Category: ರಾಜಕೀಯ

  • ಕುಂದಾಪುರ :ಕಿರಿಮಂಜೇಶ್ವರದಲ್ಲಿ ರಾಷ್ಟ್ರಭಕ್ತ ಬಳಗದ ವತಿಯಿಂದ ವಿಜಯ ಸಂಕಲ್ಪ‌ ಸಮಾವೇಶ

    ಕುಂದಾಪುರ :ಕಿರಿಮಂಜೇಶ್ವರದಲ್ಲಿ ರಾಷ್ಟ್ರಭಕ್ತ ಬಳಗದ ವತಿಯಿಂದ ವಿಜಯ ಸಂಕಲ್ಪ‌ ಸಮಾವೇಶ

    ಕುಂದಾಪುರ ಮಿರರ್ ಸುದ್ದಿ…

    ಬೈಂದೂರು: ಕಾಂಗ್ರೆಸ್ ಹಿಂದುತ್ವವನ್ನು ತುಳಿಯುವ ಕೆಲಸ ಮಾಡಿದರೆ, ಬಿಜೆಪಿ ಹಿಂದೂತ್ವ ಪ್ರತಿಪಾದಿಸುವ ನಾಯಕರನ್ನು ಕಡೆಗಣಿಸುವ ಕೆಲಸ ಮಾಡುತ್ತಿದೆ. ರಾಷ್ಟ್ರವಾದದ ಬದಲು ಜಾತಿವಾದ ಆರಂಭವಾಗಿದೆ.

    ಅವರು ರಾಷ್ಟ್ರಭಕ್ತ ಬಳಗದ ವತಿಯಿಂದ ಬುಧವಾರ ಕಿರಿಮಂಜೇಶ್ವರದಲ್ಲಿ ಆಯೋಜಿಸಲಾದ ವಿಜಯ ಸಂಕಲ್ಪ‌ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು.

    ಜಾತಿವಾದಕ್ಕೆ ಯಡಿಯುರಪ್ಪನವರ ಮಗ ಬಲಿಯಾಗುತ್ತಾರೆ. ಜನ ನೋಡುತ್ತಿದ್ದಾರೆ. ಚುನಾವಣೆಯಲ್ಲಿ ಬುದ್ದಿ ಕಲಿಸುತ್ತಾರೆ. ಬಿಜೆಪಿ ಕಾರ್ಯಕರ್ತರ ಧ್ವನಿಯಾಗಿ ಚುನಾವಣೆಗೆ ಸ್ಪರ್ಧಿಸಿದ್ದು, ಗೆಲ್ಲವ ವಿಶ್ವಾಸವಿದೆ. ಗೋಹತ್ಯೆ ಮಾಡುತ್ತಿದ್ದಾರೆ, ಪ್ರಶ್ನಿಸುವ ಯುವಕರನ್ನು ಜೈಲಿಗಟ್ಟುತ್ತಿದ್ದಾರೆ. ಗೋಕಳ್ಳನನ್ನು ಬಂಧಿಸುವ ತಾಕತ್ತು ರಾಜ್ಯ ಸರಕಾರಕ್ಕಿಲ್ಲ. ಪ್ರಭಾವಿಗಳ ಒತ್ತಡಕ್ಕೆ ಮಣಿದು ಹಿಂದುತ್ವದ ಕಾರ್ಯಕರ್ತರನ್ನು ಮುಟ್ಟಿದರೆ ಪರಿಣಾಮ ನೆಟ್ಟಗಿರುವುದಿಲ್ಲ. ಜಾತಿ ರಾಜಕಾರಣ ಮುಂದುವರಿದರೆ ರಾಜ್ಯದಲ್ಲಿ ಬಿಜೆಪಿ ನಿರ್ನಾಮ ಆಗುತ್ತೆ.

    ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರನ್ನು ಮಂತ್ರಿ ಮಾಡುವುದಾಗಿ ಮೋಸ ಮಾಡಿದ ಶಾಪ ಯಡಿಯೂರಪ್ಪನವರ ಮಗನಿಗೆ ತಟ್ಟಲಿದೆ.ಕರಾವಳಿಯ ಮೀನುಗಾರರ ಸಮಸ್ಯೆಗಳ ಪರಿಹಾರಕ್ಕೆ ಕಟಿಬದ್ಧವಾಗಿದ್ದೇನೆ ಎಂದರು.

    ಕಾರ್ಮಿಕ ದಿನಾಚರಣೆ ಅಂಗವಾಗಿ ಕಾರ್ಮಿಕರಾದ ನಾಗರಾಜ ಖಾರ್ವಿ, ಸುರೇಶ ಪೂಜಾರಿ, ಶೈಲಜಾ, ಕೋಮಲ, ಮಂಗಳ ಅವರನ್ನು ಸನ್ಮಾನಿಸಲಾಯಿತು.

    ಶಿವಮೊಗ್ಗ ಮಹಾನಗರ ಪಾಲಿಕೆ ಮಾಜಿ ಮೇಯರ್ ಸುವರ್ಣ ಶಂಕರ್, ಮಾಜಿ ಸದಸ್ಯೆ ಸೀತಾಲಕ್ಷ್ಮೀ, ಆರತಿ ಆಮಾಪ್ರಕಾಶ್, ರಾಷ್ಟ್ರಭಕ್ತ ಬಳಗದ ಉಸ್ತುವಾರಿಗಳಾದ ಕೃಷ್ಣ ಬಿಜೂರು, ನಿತ್ಯಾನಂದ, ಉಮೇಶ್ ಬಿಜೂರು, ಜಗನ್ನಾಥ ಖಾರ್ವಿ, ನಾಗೇಶ್ ಪಾಟೇಲ್, ವೆಂಕಟೇಶ್ ಬಾಡ, ವಿನೋದ್, ಅಭಿನಂದನ್, ಸಂತೋಷ್ ತಲ್ಲೂರು, ರಘುಪತಿ ಮೊದಲಾದವರು ಉಪಸ್ಥಿತರಿದ್ದರು. ಮಹೇಶ್ ನಾವುಂದ ಕಾರ್ಯಕ್ರಮ ನಿರೂಪಿಸಿದರು.

  • ಬೈಂದೂರು :ಮೇ 3ರಂದು ಅಣ್ಣಾಮಲೈ ಬೃಹತ್ ರೋಡ್ ಶೋ, ಒಂದು ಲಕ್ಷ ಲೀಡ್ ನೀಡಲು ಪೂರಕ ವಾತಾವರಣ: ಜಿಲ್ಲಾಧ್ಯಕ್ಷ್ ಕಿಶೋರ್ ಕುಮಾರ್ 

    ಬೈಂದೂರು :ಮೇ 3ರಂದು ಅಣ್ಣಾಮಲೈ ಬೃಹತ್ ರೋಡ್ ಶೋ, ಒಂದು ಲಕ್ಷ ಲೀಡ್ ನೀಡಲು ಪೂರಕ ವಾತಾವರಣ: ಜಿಲ್ಲಾಧ್ಯಕ್ಷ್ ಕಿಶೋರ್ ಕುಮಾರ್ 

    ಕುಂದಾಪುರ ಮಿರರ್ ಸುದ್ದಿ…

    ಬೈಂದೂರು: ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಅವರಿಗೆ ಬೈಂದೂರು ವಿಧಾನಸಭಾ ಕ್ಷೇತ್ರದಿಂದಲೇ ಒಂದು ಲಕ್ಷಕ್ಕೂ ಅಧಿಕ ಲೀಡ್ ನೀಡುವ ಸಂಕಲ್ಪ ಸಾಕಾರಕ್ಕಾಗಿ ಮೇ 5ರ ಸಂಜೆ 6 ಗಂಟೆಯವರೆಗೂ ಜಿಲ್ಲಾ ಬಿಜೆಪಿಯ ಎಲ್ಲಾ ಪದಾಧಿಕಾರಿಗಳು ಬೈಂದೂರು ವಿಧಾನಸಭಾ ವ್ಯಾಪ್ತಿಯ ವಿವಿಧ ಜಿಲ್ಲಾ ಪಂಚಾಯತಿಗಳಲ್ಲಿ ಮೊಕ್ಕಾಂ ಹೂಡಲಿದ್ದಾರೆ ಎಂದು ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಹೇಳಿದರು.

    ಬೈಂದೂರು ಬಿಜೆಪಿ ಕಚೇರಿಯಲ್ಲಿ ಮಂಗಳವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಉಡುಪಿ-ಚಿಕ್ಕಮಗಳೂರು ಕ್ಷೇತ್ರದಲ್ಲಿ ಕಾರ್ಯಕರ್ತರು, ಪದಾಧಿಕಾರಿಗಳು ಯಶಸ್ವಿಯಾಗಿ ಚುನಾವಣೆ ಕಾರ್ಯ ಪೂರ್ಣಗೊಳಿಸಿದ್ದು, ನಮ್ಮ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿಯವರು 1.50 ಲಕ್ಷಕ್ಕೂ ಅಧಿಕ ಮತಗಳ ಅಂತರದಲ್ಲಿ ಜಯ ಸಾಧಿಸಲಿದ್ದಾರೆ. ಅದೇ ವಿಶ್ವಾಸ, ಹುರುಪಿನೊಂದಿಗೆ ಬೈಂದೂರು ಕ್ಷೇತ್ರದಲ್ಲಿ ಚುನಾವಣ ಕಣಕ್ಕೆ ಇಳಿದಿದ್ದೇವೆ. ಬೈಂದೂರಿನಲ್ಲಿ ಸಂಘಟನಾತ್ಮಕವಾದ ಕಾರ್ಯ ತುಂಬ ಚೆನ್ನಾಗಿ ನಡೆಯುತ್ತಿದೆ. ಸಂಘಟನೆಯಲ್ಲಿ ಯಾವುದೇ ಕೊರತೆಯಿಲ್ಲ. ಮೇ 5ರ ಸಂಜೆ 6 ಗಂಟೆಯವೆರೆ ಜಿಲ್ಲಾ ಪದಾಧಿಕಾರಿಗಳು ಇಲ್ಲಿನ ಪ್ರತಿ ಜಿಲ್ಲಾ ಪಂಚಾಯತಿಗಳಲ್ಲಿ ಮೊಕ್ಕಾಂ ಹೂಡಿ ಚುನಾವಣೆ ಪ್ರಚಾರ ಪ್ರಕ್ರಿಯೆಯನ್ನು ಇನ್ನಷ್ಟು ಚುರುಕುಗೊಳಿಸಲಿದ್ದಾರೆ ಎಂದರು.

    1 ಲಕ್ಷಕ್ಕೂ ಅಧಿಕ ಲೀಡ್
    ಪ್ರಧಾನಿ ನರೇಂದ್ರ ಮೋದಿಯವರ ಸಮರ್ಥ ನಾಯಕತ್ವ, ಬಿಜೆಪಿ ಕಾರ್ಯಕರ್ತರು ಎಂಬ ಹೆಮ್ಮೆ ಹಾಗೂ ಇಲ್ಲಿನ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಅವರ ಸಾಧನೆ. ಈ ಮೂರು ವಿಷಯದಲ್ಲಿ ಹೆಮ್ಮೆಯಿಂದ ಮತ ಕೇಳುತ್ತೇವೆ. ಈ ಕ್ಷೇತ್ರದಿಂದ ಒಂದು ಲಕ್ಷಕ್ಕೂ ಅಧಿಕ ಲೀಡ್ ನೀಡಲು ಬೇಕಾದ ಎಲ್ಲ ಪೂರಕ ವಾತಾವರಣ ನಿರ್ಮಾಣವಾಗಿದೆ. ಕಾರ್ಯಕರ್ತರು, ಮುಖಂಡರು ಶ್ರದ್ಧೆ ಹಾಗೂ ನಿಷ್ಠೆಯಿಂದ ಇನ್ನುಳಿದ ದಿನಗಳಲ್ಲಿ ಚುನಾವಣ ಕಾರ್ಯ ಮಾಡಲಿದ್ದಾರೆ. ಇಡೀ ರಾಜ್ಯದಲ್ಲೇ ಬಿಜೆಪಿ ಅತಿ ಹೆಚ್ಚು ಸ್ಥಾನ ಗೆಲ್ಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

    ಶಾಸಕರ ಮಾದರಿ ಕಾರ್ಯ
    ಶಾಸಕರಾದ ಗುರುರಾಜ ಗಂಟಿಹೊಳೆಯವರು ಬೂತ್ ಬೂತ್‌ಗಳಿಗೂ ಸಂಚರಿಸುವ ಮೂಲಕ ಸಂಘಟನಾತ್ಮಕ ಕಾರ್ಯದ ಜತೆಗೆ ಚುನಾವಣೆ ಪ್ರಚಾರ ನಡೆಸಿರುವುದು ಎಲ್ಲರಿಗೂ ಮಾದರಿಯಾಗಿದೆ. ವಿಶೇಷವಾಗಿ ಬೂತ್ ಸಂಘಟನೆ ಮೂಲಕ ಮತದಾರರನ್ನು ಸೆಳೆದಿದ್ದಾರೆ. ಅವರಿಗೆ ಅಭಿನಂದನೆಗಳು, ಅವರ ಸಂಘಟನಾತ್ಮಕ ಕಾರ್ಯಗಳು ಹೀಗೆ ಮುಂದುವರಿಯಲಿ ಎಂದು ಆಶಿಸಿದರು.

    ಬೃಹತ್ ರೋಡ್ ಶೋ
    ಮೇ 3ರಂದು ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಅವರು ಬೈಂದೂರಿನಲ್ಲಿ ಇರಲಿದ್ದಾರೆ. ಅಂದು ತಮಿಳುನಾಡು ರಾಜ್ಯ ಬಿಜೆಪಿ ಅಧ್ಯಕ್ಷರಾದ ಅಣ್ಣಾಮಲೈ ಅವರು ಬೈಂದೂರಿಗೆ ಬರಲಿದ್ದಾರೆ. ಅಂದು ಬೆಳಗ್ಗೆ 9.30ಕ್ಕೆ ಕೊಲ್ಲೂರಿನಲ್ಲಿ ರೋಡ್ ಶೋ ಆರಂಭವಾಗಲಿದೆ. ತದನಂತರ ವಂಡ್ಸೆ, ನೇರಳಕಟ್ಟೆ, ತಲ್ಲೂರು, ತಾರಾಪತಿ, ಉಪ್ಪುಂದ, ಕಿರಿಮಂಜೇಶ್ವರ, ಗುಜ್ಜಾಡಿ ಮಾರ್ಗವಾಗಿ ಗಂಗೊಳ್ಳಿಯಲ್ಲಿ ಬೃಹತ್ ರೋಡ್ ಶೊ ಅಂತ್ಯವಾಗಲಿದೆ ಎಂದರು.

    ಮಾದರಿ ಸಂಸದರು
    ವಿಧಾನ ಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜರಿ ಮಾತನಾಡಿ, ಕೇಂದ್ರ ಸರ್ಕಾರದ ವಿವಿಧ ಯೋಜನೆಗಳನ್ನು ಸಮರ್ಥವಾಗಿ ಅನುಷ್ಠಾನ ಮಾಡಿರುವ ಬಿ.ವೈ. ರಾಘವೇಂದ್ರ ಅವರು ರಾಜ್ಯದ ಓರ್ವ ಮಾದರಿ ಸಂಸದರಾಗಿದ್ದಾರೆ. ಕ್ಷೇತ್ರದ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಿದ್ದಾರೆ. ಕೇಂದ್ರ ಸರ್ಕಾರದ ಹಲವು ಯೋಜನೆಗಳು ಜನರ ಜೀವನ ಮಟ್ಟ ಸುಧಾರಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ಸರ್ಕಾರ ನೀಡುತ್ತಿರುವ ಅಕ್ಕಿಯನ್ನು ತಮ್ಮದು ಎಂಬಂತೆ ಪ್ರಚಾರ ಮಾಡುತ್ತಿದ್ದಾರೆ. ಸಂವಿಧಾನಕ್ಕೆ ನಿಜವಾದ ಶಕ್ತಿ ತುಂಬಿರುವುದು ಮೋದಿ ಸರ್ಕಾರ. ಡಾ. ಬಿ.ಆರ್. ಅಂಬೇಡ್ಕರ್ ಅವರಿಗೆ ಕಾಂಗ್ರೆಸ್ ಮೋಸ ಮಾಡಿತ್ತು, ಅವರನ್ನು ಎರಡು ಬಾರಿ ಸೋಲಿಸಿತ್ತು. ಬಿಜೆಪಿ ಸರ್ಕಾರ ಅಂಬೇಡ್ಕರ್ ಅವರಿಗೆ ಸಂಬಂಧಿಸಿದ ಐದು ಸ್ಥಳನ್ನು ಪಂಚತೀರ್ಥವಾಗಿ ಅಭಿವೃದ್ಧಿ ಪಡಿಸಿದೆ. ಹೀಗಾಗಿ ಸಂವಿಧಾನಕ್ಕೆ ಶಕ್ತಿ ತುಂಬುತ್ತಿರುವುದೇ ಬಿಜೆಪಿ ಎಂದರು.

    ಮಂಡಲ ಬಿಜೆಪಿ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ, ಮಾಜಿ ಶಾಸಕರಾದ ಕೆ.ರಘುಪತಿ ಭಟ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಿನಕರ ಶೆಟ್ಟಿ ಹೆರ್ಗ, ಪ್ರಮುಖರಾದ ಕುತ್ಯಾರು ನವೀನ್ ಶೆಟ್ಟಿ, ಮಹೇಂದ್ರ ಪೂಜಾರಿ, ಗಣೇಶ್ ಗಾಣಿಗ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

  • ಬೈಂದೂರು :ಈ ದೇಶದ ಪ್ರದಾನಿ ಮೂಲ ಸಮಸ್ಯೆಗಳ ಬಗ್ಗೆ ಮಾತನಾಡುತ್ತಿಲ್ಲ -ನಿಕೇತ್ ರಾಜ್ ಮೌರ್ಯ

    ಬೈಂದೂರು :ಈ ದೇಶದ ಪ್ರದಾನಿ ಮೂಲ ಸಮಸ್ಯೆಗಳ ಬಗ್ಗೆ ಮಾತನಾಡುತ್ತಿಲ್ಲ -ನಿಕೇತ್ ರಾಜ್ ಮೌರ್ಯ

    ಕುಂದಾಪುರ ಮಿರರ್ ಸುದ್ದಿ…

    ಬೈಂದೂರು : ಈ ದೇಶದ ಜನರ ಮೂಲಭೂತ ಸಮಸ್ಯೆಗಳ ಬಗ್ಗೆ ಮಾತನಾಡಬೇಕಾದ ಈ ದೇಶದ ಪ್ರಧಾನಿ ಸಮಸ್ಯೆಗಳ ಕುರಿತು ಮೌನವಹಿಸುತ್ತಾರೆ ಆದರೆ ಜಾತಿ ಜಾತಿಗಳ ನಡುವೆ ಧರ್ಮ ಧರ್ಮಗಳ ನಡುವೆ ಸಂಘರ್ಷ ಸೃಷ್ಟಿಸಿ ರಾಜಕೀಯ ಬೇಳೆ ಬೇಯಿಸಿಕೊಳ್ಳುತ್ತಿದ್ದಾರೆ ಎಂದು ರಾಜ್ಯ ಕಾಂಗ್ರೆಸ್ ವಕ್ತಾರ ನಿಕೇತ್ ರಾಜ್ ಮೌರ್ಯ ಆರೋಪಿಸಿದ್ದಾರೆ.

    ಅವರು ಮಂಗಳವಾರ ಕಿರಿಮಂಜೇಶ್ವರದಲ್ಲಿ ಬೈಂದೂರು ಬ್ಲಾಕ್ ಕಾಂಗ್ರೆಸ್‌ ವತಿಯಿಂದ ಶಿವಮೋಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಅವರ ಪರ ಆಯೋಜಿಸಲಾದ್ದ ಮಹಿಳಾ ಸಮಾವೇಶ ಉದ್ದೇಶಿಸಿ ಮಾತನಾಡಿದರು.

    ಹಿಂದುತ್ವ ಮಸೀದಿ, ಅಜಾನ್, ಹಿಜಾಬ್, ಹಲಾಲ್ ಕಟ್, ಮಾಂಸ, ಜಗಳ ಇಂತಹವನ್ನೇ ದೊಡ್ಡದು ಮಾಡುವ ಬಿಜೆಪಿ ಬೇಕೋ? ಅಥವಾ ಶಿಕ್ಷಣ, ಆರೋಗ್ಯ, ಉದ್ಯೋಗ, ಅಭಿವೃದ್ಧಿಗಳ ಬಗ್ಗೆ ಚಿಂತಿಸಿ ಕಾರ್ಯರೂಪಕ್ಕೆ ತರುವ ಕಾಂಗ್ರೆಸ್‌ ಸರ್ಕಾರ ಬೇಕೋ ಎಂಬುವುದನ್ನು ಮತದಾರರು ಅರ್ಥ ಮಾಡಿಕೊಳ್ಳಬೇಕಿದೆ. ಆ ಮೂಲಕ ಈ ಬಾರಿ ಶಿವಮೊಗ್ಗ‌ಬಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ಸನ್ನು ಗೆಲ್ಲಿಸಬೇಕಿದೆ. ಕಾಂಗ್ರೆಸ್ ಗೆದ್ದರೆ ಅದು ಸತ್ಯ ಮತ್ತು ಧರ್ಮದ ಗೆಲುವಾಗಲಿದೆ. ಸತ್ಯ,‌ನ್ಯಾಯ, ಸಮಾನತೆ, ಭ್ರಾತೃತ್ವದ ಹರಿಕಾರ ಅಂಬೇಡ್ಕರ್ ಅವರು ಕೊಟ್ಟ ಸಂವಿಧಾನವನ್ನೇ ಬದಲಿಸಲು ಹೊರಟಿರುವ ಬಿಜೆಪಿಯನ್ನು ತಿರಸ್ಕರಿಸಿ ಜನರ ಬದುಕು ಕಟ್ಟಿದ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿ ಎಂದರು.

    ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ ಕುಮಾರ್ ಮಾತನಾಡಿ, ದೇಶದಲ್ಲಿ ಮಹಿಳೆಯರಿಗೆ ಮೊದಲ ಭಾರಿಗೆ ಮೀಸಲಾತಿ ನೀಡಿ ಧ್ವನಿ ನೀಡಿದ್ದು, ದೇಶದ ಜನರ ಬದುಕು ಕಟ್ಟಿದ ಕಾಂಗ್ರೆಸ್ ಪಕ್ಷ. ರಾಜ್ಯದಲ್ಲಿ ಕಾಂಗ್ರೆಸ್ ಗ್ಯಾರೆಂಟಿ ಕಾರ್ಡ್ ಯಶಸ್ವಿಯಾಗಿ ಅನುಷ್ಠಾನಗೊಳಿಸಲಾಗಿದೆ. ದೇಶದಲ್ಲಿ ಐಎನ್‌ಡಿಐಎ ಅಧಿಕಾರಕ್ಕೆ ಬಂದರೆ ದೇಶದಲ್ಲಿಯೂ ಕಾಂಗ್ರೆಸ್ ಗ್ಯಾರೆಂಟ್ ಅನುಷ್ಠಾನಕ್ಕೆ ಬರಲಿದೆ ಎಂದರು.

    ನಟ ದುನಿಯಾ ವಿಜಿ ಮಾತನಾಡಿ, ಬಿಜೆಪಿ ದೇಶದಲ್ಲಿ ಹಿಂದೂ ಮುಸ್ಲಿಂ ಎಂದು ನಮ್ಮಲ್ಲಿಯೇ ಒಡಕು ತಂದು ಬೇಳೆ ಬೆಯಿಸಿಕೊಳ್ಳುತ್ತಿದ್ದಾರೆ. ನಾವು ಒಗ್ಗಟ್ಟಾಗಿ ಕಾಂಗ್ರೆಸ್ ಬೆಂಬಲಿಸುವುದು ಬಹುಮುಖ್ಯವಾಗಿದೆ ಎಂದರು.

    ಶೃಂಗೇರಿ ಶಾಸಕ ರಾಜೇಗೌಡ, ಬೈಂದೂರು ಮಾಜಿ ಶಾಸಕರುಗಳಾದ ಕೆ. ಗೋಪಾಲ‌ ಪೂಜಾರಿ, ಬಿ. ಎಂ. ಸುಕುಮಾರ ಶೆಟ್ಟಿ, ಮೂಡಿಗೆರೆ ಮಾಜಿ ಶಾಸಕ ನಿಂಗಯ್ಯ, ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ, ಜಿಲ್ಲಾ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಕಾಂಗ್ರೆಸ್ ಮುಖಂಡರುಗಳಾದ ಕೆ. ಜಯಪ್ರಕಾಶ್ ಹೆಗ್ಡೆ, ಮುನಿಯಲ್ ಉದಯಕುಮಾರ್ ಶೆಟ್ಟಿ, ಎಸ್. ರಾಜು ಪೂಜಾರಿ, ರಘುರಾಮ ಶೆಟ್ಟಿ, ಬೈಂದೂರು ಕ್ಷೇತ್ರದ ಉಸ್ತುವಾರಿ ಜಿ.ಎ. ಭಾವ, ಮಾಧ್ಯಮ ವಕ್ತಾರ ಅನಿಲ್, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಗೌರಿ ದೇವಾಡಿಗ, ಎಸ್. ಪ್ರಕಾಶ್ಚಂದ್ರ ಶೆಟ್ಟಿ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಗೌರಿ ದೇವಾಡಿಗ, ಎಸ್. ಪ್ರಕಾಶ್ಚಂದ್ರ ಶೆಟ್ಟಿ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಗೌರಿ ದೇವಾಡಿಗ, ಜಗದೀಶ ದೇವಾಡಿಗ, ಸುಬ್ರಹ್ಮಣ್ಯ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು. ಡಾ. ಸುಬ್ರಹ್ಮಣ್ಯ ಭಟ್ ಕಾರ್ಯಕ್ರಮ ನಿರೂಪಿಸಿದರು.

  • ಮಂಗಳೂರು ಶಾಸಕ ವೇದವ್ಯಾಸ ಕಾಮತ್ ಅವರಿಂದ ಬಿರುಸಿನ ಪ್ರಚಾರ

    ಮಂಗಳೂರು ಶಾಸಕ ವೇದವ್ಯಾಸ ಕಾಮತ್ ಅವರಿಂದ ಬಿರುಸಿನ ಪ್ರಚಾರ

    ಕೊಂಕಣಿ ಸಮುದಾಯ ಬಾಂಧವರೊಂದಿಗೆ ಸಭೆ, ಬಿಜೆಪಿಗೆ ಮತ ಹಾಕಲು ಮನವಿ

    ಕುಂದಾಪುರ ಮಿರರ್ ಸುದ್ದಿ…
    ಬೈಂದೂರು: ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿರುವ ಕೊಂಕಣಿ ಸಮುದಾಯದ ದೇವಸ್ಥಾನಗಳಿಗೆ ಸೋಮವಾರ ಮಂಗಳೂರಿನ ಶಾಸಕರಾದ ವೇದವ್ಯಾಸ ಕಾಮತ್ ಅವರು ಬೈಂದೂರಿನ ಶಾಸಕರಾದ ಗುರುರಾಜ್ ಗಂಟಿಹೊಳೆಯವರೊಂದಿಗೆ ಭೇಟಿ ನೀಡಿ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಅವರ ಪರ ಪ್ರಚಾರ ನಡೆಸಿದರು.

    ಮೊದಲಿಗೆ ಶಿರೂರಿನಲ್ಲಿರುವ ಶ್ರೀ ಪೇಟೆ ವೆಂಕಟರಮಣ ದೇವಸ್ಥಾನದಲ್ಲಿ ಪ್ರಮುಖರ ಸಭೆ ನಡೆಸಿ, ನಮ್ಮ ಸಮುದಾಯವು ಸದಾ ರಾಷ್ಟ್ರವಾದಿ ಚಿಂತನೆಯನ್ನು ಬೆಂಬಲಿಸಿಕೊಂಡು ಬಂದಿದೆ. ಎಲ್ಲ ಸಂದರ್ಭದಲ್ಲಿ ಬಿಜೆಪಿ ಪರವಾಗಿಯೇ ನಿಂತಿದೆ. ಪ್ರಧಾನಿ ನರೇಂದ್ರ ಮೋದಿಯವರು ಕಳೆದ ಹತ್ತು ವರ್ಷದಲ್ಲಿ ದೇಶದಲ್ಲಿ ಸಾಕಷ್ಟು ಸಕಾರಾತ್ಮಕ ಬದಲಾವಣೆಗಳನ್ನು ತಂದಿದ್ದಾರೆ. ನರೇಂದ್ರ ಮೋದಿಯವರನ್ನು ಮತ್ತೊಮ್ಮೆ ಈ ದೇಶದ ಪ್ರಧಾನಿಯನ್ನಾಗಿಸಲು ನಾವೆಲ್ಲರೂ ಈ ಬಾರಿ ಒಗ್ಗಟ್ಟಾಗಿ ಬಿಜೆಪಿ ಅಭ್ಯರ್ಥಿಗೆ ಮತ ನೀಡಬೇಕು. ಆ ಮೂಲಕ ಬಿ ವೈ ರಾಘವೇಂದ್ರ ಅವರಿಗೆ ಒಂದು ಲಕ್ಷಕ್ಕೂ ಅಧಿಕ ಲೀಡ್ ನೀಡಲು ಸಹಕರಿಸಬೇಕು ಎಂದು ಮನವಿ ಮಾಡಿದರು.

    ನಂತರ ಉಪ್ಪುಂದದ ಶ್ರೀ ಲಕ್ಷ್ಮಿ ವೆಂಕಟರಮಣ ದೇವಸ್ಥಾನಕ್ಕೆ ಭೇಟಿ ನೀಡಿ ಪ್ರಮುಖರೊಂದಿಗೆ ಚರ್ಚೆ ನಡೆಸಿದರು. ದೇಶದಲ್ಲಿ ಪ್ರಧಾನಿ ಮೋದಿ ಅವರ ನಾಯಕತ್ವದಿಂದ ಆಗಿರುವ ಬದಲಾವಣೆ ಮತ್ತು ಪ್ರಸ್ತುತ ಮೋದಿಯವರು ದೇಶಕ್ಕೆ ಯಾಕೆ ಬೇಕು ಎನ್ನುವುದನ್ನು ಸಮರ್ಪಕವಾಗಿ ಮನದಟ್ಟು ಮಾಡಿದರು.
    ಅಲ್ಲಿಂದ ನಾಯ್ಕನಕಟ್ಟೆಯ ಶ್ರೀ ವೆಂಕಟರಮಣ ದೇವಸ್ಥಾನಕ್ಕೆ ಆಗಮಿಸಿ ಸಮುದಾಯ ಪ್ರಮುಖರ ಸಭೆ ನಡೆಸಿ, ದೇಶದಲ್ಲಿ ಬಿಜೆಪಿ ಅಧಿಕಾರಕ್ಕೆ ಬಾರದೇ ಇದ್ದರೆ ಏನೆಲ್ಲಾ ಅನಾಹುತಗಳು ಸಂಭವಿಸಬಹುದು ಎಂಬುದನ್ನು ವಿಸ್ತೃತವಾಗಿ ಬಿಚ್ಚಿಟ್ಟರು. ದೇಶಕ್ಕೆ ಮೋದಿ ಮತ್ತು ಬಿಜೆಪಿ ಇಂದಿನ ಅನಿವಾರ್ಯ. ನಮ್ಮ ಮುಂದಿನ ಪೀಳಿಗೆ ಸುರಕ್ಷಿತ ಮತ್ತು ಸಮೃದ್ಧವಾಗಿ ಇರಬೇಕಾದರೆ ನರೇಂದ್ರ ಮೋದಿಯವರನ್ನು ಮತ್ತೊಮ್ಮೆ ಪ್ರಧಾನಿಯನ್ನಾಗಿಸಬೇಕು ಎಂದು ಕರೆ ಕೊಟ್ಟರು.
    ಶಾಸಕರಾದ ಗುರುರಾಜ್ ಗಂಟಿಹೊಳೆಯವರು ಮಾತನಾಡಿ, ಬೈಂದೂರು ವಿಧಾನಸಭಾ ಕ್ಷೇತ್ರದಿಂದಲೇ ಒಂದು ಲಕ್ಷ ಕ್ಕೂ ಅಧಿಕ ಲೀಡ್ ನೀಡುವ ಸಂಕಲ್ಪ ಮಾಡಿದ್ದೇವೆ. ಅದರಂತೆ ಬೂತ್ ಕಡೆಗೆ ಸಮೃದ್ಧ ನಡೆಗೆ ಸಹಿತ ವಿವಿಧ ಸಮಾವೇಶಗಳನ್ನು ಆಯೋಜಿಸಿಲಾಗಿದೆ. ಈ ಬಾರಿ ಎಲ್ಲರೂ ಒಟ್ಟಾಗಿ ಬಿಜೆಪಿಯನ್ನು ಅತ್ಯಂತ ದೊಡ್ಡ ಅಂತರದಲ್ಲಿ ಗೆಲ್ಲಿಸುವಂತೆ ಎಂದು ಮನವಿ ಮಾಡಿದರು.

    ಮೂರು ದೇವಸ್ಥಾನಗಳಲ್ಲೂ ಶಾಸಕರು ವಿಶೇಷ ಪೂಜೆ ಸಲ್ಲಿಸಿ ಪ್ರಸಾದ ಸ್ವೀಕರಿಸಿದರು. ಸಮುದಾಯದ ಮುಖಂಡರು ಹಿರಿಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

  • ತ್ರಾಸಿ, ಗಂಗೊಳ್ಳಿ, ಗುಜ್ಜಾಡಿ ಪರಿಸರದಲ್ಲಿ ಶಾಸಕರಾದ ಕಿರಣ್ ಕೊಡ್ಗಿ ಮತಬೇಟಿ

    ತ್ರಾಸಿ, ಗಂಗೊಳ್ಳಿ, ಗುಜ್ಜಾಡಿ ಪರಿಸರದಲ್ಲಿ ಶಾಸಕರಾದ ಕಿರಣ್ ಕೊಡ್ಗಿ ಮತಬೇಟಿ

    ಒಂದು ಲಕ್ಷ ಲೀಡ್ ಕೊಡಿಸಲು ಕಾರ್ಯಕರ್ತರಿಗೆ ಶಾಸಕರಿಂದ ಪ್ರೇರಣೆ

    ಕುಂದಾಪುರ ಮಿರರ್ ಸುದ್ದಿ…
    ತ್ರಾಸಿ: ಕುಂದಾಪುರದ ಶಾಸಕರಾದ ಕಿರಣ್ ಕೊಡ್ಗಿ ಅವರು ಬೈಂದೂರು ವಿಧಾನಸಭಾ ಕ್ಷೇತ್ರದ ತ್ರಾಸಿ, ಗಂಗೊಳ್ಳಿ ಪರಿಸರದಲ್ಲಿ ಸೋಮವಾರ ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಅವರ ಪರ ಪ್ರಚಾರ ನಡೆಸಿದರು.

    ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಿಂದಲೇ ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಅವರಿಗೆ ಒಂದು ಲಕ್ಷಕ್ಕೂ ಅಧಿಕ ಲೀಡ್ ನೀಡುವ ಸಂಕಲ್ಪವನ್ನು ಈಗಾಗಲೇ ಶಾಸಕರಾದ ಗುರುರಾಜ ಗಂಟಿಹೊಳೆಯವರು ಮಾಡಿದ್ದಾರೆ. ಅದನ್ನು ಈಡೇರಿಸುವ ನಿಟ್ಟಿನಲ್ಲಿ ನಾವೆಲ್ಲರೂ ಒಟ್ಟಾಗಿ ಈ ಚುನಾವಣೆ ಯಜ್ಞದಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸಬೇಕು ಎಂದರು.
    ಕಳೆದ ಹತ್ತು ವರ್ಷದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ದೇಶದಲ್ಲಿ ಮಾಡಿರುವ ಅಭಿವೃದ್ಧಿ ಕಾರ್ಯ ಮತ್ತು ಶಿವಮೊಗ್ಗ ಕ್ಷೇತ್ರದ ಸಂಸದರಾಗಿ ಬಿ.ವೈ. ರಾಘವೇಂದ್ರ ಅವರು ಬೈಂದೂರು ಕ್ಷೇತ್ರಕ್ಕೆ ನೀಡಿರುವ ಕೊಡುಗೆಗಳನ್ನು ಪ್ರತಿ ಮನೆಗೂ ತಲುಪಿಸಬೇಕು. ಮನೆ ಮನೆ ಪ್ರಚಾರದ ಸಂದರ್ಭದಲ್ಲಿ ಅತ್ಯಂತ ಪರಿಣಾಮಕಾರಿಯಾಗಿ ಬಿಜೆಪಿ ಸಾಧನೆಯನ್ನು ಮತದಾರರಿಗೆ ಮನವರಿಕೆ ಮಾಡಬೇಕು.‌ ಎಷ್ಟು ಸಾಧ್ಯವೋ ಅಷ್ಟು ಪ್ರಚಾರ ಪ್ರಕ್ರಿಯೆಯಲ್ಲಿ ಎಲ್ಲರೂ ಸಕ್ರಿಯರಾಗಬೇಕು ಎಂದು ಕರೆ ನೀಡಿದರು.

    ಶಾಸಕರಾದ ಗುರುರಾಜ್ ಗಂಟಿಹೊಳೆಯವರು ಬೂತ್ ಕಡೆಗೆ ಸಮೃದ್ಧ ನಡಿಗೆಯನ್ನು ಈಗಾಗಲೇ ಯಶಸ್ವಿಯಾಗಿ ಪೂರೈಸಿದ್ದಾರೆ. ನಾವೆಲ್ಲರೂ ಈಗ ಇರುವ ಕನಿಷ್ಠ ಸಮಯದಲ್ಲಿ ಪ್ರತಿ ಬೂತ್ ನ ಎಲ್ಲಾ ಮನೆಗಳಿಗೂ ಸಂಚರಿಸಿ ಬಿಜೆಪಿ ಅಭ್ಯರ್ಥಿಗೆ ಒಂದು ಲಕ್ಷಕ್ಕೂ ಅಧಿಕ ಲೀಡ್ ಇಲ್ಲಿಂದಲೇ ಬರುವಂತೆ ಶ್ರಮಿಸಬೇಕು ಎಂದು ಕಾರ್ಯಕರ್ತರಿಗೆ ಮನವರಿಕೆ ಮಾಡಿದರು.

    ಗಂಗೊಳ್ಳಿಯಲ್ಲಿ ನಾಲ್ಕು ಶಕ್ತಿಕೇಂದ್ರದ 11 ಬೂತ್ ಗೆ ಸಂಬಂಧಿಸಿದಂತೆ ಹಾಗೂ ತ್ರಾಸಿಯ ಗುಜ್ಜಾಡಿಯಲ್ಲಿ ಹೆಮ್ಮಾಡಿ, ಹೊಸಾಡು, ಸೇನಾಪುರ ಶಕ್ತಿಕೇಂದ್ರ ವ್ಯಾಪ್ತಿಯ ಸಭೆ ನಡೆಸಿದರು.
    ಪ್ರಮುಖರಾದ ರಾಜೇಶ್ ಕಾವೇರಿ, ಸದಾನಂದ ಉಪ್ಪಿನಕುದ್ರು, ವಿನೋದ್ ಗುಜ್ಜಾಡಿ, ರವಿ ಖಾರ್ವಿ, ಸದಾನಂದ ಶೆಣೈ, ಶಕ್ತಿಕೇಂದ್ರ ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.

  • ಬೈಂದೂರು :ಮೇ 1ರಂದು ಕಿರಿಮಂಜೇಶ್ವರದಲ್ಲಿ ವಿಜಯ ಸಂಕಲ್ಪ ಬೃಹತ್ ಸಮಾವೇಶ

    ಬೈಂದೂರು :ಮೇ 1ರಂದು ಕಿರಿಮಂಜೇಶ್ವರದಲ್ಲಿ ವಿಜಯ ಸಂಕಲ್ಪ ಬೃಹತ್ ಸಮಾವೇಶ

    ಕುಂದಾಪುರ ಮಿರರ್ ಸುದ್ದಿ…

    ಬೈಂದೂರು :ರಾಷ್ಟ್ರಭಕ್ತರ ಬಳಗದ ವತಿಯಿಂದ ಮೇ ೧ ಬುಧವಾರ ಬೆಳಿಗ್ಗೆ 10:30ಕ್ಕೆ ಕಿರಿಮಂಜೇಶ್ವರದಲ್ಲಿ ವಿಜಯ ಸಂಕಲ್ಪ ಸಮಾವೇಶವನ್ನು ಆಯೋಜಿಸಲಾಗಿದೆ. ಈ ಸಮಾವೇಶದಲ್ಲಿ ಸುಮಾರು ೧೦ಸಾವಿರಕ್ಕೂ ಮಿಕ್ಕಿ ಜನ ಸೇರುವ ನಿರೀಕ್ಷೆ ಹೊಂದಲಾಗಿದೆ ಎಂದು ರಾಷ್ಟ್ರಭಕ್ತರ ಬಳಗದ ಕೃಷ್ಣ ಬಿಜೂರು ಹೇಳಿದರು.

    ಅವರು ಸೋಮವಾರ ಉಪ್ಪುಂದದ ರಾಷ್ಟ್ರಭಕ್ತರ ಬಳಗದ ಕಾರ್ಯಾಲಯದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

    ವಿಜಯ ಸಂಕಲ್ಪ ಸಮಾವೇಶದಲ್ಲಿ ಮೀನುಗಾರರು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಕೆ.ಎಸ್ ಈಶ್ವರಪ್ಪ ಅವರನ್ನು ಸನ್ಮಾನಿಸಲಿದ್ದಾರೆ. ರಾಷ್ಟ್ರಭಕ್ತರ ಬಳಗದ ವತಿಯಿಂದ ೧೦ ಮಂದಿ ಪೌರ ಕಾರ್ಮಿಕರನ್ನು ಸನ್ಮಾನಿಸಲಾಗುವುದು. ಮುಳುಗುತಜ್ಞ ದಿನೇಶ ಖಾರ್ವಿ ಗಂಗೊಳ್ಳಿ ಅವರನ್ನು ಸನ್ಮಾನಿಸಲಾಗುವುದು ಎಂದು ಅವರು ಹೇಳಿದರು.

    ಶ್ರೀಧರ ಬಿಜೂರು ಬೆಂಬಲ ಹಿಂಪೆಡೆದ ಬಗ್ಗೆ ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು ಅವರು ಏಕೆ ಹೇಳಿದರು, ಅವರ ಉದ್ದೇಶ ಎನು ಅಂತ ನಮಗೆ ಗೊತ್ತಿಲ್ಲ. ಅದು ಅವರ ವೈಯಕ್ತಿಕ ವಿಚಾರ. ನಾವೆಲ್ಲಾ ನೈಜ ಹಿಂದುತ್ವವಾದಿಗಳು. ಕೆ.ಎಸ್ ಈಶ್ವರಪ್ಪನವರು ಹೇಳಿದಂತೆ ನರೇಂದ್ರ ಮೋದಿಯವರ ಪ್ರತಿಯೊಂದು ಕಾರ್ಯವನ್ನು ಮೆಚ್ಚಿಕೊಂಡು ಅವರನ್ನು ಬೆಂಬಲಿಸುತ್ತಿದ್ದೇವೆ. ನಾವು ಸಾಮಾನ್ಯ ಕಾರ್ಯಕರ್ತರು, ನಾವು ಮುನ್ನೆಡಿಸಿಕೊಂಡು ಹೋಗುತ್ತೇವೆ ಎಂದರು.

    ಈಗಾಗಲೇ ನಾವು ೨೦೦ ಬೂತ್‌ಗಳಲ್ಲಿ ಚುನಾವಣಾ ಪ್ರಚಾರ ಕಾರ್ಯ ಮಾಡಿದ್ದೇವೆ. ಕ್ಷೇತ್ರದಲ್ಲಿ ಹಿಂದುತ್ವದ ಅಲೆಯೇ ಎದ್ದಿದೆ. ಉತ್ತಮ ಪ್ರತಿಕ್ರಿಯೆ ಕಂಡು ಬರುತ್ತಿದೆ ಎಂದರು.

    ಸುದ್ಧಿಗೋಷ್ಠಿಯಲ್ಲಿ ವಿನೋದ್ ರಾಜ್, ಉಮೇಶ ಬಿಜೂರು, ಮೋಹನ್, ಜಗದೀಶ ಉಪಸ್ಥಿತರಿದ್ದರು.

  • ಬೈಂದೂರು :ಮೋದಿ ಹೆಸರಲ್ಲಿ ಈಶ್ವರಪ್ಪ ಕಾಂಗ್ರೆಸ್ ಬೆಂಬಲ ಅರಿವಾಗಿ ವಾಪಾಸ್ ಬಿಜೆಪಿಗೆ

    ಬೈಂದೂರು :ಮೋದಿ ಹೆಸರಲ್ಲಿ ಈಶ್ವರಪ್ಪ ಕಾಂಗ್ರೆಸ್ ಬೆಂಬಲ ಅರಿವಾಗಿ ವಾಪಾಸ್ ಬಿಜೆಪಿಗೆ

    ಬಿಜೆಪಿ ಅಭ್ಯರ್ಥಿ ಗೆಲ್ಲಿಸಲು ಈ ಬಾರಿ ಚುನಾವಣೆಯಲ್ಲಿ ಕೆಲಸ ಮಾಡಲಿದ್ದೇವೆ: ಶ್ರೀಧರ್ ಬಿಜೂರ್

    ಕುಂದಾಪುರ ಮಿರರ್ ಸುದ್ದಿ…


    ಬೈಂದೂರು : ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಅವರು ಬಿಜೆಪಿ ಮತಗಳನ್ನು ಟಾರ್ಗೆಟ್ ಮಾಡಿ, ಕಾಂಗ್ರೆಸ್ ಗೆಲ್ಲಿಸುವ ಮಾನಸಿಕತೆಯಲ್ಲಿದ್ದದ್ದು ಅರಿವೆ ಬಂದಿದೆ. ಹೀಗಾಗಿಯೇ ರಾಷ್ಟ್ರಭಕ್ತರಾದ ನಾವೆಲ್ಲರೂ ಪ್ರಧಾನಿ ಮೋದಿಯವರಿಗೆ ಬೆಂಬಲ ನೀಡುತ್ತೇವೆ ಮತ್ತು ಬೈಂದೂರು ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಅವರ ಪರವಾಗಿ ಕೆಲಸ ಮಾಡಲಿದ್ದೇವೆ. ಈಶ್ವರಪ್ಪ ಅವರಿಗೆ ನೀಡಿದ ಬೆಂಬಲವನ್ನು ವಾಪಾಸ್ ಪಡೆದಿದ್ದೇವೆ ಎಂದು ರಾಷ್ಟ್ರಭಕ್ತರ ಬಳಗದ ಶ್ರೀಧರ್ ಬಿಜೂರ್ ಹೇಳಿದರು.

    ಬೈಂದೂರು ಬಿಜೆಪಿ ಕಚೇರಿಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಅವರೊಂದಿಗೆ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಕ್ಷೇತ್ರದಲ್ಲಿ ಕಾರ್ಯಕರ್ತರ ಕಡೆಗಣನೆ ಆಗುತ್ತಿದೆ ಎನ್ನುವ ಕಾರಣಕ್ಕೆ ಪಕ್ಷದಿಂದ ದೂರಾಗಿದ್ದು ನಿಜ. ಅದೇ ಸಂದರ್ಭದಲ್ಲಿ ಈಶ್ವರಪ್ಪ ಅವರು ಪ್ರಧಾನಿ ನರೇಂದ್ರ ಮೋದಿಯವರ ಕೈ ಬಲಪಡಿಸುವ ನಿಟ್ಟಿನಲ್ಲಿ ಸ್ಪರ್ಧೆಗೆ ಇಳಿದಿದ್ದರು. ಪ್ರಧಾನಿ ನರೇಂದ್ರ ಮೋದಿಯವರ ಹೆಸರಿನಲ್ಲಿ ಬಂದಿದ್ದರಿಂದ ಅವರೊಂದಿಗೆ ಸೇರಿಕೊಂಡಿದ್ದೇವು. ಈಗ ನಿಜಾಂಶ ಅರಿವಾಗಿದೆ. ಕಾಂಗ್ರೆಸ್ ಗೆಲ್ಲಿಸಲು ಅವರು ಶ್ರಮಿಸುತ್ತಿದ್ದಾರೆ ಮತ್ತು ಬಿಜೆಪಿ ಮತವನ್ನೇ ಟಾರ್ಗೆಟ್ ಮಾಡುತ್ತಿದ್ದಾರೆ. ಹೀಗಾಗಿ ಅವರಿಗೆ ನಮ್ಮ ಬೆಂಬಲ ಇಲ್ಲ. ಈ ಚುನಾವಣೆಯಲ್ಲಿ ಬಿಜೆಪಿ ಪರವಾಗಿ ಕೆಲಸ ಮಾಡುತ್ತೇವೆ ಎಂದು ಹೇಳಿದರು.

    ಸಣ್ಣಪುಟ್ಟ ವ್ಯತ್ಯಾಸಗಳು ಆಗಿರಬಹುದು. ಅದೆಲ್ಲವನ್ನು ಸರಿಪಡಿಸುವ ಭರವಸೆಯನ್ನು ಪಕ್ಷದ ಹಿರಿಯರು ನೀಡಿದ್ದಾರೆ. ಅಲ್ಲದೆ, ಇತ್ತೀಚೆಗೆ ಹುಬ್ಬಳ್ಳಿಯಲ್ಲಿ ನೇಹಾಳ ಹತ್ಯೆಯ ನಂತರದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ನಡೆದುಕೊಂಡ ರೀತಿ ನಮ್ಮನ್ನು ಇನ್ನಷ್ಟು ಚಿಂತಿಗೆ ಈಡುಮಾಡಿದೆ. ಜಿಹಾದಿ ಮಾನಸಿಕತೆಗಳು ಹೆಚ್ಚುತ್ತಿವೆ. ಹೀಗಾಗಿ ಯಾವುದೇ ಕಾರಣಕ್ಕೂ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲುವ ನಿಟ್ಟಿನಲ್ಲಿ ಬಿಜೆಪಿ ಮತಗಳನ್ನು ಟಾರ್ಗೆಟ್ ಮಾಡುವುದಿಲ್ಲ. ಬಿಜೆಪಿ ಪರವಾಗಿ ಕೆಲಸ ಮಾಡುತ್ತೇವೆ. ಸಂಸದರಾದ ಬಿ.ವೈ.ರಾಘವೇಂದ್ರ ಅವರ ಕೈ ಬಲಪಡಿಸುವ ಕಾರ್ಯ ಮಾಡಲಿದ್ದೇವೆ ಎಂದರು.

    ಜಿಲ್ಲಾ ಬಿಜೆಪಿ ಅಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಮಾತನಾಡಿ, ಈಶ್ವರಪ್ಪನವರು ನಮ್ಮ ಪಕ್ಷದ ಕಾರ್ಯಕರ್ತರಲ್ಲಿ ಕೆಲವರನ್ನು ಸೆಳೆದಿರುವುದು ನಿಜ. ಈಶ್ವರಪ್ಪರಿಂದ ಮೋಸ ಹೋಗಿರುವ ಬಗ್ಗೆ ಅವರಿಗೆ ಸತ್ಯದ ಅರಿವಿವಾಗಿ ಪುನರ್ ಬಿಜೆಪಿಗೆ ಬಂದಿದ್ದಾರೆ. ಹೀಗಾಗಿ ಬಿಜೆಪಿ ಅಭ್ಯರ್ಥಿ ಪರವಾಗಿ, ನರೇಂದ್ರ ಮೋದಿಯವರನ್ನು ಇನ್ನೊಮ್ಮೆ ಪ್ರಧಾನಿ ಮಾಡುವ ನಿಟ್ಟಿನಲ್ಲಿ ಪಕ್ಷಕ್ಕೆ ಬೆಂಬಲವಾಗಿ ನಿಂತಿದ್ದಾರೆ. ಸ್ಥಳೀಯವಾಗಿರುವ ಸಣ್ಣಪುಟ್ಟ ಸಮಸ್ಯೆಗಳನ್ನು ಸರಿಪಡಿಸಲಾಗುವುದು ಎಂದರು.
    ಶಾಸಕರಾದ ಗುರುರಾಜ ಗಂಟಿಹೊಳೆ, ಮಾಜಿ ಶಾಸಕರಾದ ಕೆ.ರಘುಪತಿ ಭಟ್, ಮಂಡಲ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ, ಮಂಡಲ ಖಜಾಂಚಿ ಗಣೇಶ್ ಗಾಣಿಗ ಮೊದಲಾದವರು ಪತ್ರಿಕಾಗೋಷ್ಠಿಯಲ್ಲಿದ್ದರು.

  • ಬೈಂದೂರು ಕ್ಷೇತ್ರಕ್ಕೆ ಬಿ.ವೈ.ರಾಘವೇಂದ್ರ ಅವರ ಕೊಡುಗೆ ಅಪಾರ: ಶಾಸಕ ಕಿರಣ್ ಕೊಡ್ಗಿ – ವಂಡ್ಸೆ ಮಹಾಶಕ್ತಿ ಕೇಂದ್ರದ ಪೇಜ್ ಪ್ರಮುಖರ ಸಭೆ

    ಬೈಂದೂರು ಕ್ಷೇತ್ರಕ್ಕೆ ಬಿ.ವೈ.ರಾಘವೇಂದ್ರ ಅವರ ಕೊಡುಗೆ ಅಪಾರ: ಶಾಸಕ ಕಿರಣ್ ಕೊಡ್ಗಿ – ವಂಡ್ಸೆ ಮಹಾಶಕ್ತಿ ಕೇಂದ್ರದ ಪೇಜ್ ಪ್ರಮುಖರ ಸಭೆ

    ಕುಂದಾಪುರ ಮಿರರ್ ಸುದ್ದಿ…

    ಬೈಂದೂರು: ಸಂಸದರಾಗಿ ಬಿ.ವೈ. ರಾಘವೇಂದ್ರ ಅವರು ಬೈಂದೂರು ಕ್ಷೇತ್ರದ ಅಭಿವೃದ್ಧಿಗೆ ಅಪಾರ ಕೊಡುಗೆ ನೀಡಿದ್ದಾರೆ. ಗ್ರಾಮೀಣ ರಸ್ತೆ ಅಭಿವೃದ್ಧಿ, ಅಗತ್ಯ ಸೇತುವೆ, ಕಿಂಡಿ ಅಣೆಕಟ್ಟು ಹಾಗೂ ಬಂದರು ನಿರ್ಮಾಣ ಕಾಮಗಾರಿಗಳಿಗೆ ಕೋಟ್ಯಾಂತರ ರೂಪಾಯಿ ಅನುದಾನ ಒದಗಿಸಿದ್ದಾರೆ. ಅವರನ್ನು ಮತ್ತೊಮ್ಮೆ ಬೈಂದೂರು ಕ್ಷೇತ್ರದಿಂದಲೇ ಒಂದು ಲಕ್ಷಕ್ಕೂ ಅಧಿಕ ಲೀಡ್ ನೀಡುವ ಮೂಲಕ ದಾಖಲೆಯ ಅಂತರದಲ್ಲಿ ಗೆಲ್ಲಿಸುವಂತೆ ಕುಂದಾಪುರ ಶಾಸಕ ಕಿರಣ್ ಕೊಡ್ಗಿ ಕರೆ ನೀಡಿದರು.

    ವಂಡ್ಸೆ ಮಹಾಶಕ್ತಿಕೇಂದ್ರ ವ್ಯಾಪ್ತಿಯ ಬಿಜೆಪಿ ಪೇಜ್ ಪ್ರಮುಖರ ಸಭೆಯನ್ನು ವಂಡ್ಸೆ ಸಕಲ ಸಭಾ ಭವನದಲ್ಲಿ ಶನಿವಾರ ಉದ್ಘಾಟಿಸಿ ಮಾತನಾಡಿದ ಅವರು ಬಿ.ವೈ. ರಾಘವೇಂದ್ರ ಅವರಿಗೆ ಕ್ಷೇತ್ರದ ಅಭಿವೃದ್ಧಿಯ ಬಗ್ಗೆ ಸ್ಪಷ್ಟ ಕಲ್ಪನೆಯಿದೆ. ವಾರಾಹಿ ಯೋಜನೆಯ ಮೂಲಕ ಮನೆ ಮನೆ ಕುಡಿಯುವ ನೀರು ಕಲ್ಪಿಸುವ ವ್ಯವಸ್ಥೆ ಮಾಡುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರ ಸಮರ್ಥ ನಾಯಕತ್ವ ಈ ದೇಶಕ್ಕೆ ಎಷ್ಟು ಅನುಕೂಲವಾಗುವಂತೆ ಸಂಸದರಾಗಿ ಬಿ.ವೈ. ರಾಘವೇಂದ್ರ ಅವರ ಅಭಿವೃದ್ಧಿ ಕಾರ್ಯಗಳು ಕ್ಷೇತ್ರದ ಸರ್ವಾಂಗೀಣ ಉನ್ನತಿಗೆ ಪೂರಕವಾಗಿದೆ ಎಂದು ಹೇಳಿದರು.

    ಶಾಸಕರಾದ ಗುರುರಾಜ ಗಂಟಿಹೊಳೆ ಅವರು ಬೂತ್ ಕಡೆಗೆ ಸಮೃದ್ಧ ನಡಿಗೆ ಮೂಲಕ ಕ್ಷೇತ್ರದಲ್ಲಿ ವಿಶೇಷ ಸಂಚಲನ ಮೂಡಿಸಿದ್ದಾರೆ. ಒಂದು ಲಕ್ಷ ಲೀಡ್ ಕೊಡಿಸಲು ಪ್ರತಿ ಬೂತ್ ನಲ್ಲೂ ಸಂಚಾರ ಮಾಡಿದ್ದಾರೆ. ಕ್ಷೇತ್ರವು ಅಭಿವೃದ್ಧಿಯಲ್ಲಿ ಮಾದರಿಯಾಗಬೇಕು ಎನ್ನುವ ನೆಲೆಯಲ್ಲಿ ಬೂತ್ ನಡಿಗೆಯನ್ನು ಯಶಸ್ವಿ ಗೊಳಿಸಿದ್ದಾರೆ ಎಂದು ಪ್ರಶಂಸೆ ವ್ಯಕ್ತಪಡಿಸಿದರು. ಪೇಜ್ ಪ್ರಮುಖರು ತಮ್ಮ ವ್ಯಾಪ್ತಿಯ ಮತದಾರರನ್ನು ನಿತ್ಯವೂ ಸಂಪರ್ಕ ಮಾಡಬೇಕು. ಕೇಂದ್ರ ಸರ್ಕಾರದ ಸಾಧನೆ ಹಾಗೂ ಸಂಸದರಾಗಿ ರಾಘವೇಂದ್ರ ಅವರು ಮಾಡಿರುವ ಅಭಿವೃದ್ಧಿ ಕಾರ್ಯದ ಬಗ್ಗೆ ಮತದಾರರಿಗೆ ತಿಳಿಸಬೇಕು. ಎಲ್ಲ ಮತಗಳು ಬಿಜೆಪಿಗೆ ಬರುವಂತೆ ನೋಡಿಕೊಳ್ಳಬೇಕು ಎಂದರು.

    ಶಾಸಕರಾದ ಗುರುರಾಜ ಗಂಟಿಹೊಳೆಯವರು ಮಾತನಾಡಿ, ಮೂಕಾಂಬಿಕಾ ಕಾರೀಡಾರ್ ಮೂಲಕ ಸಮೃದ್ಧ ಬೈಂದೂರು ಸಾಕಾರ ಮಾಡಲು ಪ್ರಯತ್ನ ನಡೆಸುತ್ತಿದ್ದೇವೆ. ಈ ಬಾರಿ ಬೈಂದೂರು ಕ್ಷೇತ್ರದಿಂದಲೇ ಬಿ.ವೈ. ರಾಘವೇಂದ್ರ ಅವರಿಗೆ 1 ಲಕ್ಷ ಲೀಡ್ ನೀಡುವ ಸಂಕಲ್ಪ ಮಾಡಿದ್ದು, ಅದರ ಭಾಗವಾಗಿ ಬೂತ್ ಕಡೆಗೆ ಸಮೃದ್ಧ ನಡಿಗೆ ಯಶಸ್ವಿಯಾಗಿ ಪೂರೈಸಿದ್ದೇವೆ. ಒಂದು ಲಕ್ಷ ಲೀಡ್ ಬಂದರೆ ಪ್ರಧಾನಿ ನರೇಂದ್ರ ಮೋದಿಯವರನ್ನು ಕರೆದುಕೊಂಡು ಬರುವ ಭರವಸೆಯನ್ನು ಸಂಸದರಾದ ಬಿ.ವೈ. ರಾಘವೇಂದ್ರ ಅವರು ನೀಡಿದ್ದಾರೆ. ಹೀಗಾಗಿ ಪೇಜ್ ಪ್ರಮುಖರು ಇನ್ನಷ್ಟು ಕ್ರಿಯಾಶೀಲವಾಗಿ ಕಾರ್ಯ ನಿರ್ವಹಿಸಬೇಕು ಎಂದರು.

    ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ, ಬಿಜೆಪಿ ಪ್ರಮುಖರಾದ ತಿಂಗಳೆ ವಿಕ್ರಮಾರ್ಜುನ ಹೆಗ್ಡೆ, ರಾಘವೇಂದ್ರ ಉಪ್ಪುಂದ ಮೊದಲಾದವರು ಪೇಜ್ ಪ್ರಮುಖರ ನಿರ್ದಿಷ್ಟ ಜವಾಬ್ದಾರಿಯ ಬಗ್ಗೆ ಮಾರ್ಗದರ್ಶನ ನೀಡಿದರು. ಮುಖಂಡರು, ಕಾರ್ಯಕರ್ತರು, ಪೇಜ್ ಪ್ರಮುಖರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

  • ಬೈಂದೂರು :ಎ.27ಕ್ಕೆ ಕಿರಿಮಂಜೇಶ್ವರದಲ್ಲಿ ಬಿಜೆಪಿ ಯುವ ಸಮಾವೇಶ :ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ತೇಜಸ್ವಿ ಸೂರ್ಯ ದಿಕ್ಸೂಚಿ ಭಾಷಣ

    ಬೈಂದೂರು :ಎ.27ಕ್ಕೆ ಕಿರಿಮಂಜೇಶ್ವರದಲ್ಲಿ ಬಿಜೆಪಿ ಯುವ ಸಮಾವೇಶ :ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ತೇಜಸ್ವಿ ಸೂರ್ಯ ದಿಕ್ಸೂಚಿ ಭಾಷಣ

    ಕುಂದಾಪುರ ಮಿರರ್ ಸುದ್ದಿ…

    ಬೈಂದೂರು: ಬೈಂದೂರು ಮಂಡಲ ಯುವಮೋರ್ಚಾ ಸಮಾವೇಶವು ಏಪ್ರಿಲ್ 27ರ ಮಧ್ಯಾಹ್ನ 2ಕ್ಕೆ ಕಿರಿಮಂಜೇಶ್ವರದಲ್ಲಿ ನಡೆಯಲಿದ್ದು, ಸಾವಿರಾರು ಸಂಖ್ಯೆಯಲ್ಲಿ ಯುವಮೋರ್ಚಾ ಕಾರ್ಯಕರ್ತರು, ಪದಾಧಿಕಾರಿಗಳು ಭಾಗವಹಿಸಲಿದ್ದಾರೆ.

    ಯುವಮೋರ್ಚಾ ಸಮಾವೇಶವನ್ನು ರಾಷ್ಟ್ರೀಯ ಯುವಮೋರ್ಚಾ ಅಧ್ಯಕ್ಷರೂ ಆದ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಅವರು ಉದ್ಘಾಟಿಸಿ, ಮುಖ್ಯ ಭಾಷಣ ಮಾಡಲಿದ್ದಾರೆ.

    ಚುನಾವಣೆಯಲ್ಲಿ ಯುವ ಮೋರ್ಚಾದ ಕಾರ್ಯ, ಯುವ ಜನತೆಯ ಉತ್ಸಾಹ, ದೇಶದಲ್ಲಿ ಕಳೆದ 10 ವರ್ಷದಲ್ಲಿ ಆಗಿರುವ ಅಭಿವೃದ್ಧಿ ಕಾರ್ಯವನ್ನು ವಿವರಿಸಲಿದ್ದಾರೆ.

    ಬೂತ್ ಕಡೆಗೆ ಸಮೃದ್ಧ ನಡಿಗೆ ಸಮಾರೋಪ
    ಯುವ ಮೋರ್ಚಾ ಸಮಾರೋಪ ಮುಗಿದ ನಂತರ ಅದೇ ವೇದಿಕೆಯಲ್ಲಿ ಶಾಸಕರಾದ ಗುರುರಾಜ ಗಂಟಿಹೊಳೆಯವರು ರೂಪಿಸಿ, ಅನುಷ್ಠಾನಗೊಳಿಸಿದ ಯಶಸ್ವಿ ಕಾರ್ಯಕ್ರಮವಾದ ಬೂತ್ ಕಡೆಗೆ ಸಮೃದ್ಧ ನಡೆಗೆ ಸಮಾರೋಪವು ನಡೆಯಲಿದೆ.

    ರಾಜ್ಯ ಬಿಜೆಪಿ ಸಂಘಟನಾ ಪ್ರಧಾನ ಕಾರ್ಯದರ್ಶಿ ರಾಜೇಶ್ ಅವರು ಭಾಗವಹಿಸಿ ಪ್ರಮುಖ ಭಾಷಣ ಮಾಡಲಿದ್ದಾರೆ ಶಾಸಕರಾದ ಗುರುರಾಜ ಗಂಟಿಹೊಳೆಯವರು ಬೂತ್ ಕಡೆಗೆ ಸಮೃದ್ಧ ನಡೆಗೆ ಯ ಅನುಭವವನ್ನು ಹಂಚಿಕೊಳ್ಳಲಿದ್ದಾರೆ. ಜಿಲ್ಲಾ ಹಾಗೂ ಮಂಡಲ ಬಿಜೆಪಿ ಪ್ರಮುಖರು ಪಾಲ್ಗೊಳ್ಳಲಿದ್ದಾರೆ.

  • ಕುಂದಾಪುರ :ಬ್ಯಾಲೆಟ್ ಪೇಪರ್ ನಲ್ಲಿರುವ ಅಭ್ಯರ್ಥಿಗಳ ಹೆಸರುಗಳನ್ನು ನೋಡಿ ಉತ್ತಮ ಅಭ್ಯರ್ಥಿಯನ್ನು ಆಯ್ಕೆ ಮಾಡಿ :ಜಯಪ್ರಕಾಶ್ ಹೆಗಡೆ ಮನವಿ

    ಕುಂದಾಪುರ :ಬ್ಯಾಲೆಟ್ ಪೇಪರ್ ನಲ್ಲಿರುವ ಅಭ್ಯರ್ಥಿಗಳ ಹೆಸರುಗಳನ್ನು ನೋಡಿ ಉತ್ತಮ ಅಭ್ಯರ್ಥಿಯನ್ನು ಆಯ್ಕೆ ಮಾಡಿ :ಜಯಪ್ರಕಾಶ್ ಹೆಗಡೆ ಮನವಿ

    ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗಡೆ ಹಾಗೂ ಕಾರ್ಯಕರ್ತರಿಂದ ಕುಂದಾಪುರದಲ್ಲಿ ರೋಡ್ ಶೋ

    ಉಡುಪಿ ಚಿಕ್ಕಮಗಳೂರು ಲೋಕಸಭಾ ಚುನಾವಣೆಯ ಬಹಿರಂಗ ಮತ ಪ್ರಚಾರ ಅಂತ್ಯ

    ಕುಂದಾಪುರ ಮಿರರ್ ಸುದ್ದಿ…
    ಕುಂದಾಪುರ: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಇವಿಎಂನಲ್ಲಿ ಇರುವ ಅಭ್ಯರ್ಥಿಗಳ ಹೆಸರುಗಳು ಮತ್ತು ಅವರ ಅರ್ಹತೆಗಳನ್ನು ನೋಡಿ ಮತದಾರರು ಉತ್ತಮ ಅಭ್ಯರ್ಥಿಯನ್ನು ಆಯ್ಕೆ ಮಾಡಬೇಕಾಗಿದೆ ಎಂದು ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಕೆ ಜಯಪ್ರಕಾಶ್ ಹೆಗಡೆ ಹೇಳಿದರು

    ಅವರು ಕುಂದಾಪುರದಲ್ಲಿ ಬುದವಾರ ಸಂಜೆ ನಡೆದ ಕಾಂಗ್ರೆಸ್ ಕಾರ್ಯಕರ್ತರ ರೋಡ್ ಶೋ ಹಾಗೂ ಬಹಿರಂಗ ಮತ ಪ್ರಚಾರ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

    ರಾಜ್ಯ ಸಚಿವನಾಗಿ ಶಾಸಕನಾಗಿ ಸಂಸದನಾಗಿ ಸಾಕಷ್ಟು ಅನುದಾನಗಳನ್ನ ನನ್ನ ಕ್ಷೇತ್ರಕ್ಕೆ ತಂದುಕೊಟ್ಟಿರುವ ಹೆಮ್ಮೆ ನನಗಿದೆ ಈ ನಿಟ್ಟಿನಲ್ಲಿ ಮತದಾರರು ನಾನು ನನ್ನ ಅಧಿಕಾರದ ಅವಧಿಯಲ್ಲಿ ಮಾಡಿರುವ ಸಾಧನೆಯನ್ನು ಗಮನಿಸಿ ಈ ಬಾರಿ ಮತ ಚಲಾಯಿಸುತ್ತಾರೆ ಮತ್ತು ನನ್ನನ್ನ ಅತ್ಯಧಿಕ ಅಂತರದಲ್ಲಿ ಗೆಲ್ಲಿಸುತ್ತಾರೆ ಎಂದು ಭರವಸೆ ನೀಡಿದರು.

    ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಸಾಮಾಜಿಕವಾಗಿ ಮತ್ತು ಮಾನಸಿಕವಾಗಿ ನಾವೆಲ್ಲರೂ ಒಂದಾಗಿದ್ದೇವೆ. ತುಳು ಭಾಷೆಗೆ ಸಂಬಂಧಪಟ್ಟಂತೆ ನಿಘಂಟು ರಚನೆಗೆ ನಾನು ಅನುದಾನ ಬಿಡುಗಡೆ ಮಾಡಿಸಿ ಕೊಟ್ಟಿದ್ದೇನೆ. ಅದೇ ರೀತಿ ಕುಂದಾಪುರದ ಕನ್ನಡ ಭಾಷೆಗೆ ವಿಶೇಷ ಪ್ರತಿನಿತ್ಯತೆಗೆ ಸಂಬಂಧಪಟ್ಟಂತೆ ಒಂದು ಕೋಟಿ ರೂಪಾಯಿ ಅನುದಾನವನ್ನ ಬಿಡುಗಡೆ ಮಾಡಿಸಿದ್ದೇನೆ. ಕುಂದಾಪುರದಲ್ಲಿ ಉಪ್ಪು ನೀರು ತಡೆಗೋಡೆಗೆ ಪೂರಕವಾಗಿ ವೆಂಟೆಡ್ ಡ್ಯಾಮ್ ನಿರ್ಮಿಸುವ ಮೂಲಕ ಕೃಷಿಕರಿಗೆ ಮತ್ತು ಕುಡಿಯುವ ನೀರಿನ ಸೌಲಭ್ಯಕ್ಕೆ ಅನುಕೂಲ ಕಲ್ಪಿಸಿ ಕೊಟ್ಟಿದ್ದೇನೆ. ಸಾರ್ವಜನಿಕ ಕ್ಷೇತ್ರದಲ್ಲಿ ಅಧಿಕಾರ ಇದ್ದಾಗಲೂ ಇಲ್ಲದಿದ್ದಾಗಲೂ ಜನಸಾಮಾನ್ಯರ ಸೇವೆ ಮಾಡುತ್ತಾ ಬಂದಿರುವ ನನ್ನನ್ನು ಈ ಬಾರಿ ಪಕ್ಷಾತೀತವಾಗಿ ಅತ್ಯಧಿಕ ಬಹುಮತದಿಂದ ಮತದಾರರು ನನ್ನನ್ನು ಗೆಲ್ಲಿಸುತ್ತಾರೆ ಎಂದು ಹೇಳಿದರು.

    ಇದೇ ಸಂದರ್ಭ ಮಾತನಾಡಿದ ಮಾಜಿ ಶಾಸಕ ಕೆ ಗೋಪಾಲ ಪೂಜಾರಿ, ಸುಳ್ಳುಗಳ ಸರದಾರ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ ಪೂಜಾರಿ ಜನಸಾಮಾನ್ಯರಿಗೆ ಯಾವುದೇ ರೀತಿಯ ಸ್ಪಂದನೆ ನೀಡದ ಶ್ರೀನಿವಾಸ ಪೂಜಾರಿಯವರನ್ನು ಈ ಬಾರಿ ಜನ ತಿರಸ್ಕರಿಸುತ್ತಾರೆ ಎಂದರು.

    ಮಾಜಿ ಶಾಸಕ ಬಿ ಎಂ ಸುಕುಮಾರ ಶೆಟ್ಟಿ ಮಾತನಾಡಿ, ತನ್ನ ಅಧಿಕಾರದ ಆಸೆಗಾಗಿ ಬೇರೆ ನಾಯಕರನ್ನು ಬಲಿಕೊಟ್ಟು ತನ್ನ ಬೇಳೆ ಬೇಯಿಸಿಕೊಳ್ಳುತ್ತಿರುವ ಶ್ರೀನಿವಾಸ ಪೂಜಾರಿಗೆ ಈ ಬಾರಿಯ ಚುನಾವಣೆಯಲ್ಲಿ ಜನ ತಕ್ಕ ಪಾಠ ಕಲಿಸುತ್ತಾರೆ ಎಂದರು.

    ಸಭಾ ಕಾರ್ಯಕ್ರಮಕ್ಕೆ ಮುನ್ನ ಕಾಂಗ್ರೆಸ್ನ ಕಾರ್ಯಕರ್ತರ ಮೆರವಣಿಗೆಯೊಂದಿಗೆ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗಡೆ ಕಾಂಗ್ರೆಸ್ನ ಮುಖಂಡರಾದ ದಿನೇಶ್ ಹೆಗ್ಡೆ ಮೊಳಹಳ್ಳಿ ಕುಂದಾಪುರ ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷರಾದ ಶಿವರಾಮಶೆಟ್ಟಿ ಮಲ್ಯಾಡಿ, ಹಾಲಿ ಅಧ್ಯಕ್ಷ ಹರಿಪ್ರಸಾದ್ ಶೆಟ್ಟಿ ಕಾನ್ಮಕ್ಕಿ, ಹಿರಿಯ ಕೆಪಿಸಿಸಿ ಸದಸ್ಯ ಎಂ.ಎ.ಗಪೂರ್ ಸುರೇಂದ್ರ ಶೆಟ್ಟಿ ಸಹನಾ, ಕೋರ್ಟ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶಂಕರ್ ಕುಂದರ್, ಚುನಾವಣಾ ಉಸ್ತುವಾರಿ ಜಿಎ ಭಾವ ಮೊದಲಾದವರು ಭಾಗವಹಿಸಿದ್ದರು.

    ಕುಂದಾಪುರದ ಶಾಸ್ತ್ರಿ ವೃತ್ತದಿಂದ ಆರಂಭವಾದ ರೋಡ್ ಶೋ ಪಾರಿಜಾತ ವೃತ ಹಳೆ ಬಸ್ ನಿಲ್ದಾಣ ಮೂಲಕ ಸಾಗಿ ಹೊಸ ಬಸ್ ನಿಲ್ದಾಣದಲ್ಲಿ ತಿರುಗಿ ಮತ್ತೆ ಪುನಃ ಶಾಸ್ತ್ರಿ ವೃತ್ತದಲ್ಲಿ ಸಮಾಪನಗೊಂಡಿತು.