ಪಂಚವರ್ಣದ ವಿದ್ಯಾರ್ಥಿಗಳ ದತ್ತು ಸ್ವೀಕಾರ ಮಾದರಿ ಕಾರ್ಯ- ಆನಂದ್ ಸಿ ಕುಂದರ್

ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ: ಪಂಚವರ್ಣ ಸಂಘಟನೆ ಇಡೀ ರಾಜ್ಯಕ್ಕೆ ಮಾದರಿ ಸಂಘಟನೆಯಾಗಿ ಮೂಡಿಬಂದಿದೆ ಅದರಲ್ಲೂ ಬಹುಮುಖ್ಯವಾಗಿ ಪುನಿತ್ ರಾಜ್ ಕುಮಾರ್ ಹೆಸರಿನಲ್ಲಿ ಬಡ ವಿದ್ಯಾರ್ಥಿ ದತ್ತು ಸ್ವೀಕಾರ ಶ್ಲಾಘನೀಯ ಕಾರ್ಯ ಎಂದು ಕೋಟದ ಗೀತಾನಂದ ಫೌಂಡೇಶನ್ ಪ್ರವರ್ತಕ ಆನಂದ್ ಸಿ ಕುಂದರ್ ಅಭಿಪ್ರಾಯಪಟ್ಟರು.
ಗುರುವಾರ ಕೋಟದ ಸಮುದ್ಯತಾ ಬ್ಯಾಂಕೇಟ್ ಹಾಲ್‍ನಲ್ಲಿ ಕೋಟದ ಪಂಚವರ್ಣ ಯುವಕ ಮಂಡಲ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲದ ಜಂಟಿ ಆಶ್ರಯದಲ್ಲಿ ನಟ ಪುನಿತ್ ರಾಜ್ ಕುಮಾರ್ ವಿದ್ಯಾನಿಧಿ ಯೋಜನೆಯಡಿ ಬಡ ವಿದ್ಯಾರ್ಥಿಗಳ ದತ್ತು ಸ್ವೀಕಾರದ ಪರಿಕರ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಸಮಾಜಸೇವೆಯೇ ಜೀವಾಳವಾಗಿರಿಸಿಕೊಂಡು ಬಡ ವಿದ್ಯಾರ್ಥಿಗಳ ಪಾಲಿಗೆ ಒಂದು ಸಂಘಟನೆ ಆಶ್ರಯದಾತರಾಗಿರುವುದು ಬಲು ಅಪರೂಪ. ಇಂತಹ ಸಂಘಟನೆಗಳಿಗೆ ನಮ್ಮ ಫೌಂಡೇಶನ್ ಸದಾ ಬೆಂಬಲವಾಗಿ ನಿಲ್ಲಲಿದೆ ಎಂದರು.
ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಬಡ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪರಿಕರ ಹಸ್ತಾಂತರಿಸಿ ಮಾತನಾಡಿದ ಉದ್ಯಮಿ ಸಂಪತ್ ಕುಮಾರ್ ಶೆಟ್ಟಿ ಮಾತನಾಡಿ ಪಂಚವರ್ಣ ಸಂಘಟನೆ ಸಾಮಾಜಿಕ ಬದ್ಧತೆ ಇಡೀ ರಾಜ್ಯದಲ್ಲಿರುವ ಸಂಘಟನೆಗಳಿಗೆ ಮಾದರಿಯಾಗಿದೆ. ಇಂತಹ ಸಂಘಟನೆಯ ಜೊತೆ ನಮ್ಮ ಫೌಂಡೇಶನ್ ಗಟ್ಟಿಯಾಗಿ ನಿಂತು ಸಹಕಾರ ನೀಡಲಿದೆ ಎಂದರು.
ಇದೇ ವೇಳೆ ಸುಮಾರು 80000ಸಾವಿರ ರೂ ಅಧಿಕ ಶೈಕ್ಷಣಿಕ ಪರಿಕರ ಆರ್ಥಿಕ ನೆರವನ್ನು ಗಣ್ಯರ ಸಮ್ಮುಖದಲ್ಲಿ ಹಸ್ತಾಂತರಿಸಲಾಯಿತು.
ಸಭೆಯ ಅಧ್ಯಕ್ಷತೆಯನ್ನು ಪಂಚವರ್ಣ ಸಂಘಟನೆಯ ಸ್ಥಾಪಾಕಾಧ್ಯಕ್ಷ ಶೇವಧಿ ಸುರೇಶ್ ಗಾಣಿಗ ವಹಿಸಿದ್ದರು.
ಮುಖ್ಯ ಅತಿಥಿಯಾಗಿ ರಾಷ್ಟ್ರೀಯ ಮಾನವಹಕ್ಕು ರಾಜ್ಯ ಸಮಿತಿ ಪ್ರಧಾನಕಾರ್ಯದರ್ಶಿ ದಿನೇಶ್ ಗಾಣಿಗ, ಪಂಚವರ್ಣ ಮಹಿಳಾ ಮಂಡಲದ ಅಧ್ಯಕ್ಷೆ ಲಲಿತಾ ಪೂಜಾರಿ ಉಪಸ್ಥಿತರಿದ್ದರು.
ಪಂಚವರ್ಣದ ಸದಸ್ಯ ಮಹೇಶ್ ಬೆಳಗಾವಿ ಸ್ವಾಗತಿಸಿ,ರವೀಂದ್ರ ಕೋಟ ಪ್ರಾಸ್ತಾವನೆ ಸಲ್ಲಿಸಿ, ಕಲಾವತಿ ಅಶೋಕ್ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು. ವಸಂತಿ ಹಂದಟ್ಟು ಶೈಕ್ಷಣಿಕ ಪರಿಕರ ಪತ್ರವಾಚಿಸಿದರು.









