ಕೋಟ :ಪಂಚವರ್ಣ ಸಂಘಟನೆಯ 289ನೇ ವಾರದ ಅಭಿಯಾನ |ಸ್ವಚ್ಛತೆಯೇ ಪ್ರತಿಯೊಬ್ಬರ ಧ್ಯೇಯವಾಗಲಿ – ಸುಲತಾ ಎಸ್ ಹೆಗ್ಡೆ

ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ: ಸ್ವಚ್ಛತೆಯ ಬಗ್ಗೆ ನಿರ್ಲಕ್ಷ್ಯ ಸಲ್ಲ ಬದಲಾಗಿ ಅದರ ಬಗ್ಗೆ ಈಗಲೇ ಜಾಗೃತರಾಗುವುದು ಒಳಿತು ಎಂದು ಸಾಲಿಗ್ರಾಮ ಪಟ್ಟಣಪಂಚಾಯತ್ ಮಾಜಿ ಅಧ್ಯಕ್ಷೆ ಸುಲತಾ ಎಸ್ ಹೆಗ್ಡೆ ಹೇಳಿದರು.

ಕೋಟದ ಪಂಚವರ್ಣ ಯುವಕ ಮಂಡಲ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲ ಕೋಟ ಇದರ ನೇತೃತ್ವದಲ್ಲಿ, ವಿವಿಧ ಸ್ಥಳೀಯ ಸಂಘಸಂಸ್ಥೆಗಳ ಸಹಭಾಗಿತ್ವದಲ್ಲಿ 289ನೇ ಭಾನುವಾರದ ಪರಿಸರಸ್ನೇಹಿ ಅಭಿಯಾನ ಸಾಸ್ತಾನದ ಚೆಲ್ಲೆಮಕ್ಕಿ ನಾಗದೇವಸ್ಥಾನ ಇಲ್ಲಿ ಹಮ್ಮಿಕೊಂಡ ಸ್ವಚ್ಛತಾ ಕಾರ್ಯಕ್ಕೆ ಚಾಲನೆ ನೀಡಿ ಮಾತನಾಡಿ, ಪರಿಸರ ಮಲಿನಗೊಳ್ಳುತ್ತಿರುವುದರಿಂದ ಪ್ರಕೃತಿಯ ಮೇಲೆ ವ್ಯತಿರಿಕ್ತ ಪರಿಣಾಮ ಎದುರಿಸುತ್ತಿದ್ದೇವೆ. ಈ ದಿಸೆಯಲ್ಲಿ ನಮ್ಮ ಸುತ್ತಮುತ್ತಲಿನ ಪರಿಸರವನ್ನು ಶುಚಿಯಾಗಿರಿಸಿಕೊಳ್ಳೋಣ ಪಂಚವರ್ಣ ಪರಿಸರ ಕಾಳಜಿ ಇಡೀ ವ್ಯವಸ್ಥೆಗೆ ಮಾದರಿಯಾಗಿದೆ ಎಂದರು.

ಈ ಸಂದರ್ಭದಲ್ಲಿ ದೇಗುಲದ ವತಿಯಿಂದ ಪ್ರಮುಖರಾದ ನಿವೃತ್ತ ಮುಖ್ಯ ಶಿಕ್ಷಕ ಗಣೇಶ್ ಚೆಲ್ಲೆಮಕ್ಕಿ ಸ್ವಚ್ಛತಾ ತಂಡದ ಸಂದೇಶ್ ಆಚಾರ್ ಸೇರಿದಂತೆ ಪ್ರಮುಖರನ್ನು ಗೌರವಿಸಿದರು.
ಪಾಂಡೇಶ್ವರ ಪಂಚಾಯತ್ ಮಾಜಿ ಅಧ್ಯಕ್ಷೆ ಲೀಲಾವತಿ ಗಂಗಾಧರ್, ದೇಗುಲದ ಪ್ರಮುಖರಾದ ರಾಘವೇಂದ್ರ, ದೇಗುಲದ ಅರ್ಚಕರು ,ಪಂಚವರ್ಣ ಸಂಘಟನೆ ಪ್ರಮುಖರು ಮತ್ತಿತರರು ಉಪಸ್ಥಿತರಿದ್ದರು.

Comments

Leave a Reply

Your email address will not be published. Required fields are marked *

More posts