Category: ರಾಜಕೀಯ

  • ಅಟಲ್ ಜೀ ಈ ದೇಶ ಕಂಡ ಮಹಾನ್ ಮಾನವತವಾದಿ – ಸಚಿವ ಕೋಟ ಶ್ರೀನಿವಾಸ ಪೂಜಾರಿ

    ಅಟಲ್ ಜೀ ಈ ದೇಶ ಕಂಡ ಮಹಾನ್ ಮಾನವತವಾದಿ – ಸಚಿವ ಕೋಟ ಶ್ರೀನಿವಾಸ ಪೂಜಾರಿ

    ಕುಂದಾಪುರ ಮಿರರ್ ಸುದ್ದಿ…
    ಕೋಟ:
    ಅಟಲ್ ಜೀ ಈ ದೇಶ ಕಂಡ ಮಹಾನ್ ಮಾನವತವಾದಿ ಅವರ ಜನುಮದಿನವನ್ನು ಅರ್ಥಪೂರ್ಣ ದಿನವನ್ನಾಗಿಸಲು ಪ್ರತಿಯೊಬ್ಬರು ಪಣತೊಡಬೇಕು ಎಂದು ರಾಜ್ಯದ ಸಮಾಜಕಲ್ಯಾಣ ಹಿಂದುಳಿದ ವರ್ಗಗಳ ಕಲ್ಯಾಣ ಖಾತೆಯ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

    ಸಾಲಿಗ್ರಾಮ ಬಸ್ ತಂಗುದಾಣದಲ್ಲಿ ಬಿಜೆಪಿ ಸಾಲಿಗ್ರಾಮ ಮಹಾಶಕ್ತಿಕೇಂದ್ರದ ವತಿಯಿಂದ ಹಮ್ಮಿಕೊಂಡ ಅಟಲ್ ಬಿಹಾರಿ ವಜಪೇಯಿ ಜನ್ಮದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ದೇಶ ಕಟ್ಟುವ ಕಾಯಕದಲ್ಲಿ ಅಟಲ್ ಜೀ ಮುಂಚೂಣಿಗೆ ನಿಲ್ಲುತ್ತಾರೆ ಅವರ ವಿಚಾರಧಾರೆ,ಪಕ್ಷಕಟ್ಟುವ ನಿಲುವು ಇಂದು ಬಹು ಎತ್ತರಕ್ಕೆ ನಿಲ್ಲಿಸಿದೆ .ಜನಸಂಘದಿಂದ ಹಿಡಿದು ಭಾರತೀಯ ಜನತಾಪಾರ್ಟಿಯವರೆಗೆ ನಡೆದು ಬಂದು ದಾರಿ ಅಮೋಗವಾದದ್ದು,ವ್ಯಕ್ತಿಗಿಂತ ಪಾರ್ಟಿ ಮುಖ್ಯ ಪಾರ್ಟಿಗಿಂತ ದೇಶ ಮುಖ್ಯ ಎಂದ ಧ್ಯೇಯ ಧೋರಣೆಯೊಂದಿಗೆ ಜಗತ್ತಿಗೆ ಪರಿಚಯಿಸಿಕೊಂಡಿದ್ದಾರೆ.ದೇಶದ ಪ್ರಧಾನಿಯಾಗಿ ನಿರ್ಗಳವಾಗಿ ಆಡಳಿತ ನಡೆಸಿದ ಹೆಮ್ಮೆಯ ನಾಯಕರಾಗಿ ತನ್ನ ಜೀವಿತ ಕೊನೆ ಘಳಿಗೆಯವರೆಗೂ ದೇಶದ ಬಗ್ಗೆ ಅಪಾರವಾದ ಚಿಂತನೆ ಬೆಳೆಸಿಕೊಂಡ ಮಹಾನ್ ಮಾನವತಾವಾದಿಯಾಗಿದ್ದಾರೆ.ಅವರ ವಿಚಾರಧಾರೆಯನ್ನು ಇಂದಿನ ಪ್ರಧಾನಿ ನರೇಂದ್ರ ಮೋದಿ ನನಸಾಗಿಸುವ ಕೆಲಸದಲ್ಲಿನಿರತರಾಗಿದ್ದಾರೆ ಎಂದು ಅಭಿಪ್ರಾಯಪಟ್ಟರು.

    ಕಾರ್ಯಕ್ರಮದಲ್ಲಿ ನಿವೃತ್ತ ಸೇನಾನಿ ಗಣೇಶ್ ಅಡಿಗ ಸಾಲಿಗ್ರಾಮ ಇವರನ್ನು ಸನ್ಮಾನಿಸಲಾಯಿತು.

    ಕಾರ್ಯಕ್ರಮದಲ್ಲಿ ಅಟಲ್ ಜೀ ಯವರ ಭಾವಚಿತ್ರಕ್ಕೆ ಪುಷ್ರ್ಭಾಚನೆಗೈಯಲ್ಲಾಯಿತು.

    ವಾಗ್ಮಿ ಪ್ರಕಾಶ್ ಮಲ್ಪೆ,ಬಿಜೆಪಿ ಕುಂದಾಪುರ ಮಂಡಲ ಅಧ್ಯಕ್ಷ ಶಂಕರ್ ಅಂಕದಕಟ್ಟೆ, ಸಾಲಿಗ್ರಾಮ ಶಕ್ತಿಕೇಂದ್ರದ ಅಧ್ಯಕ್ಷ ಜಯೇಂದ್ರ ಪೂಜಾರಿ,ಸಾಲಿಗ್ರಾಮ ಪ.ಪಂ ಅಧ್ಯಕ್ಷೆ ಸುಲತಾ ಹೆಗ್ಡೆ,ಉಪಾಧ್ಯಕ್ಷೆ ಅನುಸೂಯ ಹೇರ್ಳೆ,ಪಕ್ಷದ ಹಿರಿಯ ಮುಖಂಡ ಶಿವರಾಮ ಉಡುಪ ಮತ್ತಿತರರು ಉಪಸ್ಥಿತರಿದ್ದರು.

    ಸಾಲಿಗ್ರಾಮ ಪ.ಪಂ ಸದಸ್ಯ ರಾಜು ಪೂಜಾರಿ ಸ್ವಾಗತಿಸಿದರು.ಸದಸ್ಯ ಸಂಜೀವ ದೇವಾಡಿಗ ಸನ್ಮಾನಪತ್ರ ವಾಚಿಸಿದರು.

    ಬಿಜೆಪಿ ಕುಂದಾಪುರ ಮಂಡಲ ಕಾರ್ಯದರ್ಶಿ ಸತೀಶ್ ಪೂಜಾರಿ ವಕ್ವಾಡಿ ನಿರೂಪಿಸಿದರು.

  • ಉಡುಪಿ ಜಿಲ್ಲಾ ಕಾಂಗ್ರೆಸ್ ಅಲ್ಪ ಸಂಖ್ಯಾತ ಘಟಕದ ಉಪಾಧ್ಯಕರಾಗಿ ಬಿ.ಹಾರೂನ್ ಸಾಹೇಬ್

    ಉಡುಪಿ ಜಿಲ್ಲಾ ಕಾಂಗ್ರೆಸ್ ಅಲ್ಪ ಸಂಖ್ಯಾತ ಘಟಕದ ಉಪಾಧ್ಯಕರಾಗಿ ಬಿ.ಹಾರೂನ್ ಸಾಹೇಬ್

    ಕುಂದಾಪುರ ಮಿರರ್ ಸುದ್ದಿ…
    ಕುಂದಾಪುರ:
    ಉಡುಪಿ ಜಿಲ್ಲಾ ಕಾಂಗ್ರೆಸ್ ಅಲ್ಪ ಸಂಖ್ಯಾತ ಘಟಕದ ಉಪಾಧ್ಯಕ್ಷರಾಗಿ ಬಿ.ಹಾರೂನ್ ಸಾಹೇಬ್ ನೇಮಕ ಗೊಂಡಿದ್ದಾರೆ. ವಿಧಾನ ಪರಿಷತ್ ಸದಸ್ಯ, ಮಾಜಿ ಸಭಾಪತಿ ಕೆ.ಪ್ರತಾಪ್ ಚಂದ್ರ ಶೆಟ್ಟಿ ಅವರ ಸೂಚನೆಯ ಮೇರೆಗೆ ಕುಂದಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಾನ್ಮಕ್ಕಿ ಹರಿಪ್ರಸಾದ್ ಶೆಟ್ಟಿಯವರ ಶಿಫಾರಸ್ಸಿ ನಂತೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಅವರ ಅನುಮೋದನೆಯ ಮೂಲಕ ಅವರನ್ನು ಉಡುಪಿ ಜಿಲ್ಲಾ ಕಾಂಗ್ರೆಸ್ ಘಟಕದ ಅಲ್ಪ ಸಂಖ್ಯಾತ ಉಪಾಧ್ಯಕ್ಷರಾಗಿ ನೇಮಿಸಿ ಜಿಲ್ಲಾ ಅಲ್ಪ ಸಂಖ್ಯಾತ ಘಟಕದ ಅಧ್ಯಕ್ಷ ಜನಾಬ್ ಇಸ್ಮಾಯಿಲ್ ಆತ್ರಾಡಿ ಆದೇಶಿಸಿದ್ದಾರೆ.

    ಕಾಂಗ್ರೆಸ್ ಕಾರ್ಯಕರ್ತ ನಾಗಿ ಗುರುತಿಸಿ ಕೊಂಡಿರುವ ಹಾರೂನ್ ಸಾಹೇಬರು ಮಾಜಿ ಪುರಸಭಾಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ

  • ಕುಂದಾಪುರ ಬ್ಲಾಕ್ ಕಾಂಗ್ರೆಸ್  ಅಲ್ಪಸಂಖ್ಯಾತ  ಘಟಕ ಅಧ್ಯಕ್ಷರಾಗಿ ಮುನಾಫ್ ಕೋಡಿ  ನೇಮಕ

    ಕುಂದಾಪುರ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕ ಅಧ್ಯಕ್ಷರಾಗಿ ಮುನಾಫ್ ಕೋಡಿ ನೇಮಕ

    ಕುಂದಾಪುರ ಮಿರರ್ ಸುದ್ದಿ…
    ಕುಂದಾಪುರ:
    ಮುನಾಫ್ ಕೋಡಿ ಇವರನ್ನು ವಿಧಾನ ಪರಿಷತ್ ಮಾಜಿ ಸಭಾಪತಿ, ಸದಸ್ಯ ಕೆ. ಪ್ರತಾಪಚಂದ್ರ ಶೆಟ್ಟಿಯವರ ಸೂಚನೆ ಮೇರೆಗೆ ಕುಂದಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಾನ್ಮಕ್ಕಿ ಹರಿಪ್ರಸಾದ ಶೆಟ್ಟಿಯವರ ಶಿಫಾರಸ್ಸಿನ ಮೇರೆಗೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ ಕುಮಾರ ಕೊಡವೂರರವರ ಅನುಮೋದನೆಯೊಂದಿಗೆ ಕುಂದಾಪುರ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರನ್ನಾಗಿ ನೇಮಿಸಿ ಉಡುಪಿ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಇಸ್ಮಾಯಿಲ್ ಆತ್ರಾಡಿ ಆದೇಶಿಸಿರುತ್ತಾರೆ.

    ಮುನಾಫ್ ಕೋಡಿಯವರು ಕುಂದಾಪುರ ಬ್ಲಾಕ್ ಕಾಂಗ್ರೆಸ್ ಸಮಿತಿ ಕಾರ್ಯಕಾರಿ ಸದಸ್ಯರಾಗಿದ್ದು, ಯುವ ಕಾಂಗ್ರೆಸ್ ಮತ್ತು ಕಾಂಗ್ರೆಸ್ ಸಾಮಾಜಿಕ ಜಾಲತಾಣದಲ್ಲಿ ಸಕ್ರೀಯರಾಗಿ ಕಾರ್ಯ ನಿರ್ವಹಿಸಿದ್ದರು.

  • ಕೋಟ ಬ್ಲಾಕ್ ಕಾಂಗ್ರೆಸ್ ಸದಸ್ಯತ್ವ ಅಭಿಯಾನ

    ಕೋಟ ಬ್ಲಾಕ್ ಕಾಂಗ್ರೆಸ್ ಸದಸ್ಯತ್ವ ಅಭಿಯಾನ

    ಕುಂದಾಪುರ ಮಿರರ್ ಸುದ್ದಿ…
    ಕೋಟ:
    ಕೋಟ ಬ್ಲಾಕ್ ಕಾಂಗ್ರೆಸ್ ವತಿಯಿಂದ ಶನಿವಾರ ಸಾಲಿಗ್ರಾಮ ಪಟ್ಟಣ ಪಂಚಾಯತ್ 12ನೆ ಭಗವತಿ ವಾರ್ಡ್‍ನಲ್ಲಿ ಆನಂದ ಪೂಜಾರಿ ಇವರ ಮನೆಯಲ್ಲಿ ಕಾಂಗ್ರೆಸ್ ಸದಸ್ಯತ್ವ ಅಭಿಯಾನಕ್ಕೆ ಕೋಟ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶಂಕರ್ ಕುಂದರ್ ಚಾಲನೆ ನೀಡದರು.

    ಕಾರ್ಯಕ್ರಮದಲ್ಲಿ ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ನಟರಾಜ್ ಹೊಳ್ಳ, ಸಾಲಿಗ್ರಾಮ ಪಟ್ಟಣದ ವಿರೋಧ ಪಕ್ಷದ ನಾಯಕ ಶ್ರೀನಿವಾಸ್ ಅಮೀನ್ , ಸಾಲಿಗ್ರಾಮ ಪಟ್ಟಣ ಪಂಚಾಯತ್ ಸದಸ್ಯರಾದ ರವೀಂದ್ರ ಕಾಮತ್ ಗುಂಡ್ಮಿ, ಉಡುಪಿ ಜಿಲ್ಲಾ ಸಾಮಾಜಿಕ ಜಾಲತಾಣದ ಉಪಾಧ್ಯಕ್ಷ ಗಣೇಶ್ ಕೆ ನೆಲ್ಲಿಬೆಟ್ಟು ಉಪಸ್ಥಿತರಿದ್ದರು..

  • ವಿಧಾನಪರಿಷತ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಅತ್ಯಧಿಕ ಮತಗಳ ಅಂತರದಿಂದ  ಗೆಲುವು – ದೀಪಕ್ ಕುಮಾರ್ ಶೆಟ್ಟಿ

    ವಿಧಾನಪರಿಷತ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಅತ್ಯಧಿಕ ಮತಗಳ ಅಂತರದಿಂದ ಗೆಲುವು – ದೀಪಕ್ ಕುಮಾರ್ ಶೆಟ್ಟಿ

    ಕುಂದಾಪುರ ಮಿರರ್ ಸುದ್ದಿ…
    ಕುಂದಾಪುರ:
    ಡಿ.10ರಂದು ನಡೆಯುವ ವಿಧಾನಪರಿಷತ್ ಚುನಾವಣೆಯ ದ.ಕ ಉಡುಪಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಕೋಟ ಶ್ರೀನಿವಾಸ ಪೂಜಾರಿ ಅವರು ಸ್ಪರ್ಧೆ ಮಾಡುತ್ತಿದ್ದು ಎರಡೂ ಜಿಲ್ಲೆಯಲ್ಲಿ ಅವರಿಗೆ ಅಭೂತಪೂರ್ವ ಬೆಂಬಲ ವ್ಯಕ್ತವಾಗುತ್ತಿದೆ. ಬೈಂದೂರು ಕ್ಷೇತ್ರದಲ್ಲಿ 342 ಬಿಜೆಪಿ ಬೆಂಬಲಿತ ಗ್ರಾ.ಪಂ.ಸದಸ್ಯರಿದ್ದು, ಆ ಎಲ್ಲಾ ಮತಗಳೂ ಶ್ರೀನಿವಾಸ ಪೂಜಾರಿಯರಿಗೆ ಚಲಾವಣೆ ಆಗುವುದರ ಜೊತೆಯಲ್ಲಿ ಪಕ್ಷೇತರರು ಮಾತ್ರವಲ್ಲದೇ ಹೆಚ್ಚುವರಿ ಮತಗಳು ಅವರಿಗೆ ಲಭಿಸಲಿದೆ ಎಂದು ಬೈಂದೂರು ಮಂಡಲ ಬಿಜೆಪಿ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ ಅವರು ಹೇಳಿದರು.
    ಅವರು ಹೆಮ್ಮಾಡಿಯ ಹೋಟೆಲ್ ಜ್ಯುವೆಲ್ ಪಾರ್ಕ್‍ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

    ಕೋಟ ಶ್ರೀನಿವಾಸ ಪೂಜಾರಿಯವರು ಸ್ಥಳೀಯಾಡಳಿತ ಸಂಸ್ಥೆಗಳ ಧ್ವನಿಯಾಗಿ ಕೆಲಸ ಮಾಡಿದ್ದಾರೆ. ಗ್ರಾ.ಪಂ. ಸದಸ್ಯರ ಗೌರವಧನ ಹೆಚ್ಚಳದಲ್ಲಿ ಅವರ ಪ್ರಯತ್ನ, ಪ್ರಸ್ತುತ ಗ್ರಾ.ಪಂ.ಸದಸ್ಯರಿಗೆ 2000 ಗೌರವಧನ ನೀಡಬೇಕು ಎನ್ನುವ ನೆಲೆಯಲ್ಲಿ ಹೋರಾಟ ನಡೆಸುತ್ತಿದ್ದಾರೆ. ಬಿಜೆಪಿ ಬೆಂಬಲಿತ 3700 ಮತಗಳ ಅವರಿಗೆ ಲಭಿಸುವುದರಲ್ಲಿ ಅನುಮಾನವಿಲ್ಲ ಎಂದರು.

    ಬೈಂದೂರು ಕ್ಷೇತ್ರದಲ್ಲಿ ಸಂಸದ ಬಿ.ವೈ ರಾಘವೇಂದ್ರ ಹಾಗೂ ಶಾಸಕ ಬಿ.ಎಂ.ಸುಕುಮಾರ ಶೆಟ್ಟರ ನೇತೃತ್ವದಲ್ಲಿ ಸಾಕಷ್ಟು ಅಭಿವೃದ್ದಿ ಕೆಲಸಗಳಾಗಿವೆ. ಹಾಗಾಗಿ ನಮಗೆ ಗ್ರಾ.ಪಂ.ಪಂಚಾಯತಿ ಸದಸ್ಯರಲ್ಲಿ ಮತ ಕೇಳಲು ಯಾವುದೇ ಮುಜುಗರವಿಲ್ಲ. ಬೈಂದೂರು ಕ್ಷೇತ್ರದಲ್ಲಿ ಪಕ್ಷದ ಸಂಘಟನೆ ಅತ್ಯುತ್ತಮವಾಗಿದ್ದು, ಸಂಘಟನಾತ್ಮಕವಾಗಿ ಚುನಾವಣೆ ಎದುರಿಸುತ್ತೇವೆ ಎಂದರು.

    ಬೈಂದೂರು ಕ್ಷೇತ್ರದಲ್ಲಿ ಕಸ್ತೂರಿ ರಂಗನ್ ವರದಿ ಅನುಷ್ಠಾನದ ಭಯ ಜನರಲ್ಲಿತ್ತು. ಈ ಬಗ್ಗೆ ಶಾಸಕರು ಸಂಸದರಿಗೆ ಮನವಿ ಮಾಡಿದಂತೆ ಸಂಸದ ಬಿ.ವೈ.ರಾಘವೇಂದ್ರ ಅವರು ಶನಿವಾರ ದೆಹಲಿಯಲ್ಲಿ ಕೇಂದ್ರ ಅರಣ್ಯ, ಪರಿಸರ ಮತ್ತು ಹವಾಮಾನ ಬದಲಾವಣೆ ಸಚಿವರಾದ ಭೂಪೇಂದ್ರ ಯಾದವ್ ಅವರನ್ನು ಭೇಟಿ ಮಾಡಿ ಕಸ್ತೂರಿ ರಂಗನ್ ವರದಿಯ ಅನುಷ್ಠಾನದಿಂದ ಆಗುವ ಸಮಸ್ಯೆಗಳ ಹಾಗೂ ಮಾರ್ಪಾಡಿನ ಬಗ್ಗೆ ಚರ್ಚಿಸಿ, ವರದಿಯಲ್ಲಿ ಮಾರ್ಪಾಟು ಮಾಡುವಂತೆ ಮನವಿ ಸಲ್ಲಿಸಿದ್ದಾರೆ ಎಂದು ದೀಪಕ್ ಕುಮಾರ್ ಶೆಟ್ಟಿ ಎಂದರು.

    ಬೈಂದೂರು ಸರ್ಕಾರಿ ಆಸ್ಪತ್ರೆಯಲ್ಲಿ ಅವ್ಯವಸ್ಥೆ ಆಗುತ್ತಿದೆ ಎನ್ನುವ ಬಗ್ಗೆ ಸಾರ್ವಜನಿಕ ದೂರುಗಳು, ಪ್ರತಿಭಟನೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಈಗಾಗಲೇ ಶಾಸಕರ ಸಂಸದರೊಂದಿಗೆ ಮಾತುಕತೆ ನಡೆಸಿದ್ದು, ಆಸ್ಪತ್ರೆಗೆ ಮೂಲಭೂತ ಸೌಕರ್ಯ ಒದಗಿಸುವ ಬಗ್ಗೆ ಚರ್ಚೆ ನಡೆಸಿದ್ದಾರೆ. ಸೋಮವಾರ ಬೆಳಿಗ್ಗೆ ಶಾಸಕರು ಬೈಂದೂರು ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಲಿದ್ದಾರೆ ಎಂದರು.

    ಈ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಆನಂದ ಖಾರ್ವಿ, ಮಂಡಲದ ಪ್ರಧಾನ ಕಾರ್ಯದರ್ಶಿ ಪ್ರಿಯದರ್ಶಿನಿ ದೇವಾಡಿಗ ಹಾಗೂ ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.

  • ಗೋಹತ್ಯೆಯಂತಹ ಕಾನೂನು ವಿರೋಧಿ ಕೃತ್ಯ ಎಸಗುವವರ ಮೇಲೆ ಇನ್ನು ಕಠಿಣ ಕ್ರಮ-ಕೋಟ ಗುಡುಗು

    ಗೋಹತ್ಯೆಯಂತಹ ಕಾನೂನು ವಿರೋಧಿ ಕೃತ್ಯ ಎಸಗುವವರ ಮೇಲೆ ಇನ್ನು ಕಠಿಣ ಕ್ರಮ-ಕೋಟ ಗುಡುಗು

    ಕುಂದಾಪುರ ಮಿರರ್ ಸುದ್ದಿ…
    ಕುಂದಾಪುರ:
    ದೇಶದ ಕಾನೂನಿಗೆ ಸವಾಲೊಡ್ಡುವ ಯಾರನ್ನೆ ಆದರೂ ಸುಮ್ಮನ್ನೆ ಬಿಡುವ ಪ್ರಶ್ನೆಯೇ ಇಲ್ಲ. ರಾಜ್ಯದಲ್ಲಿ ಸುಮ್ಮನೆ ಕುಳಿತುಕೊಳ್ಳುವುದಕ್ಕೆ ಆಡಳಿತ ನಡೆಸುತ್ತಿಲ್ಲ, ಇಂತಹ ಯಾವುದೇ ದೇಶ ವಿರೋಧಿ ಹಾಗೂ ಕಾನೂನು ವಿರೋಧಿ ಕೃತ್ಯವನ್ನು, ಗೋಹತ್ಯೆಯಂತಹ ದುಷ್ಕøತ್ಯವನ್ನು ಯಾವುದೇ ಕಾರಣಕ್ಕೂ ಸಹಿಸೋದಿಲ್ಲ. ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ರಾಜ್ಯ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಖಾತೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

    ಕೋಟೇಶ್ವರದ ಸಹನಾ ಕನ್ವೆಷನ್ ಸೆಂಟರ್‍ನಲ್ಲಿ ಗುರುವಾರ ನಡೆದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ಪ್ರಮುಖರ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು.

    ಎಷ್ಟೇ ವಿರೋಧವಿದ್ದರೂ ರಾಜ್ಯದ ಬಿಜೆಪಿ ಸರ್ಕಾರ ವಿಧಾನ ಮಂಡಲದಲ್ಲಿ ಅಂಗಿಕಾರವನ್ನು ಪಡೆದು ಗೋಹತ್ಯೆ ನಿಷೇಧಾ ಕಾಯಿದೆಯನ್ನು ಜಾರಿಗೆ ತಂದಿದ್ದರೂ, ಸಮಾಜದ ಕೆಲವು ದುಷ್ಕರ್ಮಿಗಳು ಗೋವುಗಳನ್ನು ಆಕ್ರಮವಾಗಿ ಸಾಗಾಟ ಹಾಗೂ ಹತ್ಯೆ ಮಾಡುವುದನ್ನು ಮುಂದುವರೆಸಿರುವುದು ಖಂಡನೀಯ. ರಾಜ್ಯದಲ್ಲಿ ಗೋಹತ್ಯೆಯನ್ನು ನಿಲ್ಲಿಸುವ ತಾಕತ್ತು ಇದೆ ಎಂದಾದರೆ ಅದು ಬಿಜೆಪಿಯ ಹಿಂದುಳಿದ ವರ್ಗಗಳ ಮೋರ್ಚಾಕ್ಕೆ ಮಾತ್ರ. ಗೋ ಹತ್ಯೆ ನಿಷೇಧದ ಬಗ್ಗೆ ಕಾನೂನು ಅರಿವು ಮೂಡಿಸುವ ಕೆಲಸ ಶೀಘ್ರ ಮಾಡಲಾಗುವುದು ಎಂದರು.

    ಅಯಾ ಮೋರ್ಚಾಗಳಿಗೆ ಮುಕ್ತವಾಗಿ ಸಂಘಟನಾ ಮಾಡುವ ಅವಕಾಶವನ್ನು ನೀಡಿ, ಪಕ್ಷಕ್ಕೆ ಕೆಲಸ ತುಂಬುವ ಕೆಲಸ ನಡೆಯುತ್ತಿದೆ. ಮೋರ್ಚಾಗಳ ಮೂಲಕ ಸಮಾಜದ ಎಲ್ಲ ವರ್ಗಗಳ ಜನರ ಸಂಕಷ್ಟಗಳಿಗೂ ಸ್ಪಂದಿಸುವ ಮೂಲಕ ಸಾಮಾಜಿಕ ನ್ಯಾಯ ನೀಡುವ ಕೆಲಸವಾಗಬೇಕು. ಸರ್ಕಾರದ ವಿರುದ್ಧ ನಡೆಯುವ ವ್ಯವಸ್ಥಿತ ಅಪಪ್ರಚಾರಗಳನ್ನು ತಡೆದು, ಪ್ರಧಾನಿ ಮೋದಿ ಹಾಗೂ ಮುಖ್ಯಮಂತ್ರಿ ಬೊಮ್ಮಾಯಿ ಸರ್ಕಾರದ ಕಾರ್ಯಕ್ರಮಗಳ ಬಗ್ಗೆ ತಿಳುವಳಿಕೆ ನೀಡಬೇಕು. ಹಿಂದುಳಿದ ವರ್ಗಗಳ ಒಟ್ಟಾಗಿ ಸಮಾಜಕ್ಕೆ ಶಕ್ತಿ ತುಂಬುವ ಹಾಗೂ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಒತ್ತು ನೀಡುವ ಕಾರ್ಯಕ್ರಮಗಳು ನಿರಂತರವಾಗಿರಬೇಕು ಎಂದರು.

    ಸಮಬಾಳು-ಸಮಪಾಲು ಎನ್ನುವ ತತ್ವದ ಮೂಲಕ ಬಿಜೆಪಿ ಸರ್ಕಾರ ಸಮಾಜದ ಎಲ್ಲ ವರ್ಗದ ಜನರನ್ನು ಮುಖ್ಯವಾಹಿನಿಗೆ ತರುವ ಕೆಲಸ ಮಾಡುತ್ತಿದೆ. ಅಪಘಾನಿಸ್ತಾನದ ಪ್ರಸ್ತುತ ಪರಿಸ್ಥಿತಿ ನೋಡಿದ ಬಳಿಕ, ಪೌರತ್ವ ಕಾಯಿದೆ ತಿದ್ದುಪಡಿ ಕಾಯಿದೆ ವಿರೋಧ ಮಾಡಿದವರು ಇದೀಗ ಪಶ್ಚಾತ್ತಾಪ ಪಡುತ್ತಿದ್ದಾರೆ ಎಂದು ಅವರು ಹೇಳಿದರು.

    ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ರಾಜ್ಯ ಅಧ್ಯಕ್ಷ ನೆ.ಲ.ನರೇಂದ್ರ ಬಾಬು, ರಾಜ್ಯ ಆಹಾರ ನಿಗಮದ ಉಪಾಧ್ಯಕ್ಷ ಎ.ಕಿರಣಕುಮಾರ ಕೊಡ್ಗಿ, ಜಿಲ್ಲಾ ಬಿಜೆಪಿ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ರಾಷ್ಟ್ರೀಯ ಬಿಜೆಪಿ ಹಿಂದುಗಳಿದ ವರ್ಗಗಳ ಮೋರ್ಚಾ ಪ್ರಧಾನ ಕಾರ್ಯದರ್ಶಿ ಯಶಪಾಲ್ ಸುವರ್ಣ, ಕುಂದಾಪುರ ಬಿಜೆಪಿ ಮಂಡಲ ಅಧ್ಯಕ್ಷ ಶಂಕರ ಅಂಕದಕಟ್ಟೆ, ಮಾಜಿ ಶಾಸಕ ಪದ್ಮನಾಭ ಕೊಠಾರಿ, ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ಪ್ರಮುಖರಾದ ಸುರೇಶ್ ಬಾಬು, ಅಶೋಕಮೂರ್ತಿ, ವಿಠ್ಠಲ್ ಪೂಜಾರಿ, ಎಂ.ಸಿ.ನಾರಾಯಣ, ರವಿ ನಾಯಕ್, ರಾಜೇಂದ್ರ ನಾಯಕ್. ರಾಜೇಶ್ ಕಾವೇರಿ ಕುಂದಾಪುರ ಉಪಸ್ಥಿತರಿದ್ದರು.

    ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ಜಿಲ್ಲಾಧ್ಯಕ್ಷ ಸುರೇಂದ್ರ ಪಣಿಯೂರು ಸ್ವಾಗತಿಸಿದರು.ಅರುಣ್ ಭಾಣ ವಂದಿಸಿದರು. ಸತೀಶ್ ಕುಲಾಲ್ ಕಾರ್ಯಕ್ರಮ ನಿರೂಪಿಸಿದರು.

  • ಕೋಟ ಶ್ರೀನಿವಾಸ ಪೂಜಾರಿಯವರನ್ನು ಪೂರ್ಣ ಬಹುಮತದಿಂದ ಗೆಲ್ಲಿಸೋಣ – ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ

    ಕೋಟ ಶ್ರೀನಿವಾಸ ಪೂಜಾರಿಯವರನ್ನು ಪೂರ್ಣ ಬಹುಮತದಿಂದ ಗೆಲ್ಲಿಸೋಣ – ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ

    ಕುಂದಾಪುರ ಮಿರರರ್ ಸುದ್ದಿ…
    ಕುಂದಾಪುರ:
    ಡಿ.10ರಂದು ನಡೆಯುವ ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಅವರನ್ನು ಎಲ್ಲರೂ ಒಟ್ಟಾಗಿ ಒಂದಾಗಿ ಪೂರ್ಣ ಬಹುಮತದಿಂದ ಗೆಲ್ಲಿಸುವುದರ ಮೂಲಕ ಭಾರತೀಯ ಜನತಾ ಪಾರ್ಟಿಯಿಂದ ಒಳ್ಳೆಯ ಸಂದೇಶ ಹೋಗಬೇಕು ಎಂದು ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಹೇಳಿದರು.


    ಅವರು ಕುಂದಾಪುರ ಬಿಜೆಪಿ ಕಾರ್ಯಾಲಯದಲ್ಲಿ ಬಿಜೆಪಿ ಕುಂದಾಪುರ ಮಂಡಲ ವತಿಯಿಂದ ಗುರುವಾರ ಜರಗಿದ ಬಿಜೆಪಿ ಕುಂದಾಪುರ, ಕೋಟೇಶ್ವರ ಮತ್ತು ಬೀಜಾಡಿ ಮಹಾಶಕ್ತಿ ಕೇಂದ್ರ ವ್ಯಾಪ್ತಿಯ ಪುರಸಭೆ ಮತ್ತು ಗ್ರಾಮ ಪಂಚಾಯತ್ ಸದಸ್ಯರ ಚುನಾವಣಾ ಪೂರ್ವಸಿದ್ಧತಾ ಸಭೆಯನ್ನುದ್ದೇಶಿಸಿ ಮಾತನಾಡಿದರು.

    ವಿಧಾನ ಪರಿಷತ್ ಚುನಾವಣಾ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿಯವರು ಮಾತನಾಡಿ, ನನ್ನ ಮಿತಿಯೊಳಗೆ 13 ವರ್ಷಗಳಿಂದ ನಿರಂತರವಾಗಿ ಗ್ರಾಮ ಪಂಚಾಯತ್ ಸದಸ್ಯರ ಸಹಿತ ಇತರ ಸ್ಥಳೀಯಾಡಳಿತ ಸಂಸ್ಥೆಗಳ ಪ್ರತಿನಿಧಿಗಳ ಪರವಾಗಿ ಕೆಲಸಗಳನ್ನು ಮಾಡಿದ್ದೇನೆ ಎಂಬ ವಿಶ್ವಾಸವಿದೆ. ಬಿಜೆಪಿಯಿಂದ ನಾನೊಬ್ಬನೇ ಅಭ್ಯರ್ಥಿಯಾಗಿದ್ದು, 1 ಅಂಕೆಯನ್ನು ಮಾತ್ರ ಬರೆಯುವ ಮೂಲಕ ಒಂದೇ ಮತವನ್ನು ಚಲಾಯಿಸಿ ಪಂಚಾಯತ್ ರಾಜ್ ಸಬಲೀಕರಣಕ್ಕಾಗಿ ನನ್ನನ್ನು ಮತ್ತೊಮ್ಮೆ ಆಯ್ಕೆ ಮಾಡಬೇಕೆಂದು ಮನವಿ ಮಾಡುತ್ತೇನೆ ಎಂದರು.

    ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ ನಾಯಕ್, ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಉಪಾಧ್ಯಕ್ಷ ಕಿರಣ್ ಕುಮಾರ್ ಕೊಡ್ಗಿ, ಜಿಲ್ಲಾ ಉಪಾಧ್ಯಕ್ಷ ಬೈಕಾಡಿ ಸುಪ್ರಸಾದ್ ಶೆಟ್ಟಿ, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸದಾನಂದ ಉಪ್ಪಿನಕುದ್ರು ಉಪಸ್ಥಿತರಿದ್ದರು.

    ಕುಂದಾಪುರ ಮಂಡಳದ ಅಧ್ಯಕ್ಷ ಶಂಕರ ಅಂಕದಕಟ್ಟೆ ಪ್ರಾಸ್ತಾವಿಕ ಮಾತನಾಡಿದರು. ಕುಂದಾಪುರ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸುರೇಶ್ ಶೆಟ್ಟಿ ಬೀಜಾಡಿ ಸ್ವಾಗತಿಸಿದರು. ಸತೀಶ್ ಪೂಜಾರಿ ವಕ್ವಾಡಿ ಕಾರ್ಯಕ್ರಮ ನಿರೂಪಿಸಿದರು.

  • ಕಿರಿಮಂಜೆಶ್ವರ:’ಪೂರ್ಣ ಬಹುಮತದಿಂದ ಕೋಟ ಶ್ರೀನಿವಾಸ ಪೂಜಾರಿ ಅವರನ್ನು ಗೆಲ್ಲಿಸಿ’ – ಸುಕುಮಾರ್ ಶೆಟ್ಟಿ

    ಕಿರಿಮಂಜೆಶ್ವರ:’ಪೂರ್ಣ ಬಹುಮತದಿಂದ ಕೋಟ ಶ್ರೀನಿವಾಸ ಪೂಜಾರಿ ಅವರನ್ನು ಗೆಲ್ಲಿಸಿ’ – ಸುಕುಮಾರ್ ಶೆಟ್ಟಿ

    ಕುಂದಾಪುರ ಮಿರರ್ ಸುದ್ದಿ…
    ಬೈಂದೂರು:
    ಕರ್ನಾಟಕ ರಾಜ್ಯದಲ್ಲಿರುವ ಎಲ್ಲಾ ಗ್ರಾಮ ಪಂಚಾಯತ್‌ನ ಸದಸ್ಯರಿಗೆ ಪ್ರಥಮ ಬಾರಿಗೆ ಗೌರವ ಧನವನ್ನು ಮಂಜೂರು ಮಾಡಿಸಿದ್ದ ಸಚಿವ, ವಿಧಾನ ಪರಿಷತ್ ಸದಸ್ಯರಾದ ಕೋಟ ಶ್ರೀನಿವಾಸ ಪೂಜಾರಿಯವರು ವಿಧಾನ ಪರಿಷತ್‌ನಲ್ಲಿ ಸಭಾ ನಾಯಕರಾಗಿ 1,000 ರೂ. ಇದ್ದ ಗೌರವ ಧನವನ್ನು 2,000 ರೂ.ಗೆ ಹೆಚ್ಚಿಸುವುದಾಗಿ ಭರವಸೆಯನ್ನೂ ನೀಡಿದ್ದಾರೆ. ಇತಿಹಾಸದಲ್ಲಿ ಪಂಚಾಯತ್ ರಾಜ್ ವ್ಯವಸ್ಥೆ ಸಬಲೀಕರಣಕ್ಕೆ ಗ್ರಾಮ ಪಂಚಾಯತ್‌ಗಳು ಸರಕಾರದಂತೆ ಕೆಲಸವನ್ನು ಮಾಡಬೇಕೆನ್ನುವ ಕಲ್ಪನೆಯನ್ನು ನೀಡಿ ನಿರಂತರವಾಗಿ ಗ್ರಾಮ ಪಂಚಾಯತ್ ಮತ್ತು ಪಂಚಾಯತ್ ರಾಜ್ ಅಭಿವೃದ್ಧಿಗೋಸ್ಕರ ದುಡಿದಿರುವ ಕೋಟ ಶ್ರೀನಿವಾಸ ಪೂಜಾರಿ ಎಲ್ಲರೂ ಒಟ್ಟಾಗಿ ಒಂದಾಗಿ ಪೂರ್ಣ ಬಹುಮತದಿಂದ ಅವರನ್ನು ಗೆಲ್ಲಿಸಬೇಕು ಎಂದು ಬೈಂದೂರು ಶಾಸಕ ಬಿ.ಎಂ.ಸುಕುಮಾರ್ ಶೆಟ್ಟಿ ಹೇಳಿದರು.

    ಅವರು ತ್ರಾಸಿಯ ಶ್ರೀ ಮಹಾಗಣಪತಿ ಸಭಾಭವನದಲ್ಲಿ ಬಿಜೆಪಿ ಬೈಂದೂರು ಮಂಡಲ ವತಿಯಿಂದ ಸೋಮವಾರ ಜರಗಿದ ಬಿಜೆಪಿ ಗಂಗೊಳ್ಳಿ ಮಹಾಶಕ್ತಿ ಕೇಂದ್ರ ವ್ಯಾಪ್ತಿಯ ಗ್ರಾಮ ಪಂಚಾಯತ್ ಸದಸ್ಯರ ಚುನಾವಣಾ ಪೂರ್ವಸಿದ್ಧತಾ ಸಭೆಯನ್ನುದ್ದೇಶಿಸಿ ಮಾತನಾಡಿದರು.ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ರವರು ಮಾತನಾಡಿ, ಡಿ.೧೦ರಂದು ನಡೆಯಲಿರುವ ವಿಧಾನ ಪರಿಷತ್ ಚುನಾವಣೆಯಲ್ಲಿ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತ್ ಸದಸ್ಯರು, ಅತ್ಯಂತ ಜಾಗರೂಕರಾಗಿ, ಪಂಚಾಯತ್ ರಾಜ್ ವ್ಯವಸ್ಥೆಯಲ್ಲಿ ಅಪಾರ ಅನುಭವ ಹೊಂದಿರುವ ಬಿಜೆಪಿಯ ಏಕೈಕ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿಯವರಿಗೆ ಮಾತ್ರ ಪ್ರಥಮ ಪ್ರಾಶಸ್ತ್ಯದ ಮತವನ್ನು ನೀಡಿ ಅವರನ್ನು ಅತ್ಯಂತ ಹೆಚ್ಚಿನ ಮತಗಳ ಅಂತರದಿಂದ ಗೆಲ್ಲಿಸಬೇಕು ಎಂದರು.

    ವಿಧಾನ ಪರಿಷತ್ ಚುನಾವಣಾ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿಯವರು ಮಾತನಾಡಿ ನನ್ನ ಮಿತಿಯೊಳಗೆ ೧೩ ವರ್ಷಗಳಿಂದ ನಿರಂತರವಾಗಿ ಗ್ರಾಮ ಪಂಚಾಯತ್ ಸದಸ್ಯರ ಸಹಿತ ಇತರ ಸ್ಥಳೀಯಾಡಳಿತ ಸಂಸ್ಥೆಗಳ ಪ್ರತಿನಿಧಿಗಳ ಪರವಾಗಿ ಕೆಲಸಗಳನ್ನು ಮಾಡಿದ್ದೇನೆ ಎಂಬ ವಿಶ್ವಾಸವಿದೆ. ಬಿಜೆಪಿಯಿಂದ ನಾನೊಬ್ಬನೇ ಅಭ್ಯರ್ಥಿಯಾಗಿದ್ದು, ೧ ಅಂಕೆಯನ್ನು ಮಾತ್ರ ಬರೆಯುವ ಮೂಲಕ ಒಂದೇ ಮತವನ್ನು ಚಲಾಯಿಸಿ ಪಂಚಾಯತ್ ರಾಜ್ ಸಬಲೀಕರಣಕ್ಕಾಗಿ ನನ್ನನ್ನು ಮತ್ತೊಮ್ಮೆ ಆಯ್ಕೆ ಮಾಡಬೇಕೆಂದು ಮನವಿ ಮಾಡುತ್ತೇನೆ ಎಂದರು.

    ಬಿಜೆಪಿ ಬೈಂದೂರು ಮಂಡಲ ಅಧ್ಯಕ್ಷ ದೀಪಕಕುಮಾರ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಬಿಜೆಪಿ ವಿಭಾಗೀಯ ಪ್ರಭಾರಿ ಉದಯಕುಮಾರ್ ಶೆಟ್ಟಿ, ಬೈಂದೂರು ಬಿಜೆಪಿ ಪ್ರಭಾರಿ ಕಿಶೋರ್ ಕುಮಾರ್ ಕುಂದಾಪುರ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಆನಂದ ಖಾರ್ವಿ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಕುತ್ಯಾರು ನವೀನ್ ಶೆಟ್ಟಿ, ಸದಾನಂದ ಉಪ್ಪಿನಕುದ್ರು, ಬಿಜೆಪಿ ಮುಖಂಡ ಪ್ರವೀಣ ಶೆಟ್ಟಿ ಗುರ್ಮೆ, ಬಿಜೆಪಿ ಬೈಂದೂರು ಮಂಡಲ ಉಪಾಧ್ಯಕ್ಷ ವಿನೋದ ಭಂಡಾರಿ, ಗಂಗೊಳ್ಳಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ರವಿ ಶೆಟ್ಟಿಗಾರ್, ಪಕ್ಷದ ಪ್ರಮುಖರು, ಗ್ರಾಪಂ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

    ಬೈಂದೂರು ಬಿಜೆಪಿ ಪ್ರಧಾನ ಕಾರ್ಯದರ್ಶಿ ಪ್ರಿಯದರ್ಶಿನಿ ದೇವಾಡಿಗ ಸ್ವಾಗತಿಸಿ ಕಾರ್ಯಕ್ರಮ ನಿರ್ವಹಿಸಿದರು. ಕಾರ್ಯದರ್ಶಿ ಪ್ರಕಾಶ ಪೂಜಾರಿ ಜೆಡ್ಡು ವಂದಿಸಿದರು.

  • ಉಡುಪಿ ಜಿಲ್ಲಾ ಕೆ.ಪಿ.ಸಿ.ಸಿ. ಕಾರ್ಮಿಕ ಘಟಕದ ಉಪಾಧ್ಯಕ್ಷರಾಗಿ ಸೈಮನ್ ಜೋಸೆಫ್ ನೇಮಕ

    ಉಡುಪಿ ಜಿಲ್ಲಾ ಕೆ.ಪಿ.ಸಿ.ಸಿ. ಕಾರ್ಮಿಕ ಘಟಕದ ಉಪಾಧ್ಯಕ್ಷರಾಗಿ ಸೈಮನ್ ಜೋಸೆಫ್ ನೇಮಕ

    ಕುಂದಾಪುರ ಮಿರರ್ ಸುದ್ದಿ…
    ಕುಂದಾಪುರ:
    ಉಡುಪಿ ಜಿಲ್ಲಾ ಕೆ.ಪಿ.ಸಿ.ಸಿ. ಕಾರ್ಮಿಕ ಘಟಕದ ಉಪಾಧ್ಯಕ್ಷರಾಗಿ ಸೈಮನ್ ಜೋಸೆಫ್ ನೇಮಕಗೊಂಡಿದ್ದಾರೆ. ಜಿಲ್ಲಾ ಕೆಪಿಸಿಸಿ ಕಾರ್ಮಿಕ ಘಟಕದ ನಿರ್ದೇಶನದಂತೆ ಉಡುಪಿ ಜಿಲ್ಲಾ ಅಧ್ಯಕ್ಷರ ಅನುಮೋದನೆಯೊಂದಿಗೆ ಹಾಗೂ ಬ್ಲಾಕ್ ಅಧ್ಯಕ್ಷರ ಶಿಫಾರಸ್ಸಿನೊಂದಿಗೆ ಸೈಮನ್ ಜೋಸೆಫ್ ಅವರನ್ನು ನೇಮಿಸಿಲಾಗಿದೆ.

  • ಕ್ಷೇತ್ರದ ಜನತೆಯ ಆಶೋತ್ತರಗಳಿಗೆ ಸ್ಪಂದಿಸಿ ಪಕ್ಷ ಸಂಘಟಿಸಲು ಸದಾಸಿದ್ಧ – ಮಂಜುನಾಥ ಭಂಡಾರಿ

    ಕ್ಷೇತ್ರದ ಜನತೆಯ ಆಶೋತ್ತರಗಳಿಗೆ ಸ್ಪಂದಿಸಿ ಪಕ್ಷ ಸಂಘಟಿಸಲು ಸದಾಸಿದ್ಧ – ಮಂಜುನಾಥ ಭಂಡಾರಿ

    ಕುಂದಾಪುರ ಮಿರರ್ ಸುದ್ದಿ…
    ಕುಂದಾಪುರ:
    ಸಂವಿಧಾನದ ಚೌಕಟ್ಟಿಯನಲ್ಲಿ, ನನ್ನ ಇತಿಮಿತಿಯಲ್ಲಿ ಕ್ಷೇತ್ರದ ಜನತೆಯ ಆಶೋತ್ತರಗಳಿಗೆ ಸ್ಪಂದಿಸುವುದು ಹಾಗೂ ಪಕ್ಷ ಸಂಘಟನೆಗೆ ಒತ್ತು ನೀಡಲು ಶ್ರಮಿಸುತ್ತೇನೆ. ಕೆ.ಪ್ರತಾಪಚಂದ್ರ ಶೆಟ್ಟಿಯವರನ್ನು ಹತ್ತಿರದಿಂದ ಬಲ್ಲವನಾಗಿದ್ದು ಅವರ ಮಾರ್ಗದರ್ಶನದಲ್ಲಿ ಕಾರ್ಯನಿರ್ವಹಿಸುತ್ತೇನೆ. ಪಕ್ಷದ 1800 ಮತಗಳ ಜೊತೆಗೆ, ಕಾಂಗ್ರೆಸ್ ಪಕ್ಷ ಸಿದ್ದಾಂತದ ಬಗ್ಗೆ ಅಭಿಮಾನವಿರುವವರ ಮತವೂ ಲಭಿಸಿದರೆ ಗೆಲುವಿಗೆ ಅರ್ಥಪೂರ್ಣವಾಗುತ್ತದೆ ಎಂದು ವಿಧಾನ ಪರಿಷತ್ ಚುನಾವಣೆ ದ.ಕ ಉಡುಪಿ ಸ್ಥಳೀಯಾಡಳಿತ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮಂಜುನಾಥ ಭಂಡಾರಿ ಹೇಳಿದರು.


    ಅವರು ಬ್ಲಾಕ್ ಕಾಂಗ್ರೆಸ್ ಕುಂದಾಪುರ ವತಿಯಿಂದ ಕುಂದಾಪುರದ ಆರ್.ಎನ್.ಶೆಟ್ಟಿ ಸಭಾಂಗಣದ ಮಿನಿಹಾಲ್‍ನಲ್ಲಿ ಕುಂದಾಪುರ ಬ್ಲಾಕ್ ಕಾಂಗ್ರೆಸ್ ವ್ಯಾಪ್ತಿಯ ಸ್ಥಳೀಯ ಸಂಸ್ಥೆಯ ಮತದಾರರ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.

    ವಿಧಾನ ಪರಿಷತ್ ಮಾಜಿ ಸಭಾಪತಿ,ಸದಸ್ಯ ಶ್ರೀ.ಕೆ. ಪ್ರತಾಪಚಂದ್ರ ಶೆಟ್ಟಿ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿ, ವಿಧಾನ ಪರಿಷತ್‍ಗೆ ನಡೆಯುವ ಈ ಚುನಾವಣೆಯಲ್ಲಿ ಅಭ್ಯರ್ಥಿ ಮಂಜುನಾಥ ಭಂಡಾರಿ ಅವರು ಮೊದಲ ಪ್ರಾಶಸ್ತ್ಯದಲ್ಲಿ ಗೆಲ್ಲಲು ನಮ್ಮ ಎಲ್ಲ ಮತದೊಂದಿಗೆ ಪಕ್ಷೇತರರ ಮತವೂ ಕೂಡಾ ಲಭಿಸುವಂತೆ ಮಾಡಬೇಕು. ಸ್ಥಳೀಯಾಡಳಿತದ ಮೂಲಕ ಆಯ್ಕೆಯಾಗುವ ಸದಸ್ಯರಿಗೆ ಮಹತ್ವದ ಜವಾಬ್ದಾರಿಗಳು ಇರುತ್ತವೆ. ಅದನ್ನು ಮಂಜುನಾಥ ಭಂಡಾರಿಯವರು ಸಮರ್ಥವಾಗಿ ನಿಭಾಯಿಸುತ್ತಾರೆ ಎನ್ನುವ ವಿಶ್ವಾಸವಿದೆ. ಹಿಂದೆ ಜನರ ಸಮಸ್ಯೆಗಳನ್ನು ಹಿಡಿದುಕೊಂಡು ಚುನಾಯಿತ ಪ್ರತಿನಿಧಿಗಳು ಸರ್ಕಾರಿ ಕಛೇರಿಗೆಗಳಿಗೆ ಹೋಗಬೇಕಿತ್ತು. ಈಗ ಆ ಸ್ಥಾನವನ್ನು ಮಧ್ಯವರ್ತಿಗಳು ತುಂಬಿದ್ದಾರೆ. ಈ ಹಂತಕ್ಕೆ ವ್ಯವಸ್ಥೆ ತಲುಪಿದೆ ಎಂದರು.

    ನನಗೆ ಕಾಂಗ್ರೆಸ್ ಪಕ್ಷ ಸಾಕಷ್ಟು ಅವಕಾಶ, ಹುದ್ದೆಗಳನ್ನು ನೀಡಿದೆ. ಸಭಾಪತಿ ಸ್ಥಾನವನ್ನು ನೀಡಿದೆ. ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಪಕ್ಷಕ್ಕೆ ನೀಡಿದ ಕೊಡುಗೆ ಗಮನಾರ್ಹವಾದುದು. ನನಗೂ ಕೂಡಾ ಅವರ ಋಣವಿದೆ. ಹಾಗಾಗಿ ನನ್ನಿಂದ ಪಕ್ಷನಿಷ್ಠೆಗೆ ಧಕ್ಕೆಯಾಗುವುದಿಲ್ಲ. ಪಕ್ಷಕ್ಕೆ ನನ್ನ ಸೇವೆ ನಿರಂತರವಾಗಲಿದೆ ಎಂದರು.

    ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ ಕೊಡವೂರು, ಕೆಪಿಸಿಸಿ ಸಂಯೋಜಕಿ, ಕುಂದಾಪುರ ಕ್ಷೇತ್ರ ವೀಕ್ಷಕರಾದ ಮಮತಾ ಗಟ್ಟಿ, ಪಕ್ಷದ ಮುಖಂಡರಾದ ಮಲ್ಯಾಡಿ ಶಿವರಾಮ ಶೆಟ್ಟಿ, ಕೆದೂರು ಸದಾನಂದ ಶೆಟ್ಟಿ, ಕಿಶನ್ ಹೆಗ್ಡೆ ಕೊಳ್ಕೆಬೈಲು, ನವೀನ್ ಡಿಸೋಜ, ಕೃಷ್ಣದೇವ ಕಾರಂತ, ಬಿ.ಹಿರಿಯಣ್ಣ, ವಿಕಾಸ್ ಹೆಗ್ಡೆ, ದೇವಕಿ ಸಣ್ಣಯ್ಯ, ದಿನೇಶ ಪುತ್ರನ್, ಪ್ರಸನ್ನಕುಮಾರ ಶೆಟ್ಟಿ, ರೋಶನ್ ಕುಮಾರ್ ಶೆಟ್ಟಿ, ಇಚ್ಛಿತಾರ್ಥ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.
    ಕುಂದಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹರಿಪ್ರಸಾದ್ ಶೆಟ್ಟಿ ಕಾನ್ಮಕ್ಕಿ ಸ್ವಾಗತಿಸಿ, ಪ್ರಾಸ್ತಾವಿಕ ಮಾತುಗಳನ್ನಾಡಿ ಕುಂದಾಪುರ ಬ್ಲಾಕ್ ವ್ಯಾಪ್ತಿಯಲ್ಲಿ 119 ಸದಸ್ಯರನ್ನು ಹೊಂದಿ, ಜಿಲ್ಲೆಯಲ್ಲಿ ಪ್ರಥಮ ಸ್ಥಾನದಲ್ಲಿದೆ ಎಂದರು.

    ವಿನೋದ್ ಕ್ರಾಸ್ತಾ ಕಾರ್ಯಕ್ರಮ ನಿರ್ವಹಿಸಿ, ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಚಂದ್ರಶೇಖರ ಖಾರ್ವಿ ವಂದಿಸಿದರು.


    ಬೈಂದೂರು:ಬೆಳಿಗ್ಗೆ ಬೈಂದೂರು ಬ್ಲಾಕ್ ಕಾಂಗ್ರೆಸ್ ವತಿಯಿಂದ ಚುನಾವಣಾ ಪ್ರಚಾರ ಸಭೆ ನಡೆಯಿತು. ಮಾಜಿ ಸಭಾಪತಿ, ವಿಧಾನ ಪರಿಷತ್ ಸದಸ್ಯ ಕೆ,.ಪ್ರತಾಪಚಂದ್ರ ಶೆಟ್ಟಿ, ಅಭ್ಯರ್ಥಿ ಮಂಜುನಾಥ ಭಂಡಾರಿ, ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ರಾಜು ಪೂಜಾರಿ, ಪ್ರಕಾಶ್ಚಂದ್ರ ಶಟ್ಟಿ, ನವೀನ್ ಡಿಸೋಜ, ಗೌರಿ ದೇವಾಡಿಗ, ಎಮ,.ಎಸ್ ಮಹಮ್ಮದ್ ಮೊದಲಾದವರು ಉಪಸ್ಥಿತರಿದ್ದರು.
    ಬ್ಲಾಕ್ ಅಧ್ಯಕ್ಷ ಮದನ್ ಕುಮಾರ್ ಕಾರ್ಯಕ್ರಮ ನಿರ್ವಹಿಸಿದರು.