Category: ರಾಜಕೀಯ

  • ಕೊಲ್ಲೂರು: ಸಂಸದ ರಾಘವೇಂದ್ರ ನೇತೃತ್ವದಲ್ಲಿ ಬಿಜೆಪಿ ಸದಸ್ಯತ್ವ ಅಭಿಯಾನಕ್ಕೆ ಚಾಲನೆ

    ಕೊಲ್ಲೂರು: ಸಂಸದ ರಾಘವೇಂದ್ರ ನೇತೃತ್ವದಲ್ಲಿ ಬಿಜೆಪಿ ಸದಸ್ಯತ್ವ ಅಭಿಯಾನಕ್ಕೆ ಚಾಲನೆ

    ಕುಂದಾಪುರ ಮಿರರ್ ಸುದ್ದಿ…


    ಕುಂದಾಪುರ: ಬೈಂದೂರು ಮಂಡಲ ಬಿಜೆಪಿ ವತಿಯಿಂದ ಬುಧವಾರ ಬೆಳಿಗ್ಗೆ ಕೊಲ್ಲೂರಿನ ಶ್ರೀ ಪುರಾಣಿಕ ಸಭಾ ಭವನದಲ್ಲಿ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಲಾಯಿತು.

    ಅಭಿಯಾನಕ್ಕೆ ಚಾಲನೆ ನೀಡಿದ ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ ಮಾತನಾಡಿ, ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿಯೇ ಅತೀ ಹೆಚ್ಚು ಮತಗಳನ್ನು ನೀಡಿದ ಬೈಂದೂರು ವಿಧಾನಸಭಾ ಕ್ಷೇತ್ರಕ್ಕೆ ನಾನು ಮೊದಲ ಆದ್ಯತೆ ನೀಡುತ್ತೇನೆ ಎಂದರು. ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇಲ್ಲದೇ ಇದ್ದರೂ ಬೈಂದೂರು ಶಾಸಕ ಗುರುರಾಜ ಗಂಟಿಹೊಳೆ ನೇತೃತ್ವದಲ್ಲಿ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ಪ್ರಯತ್ನಿಸಲಾಗುತ್ತಿದೆ. ಕಾಲುಸಂಕ, ಕುಡಿಯುವ ನೀರು, ರಸ್ತೆ ಅಭಿವೃದ್ಧಿ, ದಾರಿ ದೀಪಗಳ ಸಮಸ್ಯೆಗಳು, ಕೃಷಿ ನೀರಾವರಿ ಹೀಗೇ ಹಂತ ಹಂತವಾಗಿ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿವೆ. ಬೈಂದೂರಿನಿಂದ ರಾಣೆಬೆನ್ನೂರು ವರೆಗಿನ ರಾಷ್ಟ್ರೀಯ ಹೆದ್ದಾರಿ 766ಸಿ ಕಾಮಗಾರಿ ಆರಂಭಗೊಂಡಿದ್ದು ಇದರಿಂದ ಬೈಂದೂರು ಶಿವಮೊಗ್ಗ ಸಂಪರ್ಕ ಸುಧಾರಣೆಯಾಗಲಿದೆ ಎಂದರು. ಬಿಜೆಪಿ ಮೂರನೇ ಬಾರಿ ಸದಸ್ಯತ್ವ ಅಭಿಯಾನ ಹಮ್ಮಿಕೊಂಡಿದ್ದು, ಪ್ರತಿಯೊಬ್ಬರು ಜಗತ್ತಿನ ಅತೀ ದೊಡ್ಡ ರಾಷ್ಟ್ರೀಯ ಪಕ್ಷವಾದ ಬಿಜೆಪಿ ಸದಸ್ಯತ್ವ ಪಡೆದುಕೊಳ್ಳಬೇಕು ಎಂದರು.

    ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಮಾತನಾಡಿ, ಬೈಂದೂರು ಮಂಡಲದ 8 ಮಹಾಶಕ್ತಿಕೇಂದ್ರಕ್ಕೂ ಅಧ್ಯಕ್ಷರ ಆಯ್ಕೆ ನಡೆಸಲಾಗಿದ್ದು, ಪ್ರತೀ ಬೂತ್ ಮಟ್ಟದಲ್ಲೂ 25 ಪೇಜ್ ಪ್ರಮುಖರ ಆಯ್ಕೆ ನಡೆದಿದೆ. ಒಟ್ಟು 246 ಬೂತ್ ಗಳಲ್ಲಿ ಬಿಜೆಪಿ ಸದಸ್ಯತ್ವ ಅಭಿಯಾನ ಪ್ರಾಮಾಣಿಕವಾಗಿ ನಡೆಯುತ್ತದೆ. ಸಮಾಜಸೇವೆಯ ಜೊತೆಗೆ ಪಕ್ಷ ಸಂಘಟನೆಯ ಕಡೆಗೂ ಆದ್ಯತೆ ನೀಡಬೇಕು. ಜನ ಸೇವೆ ಬಿಜೆಪಿ ಉದ್ದೇಶವಾಗಿದೆ ಎಂದರು. ಸದಸ್ಯತ್ವ ಅಭಿಯಾನದ ಸಹಸಂಚಾಲಕಿ ಪ್ರಿಯದರ್ಶಿನಿ ಸದಸ್ಯತ್ವ ಅಭಿಯಾನದ ಬಗ್ಗೆ ಮಾಹಿತಿ ನೀಡಿದರು. ಆನಂದ್ ಖಾರ್ವಿ ಮೊದಲಾದವರು ಉಪಸ್ಥಿತರಿದ್ದರು.

    ಬೈಂದೂರು ಮಂಡಲದ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ ಪ್ರಾಸ್ತಾವಿಕ ಮಾತನಾಡಿದರು. ಬೈಂದೂರು ಮಂಡಲದ ಪ್ರ.ಕಾರ್ಯದರ್ಶಿ ಮಹೇಂದ್ರ ಪೂಜಾರಿ ಕಾರ್ಯಕ್ರಮ ನಿರೂಪಿಸಿ, ಸ್ವಾಗತಿಸಿ, ವಂದಿಸಿದರು.

  • ಕುಂದಾಪುರ ಬಿಜೆಪಿಯಿಂದ ಪುರಸಭೆ, ಪಟ್ಟಣ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರಿಗೆ ಅಭಿನಂದನಾ ಕಾರ್ಯಕ್ರಮ ಹಾಗೂ ಸದಸ್ಯತ್ವ ನೋಂದಣಿ ಅಭಿಯಾನ ಪೂರ್ವಭಾವಿ ಸಭೆ

    ಕುಂದಾಪುರ ಬಿಜೆಪಿಯಿಂದ ಪುರಸಭೆ, ಪಟ್ಟಣ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರಿಗೆ ಅಭಿನಂದನಾ ಕಾರ್ಯಕ್ರಮ ಹಾಗೂ ಸದಸ್ಯತ್ವ ನೋಂದಣಿ ಅಭಿಯಾನ ಪೂರ್ವಭಾವಿ ಸಭೆ

    ಕುಂದಾಪುರ ಮಿರರ್ ಸುದ್ದಿ…

    ಕುಂದಾಪುರ :ಪಕ್ಷದ ವ್ಯವಸ್ಥೆಯಲ್ಲಿ ಸದಸ್ಯರ ನೋಂದಣಿ, ನವೀಕರಣ ಪ್ರಕ್ರಿಯೆಗಳು ನಿರಂತರವಾಗಿ ನಡೆಯುತ್ತಿರುವುದೆ. ದೇಶದಲ್ಲಿ 10 ಕೋಟಿ ಸದಸ್ಯರ ಗುರಿ, ರಾಜ್ಯದಲ್ಲಿ 1.5ಕೋಟಿ ಸದಸ್ಯರನ್ನು ನೊಂದಾಯಿಸುವ ಗುರಿಯನ್ನು ನೀಡಲಾಗಿದೆ. ಕುಂದಾಪುರ ಕ್ಷೇತ್ರ ಪಕ್ಷ ನೀಡಿದ ಜವಬ್ದಾರಿಗಳನ್ನು ಹಿಂದಿನಿಂದಲೂ ಕೂಡಾ ಸಮರ್ಥವಾಗಿ ನಿಭಾಯಿಸಿಕೊಂಡು ಬಂದಿದೆ. ಕಳೆದ 24 ವರ್ಷಗಳಿಂದ ಶಾಸಕರಾಗಿ ಸೇವೆ ಸಲ್ಲಿಸಿದ ಹಾಲಾಡಿ ಶ್ರೀನಿವಾಸ ಶೆಟ್ಟರು ಎಲ್ಲರನ್ನು ವಿಶ್ವಾಸದಿಂದ ಕಾರ್ಯಕ್ರಮದ ಯಶಸ್ಸಿಗೆ ಪ್ರಮುಖ ಪಾತ್ರ ವಹಿಸಿದ್ದವರು. ಹಾಗಾಗಿ ಕುಂದಾಪುರ ಕ್ಷೇತ್ರದಲ್ಲಿ ಪಕ್ಷ ಸಂಘಟನೆಯಾಗಲಿ, ಪಕ್ಷದ ಜವಬ್ದಾರಿಗಳು ಸಮರ್ಪಕವಾಗಿ ನಡೆಯಲು ಸಾಧ್ಯವಾಗಿದೆ. ಈ ಬಾರಿ ಪಕ್ಷ ನೀಡಿದ ಗುರಿಯನ್ನು ತಲುಪಲು ಎಲ್ಲರೂ ಒಂದಾಗಿ ಶ್ರಮಿಸೋಣ, ದಾಖಲೆಯ ಸಂಖ್ಯೆಯಲ್ಲಿ ಸದಸ್ಯರನ್ನು ನೊಂದಾಯಿಸೋಣ ಎಂದು ಕುಂದಾಪುರ ಕ್ಷೇತ್ರದ ಶಾಸಕ ಎ.ಕಿರಣ್ ಕುಮಾರ್ ಕೊಡ್ಗಿ ಹೇಳಿದರು.

    ಅವರು ಕುಂದಾಪುರ ಮಂಡಲ ಬಿಜೆಪಿ ಕಛೇರಿಯಲ್ಲಿ ನಡೆದ ಸದಸ್ಯತ್ವ ನೋಂದಣಿ ಅಭಿಯಾನ ಪೂರ್ವಭಾವಿ ಸಭೆ ಹಾಗೂ ಪುರಸಭೆ, ಪಟ್ಟಣ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರಿಗೆ ಅಭಿನಂದನಾ ಕಾರ್ಯಕ್ರಮದಲ್ಲಿ ಸದಸ್ಯತ್ವ ನೊಂದಣಿಯ ಕೈಪಿಡಿ ಬಿಡುಗಡೆಗೊಳಿಸಿ ಮಾತನಾಡಿದರು.

    ಸದಸ್ಯತ್ವ ಅಭಿಯಾನದ ಜಿಲ್ಲಾ ಪ್ರಮುಖರಾದ ರಾಘವೇಂದ್ರ ಕುಂದರ್ ಮಾಹಿತಿ ನೀಡುತ್ತಾ, ಬಿಜೆಪಿಯಲ್ಲಿ ಸದಸ್ಯತ್ವ ಶಾಶ್ವತವಲ್ಲ, ಪ್ರತೀ ಐದು ವರ್ಷಗಳಿಗೊಮ್ಮೆ ಪುನಃದಾಖಲಿಸುವ ಪ್ರಕ್ರಿಯೆ ನಡೆಯುತ್ತದೆ. ಸಾಮಾನ್ಯ ಸದಸ್ಯ ಹಾಗೂ ಸಕ್ರಿಯ ಸದಸ್ಯ ಎನ್ನುವ ಎರಡು ಹಂತದಲ್ಲಿ ಈ ನೊಂದಣಿ ನಡೆಯುತ್ತದೆ. ಪಕ್ಷದ ವಿಚಾರ ವಿಸ್ತಾರಕ್ಕೆ ಇದು ಉತ್ತಮ ಮಾರ್ಗವಾಗಿದೆ. ಸೆ.2ರಿಂದ ಸೆ.25ರ ತನಕ ಸದಸ್ಯತ್ವ ಅಭಿಯಾನ ನಡೆಯುತ್ತದೆ. ಇದಕ್ಕೆ ಅಟಲ್ ಬಿಹಾರಿ ವಾಜಪೇಯಿ ಅಭಿಯಾನ ಎಂದು ಹೆಸರಿಡಲಾಗಿದೆ. ಹಾಗೆಯೇ ಪ್ರಧಾನಿ ನರೇಂದ್ರ ಮೋದಿಯವರ ಜನ್ಮದಿನಾಚರಣೆಯ ಅಂಗವಾಗಿ ಸೆ.11ರಿಂದ 17ರ ತನಕ ಮಹಾ ಅಭಿಯಾನ ನಡೆಸಲಾಗುವುದು. ಪ್ರತೀ ಬೂತಿಗೆ 300 ಸದಸ್ಯರನ್ನು ನೊಂದಾಯಿಸುವ ಗುರಿ ನೀಡಲಾಗಿದೆ. ಕುಂದಾಪುರ ಮಂಡಲದ 222 ಬೂತ್‍ನಲ್ಲಿ ಒಟ್ಟು 66,600 ಸದಸ್ಯರನ್ನು ನೊಂದಾಯಿಸುವ ಗುರಿ ಇದೆ. ಅಕ್ಟೋಬರ್ 1ರಿಂದ 15ರ ತನಕ ಎರಡನೇ ಹಂತದ ಸದಸ್ಯತ್ವ ನೊಂದಣಿ ಅಭಿಯಾನ ನಡೆಯಲಿದೆ, ಈ ಬಾರಿಯೂ ಮಿಸ್ಡ್ ಕಾಲ್ ಕೊಡುವ ಮೂಲಕ ನೊಂದಣಿ ನಡೆಯುತ್ತದೆ. ಮಿಸ್ಡ್ ಕಾಲ್ ಕೊಟ್ಟೊಡನೆ ಒಂದು ಲಿಂಕ್ ಬರುತ್ತದೆ. ಆ ಲಿಂಕ್ ತೆರೆದಾಗ ಅಪ್ಲೀಕೇಶನ್ ಒಪನ್ ಆಗುತ್ತದೆ. ಅದಕ್ಕೆ ಪೋಟೋದ ಜೊತೆಯಲ್ಲಿ ಕೇಳಿರುವ ಮಾಹಿತಿ ನೀಡಬೇಕು ಎಂದರು.

    ಕುಂದಾಪುರ ಮಂಡಲದ ಅಧ್ಯಕ್ಷರಾದ ಸುರೇಶ ಶೆಟ್ಟಿ ಗೋಪಾಡಿ ಮಾತನಾಡಿ ರಾಷ್ಟ್ರದಲ್ಲಿ ಮೂರನೇ ಬಾರಿಗೆ ಸದಸ್ಯತ್ವ ನೊಂದಣಿ ಅಭೀಯಾನ ನಡೆಯುತ್ತಿದೆ. ರಾಜ್ಯದಲ್ಲಿ ಒಂದುವರೆಬ ಕೋಟಿ ಸದಸ್ಯರನ್ನು ನೊಂದಾಯಿಸುವ ಗುರಿ ನೀಡಿದ್ದು ಕುಂದಾಪುರದ 52 ಶಕ್ತಿ ಕೇಂದ್ರದ ಮೂಲಕ ಯಶಸ್ವಿ ಅನುಷ್ಠಾನ ಆಗಬೇಕು. ಕಳೆದ ಬಾರಿಗಿಂತ ಹೆಚ್ಚಿನ ಸದಸ್ಯರನ್ನು ನೊಂದಾಯಿಸುವ ಕೆಲಸ ನಮ್ಮಿಂದಾಗಬೇಕು ಎಂದರು.

    ಮಂಡಲದ ನಿಕಟಪೂರ್ವ ಅಧ್ಯಕ್ಷ ಶಂಕರ ಅಂಕದಕಟ್ಟೆ, ಸದಸ್ಯತ್ವ ನೊಂದಣಿ ಅಭಿಯಾನದ ತಾಲೂಕು ಸಂಚಾಲಕರಾದ ಕಾಡೂರು ಸುರೇಶ ಶೆಟ್ಟಿ, ಸಹ ಸಂಚಾಲಕರಾದ ಸದಾನಂದ ಬಳ್ಕೂರು, ರೂಪ ಪೈ, ರಾಜೇಶ ಶೆಟ್ಟಿ ಉಪಸ್ಥಿತರಿದ್ದರು.
    ಈ ಸಂದರ್ಭದಲ್ಲಿ ಕುಂದಾಪುರ ಪುರಸಭೆಯ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಮೋಹನದಾಸ ಶೆಣೈ, ಉಪಾಧ್ಯಕ್ಷೆ ವನಿತಾ ಎಸ್.ಬಿಲ್ಲವ, ಸಾಲಿಗ್ರಾಮ ಪಟ್ಟಣ ಪಂಚಾಯತ್ ಅಧ್ಯಕ್ಷೆ ಸುಕನ್ಯಾ ಶೆಟ್ಟಿ, ಉಪಾಧ್ಯಕ್ಷೆ ಗಿರಿಜಾ ಪೂಜಾರಿ ಇವರನ್ನು ಸನ್ಮಾನಿಸಲಾಯಿತು.

    ಮಂಡಲದ ಪ್ರಧಾನ ಕಾರ್ಯದರ್ಶಿ ಸುದೀರ್ ಕೆ.ಎಸ್ ಸ್ವಾಗತಿಸಿದರು. ಇನ್ನೋರ್ವ ಪ್ರಧಾನ ಕಾರ್ಯದರ್ಶಿ ಸತೀಶ ಪೂಜಾರಿ ವಕ್ವಾಡಿ ಕಾರ್ಯಕ್ರಮ ನಿರ್ವಹಿಸಿದರು. ಸದಾನಂದ ಬಳ್ಕೂರು ವಂದಿಸಿದರು.

  • ಕುಂದಾಪುರ :ಕಳೆದ ಚುನಾವಣೆಯಲ್ಲಿ ಜನ ಬಿಜೆಪಿಗೆ ಪಾಠ ಕಲಿಸಿದ್ದಾರೆ ದೇಶದಲ್ಲಿ ಬಿಜೆಪಿ ಅತಂತ್ರವಾಗಿದೆ – ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ

    ಕುಂದಾಪುರ :ಕಳೆದ ಚುನಾವಣೆಯಲ್ಲಿ ಜನ ಬಿಜೆಪಿಗೆ ಪಾಠ ಕಲಿಸಿದ್ದಾರೆ ದೇಶದಲ್ಲಿ ಬಿಜೆಪಿ ಅತಂತ್ರವಾಗಿದೆ – ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ

    ಕುಂದಾಪುರ ಮಿರರ್ ಸುದ್ದಿ…

    ಕುಂದಾಪುರ: ನಾನೂರು ಸೀಟುಗಳ ಅತೀ ಆತ್ಮವಿಶ್ವಾಸದಲ್ಲಿದ್ದ ಬಿಜೆಪಿಗೆ ಮತದಾರರು ತಕ್ಕ ಪಾಠ ಕಲಿಸಿದ್ದಾರೆ. ಅಪವಿತ್ರ ಮೈತ್ರಿಯಿಂದ ಸರ್ಕಾರ ನಡೆಸುತ್ತಿರುವ ಬಿಜೆಪಿ ದೇಶದಲ್ಲಿ ಅತಂತ್ರವಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ವಿಧಾನ ಪರಿಷತ್‌ ಸದಸ್ಯ ಮಂಜುನಾಥ್ ಭಂಡಾರಿ ಹೇಳಿದರು.

    ಕುಂದಾಪುರದಲ್ಲಿ ಬುಧವಾರ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಅಯೋಧ್ಯೆಯ ಅಪೂರ್ಣ ಶ್ರೀರಾಮ ಮಂದಿರ ಹಿಂದೂ ಧರ್ಮಕ್ಕೆ ಬಿಜೆಪಿ ಮಾಡಿದ ಅಪಮಾನ. ರಾಮ ಮಂದಿರ ಇರುವ ಉತ್ತರ ಪ್ರದೇಶದಲ್ಲಿಯೇ ಬಿಜೆಪಿ ನೆಲಕಚ್ಚಿದೆ. ಬಜೆಟ್ ಮೈತ್ರಿ ಉಳಿಸಿಕೊಳ್ಳುವುದಕ್ಕಾಗಿ ಮಂಡಿಸಿದಂತಿದೆ. ಚಂದ್ರಬಾಬು ನಾಯ್ಡು, ನಿತೀಶ್ ಕುಮಾರ್ ಬಗ್ಗೆ ಇಲ್ಲಸಲ್ಲದ ಆರೋಪ ಮಾಡಿದವರು ಈಗ ದೋಸ್ತಿ ಮಾಡಿಕೊಂಡಿದ್ದಾರೆ ಎಂದಿದ್ದಲ್ಲದೇ, ಲೋಕಸಭೆಯಲ್ಲಿ ರಾಹುಲ್ ಗಾಂಧಿ ಎದುರು ಮೋದಿ ಧ್ವನಿ ಕಳೆದುಕೊಂಡಿದ್ದಾರೆ. ಲೋಕಸಭೆಯಲ್ಲಿ ಬಿಜೆಪಿ ನೇತೃತ್ವದ ಸರ್ಕಾರದ ಬಗ್ಗೆ ಜ್ವಲಂತ ಸಮಸ್ಯೆಗಳ ಬಗ್ಗೆ ಮಾತಾಡುತ್ತಲೇ ಇಲ್ಲ. ಧರ್ಮಾಧರಿತ ರಾಜಕಾರಣವೇ ಬಿಜೆಪಿಯ ಗುರಿ ಎಂದು ಅವರು ಟೀಕಿಸಿದರು. ಇದೇ ಸಂದರ್ಭದಲ್ಲಿ ದಕ್ಷಿಣ ಭಾರತ ನೆರೆ ಪೀಡಿತ ಪ್ರದೇಶಗಳಾಗಿ ಬದಲಾಗಿದೆ, ಪ್ರಕೃತಿ ವಿಕೋಪದಿಂದ ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಕ್ಕೆ ಸಂತಾಪ ಸೂಚಿಸಿದರು.

    ವಿಧಾನಸಭೆ ಹಾಗೂ ವಿಧಾನಪರಿಷತ್ ಗಳಲ್ಲಿ ವಿರೋಧ ಪಕ್ಷಗಳು ನಡೆದುಕೊಳ್ಳಬೇಕಾದ ರೀತಿಯಲ್ಲಿ ನಡೆದುಕೊಳ್ಳುತ್ತಿಲ್ಲ. ಬಿಜೆಪಿ ಕಾಂಗ್ರೆಸ್‌ ಸರ್ಕಾರವನ್ನು ಉರುಳಿಸಿ ಅಧಿಕಾರಕ್ಕೆ ಬರಬೇಕೆಂದು ಹಗಲು ಕನಸು ಕಾಣುತ್ತಿದೆ. ಜೆಡಿಎಸ್ ಮತ್ತು ಬಿಜೆಪಿ ಮೈತ್ರಿ ಸುದೀರ್ಘ ಕಾಲದವರೆಗೆ ಇರುವುದಿಲ್ಲ. ಈ ಮೈತ್ರಿಗೆ ಭವಿಷ್ಯವಿಲ್ಲ. ಕರಾವಳಿಯಲ್ಲಿ ಬಿಜೆಪಿ ಧರ್ಮಾಧರಿತ ಬೀಜವನ್ನು ಬಿತ್ತಿದೆ. ಇದನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡಲು ಕಾಂಗ್ರೆಸ್ ಹೋರಾಡಲಿದೆ ಎಂದು ಅವರು ಹೇಳಿದ್ದಾರೆ.

    ಪಶ್ಚಿಮ ಘಟ್ಟಗಳನ್ನು ಉಳಿಸಿಕೊಳ್ಳುವ ದೃಷ್ಟಿಯಲ್ಲಿ ಗಾಡ್ಗೀಳ್ ಹಾಗೂ ಕಸ್ತೂರಿ ರಂಗನ್ ವರದಿಯನ್ನು ಅನುಷ್ಟಾನಕ್ಕೆ ತರುವಂತೆಯೂ ಸರ್ಕಾರಕ್ಕೆ ಒತ್ತಾಯ ಮಾಡುತ್ತೇನೆ ಎಂದು ಅವರು ಹೇಳಿದರು.

    ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಕುಂದಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹರಿಪ್ರಸಾದ್ ಶೆಟ್ಟಿ ಕಾನ್ಮಕ್ಕಿ, ಬೈಂದೂರು ಬ್ಲಾಕ್ ಅಧ್ಯಕ್ಷ ಅರವಿಂದ್ ಪೂಜಾರಿ, ಮಲ್ಯಾಡಿ ಶಿವರಾಮ ಶೆಟ್ಟಿ, ಮೊಳಹಳ್ಳಿ ದಿನೇಶ್ ಹೆಗ್ಡೆ , ರಾಜು ಪೂಜಾರಿ, ವಿಕಾಸ್ ಹೆಗ್ಡೆ, ವಿನೋದ್ ಕ್ರಾಸ್ತ್, ಇಚ್ಚಿತಾರ್ಥ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು..

  • ಕುಂದಾಪುರ :ಭಾರತವನ್ನು ಜೋಡಿಸಲು ಕಾಂಗ್ರೆಸಿಗೆ ಎಂದಿಗೂ ಸಾಧ್ಯವಿಲ್ಲ – ಡಾ|ಧನಂಜಯ ಸರ್ಜಿ

    ಕುಂದಾಪುರ :ಭಾರತವನ್ನು ಜೋಡಿಸಲು ಕಾಂಗ್ರೆಸಿಗೆ ಎಂದಿಗೂ ಸಾಧ್ಯವಿಲ್ಲ – ಡಾ|ಧನಂಜಯ ಸರ್ಜಿ

    ಕುಂದಾಪುರ ಮಿರರ್ ಸುದ್ದಿ…
    ಕುಂದಾಪುರ :ಭಾರತವನ್ನು ಒಡೆದ ಕಾಂಗ್ರೆಸ್ ಪಕ್ಷಕ್ಕೆ ಭಾರತವನ್ನು ಜೋಡಿಸಲು ಎಂದಿಗೂ ಸಾಧ್ಯವಿಲ್ಲ. ಭಾರತವನ್ನು ಜೋಡಿಸಿದ್ದು ಪ್ರಧಾನಿ ನರೇಂದ್ರ ಮೋದಿಯವರು. ಕಾಂಗ್ರೆಸ್‌ನ ದೌರ್ಜನ್ಯದಿಂದ ಜನ ಬೇಸೆತ್ತುಕೊಂಡಿದ್ದಾರೆ. ಮುಂಬರುವ ಎಲ್ಲಾ ಚುನಾವಣೆಗಳಲ್ಲಿಯೂ ಕೂಡಾ ಕಾಂಗ್ರೆಸ್ ಪಕ್ಷವನ್ನು ಕಿತ್ತೇಸೆಯುವ ಸಂಕಲ್ಪ ಬಿಜೆಪಿ ಕಾರ್ಯಕರ್ತರು ಮಾಡಬೇಕು ಎಂದು ವಿಧಾನ ಪರಿಷತ್ ಸದಸ್ಯ  ಡಾ.ಧನಂಜಯ ಸರ್ಜಿ ಅಭಿಪ್ರಾಯ ಪಟ್ಟರು.
    ಅವರು ಕೋಟೇಶ್ವರದ ವಿಶ್ವಕರ್ಮ ಕಲ್ಯಾಣ ಮಂಟಪದಲ್ಲಿ  ಭಾರತೀಯ ಜನತಾ ಪಕ್ಷ ಕುಂದಾಪುರ ಮಂಡಲದ ವತಿಯಿಂದ ನಡೆದ ವಿಶೇಷ ಕಾರ್ಯಕಾರಿಣಿ ಸಭೆಯ ಸಮಾರೋಪ ಕಾರ್ಯಕ್ರಮದಲ್ಲಿ ಅಭಿನಂದನೆ ಸ್ವೀಕರಿಸಿ ಮಾತನಾಡಿದರು.
    ಲೋಕಸಭಾ ಚುನಾವಣೆ ಮತ್ತು ವಿಧಾನ ಪರಿಷತ್ ಚುನಾವಣೆಯಲ್ಲಿ ಜನತೆ ನಿರೀಕ್ಷೆಗೂ ಮೀರಿದ ಫಲಿತಾಂಶ ನೀಡಿದ್ದಾರೆ. ಕಾರ್ಯಕರ್ತರು ಮನಸ್ಸು ಮಾಡಿದರೆ ಏನೂ ಬೇಕಾದರೂ ಮಾಡಬಹುದು ಎನ್ನುವುದಕ್ಕೆ ಈ ಚುನಾವಣೆಯೇ ಸಾಕ್ಷಿಯಾಗಿತ್ತು. ನಿಮ್ಮ ಋಣ ನನ್ನ ಮೇಲಿದೆ. ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇನೆ ಎಂದು ಅವರು ಅಭಿಪ್ರಾಯ ಪಟ್ಟರು.
    ಅಭಿನಂದನೆ ಸ್ವೀಕರಿಸಿ ಮಾತನಾಡಿದ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಪ್ರಧಾನಿ ನರೇಂದ್ರ ಮೋದಿ, ಅಮಿತ್ ಷಾ, ನಡ್ಡಾ ಮುಂತಾದ ವ್ಯಕ್ತಿಗಳ ಸಮೀಪದಲ್ಲಿ ನಾನು ಇರುತ್ತೇನೆ ಎಂದು ನಾನು ಊಹಿಸಿಯೇ ಇರಲಿಲ್ಲ. ಇದು ಮತದಾರರು ವಿಶ್ವಾಸವಿಟ್ಟು ನೀಡಿದ ತೀರ್ಪು. ಆಯುಷ್ಮಾನ್, ರೈಲ್ವೆ, ಹೆದ್ದಾರಿ ಮುಂತಾದ ಪ್ರಚಲಿತ ವಿಷಯಗಳು ನನ್ನ ಮುಂದಿದೆ. ಖಂಡಿತ ಶಕ್ತಿಮೀರಿ ಪ್ರಯತ್ನ ಮಾಡುತ್ತೇನೆ ಎಂದರು.
    ಶಾಸಕ ಕಿರಣ್ ಕುಮಾರ್ ಕೊಡ್ಗಿ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು. ಕುಂದಾಪುರ ಮಂಡಲದ ಅಧ್ಯಕ್ಷ ಸುರೇಶ ಶೆಟ್ಟಿ ಗೋಪಾಡಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
    ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಸುರೇಶ ಶೆಟ್ಟಿ ಕಾಡೂರು, ಜಿಲ್ಲಾ ಕಾರ್ಯದರ್ಶಿಗಳಾದ ಸದಾನಂದ ಬಳ್ಕೂರು, ಅನಿತಾ ಶ್ರೀಧರ, ಹಿಂದುಳಿದ ವರ್ಗಗಳ ಮೋರ್ಚಾದ ರಾಜ್ಯ ಉಪಾಧ್ಯಕ್ಷ ವಿಠಲ್ ಪೂಜಾರಿ ಐರೋಡಿ ಉಪಸ್ಥಿತರಿದ್ದರು.
    ಕುಂದಾಪುರ ಮಂಡಲದ ಪ್ರಧಾನ ಕಾರ್ಯದರ್ಶಿ ಸುಧೀರ್ ಕೆ.ಎಸ್ ಸ್ವಾಗತಿಸಿದರು. ಅನುಸೂಯ, ರೂಪ ಪೈ ಸನ್ಮಾನ ಪತ್ರ ವಾಚಿಸಿದರು.ಕುಂದಾಪುರ ಮಂಡಲದ ಪ್ರಧಾನ ಕಾರ್ಯದರ್ಶಿ ಸತೀಶ್ ಪೂಜಾರಿ ವಕ್ವಾಡಿ ಕಾರ್ಯಕ್ರಮ ನಿರ್ವಹಿಸಿ,  ಕಾರ್ಯದರ್ಶಿ ನೇತ್ರಾವತಿ ವಂದಿಸಿದರು.
  • ಕೋಟ ಶ್ರೀನಿವಾಸ ಪೂಜಾರಿಯವರಿಗೆ ಹುಟ್ಟೂರಲ್ಲಿ ಭವ್ಯ ಸ್ವಾಗತ.

    ಕೋಟ ಶ್ರೀನಿವಾಸ ಪೂಜಾರಿಯವರಿಗೆ ಹುಟ್ಟೂರಲ್ಲಿ ಭವ್ಯ ಸ್ವಾಗತ.

    ಕುಂದಾಪುರ ಮಿರರ್ ಸುದ್ದಿ…

    ಕೋಟ: ಲೋಕಸಭಾ ಚುನಾವಣೆಯಲ್ಲಿ ಬಾರಿ ಅಂತರದಲ್ಲಿ ಜಯಗಳಿಸಿದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿಯವರಿಗೆ ಹುಟ್ಟೂರಲ್ಲಿ ಭವ್ಯ ಸ್ವಾಗತ ಕೋರಲಾಯಿತು.

    ಸಾಸ್ತಾನದ ಮಾಬುಕಳದಲ್ಲಿ ಬಿಜೆಪಿ ಕಾರ್ಯಕರ್ತರು ಹಾಗೂ ಅವರ ಅಭಿಮಾನಿಗಳು ಹಾರ ತೊಡಿಸಿ ಪಟಾಕಿ ಸಿಡಿಸಿ ಬರಮಾಡಿಕೊಂಡರು.

    ಇದೇ ವೇಳೆ ಸಾಸ್ತಾನ ಬಸ್ ತಂಗುದಾಣ, ಸಾಲಿಗ್ರಾಮ, ಸೇರಿದಂತೆ ಹುಟ್ಟೂರು ಕೋಟದವರೆಗೆ ಅಭಿಮಾನಿಗಳು, ಪಕ್ಷದ ಕಾರ್ಯಕರ್ತರು ಭವ್ಯ ಸ್ವಾಗತ ಕೋರಿದರು.

    ಈ ವೇಳೆ ಶಾಸಕ ಕಿರಣ್ ಕುಮಾರ್ ಕೊಡ್ಗಿ, ಬಿಜೆಪಿ ರಾಜ್ಯ ಮುಖಂಡ ಐರೋಡಿ ವಿಠ್ಠಲ್ ಪೂಜಾರಿ, ಕುಂದಾಪುರ ಕ್ಷೇತ್ರ ಅಧ್ಯಕ್ಷ ಸುರೇಶ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಸುಧೀರ್ ಕೆ.ಎಸ್, ಯುವಮೋರ್ಚಾ ಜಿಲ್ಲಾಧ್ಯಕ್ಷ ಪ್ರಥ್ವಿರಾಜ್ ಶೆಟ್ಟಿ, ಮಾಜಿ ಕ್ಷೇತ್ರಾಧ್ಯಕ್ಷ ಶಂಕರ್ ಅಂಕದಕಟ್ಟೆ, ಮುಖಂಡರುಗಳಾದ ರಾಜೇಶ್ ಕಾವೇರಿ, ಶ್ಯಾಮಸುಂದರ್ ನಾಯರಿ, ಸುರೇಶ್ ಕುಂದರ್, ರಾಜು ಪೂಜಾರಿ, ಅಜಿತ್ ಶೆಟ್ಟಿ ಕೊತ್ತಾಡಿ, ಗೋವಿಂದ ಪೂಜಾರಿ,ರವೀಂದ್ರ ತಿಂಗಳಾಯ,ರಮೇಶ್ ಕಾರಂತ,ಶಂಕರ್ ಕುಲಾಲ್, ವಿಜಯ್ ಪೂಜಾರಿ, ನಟರಾಜ ಗಾಣಿಗ, ಪ್ರತಾಪ್ ಶೆಟ್ಟಿ, ಸುರೇಶ್ ಪೂಜಾರಿ, ಸುಲತಾ ಹೆಗ್ಡೆ, ಸುದಿನಾ ಕೋಡಿ, ರಾಜು ಶ್ರೀಯಾನ್, ಕಿರಣ್ ಅಚ್ಲಾಡಿ, ಕೃಷ್ಣ ಪೂಜಾರಿ, ಮತ್ತಿತರರು ಇದ್ದರು.

  • ನೈರುತ್ಯ ಶಿಕ್ಷಕ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಡಾ. ಕೆ.ಕೆ. ಮಂಜುನಾಥ ಕುಮಾರ್ ಕುಂದಾಪುರದಲ್ಲಿ ಮತಯಾಚನೆ

    ನೈರುತ್ಯ ಶಿಕ್ಷಕ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಡಾ. ಕೆ.ಕೆ. ಮಂಜುನಾಥ ಕುಮಾರ್ ಕುಂದಾಪುರದಲ್ಲಿ ಮತಯಾಚನೆ

    ಕುಂದಾಪುರ ಮಿರರ್ ಸುದ್ದಿ…

    ಕುಂದಾಪುರ :ನೈರುತ್ಯ ಶಿಕ್ಷಕ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಡಾ. ಕೆ.ಕೆ. ಮಂಜುನಾಥ ಕುಮಾರ್ ಅವರು ಗುರುವಾರದಂದು ಕುಂದಾಪುರ ಬಿ.ಬಿ. ಹೆಗ್ಡೆ ಕಾಲೇಜು ಸಹಿತ ಹಲವು ಶಾಲೆಗಳಿಗೆ ಭೇಟಿ ನೀಡಿ ಮತಯಾಚಿಸಿದರು.

    ಈ ಸಂದರ್ಭದಲ್ಲಿ ಮಾಜಿ ಶಾಸಕ ಬಿ.ಎಂ.ಸುಕುಮಾರ ಶೆಟ್ಟಿ , ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ ಕುಮಾರ ಕೊಡವೂರು , ಕುಂದಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಾನ್ಮಕ್ಕಿ ಹರಿಪ್ರಸಾದ ಶೆಟ್ಟಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಟಿ. ಎಂ. ಶಹೀದ್ , ಕಾಂಗ್ರೆಸ್ ಮುಖಂಡರಾದ ದಿನೇಶ ಹೆಗ್ಡೆ , ಮಲ್ಯಾಡಿ ಶಿವರಾಮ ಶೆಟ್ಟಿ , ವಿನೋದ ಕ್ರಾಸ್ಟೊ, ವಿಕಾಸ್ ಹೆಗ್ಡೆ, ಮುನಾಫ್ ಕೋಡಿ , ಅಭಿಜಿತ್ ಪೂಜಾರಿ, ಸೀತಾರಾಮ ಶೆಟ್ಟಿ , ದೇವಕಿ ಸಣ್ಣಯ್ಯ , ಉದಯ ಕುಮಾರ ಶೆಟ್ಟಿ ವಂಡ್ಸೆ , ಚಂದ್ರಶೇಖರ ಶೆಟ್ಟಿ , ರೋಶನ್ ಉಪಸ್ಥಿತರಿದ್ದರು.

  • ಕುಂದಾಪುರ :ಪಕ್ಷಾಂತರಿ ವಿರುದ್ಧ ನನ್ನ ಸ್ಪರ್ಧೆ : ಪದವೀಧರ ಅಭ್ಯರ್ಥಿ ಎಸ್.ಪಿ.ದಿನೇಶ್

    ಕುಂದಾಪುರ :ಪಕ್ಷಾಂತರಿ ವಿರುದ್ಧ ನನ್ನ ಸ್ಪರ್ಧೆ : ಪದವೀಧರ ಅಭ್ಯರ್ಥಿ ಎಸ್.ಪಿ.ದಿನೇಶ್

    ಕುಂದಾಪುರ: ಕರ್ನಾಟಕ ರಾಜ್ಯ ವಿಧಾನ ಪರಿಷತ್ ಚುನಾವಣೆ ನೈರುತ್ಯ ಪದವೀಧರರ ಕ್ಷೇತ್ರದ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುತ್ತಿದ್ದೇನೆ. ನಾನು 2012 ಮತ್ತು 2018ರಲ್ಲಿ ನೈರುತ್ಯ ಪದವೀಧರ ಕ್ಷೇತ್ರದಿಂದ ಸ್ಪರ್ಧಿಸಿ ಅಲ್ಪ ಮತಗಳ ಅಂತರದಲ್ಲಿ ಪರಾಭವಗೊಂಡಿದ್ದೇನೆ. ಈ ಬಾರಿ ನನ್ನ ಸ್ಪರ್ಧೆ ಪಕ್ಷದ ನಾಯಕರ ವಿರುದ್ಧವಲ್ಲ, ಪಕ್ಷಾಂತರಿಯ ವಿರುದ್ಧ ಸ್ಪರ್ಧೆ ಮಾಡುತ್ತಿದ್ದೇನೆ. ಜೂನ್ 3 ರಂದು ನಡೆಯುವ ಚುನಾವಣೆಯಲ್ಲಿ ಪ್ರಾಶಸ್ತ್ಯದ ಮತದಾನ ಪದ್ದತಿ ಇರುವುದರಿಂದ ಮತ ಹಾಕುವಾಗ ಮತಗಟ್ಟೆಯಲ್ಲಿ ಚುನಾವಣಾಧಿಕಾರಿಗಳು ನೀಡುವ ಪೆನ್ನಿನಿಂದಲೇ ಎಸ್.ಪಿ.ದಿನೇಶ್ ಹೆಸರಿನ ಮುಂದೆ ‘1’ ಎಂದು ಬರೆದು ಮತ ಚಲಾಯಿಸಬೇಕು ಎಂದು ನೈರುತ್ಯ ಪದವೀಧರ ಕ್ಷೇತ್ರದ ಅಭ್ಯರ್ಥಿ ಎಸ್.ಪಿ ದಿನೇಶ್ ಹೇಳಿದರು.

    ಅವರು ಕುಂದಾಪುರ ಪ್ರೆಸ್ ಕ್ಲಬ್‍ನಲ್ಲಿ ಸುದ್ಧಿಗೋಷ್ಠಿಯಲ್ಲಿ ಮಾತನಾಡಿ, ಇದು ವಿಶಾಲವಾದ ಕ್ಷೇತ್ರವಾಗಿದ್ದು 30 ವಿಧಾನಸಭಾ ಕ್ಷೇತ್ರ, 6 ಲೋಕಸಭಾ ಕ್ಷೇತ್ರ, 6 ಜಿಲ್ಲಾ ವ್ಯಾಪ್ತಿಯನ್ನು ಹೊಂದಿದೆ. ನಾನು ಕಾಂಗ್ರೆಸ್ ಅಭ್ಯರ್ಥಿಯಾಗಿ ಕಳೆದ ಎರಡು ಚುನಾವಣೆಯಲ್ಲಿ ಸ್ಫರ್ಧೆ ಮಾಡಿದ್ದು ಕ್ಷೇತ್ರದ ಮತದಾರರ ಪರಿಚಯ ಹೊಂದಿದ್ದೇನೆ. 10 ತಿಂಗಳ ಹಿಂದೆ ಪಕ್ಷದ ವರಿಷ್ಠರು ನನಗೆ ಟಿಕೆಟು ನೀಡುವುದಾಗಿ ತಿಳಿಸಿದ್ದರು. ಅಂತೆಯೇ ನಾನು ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದೇನೆ. ಕೊನೆಯ ಗಳಿಗೆಯಲ್ಲಿ ನನ್ನ ಹೆಸರನ್ನು ಕೈಬಿಟ್ಟು ಬೇರೆ ಪಕ್ಷದಿಂದ ಬಂದ ಅಭ್ಯರ್ಥಿಗೆ ಅವಕಾಶ ಕಲ್ಪಿಸಿದರು. ಸಂವಿಧಾನದ 4 ಮನೆ, 4 ಪಕ್ಷವನ್ನು ನೋಡಿರುವ ವ್ಯಕ್ತಿಗೆ ಈಗ ಪಕ್ಷ ಟಿಕೇಟು ನೀಡಲಾಗಿದೆ. ರಾಹುಲ್ ಗಾಂಧಿ, ಸಿದ್ಧರಾಮಯ್ಯ ಅವರಿಗೆ ನಿಂದಿಸಿರುವ ವ್ಯಕ್ತಿ ಕಾಂಗ್ರಸ್ ಅಭ್ಯರ್ಥಿ ಎಂದು ಒಪ್ಪಿಕೊಳ್ಳಲು ಮುಜುಗರವಾಗುತ್ತದೆ ಎಂದರು.

    ಈ ಸ್ಪರ್ಧೆ ಮಾಡುತ್ತಿರುವ ಮೂರು ವ್ಯಕ್ತಿಗಳು ಕೂಡಾ ಮೂರು ಜನ ಕೂಡಾ ಒಂದೇ ಮನೆಯಿಂದ ಬಂದವರು. ನಾನು ಮಾತ್ರ ಗಾಂಧಿ ಸಂಸ್ಕøತಿಯಿಂದ ಬಂದವನು. ಇದು ನನ್ನ ಮೂರನೇ ಸ್ಪರ್ಧೆ, ಕ್ಷೇತ್ರದ ಪದವೀಧರ ಮತದಾರರೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದೇನೆ. ಇಲ್ಲಿ ನನಗೂ ಮತ್ತು ರಘುಪತಿ ಭಟ್ಟರ ನಡುವೆ ನೇರ ಸ್ಪರ್ಧೆ ನಡೆಯುತ್ತದೆ ಎಂದು ಅವರು ಹೇಳಿದರು.

    ಸುದ್ಧಿಗೋಷ್ಠಿಯಲ್ಲಿ ಈಶ್ವರ, ಸಿದ್ಧು ಉಪಸ್ಥಿತರಿದ್ದರು.

  • ಕುಂದಾಪುರ :ವಿಧಾನ ಪರಿಷತ್ ಚುನಾವಣೆ : ಕಾಂಗ್ರೆಸ್ ಬೆಂಬಲಿಸಲು ಕಾನ್ಮಕ್ಕಿ ಹರಿಪ್ರಸಾದ ಶೆಟ್ಟಿ ಮನವಿ

    ಕುಂದಾಪುರ :ವಿಧಾನ ಪರಿಷತ್ ಚುನಾವಣೆ : ಕಾಂಗ್ರೆಸ್ ಬೆಂಬಲಿಸಲು ಕಾನ್ಮಕ್ಕಿ ಹರಿಪ್ರಸಾದ ಶೆಟ್ಟಿ ಮನವಿ

    ಕುಂದಾಪುರ ಮಿರರ್ ಸುದ್ದಿ…

    ಕುಂದಾಪುರ :ಜೂನ್ 3 ರಂದು ನೆಡೆಯುವ ನೈರುತ್ಯ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಪದವೀಧರ ಅಭ್ಯರ್ಥಿ ಆಯನೂರು ಮಂಜುನಾಥ ಮತ್ತು ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಡಾ. ಕೆ. ಕೆ. ಮಂಜುನಾಥ ಕುಮಾರರವರಿಗೆ ಪ್ರಥಮ ಪ್ರಾಶ್ಯಾಸ್ತ್ಯದ ಮತ ನೀಡುವಂತೆ ಕುಂದಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಾನ್ಮಕ್ಕಿ ಹರಿಪ್ರಸಾದ ಶೆಟ್ಟಿ ವಿನಂತಿಸಿದ್ದಾರೆ.

    ಡಾ ಕೆ.ಕೆ. ಮಂಜುನಾಥ ಕುಮಾರರವರು ಶಿಕ್ಷಕರಾಗಿದ್ದು 2 ಬಾರಿ ಸ್ಪರ್ಧಿಸಿ ಕಡಿಮೆ ಅಂತರದಲ್ಲಿ ಸೋತಿದ್ದರೂ ಶಿಕ್ಷಕರೊಂದಿಗೆ ನಿರಂತರ ಸಂಪರ್ಕದಲ್ಲಿದ್ದು , ಶಿಕ್ಷಕರ ಮತ್ತು ಶಿಕ್ಷಣ ಕ್ಷೇತ್ರದ ಸಮಸೈೆಗಳ ಬಗ್ಗೆ ನಿರಂತರ ಹೋರಾಟ ಮಾಡಿದವರು. ಆಯನೂರು ಮಂಜುನಾಥರವರು ವಿಧಾನ ಪರಿಷತ್ ಸದಸ್ಯರಾಗಿ, ಶಾಸಕರಾಗಿ, ರಾಜ್ಯಸಭಾ ಸದಸ್ಯರಾಗಿ , ಲೋಕಸಭಾ ಸದಸ್ಯರಾಗಿ ಜನಪರ ಕೆಲಸ ಮಾಡಿ ಅಪಾರ ಅನುಭವವಿರುವ ವ್ಯಕ್ತಿ. ಇಬ್ಬರು ಕೂಡಾ ತಾವು ಪ್ರತಿನಿಧಿಸಿದ ಕ್ಷೇತ್ರಕ್ಕೆ ನ್ಯಾಯ ಕೊಡಲು ಸಮರ್ಥ ಅಭ್ಯರ್ಥಿಗಳು.

    ಕಾಂಗ್ರೆಸ್ ಬೆಂಬಲಿತ ಇಬ್ಬರು ಅಭ್ಯರ್ಥಿಗಳನ್ನು ಬೆಂಬಲಿಸುವಂತೆ 2 ಕ್ಷೇತ್ರದ ನೈರುತ್ಯ ಪದವೀಧರ ಮತ್ತು ಶಿಕ್ಷಕ ಕ್ಷೇತ್ರದ ಮತದಾರರನ್ನು ಕಾನ್ಮಕ್ಕಿ ಹರಿಪ್ರಸಾದ ಶೆಟ್ಟಿ ವಿನಂತಿಸಿದ್ದಾರೆ.

  • ಸಾಲಿಗ್ರಾಮ :ಕಾರ್ಯಕರ್ತರು, ಮತದಾರರೆ ಪಕ್ಷದ ಆಸ್ತಿ – ಕೆ.ಜಯಪ್ರಕಾಶ್ ಹೆಗ್ಡೆ

    ಸಾಲಿಗ್ರಾಮ :ಕಾರ್ಯಕರ್ತರು, ಮತದಾರರೆ ಪಕ್ಷದ ಆಸ್ತಿ – ಕೆ.ಜಯಪ್ರಕಾಶ್ ಹೆಗ್ಡೆ

    ಕುಂದಾಪುರ ಮಿರರ್ ಸುದ್ದಿ…

    ಕೋಟ: ಕಾರ್ಯಕರ್ತರು ಹಾಗೂ ಮತದಾರರೇ ಕಾಂಗ್ರೆಸ್ ಪಕ್ಷದ ಆಸ್ತಿ ಎಂದು ಉಡುಪಿ ಚಿಕ್ಕಮಗಳೂರು ಲೋಕಸಭಾ ಅಭ್ಯರ್ಥಿ ಕೆ.ಜಯಪ್ರಕಾಶ್ ಹೆಗ್ಡೆ ಅಭಿಪ್ರಾಯಪಟ್ಟರು.

    ಕೋಟ ಬ್ಲಾಕ್ ಕಾಂಗ್ರೆಸ್ ಕಛೇರಿ ಇಂದಿರಾದಲ್ಲಿ ಉಡುಪಿ ಮತ್ತು ಚಿಕ್ಕಮಗಳೂರು ಲೋಕಸಭಾ ಚುನಾವಣಾ ಅಭಿನಂದನಾ ಸಭೆ ಹಾಗೂ ಪದವೀಧರ, ಶಿಕ್ಷಕರ ಕ್ಷೇತ್ರ ಚುನಾವಣೆಯ ಮಾಹಿತಿ ಸಭೆಯಲ್ಲಿ ಮಾತನಾಡಿ ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಜಯದ ವಿಶ್ವಾಸ ವ್ಯಕ್ತಪಡಿಸಿದ ಅವರು ಕಾರ್ಯಕರ್ತರ, ಸ್ಥಳೀಯ ಮುಖಂಡರ ಪರಿಶ್ರಮ ಪಕ್ಷದ ಗೆಲುವಿಗೆ ಪೂರಕ ವಾತಾವರಣ ಕಲ್ಪಿಸಲಿದೆ. ಈ ದಿಸೆಯಲ್ಲಿ ಅವರಿಗೆ ಅಭಿನಂದನೆ ಸಲ್ಲಿಸಬೇಕಾದದ್ದು ಆದ್ಯಕರ್ತವ್ಯವಾಗಿದೆ. ಚುನಾವಣೆ ಮುಂಚೆ ಹಾಗೂ ನಂತರ ಪಕ್ಷದ ಕಾರ್ಯಕರ್ತರ ಪ್ರತಿ ಸಮಸ್ಯೆಗಳಿಗೆ ಸ್ಪಂದಿಸಬೇಕಾದ ಅಗತ್ಯತೆಯನ್ನು ಒತ್ತಿ ಹೇಳಿದ ಅವರು ನಿರಂತರ ಸಂಪರ್ಕದಿಂದ ಸದೃಢ ಪಕ್ಷಸಂಘನೆ ಸಾಧ್ಯ ಅಲ್ಲದೆ ವಿಧಾನಪರಿಷತ್‍ನಲ್ಲಿ ನಮ್ಮ ಪಕ್ಷದ ಸಂಖ್ಯಾಬಲವನ್ನು ವೃದ್ಧಿಸಿಕೊಳ್ಳಬೇಕು ಆ ಮೂಲಕ ಅನೇಕ ಅಭಿವೃದ್ಧಿ ಕಾಮಗಾರಿ ಬಿಲ್ ಪಾಸ್‍ಗೆ ಅನುಕೂಲಕರ ವಾತಾವರಣ ಸೃಷ್ಠಿಯಾಗುತ್ತದೆ ಎಂದು ಕಾರ್ಯಕರ್ತರಿಗೆ ಹಾಗೂ ಮುಖಂಡರುಗಳಿಗೆ ಅಭಿನಂದನೆ ಸಲ್ಲಿಸಿದರು.

    ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಕಾಂಗ್ರೆಸ್ ಮುಖಂಡ ಮೊಳಹಳ್ಳಿ ದಿನೇಶ್ ಹೆಗ್ಡೆ,ಹಿಂದುಳಿದ ವರ್ಗ ಜಿಲ್ಲಾಧ್ಯಕ್ಷ ತಿಮ್ಮ ಪೂಜಾರಿ, ಮಾಜಿ ಬ್ರಹ್ಮವಾರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಉದಯ್ ಚಂದ್ರ ಶೆಟ್ಟಿ, ಉಡುಪಿ ಜಿಲ್ಲಾ ಕಾರ್ಯಧ್ಯಕ್ಷ ಕಿಶನ್ ಹೆಗ್ಡೆ, ಉಡುಪಿ ಜಿಲ್ಲಾ ಆರ್.ಜಿ.ಪಿ ಅಧ್ಯಕ್ಷೆ ರೋಷನಿ ಒಲಿವೆರಾ , ಕೋಟ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷೆ ರೇಖಾ ಪಿ ಸುವರ್ಣ, ಮಾಜಿ ಅಧ್ಯಕ್ಷೆ ಮಮತಾ ಶೆಟ್ಟಿ, ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಾಜಿಕಾ ಜಾಲತಾಣ ಜಿಲ್ಲಾಧ್ಯಕ್ಷ ರೋಷನ್ ಶೆಟ್ಟಿ ಮತ್ತಿತರರು ಇದ್ದರು.

    ಕೋಟ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶಂಕರ್ ಎ ಕುಂದರ್ ಸ್ವಾಗತಿಸಿದರು. ಕಾರ್ಯಕ್ರಮವನ್ಮು ಕೋಟ ಬ್ಲಾಕ್ ಕಾಂಗ್ರೆಸ್ ಮುಖಂಡ ಗಣೇಶ್ ನೆಲ್ಲಿಬೆಟ್ಟು ನಿರೂಪಿಸಿದರು. ಸಾಲಿಗ್ರಾಮ ಪಟ್ಟಣಪಂಚಾಯತ್ ಸದಸ್ಯ ರವೀಂದ್ರ ಕಾಮತ್ ವಂದಿಸಿದರು.

  • ಬೈಂದೂರು :ರಾಜ್ಯದಲ್ಲಿ 28ಕ್ಕೆ 28 ಕ್ಷೇತ್ರ ಬಿಜೆಪಿ ಗೆಲ್ಲಲಿದೆ: ಬಿ.ಎಸ್.ಯಡಿಯೂರಪ್ಪ ವಿಶ್ವಾಸ

    ಬೈಂದೂರು :ರಾಜ್ಯದಲ್ಲಿ 28ಕ್ಕೆ 28 ಕ್ಷೇತ್ರ ಬಿಜೆಪಿ ಗೆಲ್ಲಲಿದೆ: ಬಿ.ಎಸ್.ಯಡಿಯೂರಪ್ಪ ವಿಶ್ವಾಸ

    ದಕ್ಷಿಣ ಭಾರತದಲ್ಲಿ ಟೆಂಪಲ್ ಕಾರೀಡಾರ್: ಅಣ್ಣಾಮಲೈ

    ಬೈಂದೂರಿನಲ್ಲಿ ಬಿಜೆಪಿ ಬೃಹತ್ ರೋಡ್ ಶೋ

    ಕುಂದಾಪುರ ಮಿರರ್ ಸುದ್ದಿ…

    ಬೈಂದೂರು: ಸೂರ್ಯ ಚಂದ್ರರು ಇರುವುದು ಎಷ್ಟು ಸತ್ಯವೋ ಹಾಗೆಯೇ ನರೇಂದ್ರ ಮೋದಿಯವರು ಮೂರನೇ ಬಾರಿಗೆ ಈ ದೇಶದ ಪ್ರಧಾನ ಮಂತ್ರಿಯಾಗುವುದು ಅಷ್ಟೇ ಸತ್ಯ. ದೇಶದಲ್ಲಿ ಬಿಜೆಪಿ 400 ಅಧಿಕ ಸೀಟ್ ಗೆಲ್ಲಿಲಿದೆ. ಕರ್ನಾಟಕದಲ್ಲಿ 28ಕ್ಕೆ 28 ಸೀಟುಗಳನ್ನು ಗೆಲ್ಲುವ ವಿಶ್ವಾಸ ಇದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.

    ಬೈಂದೂರಿನಲ್ಲಿ ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಅವರ ಪರವಾಗಿ ಬೃಹತ್ ರೋಡ್ ಶೋಗೆ ಗುರುವಾರ ಚಾಲನೆ ನೀಡಿ ಅವರು ಮಾತನಾಡಿದರು.

    ರಾಜ್ಯದ ಉದ್ದಗಲಕ್ಕೂ ಪ್ರವಾಸ ಮಾಡುತ್ತಿದ್ದೇನೆ. ಎಲ್ಲೆಡೆ ಬಿಜೆಪಿ ಅಲೆ, ಮೋದಿ ಅಲೆ ಎದ್ದಿದೆ. ಶಿವಮೊಗ್ಗ ಕ್ಷೇತ್ರದಿಂದ ಬಿ.ವೈ.ರಾಘವೇಂದ್ರವ ಅವರು ಕನಿಷ್ಠ 3ಲಕ್ಷಕ್ಕೂ ಅಧಿಕ ಮತಗಳ ಅಂತರದಲ್ಲಿ ಜಯ ಸಾಧಿಸಲಿದ್ದಾರೆ. ಬೈಂದೂರಿನಿಂದಲೇ 1 ಲಕ್ಷಕ್ಕೂ ಅಧಿಕ ಲೀಡ್ ಬರುವ ವಿಶ್ವಾಸವಿದೆ ಎಂದರು.
    ಪ್ರಧಾನಿ ನರೇಂದ್ರ ಮೋದಿಯವರು ಮಾಡಿರುವ ಅಭಿವೃದ್ಧಿ ಕಾರ್ಯಗಳು ಬಿಜೆಪಿ ಅಭ್ಯರ್ಥಿಗಳ ಗೆಲುವಿಗೆ ಸಹಕಾರಿಯಾಗಲಿದೆ. ವಿಶ್ವವೇ ಮೆಚ್ಚಿದ ನರೇಂದ್ರ ಮೋದಿಯವರು ಮತ್ತೊಮ್ಮೆ ಈ ದೇಶದ ಪ್ರಧಾನಿಯಾಗಬೇಕು ಎಂದು ಎಲ್ಲರೂ ಬಯಸಿದ್ದಾರೆ. ಹೀಗಾಗಿ ನೂರಕ್ಕೆ ನೂರು ರಾಘವೇಂದ್ರ ಅವರು ಅತ್ಯಧಿಕ ಅಂತರದಲ್ಲಿ ಗೆಲ್ಲಿದ್ದಾರೆ ಎಂದರು.

    ದಕ್ಷಿಣದಲ್ಲೂ ಟೆಂಪಲ್ ಕಾರೀಡಾರ್
    ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಕೆ.ಅಣ್ಣಾಮಲೈ ಮಾತ‌ನಾಡಿ, ಶಿವಮೊಗ್ಗ ಕ್ಷೇತ್ರದಲ್ಲಿ ರಾಘವೇಂದ್ರ ಅವರು 3ಕ್ಕೂ ಅಧಿಕ ಅಂತರದಲ್ಲಿ ಜಯಿಸಲಿದ್ದಾರೆ. ಕಾಂಗ್ರೆಸ್ ನವರು ಹತಾಶೆಯಿಂದ ರಾಹುಲ್‌ಗಾಂಧಿಯವರನ್ನು ಶಿವಮೊಗ್ಗಕ್ಕೆ ಕರೆಸಿದ್ದಾರೆ. ಸಮಾರಂಭದಲ್ಲಿ ಏನೇನಾಗಿದೆ ಎಂಬುದು ಎಲ್ಲರಿಗೂ ತಿಳಿದಿದೆ ಮತ್ತು ಕಾಂಗ್ರೆಸ್ ಎಷ್ಟು ಅಸಂಘಟಿತವಾಗಿದೆ ಎಂಬುದು ತಿಳಿಯುತ್ತದೆ. ಮತದಾರರು ಬಿಜೆಪಿ ಜತೆಗೆ ಇದ್ದಾರೆ. ಪ್ರಜ್ವಲ್ ರೇವಣ್ಣ ಪ್ರಕರಣಕ್ಕೆ ಸಂಬಂಧಿಸಿದಂತೆ ಅಮಿತ್ ಶಾ ಅವರು ಈಗಾಗಲೇ ಸ್ಪಷ್ಟತೆ ನೀಡಿದ್ದಾರೆ ಎಂದರೆ.

    ದಕ್ಷಿಣ ಭಾರತದಲ್ಲಿ ಟೆಂಪಲ್ ಕಾರೀಡಾರ್ ಗೆ ಆದ್ಯತೆ ನೀಡುತ್ತಿದ್ದೇವೆ. ಈಗಾಗಲೇ ಕಾಶೀ-ವಾರಣಸಿ, ಉಜ್ಜನಿ, ಅಯೋಧ್ಯೆ ಕಾರೀಡಾರ್ ಆಗಿದೆ. ಅದೇ ರೀತಿಯಲ್ಲಿ ತಮಿಳುನಾಡಿನಲ್ಲಿ ತಿರುಅಣ್ಣಾಾಮಲೈ ಕಾರಿಡಾರ್ ಮಾಡುವುದಾಗಿ ನಾವು ಹೇಳಿದ್ದೇವೆ. ಕರ್ನಾಟಕದಲ್ಲಿ ಮೂಕಾಂಬಿಕಾ ಕಾರೀಡಾರ್ ಮಾಡುವ ಸಮಯ ಬಂದಿದೆ. ಪ್ರಧಾನಿ ನರೇಂದ್ರ ಮೋದಿಯವರನ್ನು ಇಲ್ಲಿಗೆ ಕರೆದುಕೊಂಡು ಬಂದು, ದೇವಿಯ ದರ್ಶನ ಪಡೆಯಲಿದ್ದಾರೆ. ಕೊಲ್ಲೂರಿನಲ್ಲಿ ಮೂಕಾಂಬಿಕಾ ಕಾರೀಡಾರ್ ಆಗಿಯೇ ಆಗಲಿದೆ. ಈ ಬಗ್ಗೆ ಸ್ಪಷ್ಟ ರೂಪುರೇಷೆ ನಮ್ಮ ಬಳಿಯಿದೆ. ಬೈಂದೂರಿನಿಂದಲೇ 1 ಲಕ್ಷಕ್ಕೂಅಧಿಕ ಲೀಡ್ ನೀಡುವ ವಿಶ್ವಾಸ ವ್ಯಕ್ತವಾಗಿದೆ. ಮೂಕಾಂಬಿಕಾ ಕಾರೀಡಾರ್ ಆದರೆ ಬೈಂದೂರು ಮತ್ತು ಕೊಲ್ಲೂರು ಕ್ಷೇತ್ರ ಅಂತಾರಾಷ್ಟ್ರೀಯ ಮನ್ನಣೆ ಪಡೆಯಲಿದೆ ಎಂದರು.

    ಎಲ್ಲೆಡೆ ಪ್ರಚಾರ
    ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಮಾತನಾಡಿ, ಕಾಂಗ್ರೆಸ್ ನಿಂದ ಯಾರೇ ಪ್ರಚಾರ ಮಾಡಲಿ. ನಾವಂತೂ ಚುನಾವಣೆಯನ್ನು ಅತ್ಯಂತ ಗಂಭೀರವಾಗಿ ತೆಗೆದುಕೊಂಡಿದ್ದೇವೆ. ಅಷ್ಟೇ ಪರಿಣಾಮಕಾರಿಯಾಗಿ ಪ್ರಚಾರ ಪ್ರಕ್ರಿಯೆ ನಡೆಸುತ್ತಿದ್ದೇವೆ. ಬೈಂದೂರು ಕ್ಷೇತ್ರದಿಂದಲೇ ಒಂದು ಲಕ್ಷಕ್ಕೂ ಅಧಿಕ ಲೀಡ್ ನೀಡುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ದೇಶ ಮತ್ತು ಸ್ವಾಭಿಮಾನದಿಂದ ಇಲ್ಲಿನ ಜನರು ಬಿಜೆಪಿಗೆ ಮತ ನೀಡಲಿದ್ದಾರೆ ಎಂದು ಹೇಳಿದರು.

    ಬೃಹತ್ ರೋಡ್ ಶೋ
    ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮತ್ತು ಅಣ್ಣಾಮಲೈ ಅವರ ನೇತೃತ್ವದಲ್ಲಿ ಬೃಹತ್ ರೋಡ್ ಶೋ ಬೈಂದೂರಿನಿಂದ ಆರಂಭಗೊಂಡು, ಒಪ್ಪಂದ ಭಾಗದಲ್ಲಿ ಸಂಚರಿಸಿದೆ. ಶಾಸಕರಾದ ಗುರುರಾಜ ಗಂಟಿಹೊಳೆ ಭಾಗೀರಥಿ ಮುರುಳ್ಯ, ಬಿಜೆಪಿ ಜಿಲ್ಲಾಧ್ಯಕ್ಷರ ಕಿಶೋರ್ ಕುಮಾರ್, ವಿಧಾನ ಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ್ ಪೂಜಾರಿ, ಪ್ರಮುಖರಾದ ನಟಿ ತಾರಾ, ಬ್ರಿಜೇಶ್ ಚೌಟ, ದೀಪಕ್ ಕುಮಾರ್ ಶೆಟ್ಟಿ ಮೊದಲಾದವರು ಇದ್ದರು. ಬೈಕ್ ರ‍್ಯಾಲಿಯಲ್ಲಿ ಕಾರ್ಯಕರ್ತರು, ಮುಖಂಡರು ಅಪಾರ ಸಂಖ್ಯೆಯಲ್ಲಿ ಸೇರಿದ್ದಾರೆ.