ವಕ್ವಾಡಿ :ಗುರುಕುಲ ಪಬ್ಲಿಕ್ ಸ್ಕೂಲ್ ನಲ್ಲಿ ಸಹಪಠ್ಯ ಹಾಗೂ ಪಠ್ಯೇತರ ಚಟುವಟಿಕೆಗಳ ಉದ್ಘಾಟನೆ

0
111

Click Here

Click Here

ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ :ವಕ್ವಾಡಿಯ ಬಾಂಡ್ಯಎಜುಕೇಶನಲ್ ಟ್ರಸ್ಟ್ ನ ಅಂಗಸಂಸ್ಥೆಯಾದ ಗುರುಕುಲ ಪಬ್ಲಿಕ್ ಸ್ಕೂಲ್ ನಲ್ಲಿ 2026-27 ನೇ ಸಾಲಿನ ಸಹಪಠ್ಯ ಹಾಗೂ ಪಠ್ಯೇತರ ಚಟುವಟಿಕೆಗಳ ಉದ್ಘಾಟನೆಯನ್ನು ಬಾಂಡ್ಯ ಎಜ್ಯುಕೇಶನಲ್ ಟ್ರಸ್ಟ್ ನ ಜಂಟಿ ಕಾರ್ಯನಿರ್ವಾಹಕರಾದ ಅನುಪಮಾ ಎಸ್ ಶೆಟ್ಟಿಯವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಾ – ವಿದ್ಯಾರ್ಥಿಗಳ ಬೌದ್ಧಿಕ ವಿಕಾಸಕ್ಕೆ ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳು ಬಹಳ ಮುಖ್ಯವಾದದು. ವಿದ್ಯಾರ್ಥಿಗಳು ಕಲಿಕಾ ಸಂದರ್ಭದಲ್ಲಿ ಹೆಚ್ಚು ಹೆಚ್ಚು ಕೌಶಲ್ಯಗಳನ್ನು ರೂಢಿಸಿಕೊಂಡು ಕಲಿಕೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದರು. ಪ್ರಾಂಶುಪಾಲರಾದ ಡಾ. ರೂಪಾ ಶೆಣೈ ರವರು ಪ್ರಾಸ್ತಾವಿಕವಾಗಿ ಮಾತನಾಡಿದರು.
“ ಪ್ರತಿಭೆಯನ್ನು ಗುರುತಿಸಿ ಬೆಳಸಿ, ಸಾಧನೆಯತ್ತ ಮುನ್ನಡೆಯೋಣ “ ಎಂಬ ಸಂದೇಶದೊಂದಿಗೆ ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾದ, ಚದುರಂಗ, ಕೊಳಲು ವಾದನ, ಸ್ನೇಟಿಂಗ್, ಏರೋಬಿಕ್ಸ್, ಭರತನಾಟ್ಯ, ಸುಗಮ ಸಂಗೀತ, ಶಾಸ್ತ್ರೀಯ ಸಂಗೀತ ಮತ್ತು ಯಕ್ಷಗಾನ ತರಬೇತಿ ಯಂತಹ ಚಟುವಟಿಕೆಗಳಿಗೆ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಂದ ಕರಾಟೆ ಪ್ರದರ್ಶನ ಹಮ್ಮಿಕೊಳ್ಳಲಾಗಿತ್ತು.

Click Here

ಶಿಕ್ಷಕಿ ಸುಲೋಚನಾ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

Click Here

LEAVE A REPLY

Please enter your comment!
Please enter your name here