ಕೋಟ :ಶಿಕ್ಷಣ ತಜ್ಞ,ಸಾಹಿತಿ ವಿಠ್ಠಲ ವಿ. ಗಾಂವ್ಕರ್ ನಿಧನ

0
11

Click Here

Click Here

ಕುಂದಾಪುರ ಮಿರರ್ ಸುದ್ದಿ…

Click Here

ಕುಂದಾಪುರ: ಇಲ್ಲಿನ ಕೋಟ ಮಣೂರು ಪಡುಕರೆ ಸಂಯುಕ್ತ ಪ್ರೌಢಶಾಲೆಯಲ್ಲಿ 29ವರ್ಷಗಳ ಕಾಲ ಶಿಕ್ಷಕರಾಗಿ ಮುಖ್ಯ ಶಿಕ್ಷಕರಾಗಿ ಸೇವೆ ಸಲ್ಲಿಸಿ ನಿವೃತ್ತರಾದ ವಿಠ್ಠಲ ವಿ ಗಾಂವ್ಕರ್ 75ವ. ಶುಕ್ರವಾರ ಮುಂಜಾನೆ ಅನಾರೋಗ್ಯದಿಂದ ಉಡುಪಿ ಖಾಸಗಿ ಆಸ್ಪತ್ರೆಯಲ್ಲಿ ನಿಧ*ನರಾದರು.
ಶಿಕ್ಷಣ ತಜ್ಞರಲ್ಲದೆ ಸಾಹಿತ್ಯಿಕ ಕ್ಷೇತ್ರದಲ್ಲಿ ತನ್ನದೇ ಆದ ಕೊಡುಗೆಯನ್ನು ಸಲ್ಲಿಸಿದ ಅವರು ಕರಾವಳಿ ಭಾಗದಲ್ಲಿ ಅಸಂಖ್ಯ ವಿದ್ಯಾಸಮೂಹವನ್ನು ಧಾರೆ ಎರೆದಿದ್ದಾರೆ. ಕೋಟದ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಡಾ.ಕೆ.ಶಿವರಾಮ ಕಾರಂತ ಹುಟ್ಟೂರ ಪ್ರತಿಷ್ಠಾನದಲ್ಲಿ ನಿರಂತರವಾಗಿ ಸೇವೆ, ಕಸಾಪ ಉಡುಪಿ, ಉತ್ತರ ಕನ್ನಡ ಇಲ್ಲಿ ಸಕ್ರೀಯ ಸೇವೆ, ಉಡುಪಿ ಹಾಗೂ ಉತ್ತರಕನ್ನಡ ಜಿಲ್ಲೆಯಲ್ಲಿ ಸಾಹಿತ್ಯ ಸಮ್ಮೇಳದ ಸರ್ವಾಧ್ಯಕ್ಷರಾಗಿ ಕಾರ್ಯನಿರ್ವಹಣೆಗೈದಿದ್ದಾರೆ.
ಸಾಹಿತ್ಯ ಹಾಗೂ ಶಿಕ್ಷಣ ಕ್ಷೇತ್ರದ ಅಗಾಧ ಸೇವೆಯನ್ನು ಗುರುತಿಸಿ ಹಲವು ರಾಜ್ಯ ಹಾಗೂ ರಾಷ್ಟ್ರೀಯ ಪ್ರಶಸ್ತಿಗಳಿಗೆ ಭಾಜನರಾಗಿದ್ದರು.
ಉತ್ತರಕನ್ನಡ ಜಿಲ್ಲೆಯ ಅಂಕೋಲ ತಾಲೂಕಿನ ಬೊಳೆ ಗ್ರಾಮದಲ್ಲಿ ಜನಿಸಿದ ಗಾಂವ್ಕರ್ ರವರು ಪತ್ನಿ, ಪುತ್ರ, ಪುತ್ರಿಯನ್ನು ಅಗಲಿದ್ದಾರೆ. ಇವರ ಪಾರ್ಥಿವ ಶರೀರವನ್ನು ಕೋಟದ ಮಣೂರು ಪಡುಕರೆ ಶಾಲೆಯಲ್ಲಿ ಸಾರ್ವಜನಿಕರ ದರ್ಶನಕ್ಕೆ ಗೀತಾನಂದ ಟ್ರಸ್ಟ್ ಮುಖ್ಯಸ್ಥ ಆನಂದ್ ಸಿ ಕುಂದರ್ ಅವಕಾಶ ಕಲ್ಪಿಸಿ ನಂತರ ಸ್ವಗ್ರಾಮದಲ್ಲಿ ಅಂತ್ಯ ಸಂಸ್ಕಾರ ನೆರವೆರಿಸಲಾಯಿತು. ಸಂಸದ ಕೋಟ ಶ್ರೀನಿವಾಸ ಪೂಜಾರಿ, ಕಸಾಪ ಜಿಲ್ಲಾಧ್ಯಕ್ಷ ನಿಲಾವರ ಸುರೇಂದ್ರ ಅಡಿಗ, ಗೀತಾನಂದ ಟ್ರಸ್ಟ್ ಮುಖ್ಯಸ್ಥ ಆನಂದ್ ಸಿ ಕುಂದರ್ ಕಂಬನಿ ಮಿಡಿದ್ದಿದ್ದಾರೆ.

Click Here

LEAVE A REPLY

Please enter your comment!
Please enter your name here