ಕುಂದಾಪುರ ಪತ್ರಕರ್ತನ ಮೇಲೆ ಸರಕಾರಿ ಆಸ್ಪತ್ರೆಯ ವೈದ್ಯನಿಂದ ಹಲ್ಲೆ ಪ್ರಕರಣ -ಕುಂದಾಪುರ ಬಿ.ಜೆ.ಪಿಯಿಂದ ಖಂಡನೆ

0
20

Click Here

Click Here

ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ :ಕನ್ನಡಪ್ರಭದ ಜನಪರ ಪತ್ರಕರ್ತ ಶ್ರೀಕಾಂತ್ ಹೆಮ್ಮಾಡಿ ಅವರ ಮೇಲೆ ಭ್ರಷ್ಟಾಚಾರದ ಆರೋಪ ಎದುರಿಸುತ್ತಿರುವ ಡಾ. ಮಹೇಂದ್ರ ಶೆಟ್ಟಿ ಹಲ್ಲೆ ನಡೆಸಿರುವುದು ಅತ್ಯಂತ ಖಂಡನೀಯ. ಪ್ರಾಮಾಣಿಕವಾಗಿ ಜನರ ಪರವಾಗಿ ಕೆಲಸ ಮಾಡುತ್ತಿರುವ ಪತ್ರಕರ್ತನ ಮೇಲಿನ ಈ ದಾಳಿಯನ್ನು ಕುಂದಾಪುರ ಬಿ.ಜೆ.ಪಿ ತೀವ್ರವಾಗಿ ಖಂಡಿಸುತ್ತೇವೆ.

ಕುಂದಾಪುರ ಸರ್ಕಾರಿ ಆಸ್ಪತ್ರೆಯಲ್ಲಿ ನಡೆಯುತ್ತಿದ್ದ ಅಕ್ರಮಗಳು ಹಾಗೂ ಡಾ. ಮಹೇಂದ್ರ ಶೆಟ್ಟಿ ಅವರ ವಿರುದ್ಧ ಕೇಳಿಬಂದಿದ್ದ ಭ್ರಷ್ಟಾಚಾರದ ಆರೋಪಗಳ ಕುರಿತು ಶ್ರೀಕಾಂತ್ ಹೆಮ್ಮಾಡಿ ಅವರು ಇತ್ತೀಚೆಗೆ ಕನ್ನಡಪ್ರಭ ಪತ್ರಿಕೆಯಲ್ಲಿ ಸರಣಿ ತನಿಖಾ ವರದಿಗಳನ್ನು ಪ್ರಕಟಿಸಿದ್ದರು. ಈ ವರದಿಗಳು ಸಾರ್ವಜನಿಕ ವಲಯದಲ್ಲಿ ವ್ಯಾಪಕ ಚರ್ಚೆಗೆ ಕಾರಣವಾಗಿದ್ದವು. ಇದನ್ನು ಕುಂದಾಪುರದ ಶಾಸಕರಾದ ಕಿರಣ್ ಕುಮಾರ್ ಕೊಡ್ಗಿಯವರು ವಿಚಾರವನ್ನು ಗಂಭೀರವಾಗಿ ತೆಗೆದುಕೊಂಡು ಬಳಿಕ ಡಾ. ಮಹೇಂದ್ರ ಶೆಟ್ಟಿ ಅವರನ್ನು ಬೇರೆಡೆಗೆ ವರ್ಗಾವಣೆ ಮಾಡುವ ವಿಚಾರ ಜಿಲ್ಲಾ ಆಡಳಿತ ಮುಂದೆ ಇಟ್ಟಾಗ ಜಿಲ್ಲಾ ಆಡಳಿತ ವರ್ಗಾವಣೆ ಆದೇಶ ಹೊರಡಿಸಿತ್ತು.

Click Here

ಇಂದು ಶ್ರೀಕಾಂತ್ ಹೆಮ್ಮಾಡಿ ಅವರು ತಮ್ಮ ಪತ್ನಿ ಕುಂದಾಪುರ ಅವರೊಂದಿಗೆ ಹೊಟೇಲ್‌ನಲ್ಲಿ ಚಹಾ ಸೇವಿಸುತ್ತಿದ್ದ ಸಂದರ್ಭದಲ್ಲಿ, ಅದೇ ಹೊಟೇಲ್‌ಗೆ ಬಂದಿದ್ದ ಡಾ. ಮಹೇಂದ್ರ ಶೆಟ್ಟಿ ಅವರು ಶ್ರೀಕಾಂತ್ ಅವರನ್ನು ಎಬ್ಬಿಸಿ ಹಲ್ಲೆ ನಡೆಸಿದ್ದಾರೆ.

ಪತ್ರಕರ್ತನ ಮೇಲೆ ಹಲ್ಲೆ ನಡೆಸುವುದು ಪ್ರಜಾಪ್ರಭುತ್ವದ ಮೇಲಿನ ದಾಳಿಯೇ ಆಗಿದೆ. ಪತ್ರಕರ್ತರು ಪ್ರಶ್ನೆ ಕೇಳುವುದನ್ನು, ಅಕ್ರಮಗಳನ್ನು ಬಯಲಿಗೆಯವುದು ಪತ್ರಿಕಾ ಸ್ವಾತಂತ್ರ್ಯ. ಹಾಗಾಗಿ ಶ್ರೀಕಾಂತ್ ಹೆಮ್ಮಾಡಿ ಅವರ ಮೇಲಿನ ಹಲ್ಲೆಯನ್ನು ಸಮಗ್ರವಾಗಿ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ಸುರೇಶ್ ಶೆಟ್ಟಿ ಅಧ್ಯಕ್ಷರು ಬಿ.ಜೆ.ಪಿ ಕುಂದಾಪುರ ಮಂಡಲ

Click Here

LEAVE A REPLY

Please enter your comment!
Please enter your name here