ಶ್ರೀ ವೀರೇಶ್ವರ ಸೇವಾ ಟ್ರಸ್ಟ್‌ನ ನೂತನ ಕಛೇರಿ ಉದ್ಘಾಟನೆ ಹಾಗೂ ಶವ ಸಂಸ್ಕರಿಸಿ ಇಡುವ ಫ್ರೀಜರ್ ಲೋಕಾರ್ಪಣೆ

ಕುಂದಾಪುರ ಮಿರರ್ ಸುದ್ದಿ…

ಗಂಗೊಳ್ಳಿ : ಗಂಗೊಳ್ಳಿಯ ಶ್ರೀ ವೀರೇಶ್ವರ ಸೇವಾ ಟ್ರಸ್ಟ್‌ನ ನೂತನ ಕಛೇರಿ ಉದ್ಘಾಟನೆ ಹಾಗೂ ಶವ ಸಂಸ್ಕರಿಸಿ ಇಡುವ ಫ್ರೀಜರ್ ಲೋಕಾರ್ಪಣೆ ಕಾರ್ಯಕ್ರಮ ಗಂಗೊಳ್ಳಿಯ ಬಂದರು ಬಸ್ ನಿಲ್ದಾಣದ ಸಮೀಪದ ಕಟ್ಟಡದಲ್ಲಿ ಶುಕ್ರವಾರ ನಡೆಯಿತು.

ಗಂಗೊಳ್ಳಿಯ ಶ್ರೀ ವೀರೇಶ್ವರ ದೇವಸ್ಥಾನದ ಅರ್ಚಕ ಜಿ.ರವೀಶ್ ಭಟ್ ಅವರು ಧಾರ್ಮಿಕ ಕಾರ್ಯಕ್ರಮಗಳನ್ನು ನೆರವೇರಿಸಿ ಶ್ರೀ ವೀರೇಶ್ವರ ಸೇವಾ ಟ್ರಸ್ಟ್‌ನ ನೂತನ ಕಛೇರಿಯನ್ನು ಉದ್ಘಾಟಿಸಿದರು.

ಇದೇ ಸಂದರ್ಭದಲ್ಲಿ ಶವ ಸಂಸ್ಕರಿಸಿ ಇಡುವ ಫ್ರೀಜರ್‍ನ್ನು ಲೋಕಾರ್ಪಣೆ ಮಾಡಲಾಯಿತು. ಹಿಂಜಾವೇ ಮುಖಂಡ ವಾಸುದೇವ ಗಂಗೊಳ್ಳಿ, ಯಶವಂತ ಗಂಗೊಳ್ಳಿ, ನವೀನ್ ಗಂಗೊಳ್ಳಿ, ಟ್ರಸ್ಟ್ ಅಧ್ಯಕ್ಷ ಅಕ್ಷಯ್, ಕಾರ್ತಿಕ್, ಪ್ರೀತೇಶ್, ಮೋಹನ್, ಮಹೇಶ್ ದಾಕಹಿತ್ಲು ಮೊದಲಾದವರು ಉಪಸ್ಥಿತರಿದ್ದರು.

Comments

Leave a Reply

Your email address will not be published. Required fields are marked *

More posts