ಕೆ ಪಿ ಎಸ್ ಕೋಟೇಶ್ವರದ ವಿದ್ಯಾರ್ಥಿನಿ ಮಹಾಲಕ್ಷ್ಮಿ ದೆಹಲಿ ಸಂಸತ್ ಭವನಕ್ಕೆ

ಕುಂದಾಪುರ ಮಿರರ್ ಸುದ್ದಿ…

ಕೋಟೇಶ್ವರ: ಕರ್ನಾಟಕ ಪಬ್ಲಿಕ್ ಸ್ಕೂಲ್, ಪ್ರೌಢಶಾಲಾ ವಿಭಾಗ, ಕೋಟೇಶ್ವರ ಇಲ್ಲಿನ ಪ್ರತಿಭಾವಂತ ವಿದ್ಯಾರ್ಥಿನಿ ಮಹಾಲಕ್ಷ್ಮಿ ಸಿ.ಜೆ. ಇವರು ದೆಹಲಿಯ ಮಹತ್ವದ ಸಂಸತ್ ಭವನದಲ್ಲಿ ನಡೆಯಲಿರುವ ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಯ್ಕೆಯಾಗಿರುವುದು ಶಾಲೆಗೆ ಹಾಗೂ ರಾಜ್ಯಕ್ಕೆ ಹೆಮ್ಮೆಯ ವಿಷಯವಾಗಿದೆ.
ದೇಶದ ವಿವಿಧ ಭಾಗಗಳಿಂದ ಆಯ್ಕೆಯಾದ ಕೇವಲ 11 ವಿದ್ಯಾರ್ಥಿಗಳಲ್ಲಿ, ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸುವ ಏಕೈಕ ವಿದ್ಯಾರ್ಥಿನಿಯಾಗಿ ಮಹಾಲಕ್ಷ್ಮಿ ಆಯ್ಕೆಯಾಗಿರುವುದು ವಿಶೇಷ ಸಾಧನೆಯಾಗಿದೆ. ಇವಳು ಪೂರ್ಣಿಮಾ ಪಿ ರಾವ್ ಮತ್ತು ಎಸ್ ಜಿ ಪ್ರಸಾದ್ ರಾವ್ ಇವರ ಸುಪುತ್ರಿಗಿದ್ದು ದಿನಾಂಕ 13.04.2025 ರಂದು ವಿಮಾನದ ಮೂಲಕ ದೆಹಲಿಗೆ ಪ್ರಯಾಣಿಸಲಿದ್ದಾರೆ.
ಇವರ ಈ ಸಾಧನೆಗೆ ಶಾಲೆಯ ಉಪ ಪ್ರಾಂಶುಪಾಲರು, ಎಸ್ ಡಿ ಎಂ ಸಿ., ಶಿಕ್ಷಕ ವೃಂದ, ಪೋಷಕರು ಹಾಗೂ ಸಹಪಾಠಿಗಳು ಹರ್ಷ ವ್ಯಕ್ತಪಡಿಸಿ, ಮುಂದಿನ ದಿನಗಳಲ್ಲಿ ಇನ್ನಷ್ಟು ಉನ್ನತ ಸಾಧನೆಗಳನ್ನು ಸಾಧಿಸಲಿ ಎಂದು ಹಾರೈಸಿದ್ದಾರೆ. ಸಮಾಜ ಸೇವಕ ಡಾ. ಬಿ.ಆರ್. ಅಂಬೇಡ್ಕರ್ ಅವರ ಆದರ್ಶಗಳನ್ನು ಅಳವಡಿಸಿಕೊಂಡು, ದೇಶದ ಅಭಿವೃದ್ಧಿಗೆ ಕೊಡುಗೆ ನೀಡುವ ಪ್ರೇರಣೆಯಾಗಿ ಈ ಅವಕಾಶ ಪರಿಣಮಿಸಲಿ ಎಂದು ಆಶಿಸಿದ್ದಾರೆ.

Comments

Leave a Reply

Your email address will not be published. Required fields are marked *

More posts