯಕ್ಷರಾಗಿ ಕಳೆದ 2 ವರ್ಷಗಳಿಂದ ರಾಜ್ಯ ಯುವಕಾಂಗ್ರೆಸ್ ಕಾರ್ಯದರ್ಶಿಯಾಗಿ ಚುನಾಯಿತರಾಗಿ ಧಾರವಾಡ ಜಿಲ್ಲಾ ಯುವ ಕಾಂಗ್ರೆಸ್ ಉಸ್ತುವಾರಿಯಾಗಿ ಹಾಗೂ ಪ್ರಸ್ತುತ ಕೊಡಗು ಜಿಲ್ಲಾ ಯುವಕಾಂಗ್ರೆಸ್ ಉಸ್ತುವಾರಿಯಾಗಿ ಸೇವೆ ಸಲ್ಲಿಸಿದ್ದು ಪ್ರಸ್ತುತ ಉಡುಪಿ ಹಾಗೂ ಭಟ್ಕಳ ವಿಧಾನಸಭಾ ಕ್ಷೇತ್ರದ ಚುನಾವಣೆ ಉಸ್ತುವಾರಿಯಾಗಿ ಸೇವೆಸಲ್ಲಿಸುತ್ತಿದ್ದರು.
    ಕಳೆದ 2 ವರ್ಷಗಳಿಂದ ರಾಜ್ಯ ಯುವ ಕಾಂಗ್ರೆಸ್ ಕೊಟ್ಟ ಜವಾಬ್ದಾರಿಯನ್ನು ಸಂಪೂರ್ಣವಾಗಿ ನಿಭಾವಹಿಸುವಲ್ಲಿ ಯಶಸ್ವಿಯಾಗಿದ್ದು ರಾಷ್ಟ್ರೀಯ ಯುವಕಾಂಗ್ರೆಸ್ ಅಧ್ಯಕ್ಷ ಬಿ.ವಿ. ಶ್ರೀನಿವಾಸ್ ಅವರ ಆದೇಶದ ಮೇರೆಗೆ ರಾಜ್ಯ ಯುವಕಾಂಗ್ರೆಸ್ ನ ಅಧ್ಯಕ್ಷ ನಲಪಾಡ್ ಅವರು ಹಾಗೂ ರಾಷ್ಟ್ರೀಯ ಯುವ ಕಾಂಗ್ರೆಸ್ ನ ಪ್ರಧಾನಕಾರ್ಯದರ್ಶಿ ಹಾಗೂ ರಾಜ್ಯ ಯುವ ಕಾಂಗ್ರೆಸ್ ಉಸ್ತುವಾರಿಯಾದ ಬಂಟಿ ಶೆಳ್ಕೆ ಅವರು ಅಜಿತ್ ಕುಮಾರ್ ಶೆಟ್ಟಿ ವಡ್ಡರ್ಸೆಯವರನ್ನು ರಾಜ್ಯ ಯುವ ಕಾಂಗ್ರೆಸ್ ನ ಕಾರ್ಯದರ್ಶಿಯಿಂದ ರಾಜ್ಯಯುವಕಾಂಗ್ರೆಸ್ ನ ಪ್ರಧಾನಕಾರ್ಯದರ್ಶಿಯಾಗಿ ಮುಂಬಡ್ತಿ ನೀಡಿದ್ದಾರೆ ಎಂದು ಕರ್ನಾಟಕ ಪ್ರದೇಶ ಯುವಕಾಂಗ್ರೆಸ್ ಸಮಿತಿಯ ಪ್ರಕಟಣೆ ತಿಳಿಸಿದೆ.

  • ಕೋಟ :ಪಾಂಡೇಶ್ವರ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಾಂಗ್ರೆಸ್ ಸ್ಥಾನಿಯ ಸಮಿತಿಯ ಸಭೆ, ಆಯ್ಕೆ

    ಕೋಟ :ಪಾಂಡೇಶ್ವರ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಾಂಗ್ರೆಸ್ ಸ್ಥಾನಿಯ ಸಮಿತಿಯ ಸಭೆ, ಆಯ್ಕೆ

    ಕುಂದಾಪುರ ಮಿರರ್ ಸುದ್ದಿ…

    ಕೋಟ: ಪಾಂಡೇಶ್ವರ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಾಂಗ್ರೆಸ್ ಸ್ಥಾನಿಯ ಸಮಿತಿಯ ಸಭೆಯು ಕೋಟ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಶಂಕರ್ ಕುಂದರ್ ನೇತೃತ್ವದಲ್ಲಿ ನಡೆಯಿತು.

    ಸಭೆಯಲ್ಲಿ ಪಾಂಡೇಶ್ವರ ಗ್ರಾಮದ ಸ್ಥಾನಿಯ ಸಮಿತಿಯ ಅಧ್ಯಕ್ಷರಾಗಿ ಅವಿನಾಶ್ ಪೂಜಾರಿ ಎಡಬೆಟ್ಟು ಇವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು.

    ಉಪಾಧ್ಯಕ್ಷರಾಗಿ ಪಿ.ವಿಠ್ಠಲ ಪೂಜಾರಿ ಮತ್ತು ಸುಪ್ರೀತಾ ಪಾಂಡೇಶ್ವರ, ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ರವಿ ಪೂಜಾರಿ , ಜೊತೆ ಕಾರ್ಯದರ್ಶಿಯಾಗಿ ಪಿ ಎಸ್ ಶ್ರೀಧರ್ ಆಚಾರ್ಯ, ಸಂಘಟನಾ ಕಾರ್ಯದರ್ಶಿಯಾಗಿ ರಾಜಶೇಖರ್ ಪೂಜಾರಿ ಪಾಂಡೇಶ್ವರ, ಮತ್ತು ಪ್ರವೀಣ್ ಪೂಜಾರಿ , ಇವರನ್ನು ಆಯ್ಕೆ ಮಾಡಲಾಯಿತು.

    ಈ ಸಂದರ್ಭದಲ್ಲಿ ಮಾಜಿ ಸ್ಥಾನಿಯ ಸಮಿತಿ ಅಧ್ಯಕ್ಷ ರಮೇಶ್ ಆಚಾರ್ಯ , ರಾಜೀವ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಅಧ್ಯಕ್ಷೆ ರೋಷನಿ ಒಲಿವೇರಾ , ಪಾಂಡೇಶ್ವರ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಕಲ್ಪನಾ ದಿನಕರ್ , ಉಪಾಧ್ಯಕ್ಷರಾದ ಸಿಲ್ವೇಸ್ಟಾರ್ ಡಿಸೋಜ , ಪಂಚಾಯತ್ ಮಾಜಿ ಅಧ್ಯಕ್ಷೆ ಸುಶೀಲ ಪೂಜಾರಿ, ಹಾಗೂ ಲೀಲಾವತಿ ಗಂಗಾಧರ್ ಪೂಜಾರಿ, ಸ್ಥಳೀಯ ಮುಖಂಡರಾದ ಅನಿಲ್ ಹಾಂಡ, ನಿರ್ಮಲ,ನಂದಿನಿ, ಸುಪ್ರೀತಾ, ದಿನಕರ ಪೂಜಾರಿ, ಪಿ.ಬಿ ಶ್ರೀಕಾಂತ್ ಆಚಾರ್ಯ,ದೇವರಾಜ್ ಆಚಾರ್ಯ ಉಪಸ್ಥಿತರಿದ್ದರು. ವೈ ಬಿ ರಾಘವೇಂದ್ರ ಆಚಾರ್ಯ ಕಾರ್ಯಕ್ರಮ ನಿರೂಪಿಸಿ ಧನ್ಯವಾದಗೈದರು.

  • ಕುಂದಾಪುರ: ಪ್ರತಾಪಚಂದ್ರ ಶೆಟ್ಟಿ ರಾಜೀನಾಮೆ ಪರಿಶೀಲಿಸಿ ಕ್ರಮ ಕೈಗೊಳ್ಳುವಂತೆ ಹರಿಪ್ರಸಾದ್ ಶೆಟ್ಟಿ ಮನವಿ

    ಕುಂದಾಪುರ: ಪ್ರತಾಪಚಂದ್ರ ಶೆಟ್ಟಿ ರಾಜೀನಾಮೆ ಪರಿಶೀಲಿಸಿ ಕ್ರಮ ಕೈಗೊಳ್ಳುವಂತೆ ಹರಿಪ್ರಸಾದ್ ಶೆಟ್ಟಿ ಮನವಿ

    ಕುಂದಾಪುರ ಮಿರರ್ ಸುದ್ದಿ…

    ಕುಂದಾಪುರ:ವಿಧಾನಪರಿಷತ್ ಮಾಜೀ ಸಭಾಪತಿ ಕೆ. ಪ್ರತಾಪಚಂದ್ರ ಶೆಟ್ಟಿಯವರ ರಾಜೀನಾಮೆ ಉಡುಪಿ ಜಿಲ್ಲಾ ಕಾಂಗ್ರೆಸ್ನಲ್ಲಿ ತಳಮಳಕ್ಕೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ಕುಂದಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹೆಚ್. ಹರಿಪ್ರಸಾದ್ ಶೆಟ್ಟಿ ಕಾನ್ಮಕ್ಕಿಯವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರಿಗೆ ಪತ್ರ ಬರೆದಿದ್ದಾರೆ.

    4 ಬಾರಿ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾಗಿ, 3 ಬಾರಿ ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತಿನ ಸದಸ್ಯರಾಗಿ ಹಾಗೂ ಸಭಾಪತಿಯಾಗಿ ಸೇವೆ ಸಲ್ಲಿಸಿರುವ ಪ್ರತಾಪಚಂದ್ರ ಶೆಟ್ಟಿ ರಾಜೀನಾಮೆ ದುಃಖ ತಂದಿರುವುದಾಗಿ ತಿಳಿಸಿದ್ದಾರೆ. ಕೆ ಪ್ರತಾಪಚಂದ್ರ ಶೆಟ್ಟಿಯವರು ಪ್ರಚಲಿತ ರಾಜಕೀಯ ವಿದ್ಯಮಾನಗಳ ಹಿನ್ನಲೆಯಲ್ಲಿ ಮತ್ತು ಪಕ್ಷದಲ್ಲಿ ಬೇರೆಯವರಿಗೆ ಅವಕಾಶ ಮಾಡಿಕೊಡುವ ದೃಷ್ಟಿಯಿಂದ ಅವರು ನೀಡಿರುವ ರಾಜೀನಾಮೆಯು , ಅವರ ನಾಯಕತ್ವದಲ್ಲಿ ಕಳೆದ 30 ವರ್ಷಗಳಿಂದ ಇರುವ ನನಗೆ ವೈಯಕ್ತಿಕವಾಗಿ ನೋವನ್ನುಂಟು ಮಾಡಿದೆ. ಪಕ್ಷದ ಹಿತದೃಷ್ಟಿ ಮತ್ತು ಚುನಾವಣಾ ದೃಷ್ಟಿಯಿಂದ ಇವರ ರಾಜೀನಾಮೆಯು ಉಡುಪಿಯ ಜಿಲ್ಲೆಯಲ್ಲಿ ಬಹಳಷ್ಟು ಪರಿಣಾಮ ಬೀರಲಿದೆ ಎಂದಿದ್ದಾರೆ.

    ಜಿಲ್ಲೆಯ ಜ್ವಲಂತ ಸಮಸ್ಯೆಗಳ ಹೋರಾಟಕ್ಕೆ ಯಾವುದೇ ಮುಲಾಜಿಲ್ಲದೇ ಹೋರಾಟ ಮಾಡುವ ವ್ಯಕ್ತಿತ್ವ ಹೊಂದಿರುವುದರಿಂಧ ಜಿಲ್ಲೆಯಲ್ಲಿ ಜನಪ್ರಿಯ ಕಾಂಗ್ರೆಸ್ ನಾಯಕರಾಗಿರುವ ಕೆ. ಪ್ರತಾಪಚಂದ್ರ ಶೆಟ್ಟಿ ರಾಜೀನಾಮೆಯನ್ನು ಅಂಗೀಕರಿಸುವ ಮೊದಲು ಪರಿಶೀಲನೆ ನಡೆಸುವಂತೆ ಕೋರಿದ್ದಾರೆ.

  • ಕುಂದಾಪುರ :‌ಜನವರಿ 21ರಿಂದ ಜ.29ರ ತನಕ ವಿಜಯ ಸಂಕಲ್ಪ ಅಭಿಯಾನ

    ಕುಂದಾಪುರ :‌ಜನವರಿ 21ರಿಂದ ಜ.29ರ ತನಕ ವಿಜಯ ಸಂಕಲ್ಪ ಅಭಿಯಾನ

    ಕುಂದಾಪುರ ಮಿರರ್ ಸುದ್ದಿ…

    ಕುಂದಾಪುರ :ಭಾರತೀಯ ಜನತಾ ಪಕ್ಷದ ವಿಜಯ ಸಂಕಲ್ಪ ಅಭಿಯಾನ ಜನವರಿ 21ರಿಂದ ಜ.29ರ ತನಕ ನಡೆಯಲಿದೆ. ಜ.21ರಂದು ಕೋಟತಟ್ಟು ಗ್ರಾಮದಲ್ಲಿ ಚಾಲನೆ ನೀಡಲಾಗುವುದು. ಜಿಲ್ಲೆಯ ಎಲ್ಲಾ ಐದು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಈ ಅಭಿಯಾನ ನಡೆಯಲಿದ್ದು ರಾಜ್ಯ, ಕೇಂದ್ರ ಸರ್ಕಾರಗಳ ಸಾಧನೆಯನ್ನು ಮನೆಗೆ ತಲುಪಿಸುವ ಕಾರ್ಯ ಆಗಲಿದೆ ಎಂದು ವಿಜಯ ಸಂಕಲ್ಪ ಅಭಿಯಾನದ ಕ್ಷೇತ್ರ ಪ್ರಭಾರಿ ಗೀತಾಂಜಲಿ ಸುವರ್ಣ ಹೇಳಿದರು.

    ಅವರು ಕುಂದಾಪುರ ಮಂಡಲ ಬಿಜೆಪಿ ಕಛೇರಿಯಲ್ಲಿ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದರು. ಈ ಅಭಿಯಾನದ ಮೂಲಕ ಕೇಂದ್ರ, ರಾಜ್ಯ ಸರ್ಕಾರದ ಯೋಜನೆಯ ಫಲಾನುಭವಿಗಳ ಭೇಟಿ ಮಾಡಲಾಗುವುದು. ಕ್ಷೇತ್ರದಲ್ಲಿ ಆಗಿರುವ ಅಭಿವೃದ್ದಿ ಕಾರ್ಯಗಳ ತಿಳಿಸಲಾಗುವುದು. ಜೊತೆಯಲ್ಲಿ ಕಳೆದ 6 ವರ್ಷದ ಹಿಂದೆ ಸದಸ್ಯತ್ವ ಅಭಿಯಾನ ಮಾಡಲಾಗಿದ್ದು, ಈಗ ಮರಳಿ ಮಿಸ್ ಕಾಲ್ ಕೊಡುವ ಮೂಲಕ ಸದಸ್ಯತ್ವ ನೊಂದಣಿ ಮಾಡಲಾಗುವುದು. ಕಾರ್ಯಕರ್ತರ ಮನೆಯ ಗೋಡೆಗಳಲ್ಲಿ ಕಮಲದ ಚಿಹ್ನೆ ಬಿಡಿಸುವ ಕಾರ್ಯವೂ ನಡೆಯಲಿದೆ. ಜ.29ರಂದು ಪ್ರಧಾನ ಮಂತ್ರಿಗಳ ಮನ್‍ಕಿಬಾತ್ ಕಾರ್ಯಕ್ರಮವನ್ನು ಎಲ್ಲ ಬೂತ್ ಅಧ್ಯಕ್ಷರು ವೀಕ್ಷಣೆ ಮಾಡುವಂತೆ ಸೂಚನೆ ನೀಡಲಾಗಿದೆ. ಇದನ್ನು ಅ್ಯಪ್ ಮೂಲಕ ಹಂಚಿಕೊಳ್ಳಬಹುದಾಗಿದೆ ಎಂದರು.
    ಇನ್ನೂ ಮೂರು ತಿಂಗಳಲ್ಲಿ ಚುನಾವಣೆ ಬರಲಿದೆ. ಅದಕ್ಕೆ ಪೂರಕವಾಗಿ ಈ ಅಭಿಯಾನವನ್ನು ಯಶಸ್ವಿಗೊಳಿಸಬೇಕಾಗಿದೆ. ಈ ವಿಜಯ ಸಂಕಲ್ಪ ಅಭಿಯಾನದಲ್ಲಿ ಶಾಸಕರು, ಪಕ್ಷದ ಮುಖಂಡರು ಭಾಗವಹಿಸಲಿದ್ದಾರೆ ಎಂದರು.

    ಸುದ್ಧಿಗೋಷ್ಠಿಯಲ್ಲಿ ಮಂಡಲದ ಅಧ್ಯಕ್ಷರಾದ ಶಂಕರ ಅಂಕದಕಟ್ಟೆ, ರಾಜ್ಯ ಆಹಾರ ನಿಗಮದ ಉಪಾಧ್ಯಕ್ಷ ಕಿರಣ್ ಕುಮಾರ್ ಕೊಡ್ಗಿ, ಬಿಜೆಪಿ ಕುಂದಾಪುರ ಮಂಡಲ ಪ್ರಧಾನ ಕಾರ್ಯದರ್ಶಿ ಸತೀಶ್ ಪೂಜಾರಿ ಉಪಸ್ಥಿತರಿದ್ದರು.

  • ಕುಂದಾಪುರ :ಕೆಪಿಸಿಸಿಗೆ ಮಾಜೀ ಸಭಾಪತಿ ಪ್ರತಾಪ್ ಚಂದ್ರ ಶೆಟ್ಟಿ ರಾಜೀನಾಮೆ

    ಕುಂದಾಪುರ :ಕೆಪಿಸಿಸಿಗೆ ಮಾಜೀ ಸಭಾಪತಿ ಪ್ರತಾಪ್ ಚಂದ್ರ ಶೆಟ್ಟಿ ರಾಜೀನಾಮೆ

    ಕುಂದಾಪುರ ಮಿರರ್ ಸುದ್ದಿ…

    ಕುಂದಾಪುರ : ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಸದಸ್ಯತ್ವಕ್ಕೆ (ಕೆಪಿಸಿಸಿ) ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ, ಮಾಜಿ ವಿಧಾನಪರಿಷತ್ ಸಭಾಪತಿ ಪ್ರತಾಪ್ ಚಂದ್ರ ಶೆಟ್ಟಿ ರಾಜೀನಾಮೆ ನೀಡಿದ್ದಾರೆ.

    ಈ ಬಗ್ಗೆ ಪ್ರಿಕ್ರಿಯಿಸಿರುವ ಪ್ರತಾಪ್ ಚಂದ್ರ ಶೆಟ್ಟಿ ರಾಜೀನಾಮೆ ದೃಢೀಕರಿಸಿದ್ದಾರೆ. ಈ ಹಿಂದೆ ಎಂಎಲ್.ಸಿ. ಸ್ಥಾನವನ್ನು ಬಿಟ್ಟುಕೊಟ್ಟಿದ್ದೇನೆ. ಈಗ ಕೆ.ಪಿ.ಸಿ.ಸಿ ಸದಸ್ಯತ್ವವನ್ನು ಬಿಟ್ಟುಕೊಟ್ಟಿದ್ದೇನೆ. ಇದರ ಹಿಂದೆ ಯಾವುದೇ ರಾಜಕೀಯ ಪ್ರೇರಿತ ಉದ್ದೇಶವಿಲ್ಲ. ಕಾಂಗ್ರೆಸ್ ಪಕ್ಷದ ಸದಸ್ಯನಾಗಿ ಮುಂದುವರೆಯುತ್ತೇನೆ ಎಂದಿದ್ದಾರೆ. ಕಾಂಗ್ರೆಸ್ ನಲ್ಲಿ ಸಾಕಷ್ಟು ಕ್ರಿಯಾಶೀಲ ನಾಯಕರಿದ್ದಾರೆ. ಕೆಪಿಸಿ ಸದಸ್ಯತ್ವ ಸೀಮಿತ ಸಂಖ್ಯೆಯಲ್ಲಿರುವುದರಿಂದ ಕ್ರಿಯಾಶೀಲ ನಾಯಕರಿಗೆ ನನ್ನ ಸ್ಥಾನವನ್ನು ಬಿಟ್ಟುಕೊಟ್ಟಿದ್ದೇನೆ ಎಂದರು.

    ಪ್ರತಾಪ್ ಚಂದ್ರ ಶೆಟ್ಟಿ ರಾಜೀನಾಮೆ ಹಿನ್ನೆಲೆಯಲ್ಲಿ ಎಐಸಿಸಿ ಕಾರ್ಯದರ್ಶಿ, ಕೇರಳ ಶಾಸಕ ರೋಸಿ ಎಂ. ಜಾನ್ ಮತ್ತು ಕೆಪಿಸಿಸಿ ಕಾರ್ಯಾಧ್ಯಕ್ಷ ದ್ರುವ ನಾರಾಯಣರವರು ಪ್ರತಾಪಚಂದ್ರ ಶೆಟ್ಟಿಯವರ ನಿವಾಸಕ್ಕೆ ಬೇಟಿ ನೀಡಿದ್ದಾರೆ. ಈ ಬಗ್ಗೆ ಮಾತನಾಡಿದ ಕೆಪಿಸಿಸಿ ಕಾರ್ಯಾದ್ಯಕ್ಷ ಧ್ರುವ ನಾರಾಯಣ್ ಅವರು, ಪ್ರತಾಪ್ ಚಂದ್ರ ಶೆಟ್ಟಿ ಅವರು ಪಕ್ಷದಲ್ಲಿ ತುಂಬಾ ಸಕ್ರಿಯರಾಗಿದ್ದಾರೆ, ಯಾವುದೇ ಭಿನ್ನಾಭಿಪ್ರಾಯವಿಲ್ಲ, ಅವರ ಮಾರ್ಗದರ್ಶನದಲ್ಲಿ ಜಿಲ್ಲೆಯಲ್ಲಿ ಕಾಂಗ್ರೆಸ್ ಅಭಿವೃದ್ಧಿ ಹೊಂದುತ್ತಿದೆ ಎಂದು ಹೇಳಿದ್ದಾರೆ.