ಯೋಗಾಸನ ಸ್ಪರ್ಧೆ: ವಿದ್ಯಾರಣ್ಯ ವಿದ್ಯಾರ್ಥಿನಿ ರಾಜ್ಯಮಟ್ಟಕ್ಕೆ ಆಯ್ಕೆ

0
334

ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ :ಸಾರ್ವಜನಿಕ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಡುಪಿ ಮತ್ತು ರಾಜೇಶ್ವರಿ ನ್ಯಾಷನಲ್ ಸ್ಕೂಲ್ ಸಾಣೂರು, ಕಾರ್ಕಳ ಇವರ ಸಂಯುಕ್ತ ಆಶ್ರಯದಲ್ಲಿ ಶುಕ್ರವಾರ ನಡೆದ ಮೈಸೂರು ವಿಭಾಗ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯ 9ನೇ ತರಗತಿ ವಿದ್ಯಾರ್ಥಿನಿ ಲಾಸ್ಯ ಮಧ್ಯಸ್ಥ ಪ್ರಥಮ ಸ್ಥಾನ ಗಳಿಸಿ, ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾಳೆ.

17ರ ವಯೋಮಾನದ ಬಾಲಕಿಯರ ವಿಭಾಗದ ಸಾಂಪ್ರದಾಯಿಕ (ಟ್ರಡೀಷನಲ್ ) ಯೋಗಾಸನ ಸ್ಪರ್ಧೆಯಲ್ಲಿ ವಿಜೇತಳಾಗಿರುವ ವಿದ್ಯಾರ್ಥಿನಿಯು ಅರುಣ ಮಧ್ಯಸ್ಥ ಮತ್ತು ಲತಾ ಮಧ್ಯಸ್ಥ ದಂಪತಿಯ ಪುತ್ರಿ.

ಸುಜ್ಞಾನ ಎಜುಕೇಶನಲ್ ಟ್ರಸ್ಟ್ ಅಧ್ಯಕ್ಷರಾದ ಡಾ. ರಮೇಶ್ ಶೆಟ್ಟಿ, ಕಾರ್ಯದರ್ಶಿ ಪ್ರತಾಪ್ ಚಂದ್ರ ಶೆಟ್ಟಿ, ಖಜಾಂಚಿ ಭರತ್ ಶೆಟ್ಟಿ, ಸಂಸ್ಥೆಯ ಮುಖ್ಯೋಪಾಧ್ಯಾಯರಾದ ಪ್ರದೀಪ್. ಕೆ ವಿಜೇತ ವಿದ್ಯಾರ್ಥಿನಿಯನ್ನು ಅಭಿನಂದಿಸಿದ್ದಾರೆ. ಸಂಸ್ಥೆಯ ದೈಹಿಕ ಶಿಕ್ಷಣ ಶಿಕ್ಷಕ ಸತೀಶ್ ಕುಮಾರ್ ವಿದ್ಯಾರ್ಥಿನಿಗೆ ಮಾರ್ಗದರ್ಶನ ನೀಡಿದ್ದರು. ಸುಜ್ಞಾನ ಪದವಿ ಪೂರ್ವ ಕಾಲೇಜು ಮತ್ತು ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯ ಬೋಧಕ ಬೋಧಕೇತರ ವರ್ಗದವರು ಸಂತಸ ವ್ಯಕ್ತಪಡಿಸಿದ್ದಾರೆ.

Click Here

LEAVE A REPLY

Please enter your comment!
Please enter your name here