ಕೊಂಡಳ್ಳಿಯಲ್ಲಿ ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕ ಹಾಗೂ ಲೇಖನ ಸಾಮಗ್ರಿ ವಿತರಣೆ

ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ :ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೊಂಡಳ್ಳಿ ಇಲ್ಲಿನ ಶಾಲಾ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರು ಹಾಗೂ ಗ್ರಾಮ ಪಂಚಾಯತ್ ಸದಸ್ಯರಾದ ಶಂಕರನಾರಾಯಣ ಭಟ್ ಕೊಂಡಳ್ಳಿಯವರು ಅಂಗನವಾಡಿ ಹಾಗೂ ಶಾಲಾ ವಿದ್ಯಾರ್ಥಿಗಳಿಗೆ ನೀಡಿದ ಉಚಿತ ನೋಟ್ ಪುಸ್ತಕ ಹಾಗೂ ಲೇಖನ ಸಾಮಗ್ರಿ ವಿತರಣ ಸಮಾರಂಭವು ಎಸ್ ಡಿ ಎಂ ಸಿ ಅಧ್ಯಕ್ಷ ಭಾಸ್ಕರ ನಾಯ್ಕ ಅಧ್ಯಕ್ಷತೆಯಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಶಾಲಾ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರು ಹಾಗೂ ಗ್ರಾಮ ಪಂಚಾಯತ್ ಸದಸ್ಯರಾದ ಶಂಕರನಾರಾಯಣ ಭಟ್ ಕೊಂಡಳ್ಳಿ ಇವರು ಗೌರವ ಶಿಕ್ಷಕಿಗೆ ನೀಡುವ ಒಂದು ತಿಂಗಳ ವೇತನದ ಮೊತ್ತವನ್ನು ಮುಖ್ಯ ಶಿಕ್ಷಕರಿಗೆ ಹಸ್ತಾಂತರಿಸಿ, ಸರಕಾರಿ ಶಾಲೆಗಳಲ್ಲಿ ಎಲ್ಲ ಸೌಲಭ್ಯಗಳು ದೊರೆಯುತ್ತಿದ್ದರೂ ಮಕ್ಕಳ ಸಂಖ್ಯೆ ಕ್ಷೀಣವಾಗುತ್ತಿರುವ ಕುರಿತು ಕಳವಳ ವ್ಯಕ್ತಪಡಿಸಿದರು. ಅಂಗನವಾಡಿ ಕಾರ್ಯಕರ್ತೆ ವಿನೋದಾ ಶೆಟ್ಟಿ ಉಪಸ್ಥಿತರಿದ್ದರು.

ಮುಖ್ಯ ಶಿಕ್ಷಕ ರಾಮ ಮೊಗವೀರ ಪ್ರಸ್ಥಾವನೆಗೈದರು. ಸಹಶಿಕ್ಷಕಿ ಸುಜಾತ ಎಚ್ ಸ್ವಾಗತಿಸಿ, ಶೈಲಜ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಅತಿಥಿ ಶಿಕ್ಷಕಿ ಜಯಶ್ರೀ ವಂದಿಸಿದರು. ಶಾಲಾ ಎಸ್ ಡಿ ಎಮ್ ಸಿ ಸದಸ್ಯರು, ಪೋಷಕರು ಮತ್ತು ಹಳೆ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Comments

Leave a Reply

Your email address will not be published. Required fields are marked *

More posts