ಸಾಲಿಗ್ರಾಮ ವಿಶ್ಚಕರ್ಮ ಸಭಾಂಗಣದಲ್ಲಿ ಶ್ರೀ ವಿಶ್ವಕರ್ಮ ಯಜ್ಞ ಮಹೋತ್ಸವ ಮತ್ತು ಸಾಂಸ್ಕೃತಿಕ ವೈಭವ ಸಂಪನ್ನ

0
135

Click Here

Click Here

ಕುಂದಾಪುರ ಮಿರರ್ ಸುದ್ದಿ…

Click Here

ಕುಂದಾಪುರ: ಕೋಟ ಶ್ರೀ ವಿರಾಡ್ವಿಶ್ವಬ್ರಾಹ್ಮಣ ಸಮಾಜೋದ್ಧಾರಕ ಸಂಘ , ಶ್ರೀ ವಿಶ್ವಕರ್ಮ ಕಲಾವೃಂದ ಹಾಗೂ ವಿಶ್ವಜ್ಯೋತಿ ಮಹಿಳಾ ಬಳಗ ಸಾಲಿಗ್ರಾಮ ಇವರುಗಳ ಜಂಟಿ ಆಶ್ರಯದಲ್ಲಿ ಗುರುವಾರ ಸಾಲಿಗ್ರಾಮದ ಶ್ರೀ ವಿಶ್ವಕರ್ಮ ಸಾಂಸ್ಕೃತಿಕ ಸಭಾಭವನದಲ್ಲಿ ಶ್ರೀ ವಿಶ್ವಕರ್ಮ ಯಜ್ಞ ಮಹೋತ್ಸವ ಕಾರ್ಯಕ್ರಮ ಪುರೋಹಿತರಾದ ಲಕ್ಷ್ಮೀಕಾಂತ್ ಶರ್ಮ ಪೌರೋಹಿತ್ಯದಲ್ಲಿ ಸಂಘದ ಅಧ್ಯಕ್ಷ ಎಂ.ಸುಬ್ರಾಯ ಆಚಾರ್ಯ ದಂಪತಿಗಳ ಸಮ್ಮುಖದಲ್ಲಿ ನೆರವೆರಿತು. ಅಪರಾಹ್ನ ಪ್ರಸಾದ ವಿತರಣೆ, ಮಹಾ ಅನ್ನಸಂತರ್ಪಣೆ ಜರಗಿತು.
ಈ ಅಂಗವಾಗಿ ಅಪರಾಹ್ನ 2:30 ರಿಂದ ಎಂ. ಹೆಚ್. ಪ್ರಸಾದ್ ಕುಮಾರ್ ಮೊಗೆಬೆಟ್ಟು ಅವರ ನಿರ್ದೇಶನದಲ್ಲಿ ಸಂಘದ ಸದಸ್ಯರಿಂದ `ಭೀಷ್ಮ ವಿಜಯ ಯಕ್ಷಗಾನ ಪ್ರಸಂಗ ಅಭಿನಯ, ಅತಿಥಿ ಕಲಾವಿದರಾಗಿ ರಾಘವೇಂದ್ರ ಆಚಾರ್ಯ ಜನ್ಸಾಲೆ ಭಾಗವತರಾಗಿ ಭಾಗಿಯಾದರು.
ರಾತ್ರಿ 9:00 ರಿಂದ ಕಲಾವೃಂದ ಹಾಗೂ ವಿಶ್ವಜ್ಯೋತಿ ಮಹಿಳಾ ಬಳಗದ ಸದಸ್ಯರಿಂದ ‘ಕಲಾ ವೇದಿಕೆ – 2026 ಸಂಗೀತ, ನೃತ್ಯ ಮತ್ತು ಗಾನ ವೈಭವ ಮನೋರಂಜನಾ ಕಾರ್ಯಕ್ರಮ ನಡೆಯಿತು.ಈ ಸಂದರ್ಭದಲ್ಲಿ ಶ್ರೀ ವಿರಾಡ್ವಿಶ್ವಬ್ರಾಹ್ಮಣ ಸಮಾಜೋದ್ಧಾರಕ ಸಂಘ , ಶ್ರೀ ವಿಶ್ವಕರ್ಮ ಕಲಾವೃಂದ ಹಾಗೂ ವಿಶ್ವಜ್ಯೋತಿ ಮಹಿಳಾ ಬಳಗ ಇದರ ಪದಾಧಿಕಾರಿಗಳು ಉಪಸ್ಥಿತರಿದ್ದರು.

Click Here

LEAVE A REPLY

Please enter your comment!
Please enter your name here