ಕುಂದಾಪುರ ಮಹಿಳಾ ಮತ್ತು ಮಕ್ಕಳ ಶ್ರಯೋಭಿವೃದ್ದಿ ಸಮಿತಿಯಿಂದ ಶಿಕ್ಷಕರ ದಿನಾಚರಣೆ

0
116

Click Here

Click Here

ಕುಂದಾಪುರ ಮಿರರ್ ಸುದ್ದಿ…

Click Here

ಕುಂದಾಪುರ :ಮಹಿಳಾ ಮತ್ತು ಮಕ್ಕಳ ಶ್ರಯೋಭಿವೃದ್ದಿ ಸಮಿತಿ ಕುಂದಾಪುರ ವತಿಯಿಂದ ಕುಂದಾಪುರ ಪುರಸಭಾ ವ್ಯಾಪ್ತಿಯ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿರೊಂದಿಗೆ ಶಿಕ್ಷಕರ ದಿನಾಚರಣೆಯನ್ನು ಆಚರಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕುಂದಾಪುರ ಮಹಿಳಾ ಮತ್ತು ಮಕ್ಕಳ ಶ್ರಯೋಭಿವೃದ್ದಿ ಸಮಿತಿಯ ಅಧ್ಯಕ್ಷೆ ಗುಣರತ್ನ ವಹಿಸಿ, ಎಲ್ಲಾ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರನ್ನು ಗೌರವಿಸಿದರು. ಈ ಸಂದರ್ಭದಲ್ಲಿ ನಿವೃತ್ತಿ ಹೊಂದಿದ 3ಮಂದಿ ಅಂಗನವಾಡಿ ಕಾರ್ಯಕರ್ತೆರನ್ನು ವಿಶೇಷವಾಗಿ ಸನ್ಮಾನಿಸಲಾಯಿತು. ಬಳಿಕ ಮಾತನಾಡಿ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಸೇವೆ ಶ್ಲಾಘನೀಯ. ಮುಂದಿನ ದಿನದಲ್ಲಿ ಸರಕಾರ ನಿಮ್ಮನ್ನು ಶಿಕ್ಷಕರಾಗಿ ಗುರುತಿಸುವಂತಾಗಲಿ ಎಂದರು. ಸರಕಾರ ಮಟ್ಟದಲ್ಲಿ ನಿಮ್ಮ ಬೇಡಿಕೆಗಳು ಈಡೇರಲಿ ಎಂದು ಶುಭ ಹಾರೈಸಿದರು.
ಶಿಶು ಅಭಿವೃದ್ಧಿಯ ಇಲಾಖೆಯ ರಾಜು ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಶಿಶು ಅಭಿವೃದ್ಧಿಯ ಯೋಜನೆಯ ಮೇಲ್ವಿಚಾರಕಿಯರು ಉಪಸ್ಥಿತರಿದ್ದರು.
ಅಂಗನವಾಡಿ ಕಾರ್ಯಕರ್ತೆ, ಸಹಾಯಕಿರ ಸಂಘದ ಅಧ್ಯಕ್ಷೆ ಉಷಾ ಪ್ರಾಸ್ತಾವಿಕ ಮಾತನಾಡಿದರು. ಪ್ರೇಮ ಸ್ವಾಗತಿಸಿ, ಅರ್ಚನಾ ವಂದಿಸಿದರು.

Click Here

LEAVE A REPLY

Please enter your comment!
Please enter your name here