ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ :ಇಂದಿನ ಕೃತಕ ಮತ್ತು ಶರವೇಗದ ಜೀವನ ಶೈಲಿಯಲ್ಲಿ ಪುಟಾಣಿಗಳಲ್ಲಿ ಪರಿಸರದ ಬಗ್ಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಪೂರ್ವ ಪ್ರಾಥಮಿಕ ವಿಭಾಗದಲ್ಲಿ ಮಳೆಹಬ್ಬ ಮತ್ತು ಹಸಿರು ಬಣ್ಣದ ಸಂಭ್ರಮಾಚರಣೆಯನ್ನು ಬುಧವಾರದಂದು ಆಚರಿಸಲಾಯಿತು.
ಈ ಸಂದರ್ಭದಲ್ಲಿ ಪ್ರಾಥಮಿಕ ವಿಭಾಗದ ಸಂಯೋಜಕಿ ಪುಷ್ಪಾ ಅಡಿಗರವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಳೆಯ ಪ್ರಾಮುಖ್ಯತೆ ಹಾಗೂ ಪರಿಸರದ ಕಾಳಜಿಯ ಬಗ್ಗೆ
ಪುಟಾಣಿಗಳಿಗೆ ತಿಳಿ ಹೇಳಿದರು.
ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿ ರೇಶ್ಮಾ ಡಿಸೋಜಾ, ಪೂರ್ವ ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿ ಪ್ರಮೀಳಾ ಡಿಸೋಜ, ಸಹಶಿಕ್ಷಕಿಯರು ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡರು.
ಶಿಕ್ಷಕಿ ಮಮತಾ ಸರ್ವರನ್ನು ಸ್ವಾಗತಿಸಿ, ವಸಂತಿ ಕಾರ್ಯಕ್ರಮ ನಿರೂಪಿಸಿ, ರೂಪಾ ವಂದಿಸಿದರು.












