ಎಕ್ಸಲೆಂಟ್ ಪಿ.ಯು.ಕಾಲೇಜಿನಲ್ಲಿ ಯೋಗ ಸ್ಪರ್ಧೆ ಉದ್ಘಾಟನೆ

0
213

ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ: ಕರ್ನಾಟಕ ಸರ್ಕಾರ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಕುಂದಾಪುರ ಹಾಗೂ ಎಕ್ಸಲೆಂಟ್ ಪಿ.ಯು ಕಾಲೇಜು ಮತ್ತು ಹೈಸ್ಕೂಲ್ ಸುಣ್ಣಾರಿ ಕುಂದಾಪುರ ಇವರ ಸಹಯೋಗದಲ್ಲಿ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗದ ಬಾಲಕ ಬಾಲಕಿಯರ ವಲಯ ಮಟ್ಟದ ಯೋಗಾಸನ ಸ್ಪರ್ಧೆಯು ಎಕ್ಸಲೆಂಟ್ ಸಂಸ್ಥೆಯಲ್ಲಿ ಅಗಸ್ಟ್ 7ರ ಬುಧವಾರ ನಡೆಯಿತು.

ಕುಂದಾಪುರದ ಚಿನ್ಮಯಿ ಆಸ್ಪತ್ರೆಯ ಆಡಳಿತ ನಿರ್ದೇಶಕರು ಹಾಗೂ ಚರ್ಮರೋಗ ತಜÐರಾದ ಡಾ. ಉಮೇಶ್ ಪುತ್ರನ್ ಕಾರ್ಯಕ್ರಮವನ್ನು ಉದ್ಘಾಟಿಸಿ, “ಮಕ್ಕಳ ದೈಹಿಕ, ಮಾನಸಿಕ ಹಾಗೂ ಆಧ್ಯಾತ್ಮಿಕವಾಗಿ ಬೆಳೆವಣಿಗೆಗೆ ಯೋಗವು ಪ್ರಮುಖ ಪಾತ್ರ ವಹಿಸುತ್ತದೆ, ಜತೆಗೆ ಭಾವನಾತ್ಮಕ, ಸಾಮಾಜಿಕ ಹಾಗೂ ಆಧ್ಯಾತ್ಮಿಕ ಅಂಶಗಳನ್ನು ಒಳಗೊಂಡ ಯೋಗ ಅಧ್ಯಯನದಿಂದ ಯಶಸ್ವಿ ನಾಗರಿಕನಾಗಲು ಸಾಧ್ಯವಿದೆ.’ ಎಂದರು.

ಕುಂದಾಪುರದ ಎಂ.ಎಂ. ಹೆಗ್ಡೆ ಎಜುಕೇಶನಲ್ & ಚಾರಿಟೇಬಲ್ ಟ್ರಸ್ಟ್ (ರಿ.) ಇದರ ಅಧ್ಯಕ್ಷ ಎಂ.ಮಹೇಶ್ ಹೆಗ್ಡೆ ಅಧ್ಯಕ್ಷತೆ ವಹಿಸಿದ್ದರು. ಹೊಂಬಾಡಿ-ಮಂಡಾಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಜಯಂತಿ ಶೆಟ್ಟಿ, ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಸತ್ಯನಾರಾಯಣ, ಹುಣ್ಸೆಮಕ್ಕಿ ಕ್ಲಸ್ಟರ್‍ನ ಸಂಪನ್ಮೂಲ ವ್ಯಕ್ತಿ ವಸಂತ, ಕುಂದಾಪುರ ತಾಲೂಕು ಪ್ರಾಥಮಿಕ ಮತ್ತು ಪ್ರೌಢಶಾಲಾ ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ಬಾಲಕೃಷ್ಣ ಶೆಟ್ಟಿ, ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಉಡುಪಿ ವಲಯ ಅಧ್ಯಕ್ಷ ಗಣೇಶ್ ಶೆಟ್ಟಿ, ಕರ್ನಾಟಕ ರಾಜ್ಯ ಪ್ರಾಥಮಿಕ ಮತ್ತು ಪ್ರೌಢಶಾಲಾ ದೈಹಿಕ ಶಿಕ್ಷಕರ ಸಂಘ ಉಡುಪಿ ಜಿಲ್ಲಾಧ್ಯಕ್ಷ ಶರತ್ ಕುಮಾರ್ ಶೆಟ್ಟಿ, ಪ್ರೌಢಶಾಲಾ ಅನುದಾನಿತ ಶಾಲಾ ಶಿಕ್ಷಕರ ಸಂಘ ಕುಂದಾಪುರ ವಲಯದ ಅಧ್ಯಕ್ಷ ಶರತ್ ಕುಮಾರ್ ಶೆಟ್ಟಿ, ಯೋಗ ಶಿಕ್ಷಕರಾದ ಕಿರಣ್ ಕುಮಾರ್ ಹೊಂಬಾಡಿ-ಮಂಡಾಡಿ , ಸ.ಹಿ.ಪ್ರಾ. ಶಾಲೆ ಹೆಸ್ಕೂತ್ತೂರು ಇಲ್ಲಿನ ಶಿಕ್ಷಕ ಸಂಜೀವ ಮತ್ತಿತರರು ಉಪಸ್ಥಿತರಿದ್ದರು.

ಮುಖ್ಯೋಪಾಧ್ಯಾಯಿನಿ ಸರೋಜಿನಿ ಆಚಾರ್ಯ ಸ್ವಾಗತಿಸಿ, ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಸತ್ಯನಾರಾಯಣ ಪ್ರಸ್ತಾವನೆಗೈದು, ಶಿಕ್ಷಕ ಸಂದೀಪ್ ನಿರೂಪಿಸಿ, ದೈಹಿಕ ಶಿಕ್ಷಣ ಶಿಕ್ಷಕ ನಾರಾಯಣ ಶೆಟ್ಟಿ ವಂದಿಸಿದರು.

Click Here

LEAVE A REPLY

Please enter your comment!
Please enter your name here