ಕೋಟ: ಕ್ಯಾನ್ಸರ್ ರೋಗಕ್ಕೆ ತುತ್ತಾದ ಮಾಧವ ಶೆಣೈ ಪಂಚವರ್ಣದಿಂದ 45ಸಾವಿರ ನೆರವು ಹಸ್ತಾಂತರ

0
242

Click Here

Click Here

ಕುಂದಾಪುರ ಮಿರರ್ ಸುದ್ದಿ…

Click Here

ಕೋಟ: ಇಲ್ಲಿನ ಮಣೂರು ಪರಿಸರದ ಮಾಧವ ಶೆಣೈ ಕ್ಯಾನ್ಸರ್ ರೋಗಕ್ಕೆ ತುತ್ತಾಗಿದ್ದು ಪ್ರಸ್ತುತ ಕೆ.ಎಂ.ಸಿಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಈ ಹಿನ್ನೆಲೆಯಲ್ಲಿ ಆರ್ಥಿಕ ಸಹಕಾರಕ್ಕೆ ಸ್ಥಳೀಯ ಸಂಘ ಸಂಸ್ಥೆಗಳ ಮೊರೆಹೋಗಿದ್ದಾರೆ. ಈ ದಿಸೆಯಲ್ಲಿ ಕೋಟದ ಪಂಚವರ್ಣ ಯುವಕ ಮಂಡಲ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲ ಹಾಗೂ ದಾನಿಗಳ ಸಹಕಾರದೊಂದಿಗೆ ಸುಮಾರು 45ಸಾವಿರೂ ರೂಗಳನ್ನು ಒಗ್ಗೂಡಿಸಿ ಅದನ್ನು ಭಾನುವಾರ ಮಾಧವ ಶೆಣೈ ಇವರಿಗೆ ಹಸ್ತಾಂತರಿಸಲಾಯಿತು.
ಇದರ ಚೆಕ್ ಅನ್ನು ಮುಂಬೈ ಒಎನ್‍ಜಿಸಿ ಇದರ ನಿವೃತ್ತ ಅಧಿಕಾರಿ ಬನ್ನಾಡಿ ನಾರಾಯಣ ಆಚಾರ್ ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ಸಕಡ್ ಫೌಂಡೇಶನ್ ಮುಖ್ಯಸ್ಥ ಶ್ರೀಕಾಂತ್ ಶೆಣೈ,ಕೋಟ ಪಂಚಾಯತ್ ಮಾಜಿ ಸದಸ್ಯ ಎಂ.ಜಯರಾಮ ಶೆಟ್ಟಿ,ಪಂಚವರ್ಣ ಸಂಘಟನೆಯ ಸ್ಥಾಪಕಾಧ್ಯಕ್ಷ ಶೇವಧಿ ಸುರೇಶ್ ಗಾಣಿಗ, ಅಧ್ಯಕ್ಷ ಮನೋಹರ್ ಪೂಜಾರಿ,ಉಪಾಧ್ಯಕ್ಷ ದಿನೇಶ್ ಆಚಾರ್,ನಿಕಟಪೂರ್ವ ಅಧ್ಯಕ್ಷ ಅಜಿತ್ ಆಚಾರ್,ಮಹಿಳಾ ಅಧ್ಯಕ್ಷೆ ಲಲಿತಾ ಪೂಜಾರಿ,ಸಂಚಾಲಕಿ ಸುಜಾತ ಬಾಯರಿ ಮತ್ತಿತರರು ಇದ್ದರು.

Click Here

LEAVE A REPLY

Please enter your comment!
Please enter your name here