ಕರಾಟೆ ಸ್ಪರ್ಧೆ: ಸುಜ್ಞಾನ ಪಿಯು ಕಾಲೇಜಿನ ಫೈಜ್‌ ರಾಜ್ಯ ಮಟ್ಟಕ್ಕೆ ಆಯ್ಕೆ

0
16

Click Here

Click Here

ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ: ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಹಾಗೂ ಕಲ್ಯಾಣಪುರದ ಮಿಲಾಗ್ರಿಸ್‌ ಪದವಿಪೂರ್ವ ಕಾಲೇಜಿನ ಜಂಟಿ ಆಶ್ರಯದಲ್ಲಿ ಆಯೋಜಿಸಲಾಗಿದ್ದ 2026-2027ನೇ ಸಾಲಿನ ಉಡುಪಿ ಜಿಲ್ಲಾ ಮಟ್ಟದ ಬಾಲಕ-ಬಾಲಕಿಯರ ಕರಾಟೆ ಪಂದ್ಯಾಟದಲ್ಲಿ ಇಲ್ಲಿನ ಸುಜ್ಞಾನ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆಗೈದಿದ್ದಾರೆ.

ರಾಜ್ಯ ಮಟ್ಟಕ್ಕೆ ಆಯ್ಕೆ:
ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿ ಮಹಮ್ಮದ್‌ ಫೈಜ್‌ ಸಾದಿಕ್‌ ಬಾಲಕರ 74 ಕೆಜಿ ವಿಭಾಗದಲ್ಲಿ ಪ್ರಥಮ ಸ್ಥಾನ ಗಳಿಸುವ ಮೂಲಕ ರಾಜ್ಯ ಮಟ್ಟದ ಕರಾಟೆ ಪಂದ್ಯಾಟಕ್ಕೆ ಆಯ್ಕೆಯಾಗಿದ್ದಾರೆ. ಇವರು ಮಹಮ್ಮದ್‌ ಇಬ್ರಾಹಿಂ ಸಾದಿಕ್‌ ಹಾಗೂ ಯಸೀರಾ ಸಾದಿಕ್‌ ದಂಪತಿಯ ಪುತ್ರ.

Click Here

ಹಾಗೇ,68 ಕೆಜಿ ವಿಭಾಗದಲ್ಲಿ ದ್ವಿತೀಯ ಪಿಯುಸಿಯ ಧನ್ವಿ ದ್ವಿತೀಯ ಸ್ಥಾನ, 54 ಕೆಜಿ ವಿಭಾಗದಲ್ಲಿ ಹರ್ಷಿತ್‌ ತೋಳಾರ್ ದ್ವಿತೀಯ ಸ್ಥಾನ, 78 ಕೆಜಿ ವಿಭಾಗದಲ್ಲಿಅನೂಪ್‌ ಡಿ ಗಾಣಿಗ ದ್ವಿತೀಯ ಸ್ಥಾನ, 62ಕೆಜಿ ವಿಭಾಗದಲ್ಲಿ ಮಿಥೇಶ್‌ ದ್ವಿತೀಯ ಸ್ಥಾನ ಪಡೆದಿದ್ದಾರೆ ಹಾಗೂ 60 ಕೆಜಿ ವಿಭಾಗದಲ್ಲಿ ಪ್ರಥಮ ಪಿಯುಸಿಯ ವೈಷ್ಣವಿ ಶೆಟ್ಟಿ ದ್ವಿತೀಯ ಸ್ಥಾನ, 58ಕೆಜಿ ವಿಭಾಗದಲ್ಲಿ ಪ್ರತೀಕ್ಷಾ .ಪಿ ದ್ವಿತೀಯ ಸ್ಥಾನ, 66 ಕೆಜಿ ವಿಭಾಗದಲ್ಲಿ ಶುಭನ್‌ ಪುತ್ರನ್‌ ದ್ವಿತೀಯ ಸ್ಥಾನ ಪಡೆದಿದ್ದಾರೆ.

ವಿಜೇತ ವಿದ್ಯಾರ್ಥಿಗಳಿಗೆ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ಸತೀಶ್‌ ಕುಮಾರ್ ಮತ್ತು ಲಲಿತಾ ಅನಗಲ್ಲಿ ಮಾರ್ಗದರ್ಶನ ನೀಡಿದ್ದರು.

ಕರಾಟೆ ಪಂದ್ಯಾಟದಲ್ಲಿ ಜಿಲ್ಲಾ ಮಟ್ಟದಲ್ಲಿ ಸಾಧನೆಗೈದು ಕಾಲೇಜಿಗೆ ಕೀರ್ತಿ ತಂದ ವಿದ್ಯಾರ್ಥಿಗಳನ್ನು ಸುಜ್ಞಾನ ಎಜುಕೇಶನಲ್‌ ಟ್ರಸ್ಟ್‌ನ ಅಧ್ಯಕ್ಷರಾದ ಡಾ. ರಮೇಶ್‌ ಶೆಟ್ಟಿ, ಕಾರ್ಯದರ್ಶಿ ಪ್ರತಾಪ್‌ ಚಂದ್ರ ಶೆಟ್ಟಿ, ಖಜಾಂಚಿ ಭರತ್‌ ಶೆಟ್ಟಿ ಹಾಗೂ ಕಾಲೇಜಿನ ಪ್ರಾಂಶುಪಾಲರಾದ ರಂಜನ್‌ ಬಿ. ಶೆಟ್ಟಿ ಅವರು ಅಭಿನಂದಿಸಿ, ರಾಜ್ಯ ಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗೆ ಶುಭ ಹಾರೈಸಿದ್ದಾರೆ.

Click Here

LEAVE A REPLY

Please enter your comment!
Please enter your name here