ಕುಂದಾಪುರ ಶ್ರೀ ವೆಂಕಟರಮಣ ಸಮೂಹ ಶಿಕ್ಷಣ ಸಂಸ್ಥೆಗಳ 40ನೇ ಸಂಸ್ಥಾಪನಾ ದಿನಾಚರಣೆ

0
18

Click Here

Click Here

ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ :ಶ್ರೀ ವೆಂಕಟರಮಣ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ , ಸಂಸ್ಥೆಯ ಅಧ್ಯಕ್ಷರಾದ ಕೆ. ರಾಮಕೃಷ್ಣ ಕಾಮತ್ ರವರ ಅಧ್ಯಕ್ಷತೆಯಲ್ಲಿ, ಕಾರ್ಯದರ್ಶಿ ಕೆ. ರಾಧಾಕೃಷ್ಣ ಶೆಣೈ ಹಾಗೂ ಖಜಾಂಚಿ ಕೆ.ಲಕ್ಷ್ಮೀನಾರಾಯಣ ಶೆಣೈಯವರ ಉಪಸ್ಥಿತಿಯಲ್ಲಿ 4೦ನೇ ಸಂಸ್ಥಾಪನಾ ದಿನಾಚರಣೆಯನ್ನು ಆಚರಿಸಲಾಯಿತು. ಚಂದ್ರ ನಾಯ್ಕ್ ಸಹಾಯಕ ನಿರ್ದೇಶಕರು ಅಕ್ಷರ ದಾಸೋಹ ಬೈಂದೂರು ಮತ್ತು ಕುಂದಾಪುರ ತಾಲೂಕು ಹಾಗೂ ಸುಮಾ ಉಮೇಶ್ ಪುತ್ರನ್ ಚಿನ್ಮಯಿ ಆಸ್ಪತ್ರೆ ಇವರು ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಸಂದೀಪ್ ಗಾಣಿಗ ರವರು ಸರ್ವರನ್ನು ಸ್ವಾಗತಿಸಿ, ಪೂರ್ವ ಪ್ರಾಥಮಿಕ ವಿಭಾಗದ ಮುಖ್ಯಶಿಕ್ಷಕಿ ಪ್ರಮೀಳಾ ಡಿಸೋಜ ರವರು ಧನ್ಯವಾದ ಸಮರ್ಪಿಸಿದರು. ಪ್ರೌಢಶಾಲಾ ಮುಖ್ಯ ಶಿಕ್ಷಕ ಕೃಷ್ಣ ಅಡಿಗ ಹಾಗೂ ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿ ರೇಷ್ಮಾ ಡಿಸೋಜ ರವರು ಮುಖ್ಯ ಅತಿಥಿಗಳನ್ನು ಸಭೆಗೆ ಪರಿಚಯಿಸಿದರು. ಪದವಿ ಪೂರ್ವ ಕಾಲೇಜಿನ ಉಪ ಪ್ರಾಂಶುಪಾಲರಾದ ಶ್ರೀ. ಸುಜಯ್ ಕೋಟೆಗಾರರವರು ಸಮಾರಂಭದಲ್ಲಿ ಉಪಸ್ಥಿತರಿದ್ದರು. ಸಹಶಿಕ್ಷಕಿ ಶ್ರೀಮತಿ ಭಾವನಾ ಪಿ. ರವರು ಕಾರ್ಯಕ್ರಮವನ್ನು ನಿರೂಪಿಸಿದರು.

ಈ ಸಮಾರಂಭದಲ್ಲಿ ಎಸ್.ಎಸ್.ಎಲ್.ಸಿಯಲ್ಲಿ ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆದವರಿಗೆ ಸನ್ಮಾನಿಸಿ ಬೆಳ್ಳೆಯಲೋಟವನ್ನು ನೆನಪಿನ ಕಾಣಿಕೆಯಾಗಿ ನೀಡಲಾಯಿತು. ೬೦೦ಕ್ಕಿಂತ ಅಧಿಕ ಅಂಕ ಪಡೆದ ೬೦ವಿದ್ಯಾರ್ಥಿಗಳಿಗೆ ೧೦ಗ್ರಾಂ ಬೆಳ್ಳಿಯ ನಾಣ್ಯವನ್ನು ಹಾಗೂ ಡಿಸ್ಟಿಂಕ್ಷನ್ ಪಡೆದ ೧೨೯ ವಿದ್ಯಾರ್ಥಿಗಳಿಗೆ ೮ಗ್ರಾಂ ಬೆಳ್ಳಿಯ ನಾಣ್ಯವನ್ನು ನೀಡಿ ಪ್ರೋತ್ಸಾಹಿಸಲಾಯಿತು ಹಾಗೂ ಪಿ.ಯು.ಸಿ.ಯ ಸಾಧಕರನ್ನು ಸನ್ಮಾನಿಸಲಾಯಿತು.

Click Here

ಎಸ್.ಎಸ್.ಎಲ್.ಸಿ ಮತ್ತು ಪಿ.ಯು.ಸಿಯಲ್ಲಿ ಉತ್ತಮ ಫಲಿತಾಂಶಕ್ಕಾಗಿ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸುವ ಸುಮಾರು ೨೨೨ ಬೋಧಕ ಬೋಧಕೇತರ ಸಿಬ್ಬಂದಿಯವರಿಗೆ ನಗದು ಪುರಸ್ಕಾರವನ್ನು ನೀಡಿ ಗೌರವಿಸಲಾಯಿತು.

Click Here

LEAVE A REPLY

Please enter your comment!
Please enter your name here