ಸಾಸ್ತಾನ ದಿಂದ ಶ್ರೀ ಕ್ಷೇತ್ರ ತಿರುಪತಿಗೆ 16ನೇ ವರ್ಷದ ಬೃಹತ್ ಪಾದಯಾತ್ರೆ

0
61

Click Here

Click Here

ಕುಂದಾಪುರ ಮಿರರ್ ಸುದ್ದಿ…

Click Here

ಸಾಸ್ತಾನ :ಶ್ರೀ ಕ್ಷೇತ್ರ ತಿರುಪತಿಗೆ ಸಾಸ್ತಾನದಿಂದ ಹಮ್ಮಿಕೊಳ್ಳಲಾಗಿರುವ ಬೃಹತ್ ಪಾದಯಾತ್ರೆ ಸತತ 16ನೇ ವರ್ಷಕ್ಕೆ ಕಾಲಿಟ್ಟಿದೆ. ಶ್ರೀ ವೆಂಕಟೇಶ್ವರ ಸ್ವೀಟ್ಸ್‌ನ ಮಾಲೀಕರಾದ ಪಿ. ಲಕ್ಷ್ಮೀನಾರಾಯಣ ರಾವ್ ಅವರ ಸಾರಥ್ಯದಲ್ಲಿ ಈ ಪಾದಯಾತ್ರೆ ನಡೆಯುತ್ತಿದೆ.
ಆಗಸ್ಟ್ 18ರಂದು ನಾಗರಪಂಚಮಿಯ ಮರುದಿನ ಪಾದಯಾತ್ರೆ ಆರಂಭಗೊಂಡಿದ್ದು, ಸುಮಾರು 18 ದಿನಗಳ ಕಾಲ ಪಾದಯಾತ್ರೆ ಮುಂದುವರಿಯಲಿದೆ. 200ಕ್ಕೂ ಅಧಿಕ ಭಕ್ತರು ಈ ಪಾದಯಾತ್ರೆಯಲ್ಲಿ ಭಾಗವಹಿಸಿದ್ದು, ಭಕ್ತಿ ಮತ್ತು ಶ್ರದ್ಧೆಯಿಂದ ತಿರುಪತಿ ಕ್ಷೇತ್ರದತ್ತ ಹೆಜ್ಜೆ ಹಾಕುತ್ತಿದ್ದಾರೆ.
ಪಾದಯಾತ್ರೆಯ ಸಂದರ್ಭದಲ್ಲಿ ಶ್ರೀ ವೆಂಕಟೇಶ್ವರ ಸ್ವಾಮಿಯ ನಾಮಸ್ಮರಣೆ, ಭಜನೆ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಭಕ್ತರು ಸಾಗಲಿದ್ದಾರೆ. ಪ್ರತಿ ವರ್ಷವೂ ಭಕ್ತರನ್ನು ಒಗ್ಗೂಡಿಸಿ ಯಶಸ್ವಿಯಾಗಿ ಪಾದಯಾತ್ರೆ ನಡೆಸಲಾಗುತ್ತಿದ್ದು, ಈ ಬಾರಿಯೂ 200ಕ್ಕೂ ಅಧಿಕ ಭಕ್ತರು ಪಾಲ್ಗೊಂಡಿರುವುದು ವಿಶೇಷವಾಗಿದೆ.
ತಿರುಪತಿ ಶ್ರೀ ವೆಂಕಟೇಶ್ವರ ಸ್ವಾಮಿಯ ದರ್ಶನ ಪಡೆದು ಪಾದಯಾತ್ರೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸುವ ಸಂಕಲ್ಪದೊಂದಿಗೆ ಭಕ್ತರು ಉತ್ಸಾಹದಿಂದ ಹೆಜ್ಜೆ ಹಾಕುತ್ತಿದ್ದಾರೆ.

Click Here

LEAVE A REPLY

Please enter your comment!
Please enter your name here