ಯುವ ಕೃಷಿಕ ಮಣೂರು ಪಡುಕರೆ ನಾಗೇಶ್ ಮಯ್ಯ ಇವರಿಗೆ ಪಂಚವರ್ಣ ರೈತರೆಡೆಗೆ ಗೌರವ

ಕುಂದಾಪುರ ಮಿರರ್ ಸುದ್ದಿ…

ಕೋಟ: ಪಂಚವರ್ಣ ಯುವಕ ಮಂಡಲ ಕೋಟ ಇದರ ಅಧೀನ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲ ನೇತ್ರತ್ವದಲ್ಲಿ ಗೀತಾನಂದ ಫೌಂಡೇಶನ್ ಮಣೂರು, ರೈತ ಧ್ವನಿ ಸಂಘ ಕೋಟ, ಗೆಳೆಯರ ಬಳಗ ಕಾರ್ಕಡ, ರೋಟರಿ ಕ್ಲಬ್ ಕೋಟ ಸಾಲಿಗ್ರಾಮ, ವಿಪ್ರ ಮಹಿಳಾ ಬಳಗ ಸಾಲಿಗ್ರಾಮ ಇವರುಗಳ ಸಂಯುಕ್ತ ಸಹಯೋಗದೊಂದಿಗೆ ಪ್ರತಿ ತಿಂಗಳ ಸರಣಿ ಕಾರ್ಯಕ್ರಮ ರೈತರೆಡೆಗೆ ನಮ್ಮ ನಡಿಗೆ 22ನೇ ಮಾಲಿಕೆ ಫೆ.11ರ ಸಂಜೆ 4ಗಂಟೆಗೆ ನಡೆಯಲಿದೆ. ಈ ಬಾರಿಯ ಕಾರ್ಯಕ್ರಮದಲ್ಲಿ ಕೃಷಿ ಕ್ಷೇತ್ರದಲ್ಲಿ ಯುವ ಕೃಷಿಕರಾಗಿ, ಹೈನುಗಾರಿಗೆ ,ಬ್ಯಾಂಕಿಂಗ್ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿ ಸಾಧನೆಗಯುತ್ತಿರುವ ಮಣೂರು ಪಡುಕರೆಯ ನಾಗೇಶ್ ಮಯ್ಯ ಇವರನ್ನು ಗೌರವಿಸಲಾಗುವುದು ಎಂದು ಪಂಚವರ್ಣ ಯುವಕ ಮಂಡಲದ ಅಧ್ಯಕ್ಷ ಅಜಿತ್ ಆಚಾರ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Comments

Leave a Reply

Your email address will not be published. Required fields are marked *

More posts