ವೆಂಕಟರಮಣ ಪದವಿ ಪೂರ್ವ ಕಾಲೇಜಿನಲ್ಲಿ ಫ್ರೆಶರ್ಸ್ ಡೇ ಹಾಗೂ ವಿದ್ಯಾರ್ಥಿ ಸಂಸತ್ ಉದ್ಘಾಟನೆ.

0
2244

Click Here

Click Here

ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ: ಜೂನ್ 27 ರಂದು ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನಲ್ಲಿ ಫ್ರೆಶರ್ಸ್ ಡೇ ಹಾಗೂ ವಿದ್ಯಾರ್ಥಿ ಸಂಸತ್ ನ್ನು ದೀಪ ಪ್ರಜ್ವಲಿಸುವುದರ ಮೂಲಕ ಚಾಲನೆ ನೀಡಲಾಯಿತು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಉಪಸ್ಥಿತರಿರುವ ಸೃಷ್ಟಿ ಇನ್ಫೋಟೆಕ್ ನ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಪೂರ್ಣಪ್ರಜ್ಞ ಕಾಲೇಜಿನ ಅಕಾಡೆಮಿಕ್ ಕೌನ್ಸಿಲ್ ಸದಸ್ಯರಾಗಿರುವ ಹರ್ಷ ವರ್ಧನ್ ಶೆಟ್ಟಿ ಕಟ್ಕೇರಿ ವಿದ್ಯಾರ್ಥಿಗಳಿಗೆ ಕಠಿಣ ಪರಿಶ್ರಮವೇ ಯಶಸ್ಸು ಮತ್ತು ಸಾಧನೆಯ ಮೂಲ ಮಂತ್ರ. ದೃಢವಾದ ಗುರಿಯನ್ನು ಇಟ್ಟುಕೊಂಡು ಪ್ರತಿದಿನವೂ ಶ್ರಮಿಸುವುದರಿಂದ ಅಸಾಧ್ಯವಾದ್ದುದ್ದನ್ನು ಸಾಧಿಸಬಹುದು ಎಂದರು

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ವೆಂಕಟರಮಣ ಸಂಸ್ಥೆಯ ಕಾರ್ಯದರ್ಶಿ ಕೆ. ರಾಧಾ ಕೃಷ್ಣ ಶೆಣೈ ವಹಿಸಿ, ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ಪಡೆದು ಅದ್ಭುತ ಪ್ರಜೆಗಳಾಗಿ ಎಂದು ಶುಭ ಹಾರೈಸಿದರು.

Click Here

ಈ ಸಂದರ್ಭದಲ್ಲಿ ಸಿ ಇ ಟಿ ಪರೀಕ್ಷೆ ಯಲ್ಲಿ ಐದು ಸಾವಿರದ ಒಳಗಡೆ ರ‌್ಯಾಂಕ್ ಪಡೆದ 10 ವಿದ್ಯಾರ್ಥಿಗಳಿಗೆ ಬೆಳ್ಳಿಲೋಟ ಮತ್ತು ಅಭಿನಂದನಾ ಪತ್ರದೊಂದಿಗೆ ಸನ್ಮಾನಿಸಲಾಯಿತು.

ವೇದಿಕೆಯಲ್ಲಿ ಸಂಸ್ಥೆಯ ಖಜಾಂಚಿ ಕೆ.ಲಕ್ಷ್ಮೀ ನಾರಾಯಣ ಶೆಣೈ, ಕಾಲೇಜಿನ ಪ್ರಾಂಶುಪಾಲರಾದ ಸಂದೀಪ್ ಗಾಣಿಗ, ಉಪ ಪ್ರಾಂಶುಪಾಲರಾದ ಸುಜಯ್ ಕೋಟೆಗಾರ್, ಹಿರಿಯ ರಸಾಯನ ಶಾಸ್ತ್ರ ಉಪನ್ಯಾಸಕರಾದ ರಮಾ ಕಾಂತ್ ರೇವಣಕ‌ರ್ ಉಪಸ್ಥಿತರಿದ್ದರು.

ಪ್ರಕಾಶ್ ಹೆಮ್ಮಾಡಿ ಅವರಿಂದ ಜಾದು ಪ್ರದರ್ಶನ ನಡೆಯಿತು. ಕೌನ್ಸಿಲ್ ಸದಸ್ಯರ ಪಟ್ಟಿಯನ್ನು ಹಿಂದಿ ಉಪನ್ಯಾಸಕಿ ಸುಕಿತಾ ಸುವರ್ಣ, ಸನ್ಮಾನಿತರ ಪಟ್ಟಿಯನ್ನು ಇಂಗ್ಲೀಷ್ ಉಪನ್ಯಾಸಕಿ ಅಮೃತಾ ವಾಚಿಸಿದರು.

ವಿದ್ಯಾರ್ಥಿಗಳಾದ ಗೌರಿ ಅತಿಥಿಗಳನ್ನು ಪರಿಚಯಿಸಿದರು, ಆಯಿಷಾ ಸಮೀಯಾ ವಂದಿಸಿ, ಅಸ್ಮಿತಾ ಸ್ವಾಗತಿಸಿ, ಅಜ್ಕಾ ಕಾರ್ಯಕ್ರಮವನ್ನು ನಿರೂಪಿಸಿದರು.

Click Here

LEAVE A REPLY

Please enter your comment!
Please enter your name here