ಜಿಲ್ಲಾ ಮಟ್ಟದ ಟೆನ್ನಿಸ್ ವಾಲಿಬಾಲ್ ನಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ಬಾಲಕ – ಬಾಲಕಿಯರ ತಂಡಕ್ಕೆ ದ್ವಿತೀಯ ಸ್ಥಾನ

0
584

ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ :ಅ. 01ರಂದು ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ ವಿಭಾಗ)ಮತ್ತು ನೇಶನಲ್ ಪದವಿ ಪೂರ್ವ ಕಾಲೇಜು ಬಾರಕೂರು ಇವರ ಜಂಟಿ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ಟೆನ್ನಿಸ್ ವಾಲಿಬಾಲ್ ಪಂದ್ಯಾಟದಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ಬಾಲಕ ಹಾಗೂ ಬಾಲಕಿಯರ ತಂಡ ದ್ವಿತೀಯ ಸ್ಥಾನ ಪಡೆದುಕೊಂಡು ಅನುಪಮ ಸಾಧನೆ ಮೆರೆದಿದೆ.

ವಿದ್ಯಾರ್ಥಿಗಳೊಂದಿಗೆ ಕಾಲೇಜಿನ ಪ್ರಾಂಶುಪಾಲರಾದ ಸಂದೀಪ್ ಗಾಣಿಗ, ಉಪಪ್ರಾಂಶುಪಾಲರಾದ ಸುಜಯ್ ಕೋಟೆಗಾರ್ , ವಿದ್ಯಾರ್ಥಿಗಳನ್ನು ತರಬೇತಿಗೊಳಿಸಿದ ಕಾಲೇಜಿನ ದೈಹಿಕ ಶಿಕ್ಷಣ ಉಪನ್ಯಾಸಕರ ರಾಘವೇಂದ್ರ ಗಾಣಿಗ ಉಪಸ್ಥಿತರಿದ್ದಾರೆ.

ವಿದ್ಯಾರ್ಥಿಗಳ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಬೋಧಕ – ಬೋಧಕೇತರ ಸಿಬ್ಬಂದಿ ಅಭಿನಂದನೆ ಸಲ್ಲಿಸಿದ್ದಾರೆ.

Click Here

LEAVE A REPLY

Please enter your comment!
Please enter your name here