ಸಿಲೋನ್ ಮಾಸ್ಟರ್ಸ್ ಇಂಟರ್ನ್ಯಾಷನಲ್ ಬ್ಯಾಡ್ಮಿಂಟನ್ ಚಾಂಪಿಯನ್ಶಿಪ್‍ನಲ್ಲಿ ನಂಜುಂಡ ಎಫ್.ಸಿ.ಎ. ಚಿನ್ನದ ಪದಕ

0
11

Click Here

Click Here

ಕುಂದಾಪುರ ಮಿರರ್ ಸುದ್ದಿ…

Click Here

ಕೋಟ: ಇತ್ತೀಚಿಗೆ ಶ್ರೀಲಂಕಾದ ಕೊಲಂಬೋದಲ್ಲಿ ನಡೆದ ಸಿಲೋನ್ ಮಾಸ್ಟರ್ಸ್ ಇಂಟರ್ನ್ಯಾಷನಲ್ ಬ್ಯಾಡ್ಮಿಂಟನ್ ಚಾಂಪಿಯನ್ಶಿಪ್ 2026 ರಲ್ಲಿ ಭಾರತ ದೇಶದಿಂದ ಪ್ರತಿನಿಧಿಸಿದ ಉಡುಪಿ ಜಿಲ್ಲೆಯ ಕೋಡಿ ಕನ್ಯಾಣದ ನಿವಾಸಿ, ನಂಜುಂಡ ಎಫ್.ಸಿ.ಎ. ಇವರು 60+ ವಯೋಮಿತಿ ವಿಭಾಗದ ಶಟಲ್ ಬ್ಯಾಡ್ಮಿಂಟನ್ ಡಬಲ್ಸ್‍ನಲ್ಲಿ ಚಾಂಪಿಯನ್ ಆಗಿ ಚಿನ್ನದ ಪದಕವನ್ನು ಪಡೆದು ಮತ್ತು ಮಿಕ್ಸೆಡ್ ಡಬಲ್ಸ್‍ನಲ್ಲಿ ಕಂಚಿನ ಪದಕವನ್ನು ಪಡೆದು ಕೊಂಡಿದ್ದಾರೆ. ಕಳೆದ 30 ವರ್ಷಗಳಿಂದ ಬೆಂಗಳೂರಿನಲ್ಲಿ ನಂಜುಂಡ ಅಂಡ್ ಕಂಪನಿಯನ್ನು ಹುಟ್ಟು ಹಾಕಿ ಇದರ ಚಾರ್ಟರ್ಡ್ ಅಕೌಂಟೆಂಟ್ ಆಗಿ ಸೇವೆ ನಿರ್ವಹಿಸಿ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆ ಮತ್ತು ರಾಜ್ಯದ ಸಾಕಷ್ಟು ಸಿಎ ಇಂಟರ್ಮೀಡಿಯಟ್, ಸಿಎ ಫೈನಲ್ ವಿದ್ಯಾರ್ಥಿಗಳಿಗೆ ಸರಿಯಾದ ಮಾರ್ಗದರ್ಶನ ನೀಡಿ ಅವರಿಗೆ ಉದ್ಯೋಗ ಕಲ್ಪಿಸಿದ್ದಾರೆ.

Click Here

LEAVE A REPLY

Please enter your comment!
Please enter your name here