Category: ರಾಜಕೀಯ

  • ನವೆಂಬರ್ 7ರಂದು 1122 ಕೋಟಿ ಯೋಜನೆಗಳ ಶಂಕುಸ್ಥಾಪನೆ ; 201 ಕೋಟಿ ಕಾಮಗಾರಿ ಉದ್ಘಾಟನೆ – ಸಂಸದ ಬಿ.ವೈ.ಆರ್ ಸುದ್ಧಿಗೋಷ್ಟಿ

    ನವೆಂಬರ್ 7ರಂದು 1122 ಕೋಟಿ ಯೋಜನೆಗಳ ಶಂಕುಸ್ಥಾಪನೆ ; 201 ಕೋಟಿ ಕಾಮಗಾರಿ ಉದ್ಘಾಟನೆ – ಸಂಸದ ಬಿ.ವೈ.ಆರ್ ಸುದ್ಧಿಗೋಷ್ಟಿ

    ಕುಂದಾಪುರ ಮಿರರ್ ಸುದ್ದಿ…
    ಕುಂದಾಪುರ: ಮುಖ್ಯಮಂತ್ರಿಗಳು ಹಾಗೂ ಮಾಜೀ ಮುಖ್ಯಮಂತ್ರಿಗಳು ನವೆಂಬರ್ 7ರಂದು ಬೈಂದೂರಿನಲ್ಲಿ 1122 ಕೋಟಿ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ 201 ಕೋಟಿ ಕಾಮಗಾರಿಗಳ ಉದ್ಘಾಟನೆ ಸೇರಿದಂತೆ ಒಟ್ಟು 1323 ಕೋಟ ಅನುದಾನವನ್ನು ಬೈಂದೂರು ವಿಧಾನಸಭಾ ಕ್ಷೇತ್ರಕ್ಕೆ ನೀಡಲಾಗುತ್ತಿದೆ ಎಂದು ಸಂಸದ ಬಿ. ವೈ ರಾಘವೇಂದ್ರ ಹೇಳಿದರು. ಅವರು ಚಿತ್ತೂರಿನಲ್ಲಿ ಕರೆಯಲಾದ ಸುದ್ಧಿಗೋಷ್ಟಿಯಲ್ಲಿ ಮಾತನಾಡಿದರು.
    ನಬಾರ್ಡ್ ಯೋಜನೆಯಡಿಯಲ್ಲಿ ಬೈಂದೂರು ಕ್ಷೇತ್ರದಲ್ಲಿ ಸಂಪೂರ್ಣವಾಗಿ ಶುದ್ಧ ಕುಡಿಯುವ ನೀರಿನ ಯೋಜನೆ ರೂ.585 ಕೋಟಿ (ಒಪ್ಪಂದ 469 ಕೋಟಿ), ಕ್ಲಸ್ಟರ್  -1 (ಪರ್ವತ ಶ್ರೇಣಿ) ಮತ್ತು  ಕ್ಲಸ್ಟರ್ – 2 (ಸಮುದ್ರ ತೀರ ಪ್ರದೇಶಗಳ) ವ್ಯಾಪ್ತಿಯಲ್ಲಿ ಕ್ರಮವಾಗಿ ಹೊಸಂಗಡಿ ಮತ್ತು ಗುಲ್ವಾಡಿಯಲ್ಲಿ ನೀರುನ್ನು ಎತ್ತಿ ಶುದ್ಧೀಕರಿಸಿ 43 ಗ್ರಾಮ ಮಂಚಾಯಿತಿಗಳ 858 ಪಂಚಾಯಿತಿಗಳ ಸುಮಾರು 3 ಲಕ್ಷ ಜನರ ಮನೆ ಬಾಗಿಲಿಗೆ ನೀರು ತಲುಪಿಸುವ ಯೋಜನೆ ಲೋಕಾರ್ಪಣೆಗೊಳ್ಳಲಿದೆ ಎಂದು  ಹೇಳಿದ ಅವರು, ನವೆಂಬರ್ 7ರಂದು ಬೈಂದೂರಿಗೆ ಮುಖ್ಯಮಂತ್ರಿಗಳು ಆಗಮಿಸಲಿದ್ದು, ಮರವಂತೆಯಲ್ಲಿ ಹೊರಬಂದರು ನಿರ್ಮಾಣ ಎರಡನೆ ಹಂತದಲ್ಲಿ ರೂ 85 ಕೋಟಿ, 165 ಕೋಟಿ ವೆಚ್ಚದಲ್ಲಿ ಸಿದ್ಧಾಪುರ ಏತ ನೀರಾವರಿ ಯೋಜನೆ, ರೂ 218 ಕೋಟಿ ವೆಚ್ಚದ ಬೈಂದೂರು ರಾಣೇಬೆನ್ನೂರು ರಾಷ್ಟ್ರೀಯ ಹೆದ್ದಾರಿ 766(ಸಿ) ರಸ್ತೆ, 20 ಕೋಟಿ ವೆಚ್ಚದಲ್ಲಿ ಮರವಂತೆ ಮತ್ತು ಪಡುವರಿ ಸೋಮೇಶ್ವರ ಬೀಚ್ ಗಳನ್ನು ಅಂತರ್ ರಾಷ್ಟ್ರೀಯ ಮಟ್ಟದಲ್ಲಿ ಅಭಿವೃದ್ಧಿ, ರೂ 15.48 ಕೋಟಿ ವೆಚ್ಚದಲ್ಲಿ ಸೌಡ-ಶಂಕರನಾರಾಯಣ ಸೇತುವೆ ನಿರ್ಮಾಣ, ರೂ 3.48 ಕೋಟಿ ವೆಚ್ಚದಲ್ಲಿ ಹಳ್ಳಿಹೊಳೆ ಕಬ್ಬಿನಾಲೆ ಸೇತುವೆ ನಿರ್ಮಾಣ, ರೂ 20.75 ಕೋಟಿ ವೆಚ್ಚದಲ್ಲಿ ದೇವಸ್ಥಾನ ಹಾಗೂ ಸಮುದಾಯ ಭವನಗಳ ಅಭಿವೃದ್ಧಿ, ಅಮೃತ ಮಹೋತ್ಸವದ ಅಂಗವಾಗಿ ಶಿವಮೊಗ್ಗ ಲೋಕಸಭಾ ಕ್ಷೇತ್ರದ 75 ಕೆರೆಗಳ ಅಭಿವೃದ್ಧಿ ಬೈಂದೂರು ಕ್ಷೇತ್ರಾದ್ಯಂತ 7 ಕೆರೆಗಳ ಅಭಿವೃದ್ಧಿ, 5 ಕೋಟಿ ವೆಚ್ಚದಲ್ಲಿ ಬೈಂದೂರು ವಿಧಾನಸಭಾ ಕ್ಷೇತಾದ್ಯಂತ ಕಾಲುಸಂಕಗಳ ನಿರ್ಮಾಣ, ಬೈಂದೂರು ವಿಧಾನಸಭಾ ಕ್ಷೇತ್ರಾದ್ಯಂತ ಶಾಲೆ-ಕಾಲೇಜುಗಳ ಕೊಠಡಿ, ಹಾಗೂ ಶೌಚಾಲಯ ನಿರ್ಮಾಣ,  ಕೊಲ್ಲೂರು ದೇವಸ್ಥಾನದ ವತಿಯಿಂದ ಗೋಶಾಲೆ ನಿರ್ಮಾಣ, ಬೈಂದೂರು ಪಟ್ಟಣ ಪಂಚಾಯತಿ ವ್ಯಾಪ್ತಿಯಲ್ಲಿ 500 ಕೋಟಿ ಮೊತ್ತದ ವಿವಿಧ ಕಾಮಗಾರಿಗಳ ಶಂಕು ಸ್ಥಾಪನೆ ನೆರವೇರಿಸಲಿದ್ದಾರೆ ಎಂದರು.
    ಈ ಸಂದರ್ಭ ಬೈಂದೂರು ಶಾಸಕ ಬಿ.ಎಂ.ಸುಕುಮಾರ್ ಶೆಟ್ಟಿ, ಜಿಲ್ಲಾ ಬಿಜೆಪಿ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ , ಮಂಡಲದ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ, ಸದಾನಂದ ಉಪ್ಪಿನಕುದ್ರು ಉಪಸ್ಥಿತರಿದ್ದರು.
  • ಕೋಟ- ಬ್ಲಾಕ್ ಕಾಂಗ್ರೆಸ್ ವತಿಯಿಂದ ಸಾಮೂಹಿಕ ಗೋಪೂಜೆ

    ಕೋಟ- ಬ್ಲಾಕ್ ಕಾಂಗ್ರೆಸ್ ವತಿಯಿಂದ ಸಾಮೂಹಿಕ ಗೋಪೂಜೆ

    ಕುಂದಾಪುರ ಮಿರರ್ ಸುದ್ದಿ…

    ಕೋಟ: ಕೋಟ ಬ್ಲಾಕ್ ಕಾಂಗ್ರೆಸ್ ವತಿಯಿಂದ ಗೋಪೂಜಾ ಕಾರ್ಯಕ್ರಮ ಪಾಂಡೇಶ್ವರ ಮೂಡಹಡು ಗ್ರಾಮದ ಎಡಬೆಟ್ಟುವಿನ ರಾಮಕೃಷ್ಣ ಐತಾಳ ಮನೆಯಲ್ಲಿ ಜರಗಿತು. ರಾಮಕೃಷ್ಣ ಐತಾಳರು ಧಾರ್ಮಿಕ ಕಾರ್ಯಗಳನ್ನು ನೆರವೆರಿಸಿದರು.

    ಕೋಟ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶಂಕರ್ ಎ ಕುಂದರ್ ರವರ ನೇತ್ರತ್ವದಲ್ಲಿ ಶಾಸ್ತ್ರೋಕ್ತ ವಿಧಾನಗಳಿಂದ ಗೋಪೂಜಾ ಕಾರ್ಯಕ್ರಮ ನೆರವೇರಿತು.

    ಈ ಸಂದರ್ಭದಲ್ಲಿ ಪಾಂಡೇಶ್ವರ ಗ್ರಾಮ ಪಂಚಾಯತ್ ಅಧ್ಯಕ್ಷೆ ಕಲ್ಪನಾ ದಿನಕರ್,ಚೇಂಪಿ ಹಾಲು ಉತ್ಪಾದಕರ ಸಹಕಾರಿ ಸಂಘದ ಕಾರ್ಯದರ್ಶಿ ಕೃಷ್ಣಮೂರ್ತಿ ಐತಾಳ್, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ಮಲ್ಲಿಕಾ ಬಾಲಕೃಷ್ಣ ಪೂಜಾರಿ,ಪಾಂಡೇಶ್ವರ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷೆ ಲೀಲಾವತಿ ಗಂಗಾಧರ್,ಸಾಲಿಗ್ರಾಮ ಪಟ್ಟಣ ಪಂಚಾಯತ್ ವಿರೋಧ ಪಕ್ಷದ ನಾಯಕ ಶ್ರೀನಿವಾಸ ಅಮೀನ್,ಸಾಲಿಗ್ರಾಮ ಪಟ್ಟಣ ಪಂಚಾಯತ್ ಸದಸ್ಯ ರವೀಂದ್ರ ಕಾಮತ್,ಪಾಂಡೇಶ್ವರ ಗ್ರಾಮ ಪಂಚಾಯತ್ ಸದಸ್ಯ ವೈಬಿ ರಾಘವೇಂದ್ರ ಆಚಾರ್ ,ಡಿಸಿಸಿ ಸದಸ್ಯರಾದ ಬಾಲಕೃಷ್ಣ ಪೂಜಾರಿ ಸಾಸ್ತಾನ,ಹಿರಿಯ ಕಾಂಗ್ರೆಸ್ ಮುಖಂಡರಾದ ಬಸವ ಪೂಜಾರಿ ಯಕ್ಷೀಮಠ, ಕೋಟ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ನಟರಾಜ್ ಹೊಳ್ಳ್ ಕಾರ್ಕಡ,ಬ್ಲಾಕ್ ಹಿಂದುಳಿದ ವರ್ಗದ ಅಧ್ಯಕ್ಷ ದಿನೇಶ್ ಬಂಗೇರ,ಉಡುಪಿ ಜಿಲ್ಲಾ ಐಟಿ ಸೆಲ್ ಉಪಾಧ್ಯಕ್ಷ ಗಣೇಶ್ ನೆಲ್ಲಿಬೆಟ್ಟು, ಬ್ಲಾಕ್ ಕಾರ್ಮಿಕ ಘಟಕದ ಅಧ್ಯಕ್ಷ ಶ್ರೀನಿವಾಸ ಶೆಟ್ಟಿಗಾರ್ ,ಬ್ಲಾಕ್ ಇಂಟೆಕ್ ಅಧ್ಯಕ್ಷದೇವೇಂದ್ರ ಗಾಣೆಗ ಕೋಟ, ಬ್ಲಾಕ್ ಕಟ್ಟಡ ಕಾರ್ಮಿಕ ಘಟಕದ ಅಧ್ಯಕ್ಷ ರವಿ ಪೂಜಾರಿ ಕೋಟ, ಶಿವಣ್ಣ ಕೋಟ, ಅಶ್ವಥ್ ಕೋಟ, ಕೇಶವ್ ಮೆಂಡನ್ ಪಾರಂಪಳ್ಳಿ, ಸಂಜೀವ ಪೂಜಾರಿ ಭುವನೇಶ್ವರಿ ಎಡಬೆಟ್ಟು, ದಿನಕರ್ ಎಡಬೆಟ್ಟು,ಅವಿನಾಶ್ ಎಡಬೆಟ್ಟು, ಮಹೇಂದ್ರ ಪೂಜಾರಿ ಎಡಬೆಟ್ಟು, ಧೀರಜ್ ಎಡಬೆಟ್ಟು, ಮಿಥುನ್ ಶೆಟ್ಟಿಗಾರ್ ಗುಂಡ್ಮಿ ಮೊದಲಾದವರು ಉಪಸ್ಥಿತರಿದ್ದರು.

  • ಕುಂದಾಪುರ: ಬಿಜೆಪಿ ಮಹಿಳಾ ಮೋರ್ಚಾದಿಂದ ಸಂಭ್ರಮದ ಗೋಪೂಜಾ ಉತ್ಸವ

    ಕುಂದಾಪುರ: ಬಿಜೆಪಿ ಮಹಿಳಾ ಮೋರ್ಚಾದಿಂದ ಸಂಭ್ರಮದ ಗೋಪೂಜಾ ಉತ್ಸವ

    ಕುಂದಾಪುರ ಮಿರರ್ ಸುದ್ದಿ…

    ಕುಂದಾಪುರ: ಕುಂದಾಪುರ ಮಂಡಲ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ಕುಂದಾಪುರ ನಗರದ ಪೇಟೆ ಶ್ರೀ ವೆಂಕಟರಮಣ ದೇವಸ್ಥಾನದ ಗೋಶಾಲೆಯಲ್ಲಿ ಗೋ ಪೂಜಾ ಉತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ದೀಪಾವಳಿಯ ಪ್ರಯುಕ್ತ ಪರಂಪರಾಗತವಾಗಿ ಆಚರಿಸಿಕೊಂಡು ಬಂದಿರುವ ಗೋ ಪೂಜಾ ಉತ್ಸವವನ್ನು ದೇವಸ್ಥಾನದ ಅರ್ಚಕರ ಮೂಲಕ ನೆರವೇರಿಸಲಾಯಿತು.

    ಪೇಟೆ ಶ್ರೀ ವೆಂಕಟರಮಣ ದೇವರಿಗೆ ಪೂಜೆ ಸಲ್ಲಿಸಿ ನಂತರದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಮಂಡಳಿ ಅಧ್ಯಕ್ಷರಾದ ರಾಧಾಕೃಷ್ಣ ಶೆಣೈ ಮತ್ತು ಮಂಡಳಿಯ ಸದಸ್ಯರ ಉಪಸ್ಥಿತಿಯಲ್ಲಿ ದೇವಸ್ಥಾನದ ಅರ್ಚಕರಿಂದ ನೆರವೇರಿತು. ಪೂಜಾ ಸಂದರ್ಭ ಬಿಜೆಪಿ ಕುಂದಾಪುರ ಮಂಡಲ ಅಧ್ಯಕ್ಷ ಶಂಕರ ಅಂಕದಕಟ್ಟೆ, ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾದ ಸೌರಭಿ ಪೈ ಮತ್ತು ಜಯಲಕ್ಷ್ಮೀ ಗಾಣಿಗ, ಮಂಡಲ ಪ್ರಧಾನ ಕಾರ್ಯದರ್ಶಿ ಸುರೇಶ್ ಶೆಟ್ಟಿ ಗೋಪಾಡಿ, ದಕ್ಷಿಣ ಕನ್ನಡ ಜಿಲ್ಲಾ ಸಹಪ್ರಭಾರಿ ರಾಜೇಶ್ ಕಾವೇರಿ, ಜಿಲ್ಲಾ ಕಾರ್ಯದರ್ಶಿ ಅನಿತಾ ಶ್ರೀಧರ್, ಮಂಡಲ ಕಾರ್ಯದರ್ಶಿ ಆಶಾಲತಾ ನಾಯ್ಕ್, ಮಹಿಳಾ ಮೋರ್ಚಾ ಕಾರ್ಯದರ್ಶಿಗಳಾದ ರೋಹಿಣಿ ಪೈ, ನೇತ್ರಾವತಿ, ಶಾಂತಾ ಗೋಪಾಲಕೃಷ್ಣ, ಜಿಲ್ಲಾ ಪಂಚಾಯತ್ ನಿಕಟಪೂರ್ವ ಸದಸ್ಯೆ ಶ್ರೀಲತಾ ಸುರೇಶ್ ಶೆಟ್ಟಿ, ಪುರಸಭಾ ಸದಸ್ಯೆ ಪುಷ್ಪಾ ಶೇಟ್, ಮಂಡಲ ಯುವಮೋರ್ಚಾ ಉಪಾಧ್ಯಕ್ಷ ಅಭಿಷೇಕ ಅಂಕದಕಟ್ಟೆ ಮತ್ತು ಪಕ್ಷದ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.

  • ಭಾರತೀಯ ಜನತಾ ಪಾರ್ಟಿ ಕುಂದಾಪುರ ಮಂಡಲ ವತಿಯಿಂದ ಪಂಡಿತ್ ದೀನದಯಾಳ್ ಉಪಾಧ್ಯಾಯರ ಜಯಂತಿ ಆಚರಣೆ

    ಭಾರತೀಯ ಜನತಾ ಪಾರ್ಟಿ ಕುಂದಾಪುರ ಮಂಡಲ ವತಿಯಿಂದ ಪಂಡಿತ್ ದೀನದಯಾಳ್ ಉಪಾಧ್ಯಾಯರ ಜಯಂತಿ ಆಚರಣೆ

    ಕುಂದಾಪುರ ಮಿರರ್ ಸುದ್ದಿ…

    ಕುಂದಾಪುರ :ಭಾರತೀಯ ಜನತಾ ಪಾರ್ಟಿ ಕುಂದಾಪುರ ಮಂಡಲ ವತಿಯಿಂದ ಇಂದು ಭಾರತೀಯ ಜನಸಂಘ ಸ್ಥಾಪಕರಾದ ಪಂಡಿತ್ ದೀನದಯಾಳ್ ಉಪಾಧ್ಯಾಯರ ಜಯಂತಿಯ ಪ್ರಯುಕ್ತ ಪಕ್ಷದ ಕಚೇರಿಯಲ್ಲಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ರಾಷ್ಟ್ರಕ್ಕಾಗಿ ಮುಡಿಪಾಗಿಟ್ಟ ಅವರ ಜೀವನ, ಅವರ ತ್ಯಾಗ ಬಲಿದಾನ, ಪಕ್ಷದ ಕಾರ್ಯಕರ್ತರಿಗೆ ಅವರು ಹಾಕಿಕೊಟ್ಟ ದಾರಿ, ಆದರ್ಶವನ್ನು ಸ್ಮರಿಸಿಕೊಳ್ಳುವುದರ ಮೂಲಕ ಅವರ ಜಯಂತಿಯನ್ನು ಆಚರಿಸಲಾಯಿತು.

    ಮಂಡಲ ಪ್ರಧಾನ ಕಾರ್ಯದರ್ಶಿ ಸುರೇಶ್ ಶೆಟ್ಟಿ ಗೋಪಾಡಿ, ಕಾರ್ಯದರ್ಶಿ ಆಶಾಲತಾ ನಾಯ್ಕ್, ಕುಂದಾಪುರ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ವಿಜಯ್ ಪೂಜಾರಿ, ಪುರಸಭಾ ಸದಸ್ಯರಾದ ಸಂತೋಷ್ ಶೆಟ್ಟಿ, ಶೇಖರ್ ಕುಂಚಾರುಬೆಟ್ಟು, ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಸೌರಭಿ ಪೈ, ಯುವಮೋರ್ಚಾ ಉಪಾಧ್ಯಕ್ಷ ಅಭಿಷೇಕ ಅಂಕದಕಟ್ಟೆ, ಸಾಮಾಜಿಕ ಜಾಲತಾಣ ಪ್ರಕೋಷ್ಠ ಸದಸ್ಯ ಸಂತೋಷ್ ಹಂಗಳೂರು, ಹಿರಿಯ ಮುಖಂಡರಾದ ಶೇಖರ್ ಕೈಪಾಡಿ, ರಮೇಶ್ ಚಿಕ್ಕನ್ ಸಾಲ್ ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

  • ಭಾರತೀಯ ಜನತಾ ಪಾರ್ಟಿ ಕುಂದಾಪುರ ಮಂಡಲ ಅಂಕದಕಟ್ಟೆ ವಾರ್ಡ್ ವತಿಯಿಂದ ಪಂಡಿತ್ ದೀನದಯಾಳ್ ಉಪಾಧ್ಯಾಯರ ಜಯಂತಿ ಆಚರಣೆ

    ಭಾರತೀಯ ಜನತಾ ಪಾರ್ಟಿ ಕುಂದಾಪುರ ಮಂಡಲ ಅಂಕದಕಟ್ಟೆ ವಾರ್ಡ್ ವತಿಯಿಂದ ಪಂಡಿತ್ ದೀನದಯಾಳ್ ಉಪಾಧ್ಯಾಯರ ಜಯಂತಿ ಆಚರಣೆ

    ಕುಂದಾಪುರ ಮಿರರ್ ಸುದ್ದಿ…

    ಕುಂದಾಪುರ :ಭಾರತೀಯ ಜನಸಂಘ ಸ್ಥಾಪಕರಾದ ಪಂಡಿತ್ ದೀನದಯಾಳ್ ಉಪಾಧ್ಯಾಯರ ಜಯಂತಿಯ ಪ್ರಯುಕ್ತ ಕುಂದಾಪುರ ಮಂಡಲ ಅಧ್ಯಕ್ಷ ಶಂಕರ ಅಂಕದಕಟ್ಟೆ ಅವರ ಸ್ವಬೂತ್ ನಲ್ಲಿ ಪಕ್ಷದ ಹಿರಿಯ ಕಾರ್ಯಕರ್ತರಾದ ಸದಾನಂದ ನಾಯ್ಕ್ ಅವರ ನಿವಾಸದಲ್ಲಿ ದೀನದಯಾಳ್ ಉಪಾಧ್ಯಾಯರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ರಾಷ್ಟ್ರಕ್ಕಾಗಿ ಮುಡಿಪಾಗಿಟ್ಟ ಅವರ ಜೀವನ, ಅವರ ತ್ಯಾಗ ಬಲಿದಾನ, ಪಕ್ಷದ ಕಾರ್ಯಕರ್ತರಿಗೆ ಅವರು ಹಾಕಿಕೊಟ್ಟ ದಾರಿ, ಆದರ್ಶವನ್ನು ಸ್ಮರಿಸಿಕೊಳ್ಳುವುದರ ಮೂಲಕ ಅವರ ಜಯಂತಿಯನ್ನು ಆಚರಿಸಲಾಯಿತು.

    ಕಾರ್ಯಕ್ರಮದಲ್ಲಿ ಬೂತ್ ಅಧ್ಯಕ್ಷರಾದ ಹರೀಶ್ ಪೂಜಾರಿ, ಕೋಟೇಶ್ವರ ಮಹಾಶಕ್ತಿ ಕೇಂದ್ರ ಅಧ್ಯಕ್ಷ ಕೃಷ್ಣ ಗೊಲ್ಲ, ಪ್ರಧಾನ ಕಾರ್ಯದರ್ಶಿ ನಾಗರಾಜ್ ಆಚಾರ್, ವಾರ್ಡ್ ಪಂಚಾಯತ್ ಸದಸ್ಯ ಲೋಕೇಶ್ ಅಂಕದಕಟ್ಟೆ, ಯುವಮೋರ್ಚಾ ಉಪಾಧ್ಯಕ್ಷ ಅಭಿಷೇಕ ಅಂಕದಕಟ್ಟೆ, ಸಾಮಾಜಿಕ ಜಾಲತಾಣ ಪ್ರಕೋಷ್ಠ ಸದಸ್ಯ ಸಂತೋಷ್ ಹಂಗಳೂರು, ಹಿರಿಯ ಕಾರ್ಯಕರ್ತರಾದ ಸದಾನಂದ ನಾಯ್ಕ್, ಗಿರೀಶ್ ಪೂಜಾರಿ ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

  • ಗಂಗೊಳ್ಳಿ: ನರೇಂದ್ರ ಮೋದಿಯವರ ಜನ್ಮ ದಿನಾಚರಣೆ ಪ್ರಯುಕ್ತ ಸೇವಾ ಪಾಕ್ಷಿಕ ಕಾರ್ಯಕ್ರಮದ ಅಂಗವಾಗಿ ಸಾರ್ವಜನಿಕರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ

    ಗಂಗೊಳ್ಳಿ: ನರೇಂದ್ರ ಮೋದಿಯವರ ಜನ್ಮ ದಿನಾಚರಣೆ ಪ್ರಯುಕ್ತ ಸೇವಾ ಪಾಕ್ಷಿಕ ಕಾರ್ಯಕ್ರಮದ ಅಂಗವಾಗಿ ಸಾರ್ವಜನಿಕರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ

    ಕುಂದಾಪುರ ‌ಮಿರರ್ ಸುದ್ದಿ…

    ಕುಂದಾಪುರ : ಭಾರತೀಯ ಜನತಾ ಪಾರ್ಟಿ ಬೈಂದೂರು ವಲಯದ ಆಶ್ರಯದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರ 72ನೇ ಜನ್ಮ ದಿನಾಚರಣೆ ಪ್ರಯುಕ್ತ ನಡೆಯುತ್ತಿರುವ ಸೇವಾ ಪಾಕ್ಷಿಕ ಕಾರ್ಯಕ್ರಮದ ಅಂಗವಾಗಿ ಸಾರ್ವಜನಿಕರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಉಡುಪಿ ಜಿಲ್ಲಾ ಆಸ್ಪತ್ರೆ ಸಹಯೋಗದೊಂದಿಗೆ ಗಂಗೊಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಶನಿವಾರ ಜರಗಿತು.

    ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಬೈಂದೂರು ಶಾಸಕ ಬಿ.ಎಂ.ಸುಕುಮಾರ್ ಶೆಟ್ಟಿ, ಪ್ರಧಾನಿ ನರೇಂದ್ರ ಮೋದಿಯವರು ವಿಶ್ವ ನಾಯಕರಾಗಿ ಗುರುತಿಸಿಕೊಂಡು, ದೇಶವನ್ನು ಅಭಿವೃದ್ಧಿ ಪಥದತ್ತ ಕೊಂಡೊಯಗುತ್ತಿದ್ದಾರೆ. ಜನರಿಗೆ ಉತ್ತಮ ಆರೋಗ್ಯ ನೀಡುವ ಉದ್ದೇಶದಿಂದ ಕೇಂದ್ರ ಮತ್ತು ರಾಜ್ಯ ಸರಕಾರಗಳು ಅನೇಕ ಯೋಜನೆಗಳ ಮೂಲಕ ಜನರಿಗೆ ಸೌಲಭ್ಯ ನೀಡುತ್ತಿದೆ. ಆನರು ಆರೋಗ್ಯದ ಬಗ್ಗೆ ಕಾಳಜಿಯನ್ನು ವಹಿಸಿ ಕಾಲಕಾಲಕ್ಕೆ ಆರೋಗ್ಯ ತಪಾಸಣೆ ಮಾಡಿಕೊಳ್ಳುತ್ತಿರಬೇಕು ಎಂದರು.

    ಬಿಜೆಪಿ ಬೈಂದೂರು ಮಂಡಲ ಅಧ್ಯಕ್ಷ ದೀಪಕಕುಮಾರ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಪ್ರಕಾಶ ಪೂಜಾರಿ ಜೆಡ್ಡು, ಗಂಗೊಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಅಮಿತಾ, ಕುಂದಾಪುರ ತಾಲೂಕು ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ಯಶಸ್ವಿನಿ, ಬಿಜೆಪಿ ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಹರೀಶ ಮೇಸ್ತ, ಗಂಗೊಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷ ಶ್ರೀನಿವಾಸ ಖಾರ್ವಿ, ಉಪಾಧ್ಯಕ್ಷೆ ಪ್ರೇಮಾ ಸಿ.ಪೂಜಾರಿ, ಗಂಗೊಳ್ಳಿ ಪ್ರಾಥಮಿಕ ಮೀನುಗಾರರ ಸಹಕಾರಿ ಸಂಘದ ಅಧ್ಯಕ್ಷ ಸದಾಶಿವ ಖಾರ್ವಿ ಬಿಜೆಪಿ ಬೈಂದೂರು ಮಂಡಲ ಮಹಿಳಾ ಮೋರ್ಚಾದ ಶಾಂತಿ ಖಾರ್ವಿ, ಅನಿತಾ ಆರ್.ಕೆ., ಗ್ರಾಪಂ ಸದಸ್ಯರು, ಬಿಜೆಪಿ ಮುಖಂಡರು, ಕಾರ್ಯಕರ್ತರು ಮತ್ತಿತರರು ಉಪಸ್ಥಿತರಿದ್ದರು.

    ಬಿಜೆಪಿ ತ್ರಾಸಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ರವಿ ಶೆಟ್ಟಿಗಾರ್ ಸ್ವಾಗತಿಸಿ ವಂದಿಸಿದರು.

  • ಪ್ರಶಿಕ್ಷಣ ವರ್ಗವು ಸೈದ್ಧಾಂತಿಕತೆಯನ್ನು ಬಲಿಷ್ಟಗೊಳಿಸುತ್ತದೆ – ಕುಯಿಲಾಡಿ ಸುರೇಶ್ ನಾಯ್ಕ್

    ಪ್ರಶಿಕ್ಷಣ ವರ್ಗವು ಸೈದ್ಧಾಂತಿಕತೆಯನ್ನು ಬಲಿಷ್ಟಗೊಳಿಸುತ್ತದೆ – ಕುಯಿಲಾಡಿ ಸುರೇಶ್ ನಾಯ್ಕ್

    ಕುಂದಾಪುರ ಮಿರರ್ ಸುದ್ದಿ…
    ಕುಂದಾಪುರ: ಬಿಜೆಪಿ ಜಿಲ್ಲಾ ಎಸ್ಸಿ ಮೋರ್ಚಾದ ವತಿಯಿಂದ ಇಲ್ಲಿನ ಕೆಜಿಎನ್ ಫಾರ್ಮ್ ಹೌಸ್‌ನಲ್ಲಿ ಆಯೋಜಿಸಿದ ಜಿಲ್ಲಾ ಪ್ರಶಿಕ್ಷಣ ವರ್ಗದ ಉದ್ಘಾಟನಾ ಸಮಾರಂಭ ಶನಿವಾರ ನಡೆಯಿತು.

    ಉದ್ಘಾಟಿಸಿದ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಮಾತನಾಡಿ, ಪ್ರಶಿಕ್ಷಣವು ವಿಶಿಷ್ಟವಾದ ಕೆಲಸ. ಪಕ್ಷದ ತತ್ವ, ಸಿದ್ಧಾಂತ, ಇತಿಹಾಸ, ಸಾಗಿ ಬಂದ ಹೋರಾಟದ ಬಗ್ಗೆ ತಿಳಿಸಿಕೊಡುವ ಕಾರ್‍ಯ ಇಲ್ಲಿ ಆಗಲಿದೆ. ಕಾರ್‍ಯಕರ್ತರು ಪಕ್ಷದ ಆಚಾರ-ವಿಚಾರಗಳನ್ನು ತಿಳಿದುಕೊಳ್ಳಲು, ಉನ್ನತ ತರಬೇತಿಯನ್ನು ಪಡೆದು, ನಾಯಕತ್ವ ಗುಣಗಳನ್ನು ಬೆಳೆಸಿಕೊಳ್ಳಲು ಇದು ಸಹಕಾರಿ. ಆ ಮೂಲಕ ಪಕ್ಷದ ಬಲವ‘ನೆಗೆ ಎಲ್ಲರೂ ಶ್ರಮಿಸೋಣ ಎಂದರು.

    ಬಿಜೆಪಿ ಕುಂದಾಪುರ ಮಂಡಲದ ಅಧ್ಯಕ್ಷ ಶಂಕರ ಅಂಕದಕಟ್ಟೆ ಮಾತನಾಡಿದರು.

    ಈ ಸಂದರ್ಭದಲ್ಲಿ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ರಾಜ್ಯ ಎಸ್ಸಿ ಮೋರ್ಚಾದ ಕಾರ್‍ಯದರ್ಶಿ ಮಹೇಂದ್ರ ಕೌತಾಳ್, ಜಿಲ್ಲಾ ಎಸ್ಸಿ ಮೋರ್ಚಾ ಉಸ್ತುವಾರಿ ನಳಿನಿ ಪ್ರದೀಪ್, ಮಹಿಳಾ ಮೋರ್ಚಾ ರಾಜ್ಯ ಪ್ರಮುಖರಾದ ಶಿಲ್ಪಾ ಜಿ. ಸುವರ್ಣ, ರೇಷ್ಮಾ ಉದಯ ಕುಮಾರ್ ಶೆಟ್ಟಿ, ಕುಂದಾಪುರ ಎಸ್ಸಿ ಮೋರ್ಚಾ ಮಹೇಶ್ ಕಾಳಾವರ, ಮತ್ತಿತರರು ಉಪಸ್ಥಿತರಿದ್ದರು.

    ರಾಜ್ಯ ಎಸ್ಸಿ ಮೋರ್ಚಾ ಪ.ಕಾರ್‍ಯದರ್ಶಿ ದಿನಕರ ಬಾಬು ಪ್ರಾಸ್ತವಿಕವಾಗಿ ಮಾತನಾಡಿದರು. ಜಿಲ್ಲಾ ಎಸ್ಸಿ ಮೋರ್ಚಾ ಅಧ್ಯಕ್ಷ ಗೋಪಾಲ್ ಕಳಿಂಜಿ ಸ್ವಾಗತಿಸಿದರು.

  • ಬೈಂದೂರು ಬಿಜೆಪಿ ಯುವ ಮೋರ್ಚಾ ವತಿಯಿಂದ ಬೃಹತ್ ರಕ್ತದಾನ ಶಿಬಿರ

    ಬೈಂದೂರು ಬಿಜೆಪಿ ಯುವ ಮೋರ್ಚಾ ವತಿಯಿಂದ ಬೃಹತ್ ರಕ್ತದಾನ ಶಿಬಿರ

    ಕುಂದಾಪುರ ಮಿರರ್ ಸುದ್ದಿ…

    ಬೈಂದೂರು : ಬಿಜೆಪಿ ಯುವ ಮೋರ್ಚಾ, ಬೈಂದೂರು ಬಿಜೆಪಿ ಮಂಡಲ ವತಿಯಿಂದ ಪ್ರಧಾನಿ ನರೇಂದ್ರ ಮೋದಿ ಅವರ 72ನೇ ಜನ್ಮದಿನಾಚರಣೆ ಅಂಗವಾಗಿ ಸೇವಾ ಪಾಕ್ಷಿಕ ಆಶ್ರಯದಲ್ಲಿ ಜಿಲ್ಲಾ ಆಸ್ಪತ್ರೆಯ ಸಹಯೋಗದೊಂದಿಗೆ “ಬೃಹತ್ ರಕ್ತದಾನ ಶಿಬಿರ” ಗುರುವಾರ ಬೈಂದೂರು ಬಂಟರ ಸಮುದಾಯದ ಭವನದಲ್ಲಿ ನಡೆಯಿತು.

    ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕುತ್ಯಾರು ನವೀನ್ ಶೆಟ್ಟಿ ಉದ್ಘಾಟಿಸಿ, ಮಾತನಾಡಿ, ಪ್ರಧಾನಿ ನರೇಂದ್ರ ಮೋದಿಯವರು ದೇಶ ಕಂಡ ಒಬ್ಬ ಅಪ್ರತೀಮ ಧಿಮಂತ ನಾಯಕ ಭಾರತ ಅವರ ನಾಯಕತ್ವದಲ್ಲಿ ಜಗತ್ತಿನ ಒಂದು ಬಲಿಷ್ಟ ರಾಷ್ಟ್ರವಾಗಿ ಹೊರಹೊಮ್ಮುತ್ತಿದೆ, ಅವರ ಹುಟ್ಟು ಹಬ್ಬದ ಪ್ರಯುಕ್ತ ಪಕ್ಷವು ವಿವಿಧ ಸಮಾಜ ಸೇವಾ ಕಾರ್ಯಗಳನ್ನು ರಾಜ್ಯಾದ್ಯಾಂತ ಹಮ್ಮಿಕೊಂಡಿದೆ. ಇಡೀ ವಿಶ್ವವೇ ಇಂದು ಭಾರತಕಡೆಗೆ ತಿರುಗಿ ನೋಡುತ್ತಿದೆ ಎಂದರೆ ಅದಕ್ಕೆ ಮೋದಿಜಿ ಅವರು ನಡೆಸಿರುವ ಉತ್ತಮ ಆಡಳಿ ಕಾರ್ಯವೇ ಕಾರಣವಾಗಿ ಅಂತಹ ದೇವತಾ ಪುರುಷ ಮಹಾನ್ ವ್ಯಕ್ತಿಯ ಜನ್ಮದಿನದಂದು ಬಿಜೆಪಿ ಕಾರ್ಯಕರ್ತರು ರಕ್ತದಾನ ಶಿಬಿರ ಆಯೋಜಿಸಿ ಯಶಸ್ವಿಗೆ ಮುಂದಾಗಿರುವದು ಸಂತಸ ಪಡುವಂತಾಗಿದೆ. ಮುಂದಿನ ದಿನಗಳಲ್ಲಿ ಬಿಜೆಪಿ ಪಕ್ಷದ ಇನ್ನಷ್ಟು ಗಟ್ಟಿಯಾಗಿ ನೆಲೆಯೂರಲಿ ಮೋದಿಜಿ ಅವರ ಕೊಡುಗೆ ದೇಶಕ್ಕೆ ಇನ್ನಷ್ಟು ಲಭಿಸಲಿ ಎಂದು ಹೇಳಿದರು.

    ಬೈಂದೂರು ಬಿಜೆಪಿ ಮಂಡಲ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ ರಕ್ತದಾನ ಶಿಬಿರದ ಅಧ್ಯಕ್ಷತೆ ವಹಿಸಿ ಮಾತನಾಡಿ, ಅನ್ನದಾನ, ವಿದ್ಯಾದಾನ, ನೇತ್ರದಾನ ಹಾಗೂ ರಕ್ತದಾನವು ಅತಂತ್ಯ ಶ್ರೇಷ್ಠವಾದ ಕಾರ್ಯಗಳಾಗಿವೆ. ಪ್ರತಿಯೊಬ್ಬರು ಇಂತಹ ಪ್ರವೃತ್ತಿಯನ್ನು ಬೆಳೆಸಿಕೊಂಡಾಗ ಮಾತ್ರ ಬದುಕು ಸಾರ್ಥಕವಾಗುತ್ತದೆ ಎಂದರು.

    ಈ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಆನಂದ ಖಾರ್ವಿ ಉಪ್ಪುಂದ, ಜಿಲ್ಲಾ ಪ್ರಧಾನ ಖಂಜಾಚಿ ಪ್ರವೀಣ್ ಶೆಟ್ಟಿ, ಜಿಲ್ಲಾ ಕಾರ್ಯದರ್ಶಿ ರವೀಂದ್ರ ಮಡಿವಾಳ, ಸವಿತಾ ಕೋಟ್ಯಾನ್, ರಾಜ್ಯ ಬಿಜೆಪಿ ಯುವ ಮೋರ್ಚಾ ಕಾರ್ಯಕಾರಿಣಿ ಸದಸ್ಯ ಪ್ರಜ್ವಲ್ ಶೆಟ್ಟಿ ಕಾಲ್ತೋಡು, , ಜಿಲ್ಲಾ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶರತ್ ಶೆಟ್ಟಿ ಉಪ್ಪುಂದ, ಜಿಲ್ಲಾ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಪ್ರಮೀಳಾ ಹರೀಶ್,ಮಂಡಲದ ಉಪಾಧ್ಯಕ್ಷ, ವಿನೋದ್ ಭಂಡಾರಿ ಗುಜ್ಜಾಡಿ, ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಇದ್ದರು‌.

    ಬೈಂದೂರು ಮಂಡಲ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಅನುರ್ ಮೆಂಡನ್ ಸ್ವಾಗತಿಸಿದರು,
    ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ಪ್ರಿಯದರ್ಶಿನಿ ಬೆಸ್ಕೂರು ಕಾರ್ಯಕ್ರಮ ನಿರೂಪಿಸಿದರು. ಯುವ ಮೋರ್ಚಾ ಉಪಾಧ್ಯಕ್ಷ ಲೋಹಿತ್ ಶೆಟ್ಟಿ ವಂದಿಸಿದರು.

    ನೂರಕ್ಕೂ ಅಧಿಕ ರಕ್ತದಾನಿಗಳು ರಕ್ತದಾನ ಶಿಬಿರದಲ್ಲಿ ಭಾಗವಹಿಸಿದ್ದರು.

  • ಕುಂದಾಪುರ :ಪ್ರಧಾನಿ ಮೋದಿಯವರ ಆಶಯದಂತೆ ಹುಟ್ಟುಹಬ್ಬ ಆಚರಣೆ ಅರ್ಥಪೂರ್ಣ – ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ

    ಕುಂದಾಪುರ :ಪ್ರಧಾನಿ ಮೋದಿಯವರ ಆಶಯದಂತೆ ಹುಟ್ಟುಹಬ್ಬ ಆಚರಣೆ ಅರ್ಥಪೂರ್ಣ – ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ

    ಕುಂದಾಪುರ ಮಿರರ್ ಸುದ್ದಿ…

    ಕುಂದಾಪುರ: ಮೊದಲ ಪ್ರಧಾನಿ ನೆಹರು ಜನ್ಮ ದಿನವನ್ನು ಮಕ್ಕಳ ದಿನಾಚರಣೆ, ಮಾಜಿ ರಾಷ್ಟ್ರಪತಿ ರಾಧಕೃಷ್ಣನ್ ಜನ್ಮ ದಿನವನ್ನು ಶಿಕ್ಷಕರ ದಿನಾಚರಣೆಯನ್ನಾಗಿ ಆಚರಿಸಲಾಗುತ್ತಿದ್ದು, ಅದೇ ರೀತಿ ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬವನ್ನು ಅವರದೇ ಆಶಯದಂತೆ ರಕ್ತದಾನ, ಆರೋಗ್ಯ ಶಿಬಿರ, ಬಡವರಿಗೆ ನೆರವಾಗುವಂತಹ ಸೇವಾ ಕಾರ್‍ಯಕ್ರಮವನ್ನಾಗಿ ಆಚರಿಸಲಾಗುತ್ತಿರುವುದು ಉತ್ತಮ ಕಾರ್‍ಯ. ರಕ್ತದಾನ ಮಹತ್ತರವಾದ ಕಾರ್‍ಯ ಎಂದು ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಹೇಳಿದರು.

    ಅವರು ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಪ್ರಯುಕ್ತ ಬಿಜೆಪಿ ಕುಂದಾಪುರ ಮಂಡಲ, ಯುವ ಮೋರ್ಚಾ ಕುಂದಾಪುರದ ವತಿಯಿಂದ ಸೇವಾ ಪಾಕ್ಷಿಕದ ಅಂಗವಾಗಿ ಭಾರತೀಯ ರೆಡ್‌ಕ್ರಾಸ್ ಸೊಸೈಟಿ ಕುಂದಾಪುರ ಘಟಕದ ಸಹಯೋಗದಲ್ಲಿ ಇಲ್ಲಿನ ರಕ್ತನಿಧಿ ಕೇಂದ್ರದಲ್ಲಿ ಆಯೋಜಿಸಿದ ಬೃಹತ್ ರಕ್ತದಾನ ಶಿಬಿರವನ್ನು ಉದ್ಘಾಟಿಸಿ, ಮಾತನಾಡಿದರು.

    ಆರೋಗ್ಯ, ವಿಜ್ಞಾನ, ತಂತ್ರಜ್ಞಾನ ಕ್ಷೇತ್ರ ಸೇರಿದಂತೆ ಎಲ್ಲ ರಂಗದಲ್ಲೂ ಅನೇಕ ಪ್ರಗತಿಯಾಗುತ್ತಿದ್ದು, ಆದರೆ ರಕ್ತಕ್ಕೆ ಪರ್ಯಾಯ ರಕ್ತವೇ ಹೊರತು ಬೇರೆ ಯಾವುದು ಕೊಡಲು ಸಾಧ್ಯವಿಲ್ಲ. ರಕ್ತದಾನದ ಬಗ್ಗೆ ಎಲ್ಲರಲ್ಲಿಯೂ ಜಾಗೃತಿ ಮೂಡುತ್ತಿದ್ದು, ಅದು ಇನ್ನಷ್ಟು ಹೆಚ್ಚಾಗಬೇಕಿದೆ ಎಂದ ಅವರು, ಕುಂದಾಪುರದ ರೆಡ್‌ಕ್ರಾಸ್ ಘಟಕ ನಿರಂತರವಾಗಿ ಅನೇಕ ಸೇವಾ ಕಾರ್‍ಯಗಳನ್ನು ಮಾಡುತ್ತಿದ್ದು, ಇಲ್ಲಿನ ಕಟ್ಟಡ ಬಾಡಿಗೆ ವಿಚಾರಕ್ಕೆ ಸಂಬಂಧಿಸಿದಂತೆ ಸಮಿತಿ ಸಭೆಯಲ್ಲಿ ಪ್ರಸ್ತಾವಿಸಿ, ಸೂಕ್ತ ಪರಿಹಾರ ಕಂಡುಕೊಳ್ಳಲು ಪ್ರಯತ್ನಿಸುವುದಾಗಿ ಶಾಸಕರು ಇದೇ ವೇಳೆ ಭರವಸೆ ನೀಡಿದರು.

    ಅಧ್ಯಕ್ಷತೆ ವಹಿಸಿದ್ದ ಕುಂದಾಪುರ ರೆಡ್‌ಕ್ರಾಸ್ ಘಟಕದ ಅಧ್ಯಕ್ಷ ಎಸ್. ಜಯಕರ ಶೆಟ್ಟಿ ಮಾತನಾಡಿ, ನಮ್ಮ ಈ ಘಟಕದ ಆಶ್ರಯದಲ್ಲಿ ಬೇರೆ ಬೇರೆ ಕಡೆಗಳಲ್ಲಿ ವರ್ಷಕ್ಕೆ ೭೫-೮೦ ರಕ್ತದಾನ ಶಿಬಿರ ನಡೆಯುತ್ತಿದೆ. ೧೦ ಸಾವಿರಕ್ಕೂ ಅಽಕ ಯೂನಿಟ್ ರಕ್ತವನ್ನು ಸಂಗ್ರಹವಾಗುತ್ತಿದೆ. ಇಲ್ಲಿರುವ ಜನೌಷಽ ಕೇಂದ್ರದಲ್ಲೂ ದಿನಕ್ಕೆ ೪೦೦-೫೦೦ ಮಂದಿ ಪ್ರಯೋಜನ ಪಡೆಯುವಂತಾಗಿದೆ ಎಂದವರು ಹೇಳಿದರು.

    ಪ್ರಧಾನಿ ನರೇಂದ್ರ ಮೋದಿಯವರ ಜನ್ಮ ದಿನದ ಅಂಗವಾಗಿ ಬಿಜೆಪಿ ವತಿಯಿಂದ ಸೇವಾ ಪಾಕ್ಷಿಕ ಕಾರ್‍ಯಕ್ರಮದಡಿ ರಕ್ತದಾನ, ಸ್ವಚ್ಛತಾ ಕಾರ್‍ಯಕ್ರಮ, ಅಂಗನವಾಡಿ ದತ್ತು ಕಾರ್‍ಯಕ್ರಮ ಸಹಿತ ಅ.೨ ರವರೆಗೆ ನಿರಂತರ ಸಮಾಜಮುಖಿ ಕಾರ್‍ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ಮಂಡಲದ ಅಧ್ಯಕ್ಷ ಶಂಕರ ಅಂಕದಕಟ್ಟೆ ತಿಳಿಸಿದರು.

    ರಾಜ್ಯ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಉಪಾಧ್ಯಕ್ಷ ಕಿರಣ್ ಕುಮಾರ್ ಕೊಡ್ಗಿ, ಕುಂದಾಪುರ ಪುರಸಭಾಧ್ಯಕ್ಷೆ ವೀಣಾ ಭಾಸ್ಕರ್ ಮೆಂಡನ್, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ವಿಜಯ ಎಸ್. ಪೂಜಾರಿ, ಬಿಜೆಪಿ ಯುವ ಮೋರ್ಚಾ ರಾಜ್ಯ ಕಾರಣಿ ಸದಸ್ಯ ಪ್ರಜ್ವಲ್, ಜಿಲ್ಲಾ ಪ್ರ.ಕಾರ್‍ಯದರ್ಶಿ ಸದಾನಂದ ಉಪ್ಪಿನಕುದ್ರು, ರೆಡ್‌ಕ್ರಾಸ್ ಘಟಕದ ಪದಾಧಿಕಾರಿಗಳು, ಸಿಬಂದಿ ಉಪಸ್ಥಿತರಿದ್ದರು.

    ಬಿಜೆಪಿ ಪಕ್ಷದ ಮುಖಂಡರು, ಪದಾಧಿಕಾರಿಗಳು, ಕಾರ್‍ಯಕರ್ತರು, ಕಾಲೇಜು ವಿದ್ಯಾರ್ಥಿಗಳು, ಸಾರ್ವಜನಿಕರು ರಕ್ತದಾನ ಶಿಬಿರದಲ್ಲಿ ಪಾಲ್ಗೊಂಡಿದ್ದರು.

  • ಕುಂದಾಪುರ :ಸೆ.17ರಿಂದ ಅ.2ರ ತನಕ ಬಿಜೆಪಿ ಸೇವಾ ಪಾಕ್ಷಿಕ ಅಭಿಯಾನ

    ಕುಂದಾಪುರ :ಸೆ.17ರಿಂದ ಅ.2ರ ತನಕ ಬಿಜೆಪಿ ಸೇವಾ ಪಾಕ್ಷಿಕ ಅಭಿಯಾನ

    ಕುಂದಾಪುರ ಮಿರರ್ ಸುದ್ದಿ…
    ಕುಂದಾಪುರ :ದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಅಪ್ರತಿಮ ನಾಯಕತ್ವದಲ್ಲಿ ಉತ್ತಮ ಆಡಳಿತ ಮತ್ತು ಬಡವರ ಕಲ್ಯಾಣಕ್ಕೆ ಬದ್ಧವಾಗಿದೆ. ಭಾರತೀಯ ಜನತಾ ಪಕ್ಷವೂ ಕೂಡಾ ಸೇವಾ ಚಟುವಟಿಕೆಗಳ ಮೂಲಕ ಜನರಿಗೆ ಸ್ಪಂದಿಸುವ ಕಾರ್ಯ ಮಾಡುತ್ತಿದ್ದು ಭಾರತೀಯ ಜನತಾ ಪಕ್ಷದ ನೇತೃತ್ವದಲ್ಲಿ ಸೆಪ್ಟೆಂಬರ್ 17ರಿಂದ ಅಕ್ಟೋಬರ್ 2ರ ತನಕ ಸೇವಾ ಪಾಕ್ಷಿಕ ಅಭಿಯಾನವನ್ನು ನಡೆಸಲಿದೆ ಎಂದು ಸೇವಾ ಪಾಕ್ಷಿಕ ಅಭಿಯಾನದ ವಕ್ತಾರ ರಾಘವೇಂದ್ರ ಕಿಣಿ ತಿಳಿಸಿದರು.

    ಅವರು ಗುರುವಾರ ಕುಂದಾಪುರದ ಬಿಜೆಪಿ ಮಂಡಲ ಕಛೇರಿ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದರು.


    ಸೆ.17 ಪ್ರಧಾನಿ ನರೇಂದ್ರ ಮೋದಿಯವರ ಜನ್ಮದಿನ, ಸೆ.25 ಪಕ್ಷದ ಸಂಸ್ಥಾಪಕರಲ್ಲೊಬ್ಬರಾದ ಪಂಡಿತ್ ದೀನದಯಾಳ್ ಉಪಾಧ್ಯಾಯರ ಜನ್ಮದಿನ, ಅ.2 ಮಹಾತ್ಮಾ ಗಾಂಧಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರೀಯವರ ಜನ್ಮದಿನಕ್ಕೆ ಪೂರಕವಾ ಸೆ.17 ಮತ್ತು 18ರಂದು ರಕ್ತದಾನ ಶಿಬಿರ 80 ಕಡೆಗಳಲ್ಲಿ ನಡೆಯಲಿದೆ. ಸೆ.17ರಿಂದ ಅ.2 ಜೀವರಕ್ಷಕ ಅಭಿಯಾನ, ಸೆ.20-21 ಪ್ರಧಾನಿ ನರೇಂದ್ರ ಮೋದಿಯವರ ಜೀವನ ಚರಿತ್ರೆಯ ಪ್ರದರ್ಶಿನಿ, ಸೆ.21-22 ಆರೋಗ್ಯ ತಪಾಸಣಾ ಶಿಬಿರ, ಸೆ.22-23 ಅರಳಿ ಗಿಡ ನೆಡುವ ಅಭಿಯಾನ, ಸೆ.24-25 ಕಮಲೋತ್ಸವ, ಸೆ.25-29 ಫಲಾನುಭವಿಗಳ ಸಭೆ ಹಾಗೂ ನೋಂದಣಿ ಅಭಿಯಾನ, ಸೆ.26-27 ಅಮೃತ ಸರೋವರ ನಿರ್ಮಾಣ, ಸೆ.28-29 ಅಂಗನವಾಡಿ ಸೇವಾ ದಿವಸ್, ಸೆ.30 ಶಾಲಾ ಮಕ್ಕಳಿಗೆ ಬ್ಯಾಗ್ ವಿತರಣಾ ಅಭಿಯಾನ, ಅ.2ರಂದು ಸ್ವಚ್ಛತಾ ಅಭಿಯಾನ, ಮತ್ತು ಖಾದಿ ಉತ್ಸವ ನಡೆಯಲಿದೆ ಎಂದರು.

    ಬಿಜೆಪಿ ಕುಂದಾಪುರ ಮಂಡಲದ ಅಧ್ಯಕ್ಷರಾದ ಶಂಕರ ಅಂಕದಕಟ್ಟೆ ಮಾತನಾಡಿ, ಸೆ.17ರಂದು ಕುಂದಾಪುರ ಮಂಡಲದ ವತಿಯಿಂದ ರೆಡ್‍ಕ್ರಾಸ್ ಕುಂದಾಪುರ ಸಹಕಾರದಲ್ಲಿ ರಕ್ತದಾನ ಶಿಬಿರ, ಸೆ.20ರಂದು ಮಹಿಳಾ ಮೋರ್ಚಾ ವತಿಯಿಂದ ಅಂಗನವಾಡಿ ದತ್ತು ಸ್ವೀಕಾರ ಕಾರ್ಯಕ್ರಮ, ಸೆ.22ರಂದು ಹಿಂದುಳಿದ ವರ್ಗಗಳ ಮೋರ್ಚಾದ ವತಿಯಿಂದ ಚಿಕನ್‍ಸಾಲ್ ಸ.ಪ್ರಾ.ಶಾಲಾ ವಠಾರದಲ್ಲಿ ಅರಳಿ ಗಿಡ ನೆಡುವ ಕಾರ್ಯಕ್ರಮ, ಸೆ.24ರಂದು ಕೋಟೇಶ್ವರ ಕೋಟಿಲಿಂಗೇಶ್ವರ ಕೆರೆ ಸ್ವಚ್ಛತಾ ಕಾರ್ಯಕ್ರಮ, ಸೆ.25ರಂದು ಎಸ್.ಟಿ ಮೋರ್ಚಾ ಹಾಗೂ ಅಲ್ಪಸಂಖ್ಯಾತ ಮೋರ್ಚಾ ವತಿಯಿಂದ ಕುಂದಾಪುರ ಬೀಚ್ ಸ್ವಚ್ಛತಾ ಕಾರ್ಯಕ್ರಮ, ಸೆ.30ರಂದು ಎಸ್.ಸಿ ಮೋರ್ಚಾ ವತಿಯಿಂದ ಆರೋಗ್ಯ ತಪಾಸಣೆ ಹಾಗೂ ಅಭಾ ಕಾರ್ಡ್ ನೊಂದಣಿ ಕಾರ್ಯಕ್ರಮ, ಅ.2ರಂದು ಕುಂದಾಪುರ ವಿಧಾನಸಭಾ ಕ್ಷೇತ್ರದ 222 ಬೂತ್‍ಗಳಲ್ಲಿ ಸ್ವಚ್ಛತಾ ಕಾರ್ಯಕ್ರಮ ನಡೆಯಲಿದೆ ಎಂದರು.
    ಸುದ್ಧಿಗೋಷ್ಠಿಯಲ್ಲಿ ಅಭಿಯಾನದ ಶಿವಕುಮಾರ್, ಪ್ರತಾಪಚಂದ್ರ ಚೇರ್ಕಾಡಿ, ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಸದಾನಂದ ಬಳ್ಕೂರು, ಕುಂದಾಪುರ ಮಂಡಲದ ಕಾರ್ಯದರ್ಶಿ ಸುರೇಶ್ ಶೆಟ್ಟಿ, ಮಾಧ್ಯಮ ಸಂಚಾಲಕ ಅಭಿಷೇಕ್, ಕುಂದಾಪುರ ಮಂಡಲದ ಪ್ರಧಾನ ಕಾರ್ಯದರ್ಶಿ ಸತೀಶ್ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು.