ಕರಾಟೆ ಪಂದ್ಯಾಟ: ವಿದ್ಯಾರಣ್ಯ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

0
17

Click Here

Click Here

ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ: ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಕುಂದಾಪುರ, ಉಡುಪಿ ಜಿಲ್ಲೆ ಹಾಗೂ ಶಾರದಾ ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆ ಬಸ್ರೂರು ಇವರ ಸಹಯೋಗದಲ್ಲಿ ಆಯೋಜಿಸಲಾಗಿದ್ದ 2026-27ನೇ ಸಾಲಿನ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳ ವಲಯ ಮಟ್ಟದ ಕರಾಟೆ ಪಂದ್ಯಾಟದಲ್ಲಿ ವಿದ್ಯಾರಣ್ಯ ಆಂಗ್ಲಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆಗೈದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

Click Here

17ರ ವಯೋಮಾನದ ಹುಡುಗಿಯರ ವಿಭಾಗದಲ್ಲಿ ವಿದ್ಯಾರಣ್ಯ ಆಂಗ್ಲಮಾಧ್ಯಮ ಶಾಲೆಯ 9ನೇ ತರಗತಿ ವಿದ್ಯಾರ್ಥಿನಿ ದಶಮಿ ಶೆಟ್ಟಿ ಹಾಗೂ 17ರ ವಯೋಮಾನದ ಹುಡುಗರ ವಿಭಾಗದಲ್ಲಿ ವಿದ್ಯಾರಣ್ಯ ಆಂಗ್ಲಮಾಧ್ಯಮ ಶಾಲೆಯ 10ನೇ ತರಗತಿ ವಿದ್ಯಾರ್ಥಿ ಡಿಯೋನ್‌ ಸುಜಿತ್‌ ಜೋನ್ ಮತ್ತು 9ನೇ ತರಗತಿ ವಿದ್ಯಾರ್ಥಿ ಕೃತನ್‌ ಕಿರಣ್‌ ಕುಂದಾಪುರ ಪ್ರಥಮ ಸ್ಥಾನದೊಂದಿಗೆ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ಹಾಗೇ ಶಾಲೆಯ 9ನೇ ತರಗತಿ ವಿದ್ಯಾರ್ಥಿನಿ ಶರ್ವಾಣಿ ಹಾಗೂ 8ನೇ ತರಗತಿ ವಿಮರ್ಶ್ ದ್ವಿತೀಯ ಸ್ಥಾನ ಗಳಿಸಿದ್ದಾರೆ.

ವಿಜೇತ ವಿದ್ಯಾರ್ಥಿಗಳಿಗೆ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಸುಶಾಂತ್‌ ಮಡಿವಾಳ್‌, ಚಂದ್ರ ಶೇಖರ ಮಾರ್ಗದರ್ಶನ ನೀಡಿದ್ದರು.ತಂಡ ವ್ಯವಸ್ಥಾಪಕರಾಗಿ ಶಿಕ್ಷಕಿಯರಾದ ಸಾನಿಕಾ ಹೆಚ್‌ ವಿ, ಕಾವ್ಯ ಶೆಟ್ಟಿ ನಿರ್ವಹಿಸಿದ್ದರು. ಕರಾಟೆಯಲ್ಲಿ ಸಾಧನೆಗೈದ ವಿದ್ಯಾರ್ಥಿಗಳನ್ನು ಸುಜ್ಞಾನ ಎಜುಕೇಶನಲ್‌ ಟ್ರಸ್ಟ್‌ ಅಧ್ಯಕ್ಷರಾದ ಡಾ. ರಮೇಶ್‌ ಶೆಟ್ಟಿ, ಕಾರ್ಯದರ್ಶಿ ಪ್ರತಾಪ್‌ ಚಂದ್ರ ಶೆಟ್ಟಿ, ಖಜಾಂಚಿ ಭರತ್‌ ಶೆಟ್ಟಿ ಹಾಗೂ ಸಂಸ್ಥೆಯ ಮುಖ್ಯೋಪಾಧ್ಯಾಯರಾದ ಪ್ರದೀಪ್‌ ಅವರು ಅಭಿನಂದಿಸಿದ್ದಾರೆ.

Click Here

LEAVE A REPLY

Please enter your comment!
Please enter your name here