ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ :ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ ಕಳೆದ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ೬೨೪ ಅಂಕ ಗಳಿಸಿ ರಾಜ್ಯಮಟ್ಟದಲ್ಲಿ ೨ನೇ ಸ್ಥಾನ ಹಾಗೂ ಶಾಲಾ ಮಟ್ಟದಲ್ಲಿ ಪ್ರಥಮ ಸ್ಥಾನ ವಿಜೇತೆಯಾದ ಪ್ರಾರ್ಥನಾ ಜಿ.ಳನ್ನು ಶಾಲೆಯ ೪೦ನೇ ಸಂಸ್ಥಾಪನಾ ದಿನದಂದು ಪೋಷಕರೊಂದಿಗೆ ಬೆಳ್ಳಿಯ ಲೋಟವನ್ನು ನೀಡಿ ಸನ್ಮಾನಿಸಲಾಯಿತು. ಈ ಸಮಾರಂಭವು ಸಂಸ್ಥೆಯ ಅಧ್ಯಕ್ಷರಾದ ಕೆ.ರಾಮಕೃಷ್ಣ ಕಾಮತ್ ರವರ ಅಧ್ಯಕ್ಷತೆಯಲ್ಲಿ, ಕಾರ್ಯದರ್ಶಿ ಕೆ.ರಾಧಾಕೃಷ್ಣ ಶೆಣೈಯವರ ಉಪಸ್ಥಿತಿಯಲ್ಲಿ ನಡೆಯಿತು. ಬೈಂದೂರು ಹಾಗೂ ಕುಂದಾಪುರ ತಾಲೂಕಿನ ಅಕ್ಷರ ದಾಸೋಹದ ಸಹಾಯಕ ನಿರ್ದೇಶಕರಾದ ಚಂದ್ರ ನಾಯ್ಕ್ ಹಾಗೂ ಸುಮಾ ಉಮೇಶ್ ಪುತ್ರನ್ ರವರು ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ಸಂಸ್ಥೆಯ ಖಂಜಾಂಚಿ ಲಕ್ಷೀನಾರಾಯಣ ಶೆಣೈ, ಪೂರ್ವ ಪ್ರಾಥಮಿಕ, ಪ್ರಾಥಮಿಕ, ಪ್ರೌಢ ಹಾಗೂ ಪದವಿ ಪೂರ್ವ ಕಾಲೇಜಿನ ಮುಖ್ಯಸ್ಥರು ಈ ಸಮಾರಂಭದಲ್ಲಿ ಉಪಸ್ಥಿತರಿದ್ದರು.












