ಪತ್ರಕರ್ತ ಪಿ.ಲಂಕೇಶ್ ಪತ್ನಿ, ಹಿರಿಯ ಲೇಖಕಿ ‘ಇಂದಿರಾ ಲಂಕೇಶ್’ ಇನ್ನಿಲ್ಲ |

0
77

Click Here

Click Here

– ರಾಘವೇಂದ್ರ ಅಡಿಗ ಎಚ್ಚೆನ್.

ಬೆಂಗಳೂರು :ಸಾಹಿತಿ, ಪತ್ರಕರ್ತ ಹಾಗೂ ಚಲನಚಿತ್ರ ನಿರ್ದೇಶಕ ಪಿ.ಲಂಕೇಶ್ ಅವರ ಪತ್ನಿ, ಹಿರಿಯ ಲೇಖಕಿ ಇಂದಿರಾ ಲಂಕೇಶ್ ಅವರು 84ನೇ ವಯಸ್ಸಿನಲ್ಲಿ ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಪಡೆಯುತ್ತಿದ್ದರು ಎಂದು ತಿಳಿದುಬಂದಿದೆ…

ಖ್ಯಾತ ಸಾಹಿತಿ ಪಿ. ಲಂಕೇಶ್ ಅವರ ಪತ್ನಿ ಹಾಗೂ ಹಿರಿಯ ಲೇಖಕಿ ಇಂದಿರಾ ಲಂಕೇಶ್ (84) ಬೆಂಗಳೂರಿನಲ್ಲಿ ನಿಧನರಾಗಿದ್ದು, ಕನ್ನಡ ಸಾಹಿತ್ಯ ಮತ್ತು ಸಾಂಸ್ಕೃತಿಕ ವಲಯದಲ್ಲಿ ಶೋಕದ ಛಾಯೆ ಆವರಿಸಿದೆ.

ಇಂದಿರಾ ಲಂಕೇಶ್ ಅವರು ಕನ್ನಡ ಸಾಹಿತ್ಯ, ಪತ್ರಿಕೋದ್ಯಮ ಮತ್ತು ಸಾಂಸ್ಕೃತಿಕ ಕ್ಷೇತ್ರಗಳಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದರು. ಅವರು ಕೇವಲ ಲಂಕೇಶ್ ಕುಟುಂಬದ ಪ್ರಮುಖ ಸದಸ್ಯೆಯಷ್ಟೇ ಅಲ್ಲದೆ, ಹಲವಾರು ಸಾಹಿತ್ಯಿಕ ಹಾಗೂ ಸಾಮಾಜಿಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದರು.

Click Here

ಅವರು ಪುತ್ರಿ ಕವಿತಾ ಲಂಕೇಶ್ , ಪುತ್ರ ಇಂದ್ರಜಿತ್ ಲಂಕೇಶ್ ಸೇರಿದಂತೆ ವಿಶಾಲ ಕುಟುಂಬವನ್ನು ಅಗಲಿದ್ದಾರೆ. ಲಂಕೇಶ್ ಕುಟುಂಬ ಕನ್ನಡ ಸಾಹಿತ್ಯ, ಪತ್ರಿಕೋದ್ಯಮ ಹಾಗೂ ಚಿತ್ರರಂಗದಲ್ಲಿ ಮಹತ್ವದ ಕೊಡುಗೆ ನೀಡಿರುವ ಕುಟುಂಬವೆಂದು ಪರಿಗಣಿಸಲಾಗಿದೆ.

ಇಂದಿರಾ ಲಂಕೇಶ್ ಅವರ ನಿಧನಕ್ಕೆ ಸಾಹಿತ್ಯಿಕರು, ರಾಜಕೀಯ ಮುಖಂಡರು, ಪತ್ರಕರ್ತರು ಹಾಗೂ ವಿವಿಧ ಕ್ಷೇತ್ರಗಳ ಗಣ್ಯರು ಸಂತಾಪ ಸೂಚಿಸಿದ್ದು, ಕನ್ನಡ ಸಾಂಸ್ಕೃತಿಕ ವಲಯವು ಒಬ್ಬ ಮಹತ್ವದ ವ್ಯಕ್ತಿತ್ವವನ್ನು ಕಳೆದುಕೊಂಡಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಸಿಎಂ ಡಿಕೆಶಿ ಸಂತಾಪ

ನಾಡಿನ ಖ್ಯಾತ ಸಾಹಿತಿ ಮತ್ತು ಪತ್ರಕರ್ತರಾಗಿದ್ದ ದಿವಂಗತ ಪಿ.ಲಂಕೇಶ್‌ ಅವರ ಧರ್ಮಪತ್ನಿ ಇಂದಿರಾ ಲಂಕೇಶ್‌ ಅವರ ನಿಧನದ ವಿಷಯ ತಿಳಿದು ಅತೀವ ದುಃಖವಾಗಿದೆ. ಪಿ.ಲಂಕೇಶ್‌ ಅವರ ಸಾಹಿತ್ಯ, ಮಾಧ್ಯಮ ಹಾಗೂ ಚಿತ್ರರಂಗದ ಸಾಧನೆಗೆ ಇಂದಿರಾ ಲಂಕೇಶ್‌ ಅವರು ಬೆನ್ನೆಲುಬಾಗಿದ್ದರು. ಜೊತೆಗೆ ವ್ಯವಹಾರ, ಬರವಣಿಗೆ ಹಾಗೂ ಪುಸ್ತಕ ಪ್ರಕಟಣೆಯಲ್ಲೂ ತಮ್ಮನ್ನು ತೊಡಗಿಸಿಕೊಂಡಿದ್ದರು. ಛಲ ಬಿಡದ ಗಟ್ಟಿಗಿತ್ತಿಯಂತೆ ಬದುಕಿದ ಇಂದಿರಾ ಲಂಕೇಶ್‌ ಅವರು ಎಲ್ಲಾ ಹೆಣ್ಣುಮಕ್ಕಳಿಗೂ ಮಾದರಿಯಾಗಿದ್ದರು. ಭಗವಂತ ಮೃತರ ಆತ್ಮಕ್ಕೆ ಚಿರಶಾಂತಿ ದಯಪಾಲಿಸಲಿ ಹಾಗೂ ನೋವಿನಲ್ಲಿರುವ ಕುಟುಂಬಸ್ಥರು, ಆಪ್ತರು, ಅಭಿಮಾನಿಗಳು ಹಾಗೂ ಸಾಹಿತ್ಯಾಸಕ್ತರಿಗೆ ಶಕ್ತಿ, ಧೈರ್ಯ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಸಿಎಂ ಡಿಕೆಶಿ ಟ್ವೀಟ್ ಮಾಡಿದ್ದಾರೆ.

Click Here

LEAVE A REPLY

Please enter your comment!
Please enter your name here