ಕೋಟೇಶ್ವರ :ಗುರುಕುಲ ವಸತಿ ನಿಲಯದ ವಿದ್ಯಾರ್ಥಿಗಳಿಂದ ಶ್ರೀ ಕೃಷ್ಣ ಲೀಲೋತ್ಸವ ಆಚರಣೆ

0
437

Click Here

Click Here

ಕುಂದಾಪುರ ಮಿರರ್ ಸುದ್ದಿ…

Click Here

ಕುಂದಾಪುರ :ವಕ್ವಾಡಿಯ ಗುರುಕುಲ ವಿದ್ಯಾ ಸಂಸ್ಥೆಯ ಪಂಚವಟಿ ವಸತಿ ನಿಲಯದ ವಿದ್ಯಾರ್ಥಿಗಳಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಯ ಅಂಗವಾಗಿ ಶ್ರೀ ಕೃಷ್ಣ ಲೀಲೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಆಧುನಿಕ ಕಾಲಕ್ಕೆ ಶ್ರೀ ಕೃಷ್ಣನ ಸಂದೇಶವನ್ನು ಸಾರುವ ಉದ್ದೇಶದಿಂದ ಹಮ್ಮಿಕೊಳ್ಳಲಾದ ಈ ಕಾರ್ಯಕ್ರಮವನ್ನು ಶ್ರೀ ವಾದಿರಾಜ ಗೋಪಾಡಿಯವರು ಮುಖ್ಯ ಅತಿಥಿಯಾಗಿ ಆಗಮಿಸಿ ಮಾತನಾಡುತ್ತಾ ಶ್ರೀಕೃಷ್ಣನ ಸಂದೇಶಗಳು ಕೇವಲ ದ್ವಾಪರ ಯುಗಕ್ಕೆ ಮಾತ್ರ ಸೀಮಿತವಾಗಿರದೆ, ಇಂದಿನ ಆಧುನಿಕ ನವ ಸಮಾಜಕ್ಕೂ ಅತ್ಯಂತ ಪ್ರಸ್ತುತವಾಗಿವೆ. ಭಗವದ್ಗೀತೆಯ ಮೂಲಕ ಆತ ಜಗತ್ತಿಗೆ ನೀಡಿದ ಜೀವನ ದರ್ಶನವು ಇಂದಿನ ಯುವ ಪೀಳಿಗೆ ಹಾಗೂ ಸಮಾಜದ ಪ್ರಗತಿಗೆ ದಾರಿದೀಪವಾಗಿದೆ. ನವ ಸಮಾಜಕ್ಕೆ ಶ್ರೀಕೃಷ್ಣನ ಪ್ರಮುಖ ಸಂದೇಶವಾದ ಕರ್ಮಣ್ಯೇ ವಾಧಿಕಾರಸ್ತೇ ಮಾ ಫಲೇಷು ಕದಾಚನ: ಫಲಿತಾಂಶದ ಬಗ್ಗೆ ಅತಿಯಾಗಿ ಚಿಂತಿಸದೆ, ನಿನ್ನ ಕರ್ತವ್ಯವನ್ನು ಪ್ರಾಮಾಣಿಕವಾಗಿ ಮಾಡು ಎಂಬುದು ಇದರ ಅರ್ಥ. ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಒತ್ತಡ ಮತ್ತು ಖಿನ್ನತೆಯನ್ನು ಎದುರಿಸಲು ಈ ‘ನಿಷ್ಕಾಮ ಕರ್ಮ’ ಸಿದ್ಧಾಂತವು ವಿಜ್ಞಾನ ಯುಗವಾದ ಇಂದಿಗೂ ಪ್ರಸ್ತುತ ಎಂದರು.ಕೋಟೇಶ್ವರದ ಶ್ರೀ ಗುರುರಾಜರವರು ವಿದ್ಯಾರ್ಥಿಗಳಿಗೆ ಕೃಷ್ಣ ಜನ್ಮಾಷ್ಟಮಿಯ ಶುಭ ಕೋರಿದರು.
ಬಾಂಡ್ಯಾ ಎಜುಕೇಶನಲ್ ಟ್ರಸ್ಟ್ ನ ಜಂಟಿ ಕಾರ್ಯನಿರ್ವಾಹಕರಾದ ಕೆ. ಸುಭಾಶ್ಚಂದ್ರ ಶೆಟ್ಟಿಯವರು ಸಭಾಧ್ಯಕ್ಷತೆ ವಹಿಸಿ ವಿದ್ಯಾರ್ಥಿಗಳ ಕ್ರಿಯಾತ್ಮಕ ಚಟುವಟಿಕೆಯನ್ನು ಶ್ಲಾಘಿಸಿ ಶುಭ ಕೋರಿದರು. ಬಾಂಡ್ಯಾ ಎಜುಕೇಶನಲ್ ಟ್ರಸ್ಟ್ ನ ಜಂಟಿ ಕಾರ್ಯ ನಿರ್ವಾಹಕರಾದ ಅನುಪಮಾ ಎಸ್ ಶೆಟ್ಟಿಯವರು ಉಪಸ್ಥಿತರಿದ್ದರು. ವಿದ್ಯಾರ್ಥಿನಿ ಹವಿಶ ನಿರೂಪಿದರೆ, ಗುರುಕುಲ ಪಬ್ಲಿಕ್ ಸ್ಕೂಲ್ ನ ಪ್ರಾಂಶುಪಾಲರಾದ ಡಾ. ರೂಪಾ ಶೆಣೈ ರವರು ಸ್ವಾಗತಿಸಿದರು. ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಸಂದೀಪ್ ನಾಯ್ಕ್ ರವರು ವಂದಿಸಿದರು.

Click Here

LEAVE A REPLY

Please enter your comment!
Please enter your name here