ಬಾಳ್ಕುದ್ರು: ಬ್ರಹ್ಮಶ್ರೀ ನಾರಾಯಣಗುರು ಬಿಲ್ಲವ ಸಂಘದಿಂದ ವರಮಹಾಲಕ್ಷ್ಮಿ ಪೂಜೆ ಕಾರ್ಯಕ್ರಮ

0
11

Click Here

Click Here

ಕುಂದಾಪುರ ಮಿರರ್ ಸುದ್ದಿ…

Click Here

ಕೋಟ: ಬ್ರಹ್ಮಶ್ರೀ ನಾರಾಯಣಗುರು ಬಿಲ್ಲವ ಸಂಘ ಬಾಳ್ಕುದ್ರು ಹಂಗಾರಕಟ್ಟೆ ಇದರ ಆಶ್ರಯದಲ್ಲಿ ವರಮಹಾಲಕ್ಷ್ಮಿ ಪೂಜೆ ಕಾರ್ಯಕ್ರಮವು ಆ.2ರಂದು ಶುಕ್ರವಾರದಂದು ಸಂಘದ ಆವರಣದಲ್ಲಿ ವಿಜೃಂಭಣೆಯಿಂದ ಜರಗಿತು.
ವೇ.ಮೂ ಬಿರ್ತಿ ವೆಂಕಟರಮಣಸೂರ್ಯ ಇವರು ಧಾರ್ಮಿಕ ವಿಧಿವಿಧಾನಗಳನ್ನು ಹಾಗೂ ವರಮಹಾಲಕ್ಷ್ಮಿ ಪೂಜೆ ಕಾರ್ಯಕ್ರಮವನ್ನು ನೆರವೆರಿಸಿದರು. ಅಪರಾಹ್ನ ಮಹಾ ಅನ್ನಸಂತರ್ಪಣೆ ಪ್ರಸಾದ ವಿತರಣೆ ಕಾರ್ಯಕ್ರಮ ಜರಗಿತು.
ಸಂಘದ ಅಧ್ಯಕ್ಷ ವಿಜಯ ಕುಮಾರ್ ಅಧ್ಯಕ್ಷತೆಯಲ್ಲಿ ಈ ಕಾರ್ಯಕ್ರಮ ಜರಗಿತು.
ಈ ಸಂದರ್ಭದಲ್ಲಿ ಮಹಿಳಾ ಘಟಕದ ಅಧ್ಯಕ್ಷೆ ಶಕುಂತಲ ವಾಸುದೇವ ಕೋಟ್ಯಾನ್, ಪ್ರಮುಖರಾದ ರೇಖಾ ಪಿ ಸುವರ್ಣ, ಕಲಾವತಿ ಆನಂದ್, ಜ್ಯೋತಿ ರವೀಂದ್ರ ಸುವರ್ಣ, ಪ್ರೇಮ ಸತೀಶ್ ಪೂಜಾರಿ, ಸಂಘದ ಪ್ರಮುಖರಾದ ನಾರಾಯಣ ಪೂಜಾರಿ, ಶಂಕರ್ ಪೂಜಾರಿ, ಉಮೇಶ್ ಪೂಜಾರಿ, ಅನಂದ್ ಪೂಜಾರಿ ಮತ್ತಿತರರು ಇದ್ದರು.

Click Here

LEAVE A REPLY

Please enter your comment!
Please enter your name here