ಕುಂದಾಪುರ :ಶಿಕ್ಷಕರ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಿದ ಎಸ್ ಡಿ ಎಂ ಸಿ ಸಮನ್ವಯ ಕೇಂದ್ರ ವೇದಿಕೆ ಉಡುಪಿ ಜಿಲ್ಲಾ ಘಟಕ

0
9

Click Here

Click Here

ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ :2026-27 ಸಾಲಿನ‌ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಗುರುವಂದನೆ ಸ್ವೀಕರಿಸಲಿರುವ ನಿವೃತ್ತ ಶಿಕ್ಷಕ ರಾಜೀವ್ ಶೆಟ್ಟಿಯವರನ್ನು ಶಿಕ್ಷಕರ ದಿನಾಚರಣೆ ಪ್ರಯುಕ್ತ ಅವರ ನಿವಾಸಕ್ಕೆ ತೆರಳಿ ಸನ್ಮಾನಿಸಿ, ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ಉಡುಪಿ ಜಿಲ್ಲಾ ಎಸ್ ಡಿ ಎಂ ಸಿ ಸಮನ್ವಯ ಕೇಂದ್ರ ವೇದಿಕೆಯ ಜಿಲ್ಲಾಧ್ಯಕ್ಷರಾದ ಅಬ್ದುಲ್ ಸಲಾಂ ಚಿತ್ತೂರು ರಾಜೀವ ಶೆಟ್ಟಿ ದಂಪತಿಗಳನ್ನು ಶಿಕ್ಷಕರ ದಿನಾಚರಣೆಯ ದಿನದಂದು ಗೌರವಿಸಿ ಅಭಿನಂದಿಸಿದರು.

Click Here

ಉಡುಪಿ ಜಿಲ್ಲಾ ಎಸ್ ಡಿ ಎಂ ಸಿ ಸಮನ್ವಯ ಕೇಂದ್ರ ವೇದಿಕೆಯಿಂದ ಶಿಕ್ಷಕರ ದಿನಾಚರಣೆ ಪ್ರಯುಕ್ತ ಕೊಡ ಮಾಡುವ 2026-27 ಸಾಲಿನ‌ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಯನ್ನು ಜಿಲ್ಲಾಧ್ಯಕ್ಷ ಅಬ್ದುಲ್ ಸಲಾಂ ಚಿತ್ತೂರುರವರು ಘೋಷಣೆ ಮಾಡಿದರು.

ಜಿಲ್ಲಾ ಮಟ್ಟದ ಅತ್ಯತ್ತಮ ಸರಕಾರಿ ಶಾಲೆ ಮತ್ತು ಎಸ್ ಡಿ ಎಂ ಸಿ ಪ್ರಶಸ್ತಿಗೆ ಆಯ್ಕೆಯಾದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನೂಜಾಡಿ 2 ಬಗ್ವಾಡಿ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಪ್ರಕಾಶ್ ಆಚಾರ್ಯರವರನ್ನು ಅಭಿನಂದಿಸಲಾಯಿತು.

ಈ ಸಂದರ್ಭದಲ್ಲಿ ಕುಂದಾಪುರ ಪುರಸಭಾ ಘಟಕದ ಅಧ್ಯಕ್ಷರಾದ ಅಶ್ವಥ್ ಕುಮಾರ್, ಕುಂದಾಪುರ ತಾಲೂಕು ಘಟಕದ ಉಪಾಧ್ಯಕ್ಷರಾದ ಕೃಷ್ಣಾನಂದ ಶಾನುಭಾಗ್, ಕಾರ್ಯದರ್ಶಿ ಪ್ರಮೋದ ಕೆ ಶೆಟ್ಟಿ , ಬೈಂದೂರು ತಾಲೂಕು ಕಾರ್ಯದರ್ಶಿ ಶಾಂತ ಪೂಜಾರಿ, ಕಾಪು ತಾಲೂಕು ಉಸ್ತುವಾರಿ ಅಷ್ಪಕ್, ಸಮಿತಿಯ ಸದಸ್ಯರಾದ ಸುಲೆಮಾನ್, ಮಹಮ್ಮದ್, ಸ್ಥಳೀಯರಾದ ಪ್ರವೀಣ್ ಶೆಟ್ಟಿ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಪ್ರಕಾಶ್ ಆಚಾರ್ಯ ಉಪಸ್ಥಿರಿದ್ದರು

ಇದೇ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಎಸ್ ಡಿ ಎಂ ಸಿ ಸಮನ್ವಯ ಕೇಂದ್ರ ವೇದಿಕೆ ಕೊಡ ಮಾಡುವ 2026-27ನೆ ಸಾಲಿನ ಜಿಲ್ಲಾಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಭಾಜನರಾದ ಕುಂದಾಪುರ ಶೈಕ್ಷಣಿಕ ವಲಯದ ಬಿಜಾಡಿ ಪ್ರೌಢಶಾಲೆಯ ಶಿಕ್ಷಕರಾದ ಡಾ. ಸದಾನಂದ ಬೈಂದೂರು ಹಾಗೂ ಬೈಂದೂರು ಶೈಕ್ಷಣಿಕ ವಲಯದ ಗುಜ್ಜಾಡಿ ಭಾಸ್ಕರ್ ಪೈ ಸರ್ಕಾರಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಉದಯ್ ಗಾoವ್ಕರ್ ಅವರನ್ನು ಶಿಕ್ಷಕರ ದಿನಾಚರಣೆಯ ಸಂದರ್ಭದಲ್ಲಿ ಗೌರವಿಸಿ ಅಭಿನಂದಿಸಲಾಯಿತು,

Click Here

LEAVE A REPLY

Please enter your comment!
Please enter your name here