ಕುಂದಾಪುರ :ಥ್ರೋಬಾಲ್ ಸ್ಪರ್ಧೆ; ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯ ಐವರು ವಿದ್ಯಾರ್ಥಿನಿಯರು ಜಿಲ್ಲಾ ಮಟ್ಟಕ್ಕೆ ಆಯ್ಕೆ

0
917

ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ: ಸಾರ್ವಜನಿಕ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಕುಂದಾಪುರ ತಾಲೂಕು ಮತ್ತು ಸ್ಟಲ್ಲಾ ಮೇರಿಸ್ ಆಂಗ್ಲ ಮಾಧ್ಯಮ ಶಾಲೆ ಗಂಗೊಳ್ಳಿ ಇವರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿರುವ ಕುಂದಾಪುರ ತಾಲೂಕು ಮಟ್ಟದ 14ರ ವಯೋಮಾನದ ಬಾಲಕ – ಬಾಲಕಿಯರ ಥ್ರೋಬಾಲ್ ಸ್ಪರ್ಧೆಯಲ್ಲಿ ಯಡಾಡಿ ಮತ್ಯಾಡಿಯಲ್ಲಿರುವ ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯ ಬಾಲಕಿಯರ ತಂಡವು ದ್ವಿತೀಯ ಸ್ಥಾನ ಪಡೆದುಕೊಂಡಿತು.

ತಂಡದ ಐವರು ವಿದ್ಯಾರ್ಥಿನಿಯರಾದ ತನಿಷ್ಕಾ ಶೆಟ್ಟಿ, ಸಾನಿಕಾ ಶೆಟ್ಟಿ, ಅದ್ವಿಕಾ ಎ.ಶೆಟ್ಟಿ, ಪ್ರೇಕ್ಷಾ ಆಚಾರ್ಯ ಮತ್ತು ಸಾನ್ವಿ ಪಿ.ಶೆಟ್ಟಿ ಉಡುಪಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಸಮಾರೋಪ ಸಮಾರಂಭದಲ್ಲಿ ವಿಜೇತರಿಗೆ ಫಲಕ ಪದಕ ಮತ್ತು ಪ್ರಶಸ್ತಿ ಪತ್ರಗಳನ್ನು ನೀಡಿ ಪ್ರೋತ್ಸಾಹಿಸಲಾಯಿತು.

ಸುಜ್ಞಾನ ಎಜುಕೇಶನಲ್ ಟ್ರಸ್ಟ್ ಅಧ್ಯಕ್ಷರಾದ ಡಾ. ರಮೇಶ್ ಶೆಟ್ಟಿ, ಕಾರ್ಯದರ್ಶಿಗಳಾದ ಪ್ರತಾಪ್ ಚಂದ್ರ ಶೆಟ್ಟಿ, ಖಜಾಂಚಿ ಭರತ್ ಶೆಟ್ಟಿ ಹಾಗೂ ಪ್ರಾಂಶುಪಾಲರಾದ ಪ್ರದೀಪ್. ಕೆ ವಿಜೇತ ವಿದ್ಯಾರ್ಥಿನಿಯರನ್ನು ಅಭಿನಂದಿಸಿದ್ದಾರೆ. ಸಂಸ್ಥೆಯ ದೈಹಿಕ ಶಿಕ್ಷಣ ಶಿಕ್ಷಕ ಸೂರ್ಯ ಕ್ರೀಡಾಪಟುಗಳಿಗೆ ತರಬೇತಿಯನ್ನು ನೀಡಿದ್ದರು. ಸಂಸ್ಥೆ ವಸತಿ ನಿಲಯದ ಪಾಲಕಿ ಕುಮಾರಿ ಇಂಚರ ತಂಡ ವ್ಯವಸ್ಥಾಪಕರಾಗಿ ಕಾರ್ಯನಿರ್ವಹಿಸಿದ್ದರು.

Click Here

LEAVE A REPLY

Please enter your comment!
Please enter your name here