ಜನತಾ ನ್ಯೂ ಇಂಗ್ಲೀಷ್ ಮಿಡಿಯಂ ಸ್ಕೂಲ್: ಶಟಲ್ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ 4 ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

0
508

Click Here

Click Here

ಕುಂದಾಪುರ ಮಿರರ್ ಸುದ್ದಿ…

ಕಿರಿಮಂಜೇಶ್ವರ :ಶಾಲಾ ಶಿಕ್ಷಣಾಧಿಕಾರಿಗಳ ಕಛೇರಿ ಬೈಂದೂರು ವಲಯ ಮತ್ತು ಸಂದೀಪನ್ ಆಂಗ್ಲ ಮಾಧ್ಯಮ ಶಾಲೆ ಖಂಬದಕೋಣೆ ಇವರ ಸಂಯುಕ್ತ ಆಶ್ರಯದಲ್ಲಿ ಜರುಗಿದ ಬೈಂದೂರು ವಲಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ಜನತಾ ನ್ಯೂ ಇಂಗ್ಲೀಷ್ ಮಿಡಿಯಂ ಸ್ಕೂಲ್ ನ ನಾಲ್ಕು ವಿದ್ಯಾರ್ಥಿಗಳು ಬೈಂದೂರು ವಲಯ ಮಟ್ಟದಲ್ಲಿ ಪ್ರಥಮ ಸ್ಥಾನ ಗಳಿಸಿ ಚಿನ್ನದ ಪದಕದೊಂದಿಗೆ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. 17ರ ವಯೋಮಾನದ ಹುಡುಗರ ಶಟಲ್ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ಹರಿಜಿತ್ (9ನೇ ತರಗತಿ) , ಸನ್ವಿತ್ ಶೆಟ್ಟಿ (9ನೇ ತರಗತಿ), ತನೀಶ್ (9ನೇ ತರಗತಿ) ಮತ್ತು ಆರಾಧ್ಯ ಪೂಜಾರಿ(9ನೇ ತರಗತಿ) ಪ್ರಥಮ ಸ್ಥಾನ ಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

Click Here

ಜನತಾ ಸಂಸ್ಥೆಯಲ್ಲಿ ವಿದ್ಯಾರ್ಥಿಗಳಿಗೆ ಗುಣಮಟ್ಟದ ಕಲಿಕಾ ಚಟುವಟಿಕೆಗಳ ಜೊತೆಯಲ್ಲಿ ನುರಿತ ದೈಹಿಕ ಶಿಕ್ಷಣ ಶಿಕ್ಷಕರಿಂದ ವಿವಿಧ ಬಗೆಯ ಆಟೋಟ ಸ್ಪರ್ಧೆಗಳಿಗೆ ತರಬೇತಿಯನ್ನು ನೀಡುವುದರ ಮೂಲಕ ವಿದ್ಯಾರ್ಥಿಗಳ ದೈಹಿಕ ಮತ್ತು ಮಾನಸಿಕ ವಿಕಾಸಕ್ಕೆ ಹೆಚ್ಚಿನ ಪ್ರೋತ್ಸಾಹ ನೀಡಲಾಗುತ್ತಿದೆ.

ವಿಜೇತ ವಿದ್ಯಾರ್ಥಿಗಳಿಗೆ ಜನತಾ ಸಮೂಹ ಸಂಸ್ಥೆಗಳ ಅಧ್ಯಕ್ಷರು, ಕಾರ್ಯದರ್ಶಿ, ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಕರು,ಬೋಧಕ/ಬೋಧಕೇತರ ವೃಂದದವರು ಹಾಗೂ ವಿದ್ಯಾರ್ಥಿಗಳು ಅಭಿನಂದನೆಯನ್ನು ಸಲ್ಲಿಸಿದ್ದಾರೆ.

Click Here

LEAVE A REPLY

Please enter your comment!
Please enter your name here