Category: ರಾಜಕೀಯ

  • ಕುಂದಾಪುರ: ಮಹಾಶಕ್ತಿ ಕೇಂದ್ರ ಕುಂದಾಪುರ ನಗರದ ಕಾರ್ಯಕಾರಿಣಿ ಸಭೆ

    ಕುಂದಾಪುರ: ಮಹಾಶಕ್ತಿ ಕೇಂದ್ರ ಕುಂದಾಪುರ ನಗರದ ಕಾರ್ಯಕಾರಿಣಿ ಸಭೆ

    ಕುಂದಾಪುರ ಮಿರರ್ ಸುದ್ದಿ…

    ಕುಂದಾಪುರ: ಭಾರತೀಯ ಜನತಾ ಪಕ್ಷ ಕುಂದಾಪುರ ನಗರ ಮಹಾಶಕ್ತಿ ಕೇಂದ್ರದ ಕಾರ್ಯಕಾರಿಣಿ ಸಭೆ ಪಕ್ಷದ ಕಚೇರಿಯಲ್ಲಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ರಾಜೇಶ್ ಕಡ್ಗಿಮನೆ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.

    ಸಭೆಯಲ್ಲಿ ಚುನಾವಣೆ ದೃಷ್ಟಿಯಿಂದ ಪಕ್ಷ ಸಂಘಟನೆ ಬೂತ್ ಮಟ್ಟದಲ್ಲಿ ಬಲಪಡಿಸಿ ಸಶಕ್ತ ಬೂತ್ ಸಧೃಡ ಭಾರತ ಎಂಬ ಪಕ್ಷದ ಸಂಕಲ್ಪವನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ಪದಾಧಿಕಾರಿಗಳು, ಕಾರ್ಯಕರ್ತರು ಕಾರ್ಯಪ್ರವೃತ್ತರಾಗುವ ಬಗ್ಗೆ, ಬೂತ್ ಮಟ್ಟದಲ್ಲಿ ಸರ್ಕಾರದ ವಿವಿಧ ಯೋಜನೆಯನ್ನು ಮನೆ ಮನೆಗೆ ತಲುಪಿಸುವ ನಿಟ್ಟಿನಲ್ಲಿ ಕಾರ್ಯಕರ್ತರು, ಸ್ಥಳೀಯ ಜನಪ್ರತಿನಿಧಿಗಳು ನಿರಂತರವಾಗಿ ಸಾರ್ವಜನಿಕರ ಸಂಪರ್ಕದಲ್ಲಿರುವ ಬಗ್ಗೆ ಚರ್ಚೆ ನಡೆಸಲಾಯಿತು.

    ಸಭೆಯಲ್ಲಿ ಮಂಡಲ ಅಧ್ಯಕ್ಷರಾದ ಶಂಕರ ಅಂಕದಕಟ್ಟೆ, ಮಂಡಲ ಪ್ರಭಾರಿ ಬೈಕಾಡಿ ಸುಪ್ರಸಾದ್ ಶೆಟ್ಟಿ, ಮಂಡಲ ಪ್ರಧಾನ ಕಾರ್ಯದರ್ಶಿ ಸತೀಶ್ ಪೂಜಾರಿ, ಮಹಾಶಕ್ತಿ ಕೇಂದ್ರ ಪ್ರಧಾನ ಕಾರ್ಯದರ್ಶಿ ಶಿವಕುಮಾರ್ ಮೆಂಡನ್, ಹಿಂದುಳಿದ ವರ್ಗಗಳ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅರುಣ್ ಬಾಣ, ನಗರ ಪ್ರಾಧಿಕಾರದ ಅಧ್ಯಕ್ಷ ವಿಜಯ್ ಎಸ್ ಪೂಜಾರಿ, ಪುರಸಭೆ ಉಪಾಧ್ಯಕ್ಷ ಸಂದೀಪ್ ಖಾರ್ವಿ, ಸ್ಥಾಯಿ ಸಮಿತಿ ಅಧ್ಯಕ್ಷ ಗಿರೀಶ್ ಜಿಕೆ, ಪಕ್ಷದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

    ಪುರಸಭೆ ಸ್ಥಾಯಿ ಸಮಿತಿ ಸದಸ್ಯರಾದ ರತ್ನಾಕರ ಶೇರಿಗಾರ್ ಕಾರ್ಯಕ್ರಮ ನಿರೂಪಿಸಿದರು, ಮಂಡಲ ಕಾರ್ಯದರ್ಶಿ ಸುರೇಂದ್ರ ಸಂಗಮ್ ವಂದೇ ಮಾತರಂ ಗೀತೆ ಹಾಡಿದರು.

  • ಭಾರತೀಯ ಸಂಸ್ಕೃತಿ ಮತ್ತು ರಾಷ್ಟ್ರೀಯತೆ ನಮ್ಮ ಮೂಲತತ್ವ: ಬೈಕಾಡಿ ಸುಪ್ರಸಾದ್ ಶೆಟ್ಟಿ

    ಭಾರತೀಯ ಸಂಸ್ಕೃತಿ ಮತ್ತು ರಾಷ್ಟ್ರೀಯತೆ ನಮ್ಮ ಮೂಲತತ್ವ: ಬೈಕಾಡಿ ಸುಪ್ರಸಾದ್ ಶೆಟ್ಟಿ

    ಕುಂದಾಪುರ ಮಿರರ್ ಸುದ್ದಿ…

    ಕುಂದಾಪುರ: ಭಾರತೀಯ ಜನತಾ ಪಾರ್ಟಿಯು ಕಾರ್ಯಕರ್ತರ ಆಧಾರಿತ ಸಂಘಟನೆಯಾಗಿದ್ದು ದೇಶಭಕ್ತಿ ಮತ್ತು ರಾಷ್ಟ್ರವಾದಿ ರಾಜಕಾರಣವನ್ನು ಮಾಡಿ ವ್ಯಕ್ತಿ ನಿರ್ಮಾಣದಿಂದ ರಾಷ್ಟ್ರನಿರ್ಮಾಣದ ತತ್ವವನ್ನು ನಂಬಿಕೊಂಡು ಭಾರತೀಯ ಸಂಸ್ಕೃತಿ ಮತ್ತು ರಾಷ್ಟ್ರೀಯತೆಯ ಮೂಲ ತತ್ವದ ಆಧಾರದಲ್ಲಿ ರಾಜಕಾರಣ ಮಾಡುವ ಪಕ್ಷ ನಮ್ಮದು ಎಂದು ಜಿಲ್ಲಾ ಉಪಾಧ್ಯಕ್ಷರು ಕುಂದಾಪುರ ಮಂಡಲದ ಪ್ರಭಾರಿ ಬೈಕಾಡಿ ಸುಪ್ರಸಾದ್ ಶೆಟ್ಟಿ ಅಭಿಪ್ರಾಯ ವ್ಯಕ್ತಪಡಿಸಿದರು.

    ತೆಕ್ಕಟ್ಟೆಯ ಸುಧೀಂಧ್ರ ತೀರ್ಥ ಸಭಾಭವನದಲ್ಲಿ ನಡೆದ ಕುಂದಾಪುರ ಮಂಡಲದ ವಿಶೇಷ ಕಾರ್ಯಕಾರಿಣಿಯಲ್ಲಿ ಮಾತನಾಡಿದ ಅವರು ಕುಂದಾಪುರ ವಿಧಾನಸಭಾ ಕ್ಷೇತ್ರ ಸಂಘಟನಾತ್ಮಕವಾಗಿ ರಾಜಕೀಯವಾಗಿ ಮತ್ತು ಸಾಮಾಜಿಕವಾಗಿ ಇಡೀ ರಾಜ್ಯಕ್ಕೆ ಮಾದರಿ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

    ಸಭೆಯನ್ನು ಕುಂದಾಪುರ ಶಾಸಕರಾದ ಹಾಲಾಡಿ ಶ್ರೀನಿವಾಸ ಶೆಟ್ಟಿಯವರು ಉದ್ಘಾಟಿಸಿದರು.

    ಕುಂದಾಪುರ ಮಂಡಲದ ಅಧ್ಯಕ್ಷರಾದ ಶಂಕರ ಅಂಕದಕಟ್ಟೆ ಅಧ್ಯಕ್ಷತೆಯನ್ನು ವಹಿಸಿದರು.

    ಕರ್ನಾಟಕ ರಾಜ್ಯ ಆಹಾರ ನಿಗಮ ಮಂಡಳಿಯ ಉಪಾಧ್ಯಕ್ಷರಾದ ಕಿರಣ್ ಕೊಡ್ಗಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸದಾನಂದ ಉಪ್ಪಿನಕುದ್ರು, ಹಿಂದುಳಿದ ವರ್ಗ ಮೋರ್ಚಾದ ರಾಜ್ಯ ಕಾರ್ಯದರ್ಶಿ ವಿಠಲ್ ಪೂಜಾರಿ, ಜಿಲ್ಲಾ ಕಾರ್ಯದರ್ಶಿ ಸದಾನಂದ ಬಳ್ಕೂರು, ಪರಿಶಿಷ್ಟ ಜಾತಿ ಮೋರ್ಚಾದ ಜಿಲ್ಲಾಧ್ಯಕ್ಷ ಗೋಪಾಲ್ ಕಳಂಜೆ, ತೆಕ್ಕಟ್ಟೆ ಶಕ್ತಿಕೇಂದ್ರದ ಅಧ್ಯಕ್ಷ ಕಿರಣ್ ಕುಮಾರ್ ಉಪಸ್ಥಿತರಿದ್ದರು.

    ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಸುರೇಶ್ ಶೆಟ್ಟಿ ಸ್ವಾಗತಿಸಿದರು, ಸತೀಶ್ ಪೂಜಾರಿ ವಕ್ವಾಡಿ ಕಾರ್ಯಕ್ರಮ ನಿರೂಪಿಸಿದರು, ಮಹಿಳಾ ಮೋರ್ಚಾ ಅಧ್ಯಕ್ಷೆ ರೂಪಾ ಪೈ ವಂದೇ ಮಾತರಂ ಗೀತೆ ಹಾಡಿ, ಮಂಡಲ ಕಾರ್ಯದರ್ಶಿ ಸುರೇಂದ್ರ ಕಾಂಚನ್ ಧನ್ಯವಾದ ಸಮರ್ಪಿಸಿದರು.

  • ಮಹಿಳಾ ಮೋರ್ಚಾ ಕಾರ್ಯಕಾರಿಣಿ ಸಭೆ

    ಮಹಿಳಾ ಮೋರ್ಚಾ ಕಾರ್ಯಕಾರಿಣಿ ಸಭೆ

    ಕುಂದಾಪುರ ಮಿರರ್ ಸುದ್ದಿ…
    ಕುಂದಾಪುರ : ಭಾರತೀಯ ಜನತಾ ಪಾರ್ಟಿ ಮಹಿಳಾ ಮೋರ್ಚಾ ಕುಂದಾಪುರ ಮಂಡಲದ ಕಾರ್ಯಕಾರಿಣಿ ಸಭೆ ಬಿಜೆಪಿ ಕಚೇರಿಯಲ್ಲಿ ಮಹಿಳಾ ಮೋರ್ಚಾ ಮಂಡಲ ಅಧ್ಯಕ್ಷೆ ರೂಪಾ ಪೈ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.

    ಸಭೆಯಲ್ಲಿ ಮಹಿಳಾ ಮೋರ್ಚಾದ ಕಾರ್ಯಗಳ ಬಗ್ಗೆ ಅವಲೋಕನ ನಡೆಸಲಾಯಿತು ಹಾಗೂ ಮುಂದಿನ ದಿನಗಳಲ್ಲಿ ಚುನಾವಣಾ ದೃಷ್ಟಿಯಿಂದ ಪಕ್ಷ ಸಂಘಟನೆ ಬಗ್ಗೆ ಮಹಿಳಾ ಮೋರ್ಚಾದ ಪಾತ್ರ ಮತ್ತು ಸರ್ಕಾರದ ವಿವಿಧ ಯೋಜನೆಯನ್ನು ಫಲಾನುಭವಿಗಳಿಗೆ ತಲುಪಿಸುವ ನಿಟ್ಟಿನಲ್ಲಿ ಕಾರ್ಯಕರ್ತರ ಕಾರ್ಯವೈಖರಿ ಬಗ್ಗೆ ಹಾಗೂ ಸಮಾಜದಲ್ಲಿ ಮಹಿಳೆಯರು ಉದ್ಯೋಗ ಶೀಲರಾಗುವ ನಿಟ್ಟಿನಲ್ಲಿ ಉದ್ಯೋಗ ಮಾಹಿತಿ ನೀಡುವ ಬಗ್ಗೆ ಚರ್ಚಿಸಲಾಯಿತು.

    ಸಭೆಯಲ್ಲಿ ಕುಂದಾಪುರ ಮಂಡಲ ಅಧ್ಯಕ್ಷ ಶಂಕರ ಅಂಕದಕಟ್ಟೆ, ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ವೀಣಾ ಎಸ್ ಶೆಟ್ಟಿ, ರಾಜ್ಯ ಆಹಾರ ನಿಗಮ ಮಂಡಳಿ ಉಪಾಧ್ಯಕ್ಷರಾದ ಕಿರಣ್ ಕೊಡ್ಗಿ, ಜಿಲ್ಲಾ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ರಶ್ಮಿತಾ ಶೆಟ್ಟಿ, ಕುಂದಾಪುರ ಮಂಡಲ ಪ್ರಭಾರಿ ಬೈಕಾಡಿ ಸುಪ್ರಸಾದ್ ಶೆಟ್ಟಿ, ಕುಂದಾಪುರ ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಸತೀಶ್ ಪೂಜಾರಿ ವಕ್ವಾಡಿ, ಸುರೇಶ್ ಶೆಟ್ಟಿ ಗೋಪಾಡಿ, ಕಾರ್ಯದರ್ಶಿ ಸುರೇಂದ್ರ ಸಂಗಮ್, ಹಿಂದುಳಿದ ವರ್ಗಗಳ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅರುಣ್ ಬಾಣ ಮತ್ತು ಮಹಿಳಾ ಮೋರ್ಚಾದ ವಿವಿಧ ಪದಾಧಿಕಾರಿಗಳು, ಜನಪ್ರತಿನಿಧಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

    ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಅನಿತಾ ಶ್ರೀಧರ್ ಕಾರ್ಯಕ್ರಮ ನಿರೂಪಿಸಿದರು. ಸೌರಭಿ ಪೈ ಮಹಿಳಾ ಮೋರ್ಚಾದ ಕಾರ್ಯವೈಖರಿಯ ವರದಿ ನೀಡಿದರು, ಉಪಾಧ್ಯಕ್ಷೆ ಅಮಿತಾ ರಾಜೇಶ್ ವಂದೇ ಮಾತರಂ ಗೀತೆ ಹಾಡಿದರು.

  • ಹಿಂದುಳಿದ ವರ್ಗಗಳ ಮೋರ್ಚಾ ಕುಂದಾಪುರ ಮಂಡಲದ ಕಾರ್ಯಕಾರಿಣಿ ಸಭೆ

    ಹಿಂದುಳಿದ ವರ್ಗಗಳ ಮೋರ್ಚಾ ಕುಂದಾಪುರ ಮಂಡಲದ ಕಾರ್ಯಕಾರಿಣಿ ಸಭೆ

    ಕುಂದಾಪುರ ಮಿರರ್ ಸುದ್ದಿ…

    ಕುಂದಾಪುರ: ಭಾರತೀಯ ಜನತಾ ಪಾರ್ಟಿ ಹಿಂದುಳಿದ ವರ್ಗಗಳ ಮೋರ್ಚಾ ಕುಂದಾಪುರ ಮಂಡಲದ ಕಾರ್ಯಕಾರಿಣಿ ಸಭೆ ಮಂಗಳವಾರದಂದು ಬಿಜೆಪಿ ಕಚೇರಿಯಲ್ಲಿ ಹಿಂದುಳಿದ ವರ್ಗಗಳ ಮೋರ್ಚಾ ಮಂಡಲ ಅಧ್ಯಕ್ಷರಾದ ಸತೀಶ್ ಬಾರಿಕೆರಿ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.

    ಸಭೆಯಲ್ಲಿ ಹಿಂದುಳಿದ ವರ್ಗಗಳ ಮೋರ್ಚಾದ ಕಾರ್ಯಗಳ ಬಗ್ಗೆ ಅವಲೋಕನ ನಡೆಸಲಾಯಿತು ಹಾಗೂ ಮುಂದಿನ ದಿನಗಳಲ್ಲಿ ಚುನಾವಣಾ ದೃಷ್ಟಿಯಿಂದ ಪಕ್ಷ ಸಂಘಟನೆ ಬಗ್ಗೆ, ಹಿಂದುಳಿದ ಮೋರ್ಚಾದ ಪಾತ್ರದ ಬಗ್ಗೆ ಮತ್ತು ಸರ್ಕಾರದ ವಿವಿಧ ಯೋಜನೆಯನ್ನು ಫಲಾನುಭವಿಗಳಿಗೆ ತಲುಪಿಸುವ ನಿಟ್ಟಿನಲ್ಲಿ ಕಾರ್ಯಕರ್ತರ ಕಾರ್ಯವೈಖರಿ ಬಗ್ಗೆ ಚರ್ಚಿಸಲಾಯಿತು.

    ಸಭೆಯಲ್ಲಿ ಕುಂದಾಪುರ ಮಂಡಲದ ಅಧ್ಯಕ್ಷರಾದ ಶಂಕರ ಅಂಕದಕಟ್ಟೆ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸದಾನಂದ ಉಪ್ಪಿನಕುದ್ರು, ಕುಂದಾಪುರ ಮಂಡಲ ಪ್ರಭಾರಿ ಬೈಕಾಡಿ ಸುಪ್ರಸಾದ್ ಶೆಟ್ಟಿ, ಹಿಂದುಳಿದ ವರ್ಗಗಳ ಮೋರ್ಚಾ ರಾಜ್ಯ ಕಾರ್ಯದರ್ಶಿ ವಿಠ್ಠಲ್ ಪೂಜಾರಿ, ಒಬಿಸಿ ಮೋರ್ಚಾ ಜಿಲ್ಲಾಧ್ಯಕ್ಷರಾದ ಸುರೇಂದ್ರ ಪಣಿಯೂರ್, ಪ್ರಧಾನ ಕಾರ್ಯದರ್ಶಿ ಅರುಣ್ ಬಾಣ, ಉಪಾಧ್ಯಕ್ಷರಾದ ಮನೋಜ್ ಕರ್ಕೇರಾ, ಕುಂದಾಪುರ ಮಂಡಲ ಪ್ರಧಾನ ಕಾರ್ಯದರ್ಶಿ ಸತೀಶ್ ಪೂಜಾರಿ ವಕ್ವಾಡಿ, ಒಬಿಸಿ ಮೋರ್ಚಾ ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಜೀವನ್ ಅಂಕದಕಟ್ಟೆ, ದಯಾನಂದ ಖಾರ್ವಿ ಮತ್ತು ಮೋರ್ಚಾದ ವಿವಿಧ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.

    ಮಂಡಲದ ಕಾರ್ಯದರ್ಶಿ ಸುರೇಂದ್ರ ಸಂಗಮ್ ವಂದೇ ಮಾತರಂ ಗೀತೆ ಹಾಡಿದರು, ಪುಷ್ಪ ಅವರು ಮೋರ್ಚಾದ ಕಾರ್ಯವೈಖರಿಯ ವರದಿ ನೀಡಿದರು, ಜೀವನ್ ಅಂಕದಕಟ್ಟೆ ಕಾರ್ಯಕ್ರಮ ನಿರೂಪಿಸಿದರು.

  • ಕುಂದಾಪುರ: ‘ತೈಲ, ಗ್ಯಾಸ್ ಬೆಲೆ ಹೆಚ್ಚಳವನ್ನು ಸರ್ಕಾರ ಕೂಡಲೇ ಇಳಿಸಬೇಕು’ – ಕಾಂಗ್ರೆಸ್ ಆಗ್ರಹ

    ಕುಂದಾಪುರ: ‘ತೈಲ, ಗ್ಯಾಸ್ ಬೆಲೆ ಹೆಚ್ಚಳವನ್ನು ಸರ್ಕಾರ ಕೂಡಲೇ ಇಳಿಸಬೇಕು’ – ಕಾಂಗ್ರೆಸ್ ಆಗ್ರಹ

    ಕುಂದಾಪುರ ಮಿರರ್ ಸುದ್ದಿ

    ಕುಂದಾಪುರ:‌ ಪಂಚ ರಾಜ್ಯ ಚುನಾವಣೆ ಮುಗಿದ ಬಳಿಕ ಮಾರ್ಚ್ 22 ರ ನಂತರ 12 ದಿನಗಳಲ್ಲಿ ಸತತ 10 ಬಾರಿ ಪೆಟೋಲ್‌ ಮತ್ತು ಡೀಸೆಲ್ ಬೆಲೆ ಎರಿಸಿರುವುದರಿಂದ ತೈಲ ಬೆಲೆ ಲೀಟರ್ ಗೆ 7 ರೂಪಾಯಿ ಹೆಚ್ಚಳವಾಗಿದ್ದು ಜನ ಸಾಮಾನ್ಯರು ಸಂಕಷ್ಟಕ್ಕೆ ಸಿಲುಕಿದ್ದು ಸರಕಾರ ಕೂಡಲೇ ತೈಲ ಬೆಲೆ ಇಳಿಸಬೇಕೆಂದು ಕುಂದಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಾನ್ಮಕ್ಕಿ ಹರಿಪ್ರಸಾದ್ ಶೆಟ್ಟಿ ಆಗ್ರಹಿಸಿದ್ದಾರೆ .

    ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆ 250 ರೂಪಾಯಿ ಹೆಚ್ಚಳ ಮಾಡಿರುವುದರಿಂದ ಹೋಟೆಲ್ ಮತ್ತು ವಾಣಿಜ್ಯ ಮಾಲಿಕರಿಗೆ ತೀವ್ರ ಹೊಡೆತ ಬಿದ್ದಿದ್ದು ,ಇದರಿಂದ ನೇರ ಗ್ರಾಹಕರ ಮೇಲೆ ಬೆಲೆ ಏರಿಕೆ ಬಿಸಿ ಪ್ರಾರಂಭವಾಗಲಿದೆ .

    ಡೀಸೆಲ್ ಬೆಲೆ ಏರಿಕೆಯಿಂದ ಎಲ್ಲಾ ಸರಕುಗಳ ಬೆಲೆ ಪುನಃ ಹೆಚ್ಚಳವಾಗಲು ಪ್ರಾರಂಭವಾಗಿದ್ದು ಇದರಿಂದ ಶ್ರೀ ಸಾಮಾನ್ಯನಿಗೆ ಬಾರಿ ಹೊಡೆತ ಬೀಳಲಿದೆ .

    ಹಿಂದೆ ಯುಪಿಎ ಸರಕಾರವಿದ್ದಾಗ ತೈಲ ಬೆಲೆ 10 ರಿಂದ 20 ಪೈಸ ಎರಿದಾಗ ಗ್ಯಾಸ್ ಸೆಲೆಂಡರ್ ದರ 5 ರೂಪಾಯಿ ಹೆಚ್ಚಳವಾದಾಗ ರಸ್ತೆಗಿಳಿದು ಪ್ರತಿಭಟನೆ ಮಾಡಿದ ಬಿಜೆಪಿ ಮುಖಂಡರು ಈಗ ಮೌನಕ್ಕೆ ಶರಣಾಗಲು ಕಾರಣ ಏನು ಎಂದು ಪ್ರಶ್ನಿಸಿದ್ಧಾರೆ .

    ಲಾಕ್ ಡೌನ್ ನಿಂದ ಹೈರಾಗಾಗಿರುವ ಜನರ ಪರ ನಿಲ್ಲಬೇಕಾದ ಸರಕಾರ ಬೆಲೆ ಏರಿಕೆಯಿಂದ ಜನರ ಮನಸನ್ನು ಬೇರೆಡೆ ಸೆಳೆಯಲು ಬೇರೆ ಬೇರೆ ಸಂಘಟನೆಗಳನ್ನು ಉಪಯೋಗಿಸಿಕೊಂಡು ಜಾತಿ ಮತ್ತು ಧರ್ಮಗಳ ಮದ್ಯೆ ವಿಷ ಬೀಜ ಬಿತ್ತಿ ದ್ವೇಷದ ರಾಜಕಾರಣ ಮಾಡುತ್ತಿದೆ ಎಂದು ತಿಳಿಸಿದ ಅವರು ದೇಶದಲ್ಲಿ ಕಳೆದ 7 ವರ್ಷದಿಂದ ಬಿಜೆಪಿಗೆ ನಿರಂತರ ಬೆಂಬಲ ನೀಡಿದ ಜನತೆ ಪರವಾಗಿ ಬಿಜೆಪಿ ಸರಕಾರ ನಿಂತು ಕೂಡಲೇ ತೈಲ ಬೆಲೆ ಇಳಿಸಬೇಕೆಂದು ಆಗ್ರಹಿಸಿದ್ದಾರೆ.

  • ಕುಂದಾಪುರ ಬ್ಲಾಕ್ ಕಾಂಗ್ರೆಸ್ ಮಹಿಳಾ ಘಟಕದ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ ಆಚರಣೆ

    ಕುಂದಾಪುರ ಬ್ಲಾಕ್ ಕಾಂಗ್ರೆಸ್ ಮಹಿಳಾ ಘಟಕದ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ ಆಚರಣೆ

    ಕುಂದಾಪುರ ಮಿರರ್ ಸುದ್ದಿ…

    ಕುಂದಾಪುರ: ಬ್ಲಾಕ್ ಕಾಂಗ್ರೆಸ್ ಮಹಿಳಾ ಘಟಕದ ವತಿಯಿಂದ ವಿಶ್ವ ಮಹಿಳಾ ದಿನಾಚರಣೆಯನ್ನು ಕಾಂಗ್ರೆಸ್ ಕಛೇರಿಯಲ್ಲಿ ಕುಂದಾಪುರ ಬ್ಲಾಕ್ ಅಧ್ಯಕ್ಷರಾದ ಹರಿಪ್ರಸಾದ್ ಶೆಟ್ಟಿ ಕಾನ್ಮಕ್ಕಿ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.

    ಈ ಸಂದರ್ಭದಲ್ಲಿ ವೈದ್ಯರೂ, ಖ್ಯಾತ ಸಮಾಜ ಸೇವಕರೂ ಆದ ಡಾ.ಸೋನಿ ಡಿ’ಕೋಸ್ತಾ ಇವರನ್ನು ಸನ್ಮಾನಿಸಲಾಯಿತು.

    ಇದೇ ಸಂದರ್ಭದಲ್ಲಿ ಡಾ ಸೋನಿ ಅವರು ಸ್ವಸ್ಥ ಆರೋಗ್ಯಕ್ಕಾಗಿ ಮನೆಮದ್ದು ಎಂಬ ವಿಷಯದ ಬಗ್ಗೆ ಮಾಹಿತಿ ಹಾಗೂ ಪ್ರಾತ್ಯಕ್ಷಿಕೆ ನೀಡಿದರು.

    ಕಾಂಗ್ರೇಸ್ ಮುಖಂಡರಾದ ಮಲ್ಯಾಡಿ ಶಿವರಾಮ ಶೆಟ್ಟಿ, ವಿಕಾಸ್ ಹೆಗ್ಡೆ, ವಕೀಲರಾದ ಶ್ಯಾಮಲಾ ಭಂಡಾರಿ ಸಭೆಯನ್ನುದ್ದೇಶಿಸಿ ಮಾತನಾಡಿದರು.

    ಈ ಸಂದರ್ಭದಲ್ಲಿ ಬ್ಲಾಕ್ ಪ್ರಧಾನ ಕಾರ್ಯದರ್ಶಿ ವಿನೋದ್ ಕ್ರಾಸ್ಟೋ, ಬ್ಲಾಕ್ ಉಪಾಧ್ಯಕ್ಷ ಅಬ್ದುಲ್ಲಾ ಕೊಡಿ, ಹಿರಿಯ ಸದಸ್ಯರಾದ ನಾಗರಾಜ ನಾಯ್ಕ,ಮಹಿಳಾ ಸದಸ್ಯರಾದ ಮುತ್ತು, ಮೈಮುನಾ, ಲೀಲಾ, ಆಶಾ, ಡ್ಯಾಫೊಡಿಲ್ ಕ್ರಾಸ್ಟೋ, ಸುಶೀಲ, ಮುಕಾಂಬಿಕ, ಸುವರ್ಣ ಡಿ’ಆಲ್ಮೇಡಾ, ಮೀನಾಕ್ಷಿ, ವಸಂತಿ ಮೋಗವೀರ ಕೋಣಿ, ಗೀತಾ ಆನಗಳ್ಳಿ, ಸವೀತಾ ಆನಗಳ್ಳಿ, ಶೋಭಾ ಸಚ್ಚಿದಾನಂದ, ಜ್ಯೋತಿ ಡಿ ನಾಯ್ಕ, ಸಂಗೀತ ಮೊದಲಾದವರು ಉಪಸ್ಥಿತಿರಿದ್ದರು.

    ಬ್ಲಾಕ್ ಮಹಿಳಾ ಅಧ್ಯಕ್ಷೆ ದೇವಕಿ ಸಣ್ಣಯ್ಯ ಸ್ವಾಗತಿಸಿದರು. ಪುರಸಭಾ ಸದಸ್ಯರಾದ ರೇವತಿ ಸನ್ಮಾನ ಪತ್ರ ವಾಚಿಸಿದರು. ಪುರಸಭಾ ಸದಸ್ಯರಾದ ಪ್ರಭಾವತಿ ಶೆಟ್ಟಿ ವಂದಿಸಿದರು. ಆಶಾ ಕರ್ವಾಲೋ ಕಾರ್ಯಕ್ರಮ ನಿರೂಪಿಸಿದರು.

  • ಬಿ.ಜೆ.ಪಿ. ಯ ಅಭೂತಪೂರ್ವ ಗೆಲುವು ಜನಪರ ಕಾರ್ಯಕ್ರಮಗಳಿಗೆ ಸಂದ ಜಯ- ಬಿ. ವೈ. ರಾಘವೇಂದ್ರ

    ಬಿ.ಜೆ.ಪಿ. ಯ ಅಭೂತಪೂರ್ವ ಗೆಲುವು ಜನಪರ ಕಾರ್ಯಕ್ರಮಗಳಿಗೆ ಸಂದ ಜಯ- ಬಿ. ವೈ. ರಾಘವೇಂದ್ರ

    ಕುಂದಾಪುರ ಮಿರರ್ ಸುದ್ದಿ…
    ಬೈಂದೂರು: ಪ್ರಧಾನಿ  ನರೇಂದ್ರ ಮೋದಿಜೀರವರ ನೇತೃತ್ವದ ಕೇಂದ್ರ ಸರ್ಕಾರ ಕೈಗೊಂಡಿರುವ ದೇಶವನ್ನು ಬಲಿಷ್ಠಗೊಳಿಸುವ, ಅಭಿವೃದ್ಧಿಪರ ಮತ್ತು ಜನಪರ ಕಾರ್ಯಕ್ರಮಗಳನ್ನು ಮೆಚ್ಚಿಕೊಂಡಿರುವ ಸ್ಪಷ್ಟ ಉದಾಹರಣೆಯಾಗಿ ದೇಶದಲ್ಲಿ ಇತ್ತೀಚೆಗೆ ನಡೆದಂತಹ ಪಂಚರಾಜ್ಯ ವಿಧಾನಸಭೆ ಚುನಾವಣೆಗಳಲ್ಲಿ ಉತ್ತರಪ್ರದೇಶ ಮತ್ತು ಮಣಿಪುರಗಳಲ್ಲಿ ಸ್ಪಷ್ಟ ಬಹುಮತದೊಂದಿಗೆ ಹಾಗೂ ಉತ್ತರಖಂಡ್ ಮತ್ತು ಹಾಗೂ ಗೋವಾದಲ್ಲಿ ಸರಳ ಬಹುಮತದೊಂದಿಗೆ ಅಧಿಕಾರಕ್ಕೆ ಬರುತ್ತಿರುವುದೇ ಸಾಕ್ಷಿಯಾಗಿದೆ ಎಂದು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸದಸ್ಯ ಬಿ.ವೈ.ರಾಘವೇಂದ್ರ ತಿಳಿಸಿದ್ದಾರೆ.
    ದೇಶದ ಎಲ್ಲ ಮೂಲೆಗಳಲ್ಲಿ ಭಾರತೀಯ ಜನತಾ ಪಕ್ಷ ತನ್ನ ಛಾಪನ್ನು ಮೂಡಿಸಿದ್ದು ಕಾಂಗ್ರೆಸ್ ಸೇರಿದಂತೆ ಅನೇಕ ಪಕ್ಷಗಳು ತಮ್ಮ ಅಸ್ತಿತ್ವ ಉಳಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಪಂಜಾಬ್ ನಲ್ಲಿ ಅಧಿಕಾರದಲ್ಲಿದ್ದ ಕಾಂಗ್ರೇಸ್ ಅಲ್ಲಿಯೂ ಸಹ ತನ್ನ ಅಸ್ತಿತ್ವಕಳೆದುಕೊಂಡಿದ್ದು, ಕಾಂಗ್ರೆಸ್ ಪಕ್ಷವು ದಿನೇ ದಿನೇ ದೇಶದಲ್ಲಿ ಸಂಪೂರ್ಣವಾಗಿ ಅವನತಿಯಾಗಲಿದೆ ಎಂಬುದನ್ನು ಈ ಚುನಾವಣೆಗಳು ಸಾಬೀತುವಡಿಸಿದೆ.
    ಗೋವಾದಲ್ಲಿ ಸರ್ಕಾರ ರಚನೆ ಮಾಡಲು  ಡಿ.ಕೆ. ಶಿವಕುಮಾರ್ ಮತ್ತು ಉತ್ತರಖಂಡದಲ್ಲಿ ಸರ್ಕಾರ ರಚನೆ ಮಾಡಲು  ಎಂ.ಬಿ. ಪಾಟೀಲರವರು ಹೋಗಿದ್ದು, ಬರಿಗೈಲಿ ವಾಪಸಾಗಬೇಕಾಯಿತು.
    ಕಾಂಗ್ರೆಸ್ ಪಕ್ಷದವರು ಕರ್ನಾಟಕದಲ್ಲಿ ಅಧಿಕಾರಕ್ಕೆ ಬರುತ್ತೇವೆಂದು ಹಗಲು ಕನಸು ಕಾಣುತ್ತಿರುವುದು. ಕನಸ್ಸಾಗಿಯೇ ಉಳಿಯುವುದು ಈ ಫಲಿತಾಂಶ ಸಾಬೀತುಪಡಿಸಿದೆ. ಕಾಂಗ್ರೆಸ್ ಪಕ್ಷದವರು ಕರ್ನಾಟಕ ರಾಜ್ಯದಲ್ಲಿ ಹಲವು ಸಲ ಕೀಳು ಮಟ್ಟದ ರಾಜಕೀಯ ಮಾಡಿದ್ದನ್ನು ಇಡೀ ಜನತೆಯು ಗಮನಿಸುತ್ತಲೇ ಬಂದಿದ್ದು, ಮುಂಬರುವ ರಾಜ್ಯದ ಚುನಾವಣೆಯಲ್ಲಿ ಮತ್ತೊಮ್ಮೆ ಬಿ.ಜೆ.ಪಿ. ಅಧಿಕಾರಕ್ಕೆ ಬರುತ್ತದೆ ಎಂಬ ವಿಶ್ವಾಸ ಭರವಸೆ ನನಗಿದೆ ಎಂದು ಅವರು ಸಂತಷ ಹಂಚಿಕೊಂಡಿದ್ದಾರೆ.
  • ವಂಡ್ಸೆ ಗ್ರಾ.ಪಂ. ಬಿಜೆಪಿ ಬೆಂಬಲಿತ ಸದಸ್ಯೆ ಕಾಂಗ್ರೆಸ್ ಸೇರ್ಪಡೆ

    ವಂಡ್ಸೆ ಗ್ರಾ.ಪಂ. ಬಿಜೆಪಿ ಬೆಂಬಲಿತ ಸದಸ್ಯೆ ಕಾಂಗ್ರೆಸ್ ಸೇರ್ಪಡೆ

    ಕುಂದಾಪುರ ಮಿರರ್ ಸುದ್ದಿ…
    ಕುಂದಾಪುರ :
    ವಂಡ್ಸೆ ಗ್ರಾಮ ಪಂಚಾಯತ್ ಬಿಜೆಪಿ ಬೆಂಬಲಿತ ಸದಸ್ಯರಾದ ಸುಶೀಲ ಅವರು ಶನಿವಾರದಂದು ಬೈಂದೂರು ಮಾಜಿ ಶಾಸಕರಾದ ಕೆ.ಗೋಪಾಲ ಪೂಜಾರಿಯವರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.

    ಈ‌ ಸಂದರ್ಭದಲ್ಲಿ ವಂಡ್ಸೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರದೀಪ ಕುಮಾರ್ ಶೆಟ್ಟಿ, ವಂಡ್ಸೆ ಗ್ರಾ. ಪಂ ಅಧ್ಯಕ್ಷ ಉದಯ ಕುಮಾರ್ ಶೆಟ್ಟಿ, ಕಾಂಗ್ರೆಸ್ ಮುಖಂಡರಾದ ಶರತ್ ಕುಮಾರ್ ಶೆಟ್ಟಿ, ಉದಯ ಪೂಜಾರಿ ಚಿತ್ತೂರು, ಗೋವರ್ಧನ ಜೋಗಿ, ಶ್ರೀನಿವಾಸ್ ಪೂಜಾರಿ, ಗುಂಡು ಪೂಜಾರಿ, ಶರವಣ್ ಶೆಟ್ಟಿ, ಹರ್ಷ ಶೆಟ್ಟಿ, ಗ್ರಾ ಪಂ ಸದಸ್ಯೆ ಶ್ರೀಮತಿ, ಸುಬ್ಬ ವಂಡ್ಸೆ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

  • ವಂಡ್ಸೆ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಗೀತಾ ಅವಿನಾಶ್ ಹಾಗೂ ಹಲವು ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆ

    ವಂಡ್ಸೆ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಗೀತಾ ಅವಿನಾಶ್ ಹಾಗೂ ಹಲವು ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆ

    ಕುಂದಾಪುರ ಮಿರರ್ ಸುದ್ದಿ…
    ವಂಡ್ಸೆ:
    ಬಿಜೆಪಿ ಪಕ್ಷದ ಸಿದ್ಧಾಂತವನ್ನು ಒಪ್ಪಿಕೊಂಡು, ಅಭಿವೃದ್ಧಿ ಕಾರ್ಯಗಳನ್ನು ಮೆಚ್ಚಿಕೊಂಡು ವಂಡ್ಸೆ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಗೀತಾ ಅವಿನಾಶ್ ಮತ್ತವರ ಬಳಗದವರು ನಮ್ಮ ಭಾರತೀಯ ಜನತಾ ಪಕ್ಷವನ್ನು ಸೇರ್ಪಡೆಗೊಂಡರು‌.‌

    ಇದೇ ಸಂದರ್ಭ ವಂಡ್ಸೆ ಗ್ರಾಮೀಣ ಯುವ ಕಾಂಗ್ರೆಸ್ ಅಧ್ಯಕ್ಷ ಅವಿನಾಶ್ ಮೊಗವೀರ, ರಾಜೇಶ್ ಕಾಂಚನ್, ರಾಜೇಶ್ ಹಕ್ಲಮನೆ, ಶೈಲೇಶ್ ಪೂಜಾರಿ, ಕೃಷ್ಣ ಪೂಜಾರಿ, ಗೋವಿಂದ ಪೂಜಾರಿ ಏಳುಮುಡಿ ಮನೆ, ಹನೀಫ್ ಸಾಹೇಬ್ ವಂಡ್ಸೆ, ಗಣೇಶ್ ಪೂಜಾರಿ ಏಳುಮುಡಿ ಮನೆ,‌ ಸುಧೀರ, ಕಿರಣ ಮುಂತಾದವರು ಬಿಜೆಪಿ ಸೇರ್ಪಡೆಗೊಂಡರು.

    ಇವರೆಲ್ಲರ ಆಗಮನದಿಂದ ಅಭಿವೃದ್ಧಿಯನ್ನು ಜನ ಸಂತೋಷದಿಂದ ಸ್ವೀಕರಿಸುತ್ತಾರೆ ಎಂದು ಮನದಟ್ಟಾಯ್ತು ಮತ್ತು ವಂಡ್ಸೆ ಭಾಗದಲ್ಲಿ ಬಿಜೆಪಿ ಪಕ್ಷದ ಬಲ‌ಹೆಚ್ಚಿತು.‌ ವಂಡ್ಸೆ ಗ್ರಾಮ ಪಂಚಾಯತ್ ಅಲ್ಲಿ 7 ಸದಸ್ಯರ ಪೈಕಿ 4 ಸದಸ್ಯರು ಭಾರತೀಯ ಜನತಾ ಪಾರ್ಟಿ ಸದಸ್ಯರೆನ್ನುವುದು ಸಂತೋಷದ ವಿಷಯ ಎಂದು ಬೈಂದೂರು ಶಾಸಕ ಬಿ.ಎಮ್. ಸುಕುಮಾರ ಶೆಟ್ಟಿ ಹೇಳಿದ್ದಾರೆ.

  • ಪ್ರಧಾನಿ ಸಂಚರಿಸುತ್ತಿದ್ದ ಹಾದಿಯಲ್ಲಿ ಭದ್ರತೆ ನಿರ್ಲಕ್ಷ್ಯ : ಕಾಂಗ್ರೆಸ್ ಸರಕಾರದ ಕೀಳುಮಟ್ಟದ ರಾಜಕೀಯ –  ಬಿ. ವೈ. ರಾಘವೇಂದ್ರ ಖಂಡನೆ

    ಪ್ರಧಾನಿ ಸಂಚರಿಸುತ್ತಿದ್ದ ಹಾದಿಯಲ್ಲಿ ಭದ್ರತೆ ನಿರ್ಲಕ್ಷ್ಯ : ಕಾಂಗ್ರೆಸ್ ಸರಕಾರದ ಕೀಳುಮಟ್ಟದ ರಾಜಕೀಯ – ಬಿ. ವೈ. ರಾಘವೇಂದ್ರ ಖಂಡನೆ

    ಕುಂದಾಪುರ ಮಿರರ್ ಸುದ್ದಿ…
    ಕುಂದಾಪುರ:
    ಪ್ರಧಾನಮಂತ್ರಿಗಳಿಗೆ ಪಂಜಾಬ್ ಕಾಂಗ್ರೆಸ್ ಸರ್ಕಾರದಿಂದ ಕ್ಷಮಿಸಲಾಗದ ದೊಡ್ಡ ಭದ್ರತಾ ಲೋಪವಾಗಿದೆ. ಇಡೀ ದೇಶ ಪ್ರಜೆಗಳು ಇಂತಹ ದುರಂತ ಘಟನೆಯನ್ನು ಖಂಡಿಸುತ್ತಾರೆ. ಪ್ರಧಾನಿಗಳ ಭದ್ರತೆಯ ಬಗ್ಗೆ ನಿರ್ಲಕ್ಷ್ಯ ತೋರಿದರೆ ಹೇಗೆ ಎಂಬುದು ಇಡೀ ದೇಶ ಪ್ರಜೆಗಳಿಗೆ ಪ್ರಶ್ನೆಯಾಗಿದೆ. ಈ ನಾಚಿಕೆಗೇಡಿನ ಘಟನೆಯ ಬಗ್ಗೆ ಸಮಗ್ರವಾಗಿ ತನಿಖೆಯಾಗಬೇಕೆಂದು ನಾನು ಈ ಮೂಲಕ ಒತ್ತಾಯಿಸುತ್ತೇನೆ. ಪಂಜಾಬ್ ಕಾಂಗ್ರೆಸ್ ಸರ್ಕಾರ ಇಡೀ ದೇಶದ ಜನತೆಗೆ, ಪ್ರಧಾನಿಗಳಿಗೆ ಕ್ಷಮೆ ಕೇಳಬೇಕೆಂದು ಆಗ್ರಹಿಸುತ್ತೇನೆ ಎಂದು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದ ಬಿ. ವೈ. ರಾಘವೇಂದ್ರ ಹೇಳಿದ್ದಾರೆ.

    ಪಂಜಾಬಿನಲ್ಲಿ ನಡೆದ ಬೃಹತ್ ಪ್ರತಿಭಟನೆಯಿಂದಾಗಿ 20 ನಿಮಿಷಗಳ ಕಾಲ ಸಮಯ ಕಳೆದು ಪ್ರಧಾನಮಂತ್ರಿಗಳು ಬದುಕಿ ಬಂದಿರುವುದು ಹೆಚ್ಚು. ಇಂತಹ ವಿಚಿತ್ರ ಘಟನೆಯನ್ನು ನೋಡಿಕೊಂಡು ಪಂಜಾಬ್ ಕಾಂಗ್ರೆಸ್ ಸರ್ಕಾರ ದೇಶದ ಪ್ರಧಾನಿಗಳಿಗೆ ರಕ್ಷಣೆ ನೀಡದೇ ಇರುವುದು ದೊಡ್ಡ ದುರಂತವಾಗಿದೆ. ಇದನ್ನು ಯಾರು ಕೂಡ ಕ್ಷಮಿಸುವುದಿಲ್ಲ. ಪ್ರಧಾನಮಂತ್ರಿಗಳ ವಿರುದ್ಧ ಷಡ್ಯಂತ್ರ ನಡೆಸಿದವರ ವಿರುದ್ಧ ಮತ್ತು ತಪ್ಪಿತಸ್ಥರನ್ನು ತಕ್ಷಣವೇ ಹುಡುಕಿ ಕಾನೂನು ಕ್ರಮಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದ್ದಾರೆ.