ಕೋಟ :49ನೇ ರೈತ ಸಾಧಕ ಪುರಸ್ಕಾರಕ್ಕೆ ಪಾರಂಪಳ್ಳಿ ಪಡುಕರೆ ಸುರೇಶ್ ಉಪಾಧ್ಯಾ ಆಯ್ಕೆ

0
1011

ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ: ಪಂಚವರ್ಣ ಯುವಕ ಮಂಡಲ ಕೋಟ ಇದರ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲ ನೇತೃತ್ವದಲ್ಲಿ ಗೀತಾನಂದ ಫೌಂಡೇಶನ್ ಮಣೂರು, ರೈತ ಧ್ವನಿ ಸಂಘ ಕೋಟ, ಗೆಳೆಯರ ಬಳಗ ಕಾರ್ಕಡ, ರೋಟರಿ ಕ್ಲಬ್ ಕೋಟ ಸಾಲಿಗ್ರಾಮ, ಸ್ನೇಹಕೂಟ ಮಣೂರು ಇವರುಗಳ ಸಂಯುಕ್ತ ಸಹಯೋಗದೊಂದಿಗೆ ಪ್ರತಿ ತಿಂಗಳು ಸಾಧಕ ಕೃಷಿಕನನ್ನು ಗುರುತಿಸುವ ಸರಣಿ ಕಾರ್ಯಕ್ರಮ ರೈತರೆಡೆಗೆ ನಮ್ಮ ನಡಿಗೆ ಮಾಲಿಕೆಗೆ ಇದೀಗ 49ರ ಸರಣಿಯ ಕಾರ್ಯಕ್ರಮದ ಅಂಗವಾಗಿ ಸಾಧಕ ಕೃಷಿಕರ ಮನೆಯಂಗಳಕ್ಕೆ ತೆರಳಿ ಕೃಷಿ ಪರಿಕರವನ್ನು ನೀಡಿ ಗೌರವಿಸುವ ಕಾರ್ಯ ಇದೇ ಅ.17ರ ಶುಕ್ರವಾರ ಪೂರ್ವಾಹ್ನ 10.30ಕ್ಕೆ ನಡೆಯಲಿದೆ.

ಕೃಷಿ ಮತ್ತು ಹೈನುಗಾರಿಕೆ ಕ್ಷೇತ್ರದ ಹಿರಿಯ ಸಾಧಕ ಪಾರಂಪಳ್ಳಿ ಪಡುಕರೆ ಸುರೇಶ್ ಉಪಾಧ್ಯಾ ಅವರನ್ನು ಗೌರವಿಸುವ ಕಾರ್ಯಕ್ರಮ ಜರಗಲಿದೆ ಎಂದು ಸಂಘದ ಅಧ್ಯಕ್ಷ ಮನೋಹರ್ ಪೂಜಾರಿ, ಸ್ಥಾಪಕಾಧ್ಯಕ್ಷ ಸುರೇಶ್ ಗಾಣಿಗ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Click Here

LEAVE A REPLY

Please enter your comment!
Please enter your name here